Monday, October 21, 2024

ಎಸ್ ಎಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಜೂಡೋ ಕ್ರೀಡೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

 ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ - ಶಾಲಾ ಶಿಕ್ಷಣ ಇಲಾಖೆ( ಪದವಿ ಪೂರ್ವ ಇಲಾಖೆ ) ಬೆಂಗಳೂರು  ವತಿಯಿಂದ ಚಿತ್ರದುರ್ಗ ಜಿಲ್ಲೆಯಲ್ಲಿ 2024 25 ನೇ ಸಾಲಿನ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಜೂಡೋ ಕ್ರೀಡಾಕೂಟ ನಡೆಯಿತು ಇದರಲ್ಲಿ ಎಸ್ ಎಸ್ ಪದವಿಪೂರ್ವ ಕಾಲೇಜಿನ  ವಿದ್ಯಾರ್ಥಿನಿ ಆರತಿ ಸೊನ್ನದ ಭಾಗವಹಿಸಿ  52 ಕೆಜಿ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾಳೆ  ಹಾಗೂ ಸಂದೀಪ್ ಲಂಬಾಣಿ  ರಾಜ್ಯಮಟ್ಟದಲ್ಲಿ  ತೃತೀಯ ಸ್ಥಾನ ಪಡೆದಿದ್ದಾನೆ  

 ವಿದ್ಯಾರ್ಥಿಗಳ  ಸಾಧನೆಗೆ ಬಿ ಎಲ್ ಡಿ ಈ  ಸಂಸ್ಥೆಯ ಅಧ್ಯಕ್ಷರು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಭೂತ ಸೌಕರ್ಯಗಳ  ಸಚಿವರು  ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಮ್ ಬಿ ಪಾಟೀಲ, ಸಂಸ್ಥೆಯ ಪ್ರಧಾನ ಕಾರ್ಯದರ್ಶಿಗಳಾದ  ಜಿ ಕೆ ಪಾಟೀಲ ಆಡಳಿತ ಅಧಿಕಾರಿಗಳಾದ ಬಿ ಆರ್ ಪಾಟೀಲ  ಆಯ್ ಎಸ್ ಕಾಳಪ್ಪನವರ, ಕ್ರೀಡಾ ನಿರ್ದೇಶಕರುಗಳಾದ ಎಸ್ ಎಸ್ ಕೋರಿ, ಕೆ ಜಿ ಹಿರೇಮಠ, ಪ್ರಾಚಾರ್ಯ ಡಾ. ಜಿ ಡಿ ಅಕಮಂಚಿ ದೈಹಿಕ ಉಪನ್ಯಾಸಾಕಿ ಅರುಣಾ ಮಾಲಿಂಗಪುರ ಹಾಗೂ ಸಮಸ್ತ ಸಿಬ್ಬಂದಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


ಪೊಲೀಸ್ ಹುತ್ಮಾತರ ದಿನಾಚರಣೆ ಪೊಲೀಸರ ಕರ್ತವ್ಯನಿಷ್ಠೆ ಶ್ಲಾಘನೀಯ : ನ್ಯಾ. ಶಿವಾಜಿ ನಲವಡೆ

 ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ: ಒತ್ತಡ ನಡುವೆಯೂ ಜನರ ಸುರಕ್ಷತೆಗೆಗಾಗಿ ಹಗಲಿರುಳೆನ್ನದೆ ಸೇವೆ ಸಲ್ಲಿಸುತ್ತಿರುವ ಪೊಲೀಸರ ಕರ್ತವ್ಯ ನಿಷ್ಠೆ ಶ್ಲಾಘನೀಯವಾಗಿದೆ ಎಂದು ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶರಾದ ಶಿವಾಜಿ ಅನಂತ ನಲವಡೆ ಹೇಳಿದರು.

ಸೋಮವಾರ ನಗರದ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಪೊಲೀಸ್ ಕವಾಯತು ಮೈದಾನದಲ್ಲಿ ಆಯೋಜಿಸಿದ್ದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಹುತಾತ್ಮರಿಗೆ, ಪೊಲೀಸ್ ಸ್ಮಾರಕಕ್ಕೆ ಪುಷ್ಪಗುಚ್ಛವಿರಿಸಿ, ಗೌರವ ನಮನ ಸಲ್ಲಿಸಿ ಅವರು ಮಾತನಾಡಿದ ಅವರು,ಭಧ್ರತೆಯಲ್ಲಿ ಪ್ರಮುಖ ಪಾತ್ರವಹಿಸಿ ಸಮಾಜಘಾತುಕ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಮೂಲಕ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಕರ್ತವ್ಯಬದ್ಧತೆಯಿಂದ ಬಲಿದಾನದಂತಹ ಘಟನೆಗಳು ಜರುಗುತ್ತಿವೆ. ಬಲಿದಾನಗೈದ ಪೊಲೀಸರ ಶ್ರಮ ನೆನೆಯಬೇಕಾಗಿದೆ ಎಂದು ಹೇಳಿದರು.

ಜಿಲ್ಲಾಧಿಕಾರಿ ಟಿ.ಭೂಲನ್ ಮಾತನಾಡಿ, ದಕ್ಷತೆ ಹಾಗೂ ಪ್ರಾಮಾಣಿಕತೆಯಿಂದ ಸೇವೆ ಮಾಡುತ್ತಾ ಸಮಾಜದ ಭದ್ರತೆ ಹಾಗೂ ಸುರಕ್ಷತೆಗಾಗಿ ಪ್ರಾಣ ಮುಡುಪಾಗಿಟ್ಟ ಪೊಲೀಸ್ ಅವರನ್ನು ಸ್ಮರಣೆ ಮಾಡುವುದು ನಮ್ಮ ಕರ್ತವ್ಯವಾಗಿದೆ ಎಂದು ಹೇಳಿದರು.

ಇಂದು ದೇಶದಾದ್ಯಂತ ಪೊಲೀಸ್ ಹುತಾತ್ಮರ ದಿನವನ್ನು ಅವರ ಗೌರವರ್ಥವಾಗಿ ಸ್ಮರಿಸಲಾಗುತ್ತಿದೆ. ದೇಶದ ಬದ್ರತೆ ಹಾಗೂ ನಮ್ಮ ರಕ್ಷಣೆ ಮಾಡುವ ಸಂದರ್ಭ ಹೋರಾಡಿ ತಮ್ಮ ಜೀವನ ತ್ಯಾಗ ಮಾಡಿದ ಪೊಲೀಸರಿಗೆ ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಈ ದಿನ ಗೌರವ ನಮನ ಸಲ್ಲಿಸಲಾಗುತ್ತಿದೆ. 1959ರಲ್ಲಿ ಚೀನಿ ಪಡೆಗಳೊಂದಿಗೆ ನಡೆದ ಹೋರಾಟದಲ್ಲಿ ತಮ್ಮ ಜೀವನ ತ್ಯಾಗ ಮಾಡಿದ ಪೊಲೀಸ್‌ರನ್ನು ಸ್ಮರಿಸುವ ಈ ದಿನ ಹುತಾತ್ಮರ ದಿನವಾಗಿ ಆಚರಿಸಲಾಗುತ್ತಿದೆ. ಸೈನಿಕರು ಗಡಿಯಲ್ಲಿ ದೇಶ ರಕ್ಷಣೆ ಮಾಡುತ್ತಾರೆ. ಸಾರ್ವಜನಿಕರು ಜನರ ಆಸ್ತಿ-ಪಾಸ್ತಿ ರಕ್ಷಣೆಗಾಗಿ ದುಷ್ಟ ಶಕ್ತಿಗಳ ದಮನಕ್ಕಾಗಿ ತಮ್ಮ ಜೀವನ ತ್ಯಾಗ ಮಾಡಿರುವ ಹಾಗೂ ನೆಮ್ಮದಿಯಾಗಿ ಶಾಂತಿಯಿAದ ಜೀವನ ನಡೆಸಲು ಅವರ ಕಾರ್ಯ ಅನನ್ಯವಾಗಿದೆ. ಪೊಲೀಸರ ಕರ್ತವ್ಯ ನಿಷ್ಠೆಯಿಂದ ಸಮಾಜದಲ್ಲಿ ಪ್ರತಿಯೊಬ್ಬರು ಶಾಂತಿ ನೆಮ್ಮದಿಯಿಂದ ಜೀವನ ನಡೆಸಲು ಸಾಧ್ಯವಾಗಿದೆ ಎಂದರು.

 ಪೊಲೀಸ್ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ ಮಾತನಾಡಿ , ದೇಶಕ್ಕಾಗಿ ಹೋರಾಡುತ್ತಾ ವೀರ ಮರಣಹೊಂದಿದ್ದ ಪೊಲೀಸರ ಸ್ಮರಣೆಗಾಗಿ ಸ್ಮಾರಕವನ್ನು ಲಡಾಕ್‌ನ ಬಾಸಿ ಚೀನಾ ಭಾಗದಲ್ಲಿ ಸ್ಥಾಪಿಸಲಾಗಿದೆ. ಕರ್ತವ್ಯದಲ್ಲಿದ್ದಾಗ ಹುತಾತ್ಮರರಾದ ಪೊಲೀಸರುಗಳನ್ನು ದೇಶದದ್ಯಂತ ಎಲ್ಲ ಘಟಕಗಳಲ್ಲಿ ಸ್ಮರಿಸಲಾಗುತ್ತಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಅಧಿಕಾರಿಗಳು ಹಾಗೂ ಗಣ್ಯರುಗಳಿಂದ ಹುತಾತ್ಮರಿಗೆ ಪೊಲೀಸ್ ಸ್ಮಾರಕಕ್ಕೆ ಪುಷ್ಪಗುಚ್ಛವಿರಿಸಿ, ಗೌರವ ನಮನ ಸಲ್ಲಿಸಲಾಯಿತು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.