ವಿಜಯಪುರ : ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಜನಾಂಗದವರ ಶ್ರೇಯಸ್ಸಿಗಾಗಿ, ಪ್ರೋತ್ಸಾಹಿಸಿ, ಶ್ರಮಿಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳನ್ನು ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸಲು ಉದ್ಧೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಏಪ್ರಿಲ್ 05 ರಂದು ಡಾ. ಬಾಬು ಜಗಜೀವನ ರಾಂ ಅವರ 118ನೇ ಹಾಗೂ ಏಪ್ರಿಲ್ 14ರಂದು ಡಾ. ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚಾರಣೆಯನ್ನು ಆಚರಿಸಲಾಗುತ್ತಿದ್ದು, ಈ ಸಂದರ್ಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಪ್ರಶಸ್ತಿಗೆ ಅರ್ಜಿ ಸಲ್ಲಿಸ ಬಯಸುವವರು ನಿಗದಿತ ಅರ್ಜಿ ನಮೂನೆಯನ್ನು ಉಪ ನಿರ್ದೇಶಕರ ಕಛೇರಿ ಸಮಾಜ ಕಲ್ಯಾಣ ಇಲಾಖೆ ವಿಜಯಪುರ ಹಾಗೂ ತಾಲೂಕಿನ ಸಮಾಜ ಕಲ್ಯಾಣ ಅಧಿಕಾರಿಗಳ ಸಹಾಯಕ ನಿರ್ದೇಶಕರ ಕಛೇರಿಯಿಂದ ಪಡೆದು, ದಿನಾಂಕ 25-02-2025ರ ಒಳಗಾಗಿ ಸಲ್ಲಿಸಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಛೇರಿ ವಿಜಯಪುರ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
No comments:
Post a Comment