Tuesday, December 3, 2024

04-12-2024 EE DIVASA KANNADA DAILY NEWS PAPER

ಕವಿಗಳು ಸಾಹಿತ್ಯದ ಮೂಲಕ ಸಾಂಸ್ಕೃತಿಕ ಪರಂಪರೆ ಕಟ್ಟಿ ಬೆಳೆಸಿದ್ದಾರೆ: ಕೇರಳದ ಕಾಸರಗೋಡಿನ ಹಿರಿಯ ಸಾಹಿತಿ ರಾಧಾಕೃಷ್ಣ

ವಿಜಯಪುರ: ಕವಿಗಳು ನಾಡು, ನುಡಿ ಮೇಲೆ ಬೆಳಕು ಚೆಲ್ಲುವ ಸಾಹಿತ್ಯದ ಮೂಲಕ ಸಾಂಸ್ಕೃತಿಕ ಪರಂಪರೆಯನ್ನು ಕಟ್ಟಿ ಬೆಳೆಸಿದ್ದಾರೆ ಎಂದು ಕೇರಳದ ಕಾಸರಗೋಡಿನ ಹಿರಿಯ ಸಾಹಿತಿ ರಾಧಾಕೃಷ್ಣ ಉಳಿಯತ್ತಡ್ಕ್ ಹೇಳಿದರು.

ನಗರದ ಶಿವಶರಣ ಶೈಕ್ಷಣಿಕ ಗ್ರಾಮೀಣಾಭಿವೃದ್ಧಿ ವಿವಿದ್ಧೋದ್ದೇಶಗಳ ಸಂಸ್ಥೆಯ ನೂತನ ಕಚೇರಿಯಲ್ಲಿ ಶಿವಶರಣ ಶೈಕ್ಷಣಿಕ ಗ್ರಾಮೀಣಾಭಿವೃದ್ಧಿ ವಿವಿದ್ಧೋದ್ದೇಶಗಳ ಸಂಸ್ಥೆ ವತಿಯಿಂದ ಹಮ್ಮಿಕೊಂಡ ಯುವ ಕವಿ ಕಲ್ಲಪ್ಪ ಶಿವಶರಣ ಅವರ ಚೊಚ್ಚಲ ಕವನ ಸಂಕಲನ ಕಲ್ಲು ಮನಸು ಕೃತಿಯ ವಿಮರ್ಶೆ ಹಾಗೂ ಕವಿಗೋಷ್ಠಿ ಉದ್ಘಾಟಿಸಿ ಅವರು ಮಾತನಾಡಿದರು.

ಕನ್ನಡದ ಕವಿಗಳು ಸೂಕ್ಷö್ಮ ಸಂವೇದನಾ ಶೀಲತ್ವದಿಂದ ಕನ್ನಡ ನಾಡಿನ ಪರಿಸರದ ಪ್ರಭಾವಕ್ಕೆ ಒಳಪಟ್ಟು, ಅಮೂಲ್ಯವಾದ ಕೃತಿಗಳನ್ನು ರಚಿಸಿದ್ದಾರೆ. ಈ ಪರಂಪರೆಯನ್ನು ಯುವಕವಿಗಳು ಮುಂದುವರೆಸಿಕೊAಡು ಹೋಗಬೇಕು ಎಂದರು.

ಯುವ ಕವಿ ಕಲ್ಲಪ್ಪ ಶಿವಶರಣ ಅವರು ನಮ್ಮ ಹಿರಿಯ ತಲೆಮಾರಿನ ಕವಿಗಳು ಹಾಕಿಕೊಟ್ಟ ಮಾರ್ಗದಲ್ಲಿ ನವ ಕವಿತೆಗಳನ್ನು ಬರೆಯುವ ಮೂಲಕ ಕನ್ನಡ ಸಾಹಿತ್ಯ ಲೋಕದಲ್ಲಿ ಹೊಸತನ ಸೃಷ್ಟಿಸುವ ಭರವಸೆಯ ಕವಿಯಾಗಿ ಹೊರಹೊಮುತ್ತಿರುವುದು ಸಂತೋಷದ ಸಂಗತಿ ಎಂದರು.

ಸಾಹಿತಿ ಸೋಮನಿಂಗ ಹಿಪ್ಪರಗಿ ಕೃತಿ ವಿಮರ್ಶಿಷಿ ಮಾತನಾಡಿ, ವಿಜಯಪುರ ಜಿಲ್ಲೆಯು ರನ್ನ, ಅಭಿನವ, ಪಂಪ ನಾಗಚಂದ್ರ ಬಸವಾದಿ ಶರಣರು ಸೇರಿದಂತೆ ಅನೇಕಾನೇಕ ಸಾಂಸ್ಕೃತಿಕ ದಿಗ್ಗಜ್ಜರನ್ನು ಕನ್ನಡ ನಾಡಿಗೆಕೊಟ್ಟಿದೆ. ಜಿಲ್ಲೆಯಲ್ಲಿ ಹೊಸ ತಲೆಮಾರಿನ ಅನೇಕರು ಕೂಡ ಸಾಹಿತ್ಯಿಕ ಕೃಷಿಯಲ್ಲಿ ತೊಡಗಿಸಿಕೊಂಡಿದ್ದು, ಇಂತವರ ಸಾಲಿನಲ್ಲಿ ಕಲ್ಲು ಮನಸ್ಸು ಕೃತಿ ವಿಶಿಷ್ಟವಾಗಿ ಹೊರ ಬಂದಿದೆ ಎಂದರು.

ಸಾಹಿತಿ, ಪತ್ರಕರ್ತ ಪರಶುರಾಮ ಶಿವಶರಣ ಮಾತನಾಡಿ, ಕವಿತೆ ಅಂತರಾಳದ ಅಭಿವ್ಯಕ್ತಿಯನ್ನು ವ್ಯಕ್ತಪಡಿಸುವ ಸಾಧನ, ಸಾಹಿತ್ಯದಿಂದ ಮನಸ್ಸು ಅರಳುವುದರ ಜೊತೆಗೆ ಸಮಾಜ ತಿದ್ದಲು ಸಾಧ್ಯ. ಪ್ರತಿಯೊಬ್ಬರು ಸಾಹಿತ್ಯದ ಅಭಿರುಚಿಯನ್ನು ಹೊಂದಬೇಕು. ಸಾಹಿತ್ಯ ಅಧ್ಯಯನಶೀಲರಾಗಿ ಉತ್ತಮ ವ್ಯಕ್ತಿತ್ವ ಪಡೆಯಬೇಕು ಎಂದರು.

ಸಾಹಿತಿ ಲಾಯಪ್ಪ ಇಂಗಳೆ, ಭೀಮರಾಯ ಕುಂಟೋಜಿ, ಪ್ರತಾಪ ಚಿಕ್ಕಲಕಿ ಕವನ ವಾಚಿಸಿದರು.

ಸಿಂದಗಿ ತಾಲೂಕು ಕಸಾಪ ಅಧ್ಯಕ್ಷ ಶಿವಾನಂದ ಬಡಾನೂರು, ಚಲನಚಿತ್ರ ನಿರ್ದೇಶಕ ಸುನೀಲಕುಮಾರ ಸುಧಾಕರ, ಅಖಿಲ ಭಾರತೀಯ ವಾಲ್ಮೀಕಿ ಸಮಾಜ ಸೇವಾ ಸಂಘದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಬಟಗಿ, ಹೋರಾಟಗಾರ ಬಸವರಾಜ ಕುಬಕಡ್ಡಿ, ಬಸವಕುಮಾರ ಕಾಂಬಳೆ, ಕಲ್ಲಪ್ಪ ಬಬಲಾದ, ಚೀಮಾಜಿ ರಾಠೋಡ, ಅರ್ಜುನ ಬಂಡಿ, ಸಂಜೀವ ರಾಠೋಡ, ಕಾಶೀನಾಥ ಪವಾರ, ರವೀಂದ್ರ ಮಡಿವಾಳರ, ಪತ್ರಕರ್ತ ಉಮೇಶ ಶಿವಶರಣ, ಮಹಾಂತೇಶ ನೂಲಾನವರ ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ವಿಶ್ವ ವಿಕಲಚೇತನರ ದಿನಾಚರಣೆ-2024 ಆತ್ಮವಿಶ್ವಾಸದಿಂದ ಮುನ್ನಡೆದು ಸಾಧನೆಗೈಯ್ಯುವಂತೆ: ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಕರೆ


ವಿಜಯಪುರ, ಡಿಸೆಂಬರ್ 03 (ಕರ್ನಾಟಕ ವಾರ್ತೆ) : ಜೀವನದಲ್ಲಿ ಸಾಧನೆ ಮಾಡಲು ಮನಸ್ಸೆ ಮುಖ್ಯ, ಮನಸ್ಸಿದ್ದಲ್ಲಿ ಮಾರ್ಗ ಎಂಬAತೆ ವಿಶೇಷ ಚೇತನರು ಒಂದು ವಿಶೇಷ ಸದೃಢ ಮನಸ್ಸು ಹೊಂದಿರುತ್ತಾರೆ. ಸಾಧನೆಗೆ ಯಾವುದೂ ಅಡ್ಡಿಯಾಗಲಾರದು. ಆತ್ಮವಿಶ್ವಾಸದಿಂದ ಎಂತಹ ಸನ್ನಿವೇಶ-ಸಂದರ್ಭವನ್ನು ಛಲದಿಂದ ಎದುರಿಸಿ ಸಾಧನೆಗೆ ಮುಂದಾಗುವAತೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಕರೆ ನೀಡಿದರು. 

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮAದಿರದಲ್ಲಿ ಮಂಗಳವಾರ ಆಯೋಜಿಸಿದ್ದ ವಿಶ್ವ ವಿಕಲಚೇತನರ ದಿನಾಚರಣೆ-2024 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದ ಅವರು, ಸಾಧನೆ ಸಾಧಕನ ಸೊತ್ತು. ದೃಢ ಮನಸ್ಸು ಹೊಂದಿ, ಸಾಧಕರಾಗಿ ಸಮಾಜಕ್ಕೆ ಕೊಡುಗೆ ನೀಡಲು ಮುಂದಾಗಬೇಕು ಎಂದು ಅವರು ಹೇಳಿದರು. 

 ಜೀವನದಲ್ಲಿ ಆಶಾಭಾವನೆ ಹೊಂದಿರಬೇಕು. ಸದಾ ಪ್ರಯತ್ನವಾದಿಯಾಗಿರಬೇಕು. ಸತತ ಪ್ರಯತ್ನ ಯಶಸ್ವಿಗೆ ಸಹಕಾರಿಯಾಗಿದೆ. ಜೀವನದಲ್ಲಿ ಸಾಧನೆ ಮಾಡಲು ಮಾನಸಿಕ ದೃಢತೆ ಹೊಂದಬೇಕೆ ಹೊರತು ದೈಹಿಕವಾಗಿ ಅಲ್ಲ. ಮಾನಸಿಕವಾಗಿ ಸದೃಢತೆಯಿಂದ ಸಾಧನೆಯ ಶಿಖರವನ್ನೇರಬಹುದಾಗಿದೆ ಎಂದು ಅವರು ಹೇಳಿದರು.

ವಿಶೇಷ ಚೇತನರು ಎಲ್ಲ ಕ್ಷೇತ್ರಗಳಲ್ಲಿದ್ದಾರೆ. ನಮ್ಮಲ್ಲಿನ ಕೊರತೆಗಳ ಬಗ್ಗೆ ಯೋಚಿಸದೇ ಆತ್ಮವಿಶ್ವಾಸದಿಂದ ಮುನ್ನಡೆದರೆ ಎಲ್ಲವೂ ಸಾಧ್ಯವಾಗುತ್ತದೆ. ತಮ್ಮ ಪ್ರತಿಭೆಗಳಿಂದ ಸಮಾಜಕ್ಕೆ ಮಾದರಿಯಾಗುವ ನಿಟ್ಟಿನಲ್ಲಿ ಸಾಧನೆಗೈಯ್ಯುವಂತೆ ಅವರು ಸಲಹೆ ನೀಡಿದರು. 

ಸಮಾಜದಲ್ಲಿ ವಿಶೇಷ ಸಾಧನೆ ಮಾಡಿದ ಸಾಧಕರ ಜೀವನ ಸ್ಪೂರ್ತಿಯಾಗಿಟ್ಟುಕೊಂಡು ಸಾಧನೆಗೆ ಮುಂದಾಗಬೇಕು. ವಿಶೇಷಚೇತನರಿಗೆ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಇಂತಹ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು. ಜಿಲ್ಲಾಡಳಿತವೂ ಸಹ ಸದಾ ವಿಶೇಷ ಚೇತನರ ಕುಂದು ಕೊರತೆಗಳಿಗೆ ಸ್ಪಂದಿಸುತ್ತದೆ. ಶಿಸ್ಸು ಬದ್ಧ ಜೀವನ ನಡೆಸುವ ಮೂಲಕ ಉತ್ತಮ ಬದುಕು ರೂಪಿಸಿಕೊಳ್ಳಬೇಕು ಎಂದು ಅವರು ಹೇಳಿದರು. 

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಕೆ.ಕೆ.ಚವ್ಹಾಣ ಅವರು ಮಾತನಾಡಿ, ವಿಶೇಷ ಚೇತನರಿಗಾಗಿಯೇ ಇರುವ ಸರ್ಕಾರದ ಸೌಲಭ್ಯಗಳನ್ನು-ಯೋಜನೆಗಳನ್ನು ಸದುಪಯೋಗ ಪಡೆದುಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಹೇಳಿದರು.

ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ಸವಿತಾ ಕಾಳೆ ಅವರು ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದ ಅವರು, ವಿಶ್ವಸಂಸ್ಥೆಯ ನಿರ್ದೇಶನದಂತೆ ಪ್ರತಿವರ್ಷ ಡಿಸೆಂಬರ್-3 ರಂದು ವಿಶ್ವ ವಿಕಲಚೇತನರ ದಿನಾಚರಣೆ ಆಚರಿಸಲಾಗುತ್ತಿದೆ. 1998 ರಿಂದ ಸುಮಾರು 23 ವರ್ಷಗಳಿಂದ ಆಚರಿಸಲಾಗುತ್ತಿದ್ದು, ಈ ವರ್ಷ ವಿಶ್ವ ಸಂಸ್ಥೆಯು ವಿಕಲಚೇತನರಿಗಾಗಿ ಘೋಷವಾಕ್ಯ “ಸಮಗ್ರ ಮತ್ತು ಸುಸ್ಥಿರ ಭವಿಷ್ಯಕ್ಕಾಗಿ ವಿಕಲಚೇತನ ವ್ಯಕ್ತಿಗಳಲ್ಲಿ ನಾಯಕತ್ವ ಉತ್ತೇಜನ ಎಂದು ಘೋಷಿಸಲಾಗಿದೆ. ವಿಕಲಚೇತನರ ಸಮಗ್ರ ಶ್ರೇಯೋಭಿವೃದ್ದಿಗಾಗಿ ಸರ್ಕಾರದಿಂದ ಅನೇಕ ಸೌಲಭ್ಯಗಳನ್ನು ಒದಗಿಸುವ ಮೂಲಕ ಸಮಾಜದ ಮುಖ್ಯವಾಹಿನಿಗೆ ತರಲಾಗುತ್ತಿದೆ ಎಂದು ಅವರು ಹೇಳಿದರು. 

ಜಿಲ್ಲೆಯಲ್ಲಿ 45,353 ಜನ ವಿಕಲಚೇತನರಿದ್ದು, ಈ ಪೈಕಿ 33,251 ಜನರಿಗೆ ಯುಡಿಐಡಿ ಕಾರ್ಡಗಳನ್ನು ವಿತರಿಸಲಾಗಿದೆ. ಯುಡಿಐಡಿ ಕಾರ್ಡ ಪಡೆದ ಎಲ್ಲ ವಿಕಲಚೇತನರಿಗೆ ವಿವಿಧ ಸಾಧನ-ಸಲಕರಣೆಗಳು, ವಿದ್ಯಾರ್ಥಿವೇತನ, ಇಂಧನ ಚಾಲಿತ ತ್ರಿಚಕ್ರ ವಾಹನ, ಲ್ಯಾಪ್‌ಟಾಪ್, ಬ್ರೆöÊಲ್‌ಕಿಟ್ ಹಾಗೂ ಸ್ವಯಂ ಉದ್ಯೋಗ ಕೈಗೊಳ್ಳಲು ಹೊಲಿಗೆಯಂತ್ರ ಸೇರಿದಂತೆ ಇನ್ನಿತರ ಸಾಧನ ಸಲಕರಣೆಗಳನ್ನು ಒದಗಿಸಲಾಗುತ್ತಿದೆ. ಜಿಲ್ಲಾಡಳಿತದಿಂದ ವಿಕಲಚೇತನರಿಗೆ ಸರ್ಕಾರದ ಸೌಲಭ್ಯಗಳನ್ನು ಮನೆಬಾಗಿಲಿಗೆ ತಲುಪಿಸಲಾಗುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಾಧನೆ ಮಾಡಿದ ರಾಜೇಶ ಪವಾರ, ಬಂದೇನವಾಜ ಕಲ್ಲೂರ, ಮೋದಿನ ಪಾಶ, ಅಶೋಕ ವಾಲಿಕಾರ, ಶಶಿಕಲಾ ಸೋನಾರ, ಸುಮೀತ ಪಾಂಡಿಚೇರಿ, ಸಂಜೀವ ಭವನಸಿಂಗ್ ಹಜೇರಿ, ಅಂಬಣ್ಣಾ ಗುನ್ನಾಪುರ ರಶ್ಮಿ ಚಿತ್ತವಾಡಗಿ, ಮೌಲಾಲಿಕ ಮಂಟೂರ ಅವರನ್ನು ಸನ್ಮಾನಿಸಲಾಯಿತು. 

ಇದಕ್ಕೂ ಮೊದಲು ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಕಂದಗಲ್ ಶ್ರೀ ಹನುಮಂತರಾಯ ರಂಗಮAದಿರದವರೆಗೆ ನಡೆದ ಇಂಧನ ಚಾಲಿತ ತ್ರಿ-ಚಕ್ರ ವಾಹನ ಜಾಥಾ ಜರುಗಿತು. 

ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಅಧಿಕಾರಿ ರಾಜಶೇಖರ ಧೈವಾಡಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಡಿಎಆರ್ ಡಿವೈಎಸ್‌ಪಿ ಡಿ.ವೈ.ಧನಗರ, ವಾರ್ತಾಧಿಕಾರಿ ಅಮರೇಶ ದೊಡಮನಿ, ನಿಮಿಷ ಆಚಾರ್ಯ, ವಿನೋದ ಖೇಡ, ರಶ್ಮಿ ಚಿತ್ತವಾಡಗಿ, ಉಪಾಧ್ಯಾಯ, ಫಾದರ್ ಟಿಯೋಲ್ ಮಚಾದೋ ಸೇರಿದಂತೆ ಜಿಲ್ಲೆಯ ಎಲ್ಲ ಎಂಆರ್‌ಡಬ್ಲೂ, ವಿಆರ್‌ಡಬ್ಲೂ, ಯುಆರ್‌ಡಬ್ಲೂ ಒಕ್ಕೂಟ ಹಾಗೂ ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಸ್ವಯಂ ಸೇವಾ ಸಂಸ್ಥೆಗಳು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.