Friday, January 17, 2025

ಗೆಜೆಟೆಡ್ ಪ್ರೊಬ್ರೇಷನರ್ ಪರೀಕ್ಷೆ: ಅಚ್ಚುಕಟ್ಟಾಗಿ ನಡೆಸುವಂತೆ ಸೂಚನೆ

ವಿಜಯಪುರ: ಕರ್ನಾಟಕ ಲೋಕಸೇವಾ ಆಯೋಗ ವತಿಯಿಂದ ವಿವಿಧ ಇಲಾಖೆಗಳಲ್ಲಿನ ಗ್ರೂಪ್ ಬಿ ವೃಂದದ ಹುದ್ದೆಗಳಿಗೆ ನಡೆಸಲಿರುವ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳು ವ್ಯವಸ್ಥಿತ ಹಾಗೂ ಅತ್ಯಂತ ಎಚ್ಚರಿಕೆ ಹಾಗೂ ಸೂಕ್ಷö್ಮವಾಗಿ, ಪಾರದರ್ಶಕತೆಯಿಂದ ನಡೆಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡ 2023-24ನೇ ಸಾಲಿನ ಗೆಜೆಟೆಡ್ ಪ್ರೊಬ್ರೇಷನರ್ ಗ್ರೂಪ್ ಬಿ ವೃಂದದ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜ. 19 ರಂದು ನಡೆಯುವ 21 ಕೇಂದ್ರಗಳಲ್ಲಿ ಒಟ್ಟು 8599 ಅಭ್ಯರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ. ಅಂದು ಬೆಳಗ್ಗೆ 10 ಗಂಟೆಯಿAದ 11.30 ಗಂಟೆಯ ವರೆಗೆ ಸಾಮಾನ್ಯ ಪರೀಕ್ಷೆ ಹಾಗೂ ಜ. 25 ರಂದು ನಡೆಯುವ 20 ಕೇಂದ್ರಗಳಲ್ಲಿ ಒಟ್ಟು 8011 ಅಭ್ಯರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದು ಮಧ್ಯಾಹ್ನ 3 ರಿಂದ 5 ಗಂಟೆ ವರೆಗೆ ನಿರ್ದಿಷ್ಟ ಪಡಿಸಿದ್ದ ಪರೀಕ್ಷೆ ಜರುಗಲಿದೆ. ಅಭ್ಯರ್ಥಿಗಳು ಪರೀಕ್ಷಾ ದಿನಗಳಂದು ಅಧಿವೇಶನದ ಪರೀಕ್ಷೆ ಪ್ರಾರಂಭವಾಗುವ 2 ಗಂಟೆ ಮೊದಲು ಕಡ್ಡಾಯವಾಗಿ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು. ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗುತ್ತದೆ ಎಂದರು.

ಪರೀಕ್ಷಾ ಕೇಂದ್ರಗಳಿಗೆ ಉಪಕೇಂದ್ರಗಳ ಮೇಲ್ವಿಚಾರಣೆಗೆ ಓರ್ವ ಎ ಹಾಗೂ ಬಿ ದರ್ಜೆಯ ಅಧಿಕಾರಿಯನ್ನು ನೇಮಿಸಿವುದು ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆ ಕೊಂಡೊಯ್ಯಲು ಮಾರ್ಗಾಧಿಕಾರಿಯನ್ನು ನೇಮಿಸಿ ಅವರಿಗೆ ಬೆಂಗಾವಲು ಕಾರ್ಯಕ್ಕಾಗಿ ಓರ್ವ ಸಶಸ್ತç ಪೊಲೀಸ್ ಸಿಬ್ಬಂದಿ, ಗ್ರೂಪ್-ಡಿ ಸಿಬ್ಬಂದಿ, ವಾಹನÀದ ವ್ಯವಸ್ಥೆಗೆ ಅವರು ಸೂಚನೆ ನೀಡಿದರು.

ಅಭ್ಯರ್ಥಿಗಳನ್ನು ಕಟ್ಟುನಿಟ್ಟಾಗಿ ತಪಾಸಣೆಗೊಳಪಡಿಸಬೇಕು. ಅಭ್ಯರ್ಥಿಗಳ ಯಾವುದೇ ಎಲೆಕ್ಟಾçನಿಕ್ ಡಿವೈಸ್, ಮೈಕ್ರೋಪೂನ್ ಇನ್ನಿತರ ಉಪಕರಣ ಬಳಸದಿರುವ ಬಗ್ಗೆ ತಪಾಸಣೆ ನಡೆಸಬೇಕು. ಪರೀಕ್ಷಾ ಹಿಂದಿನ ದಿನ ಸಿಸಿಟಿವಿ ಕ್ಯಾಮರಾ ಬಾಡಿ ಕ್ಯಾಮರಾ, ಪ್ರಿಸ್ಕಿಂಗ್, ಮುಖ ಚಹರೆ ಮತ್ತು ಜಾಮರ್ ಗಳನ್ನು ಉಪ ಪರೀಕ್ಷಾ ಕೇಂದ್ರದ ಪರೀಕ್ಷಾ ಕೊಠಡಿಗಳಲ್ಲಿ ಅಳವಡಿಸುವುದು, ಪರೀಕ್ಷಾ ದಿನದಂದು ಅವುಗಳು ಕಾರ್ಯನಿರ್ವಹಿಸುತ್ತಿರುವ ಕುರಿತು ಪರಿಶೀಲಿಸಿಕೊಳ್ಳಬೇಕು ಎಂದರು.

ತಹಶೀಲ್ದಾರರು, ಡಿಡಿಪಿಐ (ಆಡಳಿತ) ಟಿ.ಎಸ್.ಕೋಲಾರ್, ಖಜಾನೆ ಇಲಾಖೆಯ ಉಪ ನಿರ್ದೇಶಕ ಹನುಮಂತ ಕಾಲತಿಪ್ಪಿ, ವೀಕ್ಷಕರು, ಪ್ರಶ್ನೇ ಪತ್ರಿಕೆ ವಿತರಣಾ ತಂಡ, ಪರೀಕ್ಷಾ ಕೇಂದ್ರಗಳ ಮೇಲ್ವಿಚಾರಕ, ಮಾರ್ಗಾಧಿಕಾರಿ, ಸ್ಥಾನಿಕ ಜಾಗೃತ ದಳದವರು ಹಾಗೂ ಇತರ ಅಧಿಕಾರಿಗಳು ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.



No comments:

Post a Comment