ಚಡಚಣ: ಸಂಗಮೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಎಂ ಕಾಂ ದ್ವಿತೀಯ ವರ್ಷದ ವಿದ್ಯಾರ್ಥಿಗಳು ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ಆಯೋಜಿಸಿದ್ದರು.
ಪ್ರಾಂಶುಪಾಲ ಡಾ. ಎಸ್.ಬಿ.ರಾಠೋಡರವರು ದೀಪ ಬೆಳಗಿಸುವುದರ ಮೂಲಕ ವಿದ್ಯಾರ್ಥಿಗಳಿಗೆ ಕಾಲೇಜಿನ ಸಂಪ್ರದಾಯಗಳು, ಶೈಕ್ಷಣಿಕ ವ್ಯವಸ್ಥೆ , ಅಧ್ಯಾಪಕರ ಬದ್ಧತೆ, ಗುಣಮಟ್ಟದ ಮೂಲಸೌಕರ್ಯ, ಆಡಳಿತ ಮಂಡಳಿಯ ಬೆಂಬಲ, ವಿದ್ಯಾರ್ಥಿಗಳ ಮುಂದಿನ ಭವಿಷ್ಯದ ಕುರಿತು ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಹಿಂದಿ ಉಪನ್ಯಾಸಕರಾದ ಡಾ. ಎಸ.ಎಸ. ದೇಸಾಯಿ ಮಾತನಾಡಿ ವಿದ್ಯಾರ್ಥಿಗಳು
ತಮ್ಮ ವಿಷಯ ಜ್ಞಾನದ ಜೊತೆಗೆ ಕೌಶಲ್ಯಗಳನ್ನು ಪಡೆಯಬೇಕು . ತಮ್ಮ ಮುಂದಿನ ಭವಿಷ್ಯದ ಹೇಗೆ ನಿರ್ಮಿಸ ಬೇಕು ಎಂದು ಕೆಲವೊಂದು ನೈಜ ಸನ್ನಿವೇಶಗಳನ್ನು ಹೇಳುವುದರ ಮೂಲಕ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಕನ್ನಡ ವಿಭಾಗದ ಪ್ರಾಧ್ಯಾಪಕರಾದ ಮಾಹತೇಂಶ ಜನವಾಡ, ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ರಶ್ಮೀ ಗಜಾಕೋಶ, ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಶಂಕರ ಕಡೂರು, ಎಂ .ಕಾಂ ವಿಭಾಗದ ಮುಖ್ಯಸ್ಥರಾದ ಪ್ರೊ. ಎ. ಎಸ್.ಪಾಟೀಲ ಮತ್ತು ಎಮ್. ಕಾಂ . ವಿಭಾಗದ ಪ್ರಾಧ್ಯಾಪಕರಾದ ಪ್ರೊ.ಬಸವರಾಜ ನೀಲವಾಣಿ, ಪ್ರೊ. ಜ್ಞಾನೇಶ್ವರಿ ಲಚ್ಯಾಣ, ಪ್ರೊ.ಬಂಗಾರೆವ್ವ ದೈವಾಡಿ, ಪ್ರೊ. ಐಶ್ವರ್ಯ ಹಕ್ಕೆ, ಹಾಗೂ ಪ್ರಥಮ ಹಾಗೂ ದ್ವಿತೀಯ ಎಂ.ಕಾ. ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಎಮ.ಕಾಂ ದ್ವಿತೀಯ ವರ್ಷದ ವಿದ್ಯಾರ್ಥಿನಿಯಾದ ತುಳಸಿ ಲೋಲಾ ಅವರು ಕಾರ್ಯಕ್ರಮ ನಿರೂಪಿಸಿದರೇ, ಅನ್ಯನಾ ಕುಲಕರ್ಣಿ ಪ್ರಾರ್ಥನಾ ಗೀತೆ ಹಾಡಿದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
.jpeg)
No comments:
Post a Comment