Sunday, December 15, 2024

ಜಿಲ್ಲಾಧ್ಯಕ್ಷರಾಗಿ ಡಾ.ಎಂ. ಡಿ. ಮೇತ್ರಿ ನೇಮಕ

ವಿಜಯಪುರ : ಡಾ.ಎಂ.ಡಿ.ಮೇತ್ರಿ ಅವರನ್ನು ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಭ್ರಷ್ಟಾಚಾರ ನಿರ್ಮೂಲನ ಸಂಸ್ಥೆಯ ವಿಜಯಪುರ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿ ರಾಜ್ಯಾಧ್ಯಕ್ಷ ಡಾ. ರಾಘವೇಂದ್ರ ಎಸ್.ಆರ್ ಅವರು ಆದೇಶ ಹೊರಡಿಸಿದ್ದಾರೆ.

 ಡಾ.ಎಂ.ಡಿ.ಮೇತ್ರಿ ಅವರು ಕೂಡ ಈ ಜವಾಬ್ದಾರಿಯನ್ನು ನಿರ್ವಹಿಸುತ್ತಾ ರಾಜ್ಯ ಮತ್ತು ಎಲ್ಲಾ ಜಿಲ್ಲಾ ಸಮಿತಿಯ ಮಾರ್ಗದರ್ಶನದ ಜೊತೆಗೆ, ಸಹಕಾರದೊಂದಿಗೆ ತಮಗೆ ನೀಡಿರುವ ಜವಾಬ್ದಾರಿಯನ್ನು ಯಶಸ್ವಿಯಾಗಿ ಕಾನೂನಿನ ಚೌಕಟ್ಟಿನಲ್ಲಿ ನೊಂದವರ ಧ್ವನಿಯಾಗುವಂತೆ ತಿಳಿಸುತ್ತಾ ಭ್ರಷ್ಟಾಚಾರ ನಿರ್ಮೂಲನೆಯತ್ತ ಪ್ರಾಮಾಣಿಕವಾಗಿ ಶ್ರಮಿಸಬೇಕೆಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಗೌರವಾಧ್ಯಕ್ಷರಾಗಿ ರಾಜೇಂದ್ರ ಪಾಟೀಲ ನೇಮಕ

 ವಿಜಯಪುರ : ರಾಜೇಂದ್ರ ರಾಮಲಿಂಗಪ್ಪಗೌಡ ಪಾಟೀಲ ಅವರನ್ನು ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಭ್ರಷ್ಟಾಚಾರ ನಿರ್ಮೂಲನ ಸಂಸ್ಥೆಯ ವಿಜಯಪುರ ಗೌರವಾಧ್ಯಕ್ಷರನ್ನಾಗಿ ನೇಮಕ ಮಾಡಿ ರಾಜ್ಯಾಧ್ಯಕ್ಷ ಡಾ. ರಾಘವೇಂದ್ರ ಎಸ್.ಆರ್ ಅವರು ಆದೇಶ ಹೊರಡಿಸಿದ್ದಾರೆ.

 ರಾಜೇಂದ್ರ ರಾಮಲಿಂಗಪ್ಪಗೌಡ ಪಾಟೀಲ ಅವರು ಕೂಡ ಈ ಜವಾಬ್ದಾರಿಯನ್ನು ನಿರ್ವಹಿಸುತ್ತಾ ರಾಜ್ಯ ಮತ್ತು ಎಲ್ಲಾ ಜಿಲ್ಲಾ ಸಮಿತಿಯ ಮಾರ್ಗದರ್ಶನದ ಜೊತೆಗೆ, ಸಹಕಾರದೊಂದಿಗೆ ತಮಗೆ ನೀಡಿರುವ ಜವಾಬ್ದಾರಿಯನ್ನು ಯಶಸ್ವಿಯಾಗಿ ಕಾನೂನಿನ ಚೌಕಟ್ಟಿನಲ್ಲಿ ನೊಂದವರ ಧ್ವನಿಯಾಗುವಂತೆ ತಿಳಿಸುತ್ತಾ ಭ್ರಷ್ಟಾಚಾರ ನಿರ್ಮೂಲನೆಯತ್ತ ಪ್ರಾಮಾಣಿಕವಾಗಿ ಶ್ರಮಿಸಬೇಕೆಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

16-12-2024 EE DIVASA KANNADA DAILY NEWS PAPER

ಸಿದ್ದೇಶ್ವರ ಸಂಕ್ರಮಣ ಜಾತ್ರೆ ಪೂರ್ವಭಾವಿ ಸಭೆ; ಶಾಸಕ ಯತ್ನಾಳ ಘೋಷಣೆ ಯುಗಾದಿಗೆ ಸಿದ್ದೇಶ್ವರ ಸಂಸ್ಥೆಯಿಂದ ಅನ್ನ ದಾಸೋಹ ಸೇವೆ ಆರಂಭ

ವಿಜಯಪುರ: ಯುಗಾದಿಗೆ ಸಿದ್ದೇಶ್ವರ ಸಂಸ್ಥೆಯಿಂದ ನಿರಂತರ ಅನ್ನ ದಾಸೋಹ ಸೇವೆ ಆರಂಭಿಸಲಾಗುವುದು ಎಂದು ಸಿದ್ದೇಶ್ವರ ಸಂಸ್ಥೆ ಅಧ್ಯಕ್ಷರು, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ರವರು ಘೋಷಿಸಿದರು.

ನಗರದ ಶ್ರೀ ಸಿದ್ದೇಶ್ವರ ಸಂಸ್ಥೆಯ ಸಿದ್ದೇಶ್ವರ ಶಿವಾನುಭವ ಸಮುದಾಯ ಭವನದಲ್ಲಿ ರವಿವಾರ ಶ್ರೀ ಸಿದ್ದೇಶ್ವರ ಸಂಸ್ಥೆ ಸಂಕ್ರಮಣ ಜಾತ್ರಾ ಮಹೋತ್ಸವ ಅಂಗವಾಗಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಿದ್ದೇಶ್ವರ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಾಣ ಮಾಡಲಾದ ಸಿದ್ದೇಶ್ವರ ಶಿವಾನುಭವ ಸಮುದಾಯ ಭವನವನ್ನು ಹಿಂದೂಗಳ ಹೊಸ ವರ್ಷ ಇದೇ ಯುಗಾದಿ ದಿನ ಲೋಕಾರ್ಪಣೆ ಗೊಳಿಸಲಾಗುತ್ತಿದ್ದು, ಅಂದೇ ಅನ್ನ ದಾಸೋಹ ಸೇವೆ ಆರಂಭಿಸಲಾಗುವುದು. ಇದರಿಂದ ಪಾದಯಾತ್ರಿಗಳಿಗೆ, ಶೈಕ್ಷಣಿಕ ಪ್ರವಾಸಕ್ಕೆ ಬರುವ ಮಕ್ಕಳಿಗೆ, ಬೇರೆ ಬೇರೆ ಊರುಗಳಿಂದ ಬರುವ ಜನರಿಗೆ ಅನುಕೂಲವಾಗಲಿದೆ. ಶಿವಾನುಭವ ಸಮುದಾಯ ಭವನದ ಮೇಲೆ ಯಾತ್ರಿ ನಿವಾಸ ಕೂಡ ಆರಂಭಿಸಲಾಗುವುದು ಎಂದು ತಿಳಿಸಿದರು.

ದಾನಿಗಳು ಮತ್ತು ಪ್ರಾಮಾಣಿಕ ಆಡಳಿತ ಮಂಡಳಿಯ ಸಹಕಾರದಿಂದ ವರ್ಷದಿಂದ ವರ್ಷಕ್ಕೆ ಸಂಸ್ಥೆ ಹೆಮ್ಮರವಾಗಿ ಬೆಳೆಯುತ್ತಿದೆ. ನಮ್ಮ ಹಿರಿಯರು ಮಾಡಿದ್ದ ಆಸ್ತಿಯ 10 ರಷ್ಟು ಸಂಸ್ಥೆಯ ಆಸ್ತಿಯನ್ನು ಹೆಚ್ಚಿಸಿರುವ ಹೆಮ್ಮೆ ನನಗಿದೆ. ಕರ್ನಾಟಕದಲ್ಲೇ ಅತ್ಯಂತ ದೊಡ್ಡ ಗೋಶಾಲೆ ಮಾಡಲಾಗಿದೆ. ಗೋ ಸೇವೆ ಜೊತೆಗೆ ಸಂಸ್ಥೆಯಿಂದ ಧಾರ್ಮಿಕ, ಸಾಂಸ್ಕೃತಿಕ, ಶೈಕ್ಷಣಿಕ, ಆರೋಗ್ಯ ಸೇವೆ ಕಲ್ಪಿಸಲಾಗುತ್ತಿದೆ. ಜೆಎಸ್ಎಸ್ ಆಸ್ಪತ್ರೆಯಲ್ಲಿ ಈ ವರ್ಷ ನರ್ಸಿಂಗ್ ಕಾಲೇಜು ಆರಂಭಗೊಂಡಿದ್ದು, ಮುಂದಿನ ಎರಡು ವರ್ಷದಲ್ಲಿ ಮೇಡಿಕಲ್ ಕಾಲೇಜು ಸಹ ಆರಂಭಿಸಲಾಗುವುದು ಎಂದರು.

 ವಿಜೃಂಭಣೆಯಿಂದ ಜಾತ್ರೆ

ಕೊರೊನಾ ಹಿನ್ನೆಲೆ ಕಳೆದ ಎರಡ್ಮೂರು ಜಾತ್ರೆಗಳನ್ನು ಸರಳವಾಗಿ ಮಾಡಬೇಕಾಯಿತು. ಮೊದಲಿನ ವೈಭವಕ್ಕೆ ಕೊಂಡೊಯ್ಯಲು, 107ನೇ ಸಿದ್ದೇಶ್ವರ ಸಂಕ್ರಮಣ ಜಾತ್ರೆಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದೆ. ಸಾರ್ವಜನಿಕರ ದೇಣಿಯಿಂದ ಜಾತ್ರೆ ಮಾಡಿದರೆ, ನಿಜವಾಗಿಯೂ ನಮ್ಮೂರ ಜಾತ್ರೆ ಆಗಲಿದೆ. ಜನರ ಸಹಭಾಗಿತ್ವ ಇರಬೇಕು. ಹೀಗಾಗಿ ಎಲ್ಲರೂ ಸೇವೆಯಲ್ಲಿ ತೊಡಗಿಕೊಂಡು, ಪ್ರಾಮಾಣಿಕವಾಗಿ ಶ್ರಮವಹಿಸಿದರೆ ಪುಣ್ಯ ಪ್ರಾಪ್ತಿ ಆಗಲಿದೆ. ಜಾತ್ರೆಗಳಿಂದ ಧಾರ್ಮಿಕ ಕಾರ್ಯದ ಜತೆಗೆ ವ್ಯಾಪಾರ ಹೆಚ್ಚುತ್ತದೆ, ಜನರ ಸಂಪರ್ಕ ವೃದ್ಧಿ ಆಗಲಿದೆ. ಅದಕ್ಕೆ ಹಿರಿಯರು ಜಾತ್ರೆ, ಅಮಾವಾಸ್ಯೆ, ಹುಣ್ಣಿಮೆ, ಸಮಾರಂಭಗಳನ್ನು ಮಾಡಿದ್ದಾರೆ ಎಂದು ತಿಳಿಸಿದರು.

ನಂದಿಕೋಲಗಳ ಮೇರವಣಿಗೆ ಅತ್ಯಂತ ಶಿಸ್ತಿನಿಂದ ಹಾಗೂ ಜನರು ಮರಳಿ ಮನೆಗೆ ಬೇಗ ತೆರಳಲು ಅನುಕೂಲವಾಗುವಂತೆ ರಾತ್ರಿ 10 ಗಂಟೆ ಒಳಗಾಗಿ ದೇವಸ್ಥಾನಕ್ಕೆ ಬರುವಂತೆ ನೋಡಿಕೊಳ್ಳಬೇಕು. ಆಗ ಮಾತ್ರ ಜನರು ವೀಕ್ಷಿಸಲು ಸಾಧ್ಯವಾಗುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರಿದ್ದರೆ ಮೆರವಣಿಗೆಗೆ ಮೆರಗು ಬರುತ್ತದೆ ಎಂದು ಹೇಳಿದರು.

ಇದೇ ವೇಳೆ ಜಾತ್ರಾ ಸಮಿತಿಯ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಸಿದ್ದೇಶ್ವರ ಸಂಸ್ಥೆ ಚೇರಮನ್ ಬಸಯ್ಯ ಹಿರೇಮಠ ಪ್ರಸ್ತಾವಿಕವಾಗಿ ಮಾತನಾಡಿದರು. ಹಿರಿಯರಾದ ಸಿದ್ರಾಮಪ್ಪ ಉಪ್ಪಿನ, ಸಂಸ್ಥೆ ಪದಾಧಿಕಾರಿಗಳಾದ ಸಂಗನಬಸಪ್ಪ ಸಜ್ಜನ, ಸದಾನಂದ ದೇಸಾಯಿ, ಬಸವರಾಜ ಸುಗೂರ, ಮಲ್ಲಿಕಾರ್ಜುನ ಸಜ್ಜನ, ಶಿವಾನಂದ ನೀಲಾ, ನಿಂಗೊಂಡಪ್ಪ ಗೋಲಾಯಿ, ಮಡಿವಾಳಪ್ಪ ಕರಡಿ, ವಿಜಯಕುಮಾರ ಡೋಣಿ, ಸುಧೀರ ಚಿಂಚಲಿ, ಸದಾಶಿವ ಗುಡ್ಡೋಡಗಿ, ಚಂದ್ರಪ್ಪ ಹುಂಡೇಕಾರ, ನಾಗಪ್ಪ ಗುಗ್ಗರಿ, ಸಾಯಿಬಣ್ಣ ಭೋವಿ, ಮಲಕಪ್ಪ ಗಾಣಿಗೇರ, ರಮೇಶ ಹಳ್ಳದ, ರಾಮನಗೌಡ ಪಾಟೀಲ ಯತ್ನಾಳ, ಮಲ್ಲಿಕಾರ್ಜುನ ಹಕ್ಕಾಪಕ್ಕಿ, ಮುಖಂಡರಾದ ಗುರು ಗಚ್ಚಿನಮಠ, ಮಹಾನಗರ ಪಾಲಿಕೆ ಸದಸ್ಯರಾದ ಪ್ರೇಮಾನಂದ ಬಿರಾದಾರ, ರಾಹುಲ್ ಜಾಧವ, ಶಿವರುದ್ರ ಬಾಗಲಕೋಟ, ಕಿರಣ ಪಾಟೀಲ, ವಿಠ್ಠಲ ಹೊಸಪೇಟ, ಮಳುಗೌಡ ಪಾಟೀಲ, ಪಾಂಡುಸಾಹುಕಾರ ದೊಡಮನಿ, ವಿಕ್ರಮ ಗಾಯಕವಾಡ, ಬಸವರಾಜ ಬಿರಾದಾರ ಮತ್ತಿತರರು ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ರಾಷ್ಟ್ರೀಯ ಜನತಾ ನ್ಯಾಯಾಲಯಕ್ಕೆ ಅಭೂತಪೂರ್ವ ಸ್ಪಂದನೆ ವಿಚ್ಛೇಧನ ಕೋರಿದ ದಂಪತಿಗಳಿಗೆ ಒಂದಾಗಿಸಿದ ಜನತಾ ಅದಾಲತ್

ವಿಜಯಪುರ:  ವಿಜಯಪುರ ಜಿಲ್ಲೆಯಲ್ಲಿ ಜರುಗಿದ ರಾಷ್ಟ್ರೀಯ ಲೋಕ್ ಅದಾಲತ್‌ಗೆ ಅಭೂತಪೂರ್ವ ಸ್ಪಂಧನೆ ದೊರೆತಿದ್ದು, ಹಲವಾರು ವರ್ಷಗಳಿಂದ ಬಾಕಿ ಇದ್ದ ಪ್ರಕರಣಗಳಿಗೆ ಜನತಾ ನ್ಯಾಯಾಲಯದಲ್ಲಿ ರಾಜೀ ಸಂಧಾನದ ಮೂಲಕ ಇತ್ಯರ್ಥಗೊಳಿಸಲಾಯಿತು. 

ಕೌಂಟುAಬಿಕ ನ್ಯಾಯಾಲಯದಲ್ಲಿ ವಿಚ್ಛೇಧನ ಕೋರಿ ಅರ್ಜಿ ಸಲ್ಲಿಸಿದ 3 ಜೋಡಿಗಳನ್ನು ಜನತಾ ಅದಾಲತ್‌ನಲ್ಲಿ ರಾಜೀ ಸಂಧಾನದ ಮೂಲಕ ಒಂದು ಗೂಡಿಸಿ ಕಳುಹಿಸಲಾಯಿತು. ಅದರಂತೆ ವಿವಿಧ ಪ್ರಕರಣಗಳಿಗೆ ರಾಜೀ ಸಂಧಾನದ ಮೂಲಕ ಇತ್ಯರ್ಥಗೊಳಿಸುವ ಮೂಲಕ ಯಶಸ್ವಿಯಾಗಿ ಜನತಾ ಅದಾಲತ್ ಜರುಗಿತು.

ಜನತಾ ನ್ಯಾಯಾಲಯದ ಯಶಸ್ವಿಗೆ ಸಹಕರಿಸಿದ ಎಲ್ಲ ವಕೀಲರುಗಳು, ಕಕ್ಷಿದಾರರು, ಪೊಲೀಸ್ ಅಧಿಕಾರಿಗಳು ಜನತಾ ನ್ಯಾಯಾಲಯದಲ್ಲಿ ಭಾಗಿಯಾದ ಕಾನೂನು ಪದವಿ ವಿದ್ಯಾರ್ಥಿಗಳು, ಉಪನ್ಯಾಸಕರು, ಪೆನಲ್ ವಕೀಲರಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶಿವಾಜಿ ಅನಂತ ನಲವಡೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹಿರಿಯ ಸಿವಿಲ್ ನ್ಯಾಯಾಧೀಶರುಗಳಾದ ಅರವಿಂದ ಎಸ್.ಹಾಗರಗಿ, ನ್ಯಾಯಾಧೀಶ ಸತೀಶ ಎಲ್.ಪಿ. ಪಾಟೀಲ ಮೋಹನಕುಮಾರ ಭೀಮನಗೌಡ, ಶ್ರೀಮತಿ ಸಿಂಧು ಪೋತದಾರ ಅವರು ಅಭಿಂದನೆ ಸಲ್ಲಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಮಾನವ ಹಕ್ಕುಗಳ ಆಯೋಗದ ನ್ಯಾಯಾಂಗದ ಸದಸ್ಯ ಎಸ್.ಕೆ.ವಂಟಿಗೋಡಿ ಜಿಲ್ಲಾಸ್ಪತ್ರೆಗೆ ಭೇಟಿ- ಪರಿಶೀಲನೆ : ಜಿಲ್ಲಾಸ್ಪತ್ರೆಯ ಕಾರ್ಯನಿರ್ವಹಣೆೆಗೆ ಪ್ರಶಂಸೆ

ವಿಜಯಪುರ:  ನ್ಯಾಯಾಂಗ ಸದಸ್ಯರು ಕರ್ನಾಟಕ ಮಾನವ ಹಕ್ಕುಗಳ ಆಯೋಗದ ನ್ಯಾಯಾಂಗ ಸದಸ್ಯರಾದ ಎಸ್.ಕೆ.ವಂಟಿಗೋಡಿ ಅವರು ಭಾನುವಾರ ಜಿಲ್ಲಾ ಆಸ್ಪತ್ರೆಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿ, ಕೂಲಕುಂಷವಾಗಿ ಪರಿಶೀಲನೆ ನಡೆಸಿದರು.

ಆಸ್ಪತ್ರೆಯಲ್ಲಿ ವಿವಿಧ ವಿಭಾಗಗಳಿಗೆ ಭೇಟಿ ನೀಡಿ ಸ್ವಚ್ಚತೆ ಹಾಗೂ ಔಷಧಿಗಳ ಸಂಗ್ರಹಣೆಗೆ ಅವರು ್ಗ ಪ್ರಶಂಸೆ ವ್ಯಕ್ತಪಡಿಸಿದರು.

ಆಸ್ಪತ್ರೆಗೆ ಬರುವ ರೋಗಿಗಳಿಗೆ ಸರಿಯಾಗಿ ಔಷಧೋಪಚಾರ ಹಾಗೂ ಸೂಕ್ತ ಚಿಕಿತ್ಸೆ ಒದಗಿಸಬೇಕು ಎಂದು ವೈದ್ಯಾಧಿಕಾರಿಗಳಿಗೆ ಸೂಚಿಸಿದ ಅವರು, ಎಮ್.ಆರ್.ಐ. ಸಿ.ಟಿ. ಸ್ಕ್ಯಾನ್ ಸಮರ್ಪಕವಾಗಿ ನಿರ್ವಹಿಸಬೇಕು. ರೋಗಿಗಳಿಗೆ ಯಾವುದೇ ತೊಂದರೆಯಾಗದAತೆ ನೋಡಿಕೊಳ್ಳಲು ಕೃಷ್ಣಾ ಡೈಗೋಸ್ಟೀಕ್ ಪುಣೆ ಸಂಸ್ಥೆಯ ಆಪರೇಟಿಂಗ್ ಮ್ಯಾನೇಜರ್ ಯೋಗೇಶ ಸರವೋರ್, ಲಿಗಲ್ ಅಡವೈಸರ್ ಹಾಗೂ ಎಚ್.ಆರ್. ಪಿಲಿಪ್ ಸಾಮಂತೆ, ಎಮ್.ಆರ್.ಐ. ಮ್ಯಾನೇಜರ್ ವಿಶಾಲ ಜಂಗಮ ಇವರಿಗೆ ಸೂಚನೆ ನೀಡಿದರು.

ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಕರಾದ ಡಾ,ಶಿವಾನಂದ ಮಾಸ್ತಿಹೊಳಿ ಅವರು ಜಿಲ್ಲಾಸ್ಪತ್ರೆಯ ವಿವಿಧ ವಿಭಾಗದ ಕುರಿತು ಮಾಹಿತಿ ನೀಡಿದರು.

 ಈ ಸಂಧರ್ಬದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಿಧಿಕಾರಿ ಡಾ. ಸಂಪತ್ ಗುಣಾರಿ ಹಾಗೂ ಆಸ್ಪತ್ರೆಯ ಆರ್.ಎಮ.ಓ. ಡಾ: ಚಂದು ರಾಠೋಡ, ಎಬಿ-ಎಆರ್.ಕೆ. ನೋಡಲ್ ಅಧಿಕಾರಿಗಳಾದ ಡಾ:ಎ.ಜಿ.ಬಿರಾದಾರ, ಡಾ.ಶಶಿಕಲಾ ಹಿರೇಮನಿ, ವಿಜಯಪುರ ತಹಶೀಲ್ದಾರರಾದ ಪ್ರಶಾಂತ ಚನಗೊಂಡ ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

15-12-2024 EE DIVASA KANNADA DAILY NEWS PAPER