Wednesday, October 2, 2024

03-10-2024 EE DIVASA KANNADA DAILY NEWS PAPER

 ವಿಜಯಪುರ: ಮಹಾತ್ಮಾಗಾಂಧೀಜಿ ಅವರು ಪ್ರತಿಪಾದಿಸಿದ ಅಭಿವೃದ್ಧಿ ಮಾದರಿಗಳನ್ನು ದೇಶದಲ್ಲಿ ಅನುಷ್ಟಾನಗೊಳಿಸಿದಲ್ಲಿ ಸುಸ್ಥಿರ ಅಭಿವೃದ್ಧಿ ಮತ್ತು ವಿಕಸಿತ ಭಾರತದ ಗುರಿಗಳನ್ನು ಸುಲಭವಾಗಿ ಸಾಧಿಸಲು ಸಾಧ್ಯವಿದೆ ಎಂದು ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ಅವರು ಪ್ರತಿಪಾದಿಸಿದರು.

 ಇಲ್ಲಿಯ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಎನ್.ಎಸ್.ಎಸ್ ಕೋಶ ಹಾಗೂ ಗಾಂಧಿ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ರಿö್ತÃ ಅವರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

 ಗಾಂಧೀಜಿಯವರು ಪ್ರತಿಪಾದಿಸಿದ ಗ್ರಾಮಸ್ವರಾಜ್ಯ, ಗುಡಿ ಕೈಗಾರಿಕೆಗಳ ಅಭಿವೃದ್ಧಿ ಹೀಗೆ ಹಲವು ಬಗೆಯ ಅಭಿವೃದ್ಧಿ ಮಾದರಿಗಳ ಮೂಲಕ ನಾವು ದೇಶದ ಪ್ರಗತಿಗೆ ಮುಂದಾಗಬೇಕಿದೆ ಎಂದೂ ಅವರು ಸಲಹೆ ನೀಡಿದರು.

 ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ರಿö್ತÃ ಅವರ ಪರಂಪರೆಯನ್ನು ನಾವು ಸಂಪೂರ್ಣವಾಗಿ ಅರ್ಥೈಸಿಕೊಂಡು ಮುಂದಿನ ಪೀಳಿಗೆಗೆ ಅದನ್ನು ದಾಟಿಸಬೇಕಾದ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ. ಅದನ್ನು ನಾವೆಲ್ಲರೂ ಮನಃಪೂರ್ವಕವಾಗಿ ಮಾಡಿದಾಗ ಮಾತ್ರ ಇಂಥ ಜಯಂತಿ ಆಚರಣೆಗಳಿಗೆ ಮಹತ್ವ ಬರುತ್ತದೆ ಎಂದರು.


ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿದ್ದ ನಿವೃತ್ತ ಪ್ರಾಧ್ಯಾಪಕ ಬಿ.ಜಿ.ಪತ್ತಾರ ಅವರು, ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ರಿö್ತÃ ಅವರ ಜೀವನ ಮೌಲ್ಯಗಳು ಇವತ್ತಿಗೂ ಪ್ರಸ್ತುತವಾಗಿದ್ದು ಇವುಗಳನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಂಡು ಅನುಷ್ಟಾನಕ್ಕೆ ತರಬೇಕು ಎಂದು ಸಲಹೆ ನೀಡಿದರು.

ಜೀವನದಲ್ಲಿ ಯಶಸ್ಸು ಗಳಿಸಬೇಕಾದರೆ ಸತತ ಪರಿಶ್ರಮ ಮತ್ತು ನಿರ್ದಿಷ್ಟ ಗುರಿ ಹೊಂದಿರಬೇಕು. ಎನ್‌ಎಸ್‌ಎಸ್ ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಜತೆಗೆ ಸಮಾಜಮುಖಿ ಕಾರ್ಯಗಳಲ್ಲಿಯೂ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.

ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ರಿö್ತÃ ಅವರ ಬದುಕು ನಮಗೆಲ್ಲರಿಗೂ ಪ್ರೇರಣಾದಾಯಕವಾಗಿದ್ದು ಅವರು ಪ್ರತಿಪಾದಿಸಿದ ಮೌಲ್ಯಗಳು ಇಂದಿಗೂ ಪ್ರಸ್ತುತವಾಗಿವೆ ಎಂದರು.

ಇದೇ ಸಂದರ್ಭದಲ್ಲಿ ಅವರು ಗಾಂಧೀಜಿ ಮತ್ತು ಸ್ವಾತಂತ್ರö್ಯ ಹೋರಾಟ ಕುರಿತ ರಸಪ್ರಶ್ನೆ ಕಾರ್ಯಕ್ರಮ ನಡೆಸಿಕೊಟ್ಟರು. ಅಲ್ಲದೇ ಗಾಂಧೀಜಿ ಕುರಿತ ಕವನ ವಾಚಿಸಿದರು.

ಕಾರ್ಯಕ್ರಮದಲ್ಲಿ ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚAದ್ರಶೇಖರ್, ಗಾಂಧಿ ಅಧ್ಯಯನ ಕೇಂದ್ರದ ಸಂಯೋಜಕ ಡಾ.ಅಮರನಾಥ ಪ್ರಜಾಪತಿ, ವಿವಿಯ ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. 

ಕಾರ್ಯಕ್ರಮದಲ್ಲಿ ಸಂಗೀತ ವಿಭಾಗದ ವಿದ್ಯಾರ್ಥಿನಿಯರಿಂದ ಭಜನ ನಡೆಯಿತು. ಎನ್.ಎಸ್.ಎಸ್. ಕೋಶದ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ.ಅಶೋಕ ಸುರಪುರ ಸ್ವಾಗತ ಹಾಗೂ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಡಾ.ಕಲಾವತಿ ಕಾಂಬಳೆ ಅತಿಥಿಗಳನ್ನು ಪರಿಚಯಿಸಿ, ವಂದಿಸಿದರು. ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶನಾಲಯದ ಸಹಾಯಕ ನಿರ್ದೇಶಕಿ ಡಾ.ಅಶ್ವಿನಿ ಕೆ.ಎನ್ ಕಾರ್ಯಕ್ರಮ ನಿರೂಪಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಮಹಾತ್ಮ ಗಾಂಧೀಜಿ ಜಯಂತಿ ಪ್ರಯುಕ್ತ ಕಾರ್ಯಕ್ರಮ

ವಿಜಯಪುರ : ಗಾಂಧಿಜೀಯವರ ಮೌಲ್ಯಗಳನ್ನು ಸ್ಮರಿಸುತ್ತಾ ಅವುಗಳನ್ನು ನಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಲು ಪ್ರತಿಜ್ಞೆ ಮಾಡೋಣ, ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಛ ಹಸಿರು ಸ್ಥಳವನ್ನಾಗಿ ಮಾಡೋಣ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.

ಬುಧವಾರ ನಗರದ ಆನಂದ ಮಹಲ್ ಆವರಣದಲ್ಲಿ ಜಿಲ್ಲಾಡಳಿತ, ನೆಹರು ಯುವ ಕೇಂದ್ರ, ವಿಜಯಪುರ ಲಾಡ್ಲೀ ಪೌಂಡೇಶನ್ ನವದೆಹಲಿ, ಜಿಲ್ಲಾ ಎನ್.ಎಸ್.ಎಸ್. ಘಟಕ, ಕ್ಷೇತ್ರ ಸಂವಹನ ಇಲಾಖೆ, ಸ್ಪಂದನಾ ಸೇವಾ ಸಂಸ್ಥೆ, ಸಮಪ್ರಭ ಸಂಸ್ಥೆಯವರ ಸಂಯುಕ್ತಾಶ್ರಯದಲ್ಲಿ “ಸ್ವಚ್ಛತಾ ಹಿ ಸೇವಾ“ ಕಾರ್ಯಕ್ರಮ ಗಾಂಧಿ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾವು ಗಾಂಧಿ ಜಯಂತಿಯನ್ನು ಆಚರಿಸುತ್ತಿರುವಾಗ ಸ್ವಚ್ಛ ಭಾರತ ಅಭಿಯಾನಕ್ಕೆ ನಮ್ಮ ಬದ್ಧತೆ ಕೊಡುಗೆ ನೀಡಬೇಕಾಗಿದೆ. ಗಾಂಧಿಜೀಯವರು ಹಾಕಿಕೊಟ್ಟ ಅಹಿಂಸಾ ಮಾರ್ಗದಲ್ಲಿ ನಡೆದುಕೊಂಡು ಸ್ವಚ್ಛತೆ ಮತ್ತು ಸಮಾಜ ಸೇವೆಗೆ ಅಣಿಯಾಗಬೇಕಾಗಿದೆ. ಸ್ವಚ್ಛತೆಯ ಬಗ್ಗೆ ಸಾರ್ವಜನಿಕರು ತಮ್ಮ ಜವಾಬ್ದಾರಿ ಅರಿತು ಭಾಗಿಯಾಗಬೇಕೆಂದು ಎಂದು ಹೇಳಿದರು. 

ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ರಾಹುಲ ಡೋಂಗ್ರೆ ಪ್ರಾಸ್ತಾವಿಕವಾಗಿ ಮಾತನಾಡಿ ಕಳೆದ ಸೆÀಪ್ಟಂಬರ್ 17ರಿಂದ ಅಕ್ಟೋಬರ್ 02ರವರೆಗೆ ನಿರಂತರವಾಗಿ "ಸ್ವಚ್ಛತೆಯೇ ಹಿ ಸೇವಾ" ಕಾರ್ಯಕ್ರಮದ ಜಿಲ್ಲೆಯ ಯುವಕ ಸಂಘಗಳು ಮತ್ತು ಎನ ಎಸ್ ಎಸ್ ಘಟಕಗಳ ಮೂಲಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದೆ. ಗಾಂಧೀಜಿ ಅವರ ಸ್ವಚ್ಛತೆಯ ಪರಿಕಲ್ಪನೆಯನ್ನು ಯುವಕರಿಗೆ ತಲುಪಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ನೆಹರು ಯುವ ಕೇಂದ್ರದಿAದ ಮಾಡಲಾಗಿದೆ ಎಂದು ಹೇಳಿದರು.

ಜಾವೀದ ಜಮಾದಾರ ಮಾತನಾಡಿ, ಸ್ವಚ್ಛತೆ ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಯುವಕರು ಗಾಂಧೀಜಿಯವರು ಹಾಕಿಕೊಟ್ಟಂತಹ ಮಾರ್ಗದಲ್ಲಿ ನಡೆಯಬೇಕು ಎಂದರು.

ಎನ್.ಎಸ್.ಎಸ್. ಸ್ವಯಂ ಸೇವಕರ ತಲಾ 100 ಜನರ 8 ತಂಡಗಳನ್ನು ರಚಿಸಿ ನಗರದ ಕೇಂದ್ರ ಬಸ್ ನಿಲ್ದಾಣ, ಗಗನ ಮಹಲ್, ಜಿಲ್ಲಾಧಿಕಾರಿಗಳ ಕಛೇರಿ ಆವರಣ, ಬಾರಾಕಮಾನ, ಗಾಂಧಿಚೌಕ ನರಸಿಂಹ ದೇವಸ್ಥಾನ, ಹಳೇ ತಹಶೀಲ್ದಾರ, ಆಫೀಸ್, ಎಲ್.ಬಿ.ಎಸ್. ಮಾರ್ಕೆಟ್ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಸ್ವಚ್ಛತೆ ಕೈಗೊಳ್ಳಲಾಯಿತು. ಆನಂದ ಮಹಲ್ ಆವರಣದಿಂದ ಸ್ವಚ್ಚತಾ ಜಾಗೃತಿ ಗಾಂಧಿ ವೃತ್ತದವರೆಗೆ ಹಮ್ಮಿಕೊಂಡು, ವೃತ್ತದಲ್ಲಿ ಮಾನವ ಸರಪಳಿ ನಿಮಿಸಿ ಮಹಾತ್ಮ ಗಾಂಧೀಜಿಯವರ ಪ್ರತಿಮೆಗೆ ಮಾಲಾಪಣೆ ಮಾಡಲಾಯಿತು.

ಎಸ್.ಯು.ಜಮಾದಾರ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಕ್ಷೇತ್ರ ಸಂವಹನಾ ಅಧಿಕಾರಿ ಸುರೇಶ ಸಿ.ಕೆ. ಎನ್.ಎಸ್.ಎಸ್. ನೋಡಲ್ ಅಧಿಕಾರಿ ಪ್ರಕಾಶ ರಾಠೋಡ, ಸುರಭಿಸಿಂಗ್, ಸುರೇಶ ಬಿಜಾಪೂರ, ಮಹದೇವ ದೇವರ, ಆರ್.ಬಿ.ಉಪಾಸೇ, ಡಾ. ಶಿವಕುಮಾರ ನಾಯಕ, ಶೇಖರ ಕುಮಾರ ಝಾ, ಎಸ್.ಯು. ಜಮಾದಾರ ಪ್ರೆಸಿಡೆನ್ಸಿ ಕಾಲೇಜಿನ ಪ್ರಾಚಾರ್ಯ ಡಾ|| ಸುಮಾ ಬೊಳರೆಡ್ಡಿ, ಚೇತನಾ ಕಾಲೇಜಿನ ಪುರುಷೋತ್ತಮ, ವೇದಾಂತ ಕಾಲೇಜಿನ ಎ.ಎಸ್. ಹೂಗಾರ, ಎ.ಎಸ್.ಪಾಟೀಲ ಕಾಮರ್ಸ್ ಕಾಲೇಜಿನ ವಿಜಯಕುಮಾರ ತಳವಾರ, ಮತ್ತು ಪ್ರದೀಪ ಕುಂಬಾರ ಜೆ.ಎಸ್.ಎಸ್. ಶಿಕ್ಷಣ ಮಹಾವಿದ್ಯಾಲಯದ ಡಾ|| ಬಿ.ಎಸ್. ಹಿರೇಮಠ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ಮೊದಲಿಗೆ ಪ್ರಶಾಂತ ದೇಶಪಾಂಡೆ ಸ್ವಾಗತಿಸಿದರು. ನೆಹರು ಯುವ ಕೇಂದ್ರದ ಕಾರ್ಯಕ್ರಮ ಸಹಾಯಕಿ ಬೇಬಿ ದೊಡಮನಿ ವಂದಿಸಿದರು. ಸಂಗಮೇಶ ರಾಮಗೊಂಡ ನಿರೂಪಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

 ವಿಜಯಪುರ: ರಾಷ್ಟçಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತಿç ಅವರು ತಮ್ಮ ಸಂದೇಶದ ಮೂಲಕ ನೀಡಿದ ಕೊಡುಗೆ ಅಮೂಲ್ಯವಾದದ್ದು, ಈ ಮಹಾನ್ ವ್ಯಕ್ತಿಗಳ ತ್ಯಾಗ, ನಿಷ್ಠೆ, ಪ್ರಾಮಾಣಿಕತೆ, ಸತ್ಯ, ಅಹಿಂಸಾ, ಸರಳತೆಯ ತತ್ವಾದರ್ಶಗಳನ್ನು ಹಾಗೂ ಅವರ ಜೀವನದ ಸಂದೇಶ ಮೌಲ್ಯಗಳನ್ನು ಯುವ ಜನತೆ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.

 ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಬುಧವಾರ ನಗರದ ಜಿಲ್ಲಾ ಪಂಚಾಯತ್ ರಸ್ತೆಯಲ್ಲಿರುವ ಗಾಂಧಿ ಭವನದಲ್ಲಿ ಆಯೋಜಿಸಲಾದ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತಿçà ಅವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, ಈ ಮಹನೀಯರ ಕುರಿತು ಇಂದಿನ ಜನರು ಅಧ್ಯಯನ ಮಾಡುವ ಮೂಲಕ ಅವರ ಚಿಂತನೆಗಳನ್ನು ಹಾಗೂ ಆದರ್ಶ ವಿಚಾರಗಳನ್ನು ಅರಿತುಕೊಳ್ಳಬೇಕು. ದೇಶಕ್ಕೆ ಸ್ವಾತಂತ್ರö್ಯ ದೊರಕಿಸುವಲ್ಲಿ ಮಹತ್ವರ ಪಾತ್ರ ವಹಿಸಿ ಸತ್ಯ, ಅಹಿಂಸೆಯ ಹೋರಾಟದ ಹಾದಿ ಅನುಸರಿಸಿ ವಿಶ್ವಕ್ಕೆ ದೊಡ್ಡ ಸಂದೇಶ ಸಾರಿದವರು ಮಹಾತ್ಮ ಗಾಂಧೀಜಿಯವರು. 

 ವಿಶ್ವಸಂಸ್ಥೆಯು ವiಹಾತ್ಮ ಗಾಂಧೀಜಿಯವರ ಜನ್ಮದಿನಾಚರಣೆಯನ್ನು ಅಹಿಂಸಾ ದಿನಾಚರಣೆಯನ್ನಾಗಿ ಅಂತರಾಷ್ಟಿçÃಯ ಮಟ್ಟದಲ್ಲಿ ಆಚರಿಸುತ್ತಿರುವುದು ವಿಶ್ವ ಅವರನ್ನು ಗೌರವಿಸುವ ಪರಿಯಾಗಿದೆ ಎಂದು ಹೇಳಿದರು.

 ತ್ಯಾಗ, ಸತ್ಯ, ಅಹಿಂಸೆಯAತಹ ಇವರ ವಿಚಾರಗಳು ಇಂದಿಗೂ ಎಂದೆAದಿಗೂ ಪ್ರಸ್ತುತವಾಗಿದೆ ಎಂದು ಹೇಳಿದರು. ಸತ್ಯ ಶಾಂತಿ, ತ್ಯಾಗಮೂರ್ತಿಯಾದ ಇವರ ಜೀವನಾರ್ದಶ ಅರಿಯಬೇಕು. ಲಾಲ್ ಬಹದೂರ್ ಶಾಸ್ತಿçà ಅವರು ನೀಡಿದ ಜೈ ಜೈವಾನ್ ಜೈ ಕಿಸಾನ್ ಘೋಷವಾಕ್ಯ ರೈತ ಹಾಗೂ ಸೈನಿಕರ ಬಗೆಗಿನ ಅಪಾರ ಕಾಳಜಿಗೆ ಧ್ಯೋತಕವಾಗಿದ ಎಂದು ಹೇಳಿದರು. ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತಿçà ಅವರ ಜೀವನಾದರ್ಶಗಳು ನಮ್ಮೆಲ್ಲರ ಬದುಕಿಗೆ ಸ್ಪೂರ್ತಿದಾಯಕವಾಗಿವೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.

 ಗಾಂಧಿಭವನವು ಮಹಾತ್ಮ ಗಾಂಧೀಜಿಯವರ ಜೀವನ ಚರಿತ್ರೆ, ಸ್ವಾತಂತ್ರö್ಯ ಚಳುವಳಿಯ ಕುರಿತಾಗಿ ಸಮಗ್ರ ನೋಟ ಇಲ್ಲಿ ್ಲ ಕಾಣಬಹುದಾಗಿದೆ. ಗಾಂಧಿ ಭವನವು ಮಾಹಿತಿ ಆಗರವೇ ಆಗಿದೆ. ಸಾರ್ವಜನಿಕರು, ವಿದ್ಯಾಥಿಗಳು ಗಾಂಧಿ ಭವನವನ್ನು ವೀಕ್ಷಿಸಿ ಗಾಂಧೀಜಿವರ ಕುರಿತಾಗಿ ಹೆಚ್ಚು ಮಾಹಿತಿ ತಿಳಿದುಕೊಳ್ಳಬಹುದಾಗಿದೆ ಎಂದು ಹೇಳಿದರು.

 ಜಿಲ್ಲಾ ಪಂಚಾಯತಿಯ ಮುಖ್ಯಕಾರ್ಯನಿರ್ವಾಹಣಾಧಿಕಾರಿ ರಿಷಿ ಆನಂದ ಮಾತನಾಡಿ, ಮಹನೀಯರ ಜೀವನದ ತತ್ವಗಳನ್ನು ಸ್ಮರಿಸಲು ಹಾಗೂ ಅವರಿಗೆ ಗೌರವ ಅರ್ಪಿಸಲು ಜಯಂತಿ ಆಚರಣೆ ಮಾಡುತ್ತೇವೆ. ಸ್ವಾತತ್ರö್ಯ ಹೋರಾಟದ ಮುಂಚೂಣಿಯಲಿದ್ದ ಮಹಾತ್ಮ ಗಾಂಧಿ ಅವರು ಸಾಮಾಜಿಕ, ರಾಜಕೀಯ ಬದಲಾವಣೆಗೆ ದೇಶಾದ್ಯಂತ ಸಂಚರಿಸಿ ಜನರ ಸಮಸ್ಯೆ ಅರಿತು ಅವಿರತವಾಗಿ ಶ್ರಮಿಸಿದರು. ಗ್ರಾಮಗಳ ಅಭಿವೃಧಿ ದೇಶದ ಅಭಿವೃದ್ಧಿ ಎಂಬ ಗ್ರಾಮ ಸ್ವರಾಜ್ಯ ಪರಿಕಲ್ಪನೆ ತಂದರು ಎಂದು ಹೇಳಿದರು.

 ರಾಷ್ಟçಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತಿç ಅವರ ಕುರಿತಾಗಿ ಶ್ರೀಮತಿ ಮೀನಾಕ್ಷಿ ಪಾಟೀಲ ಅವರು ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷರಾದ ಕಾಂತಾ ನಾಯ್ಕ, ಮೇಯರ್ ಮಹೇಜಬಿನ್ ಹೊರ್ತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ, ಎಡಿಸಿ ಸೋಮಲಿಂಗ ಗೆಣ್ಣೂರ, ಮಹಾನಗರ ಪಾಲಿಕೆ ಆಯುಕ್ತರಾದ ವಿಜಯಕುಮಾರ ಮೆಕ್ಕಳಕಿ, ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ರಾಜಶೇಖರ ಡಂಬಳ, ವಿಜಯಪುರ ಉಪವಿಭಾಗಾಧಿಕಾರಿ ಗುರುನಾಥ ದಡ್ಡ್ಡೆ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ವಿಜಯಕುಮಾರ ಅಜೂರ, ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಎನ್.ಎಚ್. ನಾಗೂರ, ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ, ಯುವ ಜನಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ ದೈವಾಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂತೋಷ ಭೋವಿ, ಪೀಟರ್ ಅಲೆಕ್ಸಾಂಡರ್, ಅಶೋಕ್ ಘೋಣಸಗಿ, ಬಾಬುಗೌಡ ಪಾಟೀಲ, ನಿಲೇಶ್ ಬೇನಾಳ, ಭೀಮರಾಯ ಜಿಗಜಿಣಗಿ, ಗಿರೀಶ್ ಕುಲಕರ್ಣಿ, ನಿವೃತ್ತ ಶಿಕ್ಷಕರಾದ ಎ.ಎಚ್. ಮಮದಾಪೂರ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿ, ವಿವಿಧ ಶಾಲಾ ಕಾಲೇಜಿನ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಬ್ಯಾಂಕ್ ಆಫ್ ಬರೋಡ ಶಾಖೆ ನಿವರಗಿಯಿಂದ ಅಜೀತ ಮುತ್ತಿನ ದಂಪತಿಗೆ ಸನ್ಮಾನ 2400 ಜನರಿಗೆ ಉಚಿತ ಕಾಶಿ ಯಾತ್ರೆ ಮಾಡಿಸಿದ ಮುತ್ತಿನ ಸಹೋದರರು

 ಚಡಚಣ: ಪಟ್ಟಣದ ಪ್ರಸಿದ್ಧ ಜವಳಿ ವರ್ತಕರಾದ ಅಜಿತ ಮುತ್ತಿನ ಅವರು ಕಳೆದ ವಾರ 2400 ಜನರನ್ನು 1 ವಾರದ ಕಾಲ ತಮ್ಮ ಸ್ವಂತ ಖರ್ಚಿನಲ್ಲಿ ಕಾಶಿ ಯಾತ್ರೆಗೆ ಕರೆದುಕೊಂಡು ಯಶಸ್ವಿಯಾಗಿ ಹೋಗಿ ಬಂದ ಹಿನ್ನಲೆಯಲ್ಲಿ ಮುತ್ತಿನ ಸಹೋದರರ ಈ ಮಹತರ ನಿಸ್ವಾರ್ಥ ಸೇವೆಯನ್ನು ಕೊಂಡಾಡಿದ ಬ್ಯಾಂಕ್ ಆಫ್ ಬರೋಡ ಶಾಖೆ ನಿವರಗಿ ಸಿಬ್ಬಂದಿಗಳು ಅಜಿತ್ ಮುತ್ತಿನ ದಂಪತಿಗೆ ಸನ್ಮಾನಿಸಿ, ಗೌರವಿಸಿದರು.

 ಕಳೆದ ಏಳೆಂಟು ವರ್ಷಗಳಿಂದ ಪ್ರಸಿದ್ಧ ಜವಳಿ ವ್ಯಾಪಾರಸ್ಥರಾದ ಮುತ್ತಿನ ಸಹೋದರರು ಉಚಿತ ಯಾತ್ರೆ ಕೈಗೊಳ್ಳುತ್ತಿದ್ದು, ಈ ಬಾರಿಯೂ ತಮ್ಮ ಸ್ವಂತ ಆದಾಯದಲ್ಲಿನ ಸುಮಾರು 2 ಕೋಟಿ ರೂ. ವೆಚ್ಚವನ್ನು ಭರಿಸಿ, ಉಚಿತವಾಗಿ ಒಂದು ವಾರದ ಕಾಶಿ ಯಾತ್ರೆ ಆಯೋಜಿಸಿದ್ದರು. 

 ಈ ಸಂದರ್ಭದಲ್ಲಿ ನಿವರಗಿಯ ಬ್ಯಾಂಕ್ ಆಫ್ ಬರೋಡ ಶಾಖಾ ವ್ಯವಸ್ಥಾಪಕರಾದ ಸಂತೋಷ ಹಿಟ್ನಳ್ಳಿ ಮಾತನಾಡಿ, ಇವರ ಸಮಾಜಮುಖಿ ಸೇವೆ ಎಲ್ಲರಿಗೂ ಮಾದರಿಯಾಗಿದೆ. ಅವರ ಸೇವಾ ಮನೋಭಾವ ಹೀಗೆ ಮುಂದುವರಿಯಲಿ ಎಂದರು.

 ಈ ವೇಳೆ ಬ್ಯಾಂಕಿನ ಸಿಬ್ಬಂದಿ ವಿಜಯಕುಮಾರ್, ಜಗನ್ನಾಥ್, ಸಿದ್ದು ಆಲಮೇಲಕರ ಸೇರಿದಂತೆ

ಯಾತ್ರೆಯಲ್ಲಿ ಭಾಗವಹಿಸಿದ್ದ ಅನೇಕ ಯಾತ್ರಿಕರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಜಿಲ್ಲಾ ಆಸ್ಪತ್ರೆಯಲ್ಲಿ ಸ್ವಚ್ಛತಾ ಸೇವಾ ಕಾರ್ಯಕ್ರಮ ಹಾಗೂ ನಾನ್ ಕ್ಲಿನಿಕಲ್ ಸಿಬ್ಬಂದಿಗಳಿಗೆ ಸನ್ಮಾನ

ವಿಜಯಪುರ. ಸಾರ್ವಜನಿಕ ಸ್ಥಳದಲ್ಲಿ ಸ್ವಚ್ಛತೆಯು ಪ್ರಮುಖ ಪಾತ್ರ ವಹಿಸುತ್ತದೆ ಪ್ರತಿಯೊಂದು ಕ್ಷೇತ್ರದಲ್ಲಿ ಸ್ವಚ್ಛತೆ ಕಾಪಾಡಿದರೆ ರೋಗಗಳನ್ನು ನಿಯಂತ್ರಣ ಮಾಡಲು ಸಾಧ್ಯವಿದೆ ಎಂದು ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ ಶಿವಾನಂದ ಮಾಸ್ತಿಹೊಳಿ ಹೇಳಿದರು.

ಅವರು ಜಿಲ್ಲಾ ಆಸ್ಪತ್ರೆಯಲ್ಲಿ ಸಪ್ಟಂಬರ್ 9 ರಿಂದ ಅಕ್ಟೋಬರ್ 2 ನೇ ತಾರೀಖಿನವರೆಗೆ ಸ್ವಚ್ಛತಾ ಸೆವಾ ಆಂದೋಲನದ ನಿಮಿತ್ಯ ಸ್ವಚ್ಛತಾ ಕಾರ್ಯಕ್ರಮ ಹಾಗೂ ಜಿಲ್ಲಾ ಆಸ್ಪತ್ರೆಯ ನಾನ್ ಕ್ಲಿನಿಕಲ್ ಸಿಬ್ಬಂದಿಗೆ ಸನ್ಮಾನ ನೆರೆವೇರಿಸಿ ಮಾತನಾಡಿದರು

 ಪ್ರತಿಯೊಬ್ಬರು ವೈಯಕ್ತಿಕ ಸ್ವಚ್ಛತೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿಯ ಸ್ವಚ್ಛತೆ ಕಾಪಾಡಿಕೊಂಡು ಮಹಾತ್ಮಾ ಗಾಂಧೀಜಿಯವರು ಕಂಡಂತಹ ಕನಸನ್ನು  ನನಸು ಮಾಡಲು ಕೈಜೋಡಿಸಬೇಕಾಗಿದೆ ಸಾರ್ವಜನಿಕ ಸ್ಥಳದಲ್ಲಿ ಎಲ್ಲೆಂದರಲ್ಲಿ ಗುಟಕಾ ತಂಬಾಕು ಮಾದಕ ವಸ್ತುಗಳನ್ನು ಉಪಯೋಗಿಸುತ್ತಿರುವುದು ನಾವು ಕಾಣುತ್ತಿದ್ದೇವೆ ಅಂತವರ ಮೇಲೆ ಕಟ್ಟುನಿಟ್ಟಿನ ಕ್ರಮ ಜರುಗಿಸುವುದು ಅನಿವಾರ್ಯವಾಗಿದೆ ಆಸ್ಪತ್ರೆಗಳಿಗೆ ಬರುವ ಜನರ ಜೇಬುಗಳನ್ನು ಚೆಕ್ಕು ಮಾಡಿ ಒಳಗೆ ಪ್ರವೇಶ ನೀಡುವುದು ಅನಿವಾರ್ಯವಾಗಿದೆ ಇಲ್ಲದಿದ್ದರೆ ಸಮಾಜದ ಸ್ವಾಸ್ಥ್ಯ ಹಾಳು ಮಾಡಲು ಪ್ರೇರೇಪಿಸಿದಂತಾಗುತ್ತದೆ.

ನಮ್ಮ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಾನ್ ಕ್ಲಿನಿಕಲ್ ಸಿಬ್ಬಂದಿಗಳು ಅತ್ಯಂತ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ ಆದ್ದರಿಂದ ನಮ್ಮ ಆಸ್ಪತ್ರೆಯ ಸ್ವಚ್ಛತೆಯನ್ನು  ಕಾಪಾಡಲು ಅನುಕೂಲವಾಗಿದೆ. ಆದಕಾರಣ ನಾನ್ ಕ್ಲಿನಿಕಲ್ ಸಿಬ್ಬಂದಿಗಳ  ಸೇವೆ ಪ್ರಶಂಶಿನಯವಾದದ್ದು ಎಂದು ಹೇಳಿದರು.


ಸ್ವಚ್ಛತೆ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಡಾ ಶಶಿಕಲಾ ಹಿರೇಮನಿ ರವರು ಮಾತನಾಡಿದರು. ಈ ಸಂದರ್ಭದಲ್ಲಿ ಆರೋಗ್ಯ ರಕ್ಷಾ ಸಮಿತಿಯ ಸಂತೋಷ್ ಶಾಹಾಪುರ. ಜಿಲ್ಲಾ ಕ್ಷಯ / ಹೆಚ್ಐವಿ ಕಾರ್ಯಕ್ರಮ ಅಧಿಕಾರಿ ಡಾ ಎಂ ಬಿ ಬಿರಾದಾರ್. ಡಾ ಗುಂಡಪ್ಪ  ಡಾ ಸುರೇಶ್ ಚವಾಣ ಡಾ ಸಂದೀಪ್ ಸಜ್ಜನ್ ಡಾ ಮಹೇಶ್ ಮೊರೆ ಡಾ ಹಾವಿನಾಳ್  ಡಾ ಚಂದರಗಿ ಸಾಯಿನಾಥ್ ಏಜೆನ್ಸಿಯ ಶ್ರೀ ಮನೋಹರ್ ಗ್ರೇಡ್ ಒನ್ ಶ್ರೀಮತಿ ಮೋಮಿನ ಡಾ ಮೀನಾಕ್ಷಿ ಡಾ ತಿಮ್ಮಾಪುರ ಹಿರಿಯ ಆಪ್ತ ಸಮಾಲೋಚಕ ರವಿ ಕಿತ್ತೂರ ಆಧೀಕ್ಷಕ ತಾಂಬೋಳಿ ಉಮೇಶ್ ವಸ್ತ್ರದ ಜಿಲ್ಲಾ ಆಸ್ಪತ್ರೆಯ ಇತರೆ ವೈದ್ಯರು.  ಅಧಿಕಾರಿಗಳು. ಮೇಲ್ವಿಚಾರಕರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.