ವಿಜಯಪುರ: ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮದ ಉಪಬಂಧಗಳ ಮೇರೆಗೆ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಿಗಳಿಗೆ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಮೇ.25 ರಂದು ಉಪ ಚುನಾವಣೆ ನಡೆಸಲು ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಅಧಿಸೂಚನೆ ಹೊರಡಿಸಿದ್ದಾರೆ.
ನಿಡಗುಂದಿ ತಾಲೂಕಿನ ವಂದಾಲ ಹಾಗೂ ಯಲಗೂರ, ಚಡಚಣ ತಾಲೂಕಿನ ನಿವರಗಿ, ತಾಳಿಕೋಟೆ ತಾಲೂಕಿನ ಹಿರೂರ, ತಿಕೋಟಾ ತಾಲೂಕಿನ ತಾಜಪುರ-ಹೆಚ್ ಆಲಮೇಲ ತಾಲೂಕಿನ ಬಮ್ಮನಹಳ್ಳಿ ಹಾಗೂ ದೇವರನಾವದಗಿ, ಇಂಡಿ ತಾಲೂಕಿನ ಭತಗುಣಕಿ ಹಾಗೂ ಲಚ್ಯಾಣ ಮತ್ತು ವಿಜಯಪುರ ತಾಲೂಕಿನ ನಾಗಠಾಣ ಗ್ರಾಮ ಪಂಚಾಯತಿಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ಅಧಿಸೂಚನೆ ಹೊರಡಿಸಲಾಗಿದೆ.
ಚುನಾವಣಾ ವೇಳಾ ಪಟ್ಟಿ : ಮೇ.14 (ಬುಧವಾರ) ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಮೇ.15ರಂದು (ಗುರುವಾರ) ನಾಮಪತ್ರಗಳ ಪರಿಶೀಲನೆ, ಮೇ.17 (ಶನಿವಾರ) ಉಮೇದುವಾರಿಕೆಯನ್ನು ಹಿಂಪಡೆಯಲು ಕೊನೆಯ ದಿನ. ಮೇ.25 ರಂದು (ಭಾನುವಾರÀ) ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆವರೆಗೆ ಅವಶ್ಯವಿದ್ದರೆ ಮತದಾನ ಹಾಗೂ ಮೇ.28 (ಬುಧವಾರ) ಚುನಾವಣೆಯನ್ನು ಮುಕ್ತಾಯಗೊಳಿಸುವ ದಿನಾಂಕವನ್ನು ನಿಗದಿಪಡಿಸಿ ಅಧಿಸೂಚನೆ ಹೊರಡಿಸಲಾಗಿದೆ.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
No comments:
Post a Comment