Thursday, October 10, 2024

11-10-2024 EE DIVASA KANNADA DAILY NEWS PAPER

ಶ್ರೀ ಹನುಮಾನ ಆದಿಶಕ್ತಿ ತರುಣ ಸಂಘದ 25ನೇ ವರ್ಷದ ದೇವಿ ಪ್ರತಿಷ್ಠಾಪನೆ ನಿಮಿತ್ಯ ಅದ್ಧೂರಿ ಸಾಂಸ್ಕೃತಿಕ ಕಾರ್ಯಕ್ರಮ

 ವಿಜಯಪುರ: ನಗರದ ಶ್ರೀ ಹನುಮಾನ ಆದಿಶಕ್ತಿ ತರುಣ ಸಂಘ ಅಷ್ಟಪೈಲ ಬಂಗಲೆ ಹತ್ತಿರ 25 ನೇ ವರ್ಷದ ದೇವಿ ಪ್ರತಿಷ್ಠಾಪನೆ ಹಾಗೂ ನವರಾತ್ರಿಯ ಉತ್ಸವದ ನಿಮಿತ್ಯ ಸಾಂಸ್ಕೃತಿಕ ಕಾರ್ಯಕ್ರಮ  ಜರುಗಿತು.

ನವರಾತ್ರಿ ಉತ್ಸವದ ನಿಮಿತ್ಯ ಗಾಯಕರಾಗಿ ಕು. ಮಾಳವಿಕಾ ಜೋಶಿ ಸುಶ್ರಾವ್ಯವಾಗಿ ಹಾಡುವ ಮೂಲಕ ನೆರೆದ ಭಕ್ತರನ್ನು ಸಂಗೀತ ಲೋಕಕ್ಕೆ ಕರೆದೊಯ್ದರು. 

 ವಿಠ್ಠಲನ ಕುರಿತು ಹಾಡಿದ ಹಾಡು ಭಕ್ತರ ಮನಸೂರೆಗೊಳಿಸಿತು.  ಇವರಿಗೆ ತಬಲಾ ವಾದನ ಸಾತ ಮಂಥನ ಜೋಶಿ ನೀಡಿದರು. ಹಾರ್ಮೋನಿಯಂ ನಂದಾ ಮಿರ್ಜಿ, ತಾಳವನ್ನು ರಶ್ಮಿ ದೇಶಪಾಂಡೆ ನೆರವು ನೀಡಿದರು.

 ಈ ಕಾರ್ಯಕ್ರಮದಲ್ಲಿ ಶಂಕರ ಬಾಂಡವಲಕರ, ಪ್ರವೀಣ ಜಾಲವಾದಿ, ಪವನಕುಮಾರ್ ಜೋಶಿ, ಲಕ್ಮಣ ಗಾಯಕವಾಡ, ಗೋಪಾಲ ಪೀರಾಪುರ, ಕಾಶೀನಾಥ ಪವಾರ, ಶಿವು ಅಗಸರ, ಮೋಹನ ಬಾಂಡವಲಕರ, ದೀಪಕ ಶಿಂಧೆ, ಮಹಾದೇವಿ ಗೋಕಾಕ, ಗಾಯತ್ರಿ, ಅಂಬಿಕಾ ಜಾಧವ, ಶಾಂಕಿತ ಜಾಧವ ಹಾಗೂ ಬಡಾವಣೆಯ ಎಲ್ಲ ಸಧ್ಭಕ್ತರು ಭಾಗವಹಿಸಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಪಟ್ಟಣದಲ್ಲಿ ಚೈತನ್ಯ ಮಹಿಳಾ ಬ್ಯಾಂಕಿನ 8ನೇ ಶಾಖೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಾಹಿತಿ ಜತ್ತಿಗೆ ಸನ್ಮಾನ

ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ:  ತಿಕೋಟಾ ಪಟ್ಟಣದಲ್ಲಿ ಚೈತನ್ಯ ಮಹಿಳಾ ಬ್ಯಾಂಕಿನ 8ನೇ ಶಾಖೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಾಹಿತಿ ಸೋಮಶೇಖರ ಜತ್ತಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು ಬ್ಯಾಂಕಿನ ಅಧ್ಯಕ್ಷೆ ಶ್ರೀಮತಿ ಮಲ್ಲಮ್ಮ ಯಾಳವಾರ ನಿವೃತ್ತ ಲೆಕ್ಕ ಪರಿಶೋಧಕ ಶಂಕರ ಕಡಿಬಾಗಿಲ ಮುಂತಾದವರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಮಾನಸಿಕ ಆರೋಗ್ಯ ಸದೃಢತೆ ಕಾಪಾಡಿಕೊಳ್ಳಿ: ಹಿರಿಯ ಸಿವಿಲ್ ನ್ಯಾಯಾಧೀಶ ಅರವಿಂದ ಎಸ್. ಹಾಗರಗಿ

ವಿಜಯಪುರ : ಕಾರ್ಯಕ್ಷೇತ್ರದ ಚಟುವಟಿಕೆಯಲ್ಲಿ ಮಾನಸಿಕ ಒತ್ತಡಗಳಿಂದ ಪಾರಾಗಲು ಓದು, ಸಂಗೀತ, ಧ್ಯಾನ, ಆಟೋಟಗಳಂತಹ ಉತ್ತಮ ಹವ್ಯಾಸಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಮಾನಸಿಕ ಆರೋಗ್ಯ ಸದೃಢತೆ ಹೊಂದಲು ಸಹಾಯವಾಗುತ್ತದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಅರವಿಂದ ಎಸ್. ಹಾಗರಗಿ ಅವರು ಹೇಳಿದರು.

 ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಘಟಕ ಇವರ ಸಹಯೋಗದಲ್ಲಿ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಗುರುವಾರ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಪ್ರಯುಕ್ತ ಕಾರ್ಯಕ್ಷೇತ್ರದಲ್ಲಿ ಮಾನಸಿಕ ಆರೋಗ್ಯಕ್ಕೆ ಆಧ್ಯತೆ ನೀಡುವ ಸಮಯ ಈಗ ಬಂದಿದೆ ಎಂಬ ಘೋಷವಾಕ್ಯದಡಿಯಲ್ಲಿ ನಡೆದ ಜಾಥಾ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರುವುದರ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

 ಮಾನಸಿಕ ಖಿನ್ನತೆಯಿಂದ ಬಳಲುತ್ತಿರುವವರು ಮನಸ್ ಉಚಿತ ಸಹಾಯವಾಣಿ 14416 ಕರೆ ಮಾಡಿ ಆಪ್ತ ಸಮಾಲೋಚನೆ ಪಡೆದಕೊಳ್ಳಬಹುದು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮನೋವೈದ್ಯರು, ಆಪ್ತ ಸಮಾಲೋಚಕರು ಒತ್ತಡ ಮುಕ್ತ ಜೀವನ ನಡೆಸಲು ಉಚಿತ ಸಲಹೆಗಳನ್ನು ನೀಡುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಹೇಳಿದರು.

 ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಸಂಪತ್ತ ಗುಣಾರಿ ಮಾತನಾಡಿ, ಆರೋಗ್ಯವೇ ಭಾಗ್ಯ ಎಂಬAತೆ ಸಂಪೂರ್ಣ ಆರೋಗ್ಯ ಕಾಪಾಡಿಕೊಳ್ಳುವುದು ಅತೀ ಅವಶ್ಯಕವಾಗಿದೆ ಎಂದರು.

ಜಾಥಾವು ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಮಾರುಕಟ್ಟೆ ರಸ್ತೆಯ ಮೂಲಕ ಜಿಲ್ಲಾ ಆರೋಗ್ಯ ಕುಟುಂಬ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅವರಣದವರೆಗೆ ನಡೆಯಿತು.

ಈ ವೇಳೆ ತಾಲೂಕಾ ಆರೋಗಾಧಿಕಾರಿ ಡಾ. ಪರಶುರಾಮ ಹಿಟ್ಟನಳ್ಳಿ, ಐ.ಇ.ಸಿ ವಿಭಾಗದ ಜಿ.ಎಂ.ಕೊಲುರ, ಸುರೇಶ ಹೊಸಮನಿ ಸೇರಿದಂತೆ ಜಿಲ್ಲಾ ಮಾನಸಿಕ ಆರೋಗ್ಯ, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಸಿಬ್ಬಂದಿಗಳು ಸೇರಿದಂತೆ ತುಳಜಾಭವಾನಿ ನರ್ಸಿಂಗ್ ಕಾಲೇಜ, ಅಶ್ವಿನಿ ನರ್ಸಿಂಗ ಕಾಲೇಜ, ಬಾಂಗಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಗ್ರಂಥಾಲಯ ಸ್ಥಳ ಪರಿಶೀಲನೆ ಮಾಡಿದ ಜಿಲ್ಲಾಧಿಕಾರಿ ಟಿ.ಭೂಬಾಲನ್

ಈ ದಿವಸ ವಾರ್ತೆ

ವಿಜಯಪುರ : ಬಸವನ ಬಾಗೇವಾಡಿಯಲ್ಲಿ ಹೊಸದಾಗಿ ಗ್ರಂಥಾಲಯ ನಿರ್ಮಾಣವಾಗುವ ಕುರಿತು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಗುರುವಾರ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

 ಗ್ರಂಥಾಲಯ ಕಟ್ಟಡದಲ್ಲಿ ಸಾಕಷ್ಟು ಗಾಳಿ ಬೆಳಕು ಬರುವಂತೆ, ಕುಡಿಯುವ ನೀರು, ಶೌಚಾಲಯ, ಪಾರ್ಕಿಂಗ್, ಅಗತ್ಯ ಮೂಲಭೂತ ಸೌಕರ್ಯಕ್ಕೆ ಆಧ್ಯತೆ ನೀಡಿ ನಿರ್ಮಾಣ ಯೋಜನೆ ಸಿದ್ಧಪಡಿಸಿಕೊಳ್ಳಬೇಕು ಎಂದು ಸೂಚನೆ ನೀಡಿದರು. ನಗರದಲ್ಲಿ ರಸ್ತೆ ಒತ್ತುವರಿ ತೆರವುಗೊಳಿಸಲು ಸೂಚನೆ ನೀಡಿದ ಅವರು, ಸಾರ್ವಜನಿಕರಿಗೆ ತೊಂದರೆಯಾಗದAತೆ ಒತ್ತುವರಿ ತಡೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದರು.

ನಂತರ ತಹಶೀಲ್ದಾರ ಕಚೇರಿಗೆ ಭೇಟಿ ನೀಡಿ, ಬಾಕಿ ಕಡತಗಳ ಪರಿಶೀಲನೆ, ಆಧಾರ ನೋಂದಣಿ, ಭೂಮಿ ಪ್ರಗತಿ, ಮೋಜಣಿ ಕಡತ, ದಾಖಲೆಗಳನ್ನು ಆಧಾರದೊಂದಿಗೆ ಜೋಡಣೆ ಪ್ರಗತಿ ಮಾಹಿತಿ ಹಾಗೂ ಕಡತಗಳ ವಿಲೇವಾರಿ ಪ್ರಕ್ರಿಯೆಗಳನ್ನು ಪರಿಶೀಲಿಸಿದರು. 

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಕಾಧಿಕಾರಿ ರಿಷಿ ಆನಂದ, ಬಸವನ ಬಾಗೇವಾಡಿ ತಹಶೀಲ್ದಾರ್ ವಾಯ್.ಎಸ್. ಸೋಮನಕಟ್ಟಿ, ಪುರಸಭೆ ಮುಖ್ಯಾಧಿಕಾರಿ ಎಚ್.ಎಸ್. ಚಿತ್ತರಗಿ ಸೇರಿದಂತೆ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.