Tuesday, January 7, 2025

ಜ.9 ರಂದು ಮಹಿಳಾ ವಿವಿ 16 ನೇ ಘಟಿಕೋತ್ಸವ


ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ 16 ನೇ ವಾರ್ಷಿಕ ಘಟಿಕೋತ್ಸವವು ಜ. 9 ಮಧ್ಯಾಹ್ನ 12.30ಕ್ಕೆ ವಿಶ್ವವಿದ್ಯಾನಿಲಯದ ಆವರಣದ ಜ್ಞಾನಶಕ್ತಿ ಕ್ಯಾಂಪಸ್‌ನಲ್ಲಿ ನಡೆಯಲಿದೆ.

ಘಟಿಕೋತ್ಸವದ ಅಧ್ಯಕ್ಷತೆ ರಾಜ್ಯಪಾಲರು ಹಾಗೂ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಾಧಿಪತಿ ಥಾವರ್‌ಚಂದ್ ಗೆಹ್ಲೋಟ್ ಅವರು ವಹಿಸಲಿದ್ದಾರೆ.

ಉನ್ನತ ಶಿಕ್ಷಣ ಸಚಿವ ಹಾಗೂ ವಿಶ್ವವಿದ್ಯಾನಿಲಯದ ಸಮಕುಲಾಧಿಪತಿ ಡಾ.ಎಂ.ಸಿ. ಸುಧಾಕರ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಅತಿಥಿಗಳಾಗಿ ನವದೆಹಲಿಯ ರಾಷ್ಟ್ರೀಯ ಶೈಕ್ಷಣಿಕ ಯೋಜನೆ ಮತ್ತು ಆಡಳಿತ ಸಂಸ್ಥೆಯ ಕುಲಪತಿ ಪ್ರೊ.ಶಶಿಕಲಾ ವಂಜಾರಿ, ಅಕ್ಕಮಹಾದೇವಿ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಬಿ.ಕೆ. ತುಳಸಿಮಾಲ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ. ಎಚ್.ಎಂ. ಚಂದ್ರಶೇಖರ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

No comments:

Post a Comment