ವಿಜಯಪುರ: ಮುಖ್ಯಮಂತ್ರಿ ಪದಕ ಪಡೆದು ವಿಜಯಪುರ ಜಿಲ್ಲೆಯ ಕೀರ್ತಿ ಹೆಚ್ಚಿಸಿದ ಸಂಚಾರಿ ಪೊಲೀಸ್ ಠಾಣೆಯ ಎಎಸ್‌ಐ ಶಿವಾನಂದ ಕಟ್ಟಿಮನಿ ಅವರಿಗೆ ಪರಿಸರ ಜಾಗೃತಿ ವೇದಿಕೆ ಹಾಗೂ ಶಿವಶರಣ ಶೈಕ್ಷಣಿಕ, ಗ್ರಾಮೀಣಾಭಿವೃದ್ಧಿ ಹಾಗೂ ವಿವಿಧೋದ್ಧೇಶಗಳ ಸಂಸ್ಥೆ ವತಿಯಿಂದ ಇಲ್ಲಿನ ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಪರಿಸರ ಜಾಗೃತಿ ವೇದಿಕೆ ಅಧ್ಯಕ್ಷ ಅಂಬಾದಾಸ ಜೋಶಿ ಮಾತನಾಡಿ, ಸರ್ಕಾರಿ ಸೇವೆಯಲ್ಲಿದ್ದುಕೊಂಡು ಸಮಾಜಮುಖಿ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಮೂಲಕ ಜನಮಾನಸ ಪ್ರೀತಿಗೆ ಪಾತ್ರರಾದ ಶಿವಾನಂದ ಕಟ್ಟಿಮನಿ ಅವರು ಮುಖ್ಯಮಂತ್ರಿಗಳ ಪೊಲೀಸ್ ಪದಕ ಗೌರವಕ್ಕೆ ಭಾಜನರಾಗಿರುವುದು ನಮ್ಮ ವಿಜಯಪುರ ಜಿಲ್ಲೆಗೆ ಹೆಮ್ಮೆಯ ಸಂಗತಿ. ಕಟ್ಟಿಮನಿಯವರಿಗೆ ಇನ್ನಷ್ಟು ಹೆಚ್ಚಿನ ಗೌರವ ಆದರಗಳು ಸಿಗಲಿ ಎಂದು ಹಾರೈಸಿದರು.
ಎಎಸ್‌ಐ ವಾಗ್ಮೋರೆ, ಕಲಾವಿದ ಭೀಮಣ್ಣ ಭಜಂತ್ರಿ, ರಾಷ್ಟಿçÃಯ ಸಂಶೋಧನಾ ವೇದಿಕೆ ಅಧ್ಯಕ್ಷ ಲಾಯಪ್ಪ ಇಂಗಳೆ, ಶೈಕ್ಷಣಿಕ, ಗ್ರಾಮೀಣಾಭಿವೃದ್ಧಿ ಹಾಗೂ ವಿವಿಧೋದ್ಧೇಶಗಳ ಸಂಸ್ಥೆ ಅಧ್ಯಕ್ಷ ಕಲ್ಲಪ್ಪ ಶಿವಶರಣ, ಹೋರಾಟಗಾರ ಬಸವಕುಮಾರ ಕಾಂಬಳೆ, ಪತ್ರಕರ್ತರಾದ ಉಮೇಶ ಶಿವಶರಣ, ಭೀಮರಾಯ ಕುಂಟೋಜಿ, ಶ್ರೀಕಾಂತ ಮೆಂಡೇಗಾರ, ಸುಬ್ರಮಣ್ಯ ಭಜಂತ್ರಿ ಇದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


No comments:
Post a Comment