Monday, November 25, 2024

26-11-2024 EE DIVASA KANNADA DAILY NEWS PAPER

ನೇರ ನಿಷ್ಠುರ ವರದಿ ಮೂಲಕ ಸಮಸ್ಯೆಗಳ ಮೇಲೆ ಬೆಳಕು ಚಲ್ಲಿದವರು ಆಸಂಗಿ : ಅಂಬಾದಾಸ ಜೋಶಿ


ವಿಜಯಪುರ : ವಿಜಯಪುರ ಜಿಲ್ಲೆಯ ಬಡವರು ದೀನ ದುರ್ಬಲರು, ರೈತರ ಸಮಸ್ಯೆಗಳು ಸೇರಿದಂತೆ ಜ್ವಲಂತ ಸಮಸ್ಯೆಗಳ ಕುರಿತು ನೇರ ನಿಷ್ಠುರ ವರದಿ ಮಾಡುವ ಮೂಲಕ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲಿ ಸರ್ಕಾರದಿಂದ ಸಾರ್ವಜನಿಕರಿಗೆ ಆಗಬೇಕಾದ ಕೆಲಸ ಕಾರ್ಯಗಳು ತಲುಪುವಂತೆ ಮಾಡಲು ಶ್ರಮಿಸಿದ ಜಿಲ್ಲೆಯ ಹಿರಿಯ ಪತ್ರಕರ್ತ ರುದ್ರಪ್ಪ ಆಸಂಗಿಯವರಿಗೆ ಈ ಸಲ ಕರ್ನಾಟಕ ಸರ್ಕಾರ ಸುವರ್ಣ ಕರ್ನಾಟಕ 50 ಸಂಭ್ರಮ ಪ್ರಶಸ್ತಿ ನೀಡಿ ಗೌರವಿಸಿರುವುದು ಹೆಮ್ಮೆಯ ಸಂಗತಿ ಎಂದು ಪರಿಸರ ವೇದಿಕೆ ಅಧ್ಯಕ್ಷ ಅಂಬಾದಾಸ ಜೋಶಿ ಹೇಳಿದರು. 


ಅವರು ನಗರದ ಅಷ್ಟಪೈಲ ಬಂಗ್ಲೆ ಹತ್ತಿರ ಪರಿಸರ ವೇದಿಕೆ ಹಾಗೂ ಶಿವಶರಣ ಶೈಕ್ಷಣಿಕ ಗ್ರಾಮೀಣಾಭಿವೃದ್ಧಿ ಹಾಗೂ ವಿವಿದೋದ್ಧೇಶಗಳ ಸಂಸ್ಥೆಯಿAದ ಪ್ರಶಸ್ತಿ ಪುರಸ್ಕೃತ ರುದ್ರಪ್ಪ ಆಸಂಗಿಯವರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು. 

ಕರ್ನಾಟಕ ಸರ್ಕಾರವು ಸಮಾಜಮುಖಿ ಹಿರಿಯ ಪತ್ರಕರ್ತ ರುದ್ರಪ್ಪ ಆಸಂಗಿಯವರಿಗೆ ಪ್ರಶಸ್ತಿ ನೀಡುವ ಮೂಲಕ ತನ್ನನ್ನೇ ತಾನು ಗೌರವಿಸಿಕೊಂಡಿದೆ ಎಂದು ಅವರು ಹೇಳಿದರು. 

ಡಾ. ಸುಭಾಸ ಕನ್ನೂರ ಅವರು ಮಾತನಾಡಿ, ರುದ್ರಪ್ಪ ಆಸಂಗಿಯವರು ಜಿಲ್ಲೆಯಲ್ಲಿ ಪಾದರಸದಂತೆ ಸಂಚರಿಸಿ ಜನಪರ ವರದಿಗಳನ್ನು ಮಾಡುವ ಮೂಲಕ ಹೆಸರಾದವರು. ಇಂತಹವರಿಗೆ ಈ ಸಲದ ರಾಜ್ಯ ಪ್ರಶಸ್ತಿ ಸಂದಿರುವುದು, ಸಂತಸದ ವಿಷಯ ಎಂದರು. 

ಈ ಸಂದರ್ಭದಲ್ಲಿ ಪತ್ರಕರ್ತ ಪರಶುರಾಮ ಶಿವಶರಣ, ಪರಿಸರ ವೇದಿಕೆಯ ಸದಸ್ಯರಾದ ಆನಂದ ಕುಲಕರ್ಣಿ, ಉದಯ ಬೆಳ್ಳೆಣ್ಣವರ, ಶಿವಶರಣ ಶೈಕ್ಷಣಿಕ ಗ್ರಾಮೀಣಾಭಿವೃದ್ಧಿ ಹಾಗೂ ವಿವಿದೋದ್ಧೇಶಗಳ ಸಂಸ್ಥೆಯ ಅಧ್ಯಕ್ಷ ಕಲ್ಲಪ್ಪ ಶಿವಶರಣ, ಪತ್ರಕರ್ತ ಶಂಕರ ಜಲ್ಲಿ, ಸಂಶೋಧಕ ಲಾಯಪ್ಪ ಇಂಗಳೆ ಸೇರಿದಂತೆ ಇತರರು ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಕಳಪೆ ತೊಗರಿ ಬೀಜ ವಿತರಿಸಿದ ಅಧಿಕಾರಿ, ಕಂಪನಿ ವಿರುದ್ಧ ಕ್ರಮಕ್ಕೆ ಒತ್ತಾಯ

ವಿಜಯಪುರದಲ್ಲಿ ಕಳಪೆ ತೊಗರಿ ಬೀಜ ವಿತರಿಸಿದ ಅಧಿಕಾರಿ, ಕಂಪನಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಅಪರ ಡಿಸಿಗೆ ಮನವಿ ಸಲ್ಲಿಸಲಾಯಿತು.

ವಿಜಯಪುರ: ಕಳಪೆ ತೊಗರಿ ಬೀಜ ವಿತರಿಸಿ ಜಿಲ್ಲೆಯ ರೈತರ ಬೆಳೆ ಹಾನಿ ಮಾಡಿದ ಕೃಷಿ ಅಧಿಕಾರಿಗಳ ಹಾಗೂ ಕಂಪನಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಂಡು, ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ, ಹಾನಿಗೊಂಡ ಬೆಳೆ ಪ್ರದರ್ಶಿಸಿ, ನಗರದಲ್ಲಿ ಅಖಂಡ ಕರ್ನಾಟಕ ರೈತ ಸಂಘ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ, ಅಪರ ಡಿಸಿ ಸೋಮಲಿಂಗ ಗೆಣ್ಣೂರಗೆ ಮನವಿ ಸಲ್ಲಿಸಿದರು.

ಈ ಸಂದರ್ಭ ಅಖಂಡ ಕರ್ನಾಟಕ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, ಕೃಷಿ ಇಲಾಖೆಯ ಮೂಲಕ ವಿತರಿಸಿದ ಜಿಆರ್‌ಜಿ 152 ಹಾಗೂ ಜಿಆರ್‌ಜಿ 811 ಕಳಪೆ ತೊಗರಿ ಬೀಜ ವಿತರಣೆಯಿಂದ ಬಿತ್ತಿದ ತೊಗರಿ ಬೆಳೆ ನೋಡಲು ಬಲು ಸೊಗಸಾಗಿದ್ದು, ಆದರೆ ಗಿಡಗಳಲ್ಲಿ ಒಂದೂ ತೊಗರಿ ಕಾಯಿ ಇದರಿಂದ ರೈತರು ಆತಂಕಕ್ಕಿಡಾಗಿದ್ದಾರೆ. ಹಾನಿಗೊಳಗಾದ ತೊಗರಿಗೆ ಸೂಕ್ತ ಪರಿಹಾರ ಒದಗಿಸಬೇಕು. ಕಳಪೆ ತೊಗರಿ ಬೀಜ ವಿತರಿಸಿದ ಕಂಪನಿಗಳ ಹಾಗೂ ಕೃಷಿ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಜಿಲ್ಲೆಯಾದ್ಯಂತ ತೊಗರಿ ಬೆಳೆ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಇಡೀ ಜಿಲ್ಲೆಯಲ್ಲಿ ಜಿಆರ್‌ಜಿ 152 ಹಾಗೂ ಜಿಆರ್‌ಜಿ 811 ತೊಗರಿ ಬೀಜ ಬಿತ್ತನೆ ಮಾಡಲಾಗಿದೆ. ಕೃಷಿ ಇಲಾಖೆಯವರು ಬೀಜ ತೆಗೆದುಕೊಳ್ಳುವ ಸಂದರ್ಭದಲ್ಲಿ ತೊಗರಿ ಗುಣಮಟ್ಟ, ಬೀಜ ಬಿತ್ತನೆ ಮಾಡಬೇಕಾದರೆ ಇದಕ್ಕೆ ಅನುಸರಿಸಬೇಕಾದ ಕ್ರಮಗಳೆನು ? ಎಂಬುದರ ಬಗ್ಗೆ ಮೊದಲು ಇಲಾಖೆ ಅಧಿಕಾರಿಗಳು ಮಾಹಿತಿ ಪಡೆದುಕೊಂಡು ನಂತರ ರೈತರು ತೊಗರಿ ಬೀಜ ಖರೀದಿ ಮಾಡುವ ಸಂದರ್ಭದಲ್ಲಿ ರೈತರಿಗೆ ತಿಳಿ ಹೇಳಬೇಕಿತ್ತು ಅದೂ ಕೂಡ ಆಗಿಲ್ಲ. ಸದ್ಯ ಅಧಿಕಾರಿಗಳು ಏನೇನೋ ಸಬೂಬು ಹೇಳುತ್ತಿರುವುದು ಸರಿಯಲ್ಲ ಎಂದರು.

ರಾಜ್ಯ ಬೀಜ ನಿಗಮದವರು ತೊಗರಿ ಬೀಜದ ಗುಣಮಟ್ಟ ಮಾಡದೇ ಬೀಜ ವಿತರಿಸುವ ಕಂಪನಿಗೆ ಸರ್ಟಿಪೈ ಮಾಡಿದ್ದಾದರು ಹೇಗೆ ?, ಸರ್ಟಿಪೈ ಮಾಡಬೇಕಾದರೆ ಯಾವ ಆದಾರದ ಮೇಲೆ ಸರ್ಟಿಪೈ ಮಾಡಿದ್ದಾರೆಂಬುದು ಇದರ ಗುಣಮಟ್ಟವನ್ನು ಲ್ಯಾಬದಲ್ಲಿ ಪರೀಕ್ಷೀಸಬೇಕು. ಇದರಲ್ಲಿ ಬೀಜ ನಿಗಮದವರು ಹಾಗೂ ಕೃಷಿ ಇಲಾಖೆಯವರ ಕೈವಾಡ ಇದೆ ಎಂಬುದು ಸ್ಪಷ್ಟ ಪಡಿಸುತ್ತದೆ. ಮೊದಲೇ ಬರಗಾಲದಿಂದ ರೈತರು ತತ್ತರಿಸಿದ್ದಾರೆ. ಇಂತಹದರಲ್ಲಿ ಬೀಜ ವಿತರಿಸಿದ ಕಂಪನಿಯವರು ಒಂದು ರೀತಿ ರೈತರಿಗೆ ಮೋಸ ಎಸಗುತ್ತಿದ್ದಾರೆ. ಇದರಿಂದ ರೈತರು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಆದ್ದರಿಂದ ಹಾನಿಗೊಳಗಾದ ತೊಗರಿಗೆ ಸೂಕ್ತ ಪರಿಹಾರ ನೀಡಬೇಕು, ಕಳಪೆ ಬೀಜ ವಿತರಿಸಿದ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಿ ಕಂಪನಿಯ ಪರವಾನಿಗೆ ರದ್ದು ಪಡಿಸಬೇಕು ಆಗ್ರಹಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.