Saturday, May 31, 2025

ನಿಡಗುಂದಿ : ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಚಿವ ಶಿವಾನಂದ ಚಾಲನೆ ಬಡವರ ಹಸಿವು ನೀಗಿಸುವ ಇಂದಿರಾ ಕ್ಯಾಂಟಿನ್ ಲೋಕಾರ್ಪಣೆ

ನಿಡಗುಂದಿ : ಜೂನ್ 1 ರಂದು ನಿಡಗುಂದಿ ಪಟ್ಟಣದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಬಸವನಬಾಗೇವಾಡಿ ವಿಧಾನಸಭೆಯನ್ನು ಪ್ರತಿನಿಧಿಸುತ್ತಿರುವ ಜವಳಿ, ಕೃಷಿ ಮಾರುಕಟ್ಟೆ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವರಾದ ಶಿವಾನಂದ ಪಾಟೀಲ ಅವರು ಚಾಲನೆ ನೀಡಲಿದ್ದಾರೆ.

 ನಿಡಗುಂದಿ ಪಟ್ಟಣದಲ್ಲಿ  ಜೂನ್ ರಂದು ಸಂಜೆ 4 ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ 1.45 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಇಂದಿರಾ ಕ್ಯಾಂಟಿನ್ ಲೋಕಾರ್ಪಣೆಗೊಳ್ಳಲಿದೆ.

ಪೌರಾಡಳಿತ ನಿರ್ದೇಶನಾಲಯದಿಂದ ಸದರಿ ಕಟ್ಟಡ ನಿರ್ಮಾಣಕ್ಕೆ 87 ಲಕ್ಷ ರೂ. ಹಗೂ 48 ಲಕ್ಷ ರೂ. ಮೊತ್ತವನ್ನು ಅಡುಗೆ ಪರಿಕರಗಳಿಗೆ ಹಾಗೂ ಸ್ಥಳೀಯ ಪಟ್ಟಣ ಪಂಚಾಯತ್ನಿಂದ 10 ಲಕ್ಷ ರೂ. ಅನುದಾನ ನೀಡಿದೆ. 

ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟ್ ನಿಧಿಯಿಂದ 15 ಲಕ್ಷ ರೂ. ವೆಚ್ಚದಲ್ಲಿ ಸರಕಾರಿ ಮಾದರಿ ಪ್ರಾಥಮಿಕ  ಶಾಲೆ ಕೊಠಡಿಗಳ ದುರಸ್ಥಿ ಕಾಮಗಾರಿ ಭೂಮಿ ಪೂಜೆ ನೆರವೇರಲಿದೆ.

  ಇದಲ್ಲದೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ 20 ಲಕ್ಷ ರೂ. ಅನುದಾನದಲ್ಲಿ ಸಿದ್ದರ ಕಾಲೋನಿಯಲ್ಲಿ ನಿರ್ಮಿಸಿರುವ ಅಂಗನವಾಡಿ ಕಟ್ಟಡ ಲೋಕಾರ್ಪಣೆಗೊಳ್ಳಲಿದೆ.

   ಪಟ್ಟಣದ ವಾರ್ಡ್ ನಂ.15 ರಲ್ಲಿ ಮುದ್ದೇಶ್ವರಪ್ರಭು ದೇವಸ್ಥಾನ ಹತ್ತಿರ ನಿರ್ಮಿಸಲಾಗುವ ರಂಗ ಮಂಟಪದ ಭೂಮಿ ಪೂಜೆ ನೆರವೇರಲಿವೆ.

    ಸದರಿ ಎಲ್ಲ ಅಭಿವೃದ್ಧಿ ಯೋಜನೆಗಳಿಗೆ ಸಚಿವರು ಚಾಲನೆ ನೀಡಲಿದ್ದಾರೆ ಎಂದು ಸಚಿವರ ಕಛೇರಿ ಪ್ರಕಟಣೆ ತಿಳಿಸಿದೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಕೊಲ್ಹಾರ : ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಚಿವ ಶಿವಾನಂದ ಚಾಲನೆ ಬಡವರ ಹಸಿವು ನೀಗಿಸುವ ಇಂದಿರಾ ಕ್ಯಾಂಟಿನ್ ಲೋಕಾರ್ಪಣೆ

ಕೊಲ್ಹಾರ : ಜೂನ್ 1 ರಂದು ಕೊಲ್ಹಾರ ಪಟ್ಟಣದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಬಸವನಬಾಗೇವಾಡಿ ವಿಧಾನಸಭೆಯನ್ನು ಪ್ರತಿನಿಧಿಸುತ್ತಿರುವ ಜವಳಿ, ಕೃಷಿ ಮಾರುಕಟ್ಟೆ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವರಾದ ಶಿವಾನಂದ ಪಾಟೀಲ ಅವರು ಚಾಲನೆ ನೀಡಲಿದ್ದಾರೆ.

  ಕೊಲ್ಹಾರ ಪಟ್ಟಣದಲ್ಲಿ ಜೂನ್ ರಂದು ಸಂಜೆ 5 ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟ್ ನಿಧಿಯಿಂದ 45 ಲಕ್ಷ ರೂ. ವೆಚ್ಚದಲ್ಲಿ ಸರಕಾರಿ ಪ್ರೌಢ ಶಾಲಾ ಕೊಠಡಿಗಳ ದುರಸ್ಥಿ ಕಾಮಗಾರಿ ಭೂಮಿ ಪೂಜೆ ನೆರವೇರಿಸಲಿದ್ದಾರೆ.

  ಇದಲ್ಲದೇ  1.45 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ  ಇಂದಿರಾ ಕ್ಯಾಂಟಿನ್ ಲೋಕಾರ್ಪಣೆ ನಡೆಯಲಿದೆ. ಇಂದಿರಾ ಕ್ಯಾಂಟೀನ್ ಕಟ್ಟಡ ನಿರ್ಮಾಣಕ್ಕೆ 87 ಲಕ್ಷ ರೂ.  ಹಾಗೂ ಅಡುಗೆ ಪರಿಕರಗಳಿಗೆ 48 ಲಕ್ಷ ರೂ. ವೆಚ್ಚಾಗಿದೆ. ಪೌರಾಡಳಿತ ನಿರ್ದೇಶನಾಲಯದ ಜೊತೆಗೆ ಕೊಲ್ಹಾರ ಪಟ್ಟಣ ಪಂಚಾಯತ್ ನಿಂದ  10 ಲಕ್ಷ ರೂ ಅನುದಾನ ಒದಗಿಸಲಾಗಿದೆ.

 ಸದರಿ ಎಲ್ಲ ಅಭಿವೃದ್ಧಿ ಯೋಜನೆಗಳಿಗೆ ಸಚಿವರು ಚಾಲನೆ ನೀಡಲಿದ್ದಾರೆ ಎಂದು ಸಚಿವರ  ಕಛೇರಿ ಪ್ರಕಟಣೆ ತಿಳಿಸಿದೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

01-06-2025 EE DIVASA KANNADA DAILY NEWS PAPER

Thursday, May 29, 2025

ಜುಲೈ 12 ರಂದು ಜಿಲ್ಲೆಯಾದ್ಯಂತ ರಾಷ್ಟಿçÃಯ ಲೋಕ್ ಅದಾಲತ್ ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಕ್ಕೆ ಅವಕಾಶ : ಜಿಲ್ಲಾ ನ್ಯಾಯಾಧೀಶ ಡಾ.ಕಸನಪ್ಪ ನಾಯಕ

ವಿಜಯಪುರ : ಜಿಲ್ಲಾ ಕೇಂದ್ರವೂ ಸೇರಿದಂತೆ ಜಿಲ್ಲೆಯಾದ್ಯಂತ ಇರುವ ಎಲ್ಲ ಅಧೀನ ನ್ಯಾಯಾಲಯಗಳಲ್ಲಿ ಜುಲೈ 12 ರಂದು ರಾಷ್ಟಿçÃಯ ಲೋಕ್ ಅದಾಲತ್ ಆಯೋಜಿಸಲಾಗಿದ್ದು, ಈ ಅದಾಲತ್‌ನಲ್ಲಿ ಕಕ್ಷಿದಾರರು ಭಾಗವಹಿಸಿ ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಕ್ಕೆ ಅವಕಾಶವಿರುವುದರಿಂದ ಈ ಅದಾಲತ್ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಕಸನಪ್ಪ ನಾಯಕ ಅವರು ತಿಳಿಸಿದರು.

ಗುರುವಾರ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಎಡಿಆರ್ ಕಟ್ಟಡದಲ್ಲಿ ಆಯೋಜಿಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟಿçÃಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಎಲ್ಲ ವರ್ಗದ ಕಕ್ಷಿದಾರರಿಗೆ ಅನುಕೂಲವಾಗುವ ದೃಷ್ಟಿಯಿಂದ ಜಿಲ್ಲಾ ಕೇಂದ್ರ ಹಾಗೂ ಜಿಲ್ಲೆಯ ಎಲ್ಲ ತಾಲೂಕಾ ನ್ಯಾಯಾಲಯಗಳಲ್ಲಿ ಜುಲೈ 12 ರಂದು ರಾಷ್ಟಿçÃಯ ಲೋಕ್ ಅದಾಲತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಲೋಕ್ ಅದಾಲತ್ ಕಾರ್ಯಕ್ರಮದಲ್ಲಿ ರಾಜಿ ಸಂಧಾನಕ್ಕೆ ಒಳಪಡಬಹುದಾದ ವ್ಯಾಜ್ಯ ಪೂರ್ವ ಪ್ರಕರಣಗಳು, ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕ, ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಮತ್ತು ಇತರೆ ಸಿವಿಲ್ ಪ್ರಕರಣಗಳು, ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬAಧಪಟ್ಟ ಪ್ರಕರಣಗಳು (ರೇರಾ), ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು (ಡಿಆರ್‌ಟಿ), ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್‌ಸಿ), ಕಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳು, ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಕಾರ್ಮಿಕ ವಿವಾದಗಳು, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬAಧಿಸಿದ ಸೇವಾ ಪ್ರಕರಣಗಳು, ಪಿಂಚಣಿ ಪ್ರಕರಣಗಳು, ಕಂದಾಯ ಪ್ರಕರಣಗಳು ರಾಜಿಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ರಾಷ್ಟಿçÃಯ ಲೋಕ್ ಅದಾಲತ್‌ನಲ್ಲಿ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದು ಹೇಳಿದರು.

 ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ದಿನಾಂಕ: 01-05-2025ಕ್ಕೆ 45,900 ಸಿವಿಲ್ ಪ್ರಕರಣಗಳು ಹಾಗೂ 24,535 ಕ್ರಿಮಿನಲ್ ಪ್ರಕರಣಗಳು ಒಳಗೊಂಡAತೆ ಒಟ್ಟು 70,435 ಪ್ರಕರಣಗಳು ವಿಚಾರಣೆಗೆ ಬಾಕಿ ಇದ್ದು, ಇವುಗಳಲ್ಲಿ ಈಗಾಗಲೇ 1,225 ಸಿವಿಲ್ ಪ್ರಕರಣಗಳು ಹಾಗೂ 727 ಕ್ರಿಮಿನಲ್ ಪ್ರಕರಣಗಳು ಸೇರಿದಂತೆ ಒಟ್ಟು 1,952 ಪ್ರಕರಣಗಳನ್ನು ಇತ್ಯರ್ಥಕ್ಕಾಗಿ ಗುರುತಿಸಲಾಗಿದೆ. ಸಂಬAಧಿಸಿದ ವಕೀಲರು ಹಾಗೂ ಕಕ್ಷಿದಾರರೊಂದಿಗೆ ಮಾತುಕತೆಯ ಮೂಲಕ ಇನ್ನೂ ಹೆಚ್ಚಿನ ಪ್ರಕರಣಗಳನ್ನು ಸಹ ರಾಜಿಗಾಗಿ ಗುರುತಿಸಲಾಗುತ್ತಿದೆ.ಹೆಚ್ಚಿನ ಪ್ರಕರಣಗಳು ರಾಷ್ಟಿçÃಯ ಲೋಕ ಅದಾಲತ್‌ನಲ್ಲಿ ಇತ್ಯರ್ಥಗೊಳ್ಳುವ ನಿರೀಕ್ಷೆ ಇದೆ ಎಂದು ಅವರು ತಿಳಿಸಿದರು. 

ಜಿಲ್ಲೆಯಲ್ಲಿ ಜುಲೈ 12 ರಂದು ಜರುಗುವ ರಾಷ್ಟಿçÃಯ ಲೋಕ್ ಅದಾಲತ್‌ನಲ್ಲಿ ಕಕ್ಷಿದಾರರು ತಮ್ಮ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಂಡು ನೆಮ್ಮದಿಯ ಜೀವನಕ್ಕೆ ನಾಂದಿ ಹಾಡಲು ಸುವರ್ಣಾವಕಾಶ ಕಲ್ಪಿಸಿದ್ದು, ಇದರ ಸದುಪಯೋಗ ಪಡೆದುಕೊಳ್ಳುವಂತೆ ಅವರು ತಿಳಿಸಿದರು. 

ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಎಸ್ ಹಾಗರಗಿ, ಜಿಲ್ಲಾ ನ್ಯಾಯವಾದಿಗಳ ಸಂಘದ ಕಾರ್ಯದರ್ಶಿಗಳಾದ ಎಸ್.ಎಸ್. ಚೂರಿ ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಕರ್ನಾಟಕದ ಯಾವುದೇ ಚಿತ್ರ ಮಂದಿರಗಳಲ್ಲಿ ತಮಿಳು ಚಲನಚಿತ್ರ ಥಗ್ ಲೈಫ ಬಿಡುಗಡೆ ಮಾಡದಿರಲು ಕರವೇ ಆಗ್ರಹ

ವಿಜಯಪುರ: ಕರ್ನಾಟಕದ ಯಾವುದೇ ಚಿತ್ರ ಮಂದಿರಗಳಲ್ಲಿ ತಮಿಳು ಚಲನಚಿತ್ರ ಥಗ್ ಲೈಫ ಬಿಡುಗಡೆ ಮಾಡಬಾರದು ಎಂದು ಒತ್ತಾಯಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣಕುಮಾರಶೆಟ್ಟಿ ಬಣ) ಪದಾಧಿಕಾರಿಗಳು ವಿಜಯಪುರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಬಸವರಾಜ ಅ ತಾಳಿಕೋಟಿ ಮಾತನಾಡಿ, ಮೊನ್ನೆ ನಡೆದ ಥಗ್ ಲೈಫ್ ಚಲನಚಿತ್ರದ ಧ್ವನಿ ಸುರಳಿ ಬಿಡುಗಡೆ ಸಮಾರಂಭದಲ್ಲಿ ತಮಿಳು ನಟ ಕಮಲ ಹಾಸನ್ ಕನ್ನಡ ಹುಟ್ಟಿದ್ದು ತಮಿಳುನಿಂದ ಎಂಬ ವಿವಾದಾತ್ಮಕ ಹೇಳಿಕೆ ನೀಡಿ ಕನ್ನಡಿಗರ ಭಾವನೆಗೆ ಧಕ್ಕೆ ಉಂಟು ಮಾಡುವದಲ್ಲದೆ ಕನ್ನಡಿಗರ ಹಾಗೂ ತಮಿಳು ಮಧ್ಯ ವಿಷಬಿಜ ಬಿತ್ತುವದೊರಂದಿಗೆ ಕನ್ನಡಿಗರಿಗೆ ಅಫಮಾನ ಮಾಡಿರುತ್ತಾರೆ ಪ್ರತಿ ಭಾರಿ ತಮಿಳು ಹೊಸ ಚಲನಚಿತ್ರ ಬಿಡುಗಡೆ ಸಂಧರ್ಭದಲ್ಲಿ ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ಮಾಡುತ್ತಲ್ಲೆ ಬಂದಿದ್ದಾರೆ. ಈ ಹೇಳಿಕೆಗಳು ನಿರಂತರವಾಗಿ ನಿಡಿ ಹೊಗುತ್ತಾರೆ. ನಂತರ ಇಲ್ಲಿ ಕನ್ನಡಿಗರು ಮತ್ತು ತಮಿಳು ಮಧ್ಯ ಶಾಂತಿ, ಸು ವ್ಯವಸ್ತೆ ಹದಗೆಡುವಂತೆ ಮಾಡಿರುತ್ತಾರೆ. ಆದರಿಂದ ಹಿಂತಹ ಹೇಳಿಕೆ ನೀಡಿರುವ ಈ ನಟನ ಚಿತ್ರ ನಮ್ಮ ರಾಜ್ಯದಲ್ಲಿ ಥಗ್ ಲೈಪ್ ಚಿತ್ರ ಬಿಡುಗಡೆ ಮಾಡಬಾರದೆಂದು ಎಂದು ಒತ್ತಾಯಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಮಹಾಂತೇಶ ಹಿರೇಮಠ, ಆನಂದ ಹಡಗಲಿ, ರವಿ ಗೊಳಸಂಗಿ, ಸತೀಶ, ವಿನುತ, ಭೀಮು, ವಿರೇಶ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಶಿವಾನಂದರ ದಕ್ಷ ಆಡಳಿತದಿಂದ ವಿಡಿಸಿಸಿ ಅಭ್ಯುದಯ : ಗುಡದಿನ್ನಿ

ವಿಜಯಪುರ : ವಿಜಯಪುರ ಜಿಲ್ಲೆಯ ಸಹಕಾರ ರಂಗದ ಅಭಿವೃದ್ಧಿಗೆ ಹಾಗೂ ಕೇಂದ್ರ ಸಹಕಾರಿ ಬ್ಯಾಂಕ್ ಸದೃಢವಾಗಿ, ಸಮರ್ಥ ಹಾಗೂ ದಕ್ಷತೆಯಿಂದ ಆಡಳಿತ ನಡೆಸುವಲ್ಲಿ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರೂ ಆಗಿರುವ ಕೃಷಿ ಮಾರುಕಟ್ಟೆ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಜವಳಿ ಸಚಿವರಾದ ಶಿವಾನಂದ ಎಸ್ ಪಾಟೀಲ ಅವರ ಕೊಡುಗೆ ಅನನ್ಯವಾಗಿದೆ. ಅವರ ಅವಿರತ ಪರಿಶ್ರಮ, ದೂರ ದೃಷ್ಠಿ, ಕಾಳಜಿ, ಸಕಾಲಿಕ ಕ್ರಮಗಳೇ ಬ್ಯಾಂಕ್ ಅಭ್ಯುದಯಕ್ಕೆ ಕಾರಣ ಎಂದು ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಉಪಾಧ್ಯಕ್ಷರಾದ ರಾಜಶೇಖರ ಬ. ಗುಡದಿನ್ನಿ ಬಣ್ಣಿಸಿದರು.

ಬಸವನಬಾಗೇವಾಡಿ ತಾಲೂಕಿನ ಕುಪಕಡ್ಡಿ ಗ್ರಾಮದಲ್ಲಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಛೇರಿ ಕಟ್ಟಡ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಆರ್ಥಿಕವಾಗಿ ಸದೃಢತೆ ಹೊಂದಿದ್ದು, ಜಿಲ್ಲೆಯ 2.54 ಲಕ್ಷ ರೈತರಿಗೆ ಕೃಷಿಗಾಗಿಯೇ 2008 ಕೋಟಿ ರೂ. ಸಾಲ ನೀಡುವಲ್ಲಿ ಅಧ್ಯಕ್ಷರಾದ ಸಚಿವ ಶಿವಾನಂದ ಪಾಟೀಲ ಅವರ ಇಚ್ಛಾಶಕ್ತಿಯೇ ಪ್ರಮುಖ ಕಾರಣ ಎಂದರು.

ಸಹಕಾರಿ ಸಂಘಗಳು ಗ್ರಾಮೀಣ ಜನರ ಅದರಲ್ಲೂ ಅನ್ನದಾತನ ಆರ್ಥಿಕ ಸಬಲೀಕರಣಕ್ಕೆ ವಿಶೇಷ ಕೊಡುಗೆ ನೀಡಿವೆ. ಗ್ರಾಮೀಣ ಸಹಕಾರಿ ವ್ಯವಸ್ಥೆ ರೈತರಿಗೆ ಅದರಲ್ಲೂ ಕೃಷಿ ಸಂಬಂಧಿ ಸೇವೆಗಳಿಗೆ ಹಳ್ಳಿಗಳಲ್ಲೇ  ರೈತಾಪಿ ವರ್ಗದವರಿಗೆ ಸ್ಥಾನಿಕವಾಗಿ ಆರ್ಥಿಕ ಹಾಗೂ ಕೃಷಿಗೆ ಸಂಬಂಧಿತ ಸೇವೆಗಳನ್ನು ನೀಡುತ್ತಲಿವೆ. ಸಂಘದ ಸದಸ್ಯರು ಪಾರದರ್ಶಕ ಆಡಳಿತದ ಮೂಲಕ ಗ್ರಾಹಕರು ವಿಶ್ವಾಸವಿರಿಸಿ ವ್ಯವಹರಿಸುವ ರೀತಿಯಲ್ಲಿ ಸೇವೆ ನೀಡಿದಾಗಲೇ ಸಹಕಾರ ಸಂಘಗಳ ಬೆಳವಣಿಗೆ ಸಾಧ್ಯ ಎಂದು ವಿವರಿಸಿದರು.

ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾಗಿದ್ದ ದಿ. ಬಿ.ಎಸ್.ಪಾಟೀಲ ಕುಪ್ಪಕಡಿ ಇವರು ಅವಿಭಜಿತ ವಿಜಯಪುರ ಜಿಲ್ಲೆಯಲ್ಲಿ ಸಹಕಾರ ಕ್ಷೇತ್ರದ ಬೆಳವಣಿಗೆಗೆ ಶ್ರಮಿಸಿದ್ದನ್ನು ಸ್ಮರಿಸಿದ ರಾಜಶೇಖರ ಅವರು, ಸದರಿ ಸಂಘದ ನೂತನ ಕಟ್ಟಡದಲ್ಲಿ ಹೆಚ್ಚಿನ ಅಭಿವೃದ್ದಿ ಪರ ಕೇಲಸಗಳನ್ನು ಕೈಕೊಂಡು ಉತ್ತರೊತ್ತರವಾಗಿ ಬೆಳೆಯಲ್ಲಿ ಎಂದು ಆಶಯ ವ್ಯಕ್ತಪಡಿಸಿದರು.

ಸಂಘದ ನೂತನ ಉಗ್ರಾಣ ಲೋಕಾರ್ಪಣೆ ಮಾಡಿದ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾದ ಶೇಖರ ಅ ದಳವಾಯಿ ಮಾತನಾಡಿ, ರೈತರಿಗೆ ಜಿಲ್ಲಾ ಬ್ಯಾಂಕು ಸಹಕಾರ ಸಂಘಗಳ ಮೂಲಕ ಸರ್ಕಾರದ ಬಡ್ಡಿ ಸಹಾಯಧನ ಯೋಜನೆಯಡಿ ಶೂನ್ಯ ಬಡ್ಡಿದರದಲ್ಲಿ ಬೆಳೆ ಸಾಲ ನೀಡುತ್ತಿದೆ. ಶೇ.3 ರ ರಿಯಾಯತಿ ಬಡ್ಡಿದರದಲ್ಲಿ ಮಧ್ಯಮಾವಧಿ ಸಾಲ ನೀಡುತ್ತಿದ್ದು, ಹೆಚ್ಚಿನ ರೈತರು ಪ್ರಯೊಜನೆ ಪಡೆಯುವಂತೆ ಕಿವಿ ಮಾತು ಹೇಳಿದರು.

 ಕುಪ್ಪಕಡಿ ಸಹಕಾರ ಸಂಘವು ಕಡಿಮೆ ಜಾಗದಲ್ಲೇ ಉಗ್ರಾಣ ಹಾಗೂ ಕಛೇರಿ ಕಟ್ಟಡವನ್ನು ವ್ಯವಸ್ಥಿತ ರೀತಿಯಲ್ಲಿ ನಿರ್ಮಿಸಿರುವದು ಸಂತೋಷ ಹಾಗೂ ಮಾದರಿ ಸಂಗತಿ ಎಂದರು.

 ಸಮಾರಂಭಕ್ಕೆ ಜ್ಯೋತಿ ಬೆಳಗಿಸಿ ಚಾಲನೆ ನೀಡಿದ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾದ ಚಂದ್ರಶೇಖರಗೌಡ ಪಾಟೀಲ ಮನಗೂಳಿ, ಮಾತನಾಡಿ ಜಿಲ್ಲೆಯ ಜನತೆ ಪ್ಯಾಕ್ಸುಗಳೊಂದಿಗೆ ಹೆಚ್ಚಿನ ಪ್ರಮಾಣದಲ್ಲಿ ವ್ಯವಹರಿಸುತ್ತಿವೆ. ಸದಸ್ಯರು ಪ್ಯಾಕ್ಸುಗಳಲ್ಲಿ 1039 ಕೋಟಿ ರೂ. ಠೇವಣಿ ಇರಿಸಿದ್ದಾರೆ. ಇದು ಸಂಘಗಳ ಉತ್ತಮ ಕಾರ್ಯನಿರ್ವಹಣೆಗೆ ಸಾಕ್ಷಿಯಾಗಿದೆ ಎಂದರು. 

ಅಲ್ಲದೆ 214 ಸಂಘಗಳು ಲಾಭದಲ್ಲಿದ್ದು 58 ಸಂಘಗಳು ಹಾನಿಯಲ್ಲಿವೆ ಇಂತಹ ಸಂಘಗಳ ಅಭಿವೃದ್ದಿಗೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕು ತೀವ್ರವಾಗಿ ಶ್ರಮಿಸುತ್ತಲಿದೆ ಎಂದು ತಿಳಿಸಿದರು. 

  ಸಮಾರಂಭದ ದಿವ್ಯ ಸಾನಿದ್ಯ ವಹಿಸಿದ್ದ ಆಲಗೂರು ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಡಾ.ಮಹಾದೇವ ಶ್ರೀಗಳು ಮಾತನಾಡಿ, ಸಹಕಾರ ಸಂಘಗಳು ಗ್ರಾಮಿಣ ಸಂಸ್ಥೆಗಳಾಗಿದ್ದು ಗ್ರಾಮಸ್ಥರಿಂದಲೆ ಸ್ಥಾಪಿತಗೊಂಡಿವೆ. ಸದರಿ ಸಂಸ್ಥೆಗಳು ಸಹಕಾರ ತತ್ವಗಳಿಗೆ ಅನುಗುಣವಾಗಿ ವಿಸ್ವಾಸ, ನಂಬಿಕೆ, ಪ್ರಾಮಾಣಿಕತೆ ಹಾಗೂ ಪಾರದರ್ಶಕವಾಗಿ ಕಾರ್ಯನಿರ್ವಹಿಸಿ ಹೆಚ್ಚಿನ ಪ್ರಗತಿ ಹೊಂದಲಿ ಹಾರೈಸಿದರು.

ಸಂಘದ ಅಧ್ಯಕ್ಷೆ ಕಸ್ತೂರಿಬಾಯಿ ಸಂ. ಬಿರಾದಾರ ಅಧ್ಯಕ್ಷತೆ ವಹಿಸಿದ್ದರು. ತಾನಾಜಿ ನಾಗರಾಳ, ಸಿದ್ದನಗೌಡ ಬ. ಪಾಟಿಲ,  ಬಾವುರಾವ ಕುಲಕರ್ಣಿ, ಗುರನಗೌಡ ಬಿರಾದಾರ, ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಡಿಜಿಎಂ ಪಿ.ವಾಯ್.ಡಿಂಗಿ, ಎಸ್.ಬಿ.ಹೊಸಮನಿ, ಸಹಕಾರ ಅಭಿವೃದ್ದಿ ಅಧಿಕಾರಿ ಶ್ರೀಶೈಲ ಹಂಗರಗಿ ವೇದಿಕೆ ಮೇಲಿದ್ದರು. 

ಗುರನಗೌಡ ಬಿರಾದಾರ ಪ್ರಾಸ್ಥಾವಿಕ ಮಾತನಾಡಿದರೆ, ಸಂಗನಗೌಡ ಬಿರಾದಾರ ಸ್ವಾಗತಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Wednesday, May 28, 2025

ಬಾನು ಮುಷ್ತಾಕ್ ನಾಲ್ಕು ಗೋಡೆಗಳ ನಡುವೆ ಮೈಗೆ ಎಣ್ಣೆ ಹಚ್ವಿಕೊಂಡು ಸುರಕ್ಷಿತವಾಗಿ ಕುಳಿತು ಬರೆದ ಲೇಖಕಿಯಲ್ಲ: ಚಳವಳಿಗಳಲ್ಲಿ ಬೆರೆತ ಬಂಡಾಯಗಾರ್ತಿ: ಕೆ.ವಿ.ಪ್ರಭಾಕರ್ ವಿಶ್ಲೇಷಣೆ

ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ಬೆಂಗಳೂರು : ಭಾನು ಮುಷ್ತಾಕ್‌ ಮಾನವೀಯತೆ ಮತ್ತು ಭಾರತೀಯತೆಯನ್ನು  ಬೆಸೆಯುವ ನೇಕಾರರು. ಇವರಿಗೆ ಬಂದಿರುವ ಬೂಕರ್‌ ಇಂಟರ್‌ ನ್ಯಾಷನಲ್‌ ಪ್ರಶಸ್ತಿ ನಾಗರಿಕತೆಯ ಬಯಕೆ ಆಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ನುಡಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಬಹುರೂಪಿ ಮತ್ತು ಗಾಂಧಿ ಪ್ರತಿಷ್ಠಾನ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ "ಬೂಕರ್ ಇಂಟರ್ ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಅವರನ್ನು ಅಭಿನಂದಿಸಿ ಮಾತನಾಡಿದರು. 

ವಿಚ್ಛಿದ್ರಕಾರಿ ಶಕ್ತಿಗಳು, ಮತಾಂದತೆ ಹಾಗೂ ಮೂಲಭೂತವಾದ ಒಟ್ಟಾಗಿ ಬೆಸೆದುಕೊಂಡು ಜಗತ್ತನ್ನು ನಾಶ ಮಾಡುತ್ತಿರುವ ಹೊತ್ತಲ್ಲಿ, ಭಾನು ಮುಷ್ತಾಕ್‌ ಅವರ ಮಾನವೀಯತೆಯ ಬೆಸುಗೆ ಮತ್ತು ಭಾರತೀಯತೆಯ ಬೆಸುಗೆಗೆ ಬೂಕರ್‌ ಇಂಟರ್‌ ನ್ಯಾಷನಲ್‌ ಪ್ರಶಸ್ತಿ ಬಂದಿದೆ ಎಂದು ಮೆಚ್ಚುಗೆ ಸೂಚಿಸಿದರು. 

ಸಾಹಿತ್ಯದ ಹೆಸರಿನಲ್ಲಿ ಕೊಡುತ್ತಿರುವ ಈ ಸಂದೇಶವು, ಎಲ್ಲ ಮೂಲಭೂತವಾದಿ ಶಕ್ತಿಗಳಿಗೆ ಕೊಟ್ಟಿರುವ ಕಪಾಳಮೋಕ್ಷ ಎಂದು ನಾನು ಭಾವಿಸುತ್ತೇನೆ. ಇದು ಎಲ್ಲಾ ರೀತಿಯ ಧಾರ್ಮಿಕ ದರ್ಪಗಳಿಗೆ ಕೊಟ್ಟಿರುವ ಏಟು ಮತ್ತು ಮಾನವೀಯ ಧರ್ಮಕ್ಕೆ, ಎಲ್ಲಾ ಧರ್ಮದಲ್ಲಿರುವ ಮಾನವೀಯ ವ್ಯಕ್ತಿತ್ವಗಳಿಗೆ ಸಿಕ್ಕಿರುವ ಮನ್ನಣೆ ಕೂಡ ಆಗಿದೆ.

ಕೆಲವು ಪ್ರಗತಿಪರ ಲೇಖಕರೇ ಬಾನು ಗಿಂತ ದೊಡ್ಡ ಸಾಹಿತಿಗಳಿದ್ದಾರೆ ಎಂದು ಗೊಣಗಿದ್ದು ನನಗೆ ಗೊತ್ತಿದೆ. ನಿಜ, ಭಾನು ಅವರಿಗಿಂತ ಹೆಚ್ಚೆಚ್ಚು ಪುಸ್ತಕ ಪ್ರಕಟಿಸಿದ ಲೇಖಕರಿದ್ದಾರೆ ಹಾಗೆಯೇ ದೊಡ್ಡ ಮಹಿಳಾ ಲೇಖಕಿಯರು ಬಹಳಷ್ಟು ಇದ್ದಾರೆ. ಸೌಂದರ್ಯ ಮಿಮಾಂಸೆಯ ದೃಷ್ಟಿಯಿಂದ ಬಾನುವನ್ನು ಮೀರಿಸಿದ ಲೇಖಕಿಯರೂ  ಇದ್ದಾರೆ, ಅವರಿಗೆ ಪ್ರಶಸ್ತಿ ದೊರಕಿದರೂ ನನಗೆ ವೈಯುಕ್ತಿಕವಾಗಿ ಸಂತೋಷವೇ.

 ಆದರೆ ಬಾನು ಅವರಿಗೆ ಪ್ರಶಸ್ತಿ ಲಭಿಸಿರುವುದು ಹೆಚ್ಚಿನ ಸಂತೋಷವನ್ನು ನೀಡಿದೆ ಏಕೆಂದರೆ ಮೂಲಭೂತವಾದಿ ಶಕ್ತಿಗಳಿಗೆ ಎಲ್ಲರೂ ಶರಣಾಗುತ್ತಿರುವ  ಅಸಹಾಯಕತೆಯ ಹೊತ್ತಿನಲ್ಲಿ ಬಾನು ಅವರು ರಾಜಿ ಮಾಡಿಕೊಳ್ಳದೆ ಹೇಳಬೇಕಾದ್ದನ್ನು ಮುಲಾಜಿಲ್ಲದೆ ತಮ್ಮ ಕತೆಗಳಲ್ಲಿ, ಭಾಷಣಗಳಲ್ಲಿ, ಲೇಖನಗಳಲ್ಲಿ ದಾಖಲಿಸಿದ್ದಾರೆ. ಈ ಕಾರಣಕ್ಕೆ ಬಾನು ಮುಷ್ತಾಕ್‌ ಅವರಿಗೆ ಸಿಕ್ಕಿರುವ ಮನ್ನಣೆ ಕನ್ನಡದ ಮೂಲಕ ಇಡೀ ನಾಗರಿಕತೆಯ ಆಶಯಕ್ಕೆ ಸಿಕ್ಕಿರುವ ಮನ್ನಣೆ ಅಂಥಲೇ ಭಾವಿಸುತ್ತೇನೆ. ಇದಕ್ಕಾಗಿ ಹೆಚ್ಚು ಸಂತೋಷ ಪಡುತ್ತೇನೆ. 

ಬಾನು ಅವರು ತಾವು ಬದುಕಿರುವ ಸಂದರ್ಭವನ್ನು, ಸಮಾಜವನ್ನು ಮಾತ್ರವಲ್ಲ ದೇವರನ್ನೂ ಕೂಡ ಹೆಣ್ಣಿನ ದೃಷ್ಟಿಯಿಂದಲೇ ನೋಡಿದ್ದಾರೆ.

 ಬಂಡಾಯ ಸಾಹಿತ್ಯದ ಧಾರೆಯಲ್ಲಿ ಬಾನು ಅವರದ್ದು ವಿಶಿಷ್ಠವಾದ ಧ್ವನಿ. ತಮ್ಮ ಕಥೆಗಳಲ್ಲಿ ಮೆಲು ಧ್ವನಿಯಲ್ಲಿ ಇದು ಸಾಧ್ಯವಿದೆಯೇ, ಹೀಗಿರಬಹುದೇ, ಹೀಗಿರುವುದು ಸರಿಯೇ, ಇದಕ್ಕೆ ನಿಮ್ಮ ಅಂತ:ಸಾಕ್ಷಿ ಒಪ್ಪುತ್ತದೆಯೇ ? ಎಂಬ ಪ್ರಶ್ನೆಗಳನ್ನು ತಮಗೆ ತಾವೇ ಕೇಳಿಕೊಳ್ಳುತ್ತಾ ಇಡೀ ನಾಗರಿಕತೆಯನ್ನೇ ಪ್ರಶ್ನಿಸುತ್ತಾರೆ. 

 ಬೂಕರ್‌ ಇಂಟರ್‌ ನ್ಯಾಷನಲ್‌ ಪ್ರಶಸ್ತಿ ಘೋಷಣೆಯಾದ ಬಳಿಕ ಬಾನು ಅವರ ‘ಒಮ್ಮೆ ಹೆಣ್ಣಾಗು ಪ್ರಭುವೆ’ ಕಥೆಯನ್ನು ನಾನು ಓದಿದೆ. ಇದರಲ್ಲಿ ಅಂತ:ಕರಣವಿರುವ ದೇವರೂ ಸಹ ಗಂಡಾಳಿಕೆಯನ್ನು ಎತ್ತಿಹಿಡಿಯುವುದಾದರೇ, ಅವನು  ದೇವರು ಹೇಗಾಗಲು ಸಾಧ್ಯ? ಹೆಣ್ಣನ್ನು ಮನುಷ್ಯಳಾಗಿ ಒಪ್ಪಿಕೊಳ್ಳುವ ಶಕ್ತಿ ಇರುವ ದೇವರನ್ನು ಒಪ್ಪಿಕೊಳ್ಳಬಹುದು, ಇಂತಹ ಶಕ್ತಿಯನ್ನು ಅಂತಿಮ ಶಕ್ತಿಯೆಂದು ಒಪ್ಪಿಕೊಳ್ಳಬಹುದು, ಹೆಣ್ಣಿನ ಸಂವೇದನೆಯನ್ನು ಬೆಳೆಸಿಕೊಳ್ಳಲು ದೈವವಾದರೂ ಪ್ರೇರೇಪಿಸಲಿ ಎಂಬ ಭಾವವನ್ನು ವ್ಯಕ್ತಪಡಿಸಿದ್ದಾರೆ.

‘ದೇವರು ಮತ್ತು ಅಪಘಾತ’ ನನಗೆ ಇಷ್ಟವಾದ ಅತ್ಯುತ್ತಮ ಕಥೆಗಳಲ್ಲಿ ಒಂದು. ಇದರಲ್ಲಿ ಹಸಿವಿನ ಕನ್ನಡಿಯಲ್ಲಿ ದೇವರನ್ನು ಪ್ರಶ್ನಿಸುತ್ತಾರೆ. ಈ ಕತೆಯಲ್ಲಿ ಬರುವ ಒಂದು ಸಾಲು ನನ್ನನ್ನು ತೀವ್ರವಾಗಿ ಕಾಡಿತು. ಹೆಣವನ್ನು ಶುಚಿಗೊಳಿಸುವ ಕೆಲಸ ಮಾಡುವ ಆ ಹೆಣ್ಣು, “ಈ ಹಳ್ಳಿಯಲ್ಲಿ ಒಂದೂ ಸಾವಾಗಿಲ್ಲ, ಹೀಗಿರುವಾಗ ನಾವು ಬದುಕುವುದಾದರೂ ಹೇಗೆ? ಎಂದು ದೇವರನ್ನು ಪ್ರಶ್ನಿಸುತ್ತಾರೆ. ಸಾವಿನ ಮೂಲಕವೇ ಬದುಕನ್ನು ಕಟ್ಟಿಕೊಳ್ಳಬೇಕಾದ ಅನಿವಾರ್ಯತೆಯನ್ನು ಕತೆಯಲ್ಲಿ ತೋರಿಸಲಾಗಿದೆ. ಕಥೆಯಲ್ಲಿ , ಅಪಘಾತದಲ್ಲಿ ಮೂವರು ಹೆಣ್ಣುಮಕ್ಕಳು ಸಾವಿಗೀಡಾದಾಗ, ಆ ತಾಯಿಯಲ್ಲಿ ಸಂತೋಷ ಕಾಣುತ್ತದೆ. ಸಾವು ಕಂಡಾಗ ಇಸ್ಲಾಂನಲ್ಲಿ ಹೇಳುವ ಉದ್ಗಾರವೂ ಕೂಡ ತನಗೆ ಮರೆತುಹೋಗಿ, ಇಂದು ತನ್ನ ಮನೆಯಲ್ಲಿ ಎಲ್ಲರೂ ಹೊಟ್ಟೆತುಂಬ ಉಣಬಹುದು ಎಂಬ ಭಾವ ವ್ಯಕ್ತವಾಗಿದೆ. 

ಸಾವಿನ ಮನೆಯಲ್ಲಿ ತಾನು ಅನ್ನ ತಿನ್ನುವಾಗ ಮನೆಯಲ್ಲಿ ಹಸಿದ ಬಾಣಂತಿ ಮಗುವಿನ ಜ್ಞಾಪಕವಾಗಿ, ತಾನು ಆಹಾರ ಸೇವಿಸಲೋ ,ಬೇಡವೋ ಎಂಬ ಬಗ್ಗೆ ತಾಯಿಯಲ್ಲಿ ಗೊಂದಲ ಶುರುವಾಗುತ್ತದೆ. ‘ಕೊನೆಗೂ ಕರುಳಿನ ಕೂಗು ಗೆದ್ದವು’ ಎಂದು ಹಸಿವಿನ ಕೂಗು ಗೆದ್ದಿರುವ ಬಗ್ಗೆ ಲೇಖಕಿ ಪ್ರಸ್ತಾಪಿಸಿದ್ದಾರೆ. ಎಲ್ಲರ ಆಶ್ರಯದಾತ ಎಂದು ಕರೆಯಲ್ಪಡುವ ದೇವರು , ತಮಗೆ ಮಾತ್ರ ಅನ್ನವನ್ನು ನೀಡುತ್ತಿಲ್ಲವಲ್ಲ ಎಂಬ ಪ್ರಶ್ನೆಯನ್ನು  ತಾಯಿ ಕೇಳುತ್ತಾಳೆ.

‘ಇದ್ದತ್’ ಕತೆಯಲ್ಲಿ ವಿಧವೆಯೊಬ್ಬಳು ಇಸ್ಲಾಂ ಧರ್ಮದಂತೆ 45 ದಿನಗಳ ದರ್ಮಾಚರಣೆಯ ಸಂದರ್ಭದಲ್ಲಿನ ಅವಳ ಬದುಕು ಹಿಂಸಾತ್ಮಕವಾಗಿರುವ ಬಗೆ , ಹಾಗೂ ತನಗೆ ಮುಂದೆ  ಉತ್ತಮ ಬದುಕು ಸಿಗಬಹುದೇ ಎಂಬ ಆಸೆಯೂ ಚಿಗುರೊಡೆದ  ಭಾವವನ್ನು ಬಾನು ವ್ಯಕ್ತಪಡಿಸಿದ್ದಾರೆ.

 ಬಾನು ಅವರ ಕತೆಗಳು , ಲೋಕದ ಜೊತೆಗೆ ನಡೆಸುವ ಮಾತುಗಳು ಆಗಿವೆ. 

ಬಾನು ಅವರು ಇತರೆ ದೊಡ್ಡ ಲೇಖಕರಿಗಿಂತ ನಾಲ್ಕು ಹೆಜ್ಜೆ ಮುಂದೆ ಹೋಗಿದ್ದಾರೆಂದು ನನಗೆ ಅನ್ನಿಸುವುದು ಏಕೆ ಗೊತ್ತಾ? ಭಾನು ಅವರು ನಾಲ್ಕು ಗೋಡೆಗಳ ಮಧ್ಯೆ ಕುಳಿತು ಮೈಗೆ ಎಣ್ಣೆ ಹಚ್ಚಿಕೊಂಡು ಸೇಫಾಗಿ ಬರವಣಿಗೆ ಮಾಡಿದವರಲ್ಲ.

 ಜನಪರ ಚಳವಳಿಗಳೊಂದಿಗೆ ತಮ್ಮನ್ನು ತಾವು ಗುರುತಿಸಿಕೊಂಡಿದ್ದು, ಹಾಗೂ ಖಚಿತ ಜನಪರ ನಿಲುವನ್ನು ತೆಗೆದುಕೊಂಡು ಆ ನಿಲುವಿಗೆ ಬದ್ಧವಾಗಿ ನಿಲ್ಲುವ ಗಟ್ಟಿತನ ಅವರಲ್ಲಿದೆ. 

ಲಂಕೇಶ್‌ ಅವರಿಗೇ ರಾಜಕೀಯ ಪಾಠ ಮಾಡಿದ್ದರು:

ಬಾನು ಅವರು ಒಬ್ಬ ಅನುಭವಿ ರಾಜಕಾರಣಿ ಕೂಡ ಹೌದು. ಏಕೆಂದರೆ ಇವರು ಲಂಕೇಶ್‌ ಅವರಿಗೂ ರಾಜಕೀಯ ತಿಳಿವಳಿಕೆ ಹೇಳಿದ್ದರು.

 ನಗರಸಭೆ ಚುನಾವಣೆಗೆ ಸ್ಫರ್ಧಿಸಿದ್ದ ಬಾನು ಅವರಿಗೆ ರಾಜಕೀಯ ರಣರಂಗದ ಪರಿಚಯವೂ ಇದೆ. ಲಂಕೇಶ್‌ ಪ್ರಗತಿ ರಂಗ ಮಾಡುವ ಹೊತ್ತಲ್ಲಿ, “ರಾಜಕೀಯ ಪಕ್ಷ ಮಾಡಬೇಡಿ. ಪ್ರಗತಿರಂಗವನ್ನು ಶುರು ಮಾಡಬೇಡಿ. ಅದು ವಿಫಲವಾಗಲಿದೆ, ಗೆಲ್ಲಲು ಸಾಧ್ಯವಿಲ್ಲ ಎಂದು ಹೇಳಿದಾಗ ಲಂಕೇಶ್ ಅದನ್ನು ಒಪ್ಪುವುದಿಲ್ಲ .

 ತಾವು ನಗರಸಭೆ ಚುನಾವಣೆಗೆ ನಿಂತಾಗ ಉಂಟಾದ ಕಷ್ಟವನ್ನು ಹೇಳಿದ ಬಾನು, ಪಕ್ಷ ಕಟ್ಟಿ ಇಡೀ ರಾಜ್ಯದಲ್ಲಿ ಪಕ್ಷವನ್ನು ನಿಭಾಯಿಸುವುದು ಎಷ್ಟು ಕಷ್ಟವಾಗಬಹುದು ಎಂದು ವಿವರಿಸುತ್ತಾರೆ.

 ಲಂಕೇಶ್‌ ಅವರಿಗೆ ಮುಖ್ಯಮಂತ್ರಿಗಳನ್ನು ಮಂಡಿಯೂರುವಂತೆ ಮಾಡುವ ಶಕ್ತಿ ಇದ್ದ ಹೊತ್ತಲ್ಲೇ ಬಾನು ಅವರು ಸ್ವತಃ ಲಂಕೇಶ್‌ ಅವರಿಗೇ ರಾಜಕೀಯ ತಿಳಿವಳಿಕೆ ಹೇಳಿದ್ದರು. ಇವರ ಈ ತಿಳಿವಳಿಕೆ ಸತ್ಯ ಕೂಡ ಆಯ್ತು. ಪ್ರಗತಿರಂಗ ಸಕ್ಸಸ್‌ ಆಗಲಿಲ್ಲ.

ಬಾಬಾ ಬುಡನ್ ಗಿರಿ ಘಟನೆಯಾಗಿರಲಿ,  ಯಾವುದೇ ಹೋರಾಟವಾಗಿರಲಿ ಎಲ್ಲಾ ಹೊತ್ತಿನಲ್ಲಿಯೂ ಬಾನು ಅವರು ಸಾಮಾಜಿಕ, ರಾಜಕೀಯ ಕಾರ್ಯಕರ್ತೆಯಾಗಿ ಗಟ್ಟಿಯಾಗಿ ನಿಂತಿದ್ದಾರೆ. ಪತ್ರಕರ್ತೆಯಾಗಿ, ಬರಹಗಾರರಾಗಿ,  ಸಾಮಾಜಿಕ ಹೋರಾಟಗಾರ್ತಿಯಾಗಿ, ಮಹಿಳೆಯಾಗಿ, ಮುಸ್ಲಿಂ ಮಹಿಳೆಯಾಗಿ ಬಾನು ಅವರಿಗೆ ಬಹಳ ದೊಡ್ಡ ಸ್ಥಾನವಿದೆ ಎನ್ನುವುದನ್ನು ಬೂಕರ್‌ ಇಂಟರ್‌ ನ್ಯಾಷನಲ್‌ ಪ್ರಶಸ್ತಿ ಇಡೀ ಜಗತ್ತಿಗೆ ಸಾರಿ ಹೇಳಿದೆ. 

ಒಟ್ಟಿನಲ್ಲಿ ಬಾನು ಅವರಿಗೆ ಸಿಕ್ಕಿರುವ ವಿಶ್ವ ಮನ್ನಣೆ ಏಕ ಕಾಲಕ್ಕೆ ಕನ್ನಡಕ್ಕೆ, ಭಾರತೀಯ ಸಾಹಿತ್ಯ ಪರಂಪರೆಗೆ, ನಮ್ಮ ನಾಡಿನ ಸಾಂಸ್ಕೃತಿಕ ನಾಯಕರಾಗಿರುವ ನಿಜವಾದ ವಿಶ್ವಗುರು ಬಸವಣ್ಣನವರಾದಿಯಾಗಿ ಅಕ್ಕಮಹದೇವಿ ಮತ್ತು ಎಲ್ಲಾ ಶರಣ, ಸೂಫಿ ಪರಂಪರೆಗೆ, ಈ ಪರಂಪರೆಯ ಮೌಲ್ಯಗಳಿಗೆ ಸಿಕ್ಕಿರುವ ಮನ್ನಣೆ ಎಂದು ಭಾವಿಸುತ್ತೇನೆ.

ವಿಶ್ವ ಮಾನ್ಯತೆ ಗಳಿಸಿರುವ ಬಾನು ಮುಷ್ತಾಕ್‌ ಅವರಿಗೆ ಸ್ಥಳೀಯವಾಗಿ, ನಮ್ಮ ರಾಜ್ಯದಲ್ಲಿ ಸಿಗಬೇಕಾದ ಎಲ್ಲಾ ರೀತಿಯ ಅರ್ಹ ಗೌರವ ಮತ್ತು ಮನ್ನಣೆಗಳು ಸಿಗಲಿವೆ. ಜೂನ್ 2 ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಸಮಸ್ತ ಕನ್ನಡ ಜಗತ್ತಿನ ಪರವಾಗಿ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು. 

ಬೂಕರ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಷ್ತಾಕ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ಮಾಧ್ಯಮ ಅಕಾಡೆಮಿ‌ ಅಧ್ಯಕ್ಷೆ ಆಯೆಷಾ ಖಾನುಂ, ಬಹುರೂಪಿ ಜಿ.ಎನ್.ಮೋಹನ್, ಪತ್ರಕರ್ತೆಯರ ಸಂಘದ ಅಧ್ಯಕ್ಷೆ ಪದ್ಮಾ ಶಿವಮೊಗ್ಗ, ವಿಜಯವಾಣಿ ಪತ್ರಿಕೆ ಸಂಪಾದಕರಾದ ಚನ್ನೇಗೌಡರು, ಗಾಂಧಿ ಭವನದ ಹೆಚ್.ಸಿ. ದಿನೇಶ್ ಅವರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Tuesday, May 27, 2025

ಶೀಘ್ರದಲ್ಲೇ ಬಾಲಕರ ಸ್ಟೂಡಿಯೋ ಸ್ಥಾಪನೆ : ಬಬಲೇಶ್ವರ

ವಿಜಯಪುರ : ಮಕ್ಕಳ ಪ್ರತಿಭ ಅನಾವರಣಗೊಳಿಸಲು ,ಹೊರತರಲು,ಗುರುತಿಸಲು ರಾಜ್ಯದಲ್ಲಿ ಮಕ್ಕಳ ಸ್ಟೂಡಿಯೋ ಸ್ಥಾಪಿಸಲಾಗುವುದು ಎಂದು ರಾಜ್ಯ ಬಾಲಕರ ಅಕಾಡೆಮಿಯ ಅಧ್ಯಕ್ಷ ಸಂಗಮೇಶ್ವರ ಬಬಲೇಶ್ವರ ಅವರು ಹೇಳಿದರು.

ಅವರು ಜಲನಗರದಲ್ಲಿ ಸೋಮುವಾರ ಭೃಂಗಿಮಠ ಫೌಂಡೇಶನನಿAದ ಆಯೋಜಿಸಿದ ಸನ್ಮಾನ ಸ್ವೀಕರಿಸಿ ಮಾತನಾಡುತ್ತಿದ್ದರು.

 ಮಕ್ಕಳಲ್ಲಿರುವ ಪ್ರತಿಭೆ ಹೊರತರಲು ಸ್ಟೂಡಿಯೋ ಅಗತ್ಯವಿದ್ದು, ಭವಿಷ್ಯದ ಜವಾಬ್ದಾರಿಯುತ ನಾಗರಿಕರಾಗಲಿರುವ ಮಕ್ಕಳ ಪ್ರತಿಭೆ ಪರಿಚಯಕ್ಕೆ ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ತಜ್ಞರವ,ಸಾಹಿತಿಗಳ , ಮಕ್ಕಳ ಕಲ್ಯಾಣ ಚಿಂತಿಸುವವರ ಸಲಹೆಯಂತೆ ಸ್ಟೂಡಿಯೋ ಸ್ಥಾಪನೆಗೆ ಅಗತ್ಯವಾದ ವಿಚಾರ ಮಾಡಲಾಗಿದ್ದು ಶೀಘ್ರವೇ ರಾಷ್ಟ್ರವೇ ಗಮನಿಸುವಂತಹ ಕೆಲಸ ನಮ್ಮ ಬಾಲವಿಕಾಸ ಅಕಾಡೆಮಿಯಿಂದ ಮಾಡಲಾಗುವುದುಎಂದು ಬಬಲೇಶ್ವರ ತಿಳಿಸಿದರು.

ಭೃಂಗಿಮಠ ಅವರ ಸುಧೀರ್ಘ ಸೇವೆಯನ್ನು ಬಣ್ಣಿಸಿದ ಬಬಲೇಶ್ವರ ತಮ್ಮ ಜೊತೆಗಿನ ಭೃಂಗಿಮಠರ ಸ್ನೇಹಪರತೆ,ಸಲಹೆಯನ್ನು ನೆನಪಿಸಿ ,ನಾಡಿನಾದ್ಯಂತ ಭೃಂಗಿಮಠರ ಸೇವೆಗೆ ಶ್ಲಾಘಿಸಿದ ಅವರು ಭೃಂಗಿಮಠರ ವಕಾಲತ್ತು ಸೇವೆ ಅದ್ಭುತ ಎಂದರು.

ಅಹಿAದ ನಾಯಕ ಸೋಮನಾಥ ಕಳ್ಳಿಮನಿ ಅವರು ಮಾತನಾಡಿ ಬಬಲೇಶ್ವರ ಅವರಿಂದ ಕ್ರಿಯಾತ್ಮಕ ಕಾರ್ಯಗಳು ನಡೆಯುತ್ತಿರುವುದು ಸಂತೋಷದ ಸಂಗತಿ ಯಾಗಿದೆ, ಇವರಿಂದ ಬಾಲಕರ ಕಲ್ಯಾಣ ಯೋಜನೆಗಳು ಇನ್ನಷ್ಟು ಜಾರಿಯಾಗಲಿ ಎಂಬ ಆಶಯ ವ್ಯಕ್ತಪಡಿಸಿದರು.

ಹಿರಿಯ ವಕೀಲರಾದ. ಸಾಹಿತಿ. ಮಲ್ಲಿಕಾರ್ಜುನ ಭೃಂಗಿಮಠ ಅವರು ಮಾತನಾಡಿ ಮಕ್ಕಳ ಕಲ್ಯಾಣಕ್ಕಾಗಿ ಸ್ಥಾಪಿಸಲಾದ ಅಕಾಡೆಮಿಗೆ ಸಂಗಮೇಶ್ವರ ಬಬಲೇಶ್ವರ ಅವರಿಗೆ ನೇಮಿಸಿದ್ದು ಸೂಕ್ತ ಮತ್ತು ಅರ್ಹತೆಗೆ ನೀಡಿದ ಹುದ್ದೆಯಾಗಿದ್ದು ಇವರು ಮಕ್ಕಳ ಕಲ್ಯಾಣಪರ ಕ್ರಿಯಾತ್ಮಕ ಯೋಜನೆ ಮತ್ತು ಯೋಚನೆ ಮಾಡುತ್ತಿರುವುದು ಸ್ವಾಗತಕರವಾಗಿದೆ,ಮಕ್ಕಳ ಹಕ್ಕುಗಳನ್ಮು ರಕ್ಷಿಸುವಲ್ಲಿ ಅಕಾಡೆಮಿ ಪಾತ್ರ ಮಹತ್ವದ್ದಾಗಿದೆ ,ರಾಜ್ಯದಾದ್ಯಂತ ವಿಶೇಷ. ಕಾರ್ಯಕ್ರಮಗಳ ಮೂಲಕ ಅಕಾಡೆಮಿ ಇನ್ನು ಉತ್ತಮ ಸೇವೆ ಮಾಡಲಿ ಎಂದರು

ಬಾಲಕರ ಅಕಾಡೆಮಿ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಅವರಿಗೆ ಬಾಲಕ ಋಷೀಲ್ ಭೃಂಗಿಮಠ ಶಾಲು ಹೊದಿಸಿ ಸನ್ಮಾನಿಸಿದರು.ಜಗನಾಥ ಯಾತಗೀರಿ ಇತರರು ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

28-05-2025 EE DIVASA KANNADA DAILY NEWS PAPER

27-05-2025 EE DIVASA KANNADA DAILY NEWS PAPER

Thursday, May 15, 2025

16-05-2025 EE DIVASA KANNADA DAILY NEWS PAPER

ಸರ್ಕಾರಿ ಜಾಗ ಅತಿಕ್ರಮಣ-ಒತ್ತುವರಿಯಾದಲ್ಲಿ ಸಂಬಂಧಿಸಿದ ಅಧಿಕಾರಿಗಳೇ ಹೊಣೆ -ಸಚಿವ ಬಿ.ಎಸ್.ಸುರೇಶ

ವಿಜಯಪುರ : ನಗರಾಭಿವೃದ್ದಿ ಪ್ರಾಧಿಕಾರ, ಮಹಾನಗರ ಪಾಲಿಕೆ ವ್ಯಾಪ್ತಿಯ ಜಾಗಗಳನ್ನು ಗುರುತಿಸಿ ಸೂಕ್ತ ಸಂರಕ್ಷಣೆಗೆ ಕ್ರಮ ವಹಿಸಬೇಕು. ಒಂದಡಿ ಸರ್ಕಾರಿ  ಜಾಗ ಅತಿಕ್ರಮಣ, ಒತ್ತುವರಿ ಕಬಳಿಕೆಯಾದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿಸಿ ಕ್ರಮ ವಹಿಸಲಾಗುವುದು ಎಂದು ನಗರಾಭಿವೃದ್ದಿ ಮತ್ತು ನಗರ ಯೋಜನೆ ಖಾತೆ ಸಚಿವರಾದ ಬಿ.ಎಸ್.ಸುರೇಶ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. 

ಗುರುವಾರ ಮಹಾನಗರ ಪಾಲಿಕೆ ಕಚೇರಿ ಸಭಾಂಗಣದಲ್ಲಿ ಮಹಾನಗರ ಪಾಲಿಕೆ, ನಗರಾಭಿವೃದ್ದಿ ಪ್ರಾಧಿಕಾರ, ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆ, ಕೆಯುಐಡಿಎಫ್‍ಸಿ ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಪ್ರಗರಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಸರ್ಕಾರಿ ಜಾಗವನ್ನು ಗುರುತಿಸಿ ತಂತಿ ಬೇಲಿ ಸೇರಿದಂತೆ ಸೂಕ್ತ ಸಂರಕ್ಷಣೆಗೆ ಕ್ರಮ ವಹಿಸಬೇಕು. ಸರ್ಕಾರಿ ಜಾಗ ಒತ್ತುವರಿ, ಅತಿಕ್ರಮಣ ಮಾಡಿಕೊಂಡವರ ಮೇಲೆ ಕ್ರಿಮಿನಲ್ ಮೂಕದ್ದಮೆ ದಾಖಲಿಸುವುದರೊಂದಿಗೆ ಸಂಬಂಧಿಸಿದ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಸೂಕ್ತ ಕ್ರಮ ವಹಿಸಲಾಗುವುದು ಎಂದು ಅವರು  ಎಚ್ಚರಿಕೆ ನೀಡಿದರು. 

ಸರ್ಕಾರದಿಂದ ರಾಜ್ಯದ  ಮಹಾನಗರ ಪಾಲಿಕೆಗಳಿಗೆ ಅತಿ ಹೆಚ್ಚು ಅನುದಾನ ಒದಗಿಸಲಾಗಿದೆ.  ವಿಜಯಪುರ ಮಹಾನಗರ ಪಾಲಿಕೆಗೆ 150 ಕೋಟಿ ರೂ. ಬಿಡುಗಡೆಯಾಗಿದ್ದು, ಮುಂದಿನ 15 ದಿನದೊಳಗಾಗಿ ವಾರ್ಡವಾರು 4 ಕೋಟಿ ರೂ.ನಂತೆ ವಿಂಗಡಿಸಿ ಹಂಚಿಕೆ ಮಾಡಲಾಗುವುದು. ಮುಂದಿನ 2 ತಿಂಗಳೊಳಗಾಗಿ ಟೆಂಡರ್ ಸೇರಿದಂತೆ ಎಲ್ಲ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ನಗರದ ಪ್ರತಿ ವಾರ್ಡಗಳಲ್ಲಿ ಕಾಮಗಾರಿ ಆರಂಭಿಸುವಂತೆ ಅವರು ಸೂಚನೆ ನೀಡಿದರು. 

ಮಹಾನಗರ ಪಾಲಿಕೆ ವತಿಯಿಂದ ಸಮರ್ಪಕವಾಗಿ ಕರ ವಸೂಲಾತಿಗೆ ಕ್ರಮ ವಹಿಸಬೇಕು. ಪಾಲಿಕೆಯ ವ್ಯಾಪ್ತಿಯ ಎಲ್ಲ ವಾರ್ಡಗಳಲ್ಲಿ ಯಾವುದೇ ಸಮಸ್ಯೆಯಾಗದಂತೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆ ಮಾಡಬೇಕು. ನಿಯಮಾನುಸಾರ ಕರ ವಸೂಲಾತಿಯಲ್ಲಿ ಪ್ರಗತಿ ಸಾಧಿಸಬೇಕು. ಈ ಖಾತಾ ನೀಡುವಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಸಮರ್ಪಕವಾಗಿ ದಾಖಲೆಗಳನ್ನು ಪರಿಶೀಲಿಸಿ ನಿಯಮಾನುಸಾರ ಈ-ಖಾತಾ ಒದಗಿಸಲು ಕ್ರಮ ವಹಿಸಬೇಕು. ಸರ್ವರ ಸಮಸ್ಯೆ, ಸಿಬ್ಬಂದಿಗಳ ಸಮಸ್ಯೆ ಎಂದು ಸಬೂಬು ನೀಡದೇ ಕೂಡಲೇ ನಿಮ್ಮ ಹಂತದಲ್ಲಿಯೇ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿಕೊಂಡು ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಅವರು ಸೂಚನೆ ನೀಡಿದರು. 

ಸಮರ್ಪಕವಾಗಿ ದಾಖಲೆಗಳನ್ನು ಪರಿಶೀಲನೆ ನಡೆಸಿ ಅರ್ಹರಿಗೆ ಕಟ್ಟಡ ಪರವಾನಿಗೆ ನೀಡಲು ಕ್ರಮ ವಹಿಸುವಂತೆ ಸೂಚಿಸಿದ ಅವರು, ಕಟ್ಟಡ ಪರವಾನಿಗೆ ನೀಡಲು ಇರುವ ತಾಂತ್ರಿಕ ತೊಂದರೆಗಳ ನಿವಾರಿಸಿಕೊಂಡು ಕಟ್ಟಡ ಪರವಾನಿಗೆ ಒದಗಿಸಲು ಕ್ರಮ ವಹಿಸಬೇಕು. ಆಸ್ತಿ ಕರ ಪಾವತಿ ಕುರಿತಂತೆ ಒಟಿಸ್ ಸ್ಕೀಮ್‍ದಿಂದ ಸಾರ್ವಜನಿಕರೂ ಅನುಕೂಲವಾಗುವುದಲ್ಲದೇ ಸರ್ಕಾರಕ್ಕೂ ಆದಾಯ ಬರುತ್ತದೆ. ಈ ಯೋಜನೆ ಬಿಬಿಎಂಪಿಗಳಲ್ಲಿ ಮಾತ್ರ ಅನ್ವಯವಾಗಿದ್ದು, ಪಾಲಿಕೆ ವ್ಯಾಪ್ತಿಯಲ್ಲಿಯೂ ಸಹ ಓಟಿಸ್ ಯೋಜನೆಗೊಳಪಡಿಸುವ ಕುರಿತಂತೆ ಸೂಕ್ತ ಪ್ರಸ್ತಾವನೆಯೊಂದನ್ನು ತಯಾರಿಸಿ ಸಲ್ಲಿಸುವಂತೆ ಅವರು ಮಹಾನಗರ ಪಾಲಿಕೆ ಆಯುಕ್ತರಿಗೆ ಸೂಚನೆ ನೀಡಿದರು. 

ನಾಗಠಾಣ ಮತಕ್ಷೇತ್ರದ ಶಾಸಕರಾದ ವಿಠ್ಠಲ ಕಟಕದೊಂಡ ಅವರು ವಿಜಯಪುರ ನಗರದ ಹಮಾಲ ಕಾಲನಿ, ಗಾಂಧಿನಗರ, ಕಸ್ತೂರಿ ಕಾಲನಿ ಸೇರಿದಂತೆ ವಿವಿಧ ಬಡಾವಣೆಗಳ ಜನರಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಹಕ್ಕು ಪತ್ರ ವಿತರಣೆಗೆ ಕ್ರಮ ವಹಿಸುವಂತೆ ತಿಳಿಸಿದ ಹಿನ್ನಲೆಯಲ್ಲಿ ಇದಕ್ಕೆ ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಅವರು ಮಾತನಾಡಿ, ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರ ನಿರ್ದೇಶನದಂತೆ ಈ ಪ್ರದೇಶಗಳ ಮನೆ ಮಾಲೀಕರಿಗೆ ಹಕ್ಕು ಪತ್ರ ವಿತರಣೆಗೆ ಸಂಬಂಧಿಸಿದಂತೆ ಸರ್ವೇ ಮಾಡಲಾಗಿದೆ. 3617 ಮನೆಗಳಿಗೆ ಹಕ್ಕು ಪತ್ರ ವಿತರಿಸಲು ಗುರುತಿಸಲಾಗಿದ್ದು, ಬಾಕಿ ಉಳಿದ ಮನೆಗಳಿಗೆ ಹಕ್ಕು ಪತ್ರ ವಿತರಣೆಗೆ ಕ್ರಮ ವಹಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.  

ನಗರಾಭಿವೃದ್ದಿ ಪ್ರಾಧಿಕಾರದಲ್ಲಿರುವ ಹಣವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು, ನಿವೇಶನ ರಚನೆಗೆ ಕ್ರಮ ವಹಿಸಬೇಕು. ಕೆರೆ ಅಭಿವೃದ್ದಿಯ ಹಣವನ್ನು ಕೆರೆ ಅಭಿವೃದ್ದಿಗಾಗಿ ಬಳಸಬೇಕು. ನಿವೇಶನ ರಚನೆ ಮಾಡುವ ಕುರಿತು ಸರ್ಕಾರಿ ಜಾಗವನ್ನು ಗುರುತಿಸಿ ನಿವೇಶನ ರಚನೆಗೆ ಕ್ರಮ ವಹಿಸುವಂತೆ ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತರಿಗೆ ಅವರು ಸೂಚನೆ ನೀಡಿದ ಅವರು, ಸರ್ಕಾರಿ ಜಾಗ ಲಭ್ಯವಿಲ್ಲದಿದ್ದಲಿ ಖಾಸಗಿ ಜಮೀನು ಖರೀದಿಸುವ ಕುರಿತಂತೆ ಸೂಕ್ತ ಪ್ರಸ್ತಾವನೆ ಸಿದ್ಧಪಡಿಸಿ ಸಲ್ಲಿಸುವಂತೆ ಅವರು ಸೂಚನೆ ನೀಡಿದರು. 

ಸಭೆಯಲ್ಲಿ ವಿಧಾನ ಪರಿಷತ್ ಶಾಸಕರಾದ ಸುನೀಲಗೌಡ ಪಾಟೀಲ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಕನ್ನಾನ ಮುಶ್ರೀಫ್, ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಿಂದ ಕುಂದು-ಕೊರತೆಗಳ ಸಭೆ

ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿಜಯಪುರ ಹಾಗೂ ಕರ್ನಾಟಕ ರಾಜ್ಯ ಮಹಿಳಾ ಆಯೋಗ ಬೆಂಗಳೂರು ಇವರ ಸಹಯೋಗದಲ್ಲಿ ವಿಧವೆಯರ ಕುಂದು ಕೊರತೆ ಸಭೆಯನ್ನು ನಗರದ ಕಂದಗಲ್ ಶ್ರೀ ಹಣಮಂತರಾಯ ರಂಗಮAದಿರದಲ್ಲಿ ಗುರುವಾರ ಆಯೋಜಿಸಿಲಾಗಿತ್ತು. 

 ಸಭೆಯ ಅಧ್ಯಕ್ಷತೆ ವಹಿಸಿದ್ದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಅವರು ಮಹಿಳೆಯರ ಸಮಸ್ಯೆಯನ್ನು ಅತ್ಯಂತ ಶಾಂತಚಿತ್ತದಿAದ ಆಲಿಸಿ, ಅವರ ಸಮಸ್ಯೆಗಳಿಗೆ ಪರಿಹಾರಕ್ಕೆ ಸಂಬAಧಪಟ್ಟವರಿಗೆ ಸೂಚಿಸಿದರು. ಈ ಕುಂದು ಕೊರತೆ ಸಭೆಯಲ್ಲಿ ವಿಜಯಪುರ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಮಹಿಳೆಯರ ಸಮಸ್ಯೆಗಳನ್ನು ಆಲಿಸಲಾಯಿತು. 

 ಸಮಸ್ಯೆಗಳನ್ನು ಆಲಿಸಿದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಮಹಿಳೆಯರ ಸಮಸ್ಯೆಗಳಿಗೆ ಪರಿಹಾರ ದೊರಕಿಸಿ ಕೊಡುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಸಂಬAಧಿಸಿದ ಸರ್ಕಾರಿ ಇಲಾಖೆಗಳಿಗೆ ತಮ್ಮ ಸಮಸ್ಯೆಗಳನ್ನು ಕೊಂಡೊಯ್ದು ತಮ್ಮ ಸಮಸ್ಯೆಗಳಿಗೆ ಪರಿಹರಿಸಲಾಗುವುದು ಎಂದು ಅವರು ಹೇಳಿದರು. 

 ವಿಜಯಪುರದ ಅನ್ನಪೂರ್ಣ ನಾಗನೂರು ಎಂಬುವವರು ಬದುಕಿಗೆ ಯಾವುದೇ ಸೂರಿಲ್ಲದೇ ತುಂಬ ತೊಂದರೆಯಾಗುತ್ತಿದ್ದು, ಸರ್ಕಾರಿ ಯೋಜನೆಯಡಿ ಯಾವುದಾದರೊಂದು ಮನೆ ಹಾಗೂ ಉದ್ಯೋಗ ಒದಗಿಸುವಂತೆ ಮನವಿ ಮಾಡಿಕೊಂಡ ಹಿನ್ನಲೆಯಲ್ಲಿ ಆಶ್ರಯ ಯೋಜನೆ ಮನೆ ಹಾಗೂ ಉದ್ಯೋಗ ದೊರಕಿಸುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

 ರಬಕವಿ ಬನ್ನಟ್ಟಿಯಿಂದ ಬಂದಿದ್ದ 20 ವರ್ಷದ ರೇಖಾ ತುಂಗಳ ಎಂಬುವವರು ತನಗೆ ಎರಡು ಮಕ್ಕಳ ಹಾಗೂ ವೃದ್ಧ ತಂದೆ ತಾಯಿ ಇದ್ದು, ಜೀವನ ನಿರ್ವಹಣೆಗೆ ಆಧಾರ ಕಲ್ಪಿಸಿಕೊಡುವಂತೆ ಕೋರಿದ ಮನವಿಗೆ ಸ್ಪಂದಿಸಿದ ಅಧ್ಯಕ್ಷರು ಪೋಷಕತ್ವ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆಯೂ ಉದ್ಯೋಗ ದೊರಕಿಸಿ ಕೊಡುವುದಾಗಿ ಭರವಸೆ ನೀಡಿದರು.

 ವಿಜಯಪುರದÀ ಸವಿತಾ ಜಮಾದಾರ ಎಂಬುವವರು ಶ್ರವಣ ದೋಷವಿರುವ ತಮ್ಮ ಮಗನ ಚಿಕಿತ್ಸೆಗೆ ಸಹಾಯ, ಚಡಚಣದ ಬಾಕಿಯೋರ್ವಳು ಮುಂದಿನ ವಿದ್ಯಾಭ್ಯಾಸಕ್ಕೆ ಅಗತ್ಯ ದಾಖಲೆಗಳು ಹಾಗೂ ತನ್ನ ಸಹೋದರಿಗೆ ಹೃದ್ರೋಗದ ಚಿಕಿತ್ಸೆಗೆ ಸಹಾಯ, ಕಲ್ಬುರ್ಗಿಯ ಜಯಶ್ರೀ ಕಲ್ಲೂರ ಅವರ ಮಕ್ಕಳ ಶಿಕ್ಷಣ ಹಾಗೂ ಉದ್ಯೋಗಕ್ಕೆ ಸಹಾಯ, ಬಿಎಡ್, ಡಿಎಡ್ ಶಿಕ್ಷಣ ಹೊಂದಿರುವ ಸಿಂದಗಿಯ ಗುರುಸಿದ್ದಮ್ಮ ಹೊಸಮನಿಯವರು ಮನವಿ ಸಲ್ಲಿಸಿ, ಪತಿ ನಿಧನವಾಗಿದ್ದು, ಮೂರು ಮಕ್ಕಳಿಗೆ ಕಷ್ಟಸಾಧ್ಯವಾಗುತ್ತಿದೆ. ಕುಟುಂಬ ನಿರ್ವಹಣೆಗೆ ಉದ್ಯೋಗ ದೊರಕಿಸಬೇಕು. ಅದರಂತೆ ಹಿಟ್ನಳ್ಳಿಯ ವಿಕಲಚೇತನೆ ಚನ್ನಮ್ಮ ಮೇತ್ರಿ ಎಂಬುವವರು ತಾನು ಬಿಎಡ್, ಎಂ ಎಡ್ ಓದಿದ್ದು, ನನಗೆ ಉದ್ಯೋಗ ದೊರಕಿಸುವಂತೆ ಮನವಿ ಸಲ್ಲಿಸಿದ್ದು, ಸಲ್ಲಿಕೆಯಾದ ಎಲ್ಲ ಬೇಡಿಕೆಗಳಿಗೆ ಸ್ಪಂದಿಸಿ, ಪರಿಹಾರ ಒದಗಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದು ಅವರು ಹೇಳಿದರು.

 ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿತಿದ್ದ ಮಹಿಳೆಯೋರ್ವಳು, ತಮ್ಮ ದೂರು ಸಲ್ಲಿಸಿ, ಪತಿಯ ನಿಧನದ ನಂತರ ಜಮೀನು ಮಾರಿದ್ದ ಮಾಲೀಕನು ಇದೀಗ ಜಮೀನಿನಲ್ಲಿ ಉಳುಮೆ ಮಾಡಲು ತಡೆಯೊಡ್ಡುತ್ತಿದ್ದು, ನನಗೆ ಸಹಾಯ ಒದಗಿಸುವಂತೆ ಕೋರಿ ಬಂದ ಮನವಿ ನಾಗಲಕ್ಷ್ಮಿಯವರು ಸ್ಥಳದಲ್ಲಿದ್ದ ಸಂಬAದಿಸಿದ್ದ ಅಧಿಕಾರಿಗಳಿಗೆ ಸಮಸ್ಯೆ ಪರಿಹಾರಕ್ಕೆ ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.

 ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಕೆ.ಕೆ.ಚವ್ಹಾಣ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಪುಂಡಲಿಕ ಮಾನವರ, ಜಿಲ್ಲಾ ಶಸ್ತ್ರಚಿಕಿತ್ಸಕರಾದ ಶಿವಾನಂದ ಮಾಸ್ತಿಹೊಳಿ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳಾದ ಸಿ.ಬಿ.ಕುಂಬಾರ, ಜಿಲ್ಲಾ ಪಂಚಾಯತಿಯ ಯೋಜನಾ ನಿರ್ದೇಶರಾದ ರಾಠೋಡ, ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು, ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ವಿಜಯಪುರ : ಹೆಸ್ಕಾಂ ವಿಜಯಪುರ ವಿಭಾಗದ ವ್ಯಾಪ್ತಿಯಲ್ಲಿ ಬರುವ ವಿಜಯಪುರ-ಅಥಣಿ ರಸ್ತೆಯ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಮಧ್ಯದಲ್ಲಿ ಬರುವ ವಿದ್ಯುತ್  ಕಂಬಗಳನ್ನು ಹಾಗೂ ಪರಿವರ್ತಕ  ಕೇಂದ್ರಗಳನ್ನು ಸ್ಥಳಾಂತರಗೊಳಿಸಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಸೇನಾ ನಗರದ ಪೀಡರ್ ಮೇಲೆ ಬರುವ ಟ್ರೇಜರಿ ಕಾಲೋನಿ,ರಾಮದೇವ ನಗರ,ಅಯ್ಯಪ್ಪ ಸ್ವಾಮಿ ದೇವಸ್ಥಾನ, ಇಟಗಿ ಕಾಲೋನಿ, ವೇದಾಂತ ಆಸ್ಪತ್ರೆ, ಖುರೇಷಿ ಕಾಲೋನಿ ಹತ್ತಿರದ ಪ್ರದೇಶಗಳಲ್ಲಿ ಮೇ 17ರಂದು ಬೆಳಿಗ್ಗೆ 10 ರಿಂದ ಸಂಜೆ 06 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ವಿಜಯಪುರ ಹೆಸ್ಕಾಂನ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Tuesday, May 13, 2025

ಜಲ ಜೀವನ್ ಮಿಷನ್ (ಜೆಜೆಎಂ) ಯೋಜನೆಯಡಿ ನವರಸಪುರ ಕಾಲೊನಿಗಳಿಗೆ ನೀರು ಪೂರೈಕೆಗೆ ಚಾಲನೆ

ವಿಜಯಪುರ: ನಗರ ಮತಕ್ಷೇತ್ರದಲ್ಲಿ ಬರುವ ತೊರವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನವರಸಪುರದ ವಿವಿಧ ಕಾಲೊನಿಗಳಿಗೆ ಜಲ ಜೀವನ್ ಮಿಷನ್ (ಜೆಜೆಎಂ) ಯೋಜನೆಯಡಿ ಮನೆ ಮನೆಗೆ ನೀರು ಪೂರೈಕೆಗೆ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ರವರು ಬುಧವಾರ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಜೆಜೆಎಂ ಯೋಜನೆಯಡಿ ಪ್ರತಿಯೊಂದು ಮನೆಗಳಿಗೆ ನಳ ಸಂಪರ್ಕ ಕಲ್ಪಿಸುವ ಕಾಮಗಾರಿ ಪೂರ್ಣಗೊಂಡು ಎರಡು ವರ್ಷಗಳಾದರೂ, ನೀರು ಸಂಪರ್ಕ ಕಲ್ಪಿಸದೇ ಇರುವುದರಿಂದ ಅಲ್ಲಿನ ನಿವಾಸಿಗಳಿಗೆ ಬಹಳ ತೊಂದರೆ ಉಂಟಾಗಿತ್ತು. ಈ ಸಮಸ್ಯೆ ಪರಿಹಾರಕ್ಕಾಗಿ ಕಳೆದ ವಿಧಾನಸಭೆ ಅಧಿವೇಶನದಲ್ಲಿ ಚುಕ್ಕೆ ರಹಿತ ಪ್ರಶ್ನೆ ಮೂಲಕ ಸರ್ಕಾರಕ್ಕೆ ಒತ್ತಾಯಿಸಲಾಗಿತ್ತು.

ಆಗ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು, ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯೊಂದಿಗೆ ಸಮನ್ವಯ ಸಾಧಿಸಿ, ಕೂಡಲೇ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳುವುದಾಗಿ ಲಿಖಿತ ಭರವಸೆ ನೀಡಿದ್ದರು. ಅದರಂತೆ ಈಗ ನೀರು ಸರಬರಾಜು ಮಾಡಲು ಎಲ್ಲ ವ್ಯವಸ್ಥೆ ಕಲ್ಪಿಸಲಾಗಿದ್ದು, ಇನ್ನೂ ಮುಂದೆ ನವರಸಪುರದ ಎಲ್ಲ ಕಾಲೊನಿಗಳ ಪ್ರತಿ ಮನೆಗಳಿಗೆ ಶುದ್ಧ ನೀರು ಪೂರೈಕೆ ಆಗಲಿದೆ ಎಂದ ಅವರು, ಸಾರ್ವಜನಿಕರಿಗೆ ನೀರಿನ ತೊಂದರೆ ಆಗದಂತೆ ಸಮರ್ಪಕವಾಗಿ, ನೀರು ಬಿಡಲು ಸಂಬಂಧಿಸಿದ  ಅಧಿಕಾರಿಗಳಿಗೆ ಸೂಚಿಸಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಸುರೇಶ ಗಚ್ಚಿನಮನಿ, ಸದಸ್ಯ ನಾಗೇಂದ್ರ ಯಾದವ, ಮುಖಂಡರಾದ ದಾದಾಸಾಹೇಬ ಬಾಗಾಯತ, ಸಂತೋಷ ಪಾಟೀಲ, ಅಡಿವೆಪ್ಪ ಸಾಲಗಲ್ಲ, ಸುನೀಲ ಚವ್ಹಾಣ, ಸುರೇಶ ಬಬಲೇಶ್ವರ, ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಕಾರ್ಯನಿರ್ವಾಹಕ ಎಂಜನಿಯರ್ ಎಸ್.ಗೋವಿಂದ್, ಸಹಾಯಕ ಕಾರ್ಯನಿರ್ವಾಹಕ ಎಂಜನಿಯರ್ ಗಳಾದ ರಾಮರಾವ್ ರಾಠೋಡ, ಪರ್ವತಪ್ಪ, ಪಿಡಿಓ ರಾಜೇಶ್ವರಿ ತುಂಗಳ ಮತ್ತಿತರರು ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ವಿಜಯಪುರ ಕೃಷಿ ಮಹಾವಿದ್ಯಾಲಯಕ್ಕೆ ಸಮಗ್ರ ಕೃಷಿ ವಿಶ್ವವಿದ್ಯಾಲಯ ರಚನಾ ಸಮಿತಿ ಸದಸ್ಯರ ಭೇಟಿ

ವಿಜಯಪುರ: 2024-25ನೇ ಸಾಲಿನ ಆಯವ್ಯಯ ಘೋಷಣೆಯನ್ವಯ, ಕರ್ನಾಟಕ ರಾಜ್ಯದಲ್ಲಿ ಸಮಗ್ರ ಕೃಷಿ, ತೋಟಗಾರಿಕೆ, ಪಶುಸಂಗೋಪನೆ ಮತ್ತು ಅರಣ್ಯ ಕಾಲೇಜುಗಳ ಮರು ಸಂಘಟನೆಯೊAದಿಗೆ ಸಮಗ್ರ ಕೃಷಿ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲು ರಚಿಸಲಾದ ತಜ್ಞರ ಸಮಿತಿಯು ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಹಾಗೂ ಎರಡನೇಯ ಆಡಳಿತ ಸುಧಾರಣೆ ಆಯೋಗದ ಮಾಜಿ ಅಧ್ಯಕ್ಷ ಡಾ. ಟಿ. ಎಂ. ವಿಜಯಬಾಸ್ಕರ್ ನೇತೃತ್ವದಲ್ಲಿ ಇಂದು ವಿಜಯಪುರ ಕೃಷಿ ಮಹಾವಿದ್ಯಾಲಯಕ್ಕೆ ಆಗಮಿಸಿ ಇಲ್ಲಿರುವ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ರೈತ ಪ್ರತಿನಿಧಿಗಳೊಂದಿಗೆ ತನ್ನ ಅಭಿಪ್ರಾಯ ಸಂಗ್ರಹಿಸಿತು. 

ಈ ಸಂದರ್ಭ ಹಾಜರಿದ್ದ ಪ್ರತಿಯೊಬ್ಬರು ಸಮಗ್ರ ವಿವಿ ಸ್ಥಾಪಿಸುವ ಕುರಿತಂತೆ ತಮ್ಮ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಸಮಿತಿಯಲ್ಲಿ ರಾಯಚೂರು ಕೃಷಿ ವಿವಿ ವಿಶ್ರಾಂತ ಕುಲಪತಿ ಡಾ. ಪಿ. ಎಂ. ಸಾಲಿಮಠ, ವಿಶ್ರಾಂತ ಶಿಕ್ಷಣ ನಿರ್ದೇಶಕ ಡಾ. ಎಮ್. ಜಿ. ಪಾಟೀಲ, ಬೆಂಗಳೂರು ಕೃಷಿ ವಿವಿ ಪ್ರತಿನಿಧಿ ಡಾ. ಶಿವಪ್ರಕಾಶ, ಡಾ. ನಾಗರತ್ನ, ಬಾಗಲಕೋಟ ತೋಟಗಾರಿಕೆ ವಿವಿ ಪ್ರತಿನಿದಿ ಕುಲಪತಿ ಹಿಪ್ಪರಗಿ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಡೀನ್ ಡಾ. ಅಶೋಕ ಎಸ್. ಸಜ್ಜನ ಸ್ವಾಗತಿಸಿದರು. ಸಹ ಸಂಶೋಧನಾ ನಿರ್ದೇಶಕ ಡಾ. ಎಸ್. ಬಿ. ಜಗ್ಗಿನವರ ವಂದಿಸಿದರು.

ಸಭೆಯಲ್ಲಿ ಸಹ ವಿಸ್ತರಣಾ ನಿರ್ದೇಶಕ ಡಾ. ರವೀಂದ್ರ ಬೆಳ್ಳಿ, ಮುಖ್ಯ ವಿಜ್ಞಾನಿ ಡಾ. ಮಿಲಿಂದ ಪೋತದಾರ, ಹಿರಿಯ ವಿಜ್ಞಾನಿ ಡಾ. ಎಸ್. ಎಂ. ವಸ್ತçದ, ಡಾ. ಉಮರಫಾರೂಕ್ ಮೋಮಿನ್, ಪ್ರಾಧ್ಯಾಪಕರುಗಳಾದ ಡಾ. ಎಂ. ಬಿ. ಪಾಟೀಲ, ಡಾ. ಆರ್. ಬಿ. ಜೊಳ್ಳಿ, ಡಾ. ಎಮ್. ವಾಯ್. ತೆಗ್ಗಿ, ಡಾ. ಎಸ್. ಜಿ. ಅಸ್ಕಿ, ಡಾ. ಎ. ಪಿ. ಬಿರಾದಾರ. ಡಾ. ರಮೇಶ ಬೀರಗೆ, ಡಾ. ಕುಶಾಲ, ಡಾ. ಸುದೀಪಕುಮಾರ, ಡಾ. ಸಿದ್ರಾಮ ಪಾಟೀಲ, ಸಿದ್ದು ಇಂಗಳೇಶ್ವರ, ಕೃಷಿಕ ಸಮಾಜದ ಶಿವನಗೌಡ ಬಿರಾದಾರ, ಪ್ರಗತಿಪರ ರೈತರಾದ ಎಸ್. ಟಿ. ಪಾಟೀಲ, ಸಿದ್ದಪ್ಪ ಬೂಸಗೊಂಡ, ಸಂಗಮೇಶ ಸಗರ, ಶೆಟ್ಟೆಪ್ಪ ನಾವಿ, ವೀರಣ್ಣ ಸಜ್ಜನ, ಚಾಂದಬೀ ಆಲಮೇಲ, ವಿದ್ಯಾರ್ಥಿ ಮುಖಂಡರಾದ ರಿಯಾನ್‌ಮಲ್ಲಿಕ ಹಳ್ಳೂರ, ಸುಮಿತ ಕೋರೆ, ಅರವಿಂದ ಬೂಸಗೊಂಡ, ಸ್ಪೂರ್ತಿ ಹೆಚ್, ಸೇರಿದಂತೆ ಅನೇಕ ಆಮಂತ್ರಿತರು ಉಪಸ್ಥಿತರಿದ್ದರು. 

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಅನಧಿಕೃತ ಗ್ಯಾಸ್ ಬಳಕೆ ; 19 ಪ್ರಕರಣ ದಾಖಲು

 ವಿಜಯಪುರ : ವಿಜಯಪುರ ನಗರದಾದ್ಯಂತ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರಗಳನ್ನು ಅನಧಿಕೃತವಾಗಿ ಬಳಕೆ ಮಾಡುತ್ತಿರುವ ಸ್ಥಳಗಳಿಗೆ ದಾಳಿ ನಡೆಸಿ 2024ರ ನವೆಂಬರ್ ಮಾಹೆಯಿಂದ ಈವರೆಗೆ ಒಟ್ಟು 110 ಸಿಲಿಂಡರ್‌ಗಳನ್ನು ಜಪ್ತಿ ಮಾಡಿ 19 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕ ವಿನಯಕುಮಾರ ಪಾಟೀಲ ತಿಳಿಸಿದ್ದಾರೆ. 

ನಗರದಾದ್ಯಂತ ಅನಧಿಕೃತವಾಗಿ ಆಟೋಗಳಿಗೆ, ಹೋಟೆಲ್‌ಗಳು, ಬೀದಿ ಬದಿ ಆಹಾರ ತಯಾರಿಕೆ ವ್ಯಾಪಾರಸ್ಥರು ಸೇರಿದಂತೆ ವಾಣಿಜ್ಯೋದ್ಯಮ ಸಿಲಿಂಡರುಗಳಿಗೆ ಗೃಹ ಬಳಕೆ ಗ್ಯಾಸ್ ಮರು ಭರ್ತಿ ಮಾಡಿ ಮಾರಾಟ ಮಾಡುತ್ತಿರುವವರ ಮೇಲೆ ಪೊಲೀಸ್ ಇಲಾಖೆ ಸಹಯೋಗದೊಂದಿಗೆ ದಾಳಿ ನಡೆಸಿ ಪ್ರಕರಣ ದಾಖಲಿಸಲಾಗಿದೆ. 

ಅನಧಿಕೃತವಾಗಿ ಎಲ್‌ಪಿಜಿ ಗ್ಯಾಸ್ ಬಳಕೆ ಮಾಡುವುದು ಹಾಗೂ ವಾಣಿಜ್ಯೋದ್ಯಮ ಸಿಲಿಂಡರ್‌ಗಳಿಗೆ ಮರು ಭರ್ತಿ ಮಾಡುವುದು ಅಪರಾಧವಾಗಿದ್ದು,. ಇಂತಹ ಪ್ರಕರಣಗಳು ಕಂಡು ಬಂದಲ್ಲಿ ಅಂತಹವರ ವಿರುದ್ಧ ಕಾಯ್ದೆ ಉಲ್ಲಂಘನೆ ಮೇರೆಗೆ ಸಿಲಿಂಡರ್‌ಗಳನ್ನು ಜಪ್ತಿ ಮಾಡುವುದಲ್ಲದೇ ಅಗತ್ಯ ವಸ್ತುಗಳ ಕಾಯ್ದೆ 1955ರ ಸೆಕ್ಷನ್ 3/7ರನ್ವಯ ಕ್ರಿಮಿನಲ್ ಮೂಕದ್ದಮೆ ದಾಖಲಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಜಗತ್ತಿಗೆ ಶಾಂತಿ, ಅಹಿಂಸೆ ಮತ್ತು ಸತ್ಯದ ದಾರಿ ತೋರಿದ ಮಹಾನ್ ದಾರ್ಶನಿಕ ಗೌತಮ ಬುದ್ಧ

ವಿಜಯಪುರ: ಜಗತ್ತಿಗೆ ಶಾಂತಿ, ಅಹಿಂಸೆ ಮತ್ತು ಸತ್ಯದ ದಾರಿ ತೋರಿದ ಮಹಾನ್ ದಾರ್ಶನಿಕ ಗೌತಮ ಬುದ್ಧ ಎಂದು ಠಾಣೆ ಮುಂಬಯಿ ಮತ್ತು ಪಂಢರಪುರದ ಫಾರ್ಮಸಿ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ ಡಾ.ಜೆ. ಎಸ್. ಪಾಟೀಲ ಎಂದು ಹೇಳಿದರು.

ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಡಾ. ಬಿ. ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರ ಮತ್ತು ಪರಿಶಿಷ್ಠ ಜಾತಿ/ ಪರಿಶಿಷ್ಠ ಪಂಗಡಗಳ ಘಟಕದ ಸಹಯೋಗಲ್ಲಿ ಸೋಮವಾರ ಆಯೋಜಿಸಿದ್ದ ಗೌತಮ ಬುದ್ಧನ 2569 ನೇ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಾನವೀಯ ಮೌಲ್ಯಗಳನ್ನು ಸಾರಿದ ಈ ಮಹಾಚೇತನ ಅವರ ತತ್ವಗಳು ಜೀವನದ ಪರಿಪೂರ್ಣತೆಗೆ ದಾರಿ ತೋರಿಸುತ್ತವೆ. ಬುದ್ಧ ಸ್ಥಾಪಿಸಿದ ಬೌದ್ಧಧರ್ಮವು ಭಾರತದ ಮೂಲೆ ಮೂಲೆಯಲ್ಲೂ ಹರಡಿದ್ದು, ಸಾವಿರಾರು ಜನರಿಗೆ ನೆಮ್ಮದಿಯ ಜೀವನ ನೀಡಿದೆ. ಆದರೆ ಇಂದಿನ ಕೆಲ ಆಚರಣೆಗಳು ಮತ್ತು ಸಂಪ್ರದಾಯಗಳು ಮೌಢ್ಯದಿಂದ ಕೂಡಿವೆ ಎಂಬದು ವಿಷಾದಕರ. ಬುದ್ಧ, ಬಸವ ಹಾಗೂ ಡಾ. ಬಿ. ಆರ್. ಅಂಬೇಡ್ಕರ್‌ರವರು ಬೋಧಿಸಿದ ತತ್ವಗಳನ್ನು ಅನುಸರಿಸುವ ಮೂಲಕ ನಾವೆಲ್ಲರೂ ಸಮಾನತೆ, ಶಾಂತಿ ಮತ್ತು ನೈತಿಕ ಮೌಲ್ಯಗಳ ನಿರ್ಮಿಸಬೇಕಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮಹಿಳಾ ವಿವಿಯ ಹಂಗಾಮಿ ಕುಲಪತಿ ಪ್ರೊ. ಶಾಂತಾದೇವಿ ಟಿ. ಮಾತನಾಡಿ, ಇಂದಿನ ಮೋಸ, ದರೋಡೆ, ಕೊಲೆ ಸೇರಿದಂತೆ ವಿವಿಧ ಕುಕೃತ್ಯಗಳ ಕಾಲದಲ್ಲಿ ಗೌತಮ ಬುದ್ಧನ ತತ್ವ ಆದರ್ಶಗಳು ಅಪಾರ ಪ್ರಸ್ತುತತೆಯನ್ನು ಹೊಂದಿವೆ ಎಂಬುದು ಸತ್ಯ. ನಾವು ಬುದ್ಧನ ಸನ್ಮಾರ್ಗದಲ್ಲಿ ನಡೆಯುತ್ತಿದ್ದರೆ, ಜೀವನ ಉಜ್ವಲವಾಗುತ್ತದೆ ಮತ್ತು ಸಾರ್ಥಕತೆಯನ್ನು ಹೊಂದುತ್ತದೆ. ಪ್ರತಿಯೊಬ್ಬರೂ ಸುಖವಾಗಿ, ಶಾಂತಿಯಿAದ ಬದುಕಲು ಬುದ್ಧನು ಪ್ರತಿಪಾದಿಸಿದ ಪಂಚಶೀಲ ಅಹಿಂಸೆ, ಸತ್ಯ, ಕಳ್ಳತನವಿಲ್ಲದ ಜೀವನ, ಹಾಗೂ ಮಾದಕವಸ್ತುಗಳಿಂದ ದೂರವಿರುವ ನಡವಳಿಕೆ ಇವುಗಳನ್ನು ನಿಷ್ಠೆಯಿಂದ ಪಾಲಿಸುವ ಅಗತ್ಯವಿದೆ ಎಂದರು.

ಕಾರ್ಯಕ್ರಮದಲ್ಲಿ ಕುಲಸಚಿವ ಶಂಕರಗೌಡ ಸೋಮನಾಳ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತ ವಿದ್ಯಾರ್ಥಿನಿಯರಿಗೆ ರಸಪ್ರಶ್ನೆಗಳನ್ನು ಕೇಳುವ ಮೂಲಕ ಉತ್ಸಾಹ ಮತ್ತು ಪ್ರೇರಣೆಯನ್ನು ತಂದರು.

ಕಾರ್ಯಕ್ರಮದಲ್ಲಿ ಪ್ರೊ. ಮಹೇಶ ಚಿಂತಾಮಣಿ, ಪ್ರೊ. ಪಿ ಕಣ್ಣನ್, ಪ್ರೊ.ಡಿಎಮ್ ಮದರಿ, ಪ್ರೊ. ಸಕ್ಪಾಲ್ ಹೂವಣ್ಣ, ಪ್ರೊ. ವೆಂಕೋಬಾ ಎನ್. ಡಾ.ರಮೇಶ ಸೊನಕಾಂಬಳೆ ಹಾಗು ಬೋಧಕ, ಬೊಧಕೇತರ ಸಿಬ್ಬಂದಿಗಳು, ಅತಿಥಿ ಉಪನ್ಯಾಸಕರು, ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಡಾ. ಬಿ. ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕ ಡಾ.ಸಂಜೀವ ಕುಮಾರಗಿರಿ ಸ್ವಾಗತಿಸಿದರು, ಡಾ. ಕಲಾವತಿ ಕಾಂಬಳೆ ನಿರೂಪಿಸಿ ವಂದಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಭಾರತಕ್ಕೆ ಪಾಕ್ ಸೋಲಿಸುವುದು ಕಷ್ಟವಲ್ಲ : ಶಿವಾನಂದ

ವಿಜಯಪುರ : ಕದನ ವಿರಾಮ ಉಲ್ಲಂಘಿಸಿರುವ ಪಾಕಿಸ್ತಾನವನ್ನು ಸೋಲಿಸುವುದು ಭಾರತಕ್ಕೆ ದೊಡ್ಡ ಕೆಲಸವೇ ಅಲ್ಲ. ಹಿಂದೆ ಎರಡು ಬಾರಿ ಪಾಕಿಸ್ತಾನ ದೇಶವನ್ನು ಸೋಲಿಸಿರುವ ಭಾರತೀಯ ಸೈನಿಕರಿಗೆ ಮೂರನೇ ಬಾರಿಗೆ ಸೋಲಿಸುವುದು ಕಷ್ಟವೇ ಎಂದಿರುವ ಜವಳಿ, ಕೃಷಿ ಮಾರುಕಟ್ಟೆ, ಸಕ್ಕರೆ, ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ, ಅಮೆರಿಕಾ ಮಧ್ಯಪ್ರವೇಶಿಸಿದ್ದು ಸರಿಯಲ್ಲ ಎಂದಿದ್ದಾರೆ.

ಮAಗಳವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪಾಕ್ ಕದನ ವಿದಾಮ್ ಉಲ್ಲಂಘನೆ ವಿಚಾರದಲ್ಲಿ ಸರ್ವಪಕ್ಷ ನಿಯೋಗ ಪ್ರಧಾನಿಗಳಿಗೆ ಒತ್ತಾಯ ಮಾಡಿದೆ. ಸೀಸ್ ಫೈರ್ ಮಾಡುವದಾದರೆ ಅಧಿವೇಶ ಕರೆಯಬೇಕು, ಸೀಸ್ ಫೈರ್ ಮಾಡದಿದ್ದರೆ ಅಧಿವೇಶನ ಕರೆಯಬೇಡಿ. ಇಲ್ಲದಿದ್ದರೆ ವಾರ್ ಆದ್ರೂ ಮಾಡಿ ಎಂದರು.

ಯಾವುದೇ ಒಂದು ನಿಷ್ಕರ್ಷಕ್ಕೆ ಬರದೇ, ಬೇರೆ ಯಾರೋ ಹೇಳಿದರೆ ಅದಕ್ಕೊಂದು ಕಂಡಿಷನ್ ಇರಬೇಕು. ಅಮೇರಿಕಾದವರು ಇಂಟರ್ ಫಿಯರ್ ಮಾಡಿದ್ದಾರೆ. ಕಾಶ್ಮೀರ ವಿಷಯ ಇಟ್ಟುಕೊಂಡು ನಿಮ್ಮ ಇಂಟರ್ ಫೈರ್ ಮಾಡುವದಾದರೆ ಸೀಸ್ ಫೈರ್ ಮಾಡಬಾರದಿತ್ತು. ಷರತ್ತು ರಹಿತವಾಗಿದ್ದರೆ ಮಾತ್ರ ಯುದ್ಧ ವಿರಾಮ ಘೋಷಿಸುವ ಮಾತುಕತೆಗೆ ಬರುತ್ತೇವೆ ಎಂದಿದ್ದರೆ ಅದು ಸೂಕ್ತವಾಗಿತ್ತು. ಅದನ್ನೆ ವಿರೋಧ ಪಕ್ಷದವರು, ದೇಶದ ಜನ ಕೇಳುತ್ತಿರುವುದು ಎಂದರು.

ಭಾರತೀಯ ಸೈನಿಕರು ಪಾಕಿಸ್ತಾನವನ್ನು ಎರಡು ಬಾರಿ ಸೋಲಿಸಿದ್ದು, ಮೂರನೇ ಬಾರಿ ಸೋಲಿಸುವದು ಕಷ್ಟದ ಕೆಲಸವಲ್ಲ. ಸರ್ವ ಪಕ್ಷಗಳ ಸಭೆ ಕರೆದಲ್ಲಿ, ಸದರಿ ಸಭೆಯಲ್ಲಿ ಅನೇಕ ವಿಷಯ ಚರ್ಚೆ ಆಗಲಿವೆ. ಆದರೆ ಮೋದಿ ಅವರು ಸಮರ್ಪಕ ಉತ್ತರ ಕೊಟ್ಟರೆ ಎಲ್ಲರೂ ಒಪ್ಪಿಕೊಳ್ಳಬಹುದು, ಇರದಿದ್ದರೆ ವಿಮರ್ಸೆ ಆಗಬಹುದು ಎಂದರು.

ಸೀಸ್ ಫೈರ್ ಮಾಡುವದಾದರೆ ಅಧಿವೇಶನ ಕರೆಯಿರಿ, ಯುದ್ಧ ಮುಂದುವಸಿದರೆ ಸಭೆ ಕರೆಯುವ ಅವಶ್ಯಕತೆ ಇಲ್ಲ ಎಂದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಫೋಡಿ ಮುಕ್ತ ಅಭಿಯಾನ ಗ್ರಾಮಗಳಿಗೆ ತೆರಳಿ ಫೋಡಿ ಕಾರ್ಯ ಕೈಗೊಳ್ಳುವಂತೆ ಅಧಿಕಾರಿಗಳಿಗೆ -ಸಚಿವ ಕೃಷ್ಣ ಭೈರೇಗೌಡ ಸೂಚನೆ

 ವಿಜಯಪುರ : ಸರ್ಕಾರದಿಂದ ಫೋಡಿ ಮುಕ್ತ ಅಭಿಯಾನವನ್ನು ಹಮ್ಮಿಕೊಂಡಿದ್ದು, ಜನರು ಬಂದು ಅರ್ಜಿ ಸಲ್ಲಿಸುವವರೆಗೆ ಕಾಯ್ದು ಕುಳಿತುಕೊಳ್ಳದೇ ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಿ ಫೋಡಿ ಕಾರ್ಯ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಂದಾಯ ಖಾತೆ ಸಚಿವರಾದ ಕೃಷ್ಣ ಭೈರೇಗೌಡ ಅವರು ಸೂಚನೆ ನೀಡಿದರು.

ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಫೋಡಿಗೆ ಬಾಕಿ ಇರುವ ಪ್ರಕರಣಗಳನ್ನು ಖುದ್ದಾಗಿ ಗ್ರಾಮಗಳಿಗೆ ಭೇಟಿ ನೀಡಿ ಫೋಡಿಗೆ ಬಾಕಿ ಇರುವ ಜಮೀನುಗಳ ಪರಿಶೀಲನೆ ನಡೆಸಬೇಕು. ಈ ಕಾರ್ಯವನ್ನು ಅಭಿಯಾನದ ಮಾದರಿಯಲ್ಲಿ ಕೈಗೊಳ್ಳಬೇಕು. ಒಂದೇ ಆರ್‌ಟಿಸಿಯಲ್ಲಿ ಹಲವು ಹೆಸರು ನಮೂದಾಗಿರುವ ಆರ್‌ಟಿಸಿಯನ್ನು ಸರ್ವೇ ನಡೆಸಿ, ನಕ್ಷೆ ತಯಾರಿಸಿ ಪ್ರತ್ಯೇಕವಾಗಿ ಆಯಾ ಜಮೀನಿನ ಮಾಲೀಕರ ಹೆಸರಿಗೆ ಆರ್‌ಟಿಸಿ ಒದಗಿಸಲು ಕ್ರಮ ವಹಿಸಬೇಕು ಎಂದು ಅವರು ಸೂಚನೆ ನೀಡಿದರು.

ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಭೂ ಸುರಕ್ಷಾ ಯೋಜನೆಯಡಿ ದಾಖಲೆಗಳನ್ನು ಗಣಕೀಕರಣ ಮಾಡುವ ಮೂಲಕ ಹಳೆಯ ದಾಖಲೆಗಳನ್ನು ಅತ್ಯಂತ ಸುಲಭವಾಗಿ ಜನರಿಗೆ ಒದಗಿಸಲು ಉತ್ತಮ ಸೇವೆ ನೀಡುವ ನಿಟ್ಟಿನಲ್ಲಿ ಕಂದಾಯ ಇಲಾಖೆಯಲ್ಲಿನ ಭೂಸುರಕ್ಷಾ ಯೋಜನೆಯಡಿ ಮೂಲ ಹಳೆಯ ದಾಖಲೆಗಳ ಗಣಕೀಕರಣ ನಡೆಯುತ್ತಿದ್ದು, ರಾಜ್ಯದಾದ್ಯಂತೆ ಅಂದಾಜು 20 ಕೋಟಿ ಪುಟಗಳ ದಾಖಲೆಗಳ ಗಣಕೀಕರಣ ಕಾರ್ಯ ಮಾಡಲಾಗಿದೆ. ಇನ್ನೂ ಬಾಕಿ ಇರುವ ದಾಖಲೆಗಳ ಗಣಕೀಕರಣವನ್ನು ಈ ವರ್ಷದ ಅಂತ್ಯದೊಳಗೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದ್ದು, ಈ ನಿಟ್ಟಿನಲ್ಲಿ ಅಧಿಕಾರಿಗಳು ಹಳೆಯ ದಾಖಲೆಗಳ ಗಣಕೀಕರಣ ಕಾರ್ಯಕ್ಕೆ ತ್ವರಿತ ಗತಿ ನೀಡುವಂತೆ ಅವರು ಸೂಚನೆ ನೀಡಿದರು. 

 ಸಭೆಯಲ್ಲಿ ಜಿಲ್ಲೆಯ ಎಲ್ಲ ತಾಲೂಕಿನ ಭೂ ಸುರಕ್ಷಾ ಪ್ರಗತಿ ವಿವರ ಪಡೆದುಕೊಂಡ ಅವರು, ದಾಖಲೆಗಳನ್ನು ನಿಯಮಿತವಾಗಿ ಪರಿಶೀಲನೆ ನಡೆಸಿ, ಗಣಕೀಕರಣ ಮಾಡಬೇಕು. ಕಾಲಮಿತಿಯೊಳಗೆ ಗಣಕೀಕರಣ ಕಾರ್ಯ ಪೂರ್ಣಗೊಳಿಸಬೇಕು. ಈ ಕಾರ್ಯಕ್ಕೆ ವೇಗ ನೀಡಲು ತಮ್ಮ ಹಂತದಲ್ಲಿಯೇ ಸಿಬ್ಬಂದಿಗಳ ಹೊಂದಾಣಿಕೆ ಮಾಡಿಕೊಂಡು ಪ್ರಗತಿ ಸಾಧಿಸುವಂತೆ ಸೂಚಿಸಿದ ಅವರು, ಗಣಕೀಕರಣ ಕಾರ್ಯದಿಂದ ಜನರಿಗೆ ಯಾವುದೇ ದಾಖಲೆಗಳನ್ನು ಸಮರ್ಪಕವಾಗಿ ಒದಗಿಸಬಹುದಾಗಿದ್ದು, ದಾಖಲೆಗಳು ಕಳೆದು ಹೋಗುವುದು, ನಾಶವಾಗುವುದು ಸೇರಿದಂತೆ ಇದಕ್ಕೆ ಶಾಶ್ವತ ಪರಿಹಾರ ದೊರೆತು ದಾಖಲೆಗಳನ್ನು ಸುಭದ್ರವಾಗಿ ಕಾಯ್ದಿಟ್ಟುಕೊಳ್ಳಬಹುದಾಗಿರುವುದರಿಂದ ಜನರಿಗೆ ಅವಶ್ಯಕವಿರುವ ದಾಖಲೆಗಳ ಅಧಿಕೃತ ಪ್ರತಿಯನ್ನು ಸಹ ಆನ್‌ಲೈನ್ ಮೂಲಕವೇ ಪಡೆಯಲು ಅನುಕೂಲವಾಗುವುದರಿಂದ ಅಧಿಕಾರಿಗಳು ಗಣಕೀಕರಣ ಕಾರ್ಯಕ್ಕೆ ಆದ್ಯತೆ ನೀಡುವಂತೆ ಅವರು ಸೂಚನೆ ನೀಡಿದರು.

 ಜಮೀನಿನ ಮಾಲೀಕ ಮರಣ ಹೊಂದಿದ್ದರೂ ಸಹ ಇದುವರೆಗೆ ವಾರಸುದಾರರ ಹೆಸರಿಗೆ ಜಮೀನು ಬದಲಾವಣೆಯಾಗದೇ ಮರಣ ಹೊಂದಿದ ವ್ಯಕ್ತಿಯ ಹೆಸರಿನಲ್ಲಿಯೇ ಹಲವು ಖಾತಾಗಳಿವೆ. ಜಿಲ್ಲೆಯಲ್ಲಿ ಇಂತಹ ಪ್ರಕರಣಗಳನ್ನು ಗುರುತಿಸಿ ಪೌತಿ ಖಾತೆ ಮಾಡಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.

 ತಾಂಡಾ ಸೇರಿದಂತೆ ದಾಖಲೆ ರಹಿತ ವಸತಿ ಪ್ರದೇಶಗಳನ್ನು ಅಧಿಕೃತ ಗ್ರಾಮಗಳನ್ನಾಗಿ ಘೋಷಣೆ ಮಾಡಲಾಗುತ್ತಿದ್ದು, ಯಾವುದೇ ನ್ಯೂನ್ಯತೆಗಳಿದ್ದಲ್ಲಿ ನಿವಾರಿಸಿಕೊಂಡು, ಕಂದಾಯ ಗ್ರಾಮಗಳನ್ನಾಗಿಸುವ ಪ್ರಕ್ರಿಯೆಯಲ್ಲಿ ಕೈಬಿಟ್ಟು ಹೋದ ಪ್ರದೇಶವನ್ನು ಕೈಗೆತ್ತಿಕೊಳ್ಳಬೇಕು. ಬಡ ಜನರಿಗೆ ಕಾಯಕಲ್ಪ ಒದಗಿಸುವ ಕಾರ್ಯ ಇದಾಗಿರುವುದರಿಂದ ಅಧಿಕಾರಿಗಳು ಇಚ್ಛಾಶಕ್ತಿಯಿಂದ ಕಾರ್ಯನಿರ್ವಹಿಸಿ, ಕಾನೂನು ತೊಡಕುಗಳನ್ನು ನಿಮ್ಮ ಹಂತದಲ್ಲಿಯೇ ನಿವಾರಿಸಿಕೊಂಡು ಇತ್ಯರ್ಥಪಡಿಸಲು ಕ್ರಮ ವಹಿಸಬೇಕು. ಅಂತಿಮ ಅಧಿಸೂಚನೆ ಬಾಕಿ ಇರುವ ಪ್ರಕರಣಗಳನ್ನು ಆದ್ಯತೆ ಮೇಲೆ ಕೈಗೆತ್ತಿಕೊಳ್ಳಬೇಕು. ಮಾರ್ಗಸೂಚಿಯನ್ವಯ ಕಂದಾಯ ಗ್ರಾಮಗಳನ್ನಾಗಿಸಲು ನಿಯಮಗಳೊಂದಿಗೆ ಸರಿಹೊಂದಿಸಿಕೊAಡು ಸರ್ಕಾರದ ನಿಯಮಗಳನುಸಾರ ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲೆಯ ವಿವಿಧ ತಾಲೂಕಿನ ಕಂದಾಯ ಗ್ರಾಮಗಳ ರಚನೆ, ಕಂದಾಯ ಗ್ರಾಮಗಳ ಹಕ್ಕು ಪತ್ರಕ್ಕೆ ಸಂಬAಧಿಸಿದ ಬಾಕಿ ಇರುವ ಪ್ರಕರಣಗಳ ಕುರಿತು ಪ್ರಗತಿ ಪರಿಶೀಲನೆ ನಡೆಸಿ, ಆಂದೋಲನದ ಮಾದರಿಯಲ್ಲಿ ಹಕ್ಕು ಪತ್ರ ತಯಾರಿಸಲಾಗುತ್ತಿದೆ, ದಾಖಲೆ ರಹಿತ ಪ್ರದೇಶಗಳಲ್ಲಿ ವಾಸ ಮಾಡುತ್ತಿರುವ ಒಂದು ಲಕ್ಷ ಕುಟುಂಬಗಳ ಮನೆಗಳಿಗೆ ಮೇ.20 ರಂದು ಹೊಸಪೇಟೆಯಲ್ಲಿ ಹಕ್ಕು ಪತ್ರ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬಾಕಿ ಇರುವ ಹಕ್ಕುಪತ್ರಗಳನ್ನು ಮುಂದಿನ 6 ತಿಂಗಳಲ್ಲಿ ವಿತರಣೆ ಮಾಡುವ ಗುರಿ ಹೊಂದಲಾಗಿದೆ ಎಂದು ಅವರು ತಿಳಿಸಿದರು.

ಸಭೆಯಲ್ಲಿ ಜವಳಿ, ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ, ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ, ಜಿಲ್ಲಾಧಿಕಾರಿ ಟಿ.ಭೂಬಾಲನ್, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೇರಿದಂತೆ ಕಂದಾಯ ಇಲಾಖೆ ಅಧಿಕಾರಿಗಳು, ವಿವಿಧ ತಾಲೂಕಾ ತಹಶೀಲ್ದಾರರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Thursday, May 8, 2025

09-05-2025 EE DIVASA KANNADA DAILY NEWS PAPER

ವಿವಿಧ ಗ್ರಾಮ ಪಂಚಾಯತಿಗಳಿಗೆ ಉಪ ಚುನಾವಣೆ : ಅಧಿಸೂಚನೆ ಹೊರಡಿಸಿ ಆದೇಶ

ವಿಜಯಪುರ: ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮದ ಉಪಬಂಧಗಳ ಮೇರೆಗೆ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಿಗಳಿಗೆ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಮೇ.25 ರಂದು ಉಪ ಚುನಾವಣೆ ನಡೆಸಲು ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಅಧಿಸೂಚನೆ ಹೊರಡಿಸಿದ್ದಾರೆ. 

ನಿಡಗುಂದಿ ತಾಲೂಕಿನ ವಂದಾಲ ಹಾಗೂ ಯಲಗೂರ, ಚಡಚಣ ತಾಲೂಕಿನ ನಿವರಗಿ, ತಾಳಿಕೋಟೆ ತಾಲೂಕಿನ ಹಿರೂರ, ತಿಕೋಟಾ ತಾಲೂಕಿನ ತಾಜಪುರ-ಹೆಚ್ ಆಲಮೇಲ ತಾಲೂಕಿನ ಬಮ್ಮನಹಳ್ಳಿ ಹಾಗೂ ದೇವರನಾವದಗಿ, ಇಂಡಿ ತಾಲೂಕಿನ ಭತಗುಣಕಿ ಹಾಗೂ ಲಚ್ಯಾಣ ಮತ್ತು ವಿಜಯಪುರ ತಾಲೂಕಿನ ನಾಗಠಾಣ ಗ್ರಾಮ ಪಂಚಾಯತಿಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ಅಧಿಸೂಚನೆ ಹೊರಡಿಸಲಾಗಿದೆ. 

ಚುನಾವಣಾ ವೇಳಾ ಪಟ್ಟಿ : ಮೇ.14 (ಬುಧವಾರ) ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಮೇ.15ರಂದು (ಗುರುವಾರ) ನಾಮಪತ್ರಗಳ ಪರಿಶೀಲನೆ, ಮೇ.17 (ಶನಿವಾರ) ಉಮೇದುವಾರಿಕೆಯನ್ನು ಹಿಂಪಡೆಯಲು ಕೊನೆಯ ದಿನ. ಮೇ.25 ರಂದು (ಭಾನುವಾರÀ) ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆವರೆಗೆ  ಅವಶ್ಯವಿದ್ದರೆ ಮತದಾನ ಹಾಗೂ ಮೇ.28 (ಬುಧವಾರ) ಚುನಾವಣೆಯನ್ನು ಮುಕ್ತಾಯಗೊಳಿಸುವ ದಿನಾಂಕವನ್ನು ನಿಗದಿಪಡಿಸಿ ಅಧಿಸೂಚನೆ ಹೊರಡಿಸಲಾಗಿದೆ. 

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಕೋಟ್ಪಾ ಕಾಯ್ದೆ ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

ವಿಜಯಪುರ : ಜಿಲ್ಲೆಯಾದ್ಯಂತ ಇರುವ ಶಾಲಾ-ಕಾಲೇಜ್ ಆವರಣದ 100 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ತಂಬಾಕು ಉತ್ಪನ್ನಗಳ ಮಾರಾಟವಾಗದಂತೆ ನಿಗಾ ವಹಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ನೀಡಿದರು. 

ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ 2025-26ನೇ ಸಾಲಿನ ತಂಬಾಕು ನಿಯಂತ್ರಣ ಜಿಲ್ಲಾ ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಶಾಲಾ-ಕಾಲೇಜ್‍ನಲ್ಲಿ ತಂಬಾಕು ನಿಯಂತ್ರಣ ಸಮಿತಿ ರಚಿಸಿ ನಿಯಮಗಳನ್ವಯ ಕಟ್ಟುನಿಟ್ಟಿನ ಕ್ರಮ ವಹಿಸಬೇಕು. ತಂಬಾಕು ಉತ್ಪನ್ನಗಳ ಉಪಯೋಗದಿಂದ ದುಷ್ಪರಿಣಾಮ ಹಾಗೂ ಕಾಯ್ದೆಯ ಅರಿವು ಮೂಡಿಸಲು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಅವರು ಸೂಚನೆ ನೀಡಿದರು. 

ಜಿಲ್ಲೆಯಲ್ಲಿ ತಂಬಾಕು ಉತ್ಪನ್ನಗಳ ನಿಯಂತ್ರಣಕ್ಕೆ ತನಿಖಾ ದಳಗಳನ್ನು ರಚಿಸಿಕೊಂಡು ಕ್ರೀಯಾಶೀಲತೆಯಿಂದ ಕಾಲ ಕಾಲಕ್ಕೆ ದಾಳಿ  ನಡೆಸಬೇಕು. ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ತಂಬಾಕು ಉತ್ಪನ್ನಗಳ ಬಳಕೆಯಿಂದಾಗುವ ದುಷ್ಪರಿಣಾಮಗಳ ಕುರಿತು ಸೂಕ್ತ ತಿಳುವಳಿಕೆ, ಅರಿವು ಮೂಡಿಸುವಂತೆ ತಿಳಿಸಿದ ಅವರು, ಶಾಲಾ ಶಿಕ್ಷಣ ಸಂಸ್ಥೆಗಳು ತಂಬಾಕು ಮುಕ್ತ ಶಿಕ್ಷಣ ಸಂಸ್ಥೆಯ ಮಾರ್ಗಸೂಚಿಗಳನ್ನು ದಾಖಲಿಸಬೇಕು. ಟೂ ಫಿಯಟ್ ತಂತ್ರಾಂಶದಲ್ಲಿ 3325ರ ಶಿಕ್ಷಣ ಸಂಸ್ಥೆಗಳ ಪೈಕಿ 1353 ದಾಖಲಾಗಿದ್ದು, ಬಾಕಿ ಇರುವ 1972 ಸಂಸ್ಥೆಗಳ  ಹಾಗೂ 253 ಪದವಿಪೂರ್ವ ಶಿಕ್ಷಣ ಇಲಾಖೆ ಸಂಸ್ಥೆಗಳ ಬಾಕಿ ಇರುವ 50 ಸಂಸ್ಥೆಗಳ ದಾಖಲೀಕರಣಕ್ಕೆ ಅವರು ಸೂಚನೆ ನೀಡಿದರು. 

ತಾಲೂಕುಗಳಲ್ಲಿ ಪ್ರತಿ ತಿಂಗಳು ಕಡ್ಡಾಯವಾಗಿ ಆಹಾರ ಸುರಕ್ಷತೆ ಗುಣಮಟ್ಟ ಪ್ರಾಧಿಕಾರ ದಾಳಿ ಕೈಗೊಳ್ಳಬೇಕು. ತಾಲೂಕಾ ತನಿಖಾ ತಂಡ ನಿಯಮಿತವಾಗಿ ಅಂತರ ಇಲಾಖೆ ಸಮನ್ವಯ ಸಮಿತಿ ಸಭೆ ನಡೆಸಬೇಕು. ಅಬಕಾರಿ ಇಲಾಖೆ ಜಿಲ್ಲಾ ತಂಬಾಕು ನಿಯಂತ್ರಣ ಕೋಶಕ್ಕೆ ಅಗತ್ಯ ಸಹಕಾರ ಒದಗಿಸಬೇಕು. ಮೇ.31ರ ವಿಶ್ವ ತಂಬಾಕು ರಹಿತ ದಿನ ಆಚರಣೆ ಅಂಗವಾಗಿ ಎಲ್ಲ ತಾಲೂಕಾ ಕೇಂದ್ರ, ಪ್ರಾಥಮಿಕ-ಸಮುದಾಯ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಅರಿವು-ಜಾಗೃತಿ ಮೂಡಿಸುವುದರೊಂದಿಗೆ ಕಾಯ್ದೆ ಉಲ್ಲಂಘಿಸಿದ ಪ್ರಕರಣಗಳನ್ನು ಪತ್ತೆ ಹಚ್ಚುವಂತಗೆ ಅವರು ಸೂಚನೆ ನೀಡಿದರು.

ಮಾರ್ಗಸೂಚಿಯನ್ವಯ ಗ್ರಾಮೀಣ ಪ್ರದೇಶಗಳಲ್ಲಿ ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಬೇಕು. ಕೋಟ್ಪಾ-2003ರ ಕಾಯ್ದೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ತಂಬಾಕು ಸೇವನೆ ತ್ಯಜಿಸಲು ಅಗತ್ಯ ಆರೋಗ್ಯ ಚಿಕಿತ್ಸೆ ಹಾಗೂ ಆಪ್ತ ಸಮಾಲೋಚನೆ (ಕೌನ್ಸೆಲಿಂಗ್) ನಡೆಸಿ, ತಂಬಾಕು ತ್ಯಜಿಸಲು ಪ್ರೇರೆಪಿಸಬೇಕು, ಯುವ ಸಮುದಾಯದಲ್ಲಿ ಅರಿವು ಮೂಡಿಸಬೇಕು. ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಅಧಿಸೂಚನೆಯ ಮಾರ್ಗಸೂಚಿಯಂತೆ ಪ್ರತಿ ಗ್ರಾಮಗಳಲ್ಲಿ ಹಮ್ಮಿಕೊಳ್ಳುವಂತೆ ತಿಳಿಸಿದ ಅವರು, ಗ್ರಾಮ ಮಟ್ಟದಲ್ಲಿ ಸಮನ್ವಯ ಸಮಿತಿಯನ್ನು ರಚಿಸಿಕೊಳ್ಳಲು ಪತ್ರ ಬರೆಯುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಅವರು ಸೂಚನೆ ನೀಡಿದರು. 

ಗ್ರಾಮ ಮಟ್ಟದಲ್ಲಿ ಪಂಚಾಯತಿ ಅಧ್ಯಕ್ಷರ ನೇತೃತ್ವದಲ್ಲಿ ಗ್ರಾಮ ಪಂಚಾಯತ್ ಸದಸ್ಯರು, ಶಾಲಾ ಶಿಕ್ಷಕರು,  ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಸಮುದಾಯ ಆರೋಗ್ಯ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಸ್ವಸಹಾಯ ಸಂಘ, ಯುವಕ ಸಂಘದ ಅಧ್ಯಕ್ಷರು, ಪ್ರತಿನಿಧಿಗಳು ಹಾಗೂ ಪ್ರಾಥಮಿಕ ಆರೋಗ್ಯ ಸುರಕ್ಷತಾ ಅಧಿಕಾರಿಗಳನ್ನೊಳಗೊಂಡ ಗ್ರಾಮ ಮಟ್ಟದಲ್ಲಿ ಸಮನ್ವಯ ಸಮಿತಿ ರಚಿಸಿಕೊಂಡು ತಂಬಾಕು ಸೇವೆನಯಿಂದಾಗುವ ದುಷ್ಪರಿಣಾಮಗಳ ಹಾಗೂ ಲಭ್ಯವಿರುವ ಆರೋಗ್ಯ ಮಾಹಿತಿ ಒದಗಿಸುವುದು, ಗ್ರಾಮ ಸಭೆಗಳನ್ನು ಆಯೋಜಿಸಿ ಜಾಗೃತಿ ಮೂಡಿಸುವುದು, ಕೊಟ್ಪಾ-2003ರ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಅವರು ಸೂಚನೆ ನೀಡಿದರು. 

ಸಭೆಯಲ್ಲಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಶಿವಾನಂದ ಮಾಸ್ತಿಹೊಳಿ, ಪಶುಸಂಗೋಪನಾ ಇಲಾಖೆ ಉಪನಿರ್ದೇಶಕ ಅಶೋಕ ಘೊಣಸಗಿ, ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಬದ್ರೂದ್ದಿನ್ ಸೌದಾಗರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸಂಪತ್ ಗುಣಾರಿ, ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಪತ್ರಾಧಿಕಾರಿ ರಾಮಣ್ಣ ಅಥಣಿ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿ ಅಪ್ಪಾಸಾಹೇಬ ಇನಾಂದಾರ, ಬಸವನಬಾಗೇವಾಡಿ ತಾಲೂಕಾ ಆರೋಗ್ಯ ಅಧಿಕಾರಿ ಡಾ.ಕವಿತಾ ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಸಿಂಧೂರ್ ಯಶಸ್ವಿ ಕಾರ್ಯಾಚರಣೆಗೆ ನಡೆಸಿದ ಸೇನಾಪಡೆದೆ ಕೋಟಿ ಧನ್ಯವಾದ : ಜಿಗಜಿಣಗಿ

ವಿಜಯಪುರ : ಉಗ್ರರ ನೆಲೆಗಳನ್ನು ಆಪರೇಷನ್ ಸಿಂಧೂರ ಹೆಸರಿನಲ್ಲಿ ಯಶಸ್ವಿ ಕಾರ್ಯಾಚರಣೆ ನಡೆಸಿದ ನಮ್ಮ ಹೆಮ್ಮೆಯ ಸೇನಾಪಡೆಗೆ ಎಷ್ಟು ಕೋಟಿ ಧನ್ಯವಾದ ಅರ್ಪಿಸಿದರೂ ಕಡಿಮೆಯೇ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ಪ್ರವಾಸಕ್ಕೆ ಬಂದಿದ್ದ ಅಮಾಯಕ ಪ್ರವಾಸಿಗರನ್ನು ಅಮಾನುಷ ರೀತಿಯಲ್ಲಿ ಹತ್ಯೆ ಮಾಡಿರುವ ಉಗ್ರಗಾಮಿಗಳು ಮನುಷ್ಯರೇ ಅಲ್ಲ, ಅವರಿಗೆ ಮನುಷ್ಯತ್ವವೇ ಇಲ್ಲ. ಇಂತಹ ಕ್ರೂರಿಗಳನ್ನು ನಮ್ಮ ಹೆಮ್ಮೆಯ ಸೈನಿಕರು ಮಟ್ಟ ಹಾಕಿದ್ದಾರೆ, ಅವರ ಅನೇಕ ನೆಲೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿ ಅವರಿಗೆ ತಕ್ಕಶಾಸ್ತಿ ಮಾಡಿದ್ದಾರೆ. ಆಪರೇಷನ್ ಸಿಂಧೂರ ಹೆಸರಿನಲ್ಲಿ ಈ ಕಾರ್ಯಾಚರಣೆ ಯಶಸ್ವಿಯಾಗಿದೆ. ಈ ಕಾರ್ಯಾಚರಣೆಯಲ್ಲಿ ಭಾಗಿಯಾದ ಪ್ರತಿಯೊಬ್ಬ ಯೋಧನಿಗೂ ನಾನು ಕೋಟಿ ಕೋಟಿ ಧನ್ಯವಾದ ಅರ್ಪಿಸುತ್ತೇನೆ, ಗಡಿಯಲ್ಲಿ ನಮಗಾಗಿ ಜೀವದ ಹಂಗು ತೊರೆದು ಕರ್ತವ್ಯದಲ್ಲಿರುವ ನಮ್ಮ ಹೆಮ್ಮೆಯ ಸೈನಿಕರ ಋಣವನ್ನು ನಮಗೆ ತೀರಿಸಲು ಈ ಜನ್ಮದಲ್ಲಿ ಸಾಧ್ಯವಿಲ್ಲ ಎಂದು ಜಿಗಜಿಣಗಿ ಹೇಳಿದ್ದಾರೆ.