Friday, February 28, 2025

ಅಧುನಿಕ ಸಮಾಜ ನಿರ್ಮಾಣಕ್ಕೆ ವೈಜ್ಞಾನಿಕ ಮನೋಭಾವನೆ ಬೆಳಿಸಿಕೊಳ್ಳಲು ಪ್ರೊ. ಸಕ್ಪಾಲ ಹೂವಣ್ಣ ಕರೆ

ವಿಜಯಪೂರ: ಇಂದಿನ ಸಮಾಜ ಮೂಢನಂಬಿಕೆಯಿಂದ ಬಳಲುತ್ತಿದೆ, ಇದು ದೇಶದ ಹಿನ್ನಡೆಗೆ ಕಾರಣವಾಗಿದೆ ವಿದ್ಯಾರ್ಥಿನಿಯರು ವೈಜ್ಞಾನಿಕ ಮನೋಭಾವನೆ ಬೆಳಿಸಿಕೊಂಡು ಆಧುನಿಕ ಸಮಾಜ ನಿರ್ಮಾಣಕ್ಕೆ ಶ್ರಮಿಸಬೇಕೆಂದು ಕರಾಮವಿವಿ ಸ್ನಾತಕ ವಿಭಾಗದ (ಎನ್.ಇ.ಪಿ) ವಿಶೇಷಧಿಕಾರಿಗಳಾದ ಪ್ರೊ. ಸಕ್ಪಾಲ ಹೂವಣ್ಣ ಕರೆ ನೀಡಿದರು,

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಜಾನ ಶಕ್ತಿ ಆವರಣದಲ್ಲಿರುವ ಸ್ನಾತಕ (ಎನ್.ಇ.ಪಿ) ಪದವಿ ವಿಭಾಗದಲ್ಲಿ ಜರುಗಿದ ರಾಷ್ಟ್ರೀಯ ವಿಜ್ಞಾನ ದಿನ ಅಂಗವಾಗಿ ವಿದ್ಯಾರ್ಥಿನಿಯರಿಗೆ ವಿಜ್ಞಾನ ಪ್ರತಿಜ್ಞಾ ವಿಧಿ ಭೋದಿಸಿ ಅವರು ಮಾತನಾಡಿದರು.

ನಿತ್ಯಜೀನದಲ್ಲಿ ವೈಜ್ಞಾನಿಕ ವಿಚಾರಗಳು, ಆಚರಣೆಗಳು ಬಳಕೆಯಲ್ಲಿ ಇರಬೇಕು ವಿದ್ಯಾರ್ಥಿನಿಯರ ಜಿವನಕ್ರಮವೂ ವೈಜ್ಞಾನಿಕೆಯನ್ನು ಒಳಗೊಂಡಿರಬೇಕೆಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿಭಾಗದ ಸಂಯೋಜಕರಾದ ಡಾ. ಜಿ ಸೌಭಾಗ್ಯ ಹಾಗೂ ಅತಿಥಿ ಉಪನ್ಯಾಸಕರಾದ ಮೊಹಸಿನಾ ಮಣಿಯಾರ ಕಾರ್ಯಕ್ರಮ ಆಯೋಜಿಸಿ ಸ್ವಾಗತಿಸಿದರು, ಭೋದಕ ಸಿಬ್ಬಂದಿಗಳು, ವಿದ್ಯಾಥಿನಿಯರು ಹಾಗೂ ವಿಭಾಗದ ವಿಷಯ ನಿರ್ವಾಹಕರಾದ ವಿನೋದ ಪಾಟೀಲ, ಮಲ್ಲಿಕಾರ್ಜುನ ಕಾಡಾಪುರೆ ಮತ್ತು ರಫೀಕ ಶಾನವಾಲೆ, ರೋಹಿತ, ನಜಮಾ, ಶೈಲೇಶ, ಶೈಲಾ ಕಾರ್ಯಕ್ರಮದಲ್ಲಿ ಹಾಜರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

01-03-2025 EE DIVASA KANNADA DAILY NEWS PAPER

371 ಜೆ ಜಾರಿಮಾಡುವಂತೆ ರಾಷ್ಟ್ರಪತಿಯವರಿಗೆ ಮನವಿ

ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ 

ವಿಜಯಪುರ: ವಿಜಯಪುರ ಜಿಲ್ಲೆಯನ್ನು 371 ಜೆ ಕಲಂ ಅಡಿ ಬಿಟ್ಟು ಹೋದ ಪ್ರದೇಶವೆಂದು ಪರಿಗಣಿಸಿ ಕಲ್ಯಾಣ ಕರ್ನಾಟಕ ಮೀಸಲಾತಿಗೆ ಸೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಪದವೀಧರ ಒಕ್ಕೂಟ ವಿಜಯಪುರ ಪದಾಧಿಕಾರಿಗಳು ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ, ಕರ್ನಾಟಕ ರಾಜ್ಯಪಾಲರಾದ ಥಾವರಚಂದ ಗೆಹ್ಲೋಟ, ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ವಿಜಯಪುರ ಜಿಲ್ಲಾಧಿಕಾರಿಗಳ ಮೂಲಕ ಹಾಗೂ ವಿಜಯಪುರ ಸಂಸದ ರಮೇಶ ಜಿಗಜಿಣಗಿ, ವಿಜಯಪುರ ನಗರ ಶಾಸಕ ಬಸನಗೌಡ ಆರ್. ಪಾಟೀಲ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ಈ ಸಂದರ್ಭ ಕರ್ನಾಟಕ ರಾಜ್ಯ ಪದವೀಧರರ ಒಕ್ಕೂಟ ಅಧ್ಯಕ್ಷರಾದ ಲಾಯಪ್ಪ ಇಂಗಳೆ ಮಾತನಾಡಿ, ಅಖಂಡ ವಿಜಯಪುರ ಜಿಲ್ಲೆ ರಾಜಾಡಳಿತ ಕಾಲದಲ್ಲಿ ಹೈದ್ರಾಬಾದ್ ನಿಜಾಮನ ಆಡಳಿತದಲ್ಲಿತ್ತು ಎಂಬುವುದಕ್ಕೆ ಸರ್ಕಾರದಿಂದ ಪ್ರಕಟಗೊಂಡ ಗೆಜಿಟಿಯರ್‍ನಲ್ಲಿ ದಾಖಲಾಗಿದೆ. ಕ್ರಿ.ಶÀ. 1744 ರಲ್ಲಿ ಹೈದ್ರಾಬಾದಿನ ನಿಜಾಮನು ಕೃμÉ್ಣಯ ಉತ್ತರದ ಭಾಗದ ಆಡಳಿತದ ಹೊಣೆಯನ್ನು ನಾಶಿರ ಜಂಗನಿಗೂ, ದಕ್ಷಿಣದ ಬಾದಾಮಿ ಬಾಗಲಕೋಟೆ ಗ್ರಾಮದ ಸವಣೂರಿನ ನವಾಬನ ಆಡಳಿಕ್ಕೆ ನೀಡಿದ್ದ ಕ್ರಿ.ಶ. 1746 ರಲ್ಲಿ ಸವಣೂರಿನ ನವಾಬನು ಮರಾಠಾ ಪೇಶ್ವೆಗಳೊಂದಿಗೆ ಒಪ್ಪಂದ ಮಾಡಿಕೊಂಡು ಸದರಿ ಪ್ರದೇಶಗಳನ್ನು ಅವರಿಗೆ ಬಿಟ್ಟುಕೊಟ್ಟಿದ್ದರ ಕುರಿತು ಅಧಿಕೃತ ದಾಖಲೆಗಳಿದ್ದರೂ ಅಖಂಡ ವಿಜಯಪುರ ಜಿಲ್ಲೆಯನ್ನು ಸೇರಿಸದೆ ತಮಗೆ ರಾಜಕೀಯ ಅಧಿಕಾರ ನೀಡಿದ ಜಿಲ್ಲೆಗೆ ಘೋರ ಅನ್ಯಾಯ ಎಸಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಲ್ಯಾಣರ ಚಾಲುಕ್ಯರ ಕಾಲದಿಂದ ವಿಜಯಪುರ ಜಿಲ್ಲೆ ಕಲ್ಯಾಣ ನಾಡಿನಲ್ಲಿಯೇ ಇತ್ತು. ಈಗಾಗಲೇ ಸಾರಿಗೆ ವ್ಯವಸ್ಥೆ , ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ಅಡಿ ಇದೆ. ನ್ಯಾಯಾಂಗ ವ್ಯವಸ್ಥೆ ಕೂಡಾ ಕಲ್ಬುರ್ಗಿ ಉಚ್ಛ ನ್ಯಾಯಾಲಯದಡಿ ಬರುತ್ತದೆ. ಹೀಗಿದ್ದರೂ ಕೂಡ. ಜಿಲ್ಲೆಯನ್ನು ಕಲ್ಯಾಣ ಕರ್ನಾಟಕದಡಿ ಸೇರಿಸದೆ ಇರುವುದು ಐತಿಹಾಸಿಕ ಪ್ರಮಾದವಾಗಿದೆ. ನಿಜಾಮನ ಆಡಳಿತದಲ್ಲಿ ಇಲ್ಲದೆ ಇರುವ ಬಳ್ಳಾರಿ ಜಿಲ್ಲೆಯನ್ನು (ವಿಜಯನಗರ ಸೇರಿ) 371 ಜೆ ಮೀಸಲಾತಿಯಡಿ ಸೇರಿಸಿದ್ದಾರೆ. ನಂಜುಂಡಪ್ಪ ವರದಿ ಪ್ರಕಾರ ವಿಜಯಪುರ ಜಿಲ್ಲೆ ಕೂಡಾ ಹಿಂದುಳಿದ ಪ್ರದೇಶವಾಗಿದ್ದು ಆರ್ಥಿಕವಾಗಿ ಶೈಕ್ಷಣಿಕವಾಗಿ ಸಾಮಾಜಿಕವಾಗಿ ಇಲ್ಲಿನ ಜನಸಮೂಹವು ಅತ್ಯಂತ ಹಿಂದುಳಿದಿರುತ್ತಾರೆ ಎಂದು ಹೇಳಿದರು.

ಪದವಿಧರ ಒಕ್ಕೂಟದ ಕಾರ್ಯದರ್ಶಿ ಕಲ್ಲಪ್ಪ ಶಿವಶರಣ ಮಾತನಾಡಿ, ಜಿಲ್ಲೆಗೆ ಆದ ಅನ್ಯಾಯದ ಕುರಿತು ಲೋಕಸಭೆ ಚುನಾವಣೆ ಸಂದರ್ಭದಲ್ಲಿ ನಮ್ಮ ಪದವೀಧರರ ಒಕ್ಕೂಟದಿಂದ ಧ್ವನಿ ಎತ್ತಿದಾಗ ವಿಜಯಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ತಮ್ಮ ಪ್ರಣಾಳಿಕೆಯಲ್ಲಿ ಜಿಲ್ಲೆಯನ್ನು ಮೀಸಲಾತಿಯಡಿ ಸೇರಿಸುವ ಭರವಸೆ ನೀಡಿದ್ದರು. ಚುನಾವಣೆ ಮುಗಿದ ನಂತರ ಯಾರೊಬ್ಬರು ಕೂಡ ಮೀಸಲಾತಿ ಬಗ್ಗೆ ಧ್ವನಿ ಎತ್ತದೆ ರಾಜಕೀಯ ಹಿತಾಸಕ್ತಿಗಾಗಿ ಜಿಲ್ಲೆಯ ಮಕ್ಕಳಿಗೆ ಸಿಗಬೇಕಾದ ಪ್ರತಿಶತ 80 % ಶೈಕ್ಷಣಿಕ ಮೀಸಲಾತಿ ಹಾಗೂ ಸ್ಥಳೀಯ ಸರ್ಕಾರಿ ಉದ್ಯೋಗದಲ್ಲಿ ಪ್ರತಿಶತ 80 ರಷ್ಟು ಹುದ್ದೆಗಳಿಂದ ಜಿಲ್ಲೆಯ ಯುವ ಜನ ಕಳೆದ 10 ವರ್ಷದಿಂದ ವಂಚಿತರಾಗುತ್ತಿದ್ದಾರೆ. ಜಿಲ್ಲೆಯನ್ನು ಪ್ರತಿನಿಧಿಸುವ ಲೋಕಸಭೆ, ವಿಧಾನಸಭೆ, ವಿಧಾನ ಪರಿಷತ್ತಿನ ಸದಸ್ಯರ ರಾಜಕೀಯ ಹಿತಾಸಕ್ತಿಯಿಂದ ಲೋಕಸಭೆ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನಲ್ಲಿ ಧ್ವನಿ ಎತ್ತದೆ ತಾವು ವಿಫಲ ರಾಜಕಾರಣಿಗಳೆಂದು ಸಾಬೀತು ಪಡಿಸಿದ್ದಾರೆ ಎಂದು ಹೇಳಿದ ಅವರು ಈಗಲಾದರೂ ಕಾಲ ಮಿಂಚಿಲ್ಲ, ಜಿಲ್ಲೆಗೆ ಆದ ಅನ್ಯಾಯವನ್ನು ಸರಿಪಡಿಸಿ ಕೂಡಲೇ 371 ಜೆ ಮೀಸಲಾತಿಯನ್ನು ಜಾರಿಗೊಳಿಸಬೇಕೆಂದು ಆಗ್ರಹಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಡಾ.ಬಿ.ಆರ್.ಅಂಬೇಡ್ಕರ್ ಅವರ ಬದುಕು ಮತ್ತು ಸಾಧನೆಗಳ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮ

ವಿಜಯಪುರ : ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ‘ಡಾ:ಅಂಬೇಡ್ಕರ್ ಓದು’ ಎಂಬ ಡಾ.ಬಿ.ಆರ್.ಅಂಬೇಡ್ಕರ್ ಅವರ ಬದುಕು ಮತ್ತು ಸಾಧನೆಗಳ ಕುರಿತ ವಿಶೇಷ ಉಪನ್ಯಾಸ ನಗರದ ಎ.ಎಸ್.ಪಾಟೀಲ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಶುಕ್ರವಾರ ಜರುಗಿತು.

ಕಾರ್ಯಕ್ರಮವನ್ನು ಅಪರ ಜಿಲ್ಲಾಧಿಕಾರಿಗಳಾದ ಸೋಮಲಿಂಗ ಗೆಣ್ಣೂರ ಅವರು ಉದ್ಘಾಟಿಸಿ ಅಂಬೇಡ್ಕರ್ ಅವರ ಬದುಕು, ಸಾಧನೆಗಳ ಕುರಿತು ಅವರು ಮಾತನಾಡಿದರು. 

ವಿಶೇಷ ಉಪನ್ಯಾಸ ನೀಡಿದ ಡಾ.ಮಾಧವ ಎಸ್.ಗುಡಿ ಅವರು, ಅಪಾರ ಪಾಂಡಿತ್ಯ ಹಾಗೂ ಬಹುಮುಖ ವ್ಯಕ್ತಿತ್ವ ಹೊಂದಿದ್ದ ಡಾ. ಅಂಬೇಡ್ಕರ್ ಅವರು, ರೈತರು, ಮಹಿಳೆಯರು, ಕಾರ್ಮಿಕರು ಹಾಗೂ ದುರ್ಬಲ ವರ್ಗಗಳ ಏಳಿಗೆಗೆ ನಿರಂತರ ಹೋರಾಟ ಮಾಡಿ, ಎಲ್ಲರಿಗೂ ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯ ದೊರಕಿಸಲು ಶ್ರಮಿಸಿದರು ಎಂದು ಹೇಳಿದರು. 

ಶಾಲೆಯ ಪ್ರಾಂಶುಪಾಲರಾದ ಬಿ.ಎಸ್.ಬೆಳಗಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಸಾಧನೆಗಳ ಕುರಿತು ಕಾಲೇಜ್ ವಿದ್ಯಾರ್ಥಿಗಳಿಗೆ ರಸಪ್ರಶ್ನೆ, ಪ್ರಬಂಧ, ಆಶು ಭಾಷಣ, ಕವನವಾಚನ ಸ್ಪರ್ಧೆ ಏರ್ಪಡಿಸಿ, ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. 

ಕಾರ್ಯಕ್ರಮದಲ್ಲಿ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜ್, ಎಕ್ಸಲೆಂಟ್ ವಿಜ್ಞಾನ ಪದವಿ ಪೂರ್ವ ಕಾಲೇಜ್, ವಿ.ಬಿ.ದರಬಾರ ಸಂಯುಕ್ತ ಪದವಿಪೂರ್ವ ಕಾಲೇಜ್ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಸಂತೊಷ ಭೋವಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಕುಮಾರಿ ಶೃತಿ ಮೇಲಿನಮನಿ ಸುಗಮ ಸಂಗೀತ ಗಾಯನ ಪ್ರಸ್ತುತಪಡಿಸಿದರು. ಶರಣಗೌಡ ಪಾಟೀಲ ವಂದಿಸಿದರು. ಡಾ.ಸುಭಾಶಚಂದ್ರ ಕನ್ನೂರ ನಿರೂಪಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Thursday, February 27, 2025

ಅತೀ ಹೆಚ್ಚು ಫಲಿತಾಂಶ ನೀಡುವಲ್ಲಿ ನಮ್ಮ ಗೆಲುವಿನ ಯಾತ್ರೆ ಮತ್ತೆ ಮುಂದುವರಿದಿದೆ:ಬಸವರಾಜ ಕೌಲಗಿ ಕಿತ್ತೂರು ಸೈನಿಕ ಶಾಲೆಗೆ ಎಕ್ಸಲಂಟ್‌ನ 74 ವಿದ್ಯಾರ್ಥಿಗಳು ಆಯ್ಕೆ

ವಿಜಯಪುರ: ಪ್ರತಿವರ್ಷವೂಕೂಡರಾಜ್ಯದಲ್ಲಿಅತೀ ಹೆಚ್ಚು ಪ್ರಮಾಣದ ವಿದ್ಯಾರ್ಥಿಗಳನ್ನು ಸೈನಿಕ, ಕಿತ್ತೂರು, ನವೋದಯ, ಆರ್‌ಎಂಎಸ್ ಸೇರಿದಂತೆ ಹತ್ತಾರು ಶಾಲೆಗಳಿಗೆ ಅತೀ ಹೆಚ್ಚು ವಿದ್ಯಾರ್ಥಿಗಳು ಆಯ್ಕೆ ಮಾಡಿಸುವಎಕ್ಸಲಂಟ್‌ಕೋಚಿAಗ್ ಕ್ಲಾಸಿಸ್ ತನ್ನ ಸಾಧನೆಯ ವೇಗವನ್ನು ಹಾಗೆ ಮುಂದುವರಿಸಿದ್ದು2025-26 ನೇ ಸಾಲಿಗಾಗಿ ಕಿತ್ತೂರುರಾಣಿಚೆನ್ನಮ್ಮ ಬಾಲಕಿಯರ ಸೈನಿಕ ಶಾಲೆಯ 6ನೇ ತರಗತಿಯ ಪ್ರವೇಶಕ್ಕಾಗಿ ನಡೆಸಿದ ಪರೀಕ್ಷೆಯಲ್ಲಿ ನಮ್ಮ ಸಂಸ್ಥೆಯ 74 ವಿದ್ಯಾರ್ಥಿಗಳು ಆಯ್ಕೆಯಾಗಿದ್ದುಗುಣಮಟ್ಟದತರಬೇತಿ ನೀಡುವ ಮೂಲಕ ಸ್ಪರ್ಧಾತ್ಮಕಕ್ಷೇತ್ರದಲ್ಲಿ ನಮ್ಮ ಗೆಲುವಿನ ಯಾತ್ರೆ ಹಾಗೇ ಮುಂದುವರಿದಿರುವುದು ಸಂತಸತAದಿದೆಎAದುಎಕ್ಸಲAಟ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕಅಧ್ಯಕ್ಷ ಬಸವರಾಜ ಕೌಲಗಿ ಹೇಳಿದರು.

ಇದೇ ತಿಂಗಳ 2ನೇ ತಾರೀಖಿನಂದುಜರುಗಿದಕಿತ್ತೂರುರಾಣಿಚೆನ್ನಮ್ಮ ಸೈನಿಕ ಶಾಲೆಯ ಪರೀಕ್ಷೆಯಲ್ಲಿಆಯ್ಕೆಯಾದ ವಿದ್ಯಾರ್ಥಿಗಳ ಕುರಿತು ಸಂತಸ ಹಂಚಿಕೊAಡಅವರು; ನಮ್ಮ ಸಂಸ್ಥೆ ಪ್ರಾರಂಭಗೊAಡಾಗಿನಿAದಲೂ ಯಶಸ್ಸಿನ ಹಾದಿಯಲ್ಲಿ ಹೆಜ್ಜೆ ಹಾಕುತ್ತ ಸಾಗುತ್ತಿದೆ. ಈ ಕಾರಣದಿಂದಲೇರಾಜ್ಯದ ಮೂಲೆ ಮೂಲೆಗಳಿಂದ ನಮ್ಮ ಮೇಲೆ ಭರವಸೆ ಇರಿಸಿ ಪಾಲಕರುತಮ್ಮ ಮಕ್ಕಳನ್ನು ನಮ್ಮಲ್ಲಿತರಬೇತಿಪಡೆದಯುವುದಕ್ಕೆ ಕಳುಹಿಸುತ್ತಿದ್ದಾರೆ. ಅದೇರೀತಿ ನಮ್ಮ ಸಂಸ್ಥೆಯೂ ಸಹ ಪಾಲಕರ ನಿರೀಕ್ಷೆಯನ್ನು ಹುಸಿಗೊಳಿಸದೇ ಸದಾಧನಾತ್ಮಕಫಲಿತಾಂಶ ನೀಡುತ್ತಲೇ ಬಂದಿದ್ದುಅದರ ಮುಂದುವರಿದ ಭಾಗವಾಗಿಇಂದು ಈ ಫಲಿತಾಂಶ ಪ್ರಕಟವಾಗಿದೆ. ಕೆಲವೇ ದಿನಗಳ ಹಿಂದೆರಾಷ್ಟಿçÃಯ ಮಿಲಟರಿ ಶಾಲೆಯಆಯ್ಕೆ ಪ್ರಕ್ರಿಯೆಯಲ್ಲಿ ಹೆಚ್ಚು ವಿದ್ಯಾರ್ಥಿಗಳನ್ನು ನೀಡಿದ ಸಂತಸದಲ್ಲಿರುವಾಗಲೇ ಈಗ ಬಂದಿರುವ ಫಲಿತಾಂಶ ನಮ್ಮ ಮೇಲೆ ಮತ್ತಷ್ಟುಜವಾಬ್ದಾರಿಯನ್ನು ಹೆಚ್ಚಿಸಿದೆ. ಇದರಿಂದಾಗಿಇನ್ನೂ ಪಾಲಕರ ನಿರೀಕ್ಷೆ ಹೆಚ್ಚಾಗುತ್ತದೆ. ಆ ಕಾರಣದಿಂದಾಗಿಯೇ ಮುಂದಿನ ದಿನಗಳಲ್ಲಿ ಪಾಲಕರ ನಿರೀಕ್ಷೆಗೆತಕ್ಕಂತೆಇನ್ನೂ ಹೆಚ್ಚಿನತರಬೇತಿಯನ್ನು ನೀಡಿ ಮತ್ತಷ್ಟುಮಕ್ಕಳುಆಯ್ಕೆಯಾಗುವಂತೆ ಮಾಡಲಾಗುತ್ತದೆ. ಇಂಥಹ ಅಮೋಘ ಫಲಿತಾಂಶ ಬರುವಲ್ಲಿ ನೆರವಾದಎಲ್ಲ ಬೋಧಕ ಬೋಧಕೇತರ ಸಿಬ್ಬಂದಿಗಳಿಗೆ ಸಂಸ್ಥೆಯ ಸರ್ವ ಸದಸ್ಯರ ಪರವಾಗಿಅನಂತ ಅಭಿನಂದನೆಗಳನ್ನು ಸಲ್ಲಿಸುವುದರಜೊತೆಗೆಆಯ್ಕೆಯಾದಎಲ್ಲ ಮಕ್ಕಳಿಗೆ ಶುಭ ಹಾರೈಸಿದರು.

ಸಂಸ್ಥೆಯ ವಿದ್ಯಾರ್ಥಿಗಳಾದದೀಪ್ತಿ ಎನ್. ಹೋನ್ನಮನಿ, ಖುಷಿ ಪಿ. ರಾಠೋಡ, ಭಕ್ತಿಬಿ. ಬಿರಾದಾರ, ಸ್ಫೂರ್ತಿಪಿ. ಶೇಡಬಳಕರ, ನಿಹಾರಿಕಾಆರ್. ಮಾಲೋಜಿ, ನವ್ಯಾಎನ್. ಕೋಣ್ಣೂರ, ಶ್ರೇಯಾಎಸ್. ತಳವಾರ, ವೈಷ್ಣವಿ ಎಮ್. ಸಂಖ, ಅಕ್ಷರಾವ್ಹಿ. ಕಂಠಿ, ಸಿಂಚನಾ ಎ. ಮುನವಳ್ಳಿ, ಅನನ್ಯಾಜೆ. ಬಸುತ್ಕರ, ಶ್ರೀನಿಧಿ ಎಸ್. ಪತ್ತಾರ, ಶ್ರಾವಣಿಎಸ್. ಸುಂಬದ, ಆರಾಧ್ಯಾಎಮ್. ಪೂಜಾರಿ, ಶಾಂತಾಬಿ. ಬಿರಾದಾರ, ಸಿಂಚನಾ ಬಿ. ಹಿರೇಮಠ, ಆರಾಧ್ಯಾಆರ್. ನಂದಗಾAವಿ, ಪ್ರನೂಷಾವ್ಹಿ. ಪಾಟೀಲ, ಸನ್ನಿಧಿಎಮ್. ಪಾಟೀಲ, ನಿಧಿ ಎಸ್. ಪಾಟೀಲಉತ್ತಮ ಅಂಕಗಳನ್ನು ಪಡೆದುಅತ್ತುö್ಯತ್ತಮ ಸಾಧನೆಗೈದಿದ್ದಾರೆ. ಸಂಸ್ಥೆಯ ಆಡಳಿತ ಮಂಡಳಿಯ ಸರ್ವ ಸದಸ್ಯರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಆಯ್ಕೆಯಾದ ಮಕ್ಕಳಿಗೆ ಶುಭಾಷಯಗಳನ್ನು ಸಲ್ಲಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು

Tuesday, February 25, 2025

26-02-2025 EE DIVASA KANNADA DAILY NEWS PAPER

ಕನಿಷ್ಟ ವೇತನ ಮರು ಪರಿಶೀಲಿಸಲು ಒತ್ತಾಯಿಸಿ ಪ್ರತಿಭಟನೆ

ಬೆಂಗಳೂರು : ಗುತ್ತಿಗೆ ಶುಶೂಷಾಧಿಕಾರಿಗಳ ಕನಿಷ್ಟ ವೇತನವನ್ನು "ಮರು ಪರಿಶೀಲಿಸಿ ಪರೀಷ್ಕರಣೆ ಮಾಡುವಂತೆ ಒತ್ತಾಯಿಸಿ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರಿಗೆ ಬೆಂಗಳೂರಿನ ಪ್ರೀಡಂಪಾರ್ಕನಲ್ಲಿ ಕರ್ನಾಟಕ ರಾಜ್ಯ ಗುತ್ತಿಗೆ ಶುಶ್ರೂಷಾಧಿಕಾರಿಗಳ ನೌಕರರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ, ಕಾರ್ಮಿಕ ಸಚಿವರಿಗೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೆವೆಗಳ ಆಯುಕ್ತರಿಗೆ ಮನವಿ ಸಲ್ಲಿಸಿದರು.

 ಈ ಸಂದರ್ಭದಲ್ಲಿ ಶುಶ್ರೂಷಕ ಸತೀಶ ಸವನಳ್ಳಿ ಮಾತನಾಡಿ, ದಿನಾಂಕ: 13-01-2023 ರಂದು ತಮ್ಮ ಇಲಾಖೆಯಿಂದ ಎಲ್ಲಾ ನೌಕರರಿಗೂ ಕನಿಷ್ಠ ವೇತನ ಕಾಯ್ದೆ ಜಾರಿಯಾಗಿರುತ್ತದೆ. ಆದರೆ ಇದರಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಗುತ್ತಿಗೆ ಶುಶ್ರೂಷಾಧಿಕಾರಿಗಳಿಗೆ ಅನ್ಯಾಯವಾಗಿದೆೆ. ಶೂಶ್ರೂಷಾಧಿಕಾರಿಗಳ ಹುದ್ದೆಗೆ ಕನಿಷ್ಠ ವೇತನ 33,450=00 ರೂಗಳಾಗಿದ್ದು ಇದನ್ನು ಈಗಾಗಲೇ ವೈದ್ಯಕೀಯ ಶಿಕ್ಷಣ ಇಲಾಖೆ, ಇ.ಎಸ್.ಐ. ಆಸ್ಪತ್ರೆ ಆರೋಗ್ಯ ಕವಚ 108 ಅಂಬುಲೇನ್ಸ್ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶುಶೂಷಾಧಿಕಾರಿಗಳಿಗೆ ಇತರೆ ಇಲಾಖೆಯ ಗುತ್ತಿಗೆ ಶುಕ್ರೂಷಾಧಿಕಾರಿಗಳ ನೇಮಕಾತಿಯಲ್ಲೂ ಕನಿಷ್ಠ ವೇತನ 37000 ರೂ. ನಿಗಧಿಪಡಿಸಲಾಗಿದೆ. ಅಷ್ಟೇ ಅಲ್ಲದೇ ಆರೋಗ್ಯ ಇಲಾಖೆಯಲ್ಲಿ ಬರುವ ಆಯುಷ್ ವೈದ್ಯಾಧಿಕಾರಿಗಳಿಗೂ ಕೂಡ ಕನಿಷ್ಠ ವೇತನವನ್ನು 46,894.76 ರೂ.ಗಳನ್ನು ನಿಗದಿಪಡಿಸಿ ಆದೇಶಿಸಲಾಗಿದೆ ಎಂದರು. ಕೂಡಲೇ ಪರಿಸ್ಕರಣೆ ಮಾಡಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಆರ್. ರಜಿನಿ, ವಿನೋದ ಹೆಚ್.ಆರ್, ರಘುನಾಥ್ ಎಸ್. ಜೆ, ಅಶ್ವಿನಿ ಟಿ., ಶೈಲಾ ಹುಲಕುಂದ, ಚಿದಾನಂದ ಸುತಾ, ನೀಲಾಬಾಯಿ ಯಾದಗಿ, ಅನೀತಾಕುಮಾರಿ, ವಿನೋದಕುಮಾರ, ಉಮಾದೇವಿ ಆರ್., ಪುಷ್ಪ ಹೆಚ್, ಸುನಿತ ಎಮ್, ಶಾಂತ , ವಿನಾಐಕ್ ಪಿ.ಓ, ಕವಿತಾ ಕೆ., ತಹಸೀನ್ ಎಂ., ಸುಮಯ, ವಾಣಿ, ದಿಲೀಪ್ ಕುಮಾರ್ ಎಂ.ಆರ್., ಹೇಮಾ.ಡಿ, ವಿಜಯಕಲಾ ಕೆ.ಎ, ಜಗದೀಶ ಆರ್., ಕಲ್ಪನಾ ಎನ್., ಕಲಾ ಡಿ.ಕೆ. ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು

ಕರವೇ ಕಾರ್ಯಕರ್ತರ ಬಂಧನ

ಬೆಳಗಾವಿ : ಬಸ್ ನಿರ್ವಾಹಕನ ಮೇಲೆ ಹಲ್ಲೆ ಪ್ರಕರಣ ಹಾಗೂ ಪೋಕ್ಸೋ ಪ್ರಕರಣ ದಾಖಲಿಸಿದ್ದನ್ನು ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಕರವೇ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಿವಿಧ ಸಂಘಟನೆಗಳಿಂದ ನಗರದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಚನ್ನಮ್ಮ ವೃತ್ತದಲ್ಲಿ ಕರವೇ ನಾರಾಯಣಗೌಡರ ಬಣದ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಜಿಲ್ಲಾಧಿಕಾರಿ ಕಚೇರಿಯತ್ತ ಮೆರವಣಿಗೆ ಸಾಗಿದ್ದ ಕರವೇ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ, ಎಂಇಎಸ್, ಶಿವಸೇನೆ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಲವು ಮುಖಂಡರನ್ನು ಪೊಲೀಸರು ವಾಹನದಲ್ಲಿ ತುಂಬಿ ಕರೆದೊಯ್ದಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು

Saturday, February 22, 2025

ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನ ; ಕಸಾಪ ಅಧ್ಯಕ್ಷ ವಾಲಿಕಾರ ನಡೆ ಖಂಡನೆ

ವಿಜಯಪುರ : ಜಿಲ್ಲಾ 20ನೇ ಕನ್ನಡ ಸಾಹಿತ್ಯ ಸಮ್ಮೇಳನ ಆಮಂತ್ರಣದಲ್ಲಿ ಮುದ್ದೇಬಿಹಾಳ ತಾಲೂಕಾ ಅಧ್ಯಕ್ಷ ಕಾಮರಾಜ ಬಿರಾದಾರ ಹೆಸರು ಕೈಬಿಟ್ಟು ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲೀಕಾರ ಅವರು ಸಣ್ಣತನ ತೋರಿದ್ದಾರೆ ಎಂದು ಮುದ್ದೇಬಿಹಾಳ ತಾಲೂಕಿನ ಸಾಹಿತಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮುದ್ದೇಬಿಹಾಳ ಪಟ್ಟಣದಲ್ಲಿ ಕರೆದ ಸಾಹಿತಿಗಳ ಸಭೆಯಲ್ಲಿ ವಾಲಿಕಾರ ನಡೆಯನ್ನು ಖಂಡಿಸಿದ್ದಾರೆ. ರಾಜ್ಯವೇ ತಿರುಗಿ ನೋಡುವಂತೆ ತಾಲೂಕಾ 5 ನೇ ಸಾಹಿತ್ಯ ಸಮ್ಮೇಳನ ಯಶಸ್ವಿಗೊಳಿಸಿದ ಕಾಮರಾಜ ಬಿರಾದಾರ ಅವರ ಹೆಸರನ್ನು ಕೈಬಿಡುವ ಮೂಲಕ ಜಿಲ್ಲಾಧ್ಯಕ್ಷ ಸ್ವಜನ ಪಕ್ಷಪಾತ ಮೆರೆದಿದ್ದಾರೆ. ಜಿಲ್ಲಾ ಸಮ್ಮೇಳನದಲ್ಲಿ ತಾಲೂಕಿನ ಸಾಹಿತಿಗಳು ಮತ್ತು ಸಂಘಟಕರ ಹೆಸರುಗಳನ್ನು ಪರಿಗಣಿಸುವಲ್ಲೂ ತಾಲೂಕಾ ಅಧ್ಯಕ್ಷರ ಶಿಪಾರಸ್ಸುಗಳನ್ನು ಪಡೆಯದೇ ತಮ್ಮ ಇಷ್ಟದಂತೆ ವರ್ತಿಸಿ ತಾಲೂಕಿನ ಸಾಹಿತಿಗಳಿಗೆ ಅವಮಾನ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಭೆಯಲ್ಲಿ ಹಿರಿಯ ಸಾಹಿತಿಗಳಾದ ಅಶೋಕಮಣಿ, ಅಬ್ದುಲ್ ರೆಹಮಾನ ನಾಯ್ಕೋಡಿ, ಐ.ಬಿ.ಹಿರೇಮಠ, ರುದ್ರೇಶ ಕಿತ್ತೂರ, ಎಂ.ಬಿ.ಗುಡಗುAಟಿ, ಸಿದ್ದನಗೌಡ ಬಿಜ್ಜೂರ, ಹುಸೇನಮುಲ್ಲಾ ಕಾಳಗಿ, ಸಂಗಮೇಶ ಶಿವಣಗಿ, ಬಸವರಾಜ ನಾಲತವಾಡ, ವೈ.ಎಚ್.ವಿಜಯಕರ, ಜಹಾಂಗೀರ ಮುಲ್ಲಾ, ಸಿದ್ದಣ್ಣ ಹಡಲಗೇರಿ, ಶಿವಪುತ್ರ ಅಜಮನಿ ಮುಂತಾದವರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Friday, February 21, 2025

ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಕ್ಕೆ ಅವಕಾಶ : ಜಿಲ್ಲಾ ನ್ಯಾಯಾಧೀಶ ಶಿವಾಜಿ ನಲವಡೆ

ವಿಜಯಪುರ: ಜಿಲ್ಲೆಯಾದ್ಯಂತ ಇರುವ ಎಲ್ಲ ಅಧೀನ ನ್ಯಾಯಾಲಯಗಳಲ್ಲಿ ಮಾರ್ಚ್-08 ರಂದು ರಾಷ್ಟಿçÃಯ ಲೋಕ್ ಅದಾಲತ್ ಆಯೋಜಿಸಲಾಗಿದ್ದು, ಈ ಅದಾಲತ್‌ನಲ್ಲಿ ಕಕ್ಷಿದಾರರು ಭಾಗವಹಿಸಿ ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಕ್ಕೆ ಅವಕಾಶವಿರುವುದರಿಂದ ಈ ಅದಾಲತ್ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಶಿವಾಜಿ ಅನಂತ ನಲವಡೆ ತಿಳಿಸಿದರು.

ನಗರದಲ್ಲಿ ಹಮ್ಮಿಕೊಂಡ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟಿçÃಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಎಲ್ಲ ವರ್ಗದ ಕಕ್ಷಿದಾರರಿಗೆ ಅನುಕೂಲವಾಗುವ ದೃಷ್ಟಿಯಿಂದ ಜಿಲ್ಲಾ ಕೇಂದ್ರ ಹಾಗೂ ಜಿಲ್ಲೆಯ ಎಲ್ಲ ತಾಲೂಕಾ ನ್ಯಾಯಾಲಯಗಳಲ್ಲಿ ಮಾರ್ಚ್ 08 ರಂದು ರಾಷ್ಟಿçÃಯ ಲೋಕ್ ಅದಾಲತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಲೋಕ್ ಅದಾಲತ್ ಕಾರ್ಯಕ್ರಮದಲ್ಲಿ ರಾಜಿ ಸಂಧಾನಕ್ಕೆ ಒಳಪಡಬಹುದಾದ ವ್ಯಾಜ್ಯ ಪೂರ್ವ ಪ್ರಕರಣಗಳು, ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕ, ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಮತ್ತು ಇತರೆ ಸಿವಿಲ್ ಪ್ರಕರಣಗಳು, ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬAಧಪಟ್ಟ ಪ್ರಕರಣಗಳು (ರೇರಾ), ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು (ಡಿಆರ್‌ಟಿ), ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್‌ಸಿ), ಕಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳು, ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಕಾರ್ಮಿಕ ವಿವಾದಗಳು, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬAಧಿಸಿದ ಸೇವಾ ಪ್ರಕರಣಗಳು, ಪಿಂಚಣಿ ಪ್ರಕರಣಗಳು, ಕಂದಾಯ ಪ್ರಕರಣಗಳು ರಾಜಿಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ರಾಷ್ಟಿçÃಯ ಲೋಕ್ ಅದಾಲತ್‌ನಲ್ಲಿ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದು ಹೇಳಿದರು.

ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ದಿನಾಂಕ: 01-02-2025ಕ್ಕೆ 44,783 ಸಿವಿಲ್ ಪ್ರಕರಣಗಳು ಹಾಗೂ 23,678 ಕ್ರಿಮಿನಲ್ ಪ್ರಕರಣಗಳು ಒಳಗೊಂಡAತೆ ಒಟ್ಟು 68,461 ಪ್ರಕರಣಗಳು ವಿಚಾರಣೆಗೆ ಬಾಕಿ ಇದ್ದು, ಇವುಗಳಲ್ಲಿ ಈಗಾಗಲೇ 4,330 ಸಿವಿಲ್ ಪ್ರಕರಣಗಳು ಹಾಗೂ 3,579 ಕ್ರಿಮಿನಲ್ ಪ್ರಕರಣಗಳು ಸೇರಿದಂತೆ ಒಟ್ಟು 7,909 ಪ್ರಕರಣಗಳನ್ನು ಇತ್ಯರ್ಥಕ್ಕಾಗಿ ಗುರುತಿಸಲಾಗಿದೆ. ಸಂಬAಧಿಸಿದ ವಕೀಲರು ಹಾಗೂ ಕಕ್ಷಿದಾರರೊಂದಿಗೆ ಮಾತುಕತೆಯ ಮೂಲಕ ಇನ್ನೂ ಹೆಚ್ಚಿನ ಪ್ರಕರಣಗಳನ್ನು ಸಹ ರಾಜಿಗಾಗಿ ಗುರುತಿಸಲಾಗುತ್ತಿದೆ. ಇನ್ನೂ ಹೆಚ್ಚಿನ ಪ್ರಕರಣಗಳು ರಾಷ್ಟಿçÃಯ ಲೋಕ ಅದಾಲತ್‌ನಲ್ಲಿ ಇತ್ಯರ್ಥಗೊಳ್ಳುವ ನಿರೀಕ್ಷೆ ಇದೆ ಎಂದು ಅವರು ತಿಳಿಸಿದರು. 

ಜಿಲ್ಲೆಯಲ್ಲಿ ಮಾರ್ಚ್ 08 ರಂದು ಜರುಗುವ ರಾಷ್ಟಿçÃಯ ಲೋಕ್ ಅದಾಲತ್‌ನಲ್ಲಿ ಕಕ್ಷಿದಾರರು ತಮ್ಮ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಂಡು ನೆಮ್ಮದಿಯ ಜೀವನಕ್ಕೆ ನಾಂದಿ ಹಾಡಲು ಸುವರ್ಣಾವಕಾಶ ಕಲ್ಪಿಸಿದ್ದು, ಇದರ ಸದುಪಯೋಗ ಪಡೆದುಕೊಳ್ಳುವಂತೆ ಅವರು ತಿಳಿಸಿದರು. 

ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಎಸ್ ಹಾಗರಗಿ, ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷರಾದ ಡಿ.ಜಿ.ಬಿರಾದಾರ ಹಾಗೂ ಜಿಲ್ಲಾ ನ್ಯಾಯವಾದಿಗಳ ಸಂಘದ ಕಾರ್ಯದರ್ಶಿಗಳಾದ ಎಸ್.ಎಸ್. ಚೂರಿ ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

22-02-2025 EE DIVASA KANNADA DAILY NEWS PAPER

Thursday, February 20, 2025

ಪ್ರಪ್ರಥಮ ವೈದ್ಯಸಂಗಮ : ಫೆ.22 ಕ್ಕೆ ವಿಜಯಪುರದಲ್ಲಿ ಸರ್ಕಾರಿ ವೈದ್ಯಾಧಿಕಾರಿಗಳ ರಾಜ್ಯಮಟ್ಟದ ಸಮ್ಮೇಳನ

ವಿಜಯಪುರ : ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ 31ನೇ ರಾಜ್ಯಮಟ್ಟದ ಸಮ್ಮೇಳನವನ್ನು ಈ ಬಾರಿ ಶರಣ ನಾಡು ವಿಜಯಪುರ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಫೆಬ್ರುವರಿ 22 ಮತ್ತು 23 ಎರಡು ದಿನಗಳ ಕಾಲ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಬೆಳಿಗ್ಗೆ 12.30 ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ಡಾ.ಸಿ.ಎಂ.ತಾಳಿಕೋಟಿ ತಿಳಿಸಿದರು.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ 30 ವರ್ಷಗಳ ಇತಿಹಾಸದಲ್ಲಿ ಇದೇ ಪ್ರಪ್ರಥಮ ಬಾರಿಗೆ ವಿಜಯಪುರದಲ್ಲಿ ಸರ್ಕಾರಿ ವೈದ್ಯಾಧಿಕಾರಿಗಳ ರಾಜ್ಯಮಟ್ಟದ ಸಮ್ಮೇಳನ ಹಮ್ಮಿಕೊಳ್ಳಲು ಕೇಂದ್ರ ಸಮಿತಿ ಸಮ್ಮತಿಸಿದೆ. ರಾಜ್ಯದ ಯಾವುದೇ ವೈದ್ಯಾಧಿಕಾರಿಗೆ ತೊಂದರೆಯಾದರೆ ಅವರ ಬೆನ್ನಿಗೆ ನಿಂತು ಸಹಕಾರ ನೀಡಿ ಸಮಸ್ಯೆ ಬಗೆಹರಿಸುವ ಹಾಗೂ ವೈದ್ಯಾಧಿಕಾರಿಗಳ ಹಿತಪರ ಸಂಘಟನಾತ್ಮಕವಾಗಿ ಧ್ವನಿಯಾಗಲು ಸಂಘ ರಚಿಸಿಕೊಂಡಿದ್ದೇವೆ ಎಂದರು. 

ಪ್ರತಿ ಎರಡು ವರ್ಷಗಳಿಗೊಮ್ಮೆ ಒಂದೊಂದು ಜಿಲ್ಲೆ ಆಯ್ಕೆ ಮಾಡಿ ಸರ್ಕಾರಿ ವೈದ್ಯಾಧಿಕಾರಿಗಳ ರಾಜ್ಯ ಸಮ್ಮೇಳನ ನಡೆಸಲಾಗುವುದು. ಕಳೆದ 2022 ರ ರಾಜ್ಯ ಸಮ್ಮೇಳನ ತುಮಕೂರಿನಲ್ಲಿ ಹಾಗೂ 2018 ರ ಸಮ್ಮೇಳನ ದಾವಣಗೆರೆಯಲ್ಲಿ ಅಗಿತ್ತು. ಕೋವಿಡ್ ಹಿನ್ನೆಲೆ ನಾಲ್ಕು ವರ್ಷ ಸಮ್ಮೇಳನ ಮಾಡಿರಲಿಲ್ಲ. ಈ‌ ಬಾರಿ ವಿಜಯಪುರದಲ್ಲಿ ಹಮ್ಮಿಕೊಂಡಿರುವ ವೈದ್ಯಾಧಿಕಾರಿಗಳ ರಾಜ್ಯ ಸಮ್ಮೇಳನಕ್ಕೆ ಆರೋಗ್ಯ ಸಚಿವ ದಿನೇಶ ಗುಂಡುರಾವ್, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ, ಜವಳಿ, ಸಕ್ಕರೆ ಹಾಗೂ ಎಪಿಎಂಸಿ ಸಚಿವ ಶಿವಾನಂದ ಪಾಟೀಲ, ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸೇರಿದಂತೆ ಸಂಸದರು, ಎಲ್ಲಾ ಶಾಸಕರು,  ಆರೋಗ್ಯ ಇಲಾಖೆಯ ಎಲ್ಲಾ ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ ಎಂದರು.

ಫೆ. 22 ಶನಿವಾರ ಬೆಳಿಗ್ಗೆ ಸಮ್ಮೇಳನ ಉದ್ಘಾಟನೆ ನಡೆಯಲಿದೆ. ನಂತರ ಇತ್ತಿಚಿನ ವೈದ್ಯಕೀಯ ಬೆಳವಣಿಗೆಗಳು, ವಿಚಾರಗಳ ಬಗ್ಗೆ ತಜ್ಞ ವೈದ್ಯರುಗಳಿಂದ ಎರಡೂ ದಿನ ಒಟ್ಟು 12 ವೈದ್ಯಕೀಯ ಶಿಕ್ಷಣ ಕಾರ್ಯಾಗಾರಗಳು ಜರುಗಲಿವೆ. ಫೆ.23 ರಂದು ರಂಗಮಂದಿರ ಎದುರಿನ ದರ್ಬಾರ್ ಹೈಸ್ಕೂಲ್ ಮೈದಾನದಲ್ಲಿ ನಮ್ಮ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ 2027 ನೇ ಸಾಲಿನ ಎರಡು ವರ್ಷಗಳ ಅವಧಿಗೆ ಚುನಾವಣೆ ನಡೆಯಲಿದೆ. 2022 ರ ತುಮಕೂರ ಚುನಾವಣೆಯಲ್ಲಿ ನೇಮಕವಾದ ಡಾ.ರವಿಂದ್ರನಾಥ್ ಮೇಟಿಯವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಡಾ‌. ತಾಳಿಕೋಟಿ ತಿಳಿಸಿದರು.

ಡಿಹೆಚ್ಓ ಡಾ.ಸಂಪತ್ ಗುಣಾರಿ ಮಾತನಾಡಿ, ಪ್ರಥಮ ಬಾರಿಗೆ ವಿಜಯಪುರದಲ್ಲಿ ಹಮ್ಮಿಕೊಂಡಿರುವ  ಸರ್ಕಾರಿ ವೈದ್ಯಾಧಿಕಾರಿಗಳ ರಾಜ್ಯ ಸಮ್ಮೇಳನಕ್ಕೆ ರಾಜ್ಯಾದ್ಯಂತ ಕನಿಷ್ಠ ಮೂರು ಸಾವಿರ ವೈದ್ಯಾಧಿಕಾರಿಗಳು ಕುಟುಂಬ ಸಮೇತರಾಗಿ ಈ ಸಮ್ಮೇಳನಕ್ಕೆ ಆಗಮಿಸಲಿದ್ದಾರೆ.  ಸಮ್ಮೇಳನದಲ್ಲಿ ವಿವಿಧ ವಿಭಾಗಗಳಲ್ಲಿ ಸಾಧಕ ವೈದ್ಯರುಗಳಿಗೆ ಒಂದು ವೈದ್ಯರತ್ನ, 2 ವೈದ್ಯವಿಭೂಷಣ ಹಾಗೂ ಪ್ರತಿ ಜಿಲ್ಲೆಗೊಂದರಂತೆ ವೈದ್ಯಶ್ರೀ ಪ್ರಶಸ್ತಿಗಳನ್ನು ನೀಡಲಾಗುವುದು. ಜೊತೆಗೆ ಉತ್ತಮ ಅಧ್ಯಕ್ಷ, ಉತ್ತಮ ಕಾರ್ಯದರ್ಶಿ ಹಾಗೂ ಉತ್ತಮ ಶಾಖೆ ಪ್ರಶಸ್ತಿಗಳನ್ನು ಸಹ ನೀಡಿ ಪ್ರೋತ್ಸಾಹಿಸಲಾಗುವುದು. ಈ ಎಲ್ಲಾ ಪ್ರಶಸ್ತಿಗಳಿಗಾಗಿ ಕೇಂದ್ರ ಸಮಿತಿಯ ಸಾಧಕ ವೈದ್ಯರನ್ನು ಗುರುತಿಸಿ ಪ್ರಶಸ್ತಿಗೆ ನೇಮಕ ಮಾಡುತ್ತದೆ ಎಂದು ತಿಳಿಸಿದರು.

ಕಾರ್ಯಾಗಾರಗಳಲ್ಲಿ ನಮ್ಮ‌ ವೈದ್ಯಾಧಿಕಾರಿಗಳ ಸಮಸ್ಯೆಗಳಿಗೆ ಪರಿಹಾರಾತ್ಮಕ ಚಿಂತನೆಗಳ ಜೊತೆಗೆ ವೈದ್ಯಕೀಯ ಕ್ಷೇತ್ರದಲ್ಲಿ ಅಧುನಿಕ ತಂತ್ರಜ್ಞಾಧಾರಿತ ಅತ್ಯುತ್ತಮ ಆರೋಗ್ಯ ಸೇವೆ ಒದಗಿಸುವ ಹಾಗೂ ಸಾರ್ವಜನಿಕ ಆರೋಗ್ಯ ಕಾರ್ಯಕ್ರಮಗಳನ್ನು ಪರಿಣಾಮಕಾರಿ ಅನುಷ್ಠಾನಗೊಳಿಸುವ ಬಗ್ಗೆಯೂ ಚಿಂತನೆಗಳು ನಡೆಯುತ್ತವೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಶಿವಾನಂದ ಮಾಸ್ತಿಹೊಳಿ ತಿಳಿಸಿದರು.

ಈ ವೇಳೆ ವೈದ್ಯಾಧಿಕಾರಿಗಳ ಸಮ್ಮೇಳನ ಸಮಿತಿಯ ಛೇರ್ಮನ್, ಡಿಹೆಚ್ಓ ಡಾ.ಸಂಪತ್ ಗುಣಾರಿ, ಸಹ ಛೆರ್ಮನ್ ಡಾ.ಶಿವಾನಂದ ಮಾಸ್ತಿಹೊಳಿ, ಖಜಾಂಜಿ ಡಾ. ಸಂತೋಷ ಶೆಟ್ಟಿ, ಮಾಜಿ ಜಿಲ್ಲಾಧ್ಯಕ್ಷ ಡಾ.ಕೇಸರಸಿಂಗ್ ಗುಂಡಬಾವಡಿ, ಡಿಟಿಓ ಡಾ.ಮಲ್ಲನಗೌಡ ಬಿರಾದಾರ, ಸಂಘಟನಾ ಕಾರ್ಯದರ್ಶಿ ಡಾ.ಕೃಷ್ಣಕುಮಾರ ಜಾಧವ, ಪದಾಧಿಕಾರಿ ಡಾ.ಅನಿಲ ರಾಠೋಡ ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

21-02-2025 EE DIVASA KANNADA DAILY NEWS PAPER

Tuesday, February 18, 2025

19-02-2025 EE DIVASA KANNADA DAILY NEWS PAPER

ಸರ್ಕಾರದ ಯೋಜನೆಗಳ ಲಾಭ ದೊರಕಿಸಿ ಅಲೆಮಾರಿ ಸಮುದಾಯವನ್ನು ಮುಖ್ಯವಾಹಿನಿಗೆ ತರಲು ಕ್ರಮ ವಹಿಸಿ : ಅಧ್ಯಕ್ಷೆ ಶ್ರೀಮತಿ ಪಲ್ಲವಿ ಜಿ.

ವಿಜಯಪುರ : ಸ್ವ ಉದ್ಯೋಗ, ವೃತ್ತಿ ಕೌಶಲ್ಯತೆ, ಶಿಕ್ಷಣಕ್ಕೆ ಆದ್ಯತೆ ನೀಡಿ, ಸರ್ಕಾರ ಜಾರಿಗೊಳಿಸಿರುವ ವಿವಿಧ ಆರ್ಥಿಕ ಬೆಂಬಲ ನೀಡುವ ಯೋಜನೆಗಳನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಲೆಮಾರಿ ಜನಾಂಗಕ್ಕೆ ದೊರಕಿಸಲು ಅಧಿಕಾರಿಗಳು ಇಚ್ಛಾಶಕ್ತಿ ಹಾಗೂ ಅಂತಕರಣದಿAದ ಕಾರ್ಯನಿರ್ವಹಿಸಿ ಇಂತಹ ಸಮುದಾಯದವನ್ನು ಮುಖ್ಯವಾಹಿನಿಗೆ ತರಲು ಶ್ರಮಿಸಬೇಕು ಎಂದು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಶ್ರೀಮತಿ ಪಲ್ಲವಿ ಜಿ. ಅವರು ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. 

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಈ ಸಮುದಾಯ ಆರ್ಥಿಕವಾಗಿ ಸದೃಢಗೊಳ್ಳುವುದರೊಂದಿಗೆ ಸಮಾಜದ ಮುಖ್ಯವಾಹಿನಿಗೆ ತರಲು ಅಧಿಕಾರಿಗಳು ಯೋಜನೆಗಳ ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಲೆಮಾರಿ ಸಮುದಾಯಗಳಿಗೆ ಸರ್ಕಾರ ನೀಡುವ ಆರ್ಥಿಕ ಬೆಂಬಲದ ಯೋಜನೆಗಳ ಬಗ್ಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸೂಕ್ತ ಜಾಗೃತಿ ಮೂಡಿಸುವಂತೆ ಅವರು ಸೂಚನೆ ನೀಡಿದರು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯಗಳ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಹಲವು ಯೋಜನೆಗಳನ್ನು ನೀಡಿದೆ. ಈ ಸಮುದಾಯದ ಜನರಿಗೆ ಸರ್ಕಾರದ ಯೋಜನೆಗಳ ಜಾಗೃತಿ ಅತ್ಯವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಯೋಜನೆಗಳ ಸಂಪೂರ್ಣ ಅರಿವನ್ನು ಜನರಲ್ಲಿ ಮೂಡಿಸಿ, ಅರ್ಹರಿಗೆ ಲಾಭ ದೊರಕಿಸಲು ಕ್ರಮ ವಹಿಸಬೇಕು ಎಂದು ಅವರು ಹೇಳಿದರು. 

ವಿವಿಧ ವಸತಿ ಶಾಲೆಗಳಲ್ಲಿ ಈ ಸಮುದಾಯ ಮಕ್ಕಳಿಗೆ ಆದ್ಯತೆಯ ಮೇರೆಗೆ ಯಾವುದೇ ಪ್ರವೇಶ ಪರೀಕ್ಷೆ ನಡೆಸದೇ ಪ್ರವೇಶಾವಕಾಶ ದೊರಕಿಸಲು ಸರ್ಕಾರ ಅವಕಾಶ ನೀಡಿದ್ದು, ಇದರ ಸದ್ಬಳಕೆಯಾಗಿ ಈ ಸಮುದಾಯದ ಮಕ್ಕಳು ಉನ್ನತ, ಗುಣಮಟ್ಟದ ಶಿಕ್ಷಣ ಪಡೆದುಕೊಂಡು, ಸ್ವಾವಲಂಬಿ ಜೀವನ ನಡೆಸಲು ಈ ಯೋಜನೆಗಳ ಮೂಲಕ ಅನುವು ಮಾಡಿಕೊಡಬೇಕು. ನಿಗಮದಿಂದ ದೊರೆಯುವ ಸರ್ಕಾರದ ಹಲವು ಸೌಲಭ್ಯ-ಸವಲತ್ತುಗಳನ್ನು ಅರ್ಹರಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಿ, ಅರ್ಹರು ಈ ಯೋಜನೆಗಳ ಲಾಭ ಪಡೆದುಕೊಳ್ಳುವಂತೆ ನೋಡಿಕೊಳ್ಳಬೇಕು ಎಂದು ಅವರು ಹೇಳಿದರು.

ಸಮಾಜ ಕಲ್ಯಾಣ ಇಲಾಖೆಯಿಂದ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಯೋಜನೆಗಳ ಕುರಿತು ಸೂಕ್ತ ಅರಿವು ಮೂಡಿಸಬೇಕು. ನಿವೇಶನ ರಹಿತ ಅಲೆಮಾರಿ ಕುಟುಂಬಗಳ ಸರ್ಕಾರಿ ಭೂಮಿಯನ್ನು ಗುರುತಿಸುವ ಕಾರ್ಯ ಕೈಗೊಳ್ಳಬೇಕು. ವಸತಿ ರಹಿತ-ವಸಹಿತರ ಸಮೀಕ್ಷೆ ಕೈಗೊಂಡು ವರದಿ ನೀಡುವಂತೆ ಅವರು ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಯಡಿ ನಿಗದಿಪಡಿಸಲಾದ ಭೌತಿಕ ಗುರಿಗಳಗನುಗುಣವಾಗಿ ವಿವಿಧ ಹಂತಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಆದ್ಯತೆಯ ಮೇಲೆ ಇತ್ಯರ್ಥಪಡಿಸಬೇಕು. ಉದ್ಯಮಶೀಲತಾ ಯೋಜನೆಯಡಿ ಫಲಾನುಭವಿಗಳ ಯೋಜನೆಯನ್ನು ಸಾಕಾರಗೊಳಿಸಬೇಕು. ಈ ಬಗ್ಗೆ ಬ್ಯಾಂಕ್‌ಗಳು ಸಹ ಅಗತ್ಯ ದಾಖಲೆಗಳನ್ನು ಪಡೆದು, ಸ್ವಾವಲಂಬಿ ಜೀವನ ನಡೆಸಲು ಸ್ವ ಉದ್ಯೋಗ ಕೈಗೊಳ್ಳಲು ಸಾಲ-ಸೌಲಭ್ಯ ಒದಗಿಸಲು ಕ್ರಮ ವಹಿಸಬೇಕು ಎಂದು ಅವರು ಸೂಚನೆ ನೀಡಿದರು. 

ಜಿಲ್ಲೆಯಲ್ಲಿ ಮೂರು ದಿನಗಳ ಕಾಲ ಪ್ರವಾಸ ಕೈಗೊಂಡು ಈ ಸಮುದಾಯಗಳ ವಿವಿಧ ಕಾಲನಿಗಳಿಗೆ ಭೇಟಿ ನೀಡಿ, ಕುಂದು-ಕೊರತೆಗಳನ್ನು ಆಲಿಸಲಾಯಿತು. ಕೊಲ್ಹಾರದಲ್ಲಿರುವ ಹರಿಣಶಿಕಾರಿ ಕಾಲನಿ, ಇಂಡಿಯ ಬಬಲಾದಿಯ ಚನ್ನದಾಸರ ಕಾಲನಿ, ಚವಡಿಹಾಳ, ಇಂಡಿ ಪಟ್ಟಣದ ಹರಿಣಶಿಕಾರಿ ಕಾಲನಿ, ಮಾವಿನಹಳ್ಳಿಯ ಚನ್ನದಾಸರ ಕಾಲನಿ, ವಿಜಯಪುರದ ಕುಂಚಿ-ಕೊರವರ ಓಣಿ, ಸಂಜಯ ಗಾಂಧಿ ಕಾಲನಿಯ ಹಂದಿಜೋಗಿ ಸಮುದಾಯದವರು ವಾಸಿಸುತ್ತಿರುವ ಕಾಲನಿಗಳಿಗೆ ಭೇಟಿ ನೀಡಿ, ಅವರ ಕುಂದು ಕೊರತೆಗಳನ್ನು ಆಲಿಸಲಾಗಿದೆ. ಈ ಸಂದರ್ಭದಲ್ಲಿ ಅತಿ ಹೆಚ್ಚು ಮೂಲಭೂತ ಸೌಲಭ್ಯಗಳು ಕಲ್ಪಿಸುವ ಕುಂದು-ಕೊರತೆಗಳಾಗಿದ್ದು, ಈ ನಿಟ್ಟಿನಲ್ಲಿ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ ಅಗತ್ಯ ಕ್ರಮ ವಹಿಸಿ, ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಅವರು ಸೂಚನೆ ನೀಡಿದರು. 

ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸಭೆ, ಕುಂದು-ಕೊರತೆ, ಪ್ರಗತಿ ಪರಿಶೀಲನಾ ಸಭೆಯನ್ನು ಪ್ರತಿ ಮೂರು ತಿಂಗಳಿಗೊಮ್ಮೆ ನಡೆಸಿ, ಈ ಸಮುದಾಯ ಕುಂದು-ಕೊರತೆಗಳನ್ನು ಪರಿಹರಿಸಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು. 

ಸಭೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಲೆಮಾರಿ ಸಮುದಾಯದ ದಾಖಲಾದ ಪ್ರಕರಣಳ ಸ್ಥಿತಿಗತಿ ಕುರಿತು ಪರಿಶೀಲನೆ ನಡೆಸಲಾಯಿತು. 

ಕಾಲೋನಿಗಳಲ್ಲಿ ಗ್ರಂಥಾಲಯ ಬೇಡಿಕೆ :ಪÀರಿಶಿಷ್ಟ ಪಂಗಡದ ಅಲೆಮಾರಿ ಸಮುದಾಯದ ಜನಾಂಗದವರಿAದ ಕಾಲೋನಿಗಳಲ್ಲಿ ಗ್ರಂಥಾಲಯ ಬೇಡಿಕೆ ಸಲ್ಲಿಸಲಾಗಿದ್ದು, ಈ ಕುರಿತು ಸಂತಸ ವ್ಯಕ್ತಪಡಿಸಿದ ಅವರು, ಆದ್ಯತೆಯ ಮೇಲೆ ಈ ಮನವಿಯನ್ನು ಪರಿಗಣಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. 

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಮಾತನಾಡಿ, ಈಗಾಗಲೇ 201 ಗ್ರಂಥಾಲಯಗಳಿದ್ದು, 280 ಮಂಜೂರಾಗಿದ್ದು, ಈ ಸಮುದಾಯದ ಬೇಡಿಕೆಯನ್ನು ಪರಿಶೀಲಿಸಿ ಕ್ರಮ ವಹಿಸಲಾಗುವುದು ಎಂದು ಅವರು ಹೇಳಿದರು. 

ಸಭೆಯಲ್ಲಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪುಂಡಲೀಕ ಮಾನವರ, ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಆನಂದಕುಮಾರ, ಜಿಲ್ಲಾ ಅನುಷ್ಠಾನ ಸಮಿತಿ ಸದಸ್ಯರು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಮುದಾಯದ ಮುಖಂಡರು, ಸಾರ್ವಜನಿಕರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Monday, February 17, 2025

ಬೋರಗಿ ಕೃತಿಗೆ ಕಸಾಪ ದತ್ತಿ ಪ್ರಶಸ್ತಿ

ವಿಜಯಪುರ: ಸಿಂದಗಿ ತಾಲೂಕಿನ ಬೋರಗಿ ಗ್ರಾಮದ ಆರಕ್ಷಕ ಮೌಲಾಲಿ ಆಲಗೂರ ಬರೆದ 'ನಲುಗದಿರಲಿ ಪರಿಸರ' ಶಿಶು ಗೀತೆಗಳ ಸಂಕಲನಕ್ಕೆ ವಸುದೇವ ಭೂಪಾಲಂ ದತ್ತಿ ಪುರಸ್ಕಾರ ದೊರೆತಿದೆ.

ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ವಿವಿಧ 52 ದತ್ತಿ ಪ್ರಶಸ್ತಿಗಾಗಿ ಬರಹಗಾರರಿಂದ 2023ರಲ್ಲಿ ಪ್ರಕಟವಾದ ಕೃತಿಗಳನ್ನು ಆಹ್ವಾನಿಸಿತ್ತು. ಮಕ್ಕಳ ಸಾಹಿತ್ಯ ವಿಭಾಗದಲ್ಲಿ ಮೌಲಾಲಿ ಕೃತಿಗೆ ದತ್ತಿ ಪುರಸ್ಕಾರ ದೊರೆತಿದೆ. ದೇಶ ವಿದೇಶಗಳಿಂದ 4 ಸಾವಿರಕ್ಕೂ ಅಧಿಕ ಕೃತಿಗಳು ಸಲ್ಲಿಕೆಯಾಗಿದ್ದು, 12 ಜನರ ಪರಿಣತರ ಸಮಿತಿ ಆಯ್ಕೆ ಮಾಡಿದ ಪಟ್ಟಿಯನ್ನು ಕಸಾಪ ರಾಜ್ಯಾಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ನೇತೃತ್ವದ ತಂಡ ಪರಿಶೀಲಿಸಿ ಅಂತಿಮ ಪಟ್ಟಿ ಬಿಡುಗಡೆ ಮಾಡಿದೆ. ಶೀಘ್ರದಲ್ಲೇ ದತ್ತಿ ಪ್ರಶಸ್ತಿಗೆ ಆಯ್ಕೆಯಾದ ಬರಹಗಾರರಿಗೂ ಪ್ರಶಸ್ತಿ ಪ್ರದಾನ ಸಮಾರಂಭ ಏರ್ಪಡಿಸಲಾಗು ವುದು ಎಂದು ಕಸಾಪ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೌಲಾಲಿ ಆಲಗೂರ ಅವರಿಗೆ ಪ್ರಶಸ್ತಿ ದೊರೆತಿರುವುದಕ್ಕೆ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿ, ಸಿಬ್ಬಂದಿ ಹಾಗೂ ಸಿಂದಗಿ ಸಾಹಿತ್ಯ ಬಳಗ ಹರ್ಷ ವ್ಯಕ್ತಪಡಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

18-02-2025 EE DIVASA KANNADA DAILY NEWS PAPER

Sunday, February 16, 2025

ಬೆಂಗಳೂರು ವಿವಿ: ಚಲಪತಿ ಕೆ. ಅವರಿಗೆ ಪಿಎಚ್‌.ಡಿ ಪ್ರದಾನ

ಬೆಂಗಳೂರು:  ಬೆಂಗಳೂರು ವಿಶ್ವವಿದ್ಯಾಲಯದ ಯುನಿವರ್ಸಿಟಿ ವಿಶ್ವೇಶ್ವರಯ್ಯ ಕಾಲೇಜ್ ಆಫ್ ಇಂಜಿನಿಯರಿಂಗ್"ನ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಸಂಶೋಧನಾ ವಿದ್ಯಾರ್ಥಿಯಾಗಿರುವ ಚಲಪತಿ ಕೆ. ಅವರಿಗೆ ಪಿಎಚ್.ಡಿ ಪ್ರದಾನ ಮಾಡಲಾಗಿದೆ.

ಬೆಂಗಳೂರು ವಿವಿಯ "ಯುನಿವರ್ಸಿಟಿ ವಿಶ್ವೇಶ್ವರಯ್ಯ ಕಾಲೇಜ್ ಆಫ್ ಇಂಜಿನಿಯರಿಂಗ್"ನ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಸಂಶೋಧನಾ ವಿದ್ಯಾರ್ಥಿ ಚಲಪತಿ ಕೆ. ಅವರು ಯುವಿಸಿಇ, ಸಿವಿಲ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕರಾದ ಡಾ. ಇನಾಯತುಲ್ಲಾ ಎಂ ಇವರ ಮಾರ್ಗದರ್ಶನದಲ್ಲಿ ಮಂಡಿಸಿದ "ಕ್ವಾಂಟೇಟಿವ್ ಅಂಡ್ ಕ್ವಾಲಿಟಿಯೇಟಿವ್ ಅನಾಲಿಸಿಸ್ ಆಫ್ ಸೀಸೊನಾಲ್ ಅಂಡ್ ಸ್ಪೆಷಿಯಲ್ ವೇರಿಯೇಷನ್ಸ್ ಇನ್ ಸರ್ಫೇಸ್ ಅಂಡ್ ಗ್ರೌಂಡ್ ವಾಟರ್ ಅಟ್ ರಿವರ್ ಬೇಸಿನ್ ಸ್ಕೇಲ್" ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಪಿಎಚ್.ಡಿ ಪದವಿ ಪ್ರದಾನ ಮಾಡಲಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.

 ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರ ನ್ಯಾಯಾಲಯ ಉದ್ಘಾಟನೆ

ವಿಜಯಪುರ : ದೇಶದ ಕಾನೂನು ಸುವ್ಯಸ್ಥೆ ನ್ಯಾಯಾಂಗ ಪದ್ದತಿ ಬಹಳ ಬಲಿಷ್ಟವಾಗಿರಬೇಕು ಅದು ಅತ್ಯಗತ್ಯ ಅದು ಸಾಕಾರಗೊಳ್ಳಬೇಕಾದರೆ ನ್ಯಾಯಾಲಯಗಳ ಪಾತ್ರ ಬಹಳ ಮುಖ್ಯ ಎಂದು ಕರ್ನಾಟಕ ಉಚ್ಚ ನ್ಯಾಯಾಲಯ ಹಾಗೂ ವಿಜಯಪುರ ಆಡಳಿತಾತ್ಮಕ ನ್ಯಾಯಮೂರ್ತಿಗಳಾದಾದ ಎಂ.ಐ ಅರುಣ ಹೇಳಿದರು.

ಮುದ್ದೇಬಿಹಾಳ ನಗರದ ಜಿಲ್ಲಾ ನ್ಯಾಯಾಂಗ ಇಲಾಖೆ, ಲೋಕೋಪಯೋಗಿ ಇಲಾಖೆ, ಹಾಗೂ ನ್ಯಾಯವಾದಿಗಳ ಸಂಘ ಮುದ್ದೇಬಿಹಾಳ ಇವರ ಸಂಯುಕ್ತಾಶ್ರಯದಲ್ಲಿ ನೂತನವಾಗಿ ಸೃಜಿಸಲ್ಪಟ್ಟ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರ ನ್ಯಾಯಾಲಯ ವಿಜಯಪುರ (ಕಾರ್ಯಸ್ಥಳ: ಮುದ್ದೇಬಿಹಾಳ) ಮತ್ತು ಮುದ್ದೇಬಿಹಾಳ ನ್ಯಾಯಾಲಯದ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಲಾ ಛೇಂರ‍್ಸ್ ಮತ್ತು ಸಹಾಯಕ ಸರ್ಕಾರಿ ಅಭಿಯೋಜಕರ ಕಚೇರಿ ಕಟ್ಟಡ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು. ನಾವು ಜನಸಾಮಾನ್ಯರ ಬಾಗಿಲಿಗೆ ನ್ಯಾಯ ಒದಗಿಸಬೇಕಾದರೆ ನ್ಯಾಯಾಲಯಗಳ ವಿಕೇಂದ್ರೀಕರಣ ಹಾಗೂ ಅಲ್ಲಲ್ಲಿ ನ್ಯಾಯಾಲಯಗಳನ್ನು ಸ್ಥಾಪಿಸಬೇಕು ಈ ನಿಟ್ಟಿನಲ್ಲಿ ಮುದ್ದೇಬಿಹಾಳ ಹಾಗೂ ತಾಳಿಕೋಟೆಯ ನ್ಯಾಯಾಲಯಗಳಲ್ಲಿ ಹೆಚ್ಚಿನ ಪ್ರಕರಣಗಳು ಇದ್ದು ಇದಕ್ಕೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ನೂತನವಾಗಿ ಸೃಜಿಸಲ್ಪಟ್ಟ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದು ಇಲ್ಲಿ ಉದ್ಘಾಟನೆಯಾಗಿದೆ ಅದರೊಂದಿಗೆ ನ್ಯಾಯಾದೀಶರಿಗೆ ಉತ್ತಮ ಮೂಲಭೂತ ಸೌಲಭ್ಯಗಳು ಕೂಡ ದೊರಕುವ ಉದ್ದೇಶದಿಂದ ಲಾ ಛೆಂಬರನ್ನು ಕೂಡ ನಿರ್ಮಿಸಲಾಗಿದೆ ಒಂದು ಸಂತಸದ ವಿಷಯ ಎಂದು ಅವರು ಹೇಳಿದರು.

 ಕಕ್ಷಿದಾರರೊಂದಿಗೆ ಸಮರ್ಪಕವಾದ ಸಲಹೆಗಳನ್ನು ನೀಡಿ ಅವರೊಂದಿಗೆ ಜನಾನುರಾಗಿ ವರ್ತಿಸಿದಲ್ಲಿ ಮಾತ್ರ ನಾವು ಒಳ್ಳೆಯ ನ್ಯಾಯ ಒದಗಿಸಿಕೊಟ್ಟಂತೆ ಇಂದು ಎಲ್ಲ ರಂಗಗಳಲ್ಲಿಯೂ ಹಾಗೂ ಪ್ರತಿಯೊಂದು ವಿಚಾರದಲ್ಲಿ ಕಾನೂನು ಸಲಹೆ ಅತ್ಯವಶ್ಯಕವಾಗಿವೆ ಹೊಸ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಬೇಕು ಹಾಗೂ ಅದರೊಂದಿಗೆ ಹೊಂದಿಕೊಳ್ಳಬೇಕು ವಿಡೀಯೋ ಸಂವಾದಗಳ ಮೂಲಕವೂ ಕೂಡ ನಾವು ನಮ್ಮ ನ್ಯಾಯಗಳನ್ನು ಬಗೆಹರಿಸಿಕೊಳ್ಳಬಹುದಾಗಿದೆ ಇದರಿಂದ ಹಲವಾರು ಉಪಯೋಗಗಳಿವೆ ಜನಸಾಮಾನ್ಯರಿಗೆ ಉತ್ತಮ ನ್ಯಾಯ ಒದಗಿಸಲು ಅವರು ಹೆಳಿದರು.

ಕಾನೂನು, ನ್ಯಾಯ, ಮಾನವಹಕ್ಕುಗಳು ಮತ್ತು ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಹೆಚ್.ಕೆ ಪಾಟೀಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಸರ್ಕಾರ 115 ಕೋರ್ಟಗಳನ್ನು ಸ್ಥಾಪಿಸಲು ಕ್ರಮ ವಹಿಸಲಾಗುತ್ತಿದೆ ಅದರೊಂದಿಗೆ 2200 ಹುದ್ದೆಗಳನ್ನು ಸೃಜಿಸಲಾಗುತ್ತಿದೆ. ವ್ಯಾಜ್ಯಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ನ್ಯಾಯಾಧೀಶರ ಹಾಗೂ ವಕೀಲರ ಪಾತ್ರ ಬಹಳ ಮುಖ್ಯ ಪ್ರತಿಯೊಬ್ಬರಿಗೂ ಉತ್ತಮ ನ್ಯಾಯ ಒದಗಿಸುವಂತೆ ಕಾನೂನುಗಳ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಕಕ್ಷಿದಾರರು ಹೆಚ್ಚು ಸಂಖ್ಯೆಗಳಲ್ಲಿ ನ್ಯಾಯಾಲಯಕ್ಕೆ ಆಗಮಿಸದೇ ಇರುವಂತೆ ನೋಡಿಕೊಳ್ಳಬೇಕು ನಮ್ಮ ವಕೀಲರು ಸಾಮಾಜಿಕವಾಗಿ ಕಳಕಳಿ ಹೊಂದಿ ಕಕ್ಷಿದಾರರಿಗೆ ಹಾಗೂ ಸಾಕ್ಷಿದಾರರಿಗೆ ಯೋಗ್ಯವಾದ ನ್ಯಾಯಸಮ್ಮತ ನ್ಯಾಯಗಳನ್ನು ಒದಗಿಸಲು ವ್ಯವಸ್ಥೆ ಮಾಡಿಕೊಳ್ಳಬೇಕು ನ್ಯಾಯದಾನ ವ್ಯವಸ್ಥೆಗೆ ಗೌರವ ಕೊಡುವಂತಾಗಬೇಕು ಹಾಗೂ ಈ ಭಾಗದ ಅಭಿವೃದ್ಧಿಗಾಗಿ ಎಲ್ಲ ರೀತಿಯ ಸಹಾಯ ಸಹಕಾರ ನೀಡುವುದಾಗಿ ಅವರು ಹೇಳಿದರು.

ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಹೆಚ್.ಪಿ ಸಂದೇಶ ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸಿ ಮಾತನಾಡಿದ ಅವರು ಈ ಬಾಗದ ರೈತರ ಕೋರ್ಟಗಳಲ್ಲಿ ವ್ಯಾಜ್ಯಗಳಿಗವೆ ಈ ಕಾರಣದಿಂದ ಈ ಭಾಗಕ್ಕೆ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರ ನ್ಯಾಯಾಲಯ ಅವಶ್ಯಕವಾಗಿದೆ ಈ ಬಾಗದ ಸಾರ್ವಜನಿಕರು ಜಿಲ್ಲಾ ಕೋರ್ಟಗೆ ಹೋಗಿ ಬರಬೇಕಾದಲ್ಲಿ ದೂರ ಕ್ರಮಿಸಬೇಕಾದ ಹಿನ್ನೆಲೆಯಲ್ಲಿ ಸಮಯ ಕೂಡ ವ್ಯರ್ಥವಾಗುತ್ತದೆ ಕಕ್ಷಿದಾರರ ಸಮಸ್ಯಗಳ ಅರಿತು ಅವರಿಗೆ ಸೂಕ್ತವಾದ ನ್ಯಾಯ ಒದಗಿಸಿ ಕೊಡುವ ನಿಟ್ಟಿನಲ್ಲಿ ಇಂದು ಉದ್ಘಾಟನೆಗೊಂಡ ನ್ಯಾಯಾಲಯ ಸಾರ್ಥಕವಾಗುತ್ತದೆ. ನಮ್ಮ ದೇಶಕ್ಕೆ ಸ್ವಾತಂತ್ರ ಒದಗಿಸಿಕೊಟ್ಟವರಲ್ಲಿ ನ್ಯಾಯಾದೀಶರ ಪಾತ್ರ ಬಹಳ ಅವರನ್ನು ಇಂದು ನಾವು ಸ್ಮರಿಸಬೇಕಾಗುತ್ತದೆ ನಾವು ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ದೊರಕುವಂತೆ ಹಾಗೂ ಸಮಾಜದ ದ್ವನಿಯಾಗಿ ನಮ್ಮ ವೃತ್ತಿಯನ್ನು ಮಾಡಬೇಕು ಜನರ ಹಿತವನ್ನು ಬಯಸುವವರು ದಾರ್ಶನಿಕರಾಗುತ್ತಾರೆ ದೇಶಕ್ಕಾಗಿ ಪ್ರತಿಯೊಬ್ಬ ವ್ಯಕ್ತಿಯು ದುಡಿಯಬೇಕು ಅಂದಾಗ ದೇಶ ಅಭಿವೃದ್ದಿ ಹೊಂದಲು ಸಾಧ್ಯ ಮಕ್ಕಳಿಗೆ ಉತ್ತಮ ಶಿಕ್ಷಣ, ಸಂಸ್ಕಾರ ನೀಡಿ ವಿದ್ವತ್ವವನ್ನು ಲೋಕ ಕಲ್ಯಾಣಕ್ಕೆ ಬಳಸಿಕೊಳ್ಳಬೇಕು ಎಂದು ಅವರು ಹೇಳಿದರು.

ಕರ್ನಾಟಕ ಸಾಬೂನು ಮತ್ತು ಮನಾರ್ಜಕಜ ನಿಗಮದ ಅಧ್ಯಕ್ಷರು ಹಾಗೂ ಮುದ್ದೇಬಿಹಾಳ ಕ್ಷೇತ್ರದ ಶಾಸಕರಾದ ಸಿ.ಎಸ್. ನಾಡಗೌಡ(ಅಪ್ಪಾಜಿ) ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡಿ ಈ ಬಾಗದಲ್ಲಿ ಅತಿ ಹೆಚ್ಚು ಭೂ ಸ್ವಾಧೀನ ಕುರಿತು ಹೆಚ್ಚು ವ್ಯಾಜ್ಯಗಳಿವೆ, ವ್ಯಾಜ್ಯಗಳು ಆದಷ್ಟು ಬೇಗ ಇತ್ಯರ್ಥಗೊಳಿಸುವಂತಾಗಬೇಕು. ತಾಳಿಕೋಟೆಗೆ ನೂತನ ನ್ಯಾಯಾಲಯಗಳ ಸಂಕೀರ್ಣ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು ಸಿ.ಎಸ್.ಆರ್ ಅನುದಾನದಡಿ ವಕೀಲರಿಗೆ ಆಧುನಿಕ ಉಪಕರಣಳನ್ನು ಅಳವಡಿಸಲು ಕ್ರಮ ವಹಿಸಲಾಗುವುದು ಎಂದು ಅವರು ಹೇಳಿದರು.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶಿವಾಜಿ ಅನಂತ ನಲವಡೆ ಸ್ವಾಗತಿಸಿದರು, ಮುದ್ದೇಬಿಹಾಳ ನ್ಯಾಯವಾದಿಗಳ ಸಂಘದ ಅಧ್ಯಕ್ಷರಾದ ಶಶಿಕಾಂತ ಶಿವಪ್ಪ ಮಾಲಗತ್ತಿ ಪ್ರಾಸ್ತಾವಿಕ ಮಾತನಾಡಿದರು.

ಕಾರ್ಯಕ್ರಮದಲ್ಲಿ ನ್ಯಾಯವಾದಿಗಳ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಪಿ.ಬಿ ಗೌಡರ ತಾಲೂಕು ನ್ಯಾಯವಾದಿಗಳ ಸಂಘದ ಅಧ್ಯಕ್ಷರುಗಳು, ಕಾರ್ಯಕಾರಿ ಸಮಿತಿ ಸದಸ್ಯರು, ನ್ಯಾಯವಾದಿಗಳ ಸಂಘ ಸದಸ್ಯರುಗಳು, ನ್ಯಾಯಾಲಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಗೂ ಇತರರು ಉಪಸ್ಥಿತರಿದ್ದರು.

 ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಎಸ್.ಸಿ/ ಎಸ್.ಟಿ ಜನಾಂಗದ ಶ್ರೇಯಸ್ಸಿಗೆ ಶ್ರಮಿಸಿದವರಿಗೆ ಪ್ರಶಸ್ತಿಗೆ ಅರ್ಜಿ ಆಹ್ವಾನ

ವಿಜಯಪುರ : ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಜನಾಂಗದವರ ಶ್ರೇಯಸ್ಸಿಗಾಗಿ, ಪ್ರೋತ್ಸಾಹಿಸಿ, ಶ್ರಮಿಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳನ್ನು ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸಲು ಉದ್ಧೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಏಪ್ರಿಲ್ 05 ರಂದು ಡಾ. ಬಾಬು ಜಗಜೀವನ ರಾಂ ಅವರ 118ನೇ ಹಾಗೂ ಏಪ್ರಿಲ್ 14ರಂದು ಡಾ. ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚಾರಣೆಯನ್ನು ಆಚರಿಸಲಾಗುತ್ತಿದ್ದು, ಈ ಸಂದರ್ಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಪ್ರಶಸ್ತಿಗೆ ಅರ್ಜಿ ಸಲ್ಲಿಸ ಬಯಸುವವರು ನಿಗದಿತ ಅರ್ಜಿ ನಮೂನೆಯನ್ನು ಉಪ ನಿರ್ದೇಶಕರ ಕಛೇರಿ ಸಮಾಜ ಕಲ್ಯಾಣ ಇಲಾಖೆ ವಿಜಯಪುರ ಹಾಗೂ ತಾಲೂಕಿನ ಸಮಾಜ ಕಲ್ಯಾಣ ಅಧಿಕಾರಿಗಳ ಸಹಾಯಕ ನಿರ್ದೇಶಕರ ಕಛೇರಿಯಿಂದ ಪಡೆದು, ದಿನಾಂಕ 25-02-2025ರ ಒಳಗಾಗಿ ಸಲ್ಲಿಸಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಛೇರಿ ವಿಜಯಪುರ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Saturday, February 15, 2025

ಕರ್ನಾಟಕ ಸೇವಾರತ್ನ ಪ್ರಶಸ್ತಿ ಗೆ ಬಟಗಿ, ಕಾಂಬಳೆ, ಕುಬಕಡ್ಡಿ ಭಾಜನ

ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ 

 ವಿಜಯಪುರ : ಮಹರ್ಷಿ ವಾಲ್ಮೀಕಿ ಗುರುಕುಲ ಪೀಠ ದೊಡ್ಡಬಳ್ಳಾಪುರ ಹಾಗೂ ಕುಮಾರ ಸ್ವಾಮಿ ಫೌಂಡೇಶನ್ ಅವರ ಸಹಯೋಗದಲ್ಲಿ ಸಮಾಜದ ವಿವಿಧ ಕ್ಷೇತ್ರದ ಸಾಧಕರಿಗೆ ಕೊಡಮಾಡುವ ಕರ್ನಾಟಕ ಸೇವಾರತ್ನ ಪ್ರಶಸ್ತಿ ಗೆ ವಿಜಯಪುರ ಜಿಲ್ಲೆಯ ಸಾರವಾಡದ ಸಾಮಾಜಿಕ ಹೋರಾಟಗಾರ ಮಲ್ಲಿಕಾರ್ಜುನ ಬಟಗಿ, ವಿಜಯಪುರದ ಸಾಮಾಜಿಕ ಹೋರಾಟಗಾರ ಬಸಕುಮಾರ ಕಾಂಬಳೆ ಜನಪರ ಹೋರಾಟಗಾರ ಯುವ ಮುಖಂಡ ಬಸವರಾಜ ಕುಬಕಡ್ಡಿ ಅವರು ಭಾಜನರಾಗಿದ್ದಾರೆ. ಇವರಿಗೆ ನಾಳೆ ದಾವಣಗೆರೆಯ ರೋಟರಿ ಕ್ಲಬ್ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಗಣ್ಯರ ಸಮ್ಮುಖದಲ್ಲಿ ನೀಡಿ ಗೌರವಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Tuesday, February 11, 2025

ದುಷ್ಕರ್ಮಿಗಳಿಂದ ಬಾಗಪ್ಪ ಹರಿಜನ ಬರ್ಬರ ಹತ್ಯೆ

ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ: ಭೀಮಾತೀರದ ನಟೋರಿಯಸ್ ಹಂತಕ ಬಾಗಪ್ಪ ಹರಿಜನ ಬರ್ಬರವಾಗಿ  ಹತ್ಯೆಯಾಗಿರುವ ಘಟನೆ ನಗರದ ರೇಡಿಯೋ ಕೇಂದ್ರ ಬಳಿ ಮಂಗಳವಾರ ರಾತ್ರಿ ನಡೆದಿದೆ.

ಎರಡು ದಶಕಗಳ ಹಿಂದೆ ಭೀಮಾತೀರದ ನಟೋರಿಯಸ್ ಹಂತಕನೆಂದೇ ಕುಖ್ಯಾತಿ ಪಡೆದಿದ್ದ ಚಂದಪ್ಪ ಹರಿಜನ ಅಪ್ಪಟ ಶಿಷ್ಯನಾಗಿದ್ದ ಬಾಗಪ್ಪ ಹರಿಜನನ ಮೇಲೆ ಈ ಹಿಂದೆಯು ಗುಂಡಿನ ದಾಳಿ ನಡೆದಿತ್ತು, ಕೆಲ ವರ್ಷಗಳ ಚಿಕಿತ್ಸೆ ನಂತರ ಚೇತರಿಸಿಕೊಂಡಿದ್ದ, ಸದ್ಯ ಆಗಂತುಕರ ಗುಂಡಿಗೆ ಬಲಿಯಾಗಿದ್ದಾನೆ.

ಮಾರಕಾಸ್ತ್ರಗಳಿಂದ ಬಾಗಪ್ಪನನ್ನು ಹತ್ಯೆಗೈದಿದ್ದು, ಬಾಗಪ್ಪನ ಎಡಗೈ ಮುಂಗೈ ಕಟ್ ಮಾಡಿದ್ದು, ಮುಖ ಹಾಗೂ ತಲೆಗೆ ಹೊಡೆದು  ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ.

ಘಟನಾ ಸ್ಥಳಕ್ಕೆ ಎಸ್ಪಿ ಲಕ್ಷ್ಮಣ ನಿಂಬರಗಿ ಭೇಟಿ ನೀಡಿ ಪರಿಶೀಲಿಸಿದರು.

ಗಾಂಧಿಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

12-02-2025 EE DIVASA KANNADA DAILY NEWS PAPER

11-02-2025 EE DIVASA KANNADA DAILY NEWS PAPER

Thursday, February 6, 2025

07-02-2025 EE DIVASA KANNADA DAILY NEWS PAPER

ಕ್ರೀಡೆ ಉತ್ತಮ ಆರೋಗ್ಯವನ್ನು ಬೆಳೆಸಿಕೊಳ್ಳಲು ಸಹಾಯಕವಾಗಿದೆ : ಬಾಲಾಜಿ

ಮೂರು ದಿನಗಳ ಕಾರ್ಯಾಗಾರ ಮತ್ತು ನಿರ್ಣಾಯಕರ ಪರೀಕ್ಷೆ ಸಮಾರೋಪ ಸಮಾರಂಭದಲ್ಲಿ ಮಹಿಳಾವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ವಿಜಯಪುರ: ಕ್ರೀಡೆ ಕೇವಲ ಮನರಂಜನೆಗಾಗಿ ಮಾತ್ರವಲ್ಲ, ಉತ್ತಮ ಆರೋಗ್ಯವನ್ನು ಬೆಳೆಸಿಕೊಳ್ಳಲು ಸಹಾಯಕವಾಗಿದೆ ಎಂದು ಬೆಂಗಳೂರಿನ ಅಂತರಾಷ್ಟಿçÃಯ ಕ್ರೀಡಾಪಟು ಹಾಗೂ ರಾಜ್ಯ ಸಂಪನ್ಮೂಲ ವ್ಯಕ್ತಿ ಬಾಲಾಜಿ ಪ್ರಭು ಹೇಳಿದರು.

ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ಅಧ್ಯಯನ ಮತ್ತು ಕ್ರೀಡಾ ವಿಜ್ಞಾನ ವಿಭಾಗ ಮತ್ತು ದೈಹಿಕ ನಿರ್ದೇಶನಾಲಯ ಇವರ ಸಂಯುಕ್ತ ಆಶ್ರಯದಲ್ಲಿ ಗುರುವಾರ ಆಯೋಜಿಸಿದ್ದ ವಾಲಿಬಾಲ್ ಕ್ರೀಡೆಯ ಕುರಿತು ಮೂರು ದಿನಗಳ ಕಾರ್ಯಾಗಾರ ಮತ್ತು ನಿರ್ಣಾಯಕರ ಪರೀಕ್ಷೆ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಜೀವನದಲ್ಲಿ ಸೋಲು-ಗೆಲುವು ಸಹಜ. ಸೋಲು ನಮ್ಮನ್ನು ಹೆಚ್ಚು ದೃಢವಾಗಿ ನಿಲ್ಲಿಸಲಿದೆ, ಗೆಲುವು ನಮ್ಮನ್ನು ಮತ್ತಷ್ಟು ಮುನ್ನಡೆಸಲಿದೆ. ಕ್ರೀಡೆಯ ಒಡನಾಟ ನಮಗೆ ಈ ಸಮತೋಲನ ಕಲಿಸಲು ಸಹಾಯ ಮಾಡುತ್ತದೆ. ಆದ್ದರಿಂದ, ಪ್ರತಿಯೊಬ್ಬರೂ ತಮ್ಮ ದಿನಚರಿಯಲ್ಲಿ ಕೆಲವು ಕ್ರೀಡಾ ಚಟುವಟಿಕೆಗಳಲ್ಲಿ ತೋಡಗಿಸಿಕೊಳ್ಳಬೇಕು ಎಂದರು.

ಇದೇ ಸಂದರ್ಭದಲ್ಲಿ ಮಹಿಳಾ ವಿವಿಯ ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚAದ್ರಶೇಖರ ಮಾತನಾಡಿ, ಕ್ರೀಡೆಯು ಕೇವಲ ಸ್ಪರ್ಧೆಯಾಗಿರದೆ, ಇದು ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಉತ್ತಮಗೊಳಿಸುವ ಶ್ರೇಷ್ಠ ಸಾಧನವಾಗಿದೆ. ಸೋಲು ಮತ್ತು ಗೆಲುವು ಜೀವನದ ಅವಿಭಾಜ್ಯ ಅಂಗಗಳಾಗಿದ್ದು, ಇವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಕ್ರೀಡೆಯ ಮೂಲಕ ಬೆಳೆಯುತ್ತದೆ. ಪ್ರತಿದಿನದ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದು ಒಂದು ಭಾಗ್ಯವಾಗಿದ್ದು, ಇದರಿಂದ ಆರೋಗ್ಯಕರ ಹಾಗೂ ಶಕ್ತಿಯುತ ಜೀವನವನ್ನು ರೂಪಿಸಬಹುದು ಎಂದು ಶುಭ ಹಾರೈಸಿದರು. 

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, ದೈಹಿಕ ಶಿಕ್ಷಣ ಅಧ್ಯಯನ ಮತ್ತು ಕ್ರೀಡಾ ವಿಜ್ಞಾನ ವಿಭಾಗ ಹಾಗೂ ಕ್ರೀಡಾ ನಿರ್ದೇಶನಾಲಯವು ವಿಶ್ವವಿದ್ಯಾಲಯದಲ್ಲಿ ವರ್ಷಪೂರ್ತಿ ವಿಭಿನ್ನ ಕ್ರೀಡಾ ಚಟುವಟಿಕೆಗಳನ್ನು ಆಯೋಜಿಸುತ್ತವೆ. ಇವು ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಸುಸ್ಥಿತಿಗೆ ಮಹತ್ವದ ಪಾತ್ರವಹಿಸುತ್ತವೆ. ಈ ಕಾರ್ಯಕ್ರಮಗಳ ಮೂಲಕ ವಿದ್ಯಾರ್ಥಿಗಳು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜೊತೆಗೆ ಕ್ರೀಡಾ ಕ್ಷೇತ್ರದಲ್ಲಿ ತನ್ನ ಸಾಮರ್ಥ್ಯವನ್ನು ಪ್ರದರ್ಶಿಸಲು ಅವಕಾಶವನ್ನು ಪಡೆಯುತ್ತಾರೆ ಎಂದರು.

ಕಾರ್ಯಾಗಾರದಲ್ಲಿ ಬೆಂಗಳೂರಿನ ವಾಲಿಬಾಲ್ ತರಬೇತಿದಾರ ರಾಜೇಶ್ ಪತ್ತಾರ ಹಾಗೂ ಕರ್ನಾಟಕ ವಾಲಿಬಾಲ್ ಅಸೋಸಿಯೇಷನ್ ಮತ್ತು ತೀರ್ಪುಗಾರರ ಮಂಡಳಿಯ ಸಂಚಾಲಕ ಕೆ.ವೆಂಕಟೇಶ್‌ಗೌಡ, ಪ್ರೊ.ಡಿ.ಎಂ.ಜ್ಯೋತಿ, ಪ್ರೊ.ರಾಜಕುಮಾರ ಮಾಲಿಪಾಟೀಲ, ಪ್ರೊ. ಶ್ರೀನಿವಾಸ, ಡಾ.ಕಿರಣ ಜಿ.ಎನ್, ಡಾಅಶ್ವಿನಿ ಕೆ, ಎನ್, ಸಹ ನಿರ್ದೇಶಕ ವಿಶ್ವನಾಥ ನಡಕಟ್ಟಿ ಮತ್ತು ಶಿಕ್ಷಣ ನಿಕಾಯ ಡೀನ ಪ್ರೊ.ಸಕ್ಪಾಲ್ ಹೂವಣ್ಣ ಇದ್ದರು.

ಪ್ರೊ.ಜ್ಯೋತಿ ಉಪಾದ್ಯ ಸ್ವಾಗತಿಸಿದರು. ಜಬಿನತಾಜ ಜಿಗಳೂರ ನಿರೂಪಿಸಿದರು. ನಿರ್ದೇಶನಾಲಯದ ನಿರ್ದೇಶಕ ಪ್ರೊ.ಹನುಮಂತಯ್ಯ ಪೂಜಾರಿ ವಂದಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Wednesday, February 5, 2025

06-02-2025 EE DIVASA KANNADA DAILY NEWS PAPER

ಮಕ್ಕಳಲ್ಲಿ ಸಂಸ್ಕೃತಿ, ಸಂಸ್ಕಾರ, ಜೀವನದ ಮೌಲ್ಯ ಭಿತ್ತಿ: ಬಂಡೆ

ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ: ಮಕ್ಕಳಲ್ಲಿ ಬಾಲ್ಯದಿಂದಲೇ ಸಂಸ್ಕೃತಿ, ಸಂಸ್ಕಾರ, ಜೀವನದ ಮೌಲ್ಯಗಳನ್ನು ಭಿತ್ತಿ, ಅವರ ಜೀವನಕ್ಕೆ ಭದ್ರ ಬುನಾದಿ ಹಾಕುವ ಜತೆಗೆ ಕಲಿಕೆಯಲ್ಲಿ ಆಸಕ್ತಿಯನ್ನು ಮೂಡಿಸಬೇಕು ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.

          ಮಂಗಳವಾರ ಸಂಜೆ ನಗರದ ಬಸವೇಶ್ವರ ವಿದ್ಯಾವರ್ಧಕ ಸಂಘದ ಲೀಟಲ್ ಪ್ಲಾವರ್ ಪ್ರಾಥಮಿಕ ಶಾಲೆಯಲ್ಲಿ ಜರುಗಿದ ವಾರ್ಷಿಕ ಸ್ನೇಹ ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿದರು.

         ಮನೆಯಲ್ಲಿ ಮಕ್ಕಳಿಗೆ ಉತ್ತಮ ವಾತಾವರಣವನ್ನು ನಿರ್ಮಿಸಿ ಕೊಡುವುದು ಯಶಸ್ಸಿನ ಬೀಜ ಬಿತ್ತಿದಂತೆ.

ಕುಟುಂಬವು ಮಕ್ಕಳಿಗೆ ಸಾಂಸ್ಕೃತಿಕ, ನೈತಿಕ, ಧಾರ್ಮಿಕ, ಆಧ್ಯಾತ್ಮಿಕ, ಸಾಮಾಜಿಕ ಮೌಲ್ಯಗಳನ್ನು ನೀಡುತ್ತದೆ.

ಮನೆಯ ವಾತಾವರಣವೇ ಮಗುವಿನ ವ್ಯಕ್ತಿತ್ವ ವಿಕಸನಕ್ಕೆ ಬುನಾದಿಯಾಗಿದೆ ಎಂದು ತಿಳಿಸಿದರು.

        ಚಿನ್ಮಯ ಶಾಲೆಯ ಅಧ್ಯಕ್ಷೆ ಪ್ರತಿಭಾ ಪಾಟೀಲ ಮಾತನಾಡಿ, ಮನೆಯಲ್ಲಿ ಕಲಿಸುವ ಗುಣ,ನಡವಳಿಕೆ,

ಸ್ವಭಾವ, ಮಾತಿನ ಶೈಲಿ ಮಗುವಿನ ವ್ಯಕ್ತಿತ್ವವನ್ನು ರೂಪಿಸುತ್ತದೆ. ಉತ್ತಮ ಮೌಲ್ಯಗಳಿಂದ ಉತ್ತಮ ನಾಗರಿಕರಾಗುವಂತೆ ಪ್ರೇರಣೆ ನೀಡಬೇಕು ಎಂದು ಹೇಳಿದರು.

       ಪ್ರೆಸಿಡೆನ್ಸಿ ಶಿಕ್ಷಣ ಕಾಲೇಜಿನ ಪ್ರಾಚಾರ್ಯೆ ಡಾ ಸುಮಾ ಬೋಳರೆಡ್ಡಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಕ್ಕಳಿಗೆ ಆಟದೊಂದಿಗೆ ಪಾಠ ಕಲಿಸುವ ಪ್ರವೃತ್ತಿ ರೂಢಿಸಿಕೊಂಡು,

ಪಾಲಕರು ಮಗುವಿನ ಸರ್ವಾಂಗೀಣ ಅಭಿವೃದ್ಧಿಗೆ ತಮ್ಮ ನಿತ್ಯ ಬದುಕಿನ ಕೆಲ ಸಮಯ ಮೀಸಲಿಡುವುದು ಅವಶ್ಯ ಎಂದರು.

         ಸಂಸ್ಥೆಯ ಸಲಹೆಗಾರ ಶರತಚಂದ್ರ ಮಂಗಾನವರ ಜ್ಯೋತಿ ಬೆಳಗಿಸಿದರು. ಸಂಸ್ಥೆಯ ನಿರ್ದೇಶಕಿ ಗುಣಸಾಗರಿ ಮಂಗಾನವರ,ಪಿಯು ಕಾಲೇಜಿನ ಪ್ರಾಚಾರ್ಯ ಎಸ್ ಆರ್ ಕುಲಕರ್ಣಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕ ಕೆ ಎಸ್ ಆಲಮೇಲ ವಾರ್ಷಿಕ ವರದಿ ವಾಚಿಸಿದರು.

        ಮನೋಜ ದೇಸಾಯಿ ಮತ್ತು ನಿವೇದಿತಾ ಪಿ ನಿರೂಪಿಸಿದರು. ಲಕ್ಷ್ಮಿ ಜಂಗಮಶೆಟ್ಟಿ ಸ್ವಾಗತಿಸಿದರು. ಮಂಜುಳಾ ರಾಠೋಡ ವಂದಿಸಿದರು. ವಿವಿಧ ಸ್ಪರ್ಧೆಯಲ್ಲಿ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಬೈಕ್, ಕ್ಯಾಂಟರ್ ವಾಹನ ಡಿಕ್ಕಿ: ಬೈಕ್ ಸವಾರ ಸಾವು

ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ: ಬೈಕ್ ಹಾಗೂ ಕ್ಯಾಂಟರ್ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಸಿಂದಗಿ ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ನಡೆದಿದೆ.

ಮೃತಪಟ್ಟವನನ್ನು ಆಲಮೇಲ ತಾಲೂಕಿನ ಅಲ್ಲೋಳ್ಳಿ ಗ್ರಾಮದ ಶರಣಗೌಡ ಬಿರಾದಾರ (40) ಎಂದು ಗುರುತಿಸಲಾಗಿದೆ.

ಶರಣಗೌಡ ಬಿರಾದಾರ ಈತ ಕಕ್ಕಳಮೇಲಿ ಗ್ರಾಮ ಪಂಚಾಯಿತಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಕಾರ್ಯನಿರ್ವಹಿಸುತಿದ್ದರು. ಕಚೇರಿಯಿಂದ ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಸ್ಥಳಕ್ಕೆ ಪಿಎಸ್ಐ ಆರಿಫ್ ಮುಷಾಪುರಿ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.