ವಿಜಯಪುರ : ವಿಜಯಪುರದ ಸಹಕಾರ ವಲಯದ ಪ್ರತಿಷ್ಠಿತ ಸಹಕಾರಿ ಬ್ಯಾಂಕ ಆಗಿರುವ ಮಹಾಲಕ್ಷ್ಮೀ ಸಹಕಾರಿ ಬ್ಯಾಂಕ್ ಕಾರ್ಯಾಲಯಕ್ಕೆ ಶೃಂಗೇರಿ ಶಾರದಾ ಪೀಠದ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಅವರು ಭೇಟಿ ನೀಡಿ ಆಡಳಿತ ಮಂಡಳಿ ಪದಾಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಅನುಗ್ರಹಪೂರ್ವಕ ಆಶೀರ್ವಾದ ಮಾಡಿದರು. ಬಡವರ ಕಲ್ಯಾಣಕ್ಕೆ ಈ ಬ್ಯಾಂಕು ಸದಾ ಶ್ರಮಿಸಲಿ, ಉತ್ತಮ ಆರ್ಥಿಕ ಸೇವೆ ನೀಡಿ ಬಡವರಿಗೆ ಆರ್ಥಿಕ ಚೈತನ್ಯ ತುಂಬಲಿ, ಹೀಗೆ ಬ್ಯಾಂಕು ಉತ್ತರೋತ್ತರವಾಗಿ ಬೆಳೆಯಲಿ ಎಂದು ಅನುಗ್ರಹ ಸಂದೇಶ ನೀಡಿದರು.
ಈ ವೇಳೆ ಮಹಾಲಕ್ಷ್ಮಿ ಬ್ಯಾಂಕ್ ಅಧ್ಯಕ್ಷ ಮುಕುಂದ ಕುಲಕರ್ಣಿ ವಿವರಣೆ ನೀಡಿ, ಮಹಾಲಕ್ಷ್ಮಿ ಸಹಕಾರ ಬ್ಯಾಂಕ್ ಕಳೆದ ಹಲವಾರು ದಶಕಗಳಿಂದ ಉತ್ತಮ ಸೇವೆ ಸಲ್ಲಿಸುತ್ತಿದ್ದು ದಿ.ಶ್ರೀನಿವಾಸರಾವ ಸ್ವಾಮೀರಾವ ದೇಶಪಾಂಡೆ ಅವರು ೧೯೩೦ ರಲ್ಲಿ ಈ ಬ್ಯಾಂಕ್ ಸ್ಥಾಪಿಸಿದ್ದು, ಶತಮಾನೋತ್ಸವದ ಹೊಸ್ತಿಲಲ್ಲಿದೆ ಎಂದು ಬ್ಯಾಂಕ ಗ್ರಾಹಕರಿಗೆ ಕಲ್ಪಿಸಿರುವ ಸೌಲಭ್ಯಗಳ ಬಗ್ಗೆ ವಿವರಿಸಿದರು.
ಉಪಾಧ್ಯಕ್ಷ ವಿಕಾಸ್ ಪದಕಿ, ನಿರ್ದೇಶಕರಾದ ವಿಜಯ ಜೋಶಿ, ಕೃಷ್ಣ ಗುನ್ನಾಳಕರ, ಗೋವಿಂದ ಜೋಶಿ, ಶಂಕರ್ ರಾವ್ ಕುಲಕರ್ಣಿ, ಸಚಿನ್ ಮದ್ದಿನಮಠ, ಪವನ್ ಕುಲಕರ್ಣಿ, ಬಸವರಾಜ್ ಪತ್ತಾರ್, ವೃತ್ತಿಪರ ನಿರ್ದೇಶಕ ಸಮೀರ್ ಕುಲಕರ್ಣಿ, ಬ್ಯಾಂಕ್ ವ್ಯವಸ್ಥಾಪಕರಾದ ಪದ್ಮಾವತಿ ಕುಲಕರ್ಣಿ ಕಲ್ಯಾಣಿ ಸಂಗಮ್ ಕೃಷ್ಣ ಜೋಶಿ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

No comments:
Post a Comment