Tuesday, December 10, 2024

11-12-2024 EE DIVASA KANNADA DAILY NEWS PAPER

ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಕುರಿತು ಸೂಕ್ತ ಜಾಗೃತಿ-ತಿಳುವಳಿಕೆ ಮೂಡಿಸಿ -ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ


ವಿಜಯಪುರ ಡಿಸೆಂಬರ್ 10 (ಕರ್ನಾಟಕ ವಾರ್ತೆ): ಮಾದಕ ದ್ರವ್ಯ ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಜಿಲ್ಲೆಯ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರಿಗೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಅರಿವು ಮೂಡಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮಾದಕ ದ್ರವ್ಯಗಳ ನಿರ್ಮೂಲನಾ ಸಮಿತಿ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯಲ್ಲಿ ಮಾದಕ ದ್ರವ್ಯಗಳ ನಿರ್ಮೂಲನೆಗಾಗಿ ಸಂಬAಧಿಸಿದ ಇಲಾಖೆಗಳು ಸಮನ್ವಯತೆ ಸಾಧಿಸಿಕೊಂಡು ಅಗತ್ಯ ಜಾಗೃತಿ- ತಿಳುವಳಿಕೆ ಮೂಡಿಸುವಂತೆ ಅವರು ಸೂಚನೆ ನೀಡಿದರು. 

ಉಪ ಅರಣ್ಯ ಸಂರಕ್ಷಣಾ ಇಲಾಖೆ ಅಧಿಕಾರಿಗಳು ತಮ್ಮ ವ್ಯಾಪ್ತಿಗೊಳಪಡುವ ಅರಣ್ಯ ಪ್ರದೇಶದಲ್ಲಿ ಮಾದಕ ದ್ರವ್ಯ ಗಾಂಜಾ ಸಸಿ, ಗಿಡಗಳು ಬೆಳೆಯದಂತೆ ನಿಗಾ ವಹಿಸಬೇಕು. ಮಾದಕ ದ್ರವ್ಯಗಳ ಸಸಿಗಳು ಕಂಡು ಬಂದಲ್ಲಿ ಕೂಡಲೇ ಸಂಬAಧಿಸಿದ ಪೊಲೀಸ್ ಠಾಣೆ ಮಾಹಿತಿ ಒದಗಿಸುವಂತೆ ಅವರು ಸೂಚನೆ ನೀಡಿದರು. 

ಔಷಧ ನಿಯಂತ್ರಕ ಇಲಾಖೆ ಮಾದಕ ಅಂಶಗಳನ್ನುಳ ಔಷಧಿ ಮಳಿಗೆಗಳಲ್ಲಿ ಕಡ್ಡಾಯವಾಗಿ ವೈದ್ಯರ ಅನುಮತಿ ಚೀಟಿಯೊಂದಿಗೆ ಮಾರಾಟಕ್ಕೆ ಮಾತ್ರ ಅವಕಾಶ ಒದಗಿಸಬೇಕು. ಈ ಕುರಿತು ಜಿಲ್ಲೆಯಲ್ಲಿ ಸಂಬAಧಿಸಿದ ಇಲಾಖೆ ಅಧಿಕಾರಿಗಳು ತೀವ್ರ ನಿಗಾ ಇಡಬೇಕು. ನಿಯಮಿತವಾಗಿ ಈ ಕುರಿತು ವರದಿ ಸಲ್ಲಿಸುವಂತೆ ಅವರು ಸೂಚನೆ ನೀಡಿದರು. 


ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾದಕ ದ್ರವ್ಯಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ತಿಳಿಸುವುದಲ್ಲದೇ, ಮಾದಕ ದ್ರವ್ಯಗಳ ನಿರ್ಮೂಲನೆಗೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಅಬಕಾರಿ ಇಲಾಖೆ ತಮ್ಮ ವ್ಯಾಪ್ತಿಯಲ್ಲಿ ಮಾದಕ ದ್ರವ್ಯ ಮಾರಾಟ-ಸಂಗ್ರಹಣೆ ಬಗ್ಗೆ ತೀವ್ರ ನಿಗಾ ಇಡುವಂತೆ ಅವರು ಸೂಚನೆ ನೀಡಿದರು.

ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮನಗೌಡ ಹಟ್ಟಿ ಅವರು ಮಾತನಾಡಿ, ಮಾದಕ ದ್ರವ್ಯ ನಿರ್ಮೂಲನೆಗೆ ಅಗತ್ಯ ಕ್ರಮ ವಹಿಸಲಾಗಿದ್ದು, ಜಿಲ್ಲೆಯಾದ್ಯಂತ ಕಳೆದ 03 ವರ್ಷಗಳಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿಯಲ್ಲಿ 2022 ರಲ್ಲಿ 21 ಪ್ರಕರಣಗಳನ್ನು ದಾಖಲಿಸಿ 44 ಕೆ.ಜಿ. 416 ಗ್ರಾಂ. ಗಾಂಜಾ ಜಪ್ತಿ ಮಾಡಲಾಗಿದ್ದು, 36.45 ಕೆ.ಜಿ. ಮಾದಕ ದ್ರವ್ಯಗಳನ್ನು ನಾಶಪಡಿಸಿಲಾಗಿದೆ. ಅದರಂತೆ 2023ನೇ ಸಾಲಿನಲ್ಲಿ 29 ಪ್ರಕರಣಗಳನ್ನು ದಾಖಲಿಸಿ, 277 ಕೆ.ಜಿ.ಗೂ ಹೆಚ್ಚಿನ ಗಾಂಜಾ ಜಪ್ತಿ ಮಾಡಿ 202 ಕೆ.ಜಿ.ಗೂ ಹೆಚ್ಚಿನ ಮಾದಕ ದ್ರವ್ಯಗಳನ್ನು ನಾಶಪಡಿಸಲಾಗಿದೆ. 2024ನೇ ಸಾಲಿನಲ್ಲಿ 24 ಪ್ರಕರಣಗಳನ್ನು ದಾಖಲಿಸಿ, 146.808 ಕೆ.ಜಿ. ಮಾದಕ ದ್ರವ್ಯ ಜಪ್ತಿ ಮಾಡಲಾಗಿದೆ ಎಂದು ಹೇಳಿದರು. 

ಸಭೆಯಲ್ಲಿ ವಿಜಯಪುರ ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ, ಇಂಡಿ ಉಪವಿಭಾಗಾಧಿಕಾರಿ ಆಬೀದ ಗದ್ಯಾಳ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಸಿ.ಬಿ.ಚಿಕ್ಕಲಕಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


10-12-2024 EE DIVASA KANNADA DAILY NEWS PAPER