Thursday, December 12, 2024

ವಾಲ್ಮೀಕಿ ಜನಾಂಗದವರಿಗೆ ನ್ಯಾಯ ಒದಗಿಸುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಅಖಿಲ ಭಾರತೀಯ ವಾಲ್ಮಿಕಿ ಸಮಾಜ ಸೇವಾ ಸಂಘ (ರಿ) ವತಿಯಿಂದ ಮನವಿ

ವಿಜಯಪುರ : ಕೇಂದ್ರ ಮತ್ತು ರಾಜ್ಯ ಸರ್ಕಾರದ ಗೆಜೆಟ್ ಅಧಿಸೂಚನೆಯ ಪ್ರಕಾರ ಕರ್ನಾಟಕ ರಾಜ್ಯ ಪರಿಶಿಷ್ಟ್ಟ ಪಂಗಡಗಳ ಪಟ್ಟಿಯ ಕ್ರಮಸಂಖ್ಯೆ: 38 ರಲ್ಲಿ ಬರುವ ನಾಯಕ, ವಾಲ್ಮೀಕಿ ಜನಾಂಗದ ಪರ್ಯಾಯ ಪದವಾದ ತಳವಾರ ಮತ್ತು ಪರಿವಾರ ಜನಾಂಗದವರಿಗೆ ಮಾತ್ರ ಎಸ್.ಟಿ.ಜಾತಿ ಪ್ರಮಾಣ ಪತ್ರ ನೀಡುವುದನ್ನು ಬಿಟ್ಟು ಪ್ರವರ್ಗ-1 ರ ಹಿಂದುಳಿದ ಜಾತಿಯಲ್ಲಿ ಬರುವ ಅಂಬಿಗ/ಕಬ್ಬಲಿಗ/ಕೋಳಿ/ತಳವಾರ/ಗAಗಾಮತ /ಡೋರ, ಟೋಕರೆಕೋಳಿ/ಗೊಂಡ/ ರಾಜಗೊಂಡ ನಾಯ್ಕಡ್ ಜಾತಿಯವರಿಗೆ ಎಸ್.ಟಿ. ಪ್ರಮಾಣ ಪತ್ರ ನೀಡುತ್ತಿರುವ ತಹಶೀಲ್ದಾರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳುವುದು ತಳವಾರ ಜಾತಿ ಗೋಂದಲದ ಬಗ್ಗೆ ಸೂಕ್ತ ನಿರ್ದೇಶನ ನೀಡಿ ವಾಲ್ಮೀಕಿ ಜನಾಂಗದವರಿಗೆ ನ್ಯಾಯ ಒದಗಿಸುವಂತೆ ಅಖಿಲ ಭಾರತೀಯ ವಾಲ್ಮಿಕಿ ಸಮಾಜ ಸೇವಾ ಸಂಘ (ರಿ) ವತಿಯಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಬಟಗಿ ಮಾತನಾಡಿ, ಪರಿಶಿಷ್ಟ್ಟ ಪಂಗಡದ ಪ್ರಕಾರ ಸಾಮಾಜಿಕವಾಗಿ, ರಾಜಕೀಯವಾಗಿ ಹಾಗೂ ಆರ್ಥಿಕವಾಗಿ, ಶೈಕ್ಷಣಿಕವಾಗಿ ತೀರಾ ಹಿಂದೂಳಿದ ಈ ಜನಾಂಗದವರಿಗೆ ಸಮಾನತೆ ಬರಬೇಕೆಂಬ ದೃಷ್ಟಿಯಿಂದ ಡಾ| ಬಿ.ಆರ್. ಅಂಬೇಡ್ಕರ ರವರು ಮೀಸಲಾತಿಯನ್ನು ನೀಡಿ ನ್ಯಾಯ ಒದಗಿಸಿಕೊಟ್ಟಿದ್ದಾರೆ. ಆದರೆ ದೇಶಕ್ಕೆ ಸ್ವಾತಂತ್ರ ಬಂದು 7 ದಶಕಗಳು ಕಳೆದರು ನಿರಂತರವಾಗಿ ಪರಿಶಿಷ್ಟ ಪಂಗಡದ ಶೋಷಣೆ, ದಬ್ಬಾಳಿಕೆ, ದೌರ್ಜನ್ಯ ಮತ್ತು ಮೀಸಲಾತಿಯಲ್ಲಿ ವಂಚನೆ ಪ್ರಕರಣಗಳು ದಿನನಿತ್ಯ ಹೆಚ್ಚಾಗುತ್ತಿರುವುದು ಖಂಡನೀಯ.

ನಾಯ್ಕಡ ಹೆಸರಿನಲ್ಲಿ ಹಿಂದುಳಿದ ಜಾತಿಯ ತಳವಾರ ಜಾತಿಯವರಿಗೆ ಎಸ್.ಟಿ. ಪ್ರಮಾಣ ಪತ್ರಗಳನ್ನು ನಿಡಿದ ತಹಶೀಲ್ದಾರರನ್ನು ಈ ಕೂಡಲೇ ಅಮಾನತ್ತು ಮಾಡಿ ಕ್ರಿಮಿನಲ್ ಕೇಸು ದಾಖಲಿಸಬೇಕು. ಹಿಂದುಳಿದ ಜಾತಿಗೆ ಸೇರಿರುವ ಅಂಬಿಗ/ಕಬ್ಬಲಿಗ/ಗAಗಾಮತ/ತಳವಾರರಿಗೆ/ಡೋರ, ಟೋಕರೆ ಕೋಳಿ/ಗೊಂಡ /ರಾಜಗೊಂಡ/ನಾಯ್ಕಡ ಜಾತಿಯವರಿಗೆ ಎಸ್.ಟಿ. ಪ್ರಮಾಣ ಪತ್ರಗಳನ್ನು ನೀಡಿರುವುದನ್ನು ಕೂಡಲೇ ರದ್ದು ಪಡಿಸಬೇಕು. ಸುಳ್ಳು ಜಾತಿ ಪ್ರಮಾಣ ಪತ್ರಗಳನ್ನು ತೆಗೆದುಕೊಂಡವರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಬೇಕು.

ಪ್ರವರ್ಗ-1 ರಲ್ಲಿ ಬರುವ ಅಂಬಿಗ/ತಳವಾರರಿಗೆ ಎಸ್.ಟಿ. ಜಾತಿ ಪ್ರಮಣ ಪತ್ರಗಳು ನೀಡಿರುವ ಬಗ್ಗೆ ನಕಲು ಶಾಲಾ ದಾಖಲತಿಗಳನ್ನು ಸೃಷ್ಟಿಸಿರುವ ಬಗ್ಗೆ ಪರಿಶೀಲನೆಗಾಗಿ ಉನ್ನತ ಮಟ್ಟದ ತನಿಖಾ ತಂಡವನ್ನು ರಾಜ್ಯ ಸರ್ಕಾರದಿಂದ ರಚನೆ ಮಾಡಬೇಕು.  ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆದ 187 ಕೋಟಿ ರೂಪಾಯಿಯನ್ನು ವಾಪಸ್ ವಾಲ್ಮೀಕಿ ನಿಗಮಕ್ಕೆ ನೀಡಬೇಕು.  ವಿಜಯಪುರ ಜಿಲ್ಲೆಯ ಎಲ್ಲ ಹಳ್ಳಿಗಳಲ್ಲಿ ಪ್ರತ್ಯೇಕ ವಾಲ್ಮೀಕಿ ಸಮಾಜದವರಿಗೆ ಸ್ಮಶಾನ ಭೂಮಿಯನ್ನು ಮಂಜೂರು ಮಾಡಬೇಕು.

ಎಸ್.ಸಿ. ಎಸ್.ಟಿ. ಜನಾಂಗಕ್ಕೆ ಮೀಸಲಿಟ್ಟ ಹಣವನ್ನು ಬೇರೆ ಉದ್ದೇಶಕ್ಕೆ ಬಳಸಬಾರದು. ಮಾನ್ಯ ಸುಪ್ರೀಮ್ ಕೋರ್ಟ ಆದೇಶ ಮಾಡಿದ ಒಳಮೀಸಲಾತಿ ಜಾರಿ ಮಾಡಬೇಕು. 7.5 ಶೆಡುಲ್ 9ಕ್ಕೆ ಸೇರಿಸಬೇಕು. 39 ಅನ್ಯ ಜಾತಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ ಶಿಪಾರಸ್ಸವನ್ನು ತಕ್ಷಣವೇ ವಾಪಸ್ ಪಡೆಯಬೇಕು.  ವಿಜಯಪುರ ನಗರದ ಬಂಜಾರ ಕ್ರಾಸ್ ಹತ್ತಿರ ಮಂಜೂರಾದ 4ಕೋಟಿ ಹಣ 2-3 ವರ್ಷ ಆದರೂ ಇನ್ನೂ ಕಟ್ಟಡದ ಅಡಿಗಲ್ ಸಮಾರಂಭ ಆಗಿಲ್ಲ ಅದನ್ನು ವಾಲ್ಮೀ ಜಯಂತಿಯ ಒಳಗಾಗಿ 2 ತಿಂಗಲ್ಲಿ ವಾಲ್ಮೀಕಿ ಸಮುದಾಯ ಭವನ ಅಡಿಗಲ್ಲು ಸಮಾರಂಭ ಮಾಡಬೇಕು. ರಾಜ್ಯದಲ್ಲಿ ಈಗಾಗಲೇ ಲಕ್ಷಾಂತರ ನಕಲಿ ಜಾತಿ ಪ್ರಮಾಣ ಪತ್ರ ವಿತರಣೆ ಆಗಿದ್ದನ್ನು ಕೂಡಲೇ ರದ್ದುಪಡಿಸಬೇಕು. ವಿಜಯಪುರ ನಗರದ ಕಂದಗಲ್ ಹಣಮಂತರಾಯ ರಂಗ ಮಂದಿರ ಎದುರುಗಡೆ ವಾಲ್ಮೀಕಿ ಸರ್ಕಲ್ ಮತ್ತು ವೃತ್ತ ನಿರ್ಮಾಣ ಆಗಬೇಕು. ವಿಜಯಪುರ ನಗರದ ಯಾವುದಾದರು ಒಂದು ರಸ್ತೆಗೆ ಸ್ವಾತಂತ್ರ ಹೋರಾಟಗಾರ ವೀರ ಸಿಂಧೂರ ಲಕ್ಷ್ಮಣನ ಮಾರ್ಗ ಎಂದು ನಾಮಕರಣ ಮಾಡಬೇಕು.

ವಿಜಯಪುರ ತಾಲೂಕಿನ ಉತ್ನಾಳ ಗ್ರಾಮದಲ್ಲಿ ವಾಲ್ಮೀಕಿ ಸಮುದಾಯ ಭವನವನ್ನು ನಿರ್ಮಾಣ ಮಾಡಿದ್ದನ್ನು ವಾಲ್ಮೀಕಿ ಸಮಾಜದವರಿಗೆ ಹಸ್ತಾಂತರ ಮಾಡಬೇಕು. ಎಂ.ಎಚ್.ಎA. ಪ್ರೌಢ ಶಾಲೆ ಆಲಮಟ್ಟಿಯಲ್ಲಿ ಶ್ರೀಮತಿ ಗುರಿಕಾರ ಅವರಿಗೆ ಸಮಾಜ ಕಲ್ಯಾಣ ಇಲಾಖೆಯವರು ಸಿಂಧೂತ್ವ ಪ್ರಮಾಣ ಪತ್ರ ನೀಡಿರುತ್ತಾರೆ ಅದನ್ನು ರದ್ದುಪಡಿಸಬೇಕು. ಶ್ರೀ ಎಸ್.ಕೆ. ಪ್ರೌಢ ಶಾಲೆ ತಾಳಿಕೋಟಿಯಲ್ಲಿ ಶ್ರೀಮತಿ ಮಹಾದೇವಿ ಮಾಡಗಿ ಅವರಿಗೆ ಸಮಾಜ ಕಲ್ಯಾಣ ಇಲಾಖೆಯವರು ಸಿಂಧೂತ್ವ ಪ್ರಮಾಣ ಪತ್ರವನ್ನು ನೀಡಿದನ್ನು ರದ್ದುಪಡಿಸಬೇಕು. ಮಲ್ಲಪ್ಪ ಸಾಬು ಯಾಳವಾರ ಪೋಲಿಸ್ ಇಲಾಖೆ ಸಾ: ಹಿಟ್ನಳ್ಳಿ ತಾ: ಜಿ: ವಿಜಯಪುರ ಇವರು ಅಂಬಿಗ/ತಳವಾರ ಇದ್ದು, ಇವರ ಸಿಂಧೂತ್ವ ಪ್ರಮಾಣ ಪತ್ರವನ್ನು ರದ್ದುಗೊಳಿಸಬೇಕು. ಶಿವಪ್ಪ ಬಸಪ್ಪ ಕೆಂಗಲಗುತ್ತಿ ಪೋಲಿಸ್ ಇಲಾಖೆ ಸಾ: ಬಬಲೇಶ್ವರ ಇವರ ಸಿಂಧೂತ್ವ ಪ್ರಮಾಣ ಪತ್ರವನ್ನು ರದ್ದುಗೊಳಿಸಬೇಕು.  ಈರಣ್ಣ ಧರ್ಮಣ್ಣ ವಾಲಿಕಾರ ಪೋಲಿಸ್ ಇಲಾಖೆ ಸಾ: ಚಿಕ್ಕಸಿಂದಗಿ ತಾ: ಸಿಂದಗಿ ಇವರ ಸಿಂಧೂತ್ವ ಪ್ರಮಾಣ ಪತ್ರವನ್ನು ರದ್ದುಗೊಳಿಸಬೇಕು. ವಿಜಯಪುರ ಜಿಲ್ಲಾ ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದಲ್ಲಿ 50 ಕುಟುಂಬದ ವಾಲ್ಮೀಕಿ ಜನಾಂಗದವರಿಗೆ ನಿವೇಶನ ಇರುವದಿಲ್ಲ. ಅವರಿಗೆ 2ಎಕರೆ ಜಮೀನು ರಿ.ಸ.ನಂ: 1 ರಲ್ಲಿ ಮಂಜುರು ಮಾಡಬೇಕು. ಮತ್ತು ಸ್ಮಶಾನ ಜಾಗ ಇರುವದಿಲ್ಲ ಸ್ಮಶಾನ ಭೂಮಿ ಮಂಜೂರು ಮಾಡಬೇಕು ಎಂದರು.

ಈ ಸಂದರ್ಭದಲ್ಲಿ ಈರಪ್ಪ ಯಡಳ್ಳಿ, ಅಡಿವೆಪ್ಪ ಕಸ್ತೂರಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.



ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ

 


ವಿಜಯಪುರ, ಡಿಸೆಂಬರ್ 13: ಕಾನೂನು ಕೈಗೆ ತೆಗೆದುಕೊಂಡು ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 

ಅವರು ಇಂದು  ವಿಜಯಪುರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು.

ಪಂಚಮಸಾಲಿ ಸಮುದಾಯದವರು ಪ್ರವರ್ಗ 2ಎ ಅಡಿಯಲ್ಲಿ ಮೀಸಲಾತಿ ಕಲ್ಪಿಸುವಂತೆ ಕೇಳುವುದಕ್ಕೆ, ಚಳವಳಿ ಮಾಡುವುದಕ್ಕೆ ನಮ್ಮ ತಕರಾರಿಲ್ಲ. ಆದರೆ ಶಾಂತಿಯುತವಾಗಿ ಪ್ರತಿಭಟನೆಯಾಗಬೇಕು. ಕಾನೂನನ್ನು ಯಾರೂ ಕೈಗೆ ತೆಗೆದುಕೊಳ್ಳಬಾರದು ಎಂದು ಮನವಿ ಮಾಡಿದರು.

ಮುಖ್ಯಮಂತ್ರಿಗಳು ಹೃದಯಹೀನರು ಎಂದು ಜಯಮೃತ್ಯುಂಜಯ ಸ್ವಾಮೀಜಿ ಹೇಳಿರುವ ಬಗ್ಗೆ ಮಾತನಾಡಿ ಈ ಬಗ್ಗೆ ಜನರು ತೀರ್ಮಾನ ಮಾಡುತ್ತಾರೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

*ಕಾನೂನಿನ ಮುಂದೆ ಎಲ್ಲರೂ ಸಮಾನರು*

ಸ್ವಾಮೀಜಿಯಾಗಲಿ, ಯಾರಾದರೂ ಆಗಿರಲಿ.‌ ಎಲ್ಲರಿಗೂ ಕಾನೂನು ಒಂದೇ. ನನಗೂ, ಸ್ವಾಮೀಜಿಗೂ ಎಲ್ಲರಿಗೂ ಒಂದೇ. ಸಂವಿಧಾನದ 14 ನೇ ವಿಧಿಯ ಪ್ರಕಾರ ಕಾನೂನಿನ ಮುಂದೆ ಎಲ್ಲರೂ ಸಮಾನರು ಹಾಗೂ  ಕಾನೂನಿನ ಸಮಾನ ರಕ್ಷಣೆಯನ್ನು ಖಾತ್ರಿಪಡಿಸುತ್ತದೆ ಎಂದರು. 

*ಸಂವಿಧಾನದ ಪ್ರಕಾರ   ನಡೆದುಕೊಳ್ಳುತ್ತೇವೆ*

ಪ್ರವರ್ಗ 2ಎ ಅಡಿಯಲ್ಲಿರುವ ಸಮುದಾಯಗಳು ಪಂಚಮಸಾಲಿ ಸಮುದಾಯವನ್ನು 2 ಎ ಗೆ ಸೇರಿಸಲು ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಅವರ ಅಭಿಪ್ರಾಯ ಹೇಳಲು ಅವರಿಗೆ ಸ್ವಾತಂತ್ರ್ಯವಿದೆ. ಸ್ವಾಮೀಜಿಗಳಿಗೂ ಅವರ ಅಭಿಪ್ರಾಯ ತಿಳಿಸಲು ಸ್ವಾತಂತ್ರ್ಯವಿದೆ. ಅಂತಿಮವಾಗಿ ಸಂವಿಧಾನ ಪ್ರಕಾರ ನಡೆದುಕೊಳ್ಳುತ್ತೇವೆ ಎಂದರು.

*ಪ್ರತಿಭಟನಾಕಾರರು ಕಲ್ಲು ಹೊಡೆದಿರುವ ಫೋಟೋಗಳಿವೆ*

ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುವ ವೇಳೆ ಪಂಚಮಸಾಲಿ ಸಮುದಾಯದ ಜನರ ಮೇಲೆ ಪೊಲೀಸ್ ಕಲ್ಲು ಹೊಡೆದಿದ್ದಾರೆ ಎಂಬ ಬಿಜೆಪಿ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಅವರು ಕಲ್ಲು ಹೊಡೆದಿರುವುದು, ಬ್ಯಾರಿಕೇಡ್ ತಳ್ಳಿ ಒಳಗೆ ನುಗ್ಗುವುದರ ಫೋಟೋಗಳನ್ನು ತೋರಿಸುತ್ತೇವೆ. ಸ್ವಾಮೀಜಿಗಳು ರಸ್ತೆಯಲ್ಲಿ ಏಕೆ ಕುಳಿತುಕೊಂಡಿದ್ದಾರೆ? ಪ್ರತಿಭಟನಾಕಾರರು ಕಲ್ಲು ತೂರದಿದ್ದರೆ  20ಕ್ಕೂ ಹೆಚ್ಚು ಪೊಲೀಸರಿಗೆ ಗಾಯ ಹೇಗಾಯಿತು. ಪೊಲೀಸರೇ ಕಲ್ಲು ಎಸೆದುಕೊಂಡಿದ್ದಾರೆಯೇ ? ಎಂದು ಪ್ರಶ್ನಿಸಿದರು. ನಾನು ಹೇಳಿರುವುದಕ್ಕೆ ಸಾಕ್ಷಿಯಿದೆ ಎಂದರು. 

*ಹಿಂದುಳಿದ ವರ್ಗಗಳ  ಶಾಶ್ವತ ಆಯೋಗದ ಮುಂದೆ ಹೋಗಬೇಕು*

ಮೀಸಲಾತಿ ಮುಂದೇನು ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಪಂಚಮಸಾಲಿ ಸಮಾಜದವರು ಹಿಂದುಳಿದ ವರ್ಗಗಳ  ಶಾಶ್ವತ ಆಯೋಗದ ಮುಂದೆ ಹೋಗಬೇಕು. ಬಿಜೆಪಿ ಕಾಲದಲ್ಲಿ ಆಯೋಗದ ಅಧ್ಯಕ್ಷರಾಗಿದ್ದ ಜಯಪ್ರಕಾಶ್ ಹೆಗಡೆಯವರ ವರದಿಯಲ್ಲಿ ಈಗಿರುವಂತೆಯೇ ಪ್ರವರ್ಗ  2ಎ 2ಬಿ ಇರಬೇಕು. ಇದಕ್ಕೆ ಹೊಸ ಸೇರ್ಪಡೆಯಾಗಬಾರದು  2ಬಿ ಯಲ್ಲಿರುವ 4% ಮೀಸಲಾತಿಯನ್ನು ರದ್ದು ಮಾಡಬಾರದು ಎಂದು ಹೇಳಿದ್ದಾರೆ.

 *ಹೋರಾಟಕ್ಕೆ ಬಿಜೆಪಿ ಬೆಂಬಲ*

ಬಿಜೆಪಿ ಅವಧಿಯಲ್ಲಿ ಆಗಿದ್ದಕ್ಕೆ ಅಂದು ಪ್ರತಿಭಟನೆ ಏಕಾಗಲಿಲ್ಲ? ಈಗ ಅದೇ ಬಿಜೆಪಿಯವರು ಹೋರಾಟಕ್ಕೆ ಬೆಂಬಲ ನೀಡುತ್ತಿದ್ದಾರೆ. ಮುಸಲ್ಮಾನರಿಗೆ ಇದ್ದ ಶೇ.4 ರ ಮೀಸಲಾತಿಯನ್ನು ರದ್ದುಮಾಡಿ 3ಎ ಒಕ್ಕಲಿಗರಿಗೆ 2% ಮತ್ತು 3ಬಿ ಪ್ರವರ್ಗಗಳಿಗೆ ಲಿಂಗಾಯತರಿಗೆ 2% ಮೀಸಲಾತಿ ನೀಡಿದರು.  ಇದನ್ನು ಪ್ರಶ್ನಿಸಿ ಮುಸಲ್ಮಾನರಾದ ರಸೂಲ್ ಎಂಬ ವ್ಯಕ್ತಿ ನ್ಯಾಯಾಲಯದ ಮೆಟ್ಟಿಲೇರಿದ್ದರು. ಈ ವೇಳೆ ಹಿಂದಿನ ಬಿಜೆಪಿ ಸರ್ಕಾರವೇ ಮೀಸಲಾತಿಯಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ ಎಂದು ಒಪ್ಪಿಕೊಂಡಿದ್ದನ್ನು ಸಿಎಂ ಉಲ್ಲೇಖಿಸಿದರು. 

*ಸಂಧಾನಕ್ಕೆ ಸಚಿವರನ್ನು ಕಳುಹಿಸಲಾಗಿತ್ತು*

ಪಂಚಮಸಾಲಿ ಹೋರಾಟವನ್ನು ಟ್ರ್ಯಾಕ್ಟರ್ ತರುವ ಮೂಲಕ ಮಾಡುತ್ತೇವೆ ಎಂದು ಮೊದಲೇ ತಿಳಿಸಿದ್ದರು. ನ್ಯಾಯಾಲಯ ಹೋರಾಟವನ್ನು ಶಾಂತಿಯುತವಾಗಿ , ಸಾರ್ವಜನಿಕರಿಗೆ ತೊಂದರೆಯಾಗದಂತೆ ನಡೆಸಲು ಸೂಚನೆ ನೀಡಿತ್ತು. ಆದರೆ ಹೋರಾಟಗಾರರು ಕಾನೂನನ್ನು ಕೈಗೆ ತೆಗೆದುಕೊಳ್ಳಲು ಪ್ರಯತ್ನಿಸಿದರು. ಸ್ಥಳಕ್ಕೆ ಮಹದೇವಪ್ಪ ಸೇರಿದಂತೆ ಮೂರು ಸಚಿವರನ್ನು ಕಳುಹಿಸಲಾಗಿತ್ತು ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


ಹಾಳಾದ ತೊಗರಿ ಬೆಳೆಗೆ ಸೂಕ್ತ ಪರಿಹಾರ ಒದಗಿಸಲು ರೈತ ಸಂಘ ಒತ್ತಾಯ

 


ವಿಜಯಪುರ: ಅಖಂಡ ಕರ್ನಾಟಕ ರೈತ ಸಂಘ (ರಿ)  ಜಿಲ್ಲಾ ಘಟಕ ವಿಜಯಪುರ ಪದಾಧಿಕಾರಿಗಳು ಮುಖ್ಯ ಮಂತ್ರಿ ಸಿದ್ಧರಾಮಯ್ಯನವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭ ದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ ತೊಗರಿ ಬೆಳೆ ಸಂಪೂರ್ಣ ಹಾಳಾಗಿದ್ದು ಇದಕ್ಕೆ ಕಾರಣ ಜಿ ಆರ್ ಜಿ 152 ಹಾಗೂ ಜಿ ಆರ್ ಜಿ 811 ತೊಗರಿ ಬೀಜವೇ ಕಾರಣ ಈ ಬೀಜ ಸಂಪೂರ್ಣ ಕಳಪೆ ಮಟ್ಟದ್ದಾಗಿದೆ. ಈ ಕುರಿತು ಹೋರಾಟ ಮಾಡಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿತ್ತು. ಕೃಷಿ ಇಲಾಖೆ ಹಾಗೂ ಧಾರವಾಡದ ಕೃಷಿ ವಿದ್ಯಾಲಯದ ವಿಜ್ಞಾನಿ ಗಳು ಆಗಮಿಸಿ ತೊಗರಿ ಬೆಳೆ  ಪರಿಶೀಲನೆ ಮಾಡಿದ್ದಾರೆ. ಪರಿಶೀಲನೆ ಸಂದರ್ಭದಲ್ಲಿ ರೈತ ಮುಖಂಡರು ಹಾಗೂ ರೈತರೆದುರು ಜಿ ಆರ್ ಜಿ 152 ಹಾಗೂ 811 ಬೀಜ ಕಳಪೆ ಇದೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಕಳಪೆ ಇದ್ದ ಕಾರಣ ಗಿಡದಲ್ಲಿ ತೊಗರಿ ಕಾಯಿ ಆಗಿಲ್ಲ ಎಂದು ಒಪ್ಪಿಕೊಂಡಿದ್ದಾರೆ. ಆದರೆ ಸರ್ಕಾರಕ್ಕೆ ವರದಿ ಕಳುಹಿಸುವಾಗ ತೊಗರಿ ಬೀಜದ ಯಾವುದೇ ತೊಂದರೆ ಇಲ್ಲ. ಬೀಜ ಉತ್ತಮವಾಗಿದೆ. ಹವಾಮಾನದ ವೈಪರಿತ್ಯ ಕಾರಣ ಎಂದು ಹಾಗೂ ರೈತರು ದಟ್ಟಣೆಯಾಗಿ ಬಿತ್ತನೆ ಮಾಡಿದ್ದಾರೆ ಆದ್ದಿರಿಂ ಕಾಯಿ ಹಿಡಿದಿಲ್ಲ ಎಂದು ತಪ್ಪು ವರದಿ ಸಲ್ಲಿಸಿದ್ದಾರೆ. ಇದರಿಂದ ರೈತರಿಗೆ ಆಘಾತವಾಗಿದೆ. ಆದ್ದರಿಂದ ಬೆಂಗಳೂರಿನಿಂದ ಬೇರೆ ತಂಡ ಕಳುಹಿಸಿ ಮತ್ತೊಮ್ಮೆ ತೊಗರಿ ಬೆಳೆ ಪರಿಶೀಲನೆ ಮಾಡಿ ಸೂಕ್ತ ವರದಿ ಪಡೆದುಕೊಳ್ಳಬೇಕೆಂದು ಮಾನ್ಯ ಮುಖ್ಯಮಂತ್ರಿ ಗಳಿಗೆ ಒತ್ತಾಯಿಸಿದರು.

ಅದೇನೆ ಇದ್ದರೂ ಒಟ್ಟಾರೆ ರೈತರಿಗೆ ಪ್ರತಿ ಎಕರೆಗೆ ಕನಿಷ್ಟ 25000 ಪರಿಹಾರ ಒದಗಿಸಬೇಕೆಂದು ಒತ್ತಾಯಿಸಿದರು.

ಅದರಂತೆ ವಿಮೆ ಪರಿಹಾರ ತುಂಬದೆ ಇರುವ ರೈತರಿಗೂ ಪರಿಹಾರ ಒದಗಿಸಿ ರೈತರನ್ನು ಬದುಕಿಸಬೇಕೆಂದು ಒತ್ತಾಯಿಸಿದರು.

ದಾರಿ ಸಮಸ್ಯೆಯ ಕುರಿತು ಅಧಿವೇಶನದಲ್ಲಿ ಚರ್ಚಿಸಿ ಕಾನೂನು ತಿದ್ದುಪಡಿ ಮಾಡುವ ಮೂಲಕ ನ್ಯಾಯಾಲಯಕ್ಕೆ ಹೋಗಿ ತಡೆ ಯಾಜ್ಣೆ ತರದಂತೆ ಸುಗ್ರೀವಾಜ್ಣೆ ಹೊರಡಿಸಿ ತಹಶಿಲ್ದಾರರಿಗೆ ಸಂಪೂರ್ಣ ಅಧಿಕಾರ ವಹಿಸಿಕೊಡಬೇಕು. ಈ ಹಿಂದೆ ಹೊರಡಿಸಿದ ಸುತ್ತೋಲೆಯನ್ನು ಮಾರ್ಪಾಡು ಮಾಡಿ ರೈತರಿಗೆ ಅನುಕೂಲವಾಗುವಂತೆ  ಸ್ಪಷ್ಟ ಆದೇಶ ಮಾಡಬೇಕೆಂದು  ಹೇಳಿದರು.

ಈ ಸಂದರ್ಭದಲ್ಲಿ ಬಸವರಾಜ ಚೌಧರಿ, ಮಹಾಂತೇಶ ಪಡಗಾನೂರು, ಶಿವಾನಂದ ಹಡಪದ, ಸಂತೋಷ ಪಡಗಾನೂರ, ಶಿವಾನಂದ ಪಡಗಾನೂರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


ಮಹಾನಗರ ಪಾಲಿಕೆ ವಾರ್ಡ ಸಮಿತಿ ರಚನೆ : ಅರ್ಜಿ ಆಹ್ವಾನ

 ವಿಜಯಪುರ, ಡಿಸೆಂಬರ್ 12 (ಕರ್ನಾಟಕ ವಾರ್ತೆ): ವಿಜಯಪುರ ಮಹಾನಗರ ಪಾಲಿಕೆ ವ್ಯಾಪ್ತಿಯ ಚುನಾಯಿತ ವಾರ್ಡ ಸದಸ್ಯರುಗಳನ್ನು ಆಧರಿಸಿ ಷರತ್ತುಗಳನ್ನೊಳಗೊಂಡು ಪಾಲಿಕೆಯ 35 ವಾರ್ಡಗಳಿಗೆ ವಾರ್ಡ ಸಮಿತಿ ರಚಿಸಲಾಗುತ್ತಿದ್ದು, ಆಸಕ್ತ ಅರ್ಹ ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ವಾರ್ಡ ಪ್ರತಿನಿಧಿಸುವಂತಹ ಮಹಾನಗರ ಪಾಲಿಕೆಯ ಸದಸ್ಯರು ವಾರ್ಡ ಸಮಿತಿಯ ಅಧ್ಯಕ್ಷರಾಗಿರುತ್ತಾರೆ. 

 ಇತರ ಹತ್ತು ಸದಸ್ಯರು ಮಹಾನಗರ ಪಾಲಿಕೆಯಿಂದ ನಾಮ ನಿರ್ದೇಶಿತರಾಗಿರತಕ್ಕದುದ, ಅವರ ಪೈಕಿ ಕನಿಷ್ಠ ಇಬ್ಬರು ಸದಸ್ಯರು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ ಸೇರಿದವರಾಗಿರಬೇಕು. 

 ಕನಿಷ್ಠ ಮೂರು ಜನ ಮಹಿಳಾ ಸದಸ್ಯರು ಹಾಗೂ ನಿವಾಸಿ ಕ್ಷೇಮಾಭಿವೃದ್ದಿ ಸಂಘಗಳನ್ನು ಪ್ರತಿನಿಧಿಸುವಂತಹ ಕನಿಷ್ಠ ಇಬ್ಬರು ಸದಸ್ಯರಿರುತ್ತಾರೆ. ವಾರ್ಡ ಸಮಿತಿ ಸದಸ್ಯನಾಗಿ ಅರ್ಜಿ ಸಲ್ಲಿಸುವವರು ಸಂಬAಧಪಟ್ಟ ವಾರ್ಡ ವ್ಯಾಪ್ತಿಯಲ್ಲಿ ಮತದಾರರಾಗಿರುವ ಮತದಾರ ಪಟ್ಟಿಯ ಪ್ರತಿ ಹಾಗೂ ಚುನಾವಣಾ ಗುರುತಿನ ಚೀಟಿ ನಕಲು ಪ್ರತಿಯೊಂದಿಗೆ ನಿಗದಿತ ಅರ್ಜಿ ನಮೂನೆಯನ್ನು ಮಹಾನಗರ ಪಾಲಿಕೆಯ ಪರಿಷತ್ ಶಾಖೆಯಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ದಿನಾಂಕ : 24-12-2024ರೊಳಗಾಗಿ ಸಲ್ಲಿಸಬೇಕು. 

 ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಪಾಲಿಕೆಯ ಪರಿಷತ್ ಶಾಖೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


13-12-2024 EE DIVASA KANNADA DAILY NEWS PAPER