Friday, December 20, 2024
ಅಪರಾಧಗಳ ತಡೆಗೆ ಸಾರ್ವಜನಿಕರ ಸಹಕಾರ ಮುಖ್ಯ : ಪಿಎಸ್‌ಐ ಆರೀಫ ಮುಷಾಪುರಿ
ಸಿಂದಗಿ: ಕೇವಲ ಪೊಲೀಸರಿಂದ ಅಪರಾಧಗಳ ತಡೆ ಸಾಧ್ಯವಿಲ್ಲ. ಇದಕ್ಕೆ ಸಾರ್ವಜನಿಕರ ಸಹಕಾರವೂ ಮುಖ್ಯ ಎಂದು ಪಿಎಸ್‌ಐ ಆರೀಫ ಮುಷಾಪುರಿ ಹೇಳಿದರು.
ಪುಟ್ಟಣದ ಆರ್.ಡಿ. ಪಾಟೀಲ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪಪೂರ ಮಹಾವಿದ್ಯಾಲಯ ಹಾಗೂ ಜಿ.ಪಿ.ಪೋರವಾಲ ಕಲಾ, ವಾಣಿಜ್ಯ ಹಾಗೂ ವ್ಹಿ.ವ್ಹಿ.ಸಾಲಿಮಠ ವಿಜ್ಞಾನ ಮಹಾವಿದ್ಯಾಲಯದ ಐಕ್ಯೂಎಸಿ ಘಟಕದ ಅಡಿಯಲ್ಲಿ ಸಿಂದಗಿ ಪೊಲೀಸ್ ಠಾಣೆಯ ಸಹಯೋಗದಲ್ಲಿ ಹಮ್ಮಿಕೊಂಡ 2024ರ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಅವರು, ದಿನನಿತ್ಯದ ಬದುಕಿನಲ್ಲಿ ಕಾನೂನು ನಿಯಮಗಳನ್ನು ಅಳವಡಿಸಿಕೊಂಡು ಸಾಗಬೇಕಾದ ಅನಿವಾರ್ಯತೆ ಇದೆ. ಸಾರ್ವಜನಿಕ ಸ್ಥಳಗಳಲ್ಲಿ ನಡೆಯುವಂತಹ ಅಪರಾಧಗಳು ಕಣ್ಣಿಗೆ ಬಿದ್ದರೆ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕಾಗಿರುವುದು ನಾಗರಿಕರ ಕರ್ತವ್ಯ. ಅಪರಾಧಗಳಾಗದಂತೆ ವಹಿಸಬಹುದಾದ ಮುನ್ನೆಚ್ಚರಿಕೆ ಕ್ರಮಗಳನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಈ ವೇಳೆ ಪಿ.ವಿ.ಮಹಲಿನಮಠ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಐಕ್ಯೂಎಸಿ ಘಟಕದ ಸಂಯೋಜಕ ಬಸವರಾಜ ಮಹಾಜನಶೆಟ್ಟಿ, ಉಪನ್ಯಾಸಕ ಡಾ.ಶರಣಬಸವ ಜೋಗುರ ಸೇರಿದಂತೆ ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಇದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
ದೇವು.ಕೆ ಅಂಬಿಗ ನಿರ್ದೇಶನದ “ಸೈಕಲ್ ಸವಾರಿ” ಚಲನಚಿತ್ರದ ಹಾಡಿಗೆ “ದ ಬೆಸ್ಟ ಅವಾರ್ಡ” ಪ್ರಶಸ್ತಿ
ವಿಜಯಪುರ : ಇತ್ತೀಚ್ಚಗಷ್ಟೆ ಬೆಂಗಳೂರಿನ ವೈಟ್‌ಫೀಲ್ಡ್ನಲ್ಲಿರುವ ಎನ್ಸಾಟೋ ರಿ ಕ್ರಿಯೇಷನ್ ಹಬ್‌ನಲ್ಲಿ ನಡೆದಿರುವ ನವ ಕರ್ನಾಟಕ ಚಲನಚಿತ್ರೋತ್ಸವ ಅಕಾಡೆಮಿ ಹಾಗೂ ಯೂನಿವರ್ಸಲ್ ಫೀಲ್ಮ್ ಕೌನ್ಸಿಲ್ ವತಿಯಿಂದ ಹಮ್ಮಿಕೊಂಡ ಕರ್ನಾಟಕ ಅಂತರಾಷ್ಟಿçÃಯ ಚಲನಚಿತ್ರೋತ್ಸವದಲ್ಲಿ ವಿಜಯಪುರ ಜಿಲ್ಲೆಯ ಯುವ ನಿರ್ದೇಶಕರಾದ ದೇವು.ಕೆ ಅಂಬಿಗ ನಿರ್ದೇಶನದ “ಸೈಕಲ್ ಸವಾರಿ” ಚಲನಚಿತ್ರದ "ಮರೆತು ಹೋಗಲು ಹೇಳು ಕಾರಣ" ಎನ್ನುವ ಗೀತೆಗೆ “ದಿ ಬೆಸ್ಟ್ ಸಾಂಗ್” ಅವಾರ್ಡ ದೊರಕಿದೆ, ರಾಷ್ಟç ಹಾಗೂ ಅಂತರಾಷ್ಟçದಿAದ ಕನ್ನಡ ಭಾಷೆ ಸೇರಿದಂತೆ ಹಲಾವರು ಭಾಷೆಗಳ ಚಲನಚಿತ್ರಗಳು, ಗೀತೆಗಳು, ಕಿರುಚಿತ್ರಗಳು, ಸಾಕ್ಷö್ಯಚಿತ್ರಗಳ ಸ್ಪರ್ದೆಯಲ್ಲಿ, ಸುಮಾರು 150ಕ್ಕೂ ಹೆಚ್ಚು ಚಿತ್ರಗಳು ಕರ್ನಾಟಕ ಅಂತರಾಷ್ಟಿçÃಯ ಚಲನಚಿತ್ರೋತ್ಸವದಲ್ಲಿ ಪೈಪೋಟಿಯಾಗಿದ್ದವು. ನಿದೇಶಕ ಎಂ.ಎ ಮುಮ್ಮಿಗಟ್ಟಿ, ಕನ್ನಡ ಚಲನಚಿತ್ರರಂಗದ ಹಿರಿಯ ಕಲಾವಿದ ಸುಂದರಜ್, ಆಂದ್ರಪ್ರದೇಶ ಫಿಲ್ಮ್ ಚೆಂಬರ್ ಅಧ್ಯಕ್ಷ ಅಂಬಾಟಿ ಮಧು, ಮೋಹನ ಕೃಷ್ಣ, ನಿರ್ಮಾಪಕ ಕಲ್ಮೇಶ ಹಾವೇರಿಪೇಟರವರು "ಸೈಕಲ್ ಸವಾರಿ" ಚಲನಚಿತ್ರದ ನಿರ್ದೇಶಕ ದೇವು.ಕೆ ಅಂಬಿಗ ಹಾಗೂ ತಂಡದಲ್ಲಿದ್ದ ಚಲನಚಿತ್ರ ನಾಯಕಿ ನಟಿ ದೀಕ್ಷಾ ಭೀಸೆ, ವಿನೋದ ರಾಠೋಡ, ಸಚೀನ್ ಹಿಟ್ನಳ್ಳಿ, ರಾಮಚಂದ್ರ ಕಾಂಬಳೆ, ವೆಂಕಟೇಶರವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ಕಾರ್ಯಕ್ರಮದಲ್ಲಿ ಕನ್ನಡ ಚಲನಚಿತ್ರರಂಗದ ಹಲವಾರು ಹಿರಿಯ ಹಾಗೂ ಕಿರಿಯ ಕಲಾವಿದರು, ನಿರ್ದೇಶಕರು, ನಿರ್ಮಾಪಕರು, ಗೀತ ರಚನೆಕಾರರು, ಉದ್ದಿಮೆದಾರು ಪಾಲ್ಗೂಂಡಿದ್ದರು. ನಿರ್ದೇಶಕ ದೇವು.ಕೆ ಅಂಬಿಗರವರು ಬರುವ 2025 ಮಾರ್ಚ ತಿಂಗಳಲ್ಲಿ "ರಾಜರಾಧೆ" ಹಾಗೂ "ದ ಡೆಡ್ಲಿö ಕ್ಯಾನಿಬಲ್ಸ್ " ಎನ್ನುವ ಚಿತ್ರಗಳಿಗೆ ಆಕ್ಷನ್ ಕಟ್ ಹೇಳಲಿದ್ದಾರೆ.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
ಹತ್ತನೇ ತರಗತಿವರೆಗೆ ಕನ್ನಡ ಮಾಧ್ಯಮವೇ ಕಡ್ಡಾಯವಾಗಬೇಕು- ಗೊ.ರು.ಚನ್ನಬಸಪ್ಪ.
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಭಾಷಣ ಮಾಡಿದ ಸಮ್ಮೇಳನಾಧ್ಯಕ್ಷರಾದ ಡಾ.ಗೊ.ರು.ಚನ್ನಬಸಪ್ಪ ಅವರು, ಹತ್ತನೇ ತರಗತಿವರೆಗೆ ಕನ್ನಡ ಮಾಧ್ಯಮವೇ ಕಡ್ಡಾಯವಾಗಬೇಕು. ಇಂಗ್ಲಿಷ್ ಮಾಧ್ಯಮದ ಶಾಲೆಗಳನ್ನು ಸರ್ಕಾರ ತೆರೆಯುವುದನ್ನಾಗಲಿ, ಖಾಸಗಿ ಶಾಲೆಗಳಿಗೆ ಅನುಮತಿ ಕೊಡುವುದನ್ನಾಗಲೀ ಕೂಡಲೇ ನಿಲ್ಲಿಸಬೇಕು. ತಂತ್ರಜ್ಞಾನದ ನೆರವು ಪಡೆದು ಕನ್ನಡವನ್ನು ಕಿರಿಯ ಪೀಳಿಗೆಯ ಎದೆಗೆ ಬೀಳುವ ಅಕ್ಷರವಾಗಿಸಬೇಕು ಎಂದು ಕರೆ ನೀಡಿದರು.
ಅಗತ್ಯವೆನಿಸಿರುವ ಇಂಗ್ಲೀಷ್ ಕಲಿಕೆಗೆ ಪ್ರತ್ಯೇಕ ವ್ಯವಸ್ಥೆ ಮಾಡಿ, ಬೋಧನೆಗೆ ತರಬೇತಿ ಪಡೆದ ಶಿಕ್ಷಕರನ್ನು ನೇಮಿಸಬೇಕು ಮತ್ತು ಗ್ರಾಮೀಣ ಭಾಗದ ಕನ್ನಡ ಶಾಲೆಗಳನ್ನು, ಎಲ್ಲ ಸೌಲಭ್ಯಗಳಿಂದ ಪೂರ್ಣವಾಗಿ ಸಜ್ಜುಗೊಳಿಸಬೇಕು. ರಾಜ್ಯದ ಆಯವಯ್ಯದಲ್ಲಿ ಕನಿಷ್ಟ ಶೇ.15 ರಷ್ಟು ಅನುದಾನವನ್ನು ಶಿಕ್ಷಣಕ್ಕೆ ಮೀಸಲಿಡಬೇಕು ಎಂದು ಹೇಳಿದರು.
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದ ಗೊ.ರು.ಚನ್ನಬಸಪ್ಪ ಅವರ ಭಾಷಣದ 21 ಪ್ರಮುಖ ಅಂಶಗಳು :
ಕನ್ನಡವು ಕಾವ್ಯ, ಕವನ, ನಾಟಕ, ಕಾದಂಬರಿ, ವ್ಯಾಕರಣ ಮುಂತಾದ ಪರಂಪರೆಯ ಸಾಹಿತ್ಯಕ್ಕೆ ಸೀಮಿತವಾಗಿ ಉಳಿದಿಲ್ಲ.
ವಿಜ್ಞಾನ, ತಂತ್ರಜ್ಞಾನ, ಕಾನೂನು, ವೈದ್ಯಕೀಯ ಮುಂತಾದ ಕ್ಷೇತ್ರದಲ್ಲಿ ಕನ್ನಡ ಬೆಳೆಯುತ್ತಿದೆ
ಸರ್ಕಾರಿ ಶಾಲೆಗಳನ್ನು ಉನ್ನತೀಕರಿಸಬೇಕು. ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ಕೈಂಕರ್ಯದಲ್ಲಿ ಉದ್ಯಮಿಗಳು, ಸ್ವಯಂ ಸೇವಾ ಸಂಸ್ಥೆಗಳು, ವಿದೇಶಿ ಕನ್ನಡಿಗರು ಕೈಜೋಡಿಸಬೇಕು.
ಕನ್ನಡ ಭಾಷೆಯ ಬೆಳವಣಿಗೆಗೆ ತಂತ್ರಜ್ಞಾನದ ಪೋಷಣೆ ಅತ್ಯಗತ್ಯ. ಗೂಗಲ್, ಯಾಂತ್ರಿಕ ಬುದ್ಧಿಮತ್ತೆಗೂ ಬರಲಿ ಶುದ್ಧ ಕನ್ನಡ ಪ್ರೇಮ.
ಜ್ಞಾನ ಪಡೆಯುವ ತಂತ್ರಜ್ಞಾನಕ್ಕೆ ಕನ್ನಡವನ್ನು ಹೊಂದಿಸಿದರೆ ಕನ್ನಡ ಜ್ಞಾನದ ಭಾಷೆ ಆಗುತ್ತದೆ.
ಜನಪ್ರಧಿನಿಧಿಗಳಲ್ಲಿ, ಉನ್ನತ ಅಧಿಕಾರಿಗಳಲ್ಲಿ ಕನ್ನಡ ಭಾಷಾ ಪ್ರೇಮದ ಕೊರತೆ ಇರುವಂತೆ ಕಾಣುತ್ತದೆ.
ಕನ್ನಡ ಸಾಹಿತ್ಯ ಪರಿಷತ್ತು ಬೇರೆ ಬೇರೆ ಭಾಷೆಗಳ ಜೊತೆಯಲ್ಲಿ ವಿನಿಮಯ ಕಾರ್ಯಕ್ರಮಗಳನ್ನು ದೊಡ್ಡ ಪ್ರಮಾಣದಲ್ಲಿ ಕೈಗೊಳ್ಳಬೇಕು.
ಕಲೆ, ನಾಟಕ, ಸಂಗೀತ, ಬಯಲಾಟ ಮುಂತಾದವುಗಳನ್ನು ಉತ್ತರ ಭಾರತದ ರಾಜ್ಯಗಳಿಗೆ ಪರಿಚಯಿಸಿಕೊಡುವ ಕೆಲಸ ಆದ್ಯತೆಯ ಮೇಲೆ ಮಾಡಬೇಕು
ಹಿಂದಿ ಭಾಷೆಯನ್ನು ರಾಷ್ಟ್ರ ಭಾಷೆ ಎಂಬುದನ್ನು ಪ್ರತ್ಯಕ್ಷ, ಪರೋಕ್ಷವಾಗಿ ಹೇರುವ ಹುನ್ನಾರವನ್ನು ಕೇಂದ್ರ ಸರ್ಕಾರಗಳು ಮಾಡುತ್ತಲೇ ಬಂದಿವೆ
ಕನ್ನಡ ವಿಶ್ವವಿದ್ಯಾನಿಲಯಕ್ಕೆ ವಿಶೇಷ ಗಮನ ಹರಿಸಬೇಕು
ಕೇಂದ್ರ ರಾಜ್ಯಗಳ ಹಣಕಾಸು ಸಂಬಂಧದ ಕುರಿತು ರಾಷ್ಟ್ರಮಟ್ಟದಲ್ಲಿ ಚರ್ಚೆಯಾಗಬೇಕು. ಕೇಂದ್ರ ಸರ್ಕಾರ ಸಂವಿಧಾನ ಮತ್ತು ಹಣಕಾಸು ತಜ್ಞರ ಒಂದು ವಿಶೇಷ ಆಯೋಗ ರಚಿಸಬೇಕು.
ಹಬ್ಬ, ಹರಿದಿನಗಳು, ಉತ್ಸವ ಆರಾಧನೆಗಳು, ಧಾರ್ಮಿಕ ಮುಖಂಡರ ಜಯಂತಿಗಳು ಜನರನ್ನು ಒಟ್ಟಿಗೆ ತರುವ ಕೆಲಸಕ್ಕೆ ಬದಲಾಗಿ ಸಮಾಜವನ್ನು ಒಡೆಯುವ ಆಯುಧಗಳಾಗುತ್ತಿವೆ.
ಪರಿಸರ ಉಳಿದರೆ ಮಾನವ ಉಳಿಯುವುದು. ಭಾರತದ ಜೀವಜಲವಾಗಿರುವ ಪಶ್ಚಿಮ ಘಟ್ಟವು ಇಂದು ಅಪಾಯವನ್ನು ಎದುರಿಸುತ್ತಿದೆ. ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ನಡೆಯಬಾರದು. ಪಶ್ಚಿಮಘಟ್ಟ ಪ್ರದೇಶ ಅನೇಕ ಮುಖ್ಯ ನದಿಗಳ ಮೂಲವಾಗಿದ್ದು ಅದರ ರಕ್ಷಣೆಗೆ ಆದ್ಯತೆ ನೀಡಬೇಕು.
ಲಿಂಗ ಸಮಾನತೆಯ ಮೌಲ್ಯವನ್ನು ಇಂದಿನ ಜೀವನದಲ್ಲಿ ಅಳವಡಿಸಿಕೊಳಗಳುವ ಅಗತ್ಯವನ್ನು ನಾವು ಮನಗಾಣಬೇಕು.
ಕನ್ನಡಿಗರಿಗೆ ಉದ್ಯೋಗದ ಅವಕಾಶಗಳು ಹೆಚ್ಚು ದೊರೆಯುತ್ತಿಲ್ಲ. ನಿರುದ್ಯೋಗ ಯುವಜನತರಯ ಬದುಕನ್ನು ದುರ್ಭರಗೊಳಿಸುತ್ತಿದೆ.
ಸರೋಜಿನಿ ಮಹಿಷಿ ಸಮಿತಿ ವರದಿ ಇನ್ನೂ ಅನುಷ್ಠಾನಗೊಂಡಿಲ್ಲ. ಕೂಡಲೇ ಅನುಷ್ಠಾನಗೊಳಿಸಬೇಕು.
ಬ್ಯಾಂಕ್, ಅಂಚೆ ಕಚೇರಿಗಳಲ್ಲಿ ಹಿಂದಿ ಭಾಷಿಕರು ತುಂಬಿ ಹೋಗಿದ್ದಾರೆ. ಕೇಂದ್ರ ಸರ್ಕಾರವು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹಿಂದಿಗೆ ಪ್ರಾಶಸ್ತ್ಯ ನೀಡುತ್ತಾ ಕನ್ನಡವನ್ನು ನಿರ್ಲಕ್ಷ್ಯ ಮಾಡುತ್ತಿದೆ. ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಿಡುವುದು ಸಂವಿಧಾನ ಅಥವಾ ಒಕ್ಕೂಟ ತತ್ವಕ್ಕೆ ವಿರೋಧಿ ಕ್ರಮವೇನಲ್ಲ.
ಗಡಿನಾಡು ಪ್ರದೇಶಗಳಲ್ಲಿರುವ ಕನ್ನಡಿಗರಲ್ಲಿ ಕನ್ನಡತನ, ಕನ್ನಡ ಪ್ರಜ್ಞೆಗಳನ್ನು ಮೂಡಿಸುವ ಬಗ್ಗೆ ತಾತ್ವಿಕ ನಿರ್ಧಾರ ಕೈಗೊಳ್ಳಬೇಕು.
ಗ್ರಾಮೀಣ ಪ್ರದೇಶದ ಗ್ರಂಥಾಲಯಗಳು ಕಟ್ಟಡದ ಕೊರತೆ, ವಾರ್ತಾ ಪತ್ರಿಕೆಗಳ ಮತ್ತು ವಾರ್ಷಿಕವಾಗಿ ಪುಸ್ತಕಗಳ ಸಂಗ್ರಹ ಸೇರಿದಂತೆ ಮುಂತಾದ ಸಮಸ್ಯೆಗಳನ್ನು ಎದುರಿಸುತ್ತಿದೆ. ಇದರ ಬಗ್ಗೆ ಸರ್ಕಾರ ಸೂಕ್ತ ಗಮನ ನೀಡಬೇಕು.
ಶಾಲಾ ಕಾಲೇಜು ಮಕ್ಕಳಿಗೆ ನಮ್ಮ ಇತಿಹಾಸ, ಪ್ರಕೃತಿ, ವನ್ಯಜೀವಿಧಾಮ ಮುಂತಾದವುಗಳ ಪರಿಚಯವಾಗುವಂತೆ ನಿಯತಕಾಲಿಕವಾಗಿ ಪ್ರವಾಸಗಳನ್ನು ಏರ್ಪಡಿಸುವಂತೆ ಒಂದು ಕ್ರಮಬದ್ಧ ಯೋಜನೆಯನ್ನು ರೂಪಿಸಬೇಕು.
ಕನ್ನಡ ಶಾಸ್ತ್ರೀಯ ಭಾಷಾ ಉನ್ನತ ಅಧ್ಯಯನ ಕೇಂದ್ರವನ್ನು ಬೆಳೆಸುವಲ್ಲಿ ಸರ್ಕಾರ ಮತ್ತು ಕನ್ನಡ ವಿದ್ವಾಂಸರು ಗಮನ ಕೊಡಬೇಕು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
ನೋಡುಗರ ಕಣ್ಮನ ಸೆಳೆದ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರ ಅದ್ಧೂರಿ ಮೆರವಣಿಗೆ
ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ
ಮಂಡ್ಯ. ಡಿ : 20 ಮಂಡ್ಯದಲ್ಲಿ ಮೂರು ದಶಕಗಳ ನಂತರ ಸಕ್ಕರೆ ನಗರಿ ಮಂಡ್ಯದಲ್ಲಿ ಸಾಹಿತ್ಯ ಸಂಭ್ರಮ ಮನೆ ಮಾಡಿದ್ದು 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಅದ್ದೂರಿಯಾಗಿ ನಡೆಯಿತು.
ಅಲಂಕೃತ ಕನ್ನಡ ರಥದಲ್ಲಿ ವಿರಾಜಮಾನರಾಗಿ ಆಸೀನರಾಗಿದ್ದ ಸಮ್ಮೇಳನಾಧ್ಯಕ್ಷ ನಾಡೋಜ ಗೊ.ರು ಚನ್ನಬಸಪ್ಪ ನುಡಿ ಜಾತ್ರೆಯ ಹಬ್ಬದಲ್ಲಿ ಭಾಗವಹಿಸಿ ಕನ್ನಡಿಗರ ಉತ್ಸಾಹದ ಮೆರುಗು ಕಣ್ತುಂಬಿ ಕೊಂಡರು.
ಸಾಹಿತ್ಯದ ಸೊಗಡು, ಕನ್ನಡದ ವೈಭವ, ಜಾನಪದ ಕಲಾತಂಡಗಳ ಮೆರಗು, ಕವಿ ಸಾಹಿತಿಗಳ ಅಲಂಕೃತ ಭಾವಚಿತ್ರ,ಕನ್ನಡ ಕಲರವ, ವಿದ್ಯಾರ್ಥಿಗಳ ಕನ್ನಡ ಪ್ರೇಮ, ಪೊಲೀಸ್ ಬ್ಯಾಂಡ್, ಅಲಂಕೃತ ಎತ್ತಿನಗಾಡಿಗಳ ಸೊಗಸು, ಅಧಿಕಾರಿಗಳ ಮಂದಹಾಸ, ಕನ್ನಡಪರ ಸಂಘಟನೆ ಮತ್ತು ಸಾಹಿತ್ಯಾಸಕ್ತರ ಸಂಭ್ರಮ ಮೆರವಣಿಗೆಗೆ ವಿಶೇಷ ಮೆರಗು ನೀಡಿತು.
ನಗರದ ಸರ್ ಎಂ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮಿ ಸಮ್ಮೇಳನ ಅಧ್ಯಕ್ಷರ ಜೊತೆ ನಗಾರಿ ಬಾರಿಸಿ ಹಲ್ಮಿಡಿ ಶಾಸನಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಸಮ್ಮೇಳನ ಅಧ್ಯಕ್ಷರ ಮೆರವಣಿಗೆಗೆ ಚಾಲನೆ ದೊರೆಯಿತು.ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ,ಕಸಾಪ ರಾಜ್ಯಾಧ್ಯಕ್ಷ ಡಾ. ಮಹೇಶ್ ಜೋಶಿ, ಜಿಲ್ಲೆಯ ಶಾಸಕರು ಹಾಜರಿದ್ದು ಶುಭ ಹಾರೈಸಿದರು.
ಸಮ್ಮೇಳನಾಧ್ಯಕ್ಷ ಗೊ ರು ಚನ್ನಬಸಪ್ಪರನ್ನು ಅಲಂಕೃತ ಕನ್ನಡ ರಥದಲ್ಲಿ ಕೂರಿಸಿ ಮೈಸೂರು ಪೇಟ ತೊಡಿಸಿ ಶಾಲು ಓದಿಸಿ, ಮಾಲಾರ್ಪಣೆ ಮಾಡುವ ಮೂಲಕ ಗೌರವಿಸಿದರು, ಸಾಹಿತ್ಯದ ತೇರಿನಲ್ಲಿ ಸಮ್ಮೇಳನಾಧ್ಯಕ್ಷರು ವಿರಾಜಮಾನರಾಜ ರಾಗುತ್ತಿದ್ದಂತೆ ಪೊಲೀಸ್ ಬ್ಯಾಂಡ್ ನುಡಿಸಲಾಯಿತು, ಕನ್ನಡಾಂಬೆ, ಜೈ ಭುವನೇಶ್ವರಿ ಮಾತೆಗೆ ಜಯ ಘೋಷ ಮೊಳಗಿಸಿ ಜಾನಪದ ಕಲಾ ತಂಡಗಳ ಸದ್ದಿನೊಂದಿಗೆ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಆಕರ್ಷಕ ಮೆರವಣಿಗೆ ಸಾಗಿತು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು, ಕವಿ ಮತ್ತು ಸಾಹಿತಿಗಳ ಅಲಂಕೃತ ಭಾವಚಿತ್ರ ಹೊತ್ತ ಆಟೋಗಳು ಮಹನೀಯರ ವೇಷದಾರಿಗಳು ಸಾಹಿತ್ಯ ಪ್ರೇಮಕ್ಕೆ ಸಾಕ್ಷಿಯಾದವು, ವಿದ್ಯಾರ್ಥಿಗಳು ಸಮ್ಮೇಳನಾಧ್ಯಕ್ಷರಿಗೆ ಪುಷ್ಪಾರ್ಚನೆ ಮಾಡಿ ವಂದಿಸಿ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿ ಕನ್ನಡ ಪ್ರೇಮ ಮೆರೆದರೆ ಜಾನಪದ ತಂಡಗಳು ಕಲೆ ಪ್ರದರ್ಶಿಸಿ ಮೆರಗು ನೀಡಿದವು.
ಸಾಹಿತ್ಯಾಸಕ್ತರು, ಕನ್ನಡ ಪ್ರೇಮಿಗಳು, ಕನ್ನಡದ ಕಟ್ಟಾಳುಗಳು ಕನ್ನಡ ಬಾವುಟ ಹಿಡಿದು ಹಾಗೂ ಶಾಲು ಹೊದ್ದು ಭಾಷಾ ಪ್ರೇಮ ಬಿಂಬಿಸಿದರೆ ಸಮ್ಮೇಳನಾಧ್ಯಕ್ಷರ ಮೆರವಣಿಗೆಯಲ್ಲಿ ಕನ್ನಡದ ಕಲರವ ಅನಾವರಣಗೊಂಡಿತು.
ಮೂರು ತಾಸು ಸುಮಾರು ಐದು ಕಿಲೋಮೀಟರ್ ಸಾಗಿದ ಮೆರವಣಿಗೆ ವರ್ಣಮಯವಾಗಿತ್ತು,
ಮೆರವಣಿಗೆಯಲ್ಲಿ ಜಾನಪದ ತಂಡಗಳಾದ ನಂದಿಧ್ವಜ, ಚಕ್ಕಡಿಗಾಡಿ, ಕೊಂಬುಕಹಳೆ, ನಾದಸ್ವರ, ಸ್ತಬ್ಧಚಿತ್ರ, ವೀರಗಾಸೆ, ತಮಟೆ, ಕಂಸಾಳೆ, ಮಹಿಳಾ ವೀರಗಾಸೆ, ಕೀಲುಕುದುರೆ, ಜಗ್ಗಲಿಗೆ ಮೇಳ, ಪೂರ್ಣಕುಂಭ, ನಗಾರಿ, ಛತ್ರಿಚಾಮರ, ಲಿಡಕರ್ ಸ್ತಬ್ಧಚಿತ್ರ, ಖಾಸಬೇಡರಪಡೆ, ಭಾಗವಂತಿಕೆ, ಹಗಲು ವೇಷ, ಅರೆವಾದ್ಯ, ಪೆಟ್ಟಿಗೆ ಮಾರಮ್ಮ, ಕೋಲಾಟ, ಗಾರುಡಿಗೊಂಬೆ, ಕರಗ, ಚಿಲಿಪಿಲಿ ಗೊಂಬೆ, ದಾಸಪ್ಪ ಜೋಗಪ್ಪ, ಬೆಂಕಿಭರಾಟೆ, ದೊಣ್ಣೆ ವರಸೆ, ಚಿಟ್ಟಲಗಿ ಮೇಳ, ಷಹನಾಯವಾದನ, ಗಾರುಡಿ ಗೊಂಬೆ, ಯಕ್ಷಗಾನ ಗೊಂಬೆ, ವಾನರಸೇನೆ, ಕರಡಿ ಮಜಲು, ದೇವಿ ವೇಷಧಾರಿ, ಕೀಲು ಕುದುರೆ, ನೃತ್ಯ, ಮರಗಾಲು, ಮುಳ್ಳು ಕುಣಿತ, ಡೊಳ್ಳು ಕುಣಿತ, ಪೂಜಾಕುಣಿತ, ಡೊಳ್ಳು ಕುಣಿತ, ಹಾಲಕ್ಕಿ ಸುಗ್ಗಿ ಕುಣಿತ, ಪಟಕುಣಿತ, ರಂಗದಕುಣಿತ, ಮಹಿಳಾ ಡೊಳ್ಳು ಕುಣಿತ, ಸೋಮನ ಕುಣಿತ, ಗೊರವರ ಕುಣಿತ, ಲಂಬಾಣಿ ನೃತ್ಯ, ಕೋಳಿ ನೃತ್ಯ, ಕೊಡವ ನೃತ್ಯ, ಜೋಗತಿ ನೃತ್ಯ, ವೀರಮಕ್ಕಳ ಕುಣಿತ, ಸತ್ತಿಗೆ ಕುಣಿತ, ದಟ್ಟಿ ಕುಣಿತ, ಹಲಗು ಕುಣಿತ, ಪಟಕುಣಿತ ಮೂಲಕನಾಲ್ವಡಿ ಕೃಷ್ಣರಾಜ ಒಡೆಯರ್, ಕೆಂಪೇಗೌಡ, ವಿಶ್ವೇಶ್ವರಯ್ಯ ವೇಷಧಾರಿ, ಅಶ್ವಾರೋಹಿ ದಳ, ಟಾಂಗಾ ಗಾಡಿ, ಎತ್ತಿನ ಗಾಡಿ, ಸಮ್ಮೇಳನಾಧ್ಯಕ್ಷರ ಭಾವಚಿತ್ರ ಒಳಗೊಂಡ 87 ಆಟೋ ರಿಕ್ಷಾಗಳು, ಸ್ಕೌಟ್ಸ್ ಮತ್ತು ಗೈಟ್ಸ್, ಎನ್ ಸಿಸಿ, ಭಾರತ್ ಸೇವಾದಳ ಸಾಗುವ ಮೂಲಕ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರ ಮೆರವಣಿಗೆಗೆ ವಿಶೇಷ ಆಕರ್ಷಣೆ ನೀಡಿದವು.
ತಮಿಳುನಾಡಿನ ಕರಗಂ, ಒಡಿಶಾದ ಸಂಬಲ್ಪುರಿ ಮತ್ತು ಧಾಪ್ ಬುಡಕಟ್ಟು ನೃತ್ಯ, ಮಧ್ಯಪ್ರದೇಶದ ಬಧಾಯಿ ಮತ್ತು ನೋರಾ ಕಲಾತಂಡಗಳು ಸಮ್ಮೇಳನಾಧ್ಯಕ್ಷರ ಮೆರವಣಿಗೆಯಲ್ಲಿ ಜನಾಕರ್ಷಿಸಿದವು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
87 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಚಾಲನೆ
ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ
ಮಂಡ್ಯ ಡಿ.20 (ಕರ್ನಾಟಕ ವಾರ್ತೆ) 87 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಚಾಲನೆ
ಸಕ್ಕರೆ ನಗರಿ ಮಂಡ್ಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.
ಕರ್ನಾಟಕದಲ್ಲಿ ಅತಿ ಹೆಚ್ಚು ಕನ್ನಡ ಮಾತನಾಡುವ ಜಿಲ್ಲೆಯೆಂದು ಹೆಸರು ಪಡೆದಿರುವ ಹಾಗೂ ಸಕ್ಕರೆ ನಗರಿ ಎಂದೇ ಪ್ರಸಿದ್ಧವಾಗಿರುವ ಮಂಡ್ಯದಲ್ಲಿ ಆಯೋಜಿಸಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅತ್ಯಂತ ಅಭಿಮಾನದಿಂದ ಹಾಗೂ ಸಂತೋಷದಿಂದ ಉದ್ಘಾಟಿಸಿದರು.
ಶ್ರೀ ಆದಿ ಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ದಿವ್ಯ ಸಾನಿಧ್ಯ ವಹಿಸಿದ್ದರು. ಸಮ್ಮೇಳನಾಧ್ಯಕ್ಷರಾದ ನಾಡೋಜ ಡಾ. ಗೊ.ರು.ಚನ್ನಬಸಪ್ಪ, ಹಿರಿಯ ಸಾಹಿತಿಗಳಾದ ಡಾ. ದೊಡ್ಡರಂಗೇಗೌಡ, ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರಾದ ಡಾ ಚಂದ್ರ ಶೇಖರ ಕಂಬಾರ, ವೇದಿಕೆಯ ಮೇಲೆ ಇದ್ದರು.
ಈ ಸಂದರ್ಭದಲ್ಲಿ ಕೃಷಿ ಸಚಿವರಾದ ಚೆಲುವನಾರಾಯಣಸ್ವಾಮಿ, ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ ಹೆ.ಚ್.ಸಿ.ಮಹದೇವಪ್ಪ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾದ ಮುನಿಯಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ, ಕರ್ನಾಟಕ ವಿಧಾನಸಭೆ ಉಪ ಸಭಾಧ್ಯಕ್ಷರಾದ ರುದ್ರಪ್ಪ ಲಮಾಣಿ, ಶಾಸಕರಾದ ಪಿ.ಎಂ.ನರೇಂದ್ರ ಸ್ವಾಮಿ, ಪಿ.ರವಿಕುಮಾರ್, ಎಂ.ಬಿ,ರಮೇಶ್ ಬಂಡಿ ಸಿದ್ದೇಗೌಡ, ದರ್ಶನ್ ಪುಟ್ಟಣ್ಣಯ್ಯ, ಕೆ.ಎಂ.ಉದಯ ಹಾಗೂ ಗಣ್ಯರು ಉಪಸ್ಥಿತರಿದ್ದರು.
*ಅಕ್ಷರ ಜಾತ್ರೆಗೆ ಹರಿದು ಬಂದ ಜನಸಾಗರ*
ಸಕ್ಕರೆ ನಗರಿ ಮಂಡ್ಯದಲ್ಲಿ ನಡೆಯುತ್ತಿರುವ 87 ನೆ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ನಿರೀಕ್ಷೆಗೂ ಮೀರಿ ಜನ ಸಾಗರ ಹರಿದು ಬಂತು.
ಬೆಳಗ್ಗೆ 8 ಗಂಟೆಯಿಂದಲೇ ಸ್ಥಳೀಯ ನಾಗರಿಕರು, ಮಹಿಳೆಯರು, ವಿದ್ಯಾ ರ್ಥಿಗಳು ಸಾಹಿತ್ಯ ಸಮ್ಮೇಳನವನ್ನು ಕಣ್ಮನ ತುಂಬಿಕೊಳ್ಳಲು ತಂಡೋಪ ತಂಡವಾಗಿ ಆಗಮಿಸಿದರು. ರಾಜ್ಯದ ನಾನಾ ಜಿಲ್ಲೆಗಳಿಂದ ಕನ್ನಡಾಭಿಮಾನಿ ಗಳು, ಸಾಹಿತಿಗಳು, ಸಾಹಿತ್ಯಾಸಕ್ತರು ಗುರುವಾರವೇ ನಗರಕ್ಕೆ ಆಗಮಿಸಿದರು.
ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸಿದ ಪ್ರತಿನಿಧಿಗಳಿಗೆ ಅಚ್ಚುಕಟ್ಟಾಗಿ ವ್ಯವಸ್ಥೆಯನ್ನು ಜಿಲ್ಲಾಡಳಿತ ಮಾಡಿದ್ದು, ಸಮ್ಮೇಳನದ ಬಗ್ಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿದರು.
ಮೆರವಣಿಗೆಯಲ್ಲಿ ಹಾಗೂ ಮುಖ್ಯವೇದಿಕೆಯಲ್ಲಿ ಜನಸಾಗರ ಜಮಾಯಿಸಿದ್ದ ಕಾರಣ ಹಾಗೂ ಯಾವುದೇ ಅಹಿತಕರ ಘಟನೆ ನಡೆಯಬಾರದೆಂಬ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾ ಪೊಲೀಸ್ ಇಲಾಖೆ ಭಾರೀ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಒಟ್ಟು 3,200 ಪೊಲೀಸ್ ಸಿಬ್ಬಂದಿಯನ್ನು ಸಾಹಿತ್ಯ ಸಮ್ಮೇಳನಕ್ಕೆ ನಿಯೋಜಿಸಲಾಗಿದೆ.
ಮಂಡ್ಯ ನಗರದಲ್ಲಿ ನಗರ ಸಾರಿಗೆ ಬಸ್ ಉಚಿತವಾಗಿ ಬಿಟ್ಟಿರುವುದರಿಂದ ನಗರದ ಜನತೆಯೂ ಸಹಸ್ರಾರು ಸಂಖ್ಯೆಯಲ್ಲಿ ಭಾಗವ ಹಿಸಿದರು.
ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಹಿನ್ನೆಲೆಯಲ್ಲಿ ನಗರ ಸೇರಿದಂತೆ ಜಿಲ್ಲೆಯ ಬಹುತೇಕ ವಿದ್ಯಾರ್ಥಿಗಳು, ಶಿಕ್ಷಕರು, ಉಪನ್ಯಾಸಕರು ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಸಮ್ಮೇಳನದ ಸರ್ವಾಧ್ಯಕ್ಷರು ವೇದಿಕೆಗೆ ಆಗಮಿಸುತ್ತಿದ್ದಂತೆ ಅಭೂತಪೂರ್ವ ಸ್ವಾಗತ ಕೋರಲಾಯಿತು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.