Wednesday, March 26, 2025

ಮಹಿಳೆಯರನ್ನು ಗೌರವಿಸುವ ದೇಶ ನಮ್ಮದಾಗಿದೆ : ಜಿಲ್ಲಾಧಿಕಾರಿ ಟಿ.ಭೂಬಾಲನ್


ವಿಜಯಪುರ : ಮಹಿಳೆಯು ಶಕ್ತಿಯ ಪ್ರತಿಕ. ಮಹಿಳೆಯರನ್ನು ಗೌರವಿಸುವ ದೇಶ ನಮ್ಮದಾಗಿದೆ. ಮಹಿಳೆಯರು ಮುಂಚೂಣಿಯಲ್ಲಿರಬೇಕೆಂಬ ದೃಷ್ಟಿಯಿಂದ ಮಹಿಳೆಯರ ಅಭ್ಯುದಯಕ್ಕಾಗಿ  ಜಿಲ್ಲೆಯಲ್ಲಿ ಹಲವು ಯೋಜನೆಗಳನ್ನು ಜಾರಿಗೊಳಿಸಿ ಆ ಮೂಲಕ ಕಾರ್ಯ ನಿರ್ವಹಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಹೇಳಿದರು.  

ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಸಮಗ್ರ ಶಿಶು ಅಭಿವೃದ್ಧಿ ಯೋಜನೆಗಳು, ವಿವಿಧ ಸ್ವಯಂ ಸೇವಾ ಸಂಸ್ಥೆಗಳು ಮತ್ತು ಜಿಲ್ಲಾ ಸ್ತ್ರೀ ಶಕ್ತಿ ಒಕ್ಕೂಟಗಳ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಆಯೋಜಿಸಿದ್ದ ಮಹಿಳೆಯರ ಮತ್ತು ಹೆಣ್ಣು ಮಕ್ಕಳ ಹಕ್ಕುಗಳು, ಸಮಾನತೆ ಹಾಗೂ ಸಬಲೀಕರಣಕ್ಕಾಗಿ-ತ್ವರಿತ ಕ್ರಮ ಎಂಬ ಧ್ಯೇಯದಡಿ ಅಂತರಾಷ್ಟ್ರೀಯ ಮಹಿಳಾ ದಿನಾಚಾರಣೆ-2025 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.


ಈ ಹಿಂದೆ ಅನೇಕ ಮೌಢ್ಯ ಮತ್ತು ಕಂದಾಚಾರಗಳಿದ್ದವು, ಈಗ ಬಹಳಷ್ಟು ಸುಧಾರಣೆಯಾಗಿವೆ. ಸಾÀಮಾಜಿಕ ಸ್ತರದಲ್ಲಿ ಮಹಿಳೆ ಸ್ವಾವಲಂಬಿಯಾಗಿ ತನ್ನ ಕುಟುಂಬವನ್ನು ಸಮರ್ಥವಾಗಿ ನಿಭಾಯಿಸುವ ದೃಷ್ಟಿಯಿಂದ ಹಲವಾರು ಯೋಜನೆಯನ್ನು ಸರ್ಕಾರ ಅನುಷ್ಟಾನ ತಂದಿದ್ದು, ಸಾಮಾಜಿಕ ಸಮಸ್ಯೆಗಳ ನಿವಾರಣೆಗೆ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.

ಇಂದು ಮಹಿಳೆ ಎಲ್ಲ ರಂಗಗಳಲ್ಲೂ ಮುಂದಿದ್ದು, ಅಭಿವೃದ್ಧಿಯ ಪಥದಲ್ಲಿ ಮಹಿಳೆಯರ ಪಾತ್ರ ಅಪಾರ.  ಸಮಾಜವು ಮಹಿಳೆಯರನ್ನು ಗೌರವಿಸಬೇಕು. ಮಹಿಳಾÀ ಸಾಧಕರನ್ನು ಸ್ಪೂರ್ತಿಯಾಗಿಟ್ಟುಕೊಂಡು ಸಾಧನೆಯ ಹಾದಿಯಲ್ಲಿ ನಡೆದು ಈ ದೇಶಕ್ಕೆ ಕೊಡುಗೆ ನೀಡಬೇಕೆಂದು ಹೇಳಿದರು.

ಮಹಿಳೆ ಆರ್ಥಿಕವಾಗಿ, ಸಾಮಾಜಿಕವಾಗಿ, ಸಾಂಸ್ಕøತಿಕವಾಗಿ ಪ್ರಗತಿ ಪಥದಲ್ಲಿ ಮುನ್ನಡೆಯಲೂ ಪ್ರಸಕ್ತ ಸರ್ಕಾರ ಮಹಿಳೆಯರಿಗಾಗಿ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಮಹಿಳೆ ಶಿಕ್ಷಣ ಪಡೆಯುವ ಮೂಲಕ ಸ್ವಾವಲಂಬನೆಯತ್ತ ದಿಟ್ಟ ಹೆಜ್ಜೆ ಇಡಬೇಕು ಎಂದು ಅವರು ಹೇಳಿದರು.

ಮಹಿಳೆಯರೊಂದಿಗೆ ನೇರ ಸಂಪರ್ಕದಲ್ಲಿರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಮಹಿಳಾ ಸಹಾಯಕಿಯರ ಹುದ್ದೆ ಅತ್ಯಂತ ಜವಾಬ್ದಾರಿಯುತವಾಗಿದೆ. ಜಿಲ್ಲೆಯಲ್ಲಿ 1260 ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹುದ್ದೆಗಳ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತಿದೆ ಎಂದು ತಿಳಿಸಿದ ಅವರು, ಮಹಿಳೆಯರು ಜಿಲ್ಲೆಯಲ್ಲಿ ಸ್ತ್ರೀ ಶಕ್ತಿ ಮತ್ತು ಸ್ವಸಹಾಯ ಸಂಘಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದು ಅವರು ಹೇಳಿದರು.

ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಅವರು ಮಾತನಾಡಿ, ಮಹಿಳೆ ಈ ಸಮಾಜಕ್ಕೆ ನೀಡಿದ ಕೊಡುಗೆ ಅಪಾರವಾಗಿದೆ. ತಾಯಿಯ ತ್ಯಾಗ ಜಗತ್ತಿನ ಎಲ್ಲ ಪ್ರಶಸ್ತಿಗಳಿಗೂ ಮಿಗಿಲಾಗಿದೆ ಮಹಿಳೆ ಸ್ವಾವಲಂಬಿ ಜೀವನ ನಡೆಸುವಂತಾಗಬೇಕು. ಈ ನಿಟ್ಟಿನಲ್ಲಿ ಹೆಣ್ಣು ಮಕ್ಕಳು ಶಿಕ್ಷಣ ಪಡೆಯುವುದು ಅತ್ಯವಶ್ಯಕವಾಗಿದ್ದು,  ಅಂಗನವಾಡಿಗಳ ಮೂಲಕ ಮಕ್ಕಳಿಗೆ ಶಿಕ್ಷಣ ದೊರಕಿಸುವ ಇಲಾಖೆ ಕಾರ್ಯವಾಗಿದ್ದು,  ನಾಡಿನ, ನಾಳಿನ ಭವಿಷ್ಯ ಮಕ್ಕಳ ಸೇವೆ ಮಾಡುವ ಅವಕಾಶ ದೊರಕಿದೆ. ಜಿಲ್ಲೆಯ ಎಲ್ಲ ಅಂಗನವಾಡಿಗಳ ಶ್ರೇಯೋಭಿವೃದ್ದಿಗಾಗಿ ಶ್ರಮಿಸಲಾಗುವುದು ಎಂದು ಅವರು ಹೇಳಿದರು.  

ಉಪನ್ಯಾಸ ನೀಡಿದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ಅಹಲ್ಯಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನದ ಮುಖ್ಯಸ್ಥರು ಹಾಗೂ ನಿರ್ದೇಶಕರಾದ ಪ್ರೊ. ಲಕ್ಷ್ಮೀದೇವಿ ವೈ. ಅವರು ಮಾತನಾಡಿ, ಮಹಿಳೆಯರನ್ನು ಜೀವ ಪರ ವ್ಯಕ್ತಿಯಾಗಿ ಪರಿಗಣಿಸಬೇಕು. ಆರ್ಥಿಕತೆಗೆ ಮಹಿಳೆಯರ ಕೊಡುಗೆ ಬಹಳಷ್ಟಿದೆ. ಕುಟುಂಬದಲ್ಲಿ ಮಹಿಳೆಯನ್ನು ಗೌರವಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಹೇಳಿದರು. 

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ಕೆ.ಕೆ.ಚವ್ಹಾಣ ಅವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, ಮಹಿಳೆಯ ಆರ್ಥಿಕ ಸಾಮಾಜಿಕ ಸಾಧನೆ ಕುರಿತು ನೆನಪಿಸುವುದಕ್ಕಾಗಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಗುತ್ತಿದೆ. ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ಕಾಯ್ದೆ, ಮಹಿಳಾ ದೌರ್ಜನ್ಯ ಕಾಯ್ದೆ, ಪೋಕ್ಸೊ ಕಾಯ್ದೆ, ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ.                  ಅದರಲ್ಲಿ ಉದ್ಯೋಗಿನಿ, ಸ್ತ್ರೀ ಶಕ್ತಿ, ಚೇತನಾ ಯೋಜನೆ, ಧನಶ್ರೀ ಯೋಜನೆ, ಮಾಜಿ ದೇವದಾಸಿಯರಿಗೆ ಮಾಸಿಕ ಪಿಂಚಣಿ ಯೋಜನೆ, ವಸತಿ ಯೋಜನೆ ಸಹ ಇಲಾಖೆಯಿಂದ ಕೊಡಮಾಡಲಾಗುತ್ತದೆ. ಮಹಿಳೆಯರಿಗೆ ಉಚಿತ ಕೌಶಲ್ಯ ತರಬೇತಿ ಯೋಜನೆ, ಮಹಿಳೆಯರ ಸುರಕ್ಷತೆಗಾಗಿ ಸಖಿ ಒನ್ ಸ್ಟಾಪ್ ಸೆಂಟರ್, ಮಹಿಳಾ ಸಹಾಯವಾಣಿ, ಮಹಿಳಾ ಸಾಂತ್ವಾನ ಕೇಂದ್ರಗಳು, ಮಹಿಳೆಯರ ಸಹಾಯವಾಣಿ, ಗರ್ಭಿಣಿ ಮಹಿಳೆಯರಿಗೆ ಬಾಣÀಂತಿಯರಿಗೆ ಹಾಗೂ ಮಕ್ಕಳಿಗೆ ಪೌಷ್ಟಿಕ ಆಹಾರ ಹಾಗೂ ಆರೋಗ್ಯ ತಪಾಸಣೆ ಸೇರಿದಂತೆ ಇಲಾಖೆಯಿಂದ ಹಲವಾರು ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸಲಾಗುತ್ತಿದೆ ಜಿಲ್ಲೆಯಲ್ಲಿ 4,850 ಸ್ವ-ಸಹಾಯ ಸಂಘಗಳನ್ನು ಸ್ಥಾಪಿಸಿ, 70 ಸಾವಿರ ಮಹಿಳೆಯರು ಈ ಸಂಘದಲ್ಲಿ ಸದಸ್ಯತ್ವ ಪಡೆದಿರುತ್ತಾರೆ. ಮಹಿಳೆಯರ ಆರ್ಥಿಕ ಸ್ವಾವಲಂಬನೆ ಸಾಧಿಸುವ ನಿಟ್ಟಿನಲ್ಲಿ ಇಲಾಖೆ ಕಾರ್ಯ ನಿರ್ವಹಿಸುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ರಿಷಿ ಆನಂದ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕಿನ ಶಿಶು ಅಭಿವೃದ್ದಿ ಅಧಿಕಾರಿಗಳು, ಅಂಗನವಾಡಿ ಮೇಲ್ವಿಚಾರಕರು. ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು. 

ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಗೈದವರಿಗೆ ಸನ್ಮಾನಿಸಲಾಯಿತು. ವಿವಿಧ ಆಟೋಟ ಹಾಗೂ ಸಾಂಸ್ಕøತಿಕ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದವರಿಗೆ ಪ್ರಶಸ್ತಿ ಪತ್ರ ವಿತರಿಸಲಾಯಿತು. ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಪ್ರಸ್ತುತ ಪಡಿಸಲಾಯಿತು. 

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.



No comments:

Post a Comment