ವಿಜಯಪುರ : ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ‘ಡಾ:ಅಂಬೇಡ್ಕರ್ ಓದು’ ಎಂಬ ಡಾ.ಬಿ.ಆರ್.ಅಂಬೇಡ್ಕರ್ ಅವರ ಬದುಕು ಮತ್ತು ಸಾಧನೆಗಳ ಕುರಿತ ವಿಶೇಷ ಉಪನ್ಯಾಸ ನಗರದ ಎ.ಎಸ್.ಪಾಟೀಲ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಶುಕ್ರವಾರ ಜರುಗಿತು.
ಕಾರ್ಯಕ್ರಮವನ್ನು ಅಪರ ಜಿಲ್ಲಾಧಿಕಾರಿಗಳಾದ ಸೋಮಲಿಂಗ ಗೆಣ್ಣೂರ ಅವರು ಉದ್ಘಾಟಿಸಿ ಅಂಬೇಡ್ಕರ್ ಅವರ ಬದುಕು, ಸಾಧನೆಗಳ ಕುರಿತು ಅವರು ಮಾತನಾಡಿದರು.
ವಿಶೇಷ ಉಪನ್ಯಾಸ ನೀಡಿದ ಡಾ.ಮಾಧವ ಎಸ್.ಗುಡಿ ಅವರು, ಅಪಾರ ಪಾಂಡಿತ್ಯ ಹಾಗೂ ಬಹುಮುಖ ವ್ಯಕ್ತಿತ್ವ ಹೊಂದಿದ್ದ ಡಾ. ಅಂಬೇಡ್ಕರ್ ಅವರು, ರೈತರು, ಮಹಿಳೆಯರು, ಕಾರ್ಮಿಕರು ಹಾಗೂ ದುರ್ಬಲ ವರ್ಗಗಳ ಏಳಿಗೆಗೆ ನಿರಂತರ ಹೋರಾಟ ಮಾಡಿ, ಎಲ್ಲರಿಗೂ ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯ ದೊರಕಿಸಲು ಶ್ರಮಿಸಿದರು ಎಂದು ಹೇಳಿದರು.
ಶಾಲೆಯ ಪ್ರಾಂಶುಪಾಲರಾದ ಬಿ.ಎಸ್.ಬೆಳಗಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಸಾಧನೆಗಳ ಕುರಿತು ಕಾಲೇಜ್ ವಿದ್ಯಾರ್ಥಿಗಳಿಗೆ ರಸಪ್ರಶ್ನೆ, ಪ್ರಬಂಧ, ಆಶು ಭಾಷಣ, ಕವನವಾಚನ ಸ್ಪರ್ಧೆ ಏರ್ಪಡಿಸಿ, ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜ್, ಎಕ್ಸಲೆಂಟ್ ವಿಜ್ಞಾನ ಪದವಿ ಪೂರ್ವ ಕಾಲೇಜ್, ವಿ.ಬಿ.ದರಬಾರ ಸಂಯುಕ್ತ ಪದವಿಪೂರ್ವ ಕಾಲೇಜ್ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಸಂತೊಷ ಭೋವಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಕುಮಾರಿ ಶೃತಿ ಮೇಲಿನಮನಿ ಸುಗಮ ಸಂಗೀತ ಗಾಯನ ಪ್ರಸ್ತುತಪಡಿಸಿದರು. ಶರಣಗೌಡ ಪಾಟೀಲ ವಂದಿಸಿದರು. ಡಾ.ಸುಭಾಶಚಂದ್ರ ಕನ್ನೂರ ನಿರೂಪಿಸಿದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
.jpeg)
No comments:
Post a Comment