Wednesday, March 5, 2025

ಬಾಲಭಾರತಿ ಶಾಲೆಯ ಶಿಕ್ಷಕಿ ಸುವರ್ಣ ಸಾರಂಗಮಠ ರವರಿಗೆ ಅಂತರರಾಷ್ಟ್ರೀಯ ಸಾವಿತ್ರಿಬಾಯಿ ಫುಲೆ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

 

ಆಲಮೇಲ ; ಪಟ್ಟಣದ ಶ್ರೀ ವಿಶ್ವೇಶ್ವರ ಬಾಲಭಾರತಿ ಅನುದಾನಿತ ಪ್ರಾಥಮಿಕ ಶಾಲೆಯ ಶಿಕ್ಷಕಿ ಸುವರ್ಣ ಸಾರಂಗಮಠ ರವರಿಗೆ ಚೇತನ ಫೌಂಡೇಶನ್ ಧಾರವಾಡ ,ಕಾವ್ಯಶ್ರೀ ಚಾರಿಟಬಲ್ ಟ್ರಸ್ಟ ( ರಿ.) ಹಾಗೂ ಕರ್ನಾಟಕ ಸೋಷಿಯಲ್ ಕ್ಲಬ್ ಬೆಂಗಳೂರು ವತಿಯಿಂದ ಹಮ್ಮಿಕೊಂಡಿರುವ ಅಂತರಾಷ್ಟ್ರೀಯ ಮಹಿಳಾ ಸಾಹಿತ್ಯ ಸಮ್ಮೇಳನದಲ್ಲಿ ಅಂತರರಾಷ್ಟ್ರೀಯ ಸಾವಿತ್ರಿಬಾಯಿ ಫುಲೆ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಪ್ರಶಸ್ತಿ ಸಮಾರಂಭವು ರವಿವಾರ ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಗಾಂಧಿ ಭವನದ ಬಾಪು ಸಭಾಂಗಣ ದಲ್ಲಿ ಜರುಗಲಿದೆ ಪ್ರಶಸ್ತಿ ಪ್ರಧಾನವನ್ನು ಬಹುಭಾಷಾ ಚಲನಚಿತ್ರ ಹಿನ್ನೆಲೆ ಗಾಯಕಿ ಹಾಗೂ ಸಂಶೋಧಕಿ ಡಾ.ಪ್ರೀಯದರ್ಶಿನಿ ರವರು ಮಾಡಲಿದ್ದಾರೆ ಎಂದು ಮುಖ್ಯ ಶಿಕ್ಷಕ ಲಕ್ಷ್ಮೀಪುತ್ರ ಕಿರನಳ್ಳಿ  ತಿಳಿಸಿದ್ದಾರೆ.ಪ್ರಶಸ್ತಿಗೆ ಆಯ್ಕೆ ಆಗಿದಕ್ಕೆ ಸಂಸ್ಥೆಯ ಅಧ್ಯಕ್ಷರು ಎಸ್.ಆಯ್.ಜೋಗೂರ,ಕಾರ್ಯದರ್ಶಿಗಳು ಪ್ರಶಾಂತ ಬಡದಾಳ,ಕೋಶಾಧ್ಯಕ್ಷರು ಅರವಿಂದ ಕುಲಕರ್ಣಿ ,ಆಡಳಿತ ಮಂಡಳಿಯ ಸದಸ್ಯರು, ಶಾಲಾ ಶಿಕ್ಷಕವೃಂದ ಹಾಗೂ ಶಿಕ್ಷಕ ಪಂಡಿತ ಅವಜಿ ಹರ್ಷ ವ್ಯಕ್ತ ಪಡಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

No comments:

Post a Comment