Saturday, November 30, 2024

01-12-2024 EE DIVASA KANNADA DAILY NEWS PAPER

ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ವಿಶೇಷ ಪರಿಹಾರ ಬೋಧನೆಗೆ ಒತ್ತು ನೀಡಿ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಿ -ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಜ್ವಲ್‌ಕುಮಾರ ಘೋಷ್ ಸೂಚನೆ

ವಿಜಯಪುರ, ಅಕ್ಟೋಬರ್ 30 (ಕರ್ನಾಟಕ ವಾರ್ತೆ) : ಜಿಲ್ಲೆಯ ಶೈಕ್ಷಣಿಕ ಗುಣಮಟ್ಟ ಹಾಗೂ ಫಲಿತಾಂಶ ಸುಧಾರಣೆಗೆ ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಗುರುತಿಸಿ, ಇಂತಹ ಮಕ್ಕಳಿಗೆ ವಿಶೇಷ ಕಾಳಜಿ ವಹಿಸಿ, ಪರಿಹಾರ ಬೋಧನೆ ಮಾಡುವ ಮೂಲಕ ಮಕ್ಕಳ ಉಜ್ವಲ ಭವಿಷ್ಯ ರೂಪಿಸಲು ಮುಂದಾಗುವAತೆ ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಉಜ್ವಲ್‌ಕುಮಾರ ಘೋಷ್ ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಶನಿವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಿ, ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಲು ಕ್ರಮ ವಹಿಸಬೇಕು. ಸರ್ಕಾರಿ ಶಾಲೆಯ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ಮೂಲಕ ವಿದ್ಯಾರ್ಥಿಗಳ ಬಾಳಿಗೆ ಬೆಳಕಾಗಬೇಕು ಎಂದು ಅವರು ಹೇಳಿದರು.


ಶಿಕ್ಷಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವವರು ಜವಾಬ್ದಾರಿ ಹಾಗೂ ಮುತುವರ್ಜಿಯಿಂದ ಕಾರ್ಯನಿರ್ವಹಿಸಬೇಕು. ಜಿಲ್ಲೆಯ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ಪಡೆದುಕೊಂಡ ಅವರು, ಭವಿಷ್ಯದಲ್ಲಿ ಮಕ್ಕಳಿಗೆ ಯಾವುದೇ ತೊಂದರೆಯಾಗದAತೆ ಎಚ್ಚರಿಕೆ ವಹಿಸಿ, ಮಕ್ಕಳ ದಾಖಲೆಗಳಲ್ಲಿ ಯಾವುದೇ ಲೋಪವಾಗದಂತೆ ಪ್ರಾಥಮಿಕ ಹಂತದಲ್ಲಿಯೇ ನೋಡಿಕೊಳ್ಳಬೇಕು. ಶಾಲಾ ದಾಖಲಾತಿ ಹಾಗೂ ಆಧಾರ ದಾಖಲಾತಿಯಲ್ಲಿ ಯಾವುದೇ ವ್ಯತ್ಯಾಸವಾಗದಂತೆ ನೋಡಿಕೊಳ್ಳಬೇಕು. ಮಕ್ಕಳ ದಾಖಲಾತಿಯೊಂದಿಗೆ ಆಧಾರ ಸೀಡಿಂಗ್ ಪ್ರಗತಿಯನ್ನು ಹೆಚ್ಚಿಸಬೇಕು. ಏನಾದರೂ ಸಮಸ್ಯೆಗಳಲಿದ್ದಲ್ಲಿ ತಕ್ಷಣವೇ ಪರಿಹರಿಸಿಕೊಂಡು ಯಾವುದೇ ಮಗುವಿನ ದಾಖಲೆಗಳಲ್ಲಿ ವ್ಯತ್ಯಾಸವಾಗದಂತೆ ಮುತುವರ್ಜಿ ವಹಿಸಬೇಕು. ಕ್ಷೇತ್ರ ಶಿಕ್ಷಣಾಧಿಕಾರಿಗಳು ಈ ಕುರಿತು ಅಗತ್ಯ ಸೂಕ್ತ ಮಾರ್ಗದರ್ಶನ ಒದಗಿಸಬೇಕು. ಮಕ್ಕಳ ಭವಿಷ್ಯದ ಕಾರ್ಯವಾಗಿರುವುದರಿಂದ ಈ ಕಾರ್ಯದಲ್ಲಿ ಯಾವುದೇ ಅಧಿಕಾರಿಗಳು ನಿರ್ಲಕ್ಷö್ಯ ವಹಿಸಬಾರದು. ಅತ್ಯಂತ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ, ದಾಖಲಿಕರಣಗೊಳಿಸುವಂತೆ ಅವರು ಸೂಚನೆ ನೀಡಿದರು. 

ಜಿಲ್ಲೆಯಲ್ಲಿ ಕುಡಿಯುವ ನೀರಿನ ಅಭಾವವಾಗದಂತೆ ಈಗಿನಿಂದಲೇ ಮುಂಜಾಗ್ರತೆ ವಹಿಸಿಕೊಂಡು ಅಗತ್ಯ ಕ್ರಮ ವಹಿಸಬೇಕು. ಜಿಲ್ಲೆಯಲ್ಲಿ ಕುಡಿಯುವ ನೀರು ಸಮರ್ಪಕವಾಗಿ ಪೂರೈಕೆ ಮಾಡಬೇಕು. ಕಲುಷಿತ ನೀರು ಪೂರೈಕೆಯಾಗದಂತೆ ಎಚ್ಚರಿಕೆ ವಹಿಸಬೇಕು. ಬಯೋಲಾಜಿಕಲ್ ಮತ್ತು ಕೆಮಿಕಲ್ ಪರೀಕ್ಷೆಯನ್ನು ನಿಯಮಿತವಾಗಿ ಕೈಗೊಂಡು ಶುದ್ಧ ಕುಡಿಯುವ ನೀರು ಪೂರೈಸಲು ಕ್ರಮ ವಹಿಸಬೇಕು. ಶಾಲೆ, ಅಂಗನವಾಡಿ, ವಸತಿ ನಿಲಯ, ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿದಂತೆ ಅವಶ್ಯಕತೆ ಇರುವ ಕಡೆ ಪರಿಶೀಲನೆ ನಡೆಸಿ ನೀರು ಪೂರೈಸಲು ಸೂಚಿಸಲಾಗಿದ್ದರ ಮೇರೆಗೆ ಮತ್ತೊಮ್ಮೆ ಕೂಲಂಕೂಷವಾಗಿ ಪರಿಶೀಲನೆ ನಡೆಸಿ ಸಂಪರ್ಕ ಒದಗಿಸದೇ ಇರುವ ಸ್ಥಳಗಳನ್ನು ಖಚಿತಪಡಿಸಿಕೊಂಡು ಆದ್ಯತೆ ಮೇಲೆ ಕುಡಿಯುವ ನೀರು ಪೂರೈಸಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು. 

ಜಿಲ್ಲೆಯಲ್ಲಿರುವ ಶಾಲೆಗಳಲ್ಲಿ ಶೌಚಾಲಯ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಇರುವಂತೆ ನೋಡಿಕೊಂಡು ಖಚಿತಪಡಿಸಿಕೊಳ್ಳಲು ಈಗಾಗಲೇ ಜಂಟಿ ಸರ್ವೇ ನಡೆಸಲು ಸೂಚಿಸಲಾಗಿತ್ತು. ಆ ವರಧಿ ಆಧರಿಸಿ ಕ್ರಮ ವಹಿಸುವಂತೆ ಅವರು ಸೂಚನೆ ನಿಡಿದರು., 

ಜೆಜೆಎಂ ಯೋಜನೆಯ ನಿಗದಿತ ಅವಧಿಯಲ್ಲಿ ಪ್ರಗತಿ ಸಾಧಿಸಬೇಕು. ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಅಧಿಕಾರಿಗಳು ಯಾವುದೇ ಅರ್ಹ ವಿದ್ಯಾರ್ಥಿಗಳು ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸಿದ ಸಂದರ್ಭದಲ್ಲಿ ವಿಳಂಬ ಮಾಡದೇ ಅರ್ಜಿ ಇತ್ಯರ್ಥ ಪಡಿಸಿ ಶಿಷ್ಯವೇತನ ಒದಗಿಸಲು ಕ್ರಮ ವಹಿಸಬೇಕು. ಜಿಲ್ಲೆಯಲ್ಲಿ ಅರಣ್ಯೀಕರಣಕ್ಕೆ ಒತ್ತು ನೀಡಬೇಕು. ಗಂಗಾ ಕಲ್ಯಾಣ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಈ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ನಿರಂತರ ಫಾಲೋಅಪ್ ಮಾಡಬೇಕು. ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳು ಇ-ಆಫೀಸ್ ಅನುಷ್ಠಾನಕ್ಕೆ ಕ್ರಮ ವಹಿಸಬೇಕು ಎಂದು ಅವರು ಸೂಚನೆ ನೀಡಿದರು. 

ಪ್ರಧಾನಮಂತ್ರಿ ಸೂರ್ಯ ಘರ ಯೋಜನೆಯಡಿಯಲ್ಲಿ ಜಿಲ್ಲೆಯ ಸರ್ಕಾರಿ ಕಟ್ಟಡದ ಮೇಲ್ಛಾವಣಿಯಲ್ಲಿ ಸೋಲಾರ ಅಳವಡಿಕೆಗೆ ವಿವಿಧ ಇಲಾಖೆಗಳ ಮಾಹಿತಿಯನ್ನು ಸಂಗ್ರಹಿಸುವAತೆ ಲೋಕೋಪಯೋಗಿ ಇಲಾಖೆ ಹಾಗೂ ಹೆಸ್ಕಾಂ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. 

ಪ್ರಧಾನಮಂತ್ರಿ ಸೂರ್ಯ ಘರ ಯೋಜನೆ, ಮಾದರಿ ಸೌರ ಗ್ರಾಮ, ಪ್ರಧಾನಮಂತ್ರಿ ಕಿಸಾನ್ ಊರ್ಜಾ ಸುರಕ್ಷಾ ಏವಂ ಉತ್ಥಾನ ಮಹಾಭಿಯಾನ (ಕುಸುಮಬಿ) ಯೋಜನೆ ಕುರಿತು ಹೆಸ್ಕಾಂ ಅಭಿಯಂತರ ಸಿದ್ದಪ್ಪ ಬಿಂಜಗೇರಿ ಪಿಪಿಟಿ ಮೂಲಕ ಸಭೆಗೆ ಮಾಹಿತಿ ನೀಡಿದರು. 

ಇದೇ ಸಂದರ್ಭದಲ್ಲಿ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಕ್ರೀಡಾ ಇಲಾಖೆ, ಆರೋಗ್ಯ ಇಲಾಖೆ, ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು.

ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಇಂಡಿ ಉಪವಿಭಾಗಾಧಿಕಾರಿ ಆಬೀದ ಗದ್ಯಾಳ, ವಿಜಯಪುರ ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಕೆ.ಕೆ.ಚವ್ಹಾಣ, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ, ಕ್ರೀಡಾ ಇಲಾಖೆ ಅಧಿಕಾರಿ ರಾಜಶೇಖರ ಧೈವಾಡಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಹುಬ್ಬಳ್ಳಿಯ ಎಸ್.ಜೆ.ಎಂ.ವಿ.ಎಸ್ ಕಲಾ ಮತ್ತು ವಾಣಿಜ್ಯ ಮಹಿಳಾ ಕಾಲೇಜು ತಂಡದ ಮುಡಿಗೆ ಸಮಗ್ರ ವೀರಾಗ್ರಣಿ ಪ್ರಶಸ್ತಿ


ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಮೂರು ದಿನಗಳ ಕಾಲ ನಡೆದ 19ನೇ ಅಂತರ್ ಮಹಾವಿದ್ಯಾಲಯಗಳ ಯುವಜನೋತ್ಸವ ‘ಶಕ್ತಿ ಸಂಭ್ರಮ’ದಲ್ಲಿ ಅತೀ ಹೆಚ್ಚು ಸ್ಪರ್ಧೆಗಳಲ್ಲಿ ಭಾಗವಹಿಸಿ ಗರಿಷ್ಠ ಅಂಕಗಳನ್ನು ಗಳಿಸಿದ ಹುಬ್ಬಳ್ಳಿಯ ಎಸ್.ಜೆ.ಎಂ.ವಿ.ಎಸ್ ಕಲಾ ಮತ್ತು ವಾಣಿಜ್ಯ ಮಹಿಳಾ ಕಾಲೇಜು ತಂಡವು ಸಮಗ್ರ ವೀರಾಗ್ರಣಿ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದ್ದು, ಎರಡನೆಯ (ರನ್ನರ್ ಅಪ್) ಸ್ಥಾನವನ್ನು ಕಲಬುರ್ಗಿಯ ಗೋದುತಾಯಿ ಕಲಾ ವಾಣಿಜ್ಯ ಮತ್ತು ವಿಜ್ಞಾನ ಮಹಿಳಾ ಪದವಿ ಕಾಲೇಜು ತಂಡವು ಅಲಂಕರಿಸಿದೆ.

ಸAಗೀತ, ನೃತ್ಯ, ಸಾಹಿತ್ಯ, ರಂಗಭೂಮಿ ಮತ್ತು ಲಲಿತ ಕಲೆಗಳ ವಿಭಾಗದಲ್ಲಿ ನಾಟಕ, ಏಕಪಾತ್ರಾಭಿನಯ, ಮೂಕಾಭಿನಯ, ಸಂಗೀತ, ನೃತ್ಯ, ಚಿತ್ರಕಲೆ, ಜನಪದ ಕಲೆ, ಸಾಹಿತ್ಯ, ಚರ್ಚೆ, ಭಾಷಣ, ಛಾಯಾಗ್ರಹಣ, ಜನಪದ ನೃತ್ಯ ಮತ್ತು ಕ್ವಿಜ್ ಮುಂತಾದ ಸ್ಪರ್ಧೆಗಳು ಹಮ್ಮಿಕೊಳ್ಳಲಾಗಿತ್ತು. ಈ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತ ತಂಡಗಳಿಗೆ ವಿಭಾಗವಾರು ಪ್ರಶಸ್ತಿಯನ್ನು ನೀಡಲಾಗಿದ್ದು ವಿಜೇತ ತಂಡಗಳ ವಿವರ ಈ ಕೆಳಗಿನಂತಿದೆ:

ಸAಗೀತ ವಿಭಾಗ: ಹುಬ್ಬಳ್ಳಿಯ ಎಸ್.ಜೆ.ಎಂ.ವಿ.ಎಸ್ ಕಲಾ ಮತ್ತು ವಾಣಿಜ್ಯ ಮಹಿಳಾ ಕಾಲೇಜು ತಂಡವು (ಪ್ರಥಮ ಸ್ಥಾನ) ಮತ್ತು ಕಲಬುರ್ಗಿಯ ಗೋದುತಾಯಿ ಕಲಾ ವಾಣಿಜ್ಯ ಮತ್ತು ವಿಜ್ಞಾನ ಮಹಿಳಾ ಪದವಿ ಕಾಲೇಜು (ದ್ವಿತೀಯ ಸ್ಥಾನ). 

ನೃತ್ಯ ವಿಭಾಗದ: ಕಲಬುರ್ಗಿಯ ಶರಣೇಶ್ವರಿ ರೇಶ್ಮಿ ಮಹಿಳಾ ಬಿ.ಎಡ್ ಕಾಲೇಜು (ಪ್ರಥಮ ಸ್ಥಾನ) ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಮಂಡ್ಯದ ಪಿ.ಜಿ ಕೇಂದ್ರ (ದ್ವಿತೀಯ ಸ್ಥಾನ). 

ಸಾಹಿತ್ಯ ವಿಭಾಗ: ಸೇಡಂನ ಶ್ರೀಮತಿ ನರ್ಮದಾ ದೇವಿ ಗಿಳಿದಾ ಮಹಿಳಾ ಕಾಲೇಜು (ಪ್ರಥಮ ಸ್ಥಾನ) ಮತ್ತು ಇಳಕಲ್‌ನ ಎಸ್.ವಿ.ಎಮ್. ಕಲಾ ಮತ್ತು ವಾಣಿಜ್ಯ ಮಹಿಳಾ ಕಾಲೇಜು ತಂಡ (ದ್ವಿತೀಯ ಸ್ಥಾನ).

ನಾಟಕ ವಿಭಾಗ: ಕಲಬುರ್ಗಿಯ ಶರಣೇಶ್ವರಿ ರೇಶ್ಮಿ ಮಹಿಳಾ ಬಿ.ಎಡ್ ಕಾಲೇಜು ತಂಡ (ಪ್ರಥಮ ಸ್ಥಾನ) ಮತ್ತು ಕಲಬುರ್ಗಿಯ ಶ್ರೀಮತಿ ವಿ.ಜಿ.ಮಹಿಳಾ ಪದವಿ ಕಾಲೇಜು ತಂಡ (ದ್ವಿತೀಯ ಸ್ಥಾನ). 

ಲಲಿತ ಕಲೆಗಳ ವಿಭಾಗ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ತಂಡ (ಪ್ರಥಮ ಸ್ಥಾನ) ಮತ್ತು ಕಲಬುರ್ಗಿಯ ಗೋದುತಾಯಿ ಕಲಾ ವಾಣಿಜ್ಯ ಮತ್ತು ವಿಜ್ಞಾನ ಮಹಿಳಾ ಪದವಿ ಕಾಲೇಜು ತಂಡ (ದ್ವಿತೀಯ ಸ್ಥಾನ). 

ಯುವಜನೋತ್ಸವದ ಉದ್ಘಾಟನಾ ಸಮಾರಂಭಕ್ಕೂ ಮುನ್ನ ನಡೆದ ಸಾಂಸ್ಕೃತಿಕ ಮೆರವಣಿಗೆಯಲ್ಲಿ ಭಾಗಿಯಾಗಿದ್ದ ತಂಡಗಳಲ್ಲಿ ಉತ್ತಮ ಪ್ರದರ್ಶನ ನೀಡಿದ ತಂಡಗಳ ಪೈಕಿ ಮೊದಲ ಬಹುಮಾನವನ್ನು ಹುಬ್ಬಳ್ಳಿಯ ಎಸ್.ಜೆ.ಮ್.ವಿ.ಎಸ್ ಕಲಾ ಮತ್ತು ವಾಣಿಜ್ಯ ಮಹಿಳಾ ಕಾಲೇಜು ತಂಡವು ಪಡೆದಿದ್ದು. ಎರಡನೇ ಬಹುಮಾನವನ್ನು ಕಲಬುರ್ಗಿಯ ಶ್ರೀಮತಿ ವಿ.ಜಿ.ಮಹಿಳಾ ಪದವಿ ಕಾಲೇಜು ತಂಡವು ಪಡೆದಿದೆ. ತೃತೀಯ ಬಹುಮಾನವನ್ನು ಕಲಬುರ್ಗಿಯ ಶರಣೇಶ್ವರಿ ರೇಶ್ಮಿ ಮಹಿಳಾ ಬಿ.ಎಡ್ ಕಾಲೇಜು ತಂಡವು ಪಡೆದುಕೊಂಡಿತು. 

ವಿಜೇತ ತಂಡಗಳಿಗೆ ಮುಖ್ಯ ಅತಿಥಿಯಾಗಿದ್ದ ಡಾ.ಜಾವೀದ್ ಜಮಾದಾರ, ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ, ಕುಲಸಚಿವ ಶಂಕರಗೌಡ ಸೋಮನಾಳ. ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚAದ್ರಶೇಖರ್, ಸಿಂಡಿಕೇಟ್ ಸದಸ್ಯರ ಡಾ.ಎಸ್.ಜೆ.ಮಾಡ್ಯಾಳ, ಯುವಜನೋತ್ಸವ ತಾಂತ್ರಿಕ ಸಮಿತಿ ಅಧ್ಯಕ್ಷ ಪ್ರೊ.ಪಿ.ಜಿತಡಸದ, ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯದ ನಿರ್ದೇಶಕಿ ಪ್ರೊ.ಶಾಂತಾದೇವಿ ಟಿ ಮತ್ತಿತರ ಗಣ್ಯರು ಪ್ರಶಸ್ತಿಗಳನ್ನು ವಿತರಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ವಿದ್ಯಾರ್ಥಿಗಳು ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಲಿ: ಕುಲಪತಿ ಡಾ. ಪಿ .ಎಲ್ .ಪಾಟೀಲ.

ವಿಜಯಪುರ  : ಇಂದು ವಿಜಯಪುರ ಕೃಷಿ ಮಹಾವಿದ್ಯಾಲಯದಲ್ಲಿ ನೂತನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ ಜರುಗಿತು ಧಾರವಾಡ ಕೃಷಿ ವಿಶ್ವವಿದ್ಯಾಲಯ ಕುಲಪತಿ ಡಾ. ಪಿ. ಎಲ್.  ಪಾಟೀಲ  ಉದ್ಘಾಟನೆ ನೆರವೇರಿಸಿ ಮಾತನಾಡಿ,ವಿದ್ಯಾರ್ಥಿಸಂಘಗಳು ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಶೈಕ್ಷಣಿಕ, ಸ್ಪರ್ಧಾತ್ಮಕ ಕ್ರೀಡೆ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಹಲವಾರು ಚಟುವಟಿಕೆಗಳನ್ನು ತಿಂಗಳುವಾರು ಯೋಜಿಸಿ ಅವುಗಳನ್ನು ಅನುಷ್ಠಾನ ಗೊಳಿಸ ಬೇಕೆಂದು ತಿಳಿಸಿದರು.

ವಿದ್ಯಾರ್ಥಿಗಳು ಅಂತರ ತರಗತಿವಾರು ಸ್ಪರ್ಧೆಗಳನ್ನು ಆಯೋಜಿಸಿ ಮಹಾವಿದ್ಯಾಲಯ ಮಟ್ಟದಲ್ಲಿ ಉತ್ತಮ ತಂಡಗಳನ್ನು ಕಟ್ಟುವಂತೆ ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಸಾನಿಧ್ಯ ಸಾನಿಧ್ಯ ವಹಿಸಿ ಮಾತನಾಡಿದ ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಡಾ ಬಿ. ಎಮ್.ಪಾಟೀಲ್ ಗುರೂಜಿ ವಿದ್ಯಾರ್ಥಿಗಳು ನಾಯಕತ್ವ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು ಇದಕ್ಕಾಗಿ ಬಹು ಮುಖ್ಯವಾದ ಮನಸ್ಸಿನ ಏಕಾಗ್ರತೆ ಬಗ್ಗೆ ವಿವರಿಸುತ್ತ ವಿದ್ಯಾರ್ಥಿಗಳು  ತಾವು ಸಂಘ ಕಟ್ಟಿಕೊಂಡ ನಂತರ ವಿದ್ಯಾರ್ಥಿಗಳ ಏಳಿಗೆಗಾಗಿ ನಂತರ ಸಮಾಜದ ಏಳಿಗೆಗಾಗಿ ಮತ್ತು ಸುಭದ್ರ ದೇಶ ಕಟ್ಟುವಲ್ಲಿ ಮಹತ್ತರ ಪಾತ್ರ ವಹಿಸಬೇಕೆಂದರು. ಇಂದಿನ ಯುವಕರು ಹಲವಾರು  ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ ಅದಕ್ಕಾಗಿ ಯೋಗ ಧ್ಯಾನದ ಮೂಲಕ ವ್ಯಸನ ಮುಕ್ತರಾಗುವ ಕುರಿತು ಮಾರ್ಗದರ್ಶನ ನೀಡಿದರು.ಮನಸ್ಸಿನ ಏಕಾಗ್ರತೆ ಮಾಡುವ ಕುರಿತು  ಪ್ರಾತ್ಯಕ್ಷಿಕೆ ಮಾಡಿಸಿದರು. ಇದೇ ಸಂದರ್ಭದಲ್ಲಿ ಹಳೆಯ ವಿದ್ಯಾರ್ಥಿ ಸಂಘಟನೆಯ ಪದಾಧಿಕಾರಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು ಇತ್ತೀಚೆಗೆ ವಿಶ್ವವಿದ್ಯಾಲಯ ಮಟ್ಟದಲ್ಲಿ ವಿವಿಧ ಕ್ರೀಡೆಗಳಲ್ಲಿ ಪ್ರಶಸ್ತಿ ವಿಜೇತ ವಿದ್ಯಾರ್ಥಿಗಳಿಗೆ ಪಾರಿತೋಷಕ ವಿತರಿಸಲಾಯಿತು. ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷ ವೀರೇಶ್ ಹವಾಲ್ದಾರ್ ಶಿವರಾಜ್ ಮೇಟಿ ಅಮೂಲ್ಯ ಸೇರಿದಂತೆ ಕೃಷಿ ಮಹಾವಿದ್ಯಾಲಯ ಪ್ರಾಧ್ಯಾಪಕರು, ಶಿಕ್ಷಕೇತರ ಸಿಬ್ಬಂದಿ ವರ್ಗ, ಸೇರಿದಂತೆ ಕೃಷಿ ಕಾಲೇಜಿನ ಎಲ್ಲ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.