Tuesday, October 29, 2024
ಪಂಡಿತ ಪಂಚಾಕ್ಷರಿ ಗವಾಯಿ ರಾಷ್ಟಿçÃಯ ಪ್ರಶಸ್ತಿಗೆ ವಕೀಲ ಭೃಂಗಿಮಠ ಆಯ್ಕೆ
ವಿಜಯಪುರ: ಖ್ಯಾತ ಸಾಹಿತಿ ಡಾ.ವಿ.ಬಿ.ಹಿರೇಮಠ ಮೆಮೋರಿಯಲ್ ಪ್ರತಿಷ್ಠಾನ, ಅಶ್ವಿನಿ ಪ್ರಕಾಶನ ಗದಗ (ಕರ್ನಾಟಕ) ಅವರು ನೀಡುವ ಪಂಡಿತ ಪಂಚಾಕ್ಷರಿ ಕವಿಗವಾಯಿಯವರ ರಾಷ್ಟಿçÃಯ ಪ್ರಶಸ್ತಿಗೆ ಸಮಾಜ ಸೇವಕ, ನ್ಯಾಯವಾದಿ ಮಲ್ಲಿಕಾರ್ಜುನ ಭೃಂಗಿಮಠ ಅವರು ಆಯ್ಕೆಯಾಗಿದ್ದಾರೆ.
ಈ ಬಗ್ಗೆ ಅಶ್ವಿನಿ ಪ್ರತಿಷ್ಠಾನ ಹಾಗೂ ವ್ಹಿ.ಬಿ.ಹಿರೇಮಠ ಪ್ರತಿಷ್ಠಾನದ ಅಧ್ಯಕ್ಷರು ಆಯ್ಕೆ ಪತ್ರವನ್ನು ಭೃಂಗಿಮಠ ಅವರಿಗೆ ಕಳುಹಿದ್ದು, ಬರುವ ನವೆಂಬರ್ 3 ರಂದು ಗದಗನ ಶ್ರೀರಾಮ ಬಂಜಾರ ಭವನದಲ್ಲಿ ಹಮ್ಮಿಕೊಳ್ಳಲಾಗಿರುವ ಸಾಹಿತ್ಯ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಲಿದೆ. ಈ ಸಮಾರಂಭಕ್ಕೆ ನಾಡಿನ ಖ್ಯಾತ ಸಾಹಿತಿಗಳು, ಕಲಾವಿದರು, ಸಮಾಜ ಸೇವಕರು, ಚಿಂತಕರು ಪಾಲ್ಗೊಳ್ಳಲಿದ್ದಾರೆ. ವಿಶೇಷವಾಗಿ ವೀರೇಶ್ವರ ಪುಣ್ಯಾಶ್ರಮದ ಕಲ್ಲಯ್ಯಜ್ಜ ಭಾಗವಹಸಲಿದ್ದಾರೆ ಎಂದು ಭೃಂಗಿಮಠ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.