Monday, June 30, 2025

ದೌರ್ಜನ್ಯ ಪ್ರಕರಣಗಳನ್ನು ತ್ವರಿತ ವಿಲೇವಾರಿಗೆ ಕ್ರಮ ವಹಿಸುವಂತೆ -ಜಿ.ಪಂ.ಸಿಇಓ ರಿಷಿ ಆನಂದ ಸೂಚನೆ


ವಿಜಯಪುರ :  ದೌರ್ಜನ್ಯ ಪ್ರಕರಣಗಳಲ್ಲಿ ಸಕಾಲದಲ್ಲಿ ತ್ವರಿತ ಪರಿಹಾರ ಒದಗಿಸಿಕೊಡಲು ಅಧಿಕಾರಿಗಳು ಕ್ರಮವಹಿಸಬೇಕೆಂದು ಜಿಲ್ಲಾಪಂಚಾಯತಿಯ ಮುಖ್ಯಕಾರ್ಯ ನಿರ್ವಣಾಧಿಕಾರಿಗಳಾದ ರಿಷಿ ಆನಂದ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಜಿಲ್ಲಾಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಈ ಸೂಚನೆ ನೀಡಿದರು.

ಅರ್ಹ ಫಲಾನುಭವಿಗಳು ಪಹಣಿ ಪತ್ರ ಪಡೆಯಲು ಸಮಾಜ ಕಲ್ಯಾಣ ಇಲಾಖೆಯಿಂದ ಭೂ ಒಡೆತನ ಯೋಜನೆಯಡಿಯ ಫಲಾನುಭವಿಗಳ ಪಟ್ಟಿಯನ್ನು ಸಿದ್ದಪಡಿಸಿ, ತಹಶೀಲ್ದಾರರಿಗೆ ಸಲ್ಲಿಸಿ, ಪಹಣಿಪತ್ರ ಸಿದ್ದಪಡಿಸಲು ಸಹಕರಿಸಬೇಕು ಎಂದು ಅವರು ಹೇಳಿದರು. 

ಡಾ. ಬಿ.ಆರ್.ಅಂಬೇಡ್ಕರ ವೃತ್ತ ನಿರ್ಮಾಣಕ್ಕೆ ಸ್ಥಳಾವಕಾಶ ಕುರಿತು ಸದಸ್ಯರಾದ ಯಮನಪ್ಪ ಸಿದರಡ್ಡಿ ಅವರು ಮಾಡಿದ ಮನವಿ ಆಲಿಸಿದ ಅವರು, ಈ ಕುರಿತು ಸಂಬಂಧಿಸಿದ ಅಧಿಕಾರಿಗಳು ಪರಿಶೀಲನೆ ನಡೆಸಿ, ವರದಿ ಸಲ್ಲಿಸುವಂತೆ ಸೂಚಿಸಿದರು. 

ಪ್ರತಿ ಸಭೆಗೂ ಮುನ್ನ ಸಭೆಯ ಕುರಿತು ಮಾಹಿತಿಯನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ, ಉಸ್ತುವಾರಿ ಸಮಿತಿಯ ಸದಸ್ಯರಿಗೆ  ಒದಗಿಸುವಂತೆ ಹಾಗೂ ಸಣ್ಣ ಪುಟ್ಟ ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ  ಭೇಟಿ ನೀಡಿ  ಪ್ರಕರಣ ಕುರಿತು ಮಾಹಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳುವಂತೆ ಅವರು ಸಭೆಗೆ ತಿಳಿಸಿದರು.

ಪರಿಶಿಷ್ಟ ಜಾತಿ ಕಾಲೋನಿಯಲ್ಲಿರುವ ಚರಂಡಿಗಳನ್ನು ಕಾಲಕಾಲಕ್ಕೆ ಸ್ವಚ್ಚಗೊಳಿಸಿ, ಶುಚಿತ್ವ ಕಾಪಾಡಿಕೊಳ್ಳುವಂತೆ ನೋಡಿಕೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. 

ಭೂ ಒಡೆತನ ಯೋಜನೆಯಡಿ ಖರೀದಿಯಾದ ಜಮೀನುಗಳಿಗೆ ಆರ್‍ಟಿಸಿ ಹಾಗೂ ಪಹಣಿ ಬದಲಾವಣೆ ಅರ್ಹ ಫಲಾನುಭವಿಗಳಿಗೆ ತೊಂದರ ತಪ್ಪಿಸಿ  ಅಧಿಕಾರಿಗಳು ಅಗತ್ಯ ದಾಖಲೆಗಳನ್ನು ಕ್ರೂಢೀಕರಿಸಿಕೊಂಡು ಅರ್ಹ ಫಲಾನುಭವಿಗಳಿಗೆ ಅನುಕೂಲವಾಗಲು ಕ್ರಮವಹಿಸುವಂತೆ ಅವರು ಸೂಚಿಸಿದರು. 

ಭೂ ಒಡೆತನ ಯೋಜನೆಯಡಿ ಇಲ್ಲಿಯವರೆಗೆ ಸ್ವೀಕರಿಸಿದ ಅರ್ಜಿ ಹಾಗೂ ಇತ್ಯರ್ಥಗೊಳಿಸಿದ್ದ ಕುರಿತ ಪಟ್ಟಿ ನೀಡುವಂತೆ ಸಂಬಂಧಿಸಿದ್ದ ಅಧಿಕಾರಿಗಳಿಗೆ ಸೂಚಿಸಿದ ಅವರು ಸಮಾಜ ಕಲ್ಯಾಣ ಇಲಾಖೆಯು ಪ್ರಗತಿಯ ಕುರಿತು ಆಗಾಗ ಸಮಿತಿ ಸದಸ್ಯರೊಂದಿಗೆ ಸಭೆ ನಡೆಸಬೇಕು ಎಂದು ಹೇಳಿದರು. 

  ಈಗಾಗಲೇ ದಾಖಲಾಗಿರುವ ದೌರ್ಜನ್ಯ ಪ್ರಕರಣಗಳು ಶೀಘ್ರವಾಗಿ ಇತ್ಯರ್ಥಗೊಳಿಸುವಂತೆಯೂ,ಸ್ಮಶಾನದ ಜಾಗ ಒತ್ತುವರಿ,ಮಹರ್ಷಿ ವಾಲ್ಮಿಕಿ ಸಮುದಾಯ ಭವನ ನಿರ್ಮಾಣ ಸೇರಿದಂತೆ ಸಮಿತಿ ಸದಸ್ಯರ ಮನವಿಗೆ ಸ್ಪಂದಿಸಿ ಸಂಬಂಧಿಸಿದ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಅವರು ಸೂಚಿಸಿದರು.

ಸಮಿತಿ ಸದಸ್ಯರಾದ ಅಭಿಷೇಕ ಚಕ್ರವರ್ತಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಜಾತಿ ನಿಂದನೆ, ದೌರ್ಜನ್ಯ ನಿಂದನೆ ಪ್ರಕರಣಗಳು ದಾಖಲಾಗದಂತೆ  ಸೂಕ್ತ ಜಾಗೃತಿ ಮೂಡಿಸಬೇಕು. ಈಗಾಗಲೇ ದಾಖಲಾಗಿರುವ ಪ್ರಕರಣಗಳು ಶೀಘ್ರವಾಗಿ ಇತ್ಯರ್ಥಗೊಳಿಸುವಂತೆ ಸಭೆಯಲ್ಲಿ  ಅವರು ಮನವಿ ಮಾಡಿದರು. 

ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿಗಳಾದ ಲಕ್ಷ್ಮಣ ನಿಂಬರಗಿ ಮಾತನಾಡಿ, ಪ್ರತಿ ತಿಂಗಳು ಜಿಲ್ಲೆಯ ಎಲ್ಲ ಪೆÇಲೀಸ್ ಠಾಣೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಕುಂದು ಕೊರತೆ ದೌರ್ಜನ್ಯ ಪರಿಹಾರ ಕುರಿತು ಸಭೆಗಳನ್ನು ಏರ್ಪಡಿಸಲಾಗುತ್ತಿದೆ. ಯಾವುದೇ ಸಮಸ್ಯೆಗಳಿದ್ದಲ್ಲಿ ಇಲಾಖೆಯ ವತಿಯಿಂದ ಸಮಸ್ಯೆಗಳನ್ನು ಇತ್ಯರ್ಥ ಪಡಿಸಲು ಸಹಾಯ ಸಹಕಾರ ನೀಡುವುದಾಗಿ ಅವರು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಉಪವಿಭಾಗಾಧಿಕಾರಿಗಳಾದ ಗುರುನಾಥ ದಡ್ಡೆ, ಹೇಮಲತಾ ವಸ್ತ್ರದ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ವಿಜಯಕುಮಾರ ಆಜೂರ, ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಪುಂಡಲೀಕ ಮಾನವರ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಜಿಲ್ಲಾಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ  ರಾಜಶೇಖರ ಚೌರ, ನಾನು ಸೋಮಲು ಲಮಾಣಿ, ಮಹಾಂತೇಶÀ ಧರ್ಮಣ್ಣ ಸಾಸಬಾಳ, ಬಂದಗಿ ಸಿದ್ದಪ್ಪ ಗಸ್ತಿ, ಮದನಕುಮಾರ ನಾಗರದಿನ್ನಿ, ರವಿಕಾಂತ ಬಿರಾದಾರ, ಯಮನಪ್ಪ ಸಿದರಡ್ಡಿ, ಸಿದ್ದು ರಾಯಣ್ಣವರ, ಮಲ್ಲು ತಳವಾರ ಸೇರಿದಂತೆ  ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


ಅಂಗನವಾಡಿ ಕಾರ್ಯಕರ್ತೆಯರು ಬಿ.ಎಲ್.ಓ. ಕೆಲಸ ಮಾಡುವದಿಲ್ಲ : ಉಪನಿರ್ದೇಶಕ ಕೆ.ಕೆ. ಚವ್ಹಾಣ ಅವರಿಗೆ ಮನವಿ


 ವಿಜಯಪುರ : ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ವತಿಯಿಂದ ಇಂಡಿ ತಾಲೂಕಾ ಸಮಿತಿ ಚಡಚಣ ಅಂಗನವಾಡಿ ಕಾರ್ಯಕರ್ತೆಯರು ಬಿ.ಎಲ್.ಓ. ಕೆಲಸ ಮಾಡುವದಿಲ್ಲ ಎನ್ನುವ ಕುರಿತು ಅಪರ ಜಿಲ್ಲಾಧಿಕಾರಿಗಳಾದ ಸೋಮಲಿಂಗ ಗೆಣ್ಣೂರ ಮತ್ತು ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಕೆ.ಕೆ. ಚವ್ಹಾಣ ಅವರಿಗೆ ಮನವಿ ಸಲ್ಲಿಸಿದರು.

ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಇಂಡಿ ತಾಲೂಕಾಧ್ಯಕ್ಷರು ಭಾರತಿ ವಾಲಿ ಮಾತನಾಡಿ ನಮ್ಮ ಅಂಗನವಾಡಿ ಕೆಲಸದ ಒತ್ತಡ ಹೆಚ್ಚಾಗಿರುತ್ತದೆ. ಆದ ಕಾರಣ ಎಫ್.ಆರ್.ಎಸ್. ಪೋಟೊ ಕ್ಯಾಪ್ಟರ ಮಾಡುವದಕ್ಕೆ ಕಷ್ಟ ಆಗುತ್ತದೆ. ಅಂಗನವಾಡಿ ಮಕ್ಕಳಿಗೆ ಶಾಲಾ ಪೂರ್ವ ಶಿಕ್ಷಕ ಕೊಡುವದು ಆಗುವದಿಲ್ಲ. ಅಂಗನವಾಡಿ ಹೇಗೆ ನಡೇಯುತ್ತದೆ. ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರ ನೇಮಕಾತಿ ಬಿಡುಗಡೆ ಆಗಿರುವದಿಲ್ಲ. ಆದ ಕಾರಣ ಬಿ.ಎಲ್.ಒ. ಕೆಲಸ ಮಾಡಲು ಆಗುವದಿಲ್ಲ ಎಂದು ಅಂಗನವಾಡಿ ಕಾರ್ಯಕತೆಯರು ಬರೆದುಕೊಟ್ಟಿರುತ್ತಾರೆ. ತಾವುನಮ್ಮ ಮಹಿಳೆಯರ ಪರವಾಗಿ ಕುಟುಂಬ ಮತ್ತು ಮಕ್ಕಳು ಅಂಗವಿಕಲ ತಂದೆ+ತಾಯಿ ವಯಸ್ಸಾದವರೆ ಇದ್ದಾರೆ ಅಂಗನವಾಡಿ ಕಾರ್ಯಕತ್ರೆ ಯೋಗಕ್ಷೇಮ ಕೇಳುವವರು ಯಾರೂ ಅಂಗನವಾಡಿ ಕಾರ್ಯಕತ್ರೆಯರ ಮನೆಯಲ್ಲಿ ತೀರಿಕೊಂಡರೂ ಕೇಂದ್ರ ಸರ್ಕಾರದ ಆದೇಶ ಇರುತ್ತದೆ ಇಲ್ಲವಾದರೆ ಕೆಲಸ ಕಳೆದುಕೊಳ್ಳುತ್ತೀರಿ ಅಂತಾ ಮೇಲ್ವಿಚಾರಕರು ಹೇಳುತ್ತಾರೆ.

ಅಂಗನವಾಡಿ ಬೆಳಿಗ್ಗೆ 8 ರಿಂದಾ 10 ರ ವರೆಗೆ ಆನ್‌ಲೈನದಲ್ಲಿ ಕೆಲಸ ಮಾಡಬೇಕಗಿದೆ. ನಮ್ಮ ಅಂಗನವಾಡಿ ಕೆಲಸ ಬಿಟ್ಟು ಬಿ.ಎಲ್.ಒ. ಕೆಲಸ ಯಾವ ಸಮಯದಲ್ಲಿ ಮಾಡಬೇಕೆಂದು ಅಧಿಕಾರಿಗಳು ವಿಚಾರ ಮಾಡಬೇಕು ಇನ್ನು ಮುಂದೆ ರಾತ್ರಿ ಕೆಲಸ ಮಾಡಬೇಕಾಗುತ್ತದೆ ಮಹಿಳೆಯರು ಮನೆಯಲ್ಲಿ ಯಾವಾಗ ಕೆಲಸ ಮಾಡಬೇಕು ಸರಿಯಾಗಿ ಗೌರವಧನ ತೆಗೆಯುವದಿಲ್ಲ ಬಾಡಿಗೆ ತಗೆಯುವದಿಲ್ಲ. ಹೆಚ್ಚುವರಿ ಗೌರವಧನ ತಗೆಯುವದಿಲ್ಲ. ಎಲ್ಲಾ ತಾಲೂಕುಗಳಲ್ಲಿ ಹೆಚ್ಚಿನ ಗೌರವಧನ ತಗೆದಿರುತ್ತಾರೆ. ಗೌರವಧನದಲ್ಲಿ ಬಿ.ಲ್.ಒ. ಕೆಲಸ ನಿರ್ವಹಿಸಲು ಆಗುವದಿಲ್ಲ. ಕಡಿಮೆ ಕಾರ ಕಾರಣ ಸಿ.ಡಿ.ಪಿ.ಒ. ಆಫೀಸಿನಿಂದ ಕೈ ಬಿಡಬೇಕು ಸರಕಾರಿ ಶಾಲಾ ಪುರುಷ ಶಿಕ್ಷಕರಿಗೆ ಹಾಕಬೇಕು ಎಂದರು

ಈ ಸಂದರ್ಭದಲ್ಲಿ ಶೋಭಾ ಕಬಾಡೆ, ಅಶ್ವಿನಿ ತಳವಾರ ಪ್ರಧಾನ ಕಾರ್ಯದರ್ಶಿ, ಫರಜಾನ ಬೇಗಂ, ಬಿ. ಶೇಖ, ಸುಜಾತಾ ಬಿರಾದಾರ, ಸುಮಿತ್ರಾ ನಾಯ್ಕೋಡಿ, ಕಲಾವತಿ ಕೂಡಿಗನೂರ, ಶೋಭಾ ಕುದರಿ, ಶಾರದಾ ತಾಂಬೆ, ಸರೋಜನಿ ದೋಷಿ, ಬುದ್ದವ ಬ್ಯಾಕೋಡ, ಸಾವಿತ್ರಿ ಬಿರಾದಾರ, ಹಸೀನಾಬಾನು ಮುಲ್ಲಾ, ಶೋಭಾ ಹೊಟಕೋರ, ಭಾಗಿರಥಿ ತಳವಾರ, ರಾಜೇಶ್ವರಿ ಪೂಜಾರಿ, ಪಾರ್ವತಿ ದಾರೆಕರ, ಸುನಂದ ಸುg, ರೇಣುಕಾ ಕನಸೆ, ಗಿರಿಜಾ ಸಕ್ಕರಿ, ಶಂಕ್ರವ್ವ ಪುಠಾಣಿ ಬಿ.ಎಚ್. ಮಂಜಗೊAಡ, ನೀಲಮ್ಮ ಬಿಜಾಪುರ, ಎಸ್.ಎಸ್. ಪಾಟೀಲ, ಶೀಲಾ ಸಾವಳಗಿಮಠ, ರಾಜೇಶ್ವರಿ ಕಂಬಾ, ಜ್ಯೋತಿ ವಗ್ಗಿ, ಪದ್ಮಾವತಿ ಬಿರಾದಾರ, ಸುನಂದಾ ವಾಲಿ, ದಾನಮ್ಮ ಮಸೂತಿ ಭಾಗ್ಯಶ್ರೀ ಕಟಕದೊಂಡ, ಆರತಿ ಭಾವಿಕಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಮಹಿಳಾ ವಿವಿ: ನೂತನ ಹಂಗಾಮಿ ಕುಲಪತಿಯಾಗಿ ಪ್ರೊ.ನಾಮದೇವಗೌಡ ನೇಮಕ

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ನೂತನ ಹಂಗಾಮಿ ಕುಲಪತಿಯಾಗಿ ನೇಮಕವಾಗಿರುವ ಪ್ರೊ.ನಾಮದೇವಗೌಡ ಅವರು, ಸೋಮವಾರ ಸಂಜೆ ಅಧಿಕಾರ ಸ್ವೀಕರಿಸಿದರು. ಚಿತ್ರದಲ್ಲಿ ಪ್ರೊ..ಮಲ್ಲಿಕಾರ್ಜುನ ಎನ್.ಎಲ್, ಕುಲಸಚಿವ ಪ್ರೊ.ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚAದ್ರಶೇಖರ್, ಇದ್ದಾರೆ.

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಹಂಗಾಮಿ ಕುಲಪತಿಯಾಗಿ ಭಾಷಾ ನಿಕಾಯದ ಡೀನ್ ಪ್ರೊ.ನಾಮದೇವಗೌಡ ಅವರನ್ನು ನೇಮಕ ಮಾಡಿ ರಾಜ್ಯಪಾಲರು ಹಾಗೂ ವಿವಿಯ ಕುಲಾಧಿಪತಿಯೂ ಆಗಿರುವ ಶ್ರೀ.ಥಾವರಚಂದ ಗೆÀಹಲೋಟ್ ಅವರು ಸೋಮವಾರ ಆದೇಶ ಹೊರಡಿಸಿದ್ದಾರೆ.  

ಹಂಗಾಮಿ ಕುಲಪತಿಯಾಗಿದ್ದ ಪ್ರೊ..ಶಾಂತಾದೇವಿ ಟಿ ಅವರ ಡೀನ್‍ಶಿಪ್ ಅವಧಿ ಜೂನ್ 27ರಂದು ಪೂರ್ಣಗೊಂಡಿದ್ದರಿಂದ ಪ್ರೊ.ಮಲ್ಲಿಕಾರ್ಜುನ ಎನ್.ಎಲ್. ಅವರನ್ನು ಹಂಗಾಮಿ ಕುಲಪತಿಯಾಗಿ ನೇಮಕ ಮಾಡಲಾಗಿತ್ತು. ಪ್ರೊ.ಮಲ್ಲಿಕಾರ್ಜುನ ಅವರ ಅಧಿಕಾರ ಅವಧಿ 27-6-2025ರ ಮಧ್ಯಾಹ್ನದಿಂದ 30-06-2025ರ ವರೆಗೆ ಅಥವಾ ಮುಂದಿನ ಆದೇಶದ ವರೆಗೆ ಇರುತ್ತದೆ ಎಂದು ರಾಜ್ಯಪಾಲರ ಆದೇಶದಲ್ಲಿ ತಿಳಿಸಲಾಗಿತ್ತು. 

ಪ್ರೊ.ಮಲ್ಲಿಕಾರ್ಜುನ ಅವರ ಡೀನ್‍ಶಿಪ್ ಅವಧಿ ಸೋಮವಾರ ಪೂರ್ಣಗೊಂಡಿದ್ದರಿಂದ ರಾಜ್ಯಪಾಲರು ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯ ಕಾಯ್ದೆ- 2000ನ ಸೆಕ್ಷನ್ 16 (2) ರ ಅನ್ವಯ ಪ್ರದತ್ತವಾದ ಅಧಿಕಾರ ಬಳಸಿ ದಿನಾಂಕ 26-7-2025 ಅಥವಾ ಖಾಯಂ ಕುಲಪತಿಗಳ ನೇಮಕವಾಗುವವರೆಗೆ ಅಥವಾ ಮುಂದಿನ ಆದೇಶದ ವರೆಗೆ ಹಂಗಾಮಿ ಕುಲಪತಿಯಾಗಿ ಪ್ರೊ.ನಾಮದೇವಗೌಡ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. 

ಅಧಿಕಾರ ಹಸ್ತಾಂತರ: ರಾಜ್ಯಪಾಲರ ಆದೇಶದಂತೆ ನೂತನ ಹಂಗಾಮಿ ಕುಲಪತಿ ಪ್ರೊ.ನಾಮದೇವಗೌಡ ಇಂದು ಇಲ್ಲಿ ನಡೆದ ಸರಳ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಪ್ರೊ..ಮಲ್ಲಿಕಾರ್ಜುನ ಎನ್.ಎಲ್., ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ್ sಸಿಂಡಿಕೇಟ್ ಸದಸ್ಯರಾದ ಶಿವಯೋಗೆಪ್ಪ ಮಾಡ್ಯಾಳ, ಅತೀಕ್ ಮಕಾನದಾರ,  ಸೈದಪ್ಪ ಮಾದರ, ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಯೋಜಕರು,  ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ s ಉಪಸ್ಥಿತರಿದ್ದರು ಎಂದು ವಿವಿ ಪ್ರಕಟಣೆ ತಿಳಿಸಿದೆ.


 ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


ಕಸಾಪ ಅಧ್ಯಕ್ಷರಿಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡಿ ; ಮುಖ್ಯಮಂತ್ರಿ ತಾವು ಕನ್ನಡ ಪ್ರೇಮಿ ಎಂದು ಸಾಬೀತು ಪಡಿಸಲಿ : ಲಾಯಪ್ಪ ಇಂಗಳೆ

ವಿಜಯಪುರ : ಕನ್ನಡ ಸಾಹಿತ್ಯ ಪರಿಷತ್ತಿನ ಚುನಾಯಿತ ರಾಜ್ಯ ಘಟಕದ ಅಧ್ಯಕರಾದ ನಾಡೋಜ ಮಹೇಶ ಜೋಶಿ ಅವರಿಗೆ ಹಿಂದಿನ ಸರ್ಕಾರ ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಕನ್ನಡದ ಕೆಲಸಕ್ಕೆ ಪ್ರೋತ್ಸಾಹಿಸಿತ್ತು. ಸದ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಿಗೆ ನೀಡಿದ ಸಂಪುಟ ದರ್ಜೆಯ ಸ್ಥಾನವನ್ನು ಹಿಂಪಡೆದಿರುವ ಪುನಃ ನೀಡಬೇಕೆಂದು ಒತ್ತಾಯಿಸಿ ವಿಜಯಪುರ ಜಿಲ್ಲಾಧಿಕಾರಿಗಳ ಮೂಲಕ ಘನತವೆತ್ತ ರಾಜ್ಯ ಪಾಲರಿಗೆ ಹಾಗೂ ಮುಖ್ಯಮಂತ್ರಿಗಳಿಗೆ ಕನ್ನಡದ ಕಟ್ಟಾಳು ಗಂಗಾಧರ ಕೋರಳ್ಳಿ ಪ್ರತಿಷ್ಠಾನದ ಕಾರ್ಯದರ್ಶಿ ಲಾಯಪ್ಪ ಇಂಗಳೆ ಅವರು ಮನವಿ ಸಲ್ಲಿಸಿದ್ದಾರೆ.

ಈ ಕುರಿತು ಮನವಿ ಮಾಡಿಕೊಂಡಿರುವ ಅವರು, ಮೈಸೂರಿನ ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ಸರ್. ಎಂ.ವಿಶ್ವೇಶ್ವರಯ್ಯ ನವರು ಸ್ಥಾಪಿಸಿದ ಕನ್ನಡ ನಾಡಿನ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತು ಶತಮಾನ ಪೂರೈಸಿದ ಕನ್ನಡದ ಹೆಮ್ಮೆಯ ಸಂಸ್ಥೆಯಾಗಿದೆ. ಕನ್ನಡ ಸಾಹಿತ್ಯ ಪರಿಷತ್ತು ಅನೇಕ ಹಿರಿಯ ಸಾಹಿತಿಗಳು ಹಾಗೂ ನಾಡು ನುಡಿಗಾಗಿ ಶ್ರಮಿಸಿದ ಹಿರಿಯರ ಮಾರ್ಗದರ್ಶನದಲ್ಲಿ ನಾಡಿನಲ್ಲಿ ಕನ್ನಡವನ್ನು ಕಟ್ಟಿ ಬೆಳೆಸುವ, ಉಳಿಸುವ ಕೆಲಸ ಮಾಡುತ್ತಾ ಬಂದಿರುವುದು ಅದರ ಹಿರಿಮೆ ಹಿಡಿದ ಕೈಗನ್ನಡಿಯಾಗಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯನವರು ತಮ್ಮ ಹಿಂಬಾಲಕರ ಮಾತನ್ನು ಕೇಳಿ ಸಾಹಿತ್ಯ ಪರಿಷತ್ತಿನಲ್ಲಿ ರಾಜಕೀಯ ಮಾಡಲು ಹೊರಟಿರುವುದು ಪರಿಷತ್ತಿನ ಇತಿಹಾಸದಲ್ಲಿಯೇ ಕಪ್ಪು ಚುಕ್ಕೆಯಾಗಿದೆ. ಕೂಡಲೇ ಈ ಹಿಂದಿನAತೆ ಸಂಪುಟ ದರ್ಜೆಯ ಸ್ಥಾನಮಾನವನ್ನು ಮುಂದುವರೆಸಿ ಕನ್ನಡ ಕಟ್ಟುವ ಕೆಲಸಕ್ಕೆ ಅನುಕೂಲ ಮಾಡಿಕೊಟ್ಟು, ತಾವು ಅಪ್ಪಟ ಕನ್ನಡ ಪ್ರೇಮಿ ಎಂದು ಸಾಬೀತು ಪಡಿಸಬೇಕು ಎಂದು ಮನವಿ ಪತ್ರದಲ್ಲಿ ಇಂಗಳೆ ಅವರು ಆಗ್ರಹಿಸಿದ್ದಾರೆ.

 ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Sunday, June 29, 2025

ದೇಶದಲ್ಲೇ ಕರ್ನಾಟಕದ ಸರ್ಕಾರಿ ಶಾಲೆ ಫಸ್ಟ್ : ಸಚಿವ ಶಿವಾನಂದ

ಬಸವನಬಾಗೇವಾಡಿ : ಉತ್ತರ ಪ್ರದೇಶ ಹಲವು ಪ್ರಧಾನ ಮಂತ್ರಿಗಳನ್ನು ನೀಡಿದರೂ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಹಿಂದಿದೆ. ಆದರೆ ದೇಶದ 31 ರಾಜ್ಯಗಳಲ್ಲೇ ಕನರ್ಾಟಕ ರಾಜ್ಯ ಸಕರ್ಾರಿ ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದು, 1.4 ಕೋಟಿ ಮಕ್ಕಳು ಕನ್ನಡ ಶಾಲೆಯಲ್ಲಿ ಓದುತ್ತಿರುವುದೇ ಇದಕ್ಕೆ ಸಾಕ್ಷಿ ಎಂದು ಜವಳಿ, ಕೃಷಿ ಮಾರುಕಟ್ಟೆ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವರಾದ ಶಿವಾನಂದ ಪಾಟೀಲ ಬಣ್ಣಿಸಿದರು.

ಶನಿವಾರ ಬಸವನಬಾಗೇವಾಡಿ ತಾಲೂಕಿನ ಇಂಗಳೇಶ್ವರ ತಾಂಡಾದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ, ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಹಿಂದಿನ ಹಿರಿಯರು ಶೈಕ್ಷಣಿಕ ಸೌಲಭ್ಯಗಳ ಮಾತಿರಲಿ ಕನಿಷ್ಟ ಶಾಲೆಯೇ ಇಲ್ಲದೇ ಅಕ್ಷರ ಜ್ಞಾನ ವಂಚಿತರಾದರು. ಅವರು ಕನಸೂ ಕಾಣದ ರೀತಿಯಲ್ಲಿ ಇದೀಗ ನಮ್ಮ ಸಕರ್ಾರ ಕಡಿಮೆ ಜನಸಂಖ್ಯೆ ಇರುವ ತಾಂಡಾಗಳಲ್ಲೂ ಶೈಕ್ಷಣಿಕ ಮೂಲಭೂತ ಸೌಕರ್ಯ ಕಲ್ಪಿಸುವ ಮೂಲಕ ಬದ್ಧತೆ ತೋರುತ್ತಿದೆ ಎಂದರು.

ಕನರ್ಾಟಕ ರಾಜ್ಯದಲ್ಲಿ ಸಂಗ್ರಹವಾಗುವ ಒಟ್ಟು ತೆರಿಗೆ ಹಣದಲ್ಲಿ ಶೇ.18 ರಷ್ಟು ಅನುದಾನವನ್ನು ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಗೆ ಬಳಕೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಅಧಿಕಾರ ನಡೆಸಿದ ಸಕರ್ಾರಗಳು, ಮುಖ್ಯಮಂತ್ರಿಗಳು ತಮ್ಮ ತಮ್ಮ ಕಾಲಾವಧಿಯಲ್ಲಿ ಒಬ್ಬರು ಶಾಲಾ ಕಟ್ಟಡಕ್ಕೂ, ಮತ್ತೊಬ್ಬರು ಶಿಕ್ಷಕರ ನೇಮಕಕ್ಕೂ, ಬಸ್ ಪಾಸ್, ಸೈಕಲ್, ಬಿದಿಯೂಟ, ಹಾಲು, ಮೊಟ್ಟೆ, ಬೂಟು, ಸಾಕ್ಸು, ಉಚಿತ ವಸತಿ-ಆಹಾರ ಸಹಿತ ವಿದ್ಯಾಥರ್ಿ ನಿಲಯಗಳು ಹೀಗೆ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿದ್ದಾರೆ ಎಂದು ವಿವರಿಸಿದರು.

ಹೀಗಾಗಿ ಸಮಾಜದಲ್ಲಿ ಎಲ್ಲ ತಾಯಂದಿರು, ವಿಶೇಷವಾಗಿ ತಾಂಡಾಗಳ ಜನರು ತಾವು ಗುಳೆ ಹೋದರೂ ಸಂಪೂರ್ಣ ಉಚಿತ ಶಿಕ್ಷಣ ನೀಡುವ ಸಕರ್ಾರಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ಸೇರಿಸಿ ಹೋಗಿ. ಸಕರ್ಾರಿ ಶಾಲೆಯಲ್ಲೇ ಓದಿದ ಎಪಿಜೆ ಅಬ್ದುಲ್ ಕಲಾಂ ಎಂಬ ಬಾಲಕ ಭಾರತದ ರಾಷ್ಟ್ರಪತಿ ಸ್ಥಾನಕ್ಕೇರಿದ್ದು, ಶೈಕ್ಷಣಿಕ ಪ್ರತಿಭೆಯಿಂದ ಎಂಬುದನ್ನು ಮರೆಯಬೇಡಿ ಎಂದು ಕಿವಿ ಮಾತು ಹೇಳಿದರು.

ಶಿಕ್ಷಣ ಪಡೆದ ಓರ್ವ ಸುಕ್ಷಿತ ತಾಯಿ ಸಾವಿರ ಶಿಕ್ಷಕರಿಗೆ ಸಮ. ಹೀಗಾಗಿ ಮಹಿಳೆಯರ ಶಿಕ್ಷಣಕ್ಕೂ ಆದ್ಯತೆ ನೀಡಿ, ಉತ್ತಮ ಸಮಾಜ ನಿಮರ್ಾಣಕ್ಕೆ ಗಮನ ಕೊಡುವಂತೆ ಸಲಹೆ ನೀಡಿದ ಸಚಿವರು, ನಿಮ್ಮ ಮಕ್ಕಳಲ್ಲಿರುವ ಪ್ರತಿಭೆ ಶೈಕ್ಷಣಿಕ ಸೌಲಭ್ಯದ ಮೂಲಕ ಸಮಾಜದಲ್ಲಿ ಸಾಧನೆಗೆ ವೇದಿಕೆ ನಿಮರ್ಿಸಲಿದೆ ಎಂದು ವಿಶ್ಲೇಷಿಸಿದರು.

ಕಂದಾಯ ಗ್ರಾಮಗಳ ಸೃಷ್ಟಿಯ ಮೂಲಕ ನಮ್ಮ ಸಕರ್ಾರ ಗೈರಾಣ, ಗಾಂಠಾಣಾ, ಅನಧಿಕೃತ ಕಟ್ಟಡಗಳನ್ನು ಸಕ್ರಮ ಗೊಳಿಸುವ ಮೂಲಕ ಒಕ್ಕಲೇಳುವ ಭೀತಿಯಿಂದ ಮುಕ್ತಿ ಕೊಡಿಸಿರುವುದು ನಮ್ಮ ಸಕರ್ಾರ ಬಡವರ ಪರ ಇರುವ ಬದ್ಧತೆ ತೋರಿದೆ ಎಂದು ವಿವರಿಸಿದರು.

ಸಚಿವ ಶಿವಾನಂದ ಪಾಟೀಲ ಅವರು ಇಂಗಳೇಶ್ವರ ತಾಂಡಾದಲ್ಲಿ ಸಕರ್ಾರಿ ಕನ್ನಡ ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವೇಕ ಯೋಜನೆಯಲ್ಲಿ ನಿಮರ್ಾಣ ಗೊಂಡಿರುವ ಕೋಠಡಿ ಲೋಕಾರ್ಪಣೆ ಹಾಗೂ ಎಸ್ಸಿಪಿ ಯೋಜನೆಯಲ್ಲಿ ನೂತನ ಕೋಠಡಿ ನಿಮರ್ಾಣಕ್ಕೆ ಭೂಮಿ ಪೂಜೆ, ಕೃಷ್ಣಾಪುರ ಪುನರ್ವಸತಿ ಕೇಂದ್ರಕ್ಕೆ ಜಲಜೀವನ ಮಿಷನ್ ಯೋಜನೆ ಕಾಮಗಾರಿ, ಬಸವನಬಾಗೇವಾಡಿ-ಇಂಗಳೇಶ್ವರ ರಸ್ತೆ ಸುಧಾರಣೆ, ವಿಜಯಪುರ- ಉಕ್ಕಲಿ- ದಿಂಡವಾರ- ಸಾಸನೂರ- ಬಳಗಾನೂರ- ನಾಲತವಾಡ ರಾಜ್ಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.

ಸಿದ್ಧರಾಮಯ್ಯ, ಡಿ.ಕೆ. ಶಿವಕುಮಾರ ನೇತೃತ್ವದಲ್ಲಿ ರಾಜ್ಯದಲ್ಲಿ ಕರ್ಮ-ಧರ್ಮದ ಸಂಯೋಗದಿಂದ ಅಸ್ತಿತ್ವಕ್ಕೆ ಬಂದಿರುವ ನಮ್ಮ ಸಕರ್ಾರ ತಾಂಡಾ, ಹಾಡಿಗಳಂಥ ನೆಲೆಯಲ್ಲಿ ಸೂರು ಕಟ್ಟಿಕೊಂಡಿದ್ದ ಜನರಿಗೆ ಸೂರಿನ ಗ್ಯಾರಂಟಿ ನೀಡಿದ್ದಾರೆ. ದೇವರಾಜ ಅರಸು ಅವರು ಉಳುವವನೇ ಭೂಮಿ ಒಡೆಯ ಎಂಬ ಯೋಜನೆ ಜಾರಿಗೆ ತಂದಿದ್ದರು. ಕಾಗೋಡು ತಿಮ್ಮಪ್ಪ ಅವರು ಕಂಡಿದ್ದ ತಾಂಡಾ, ಹಾಡಿಗಳಲ್ಲಿ ಮನೆ ಕಟ್ಟಿಕೊಂಡಿದ್ದ ಜನರ ಸೂರುಗಳನ್ನು ಸಕ್ರಮ ಗೊಳಿಸಲು ನಮ್ಮ ಸಕರ್ಾರ ಕಂದಾಯ ಗ್ರಾಮಗಳಾಗಿಸಿ ನಿಮ್ಮಗಳ ನೆಲೆಗಳನ್ನು ಭದ್ರಪಡಿಸಿದ್ದಾರೆ ಎಂದು ವಿವರಿಸಿದರು.

ಇಂಗಳೇಶ್ವರದ ಚನ್ನಬಸವ ಶ್ರೀಗಳು, ಸೋಮದೇವರಹಟ್ಟಿ ಜುಗುನು ಮಹಾರಾಜ ಸಾನಿಧ್ಯ ವಹಿಸಿದ್ದ ಸಮಾರಂಭದಲ್ಲಿ ಜಿ.ಪಂ. ಮಾಜಿ ಸದಸ್ಯ ಚಂದ್ರಶೇಖರಗೌಡ ಪಾಟೀಲ ಮನಗೂಳಿ, ಕಾಂಗ್ರೆಸ್ ಹಿರಿಯ ಮುಖಂಡ ಈರಣ್ಣ ಪಟ್ಟಣಶೆಟ್ಟಿ, ಗ್ರಾ.ಪಂ. ಅಧ್ಯಕ್ಷ ಬನ್ನೆಪ್ಪ ಡೋಣೂರ, ಗ್ರಾಮಸ್ಥರಾದ ಶರಣಪ್ಪ ಬಳ್ಳಾವೂರ, ಅರವಿಂದ, ಶ್ರೀಮಂತ ಚವ್ಹಾಣ, ರಾಮು ಚವ್ಹಾಣ, ರಾಮು ರಾಠೋಡ, ತಹಸೀಲ್ದಾರ ಸೋಮನಕಟ್ಟಿ ಇದ್ದರು.

 ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Friday, June 27, 2025

ಮಹಿಳಾ ವಿವಿ: ನೂತನ ಹಂಗಾಮಿ ಕುಲಪತಿಯಾಗಿ ಪ್ರೊ.ಮಲ್ಲಿಕಾರ್ಜುನ ಎನ್‌.ಎಲ್. ನೇಮಕ

 


ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ನೂತನ ಹಂಗಾಮಿ ಕುಲಪತಿಯಾಗಿ ನೇಮಕವಾಗಿರುವ ಪ್ರೊ.ಮಲ್ಲಿಕಾರ್ಜುನ ಎನ್.ಎಲ್. ಅವರು, ಶುಕ್ರವಾರ ಸಂಜೆ ಅಧಿಕಾರ ಸ್ವೀಕರಿಸಿದರು. ಚಿತ್ರದಲ್ಲಿ ಪ್ರೊ.ಶಾಂತಾದೇವಿ ಟಿ ಮತ್ತು ಕುಲಸಚಿವ ಪ್ರೊ.ಶಂಕರಗೌಡ ಸೋಮನಾಳ ಇದ್ದಾರೆ.

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಹಂಗಾಮಿ ಕುಲಪತಿಯಾಗಿ ವಾಣಿಜ್ಯ ಮತ್ತು ವ್ಯವಹಾರ ನಿರ್ವಹಣೆ ನಿಕಾಯದ ಡೀನ್ ಪ್ರೊ.ಮಲ್ಲಿಕಾರ್ಜುನ ಎನ್.ಎಲ್. ಅವರನ್ನು ನೇಮಕ ಮಾಡಿ ರಾಜ್ಯಪಾಲರು ಹಾಗೂ ವಿವಿಯ ಕುಲಾಧಿಪತಿಯೂ ಆಗಿರುವ ಶ್ರೀ.ಥಾವರಚಂದ ಗೆಹಲೋಟ್ ಅವರು ಶುಕ್ರವಾರ ಆದೇಶ ಹೊರಡಿಸಿದ್ದಾರೆ.

ಹಂಗಾಮಿ ಕುಲಪತಿಯಾಗಿದ್ದ ಪ್ರೊ..ಶಾಂತಾದೇವಿ ಟಿ ಅವರ ಡೀನ್ ಅವಧಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯ ಕಾಯ್ದೆ- 2000ನ ಸೆಕ್ಷನ್ 16 (2) ರ ಅನ್ವಯ ಪ್ರದತ್ತವಾದ ಅಧಿಕಾರ ಬಳಸಿ ಪ್ರೊ.ಮಲ್ಲಿಕಾರ್ಜುನ ಎನ್.ಎಲ್. ಅವರನ್ನು ನೇಮಕ ಮಾಡಲಾಗಿದೆ. ಇವರ ಅಧಿಕಾರ ಅವಧಿ 27-6-2025ರ ಮಧ್ಯಾಹ್ನದಿಂದ 30-06-2025ರ ವರೆಗೆ ಅಥವಾ ಮುಂದಿನ ಆದೇಶದ ವರೆಗೆ ಇರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಅಧಿಕಾರ ಹಸ್ತಾಂತರ: ರಾಜ್ಯಪಾಲರ ಆದೇಶದಂತೆ ನೂತನ ಹಂಗಾಮಿ ಕುಲಪತಿ ಪ್ರೊ.ಮಲ್ಲಿಕಾರ್ಜುನ ಎನ್.ಎಲ್. ಇಂದು ಇಲ್ಲಿ ನಡೆದ ಸರಳ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಪ್ರೊ..ಶಾಂತಾದೇವಿ ಟಿ ಮತ್ತು ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ್, ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು ಎಂದು ವಿವಿ ಪ್ರಕಟಣೆ ತಿಳಿಸಿದೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ರಾಜ್ಯದ ರೈತರ ಸುಭಿಕ್ಷೆಗಾಗಿ ತಿರುಪತಿ ಬಾಲಾಜಿಗೆ ಸಚಿವ ಶಿವಾನಂದ ವಿಶೇಷ ಪೂಜೆ


ವಿಜಯಪುರ : ಜವಳಿ, ಕೃಷಿ ಮಾರುಕಟ್ಟೆ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವರಾದ ಶಿವಾನಂದ ಪಾಟೀಲ ಅವರು ರಾಜ್ಯದಲ್ಲಿ ಸುಭಿಕ್ಷೆಗಾಗಿ ಸಮೃದ್ಧ ಮಳೆ-ಬೆಳೆ, ರೈತರಿಗೆ ಸಂತೃಪ್ತ ಜೀವನ ಕರುಣಿಸುವಂತೆ ತಿರುಪತಿಗೆ ತೆರಳಿ ತಿಮ್ಮಪ್ಪನಿಗೆ ವಿಶೇಷ ಪೂಜೆ ಸಲ್ಲಿಸಿದರು.

ಕುಟುಂಬ ಸಮೇತರಾಗಿ ತಿರುಪತಿಗೆ ತೆರಳಿ ತಿರುಮಲ ತಿಮ್ಮಪ್ಪ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ದರ್ಶನ ಪಡೆದು, ನಾಡಿನ ಅನ್ನದಾತರು ಸಂತೃಪ್ತ ಜೀವನ ನಡೆಸುವಂತೆ ಕರುಣಿಸುವಂತೆ ಬಾಲಾಜಿ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು.

ಕುಟುಂಬದ ಸದಸ್ಯರಾದ ಪತ್ನಿ ಭಾಗ್ಯಶ್ರೀ, ಮಕ್ಕಳಾದ ಸಂಯುಕ್ತ, ಸಂಪ್ರದಾ, ಸತ್ಯಜಿತ್‌, ಶ್ರೇಯಸ್, ಅಳಿಯ ಶಿವಕುಮಾರ ತಾಳಂಪಳ್ಳಿ ಇವರ ಜೊತೆ ತೆರಳಿ ಸಚಿವರು ತಿರುಪತಿ ಬಾಲಾಜಿ ದರ್ಶನ ಪಡೆದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.



Thursday, June 26, 2025

ಬೀದರ ಸಹಕಾರಿ ಸಕ್ಕರೆ ಕಾರ್ಖಾನೆಗೆ ಎನ್‌ಸಿಡಿಸಿ ನೆರವು ಸದ್ಯದ ಏಕೈಕ ಮಾರ್ಗ : ಸಚಿವ ಶಿವಾನಂದ

 


ಬೆಂಗಳೂರು: ಬೀದರ ಸಹಕಾರ ಸಕ್ಕರೆ ಕಾರ್ಖಾನೆ ಪುನರಾರಂಭ ಕುರಿತು ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಸಚಿವ ಶಿವಾನಂದ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.


ಬೆಂಗಳೂರು: ಬೀದರ ಸಹಕಾರ ಸಕ್ಕರೆ ಕಾರ್ಖಾನೆ ಪುನರಾರಂಭಕ್ಕೆ ಎನ್‌ಸಿಡಿಸಿ ನೆರವು ಪಡೆಯುವುದು ಸದ್ಯದ ಏಕೈಕ ಪರಿಹಾರ ಮಾರ್ಗ. ಇದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಮಾಡುವ ಕುರಿತು ಬೆಂಗಳೂರಿನಲ್ಲಿ ಕಬ್ಬು ಅಭಿವೃದ್ಧಿ, ಸಕ್ಕರೆ ಸಚಿವ ಶಿವಾನಂದ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.

ಬೆಂಗಳೂರಿನಲ್ಲಿ ವಿಧಾನಸೌಧದಲ್ಲಿ ಸಕ್ಕರೆ, ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ ಬೀದರ

ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಸಹಕಾರ ಸಚಿವ ಕೆ.ಎನ್‌. ರಾಜಣ್ಣ,  ಪೌರಾಡಳಿತ ಸಚಿವ ರಹೀಂಖಾನ್‌ ಹಾಗೂ ಜಿಲ್ಲೆಯ ಶಾಸಕರು ಪಾಲ್ಗೊಂಡಿದ್ದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.

ಕಾರ್ಖಾನೆ ಅಧ್ಯಕ್ಷ ಸುಭಾಷ ಜಿ. ಕಲ್ಲೂರು ಕಾರ್ಖಾನೆ ಪರಿಸ್ಥಿತಿ ಕುರಿತು ಸಭೆಗೆ ವಿವರಿಸಿದರು.

ಸುದೀರ್ಘ ಚರ್ಚೆ ನಂತರ ಮಾತನಾಡಿದ ಕಬ್ಬು ಮತ್ತು ಸಕ್ಕರೆ ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ ಅವರು, ಈಗಾಗಲೇ ನಷ್ಟದಲ್ಲಿರುವ ಆರು ಸಹಕಾರಿ ಸಕ್ಕರೆ ಕಾರ್ಖಾನೆಗಳಿಗೆ ಎನ್‌ಸಿಡಿಸಿ ನೆರವು ಪಡೆಯಲು ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ  ತೀರ್ಮಾನಿಸಲಾಗಿದೆ. ಈ ಆರು ಕಾರ್ಖಾನೆಗಳ  ಜೊತೆಗೆ ಬೀದರ ಸಹಕಾರ ಸಕ್ಕರೆ ಕಾರ್ಖಾನೆಗೂ ಎನ್‌ಸಿಡಿಸಿ ನೆರವು ಪಡೆಯುವುದು ಸದ್ಯದಲ್ಲಿ ಇರುವ ಏಕೈಕ ಪರಿಹಾರ ಮಾರ್ಗ. ಹೀಗಾಗಿ ಸಿಎಂ ಭೇಟಿ ಮಾಡಿ ಮನವಿ ಮಾಡುವುದೇ ಸೂಕ್ತವೆಂಬ ಸಚಿವರ ಸಲಹೆಗೆ ಸಭೆ ಸಮ್ಮತಿಸಿತು.


ಈಗ ಕಬ್ಬು ಬೆಳೆಯುವ ಕ್ಷೇತ್ರ ಅಧಿಕವಾಗಿದ್ದು, ಇಳುವರಿ ಕೂಡ ಉತ್ತಮವಾಗಿದೆ. ಕಾರ್ಖಾನೆಗೆ ಕಬ್ಬಿನ ಕೊರತೆ ಬೀಳುವುದಿಲ್ಲ. ಕಾರ್ಖಾನೆ ಪುನರಾರಂಭ ಮಾಡಬೇಕು ಎನ್ನುವುದೇ ಎಲ್ಲರ ಆಶಯ. ಈ ನಿಟ್ಟಿನಲ್ಲಿ ಪ್ರಯತ್ನ ಮಾಡೋಣ. ಎಲ್‌ಆರ್‌ಒಟಿ ಸೇರಿದಂತೆ ಯಾವುದೇ ಮಾರ್ಗಗಳಿಗಿಂತ ಎನ್‌ಸಿಡಿಸಿ ನೆರವು ಪಡೆಯುವುದು ಸೂಕ್ತ. ಹೀಗಾಗಿ ಈ ನಿಟ್ಟಿನಲ್ಲಿ ಪ್ರಯತ್ನ ಮಾಡೋಣ ಎಂದರು.


ಕಾರ್ಖಾನೆ ನಷ್ಟದ ಬಗ್ಗೆ ತನಿಖೆ ನಡೆಸಬೇಕು ಎಂಬ ಬೇಡಿಕೆ ಇದೆ. ಈ ಬಗ್ಗೆ ಪ್ರತ್ಯೇಕ ಸಭೆ ನಡೆಸಿ ತೀರ್ಮಾನ ಮಾಡೋಣ. ಈ ಸಭೆಯಲ್ಲಿ ಕಾರ್ಖಾನೆ ಪುನರಾರಂಭದ ಬಗ್ಗೆ ಮಾತ್ರ ಚರ್ಚಿಸಿ ನಿರ್ಣಯ ಕೈಗೊಳ್ಳುವುದಕ್ಕೆ ಸೀಮಿತವಾಗೋಣ ಎಂದು ಸಚಿವರು ಹೇಳಿದರು.


ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಮಾತನಾಡಿ, 2022ನೇ ಸಾಲಿನಲ್ಲಿ ಕಾರ್ಖಾನೆಯನ್ನು ಎಲ್‌ಆರ್‌ ಒಟಿ ಆಧಾರದ ಮೇಲೆ ಪುನರಾರಂಭ ಮಾಡುವ ಬಗ್ಗೆ ಸಚಿವ ಸಂಪುಟ ಸಭೆ ನಿರ್ಣಯ ಮಾಡಿತ್ತು,  ಎರಡು ಬಾರಿ ಟೆಂಡರ್‌ ಕರೆದರೂ ಯಾರೂ ಭಾಗವಹಿಸಲಿಲ್ಲ. ಹಿಂದಿನ ಸರ್ಕಾರದ ಅವಧಿಯಲ್ಲಿ ನೆರವಿನ ಭರವಸೆ ನೀಡಲಾಗಿತ್ತಾದರೂ ರಾಜಕೀಯ ಕಾರಣಕ್ಕೆ ನೆರವು ಸಿಗಲಿಲ್ಲ ಎಂದರು.


ಕಾರ್ಖಾನೆಯ ನಷ್ಟಕ್ಕೆ ಆಡಳಿತ ಮಂಡಳಿಯ ಲೋಪಗಳೂ ಕಾರಣವಾಗಿವೆ. ನಾರಂಜಾ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಡಿಸಿಸಿ ಬ್ಯಾಂಕಿನಿಂದ ಸಾಲ ಪಡೆದಿದ್ದು, ಸಕ್ಕರೆಯನ್ನು ಬ್ಯಾಂಕಿನ ಗಮನಕ್ಕೆ ತಾರದೆ ಮಾರಾಟ ಮಾಡಲಾಯಿತು. ಆದರೆ ಸಾಲ ಮರುಪಾವತಿ ಮಾಡಿಲ್ಲ. ಇಂತಹ ಕ್ರಮಗಳು ಡಿಸಿಸಿ ಬ್ಯಾಂಕುಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಲು ಕಾರಣವಾಗುತ್ತವೆ. ಹೀಗಾಗಿ ನಷ್ಟಕ್ಕೆ ಕಾರಣಗಳ ಬಗ್ಗೆ ತನಿಖೆ ನಡೆಸುವುದು ಸೂಕ್ತ ಎಂದು ಅಭಿಪ್ರಾಯ ಪಟ್ಟರು.


ಈಶ್ವರ ಖಂಡ್ರೆ ಅವರ ಅಭಿಪ್ರಾಯಕ್ಕೆ ಸಹಮತ ವ್ಯಕ್ತಪಡಿಸಿದ ಸಚಿವ ರಹೀಂಖಾನ್‌ ಅವರು, ನಷ್ಟಕ್ಕೆ ಏನು ಕಾರಣ ಎಂಬ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಕಾರ್ಖಾನೆ ಪುನರಾರಂಭ ಮಾಡುವ ಸಂದರ್ಭದಲ್ಲಿ ಮತ್ತೆ ಅಂಥವರು ಆಡಳಿತಕ್ಕೆ ಬರುವ ಪ್ರಯತ್ನ ಮಾಡುತ್ತಾರೆ. ಹೀಗಾಗಿ ತನಿಖೆ ಮಾಡಿಸಿ ಕ್ರಮ ಕೈಗೊಳ್ಳುವುದು ಸೂಕ್ತ ಎಂದು ಹೇಳಿದರು. 


ಸಹಕಾರ ಸಚಿವ ಕೆ.ಎನ್. ರಾಜಣ್ಣ ಮಾತನಾಡಿ, ಅಪೆಕ್ಸ್‌ ಬ್ಯಾಂಕಿನಿಂದ ಏಕಕಾಲಕ್ಕೆ ಸಾಲ ತೀರುವಳಿ ಯೋಜನೆಯಲ್ಲಿ ಅಸಲು ಮಾತ್ರ ಪಾವತಿಸಿದರೆ ಬಡ್ಡಿ ಮನ್ನಾ ಮಾಡಲಾಗುತ್ತದೆ. ಸಕ್ಕರೆ ಕಾರ್ಖಾನೆ ಸುಮಾರು 173 ಎಕರೆ ಭೂಮಿ ಹೊಂದಿದ್ದು, ಅದರಲ್ಲಿ ಕಾರ್ಖಾನೆಗೆ ಅಗತ್ಯ ಪ್ರಮಾಣದ ಭೂಮಿ ಉಳಿಸಿಕೊಂಡು ಇತರ ಭೂಮಿ ಮಾರಾಟ ಮಾಡಿ ಕಾರ್ಖಾನೆ ನಡೆಸುವ ಸಾಧ್ಯತೆಯನ್ನು ಪರಿಶೀಲಿಸಬಹುದು ಎಂದು ಸಲಹೆ ನೀಡಿದರು.


ಅಪೆಕ್ಸ್‌ ಬ್ಯಾಂಕ್‌ ಬಡ್ಡಿಯನ್ನು ಮನ್ನಾ ಮಾಡಿದಂತೆ  ಒಟಿಎಸ್‌ ಆಧಾರದ ಮೇಲೆ ಸಾಲ ಮರುಪಾವತಿ ಬಗ್ಗೆ ಡಿಸಿಸಿ ಬ್ಯಾಂಕ್‌ ಕೂಡ ನಿರ್ದಾರ ಮಾಡಬಹುದು ಎಂದು ಸಚಿವ ಶಿವಾನಂದ ಪಾಟೀಲ ಹೇಳಿದರು. 


ಏಕಪಕ್ಷೀಯವಾಗಿ ತೀರ್ಮಾನ ಮಾಡಲು ಸಾಧ್ಯವಿಲ್ಲ. ಆಡಳಿತ ಮಂಡಳಿ ಸಭೆಯಲ್ಲಿ ಈ ವಿಷಯ ತಂದು ಸಭೆ ಏನು ನಿರ್ಣಯ ಮಾಡುತ್ತದೆ ಎಂಬ ಆಧಾರದ ಮೇಲೆ ನಿರ್ಣಯ ಮಾಡಬೇಕಾಗುತ್ತದೆ ಎಂದು ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಅಮರ್‌ ಖಂಡೆ ಹೇಳಿದರು.


ಸಕ್ಕರೆ ಕಾರ್ಖಾನೆ ಸ್ಥಿತಗತಿ ಬಗ್ಗೆ ಮಾಹಿತಿ ನೀಡಿದ ಕಾರ್ಖಾನೆ ಅಧ್ಯಕ್ಷ ಸುಭಾಷ ಕಲ್ಲೂರು, 2021ರಲ್ಲಿ ಹೊಸ ಆಡಳಿತ ಮಂಡಳಿ ಅಧಿಕಾರಕ್ಕೆ ಬಂದಿದೆ. ಐದು ವರ್ಷದಲ್ಲಿ 2 ಲಕ್ಷ ಟನ್‌ ಕಬ್ಬು ನುರಿಸಲು ಸಾಧ್ಯವಾಗಿಲ್ಲ. ಎರಡು ವರ್ಷದಿಂದ ಕಾರ್ಖಾನೆ ಬಂದ್‌ ಆಗಿದೆ. ಕಾರ್ಖಾನೆಯ 50 ವರ್ಷದ ಅವಧಿಯಲ್ಲಿ ಸುಮಾರು 25 ವರ್ಷ ಖಂಡ್ರೆ ಅವರ ಮನೆತನದವರೇ ಆಡಳಿತ ನಡೆಸಿದ್ದು, ಕಾರ್ಖಾನೆ ಸುಸ್ಥಿತಿಯಲ್ಲಿತ್ತು. ನಂತರದ ವರ್ಷಗಳಲ್ಲಿ ಎರಡು ವರ್ಷಗಳಿಗೊಮ್ಮೆ ಅಧ್ಯಕ್ಷರ ಬದಲಾವಣೆ ಆರಂಭವಾಯಿತು. ಇದೂ ಕೂಡ ಸಮಸ್ಯೆಗೆ ಕಾರಣ ಎಂದು ಹೇಳಿದರು.


ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಅಮರ್‌ ಖಂಡ್ರೆ ಅವರು ಮಾತನಾಡಿ, ಬ್ಯಾಂಕಿನ ಶೇ. 49 ರಷ್ಟು ಅನುತ್ಪಾದಕ ಆಸ್ತಿ ಹೊಂದಿದ್ದು, ‍‍‍ಆರ್ಥಿಕ ಪರಿಸ್ಥಿತಿ ಸರಿ ಇಲ್ಲ. ನಬಾರ್ಡ್‌ನ ಪುನರ್ಧನ ಕೂಡಾ ಸ್ಥಗಿತಗೊಂಡಿದೆ. ಬ್ಯಾಂಕಿನ ಹಿತಾಸಕ್ತಿಯನ್ನೂ ಕೂಡ ಗಮನಕದಲ್ಲಿಟ್ಟುಕೊಂಡು ತೀರ್ಮಾನ ಮಾಡಬೇಕು ಎಂದು ಹೇಳಿದರು.


ಬೀದರ ಜಿಲ್ಲೆಯ ಶಾಸಕರಾದ ಭೀಮರಾವ ಪಾಟೀಲ, ಎಂ.ಜಿ.ಮೋಳೆ, ಡಾ. ಶೈಲೇಂದ್ರ ಬೆಲ್ದಾಳೆ ಸಹಕಾರ ಸಂಘಗಳ ನಿಬಂಧಕ ಟಿ.ಎಚ್‌. ಕುಮಾರ, ಸಕ್ಕರೆ ಇಲಾಖೆ ಆಯುಕ್ತ ರವಿಕುಮಾರ, ಬೀದರ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಅಪೆಕ್ಸ್‌ ಬ್ಯಾಂಕ್‌ ವ್ಯವಸ್ಥಾಪಕ ನಿರ್ದೇಶಕ ದೇವರಾಜ ಸೇರಿದಂತೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.



ಕಾರ್ಖಾನೆ ಹೊಣೆಗಾರಿಕೆ ಎಷ್ಟು?

1. ರಾಜ್ಯ ಸರ್ಕಾರದ ಸಾಲ 40.81 ಕೋಟಿ ರೂ.

2. ಎನ್‌ಸಿಡಿಸಿ/ಎಸ್‌ಡಿಎಫ್‌ ಸಾಲ 3.14 ಕೋಟಿ ರೂ.

3. ಭಾರತೀಯ ಸ್ಟೇಟ್‌ ಬ್ಯಾಂಕ್‌ ಕಲಬುರಗಿ 13.67 ಕೋಟಿ ರೂ.

4. ಅಪೆಕ್ಸ್ ಬ್ಯಾಂಕ್ 110.52 ಕೋಟಿ ರೂ.,

5. ವೈಯಕ್ತಿಕ ಖಾತರಿ ಮೇಲೆ ಸಾಲ 5.35 ಕೋಟಿ ರೂ.

6. ಕಾರ್ಮಿಕರ ವೇತನ ಬಾಕಿ 24.71 ಕೋಟಿ ರೂ.


ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.



Monday, June 23, 2025

ಮಹಿಳೆ ಮತ್ತು ಪುರುಷರು ಸಮಾನವಾಗಿ ಬೆಳೆದುಬರಬೇಕಾದ ಕಾಲ ಇದು : ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ


 ವಿಜಯಪುರ: ಸ್ತ್ರೀವಾದವನ್ನು ಪ್ರತಿಯೊಬ್ಬರೂ ಸರಿಯಾಗಿ ಅರ್ಥಮಾಡಿಕೊಳ್ಳುವುದು ಈಗಿನ ಕಾಲದಲ್ಲಿ ಅಗತ್ಯವಾಗಿದೆ ಎಂದು ಕುವೆಂಪು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ವಿಭಾಗದ ಪ್ರಾಧ್ಯಾಪಕಿ ಪ್ರೊ. ಶುಭಾ ಮರವಂತೆ ಹೇಳಿದರು.

ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಅಹಲ್ಯಾಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನ, ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ವತಿಯಿಂದ ಸೋಮವಾರ ಆಯೋಜಿಸಿದ್ದ ‘ಲಿಂಗತ್ವ ಗ್ರಹಿಕೆ ವಿವಿಧ ಆಯಾಮಗಳಲ್ಲಿʼ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಹೆಣ್ಣು–ಗಂಡು ಸಹಜೀವಿಗಳಾಗಿ, ಪರಸ್ಪರ ಪೂರಕವಾಗಿ ಬದುಕಿದಾಗ ಮಾತ್ರ ಸಮತೋಲನದ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ. ಸ್ತ್ರೀವಾದವು ಮಹಿಳೆಯರನ್ನು ಸೃಜನಶೀಲರಾಗಿರಲು ಪ್ರೇರೇಪಿಸುವುದಲ್ಲದೆ, ನಮ್ಮೊಳಗಿನ ಸಮಾನತೆಯ ಅರಿವನ್ನು ಎಚ್ಚರಿಸುತ್ತದೆ. ಇದು ಹಕ್ಕುಗಳಿಗಾಗಿ ಹೋರಾಟವಲ್ಲ, ಬದಲಾಗಿ ಮಾನವೀಯ ಮೌಲ್ಯಗಳ ಪ್ರತಿಪಾದನೆ ಎಂದರು. 

ಇದೇ ಸಂದರ್ಭದಲ್ಲಿ ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, ಸಮಾಜದಲ್ಲಿ ಯಾರು ಶ್ರೇಷ್ಠರು ಅಥವಾ ಕನಿಷ್ಠರು ಎಂಬ ಭಾವನೆಗೆ ಸ್ಥಳವಿಲ್ಲ, ಪ್ರತಿಯೊಬ್ಬರೂ ತಮ್ಮದೇ ಆದ ಶಕ್ತಿ ಮತ್ತು ಸಾಮಥ್ರ್ಯ ಹೊಂದಿದ್ದಾರೆ. ಮಹಿಳೆ ಮತ್ತು ಪುರುಷರು ಸಮಾನವಾಗಿ ಬೆಳೆದುಬರಬೇಕಾದ ಕಾಲ ಇದು. ಇಂದಿನ ಬದಲಾಗುತ್ತಿರುವ ಕಾಲಘಟ್ಟದಲ್ಲಿ ಮಹಿಳಾ ಅಧ್ಯಯನ ಶಿಸ್ತು ಕೇವಲ ಅಧ್ಯಯನವಲ್ಲ, ಅದು ಸಮಾನತೆ, ಸಬಲೀಕರಣ ಮತ್ತು ಸಮಾಜಮುಖಿ ಚಿಂತನೆಗಳ ದಿಕ್ಸೂಚಿಯಾಗಬೇಕಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಿಳಾ ವಿವಿಯ ಹಂಗಾಮಿ ಕುಲಪತಿ ಪ್ರೊ. ಶಾಂತಾದೇವಿ ಟಿ. ಮಾತನಾಡಿ, ಮಹಿಳಾ ವಿಶ್ವವಿದ್ಯಾಲಯದಲ್ಲಿ ನಡೆಯುವ ಎಲ್ಲಾ ಕಾರ್ಯಚಟುವಟಿಕೆಗಳು ಮಹಿಳಾ ಸಬಲೀಕರಣಕ್ಕೆ ಭಾಗವಾಗಿರುತ್ತವೆ. ಇಂದಿನ ಯುವಜನತೆ, ವಿಶೇಷವಾಗಿ ವಿದ್ಯಾರ್ಥಿನಿಯರು, ಕೇವಲ ಜ್ಞಾನವನ್ನು ಪಡೆದುಕೊಳ್ಳುವಷ್ಟರಲ್ಲಿ ನಿಲ್ಲದೇ, ಸಮಾಜದಲ್ಲಿ ಸಮಾನತೆಯ ಧ್ವಜದಾರರಾಗಬೇಕು. ಇಂತಹ ನಿಲುವುಗಳು ತಾನಾಗಿಯೇ ಬರುವುದಿಲ್ಲ ಅವುಗಳನ್ನು ಬೆಳಸಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಮಹಿಳಾ ಅಧ್ಯಯನ ಕೇಂದ್ರ ಮತ್ತು ವಿಭಾಗದ ಕಾರ್ಯಚಟುವಟಿಕೆಗಳು ಮಹಿಳಾ ಚೇತನತೆಗೆ ಮಾರ್ಗದರ್ಶನ ನೀಡುತ್ತಿದ್ದು, ಸಮಾನತೆಯ ಅರಿವನ್ನು ಮತ್ತಷ್ಟು ಗಾಢಗೊಳಿಸುತ್ತಿವೆ ಎಂದರು.

ಕಾರ್ಯಕ್ರಮದಲ್ಲಿ ಡಾ. ಕಲಾವತಿ ಕಾಂಬಳೆ, ಡಾ. ಸರೋಜಾ ಸಂತಿ, ಡಾ.ರಜಿಯಾ  ನದಾಫ ಉಪಸ್ಥಿತರಿದ್ದರು. ಮಹಿಳಾ ಅಧ್ಯಯನ ಕೇಂದ್ರದ ನಿರ್ದೇಶಕಿ ಪ್ರೊ. ಲಕ್ಷ್ಮೀದೇವಿ ವೈ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಡಾ.ಶಶಿಕಲಾ ರಾಠೋಡ ನಿರೂಪಿಸಿದರು. ಡಾ. ಭಾಗ್ಯಶ್ರೀ ದೊಡಮನಿ ವಂದಿಸಿದರು. 

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


Saturday, June 14, 2025

ರಕ್ತದಾನ ಮಾಡುವ ಭಾಗ್ಯ ಸಿಕ್ಕರೆ ತಪ್ಪದೆ ಮಾಡಿ ಜೀವ ಉಳಿಸಿ

 

ವಿಜಯಪುರ ನಗರದ ವಿಜಯಪುರ ರಕ್ತ ನಿಧಿ ಕೇಂದ್ರದಲ್ಲಿ. ದೇಶ ರಕ್ಷಕರ ಪಡೆ ಸಂಚಾಲಿತ ಆಕಾಶ ರಕ್ತ ಸಹಾಯವಾಣಿ ವತಿಯಿಂದ ರಕ್ತ ದಾನ ಮಾಡುವ ಮೂಲಕ ವಿಶ್ವ ರಕ್ತದಾನಿಗಳ ದಿನಾಚರಣೆ ಆಚರಿಸಲಾಯಿತು.

ಈ ಸಂದರ್ಭದಲ್ಲಿ ದೇಶ ರಕ್ಷಕರ ಪಡೆ ಸಂಸ್ಥಾಪಕರಾದ ರೋಹನ್ ಆಪ್ಟೆ ಮಾತನಾಡಿ ಕಳೆದ 5 ವರ್ಷಗಳಿಂದ ನಮ್ಮ ಸಂಘಟಣೆಯ ಪ್ರತಿ ಕಾರ್ಯಕರ್ತರು ಪ್ರತಿ 3 ತಿಂಗಳಿಗೆ ರಕ್ತದಾನ ಮಾಡತಾ ಬಂದಿದ್ದಾರೆ. ಅದರಜೊತೆ ಕರ್ನಾಟಕ, ಮಹಾರಾಷ್ಟ್ರ, ಹಾಗು ಹೈದರಾಬಾದ ಸೇರಿ 4600 ಕ್ಕೂ ಅಧಿಕ ಜನರಿಗೆ ಆಕಾಶ ರಕ್ತ ಸಹಾಯವಾಣಿ ವತಿಯಿಂದ ರಕ್ತ ಪಡೆಯಲು ಸಹಾಯವಾಗಿದೆ. ಜನರು ರಕ್ತದಾನ ಮಾಡುವ ಮಹತ್ವ ತಿಳಿದಕೊಳ್ಳ ಬೇಕು. ಅದೆಷ್ಟು ರಕ್ತದಾನ ಮಾಡದೆ ಇರುವ ಜನರಿಗೆ ಕೂಡ ಅವರ ಆಪ್ತರಿಗೆ ರಕ್ತ ಬೇಕಾದಾಗ ರಕ್ತದಾನ ಎಷ್ಟು ಅಮೂಲ್ಯ ಅಂತ ಗೊತ್ತಾಗುತ್ತೆ. ಆದಕಾರಣ ರಕ್ತದಾನ ಮಾಡುವ ಭಾಗ್ಯ ಸಿಕ್ಕರೆ ತಪ್ಪದೆ ಮಾಡಿ ಜೀವ ಉಳಿಸಿ ಅಂದರು.


ಆಕಾಶ ರಕ್ತ ಸಹಾಯವಾಣಿ ಅಧ್ಯಕ್ಷರಾದ ವಿಕ್ರಮ ತಾಂಬೆಕರ ಮಾತನಾಡಿ ನಮ್ಮ ದೇಶ ರಕ್ಷಕರ ಪಡೆ ಕಾರ್ಯಕರ್ತ ಆಕಾಶ ಕುಲಕರ್ಣಿ ಅವರು 2020 ರಲ್ಲಿ ವಿದ್ಯುತ್ ಅಪಘಾತದಲ್ಲಿ ಸಾವನ್ನಪ್ಪಿದ್ದು. ನೇರವಾಗಿ ಜನರ ಜೀವ ಉಳಿಸುವ ಅವರ ಒಂದು ಆಸೆಯಂತೆ ರಕ್ತ ಸಹಾಯವಾಣಿ ಕೇಂದ್ರಕ್ಕೆ ಅವರ ಹೆಸರು ಇಡುವ ಮುಖಾಂತರ ಜನರ ಸೇವೆ ಮಾಡುತ್ತಾ ಇದ್ದೇವೆ ಅಂದರು.

ದೇಶ ರಕ್ಷಕರ ಪಡೆ ಪ್ರಧಾನಕಾರ್ಯದರ್ಶಿ ಜಗದೀಶ ರೂಗಿಮಠ ಮಾತನಾಡಿ ರಕ್ತದಾನವು ಬಹಳ ಮುಖ್ಯವಾದ ಕೆಲಸ. ಇದು ಜೀವಗಳನ್ನು ಉಳಿಸಲು ಸಹಾಯ ಮಾಡುತ್ತದೆ ಮತ್ತು ಆರೋಗ್ಯಕರ ರಕ್ತ ಪರಿಚಲನೆಗೆ ಸಹಕಾರಿಯಾಗಿದೆ. ರಕ್ತದಾನ ಮಾಡುವುದರಿಂದ ಅನೇಕ ಪ್ರಯೋಜನಗಳಿವೆ ಮತ್ತು ಇದು ಸಮಾಜಕ್ಕೆ ಬಹಳ ಉಪಯುಕ್ತವಾಗಿದೆ. ಇಲ್ಲಿಯವರೆಗೆ ರಕ್ತದಾನದ ಮಾಡದೇ ಇರುವ ಯಾವುದೋ ಒಂದು ಭಯದಿಂದ ಹಿಂಜರಾಗುತ್ತ ಇದ್ದಾರೆ ಅದರೆ ಅಂಥವರು ಕೂಡಾ ಧೃಡ ನಿರ್ಧಾರ ಮಾಡಿ ಜೀವ ಉಳಿಸುವ ಪುಣ್ಯದ ಕೆಲಸದಲ್ಲಿ ಪಾಲಗೋಳ್ಳ ಬೇಕಾಗಿ ವಿನಂತಿಸಿಕೊಳ್ಳುತ್ತೇನೆ. ದೇಶ ರಕ್ಷಕರ ಪಡೆ ಅಧ್ಯಕ್ಷಾರಾದ ಆಕಾಶ ಇಂಡಿ ಮಾತನಾಡಿ ಇವತ್ತಿನ ಯುವ ಸಮುದಾಯ ಹೆಚ್ಚು ರಕ್ತದಾನ ಮಾಡಿ ಸಮಾಜಕ್ಕೆ ಸ್ಫೂರ್ತಿ ನೀಡಬೇಕೆಂದು ಹೇಳಿದರು. ಈ ಸಂದರ್ಭದಲ್ಲಿ

ಕಿರಣ್ ಕೋಳುರಗಿ, ಶಿವಾನಂದ ತುಪ್ಪದ,ವಿನೋದ ಪತ್ತಾರ, ಆದಿತ್ಯ ಬಡಿಗೇರ, ಅಭಯ ಹದನುರ, ಆದಿತ್ಯ ಹಳ್ಳಿ, ರಾಘವೇಂದ್ರ ಮಿರೇಕರ, ಸಾಗರ ಭಜಂತ್ರಿ, ಪವನ ಶರ್ಮಾ, ಪ್ರಸನ್ನ ಗಣಿಯಾರ, ಕೃಷ್ಣಾ ಮಾಯಾಚಾರಿ, ವಿವೇಕ ತಾವರಗೇರಿ ರೋಹನ್ ವಿನಯ ಆಪ್ಟೆ. ಉಪಸ್ಥಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Friday, June 13, 2025

ಕಿಬ್ಬೊಟ್ಟೆಯ ಕ್ಷಯರೋಗದ ವಿಜಯಪುರ ಮೂಲದ ಮಹಿಳೆಗೆ ರೊಬೋಟ್‌ ಚಿಕಿತ್ಸೆ


ವಿಜಯಪುರ: ಜೂನ್ 2025: ಅತಿ ಅಪರೂಪದ ಮೈಕೋಬ್ಯಾಕ್ಟೀರಿಯಾದಿಂದ ಉಂಟಾಗುವ ಕಿಬ್ಬೊಟ್ಟೆಯ ಕ್ಷಯರೋಗಕ್ಕೆ ಒಳಗಾಗಿದ್ದ ವಿಜಯಪುರ ಮೂಲದ 25 ರ‍್ಷದ ಮಹಿಳೆಗೆ 
ಫೋರ್ಟಿಸ್‌ ಆಸ್ಪತ್ರೆಯಲ್ಲಿ  (ಬೆಂಗಳೂರಿನ ಬನ್ನೇರುಘಟ್ಟ ರಸ್ತೆ) ಸುಧಾರಿತ ರೊಬೋಟ್‌ ನೆರವಿನಲ್ಲಿ ಯಶಸ್ವಿಯಾಗಿ ಚಿಕಿತ್ಸೆ ನೀಡಲಾಗಿದೆ.

ಆಸ್ಪತ್ರೆಯಲ್ಲಿ ಒಬಿಜಿವೈಎನ್, ರೋಬೋಟಿಕ್, ಫಲವತ್ತತೆ ಮತ್ತು ಲ್ಯಾಪರೊಸ್ಕೋಪಿಕ್ ರ‍್ಜನ್ ಡಾ. ಉಷಾ ಬಿ.ಆರ್ ಅವರ ಆರೈಕೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ವಿಜಯಪುರದ ಅಲ್ಬೆಲಿ ಎಂಬ 25 ರ‍್ಷದ ಮಹಿಳೆ ದರ‍್ಘಕಾಲದ ಹೊಟ್ಟೆ ನೋವು ಮತ್ತು ಆರು ತಿಂಗಳುಗಳಿಂದ ನಿರಂತರ ಶ್ರೋಣಿಯ ಉಂಡೆಯಿಂದ ಬಳಲುತ್ತಿದ್ದರು. ಐದು ರ‍್ಷಗಳ ಹಿಂದೆ ವಿವಾಗವಾಗಿದ್ದ ಅವರ ಆರೋಗ್ಯ ಚೆನ್ನಾಗಿಯೇ ಇತ್ತು, ನಂತರದಲ್ಲಿ ಹೊಟ್ಟೆ ನೋವಿಗೆ ಒಳಗಾಗಿದ್ದರು. ಈ ಹಿಂದೆ ಸ್ಥಳೀಯ ಆಸ್ಪತ್ರೆಯಲ್ಲಿ ತೆರೆದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು, ಇದು ಕರುಳಿನ ಗಾಯದಿಂದ ಜಟಿಲವಾಗಿತ್ತು ಹಾಗೂ ನರ‍್ಣಾಯಕ ರೋಗನರ‍್ಣಯ ಉಂಟುಮಾಡುವಲ್ಲಿ ವಿಫಲವಾಗಿದೆ. ಕಿಬ್ಬೊಟ್ಟೆಯ ಕ್ಷಯರೋಗದ ಪ್ರಕರಣ ಎಂದು ಶಂಕಿಸಲಾಗಿರುವ ಆಕೆಗೆ ಪ್ರಮಾಣಿತ ಟಿಬಿ ಔಷಧಿಗಳನ್ನು ಸಹ ನೀಡಲಾಗಿತ್ತು, ಆದರೆ ಆಕೆಯ ಸ್ಥಿತಿ ಸುಧಾರಿಸಲಿಲ್ಲ.

ಖಚಿತವಾದ ರೋಗನರ‍್ಣಯ ಮತ್ತು ಪರಿಣಾಮಕಾರಿ ಚಿಕಿತ್ಸೆಯ ಹುಡುಕಾಟದಲ್ಲಿ, ಆಕೆ, ಬೆಂಗಳೂರಿನ ಫರ‍್ಟಿಸ್ ಆಸ್ಪತ್ರೆಗೆ ತೆರಳಿದರು. ಅಲ್ಲಿ ವಿವರವಾದ ಕ್ಲಿನಿಕಲ್ ರೋಗನರ‍್ಣಯವು ತೀವ್ರವಾದ ಶ್ರೋಣಿಯ ಸಮಸ್ಯೆ ಬಹಿರಂಗಪಡಿಸಿತು. ಹಿಂದಿನ ವೈದ್ಯಕೀಯ ಮೌಲ್ಯಮಾಪನಗಳಲ್ಲಿ ತಪ್ಪಿಸಿಕೊಂಢಿದ್ದ ಅಂಡಾಶಯ ಮತ್ತು ಫಾಲೋಪಿಯನ್ ಟ್ಯೂಬ್‌ಗಳನ್ನು ಒಳಗೊಂಡ ಸೋಂಕು ಎಂದು ತಿಳಿದುಬಂತು. \ಡಾ. ಉಷಾ ರೊಬೊಟಿಕ್ ನೆರವಿನ ಶಸ್ತ್ರಚಿಕಿತ್ಸೆಗೆ ಶಿಫಾರಸು ಮಾಡಿದರು.

ಡಾ. ಉಷಾ ಬಿ.ಆರ್, ಸಲಹೆಗಾರರು  OBGYN, ರೋಬೋಟಿಕ್ ರ‍್ಜನ್, ಫಲವತ್ತತೆ ಮತ್ತು ಲ್ಯಾಪರೊಸ್ಕೋಪಿಕ್ ರ‍್ಜನ್, ಫರ‍್ಟಿಸ್ ಆಸ್ಪತ್ರೆ, ಬನ್ನೇರುಘಟ್ಟ ರಸ್ತೆ, ಬೆಂಗಳೂರು, “ಇದು ಅಸಾಧಾರಣವಾದ ಸಂಕರ‍್ಣ ಪ್ರಕರಣವಾಗಿದೆ. ರೊಬೊಟಿಕ್ ನೆರವಿನ ತಂತ್ರಜ್ಞಾನ ಬಳಸಿಕೊಂಡು, ನಾವು ಈ ರಚನೆಗಳನ್ನು ನಿಖರವಾಗಿ ಬರ‍್ಪಡಿಸಲು, ಶ್ರೋಣಿಯ ದ್ರವ್ಯರಾಶಿಯನ್ನು ತೆಗೆದುಹಾಕಲು, ಫಾಲೋಪಿಯನ್ ಟ್ಯೂಬ್‌ಗಳಿಂದ ಸಂಗ್ರಹವಾದ ರಕ್ತವನ್ನು ಸ್ಪಷ್ಟಪಡಿಸಲು ಮತ್ತು ಹಿಂದಿನ ಸೋಂಕಿನಿಂದಾಗಿ ರೂಪುಗೊಂಡ ಅಸಹಜ ಪ್ರದೇಶವನ್ನು ತೆಗೆದುಹಾಕಲು ಸಾಧ್ಯವಾಯಿತು ಎಂದರು ಎಂದು ಆಸ್ಪತ್ರೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Thursday, June 12, 2025

13-06-2025 EE DIVASA KANNADA DAILY NEWS PAPER

ಮಕ್ಕಳ ಸಾಹಿತ್ಯ ಕ್ಷೇತ್ರಕ್ಕೆ ವಿಜಯಪುರ ಜಿಲ್ಲೆ ಬಹುದೊಡ್ಡ ಕೊಡುಗೆ ನೀಡಿದೆ : ವಿಶ್ರಾಂತ ಪ್ರಾಚಾರ್ಯ ಸಂಗಮೇಶ ಗುಜಗೊಂಡ

ಸಿಂದಗಿ ಪಟ್ಟಣದ ಸಾರಂಗಮಠದಲ್ಲಿ ಚೆನ್ನವೀರಸ್ವಾಮೀಜಿ ಪ್ರತಿಷ್ಠಾನ ಹಾಗೂ ವಿದ್ಯಾಚೇತನ ಪ್ರಕಾಶನ ಸಹಯೋಗದಲ್ಲಿ ಹಮ್ಮಿಕೊಂಡ 344ನೆಯ ಸದ್ವಿಚಾರಗೋಷ್ಠಿ ಹಾಗೂ ಪ.ಗು.ಸಿದ್ದಾಪುರ ಅವರ ಜೀವನ ಮತ್ತು ಸಾಹಿತ್ಯ ಸಂಶೋಧನಾ ಮಹಾಪ್ರಬಂಧ, ಮಕ್ಕಳ ಸಾಹಿತ್ಯ ಭೂಷಣ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಳವಾಡದ ಮಕ್ಕಳ ಹಿರಿಯ ಸಾಹಿತಿ ಪ.ಗು.ಸಿದ್ದಾಪುರ ಅವರಿಗೆ ಮಕ್ಕಳ ಸಾಹಿತ್ಯ ಭೂಷಣ ಪ್ರಶಸ್ತಿಯನ್ನು ಸಾರಂಗಮಠದ ಪೀಠಾಧಿಪತಿ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಪ್ರದಾನ ಮಾಡಿದರು.

 ಸಿಂದಗಿ: ಮಕ್ಕಳ ಸಾಹಿತ್ಯ ಕ್ಷೇತ್ರಕ್ಕೆ ವಿಜಯಪುರ ಜಿಲ್ಲೆ ಬಹು ದೊಡ್ಡ ಕೊಡುಗೆಯನ್ನೇ ನೀಡಿದೆ. ವಿಜಯಪುರ ಜಿಲ್ಲೆಯನ್ನು ಮಕ್ಕಳ ಸಾಹಿತ್ಯದ ತವರು ಎಂದು ಕರೆಯಲಾಗುತ್ತದೆ ಎಂದು ಮಕ್ಕಳ ಸಾಹಿತಿ, ಮೂಡಲಗಿ ಎಂ.ಇ.ಎಸ್ ಪದವಿ ಮಹಾವಿದ್ಯಾಲಯದ ವಿಶ್ರಾಂತ ಪ್ರಾಚಾರ್ಯ ಸಂಗಮೇಶ ಗುಜಗೊಂಡ ಹೇಳಿದರು.

 ಸಿಂದಗಿ ಪಟ್ಟಣದ ಸಾರಂಗಮಠದಲ್ಲಿ ಚೆನ್ನವೀರಸ್ವಾಮೀಜಿ ಪ್ರತಿಷ್ಠಾನ ಹಾಗೂ ವಿದ್ಯಾಚೇತನ ಪ್ರಕಾಶನ ಸಹಯೋಗದಲ್ಲಿ ಹಮ್ಮಿಕೊಂಡ 344ನೆಯ ಸದ್ವಿಚಾರಗೋಷ್ಠಿ ಹಾಗೂ ಪ.ಗು.ಸಿದ್ದಾಪುರ ಅವರ ಜೀವನ ಮತ್ತು ಸಾಹಿತ್ಯ ಸಂಶೋಧನಾ ಮಹಾಪ್ರಬಂಧ, ಮಕ್ಕಳ ಸಾಹಿತ್ಯ ಭೂಷಣ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಉಪನ್ಯಾಸ ನೀಡಿ ಮಾತನಾಡಿದ ಅವರು, ಏಕೆಂದರೆ ಕಂಚ್ಯಾಣಿ ಶರಣಪ್ಪ, ಸಿಸು ಸಂಗಮೇಶ, ಹ.ಮ.ಪೂಜಾರಿ, ಪ.ಗು. ಸಿದ್ದಾಪೂರ, ಶಂಗು ಬಿರಾದಾರ್ ಸಹಿತ ಶಿಶು ಸಾಹಿತಿಗಳು ಬೃಹತ ಮಟ್ಟದಲ್ಲೇ ಬೆಳೆದಿದ್ದಾರೆ. ಜಿಲ್ಲೆಯ ಹೆಸರನ್ನೂ ಬೆಳಗಿಸಿದವರಿದ್ದಾರೆ. ಮಕ್ಕಳ ಸಾಹಿತ್ಯದ ಗಾರುಡಿಗ ಎಂತಲೂ ಪ.ಗು.ಸಿದ್ದಾಪುರ ಅವರನ್ನು ಕರೆಯುತ್ತಾರೆ. ವಿಜಯಪುರದಲ್ಲಿ ಮಕ್ಕಳ ಸಾಹಿತ್ಯ ಬೆಳೆಯಲು ಹಲವು ಕಾರಣಗಳಿವೆ. ಮುಖ್ಯವಾಗಿ ಮಕ್ಕಳ ಸಾಹಿತ್ಯಕ್ಕೆ ಸಂಬAಧಿಸಿ ಇಲ್ಲಿ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತವೆ. ಸಾಹಿತ್ಯದಲ್ಲಿ ಪ್ರಮುಖ ಪ್ರಾಕಾರವಾಗಿ ಹೊರ ಹೊಮ್ಮಿರುವ ಮಕ್ಕಳ ಸಾಹಿತ್ಯದಲ್ಲಿ ವಿಜಯಪುರ ದೊಡ್ಡ ಹೆಸರು ಮಾಡಿದೆ. ವಿಜಯಪುರ ಜಿಲ್ಲೆ ಮಕ್ಕಳ ಸಾಹಿತ್ಯದ ಬಿಡು. ಅನೇಕ ಶಿಕ್ಷಣ ಸಂಸ್ಥೆಗಳು ಮೊದಲು ಹುಟ್ಟಿಕೊಂಡಿದ್ದು ವಿಜಯಪುರ ಜಿಲ್ಲೆ. ಮಕ್ಕಳ ಸಾಹಿತ್ಯವನ್ನು ಮಠ ಮಾನ್ಯಗಳು, ಸಂಸ್ಥೆಗಳು ಉಳಿಸಿ ಬೆಳೆಸಿಕೊಂಡು ಹೋಗುತ್ತಿವೆ ಎಂದರು.

 ಈ ವೇಳೆ ಕಾರ್ಯಕ್ರಮದ ಪಾವನ ಸಾನಿಧ್ಯ ಸಾರಂಗಮಠದ ಪೀಠಾಧಿಪತಿ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಹಾಗೂ ಸಮ್ಮುಖ ವಹಿಸಿದ ಶ್ರೀಮಠದ ಉತ್ತರಾಧಿಕಾರಿ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು ಆಶೀರ್ವಚನ ನೀಡಿದರು. ಮಕ್ಕಳ ಸಾಹಿತಿ, ವಿದ್ಯಾಚೇತನ ಪ್ರಕಾಶನ ಸಂಚಾಲಕ ಹ.ಮ.ಪೂಜಾರ ಪ್ರಾಸ್ತಾವಿಕ ಮಾತನಾಡಿದರು. ಸಾಹಿತಿ ಶಿಕ್ಷಕ ಎಸ್.ಎಸ್.ಸಾತಿಹಾಳ ಕವಿ ಪರಿಚಯ ನೆರವೇಸಿರಿದರು.

 ಈ ವೇಳೆ ಶ್ರೀಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಅಂಗಸAಸ್ಥೆಯಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾದ ಜಿ.ಪಿ.ಪೋರವಾಲ ಕಾಲೇಜಿನ ವಿಶ್ರಾಂತ ಪ್ರಾಧ್ಯಾಪಕ ಎಂ.ಎಚ್.ಲೋಣಿ, ಚೆನ್ನವೀರಸ್ವಾಮೀಜಿ ಪ್ರೌಢಶಾಲೆಯ ವಿಶ್ರಾಂತ ಮುಖ್ಯಗುರು ಜಿ.ಜಿ.ಬಿರಾದಾರ ಅವರಿಗೆ ಶ್ರೀಮಠದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿವಿ ಉಪನ್ಯಾಸಕಿ, ಡಾ.ಸುಧಾರಾಣಿ ಮಣೂರ ರಚಿಸಿದ ಪ.ಗು.ಸಿದ್ದಾಪುರ ಅವರ ಜೀವನ ಮತ್ತು ಸಾಹಿತ್ಯ ಸಂಶೋಧನಾ ಮಹಾಪ್ರಬಂಧವನ್ನು ಸಮ್ಮುಖ ವಹಿಸಿದ ಶ್ರೀಮಠದ ಉತ್ತರಾಧಿಕಾರಿ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು ಲೋಕಾರ್ಪಣೆ ಮಾಡಿದರು. 

ಇದೇ ಸಂದರ್ಭದಲ್ಲಿ ಡಾ.ಎಂ.ಎA.ಪಡಶೆಟ್ಟಿ, ಶಿವಪ್ಪ ಗವಸಾನಿ, ಹೆಚ್.ಟಿ.ಕುಲಕರ್ಣಿ, ಎ.ಆರ್.ಹೆಗ್ಗಣದೊಡ್ಡಿ, ಎಂ.ಎಸ್.ಹೈಯಾಳಕರ, ವಿ.ಡಿ.ವಸ್ತ್ರದ, ಶಕುಂತಲಾ ಹಿರೇಮಠ, ಡಾ.ಶರಣಬಸವ ಜೋಗುರ, ಪೂಜಾ ಹಿರೇಮಠ, ರಾಚು ಕೊಪ್ಪ, ಜಿ.ಎಸ್.ಭೂಸಗೊಂಡ, ವಿಶ್ವಾನಾಥ ಜೋಗುರ, ಬಿ.ಎಸ್.ಹಣಮಶೆಟ್ಟಿ, ಬಸಯ್ಯ ಹಿರೇಮಠ, ಗವಿಸಿದ್ದಪ್ಪ ಆನೆಗುಂದಿ, ಡಿ.ಎಂ.ಪಾಟೀಲ, ರಾಜಶೇಖರ ಪೂಜಾರ, ಅಶೋಕ ಅಲ್ಲಾಪುರ, ಬಸಮ್ಮ ಧರಿ, ವಿರೇಶ ಜೋಗುರ, ಶಿವಕುಮಾರ ಜೋಗುರ, ಶ್ರೀದೇವಿ ದುದ್ದಗಿ ಸೇರಿದಂತೆ ಶ್ರೀಮಠ ಭಕ್ತರು, ಸಾಹಿತ್ಯಾಸಕ್ತರು ಹಾಗೂ ವಿದ್ಯಾರ್ಥಿಗಳು ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಆಯೋಜನೆ ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಪದ್ಧತಿ ಹಾಗೂ ಬಾಲ್ಯವಿವಾಹ ಪಿಡುಗು ನಿರ್ಮೂಲನೆಗೆ ಸಾರ್ವಜನಿಕರು ಕೈಜೋಡಿಸಿ -ಜಿಲ್ಲಾಧಿಕಾರಿ ಟಿ.ಭೂಬಾಲನ್


 ವಿಜಯಪುರ: ಬಾಲ ಕಾರ್ಮಿಕ ಪದ್ಧತಿ ಹಾಗೂ ಬಾಲ್ಯ ವಿವಾಹದಂತಹ ಸಾಮಾಜಿಕ ಅನಿಷ್ಟ ಪಿಡುಗುಗಳ ಸಂಪೂರ್ಣ ನಿರ್ಮೂಲನೆಗೆ ಸಾರ್ವಜನಿಕರು, ಪೋಷಕರು ಹಾಗೂ ಈ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿವಿಧ ಸಂಘ-ಸAಸ್ಥೆಗಳು ಕೈಜೋಡಿಸಿ, ಈ ನಿಟ್ಟಿನಲ್ಲಿ ಎಲ್ಲರೂ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿ ಸೂಕ್ತ ಜನಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.

 ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮAದಿರದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ ಮತ್ತು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಉತ್ತಮ ಗುಣಮಟ್ಟದ ಆರೋಗ್ಯ, ಶಿಕ್ಷಣ ಮಕ್ಕಳ ಮೂಲಭೂತ ಹಕ್ಕಾಗಿದ್ದು, ಇದನ್ನು ಉತ್ತಮಪಡಿಸುವುದರಿಂದ ಸುಭದ್ರ ಸಮಾಜದ ನಿರ್ಮಾಣಕ್ಕೆ ಅಡಿಪಾಯವಾಗುವುದು. ಬಾಲ ಕಾರ್ಮಿಕ ಹಾಗೂ ಬಾಲ್ಯ ವಿವಾಹ ಅನಿಷ್ಟ ಪದ್ಥತಿ ಮುಕ್ತ ಜಿಲ್ಲೆಯನ್ನಾಗಿಸಲು ಹಾಗೂ ಈ ಪಿಡಗುಗಳ ನಿರ್ಮೂಲನೆಗೊಳಿಸಲು ಕಟಿಬದ್ಧರಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.


 ಬಾಲಕಾರ್ಮಿಕ ಪದ್ದತಿಯ ನಿರ್ಮೂಲನೆಗೆ ಸಂಬAಧಿಸಿದ ಎಲ್ಲಾ ಇಲಾಖೆಗಳು ಶ್ರಮಿಸುತ್ತಿವೆ. ಈ ನಿಟ್ಟಿನಲ್ಲಿ ಸಾರ್ವಜನಿಕರ ಸಹಕಾರವೂ ಅಗತ್ಯವಾಗಿದೆ. ಮಕ್ಕಳ ಸಹಾಯವಾಣಿ-1098 ಕರೆ ಮಾಡಿ ಮಾಹಿತಿ ನೀಡಿದಲ್ಲಿ ಮಕ್ಕಳ ರಕ್ಷಣೆಯ ಕಾರ್ಯ ಮಾಡಲಾಗುವುದೆಂದು ಅವರು ತಿಳಿಸಿದರು. ಈ ದಿನ ದೇಶಾದ್ಯಂತ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನವನ್ನಾಗಿ ಆಚರಿಸಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣವೂ ಸೇರಿದಂತೆ ಮಕ್ಕಳ ರಕ್ಷಣೆಯ ಹಿತ ಕಾಯುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನೇಕ ಯೋಜನೆಗಳನ್ನು ಜಾರಿಗೊಳಿಸಿ ಅನುಷ್ಟಾನಗೊಳಿಸಲಾಗುತ್ತಿದೆ. ಯೋಜನೆಗಳ ಸದುಪಯೋಗಪಡೆದುಕೊಂಡು ತಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡುವ ಮೂಲಕ ಅವರ ಜೀವನ ಹಾಗೂ ಭವಿಷ್ಯ ಸುಂದರಗೊಳಿಸುವ ಮಹತ್ತರ ಹೊಣೆ ಪಾಲಕರ ಮೇಲಿದೆ ಎಂದು ಹೇಳಿದರು.

 ಐತಿಹಾಸಿಕ ಹಿನ್ನೆಲೆ ಇರುವ ನಮ್ಮ ಹೆಮ್ಮೆಯ ಜಿಲ್ಲೆಯಲ್ಲಿ ಸಂಪೂರ್ಣ ಬಾಲ ಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸುವ ನಿಟ್ಟಿನಲ್ಲಿ ನಮ್ಮೆಲ್ಲರ ಜವಾಬ್ದಾರಿ ಇನ್ನೂ ಹೆಚ್ಚಾಗಿದೆ. ಎಲ್ಲ ಮಕ್ಕಳನ್ನು ಶಾಲಾ ದಾಖಲಾತಿ ಮಾಡಿಸುವ ಮೂಲಕ ಶಾಲೆಯಿಂದ ಹೊರಗುಳಿಯುವ ಮಕ್ಕಳ ಶೂನ್ಯಕ್ಕೆ ತರುವ ನಿಟ್ಟಿನಲ್ಲಿ ಯಾವುದೇ ಮಗು ಶಾಲೆಯಿಂದ ಹೊರಗುಳಿಯದಂತೆ ಸಂಬAಧಿಸಿದ ಇಲಾಖೆಗಳು ನಿಗಾವಹಿಸಬೇಕು. ಶಾಲೆಬಿಟ್ಟ ಮಕ್ಕಳ ಸಮಗ್ರ ಮಾಹಿತಿ ಕ್ರೋಢಿಕರಿಸಬೇಕು. ಬಾಲ ಕಾರ್ಮಿಕರು ಕಂಡು ಬಂದಲ್ಲಿ ಸಂಬAಧಿಸಿದ ಇಲಾಖೆಗಳಿಗೆ ಸಾರ್ವಜನಿಕರು ಮಾಹಿತಿ ನೀಡಬೇಕು. ಯಾವುದೇ ಸಂದರ್ಭದಲ್ಲಿ ವಿದ್ಯಾರ್ಥಿಗಳು ಶಿಕ್ಷಣವನ್ನು ಮೊಟಕುಗೊಳಿಸಿದೇ, ವಿದ್ಯಾಭ್ಯಾಸವನ್ನು ಮುಂದುವರೆಸುವ ಮೂಲಕ ಉನ್ನತ ಶಿಕ್ಷಣ ಪಡೆದುಕೊಂಡು ಬದುಕನ್ನು ಸುಂದರಗೊಳಿಸಿಕೊAಡು, ಸಮಾಜಕ್ಕೆ ಹಾಗೂ ದೇಶಕ್ಕೆ ತಮ್ಮ ಕೊಡುಗೆ ನೀಡಬೇಕು. ಬಾಲ ಕಾರ್ಮಿಕ ಪದ್ಧತಿಯಿಂದ ಮಕ್ಕಳ ಭವಿಷ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಕುರಿತು ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ತಮ್ಮ ನೆರೆಹೊರೆಯವರಿಗೂ ತಿಳುವಳಿಕೆ ನೀಡಬೇಕು. ಬಾಲ ಕಾರ್ಮಿಕ ಮಕ್ಕಳು ಕಂಡು ಬಂದಲ್ಲಿ ಮಾಹಿತಿ ನೀಡಿ, ಅವರ ರಕ್ಷಣೆ ಮಾಡಿ, ಅವರನ್ನು ಸಮಾಜದ ಮುಖ್ಯವಾಹಿನಿಗೆ ತಂದು ಅವರು ಶಿಕ್ಷನ ಪಡೆದುಕೊಂಡು ಉತ್ತಮ ಜೀವನ ನಿರ್ವಹಿಸುವಂತಾಗಲು ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಹೇಳಿದರು.

 ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆÀಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಅರವಿಂದ ಹಾಗರಗಿ ಅವರು ಮಾತನಾಡಿ, 1986ರಲ್ಲಿ ಬಾಲ ಕಾರ್ಮಿಕ ನಿಷೇಧ ಹಾಗೂ 2016ರಲ್ಲಿ ಬಾಲ ಕಾರ್ಮಿಕ ಹಾಗೂ ಕಿಶೋರ ನಿಷೇಧ ಕಾಯ್ದೆಯೂ ಜಾರಿಗೆ ಬಂದಿದೆ. ಬಾಲ ಕಾರ್ಮಿಕ ಪದ್ಧತಿ ಹೋಗಲಾಡಿಸಲು ಎಲ್ಲರ ಸಹಕಾರ ಅಗತ್ಯವಾಗಿದೆ. ಬಾಲ ಕಾರ್ಮಿಕರು ಕಂಡು ಬಂದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕಾಗಲಿ, ಸಂಬAಧಿಸಿದ ಇಲಾಖೆಗಳಿಗೆ ಸಾರ್ವಜನಿಕರು ಮಾಹಿತಿ ನೀಡಬೇಕು ಎಂದು ಹೇಳಿದರು.

 ಹೆಚ್ಚುವರಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಾದ ಶಂಕರ ಮಾರಿಹಾಳ ಅವರು ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಪ್ರತಿಯೊಬ್ಬರಿಗೂ ಶಿಕ್ಷಣ ಅವಶ್ಯಕವಾಗಿದೆ. ಮಕ್ಕಳಿಗೆ ಗುಣಮಟ್ಟದÀ ಶಿಕ್ಷಣ ಒದಗಿಸಬೇಕು. ಯಾವುದೇ ಮಕ್ಕಳು ಶಿಕ್ಷಣದಿಂದ ವಂಚಿತರಾಗದAತೆ ನೋಡಿಕೊಳ್ಳುವ ಬಹು ದೊಡ್ಡ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಹೇಳಿದರು.

 ಜಿಲ್ಲಾ ಕಾರ್ಮಿಕ ಇಲಾಖೆಯ ಅಧಿಕಾರಿಗಳಾದ ಉಮಾಶ್ರೀ ಎಸ್.ಕೋಳಿ ಪ್ರಾಸ್ತಾವಿಕವಾಗಿ ಮಾತನಾಡಿ, ಮಕ್ಕಳ ಮನಸ್ಸು ಬಹಳ ಸೂಕ್ಷö್ಮವಾದದ್ದು, ಅವರ ಬಾಲ್ಯವನ್ನು ಉತ್ತವiವಾಗಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಬಾಲಕಾರ್ಮಿಕ ಮಕ್ಕಳನ್ನು ತೊಡಗಿಸಿಕೊಂಡಿರುವ ಮಾಲೀಕರ ವಿರುದ್ಧ ಈಗಾಗಲೇ ಬಹಳಷ್ಟು ಕ್ರಮಗಳನ್ನು ತೆಗೆದುಕೊಳ್ಳಲಾಗತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರ 11 ಇಲಾಖೆಗಳ ಅಧಿಕಾರಿಗಳನ್ನು ನಿರೀಕ್ಷಕರನ್ನಾಗಿ ನೇಮಕ ಮಾಡಿದ್ದು, ಈ ಅಧಿಕಾರಿಗಳ ತಂಡ ಯೋಜಿತವಾಗಿ ಹಾಗೂ ಅನಿರೀಕ್ಷಿತವಾಗಿ ದಾಳಿ ಮಾಡುವ ಮೂಲಕ ಮಕ್ಕಳನ್ನು ರಕ್ಷಣೆ ಮಾಡಿ, ಮಕ್ಕಳ ಕಲ್ಯಾಣ ಸಮಿತಿಗೆ ಒಪ್ಪಿಸುತ್ತದೆ. ಜಿಲ್ಲಾಧಿಕಾರಿಗಳ ಅಧ್ಯಕ್ಷತೆÀಯಲ್ಲಿ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೋಸಾಯಿಟಿ ವತಿಯಿಂದ ಸಾಕಷ್ಟು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಜಿಲ್ಲಾಧಿಕಾರಿಗಳ ಮಾರ್ಗದರ್ಶನದ ಮೇರೆಗೆ, ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ 26 ಪ್ರಕರಣಗಳನ್ನು ದಾಖಲಿಸಲಾಗಿದೆ. ಮಾಲೀಕರಿಗೆ ಜಾಗೃತಿ ಸಹ ಮೂಡಿಸಲಾಗುತ್ತಿದೆ. ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಾರ್ವಜನಿಕರ ಹಾಗೂ ಎಲ್ಲ ಇಲಾಖೆಗಳ ಸಹಕಾರ ಅಗತ್ಯವಾಗಿದೆ ಎಂದು ಹೇಳಿದರು.

 ಅನೌಪಚಾರಿಕ ಶಿಕ್ಷಣ ಸಂಸ್ಥೆಯ ಫಾದರ್ ಕೆವಿನ್ ಸೆಕ್ವೆರಾ ಅವರು, ಸಮಗ್ರ ಮಕ್ಕಳ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ ಹಾಗೂ ಕರ್ತವ್ಯವೂ ಆಗಿದೆ. ಬಾಲಕಾರ್ಮಿಕ ಪದ್ದತಿಯ ಪಿಡುಗು ಮಕ್ಕಳ ತಮ್ಮ ಸಾಮಾಜಿಕ ಆರ್ಥಿಕ ಸ್ಥಿತಿಯನ್ನು ಕಸಿದುಕೊಳ್ಳುತ್ತಿದ್ದು, ಬಾಲಕಾರ್ಮಿಕ ಪದ್ದತಿಯ ನಿರ್ಮೂಲನೆಗೆ ಈ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿವಿಧ ಸಂಘ-ಸAಸ್ಥೆಗಳು, ಸಾರ್ವಜನಿಕರ ಸಹಕಾರದ ಅಗತ್ಯತೆಯ ಕುರಿತು ಹೇಳಿದರು. 

ಈ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕರಾದ ಕೆ. ಕೆ ಚವ್ಹಾಣ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಟಿ.ಎಸ್.ಕೋಲಾರ, ಜಿಲ್ಲಾ ಶಸ್ತç ಚಿಕಿತ್ಸಕ ಶಿವಾನಂದ ಮಾಸ್ತಿಹೊಳಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ದೀಪಾಕ್ಷಿ ಜಾನಕಿ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ಬಸಮ್ಮ ಹತ್ತರಕಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

 ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಪ್ರಮಾಣ ವಚನ ಬೋಧಿಸಿದರು.

 ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನದ ಅಂಗವಾಗಿ ಜಾಗೃತಿ ಜಾಥಾಗೆ ಚಾಲನೆ : ನಗರದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜಾಥಾಕ್ಕೆ ಹಸಿರು ನಿಶಾನೆ ತೋರುವ ಮೂಲಕ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಗೌರವಾನ್ವಿತ ಹರೀಶ ಎ. ಅವರು ಚಾಲನೆ ನೀಡಿದರು. ಜಾಥಾವು ಗಾಂಧಿ ಚೌಕ್‌ದಿಂದ ವಿವಿಧ ಮಾರ್ಗಗಳಲ್ಲಿ ಸಂಚರಿಸಿ, ಕಂದಗಲ್ ಶ್ರೀ ಹನುಮಂತರಾಯ ರಂಗಮAದಿರದಲ್ಲಿ ಸಮಾವೇಶಗೊಂಡಿತು. ವಿವಿಧ ಘೋಷ ವಾಕ್ಯ ಹೇಳಲಾಯಿತು.

 ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆÀಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಅರವಿಂದ ಹಾಗರಗಿ, ಅಪರ ಜಿಲ್ಲಾಧಿಕಾರಿಗಳು ಸೋಮಲಿಂಗ ಗೆಣ್ಣೂರ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಸಿ.ಕೆ ಹೊಸಮನಿ, ಶಾಲೆಯ ಪ್ರಾಂಶುಪಾಲರು, ವಿವಿಧ ಶಾಲೆಗಳ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


Monday, June 9, 2025

ಮನುಕುಲದ ಉಳಿವಿಗಾಗಿ ಪರಿಸರದ ಸಂರಕ್ಷಣೆಯು ಅತ್ಯವಶ್ಯಕ : ಉಪ ಅರಣ್ಯ ಸಂರಕ್ಷಾಧಿಕಾರಿ ವನಿತಾ

 ವಿಜಯಪುರ: ಮನುಕುಲದ ಉಳಿವಿಗಾಗಿ ಪರಿಸರದ ಸಂರಕ್ಷಣೆಯು ಅತ್ಯವಶ್ಯಕವಾಗಿದೆ ಎಂದು ವಿಜಯಪುರದ ಉಪ ಅರಣ್ಯ ಸಂರಕ್ಷಾಧಿಕಾರಿ ವನಿತಾ ಆರ್ ಹೇಳಿದರು.

ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಸೋಮವಾರ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪರಿಸರ ಸಂರಕ್ಷಣೆಯು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ವಿಶೇಷವಾಗಿ ವಿದ್ಯಾರ್ಥಿನಿಯರು ತಮ್ಮ ದೈನಂದಿನ ಜೀವನದಲ್ಲಿ ಪರಿಸರ ಸ್ನೇಹಿ ಉಪಕ್ರಮಗಳನ್ನು ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಅರಣ್ಯ ಇಲಾಖೆ ನಗರದಲ್ಲಿ ಕೈಗೊಂಡಿರುವ ಪರಿಸರ ಸ್ನೇಹಿ ಕಾರ್ಯಗಳಾದ ‘ಕೋಟಿ ವೃಕ್ಷ ಆಂದೋಲನ’ ಹಾಗೂ ಸಾರ್ವಜನಿಕರಿಗೆ ಮೊಳಕೆ ಸಸಿಗಳ ವಿತರಣೆ ಕುರಿತು ಸಂಕ್ಷಿಪ್ತವಾಗಿ ಮಾಹಿತಿ ನೀಡಿದರು.

ಇದೇ ಸಂದರ್ಭದಲ್ಲಿ ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, “ಹಸಿರಿಲ್ಲದೆ ಉಸಿರಿಲ್ಲ” ಎಂಬ ನುಡಿಯನ್ನು ಉಲ್ಲೇಖಿಸಿ, ಪರಿಸರ ದಿನಾಚರಣೆಗμÉ್ಟ ಸಸಿಗಳನ್ನು ನೆಡುವುದನ್ನು ಸೀಮಿತಗೊಳಿಸದೇ, ಅವುಗಳನ್ನು ಪೆÇೀಷಿಸಿ ಬೆಳಸಬೇಕು ಎಂದು ಸಲಹೆ ಮಾಡಿದರು. ವಿದ್ಯಾರ್ಥಿನಿಯರಿಗೆ ಪರಿಸರದ ಬಗೆಗಿನ ಜ್ಞಾನವನ್ನು ರಸಪ್ರಶ್ನೆ ಮುಖಾಂತರ ಕೇಳಿ ಬಹುಮಾನ ವಿತರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮಹಿಳಾ ವಿವಿಯ ಹಂಗಾಮಿ ಕುಲಪತಿ ಪ್ರೊ.ಶಾಂತಾದೇವಿ ಟಿ. ಮಾತನಾಡಿ, ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದ ಹಸಿರೀಕರಣ ಪ್ರಯತ್ನಗಳನ್ನು ನೆನಪಿಸಿಕೊಂಡರು. ವಿಶ್ವವಿದ್ಯಾಲಯದ ಎನ್.ಎಸ್.ಎಸ್. ಕೋಶದ ವತಿಯಿಂದ ಪ್ರತೀ ವರ್ಷ 500 ಸಸಿಗಳನ್ನು ನೆಟ್ಟು ಪೆÇೀಷಿಸಲಾಗುತ್ತಿರುವುದು ಶ್ಲಾಘನೀಯವೆಂದು ಪ್ರಶಂಸಿಸಿದರು. ವಿವಿಯ ಆವರಣದಲ್ಲಿ ವಿಶೇಷ ಸಸಿಗಳ ಸಸ್ಯೋದ್ಯಾನ ಸ್ಥಾಪಿಸಲು ಅಗತ್ಯ ನೆರವನ್ನು ಅರಣ್ಯ ಇಲಾಖೆ ನೀಡಬೇಕೆಂದು ಕೋರಿದರು. ಪ್ರತಿಯೊಬ್ಬರೂ ತಮ್ಮ ಹೆಸರಿನಲ್ಲಿ ಒಂದು ಸಸಿಯನ್ನು ನೆಟ್ಟು, ಪೆÇೀಷಿಸಿ, ಮುಂದಿನ ಪೀಳಿಗೆಗೆ ಶಾಶ್ವತ ಹಸಿರಾದ ಕೊಡುಗೆಯನ್ನಾಗಿ ಮಾಡಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ವಿವಿಯ ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಮ್.ಚಂದ್ರಶೇಖರ, ಮಹಿಳಾ ಅಧ್ಯಯನ ಕೇಂದ್ರದ ನಿರ್ದೇಶಕಿ ಪ್ರೊ.ಲಕ್ಷೀದೇವಿ ವಾಯ್, ವಿಭಾಗದ ಅಧ್ಯಾಪಕಿ ಡಾ.ಫಿರದೋಸ್ ಕೋಲ್ಹಾರ್, ವಿದ್ಯಾರ್ಥಿನಿಯರು ಹಾಗೂ ಮತ್ತಿತರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸಸ್ಯಶಾಸ್ತ್ರ ಅಧ್ಯಯನ ವಿಭಾಗದಿಂದ ಹಮ್ಮಿಕೊಂಡಿದ್ದ ಪೋಸ್ಟರ್ ಹಾಗೂ ರಸಪ್ರಶ್ನೆ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ವಿಭಾಗದ ಸಂಯೋಜಕ ಡಾ.ನಟರಾಜ ದುರ್ಗಣ್ಣವರ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಡಾ.ಆರತಿ ನಿರೂಪಿಸಿದರು. ಡಾ.ಪ್ರತಿಮಾ ಎಚ್ ಅತಿಥಿಗಳನ್ನು ಪರಿಚಯಿಸಿದರು. ಡಾ.ಅಜಯನ್ ಕೆ.ವಿ. ವಂದಿಸಿದರು. 

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.



10-06-2025 EE DIVASA KANNADA DAILY NEWS PAPER

Thursday, June 5, 2025

06-06-2025 EE DIVASA KANNADA DAILY NEWS PAPER

05-06-2025 EE DIVASA KANNADA DAILY NEWS PAPER

ಜಾಗತಿಕ ತಾಪಮಾನ ತಗ್ಗಿಸಲು ಪರಿಸರ ಸಂರಕ್ಷಣೆ ಅಗತ್ಯ : ಗುಡದಿನ್ನಿ

ವಿಜಯಪುರ : ಪ್ರಸಕ್ತ ಸಂದರ್ಭದಲ್ಲಿ ಅಪಾಯದ ಮಟ್ಟದಲ್ಲಿ ಸಾಗುತ್ತಿರುವ ಜಾಗತೀಕ ತಾಪಮಾನ ತಗ್ಗಿಸಲು ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆಗಾಗಿ ಪಣ ತೊಡಬೇಕಿದೆ ಎಂದು ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಉಪಾಧ್ಯಕ್ಷರಾದ ರಾಜಶೇಖರ ಗುಡದಿನ್ನಿ ಅವರು ಕಿವಿಮಾತು ಹೇಳಿದರು.

ಗುರುವಾರ ನಗರದಲ್ಲಿರುವ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ನಲ್ಲಿ ವಿಜಯಪುರ ಜಿಲ್ಲಾ ಸಹಕಾರ ಯುನಿಯನ್, ಕರ್ನಾಟಕ ರಾಜ್ಯ ಸಹಕಾರಿ ಮಹಾ ಮಂಡಳ ಸಹಕಾರಿ ಇಲಾಖೆ ಸಹಯೋಗದಲ್ಲಿ ಪರಿಸರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಸಹಕಾರಿ ವರ್ಷಾಚರಣೆಗಾಗಿ ತಾಯಿ ಹೆಸರಲ್ಲಿ ಒಂದು ಸಸಿ ನೆಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮನೆ, ಕಛೇರಿ, ಓಣಿ, ಊರುಗಳಲ್ಲೆಲ್ಲ ಪರಿಸರ ಸಂರಕ್ಷಣೆಗಾಗಿ ಸಸಿಗಳನ್ನು ನೆಟ್ಟು, ಮರಗಳಾಗಿ ಬೆಳೆಸುವ ಜವಾಬ್ದಾರಿ ನಿಭಾಯಿಸಬೇಕಿದೆ ಸಲಹೆ ನೀಡಿದರು.

ಪರಿಸರ ಪ್ರಜ್ಞೆ ಕಳೆದುಕೊಂಡರೆ ಜೀವ ಸಂಕುಲಕಕ್ಕೆ ಕುತ್ತು ಬರಲಿದೆ. ಹೀಗಾಗಿ ಸಮಾಜದಲ್ಲಿ ಪ್ರಜ್ಞಾವಂತ ನಾಗರಿಕರ ಹೊಣೆ ನಿಭಾಯಿಸಲು ಪರಿಸರ ಸಂರಕ್ಷಣೆಗಾಗಿ ಎಲ್ಲರೂ ಪಣ ತೊಡಬೇಕಿದೆ ಎಂದರು.

ಸಾನ್ನಿಧ್ಯ ವಹಿಸಿದ್ಧ ಮನಗೂಳಿ ಹಿರೇಮಠದ ಅಭಿನವ ಸಂಗನಬಸವ ಶ್ರೀಗಳು ಮಾತನಾಡಿ, ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಜೀವರಕ್ಷಕ ಆಮ್ಲಜನಕ ಹಾಗೂ ಪರಿಶುದ್ಧ ಗಾಳಿಯ ಅಗತ್ಯವನ್ನು ಮನವರಿಕೆ ಮಾಡಿಸಿದೆ. ಹೀಗಾಗಿ ಹೆತ್ತವರು, ಪಾಲಕರನ್ನು ಪ್ರೀತಿಸಿ, ಗೌರವಿಸುವ ಮಾದರಿಯಲ್ಲಿ ಸಸಿಗಳನ್ನು ನೆಟ್ಟು, ಮರಗಳಾಗಿ ಸಂರಕ್ಷಿಸಿ, ಬೆಳೆಸುವ ಕೆಲಸ ಆಗಬೇಕಿದೆ. ಕಡಕೋಳ ಮಡಿವಾಳ ಶರಣರ ಅನುಭಾವ ಕಾವ್ಯ ಸವಿಯುವಂತೆ ಕಿವಿ ಮಾತು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ವಿಜಯಪುರ ಜಿಲ್ಲಾ ಸಹಕಾರ ಯುನಿಯನ್ ಅಧ್ಯಕ್ಷ ಎಂ.ಸಿ.ಮುಲ್ಲಾ ಮಾತನಾಡಿ, ಪರಿಸರ ಸಂರಕ್ಷಣೆಗಾಗಿ ಸರ್ಕಾರ ತಾಯಿಯ ಹೆಸರಿನಲ್ಲಿ ಪ್ರತಿಯೊಬ್ಬರೂ ಒಂದೊಂದು ಸಸಿ ನೆಡುವ ಅಭಿಯಾನ ಬದ್ಧತೆಯಿಂದ ನಡೆಯಬೇಕಿದೆ ಎಂದರು.

        ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಡಿಜಿಎಂ ಸತೀಶ ಪಾಟೀಲ ಮಾತನಾಡಿ, ಹಿರಿಯರು ನಮಗಾಗಿ ಸ್ವಚ್ಛ-ಸುಂದರ ಪರಿಸರ ಬಿಟ್ದಟುಹೋಗಿದ್ದಾರೆ. ಅದರಂತೆ ಮುಂದಿನ ಪೀಳಿಗೆಗೆ ಸ್ವಚ್ಛ ಹಾಗೂ ಸುಂದರ ಪರಿಸರ ಸಂರಕ್ಷಿಸಿ ಬಿಟ್ಟು ಹೋಗುವುದು ಇಂದಿನ ನಮ್ಮೆಲ್ಲರ ಕರ್ತವ್ಯ. ಜಪಾನ್ ಮಾದರಿಯಲ್ಲಿ ನಮ್ಮ ಮಕ್ಕಳಿಗೆ ಪರಿಸರವನ್ನು ಬದುಕಿನ ಭಾಗವೆಂಬ ಜ್ಞಾನ ನೀಡಬೇಕು ಎಂದು ಸಲಹೆ ನೀಡಿದರು.

ಸಹಕಾರಿ ಸಂಘಗಳ ಉಪ ನಿಬಂಧಕರಾದ ಎಸ್.ಕೆ. ಭಾಗ್ಯಶ್ರೀ ಮಾತನಾಡಿ, ಅಂತರಾಷ್ಟ್ರೀಯ ಸಹಕಾರಿ ಅಭಿಯಾನ ವರ್ಷಾಚರಣೆ ಈ ಹಂತದಲ್ಲಿ ಪರಿಸರ ಸಂರಕ್ಷಣೆ ಮಹತ್ವವನ್ನು ಸಾರುವ ಕೆಲಸ ಮಾಡಲಾಗುತ್ತಿದೆ, ಪ್ರತಿಯೊಬ್ಬರೂ ಒಂದೊಂದು ಸಸಿಗಳನ್ನು ನೆಟ್ಟು ಪರಿಸರಕ್ಕೆ ನಮ್ಮ ಕೊಡುಗೆ ನೀಡಬೇಕಿದೆ ಎಂದರು.

         ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮುಖ್ಯಕಾರ್ಯನಿರ್ವಾಹಕರಾದ ಎಸ್.ಎ.ಢವಳಗಿ, ಡಿಜಿಎಂಗಳಾದ ಸುರೇಶ ಪಾಟೀಲ, ಜೆ.ಬಿ.ಪಾಟೀಲ, ಪಿ.ವೈ.ಡೆಂಗಿ, ಸಹಕಾರಿ ಯುನಿಯನ್ ಬ್ಯಾಂಕ್ ನಿರ್ದೇಶಕರಾದ ಎನ್.ಎ.ನಾವಿ, ಸಹಕಾರಿ ಅಭಿವೃದ್ಧಿ ಅಧಿಕಾರಿಗಳಾದ ಎಸ್.ಡಿ.ಮನಗೂಳಿ, ಶ್ರೀಶೈಲ ಹಂಗರಗಿ, ವಿಜಯಕುಮಾರ ಉತ್ನಾಳ, ಕೆ.ಬಿ,ಪಾಟೀಲ, ಲೀಲಾವತಿಗೌಡ ಸೇರಿದಂತೆ ಇತರರು ವೇದಿಕೆ ಮೇಲಿದ್ದರು.

          ಬಳಿಕ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಆವರಣದಲ್ಲಿ ಸಾಮೂಹಿಕವಾಗಿ ಸಸಿ ನೆಡುವ ಕಾರ್ಯಕ್ರಮ ನಡೆಯಿತು.

         ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ನ ಆರ್.ಎಂ.ಬಣಗಾರ ಸ್ವಾಗತಿಸಿ, ನಿರೂಪಿಸಿದರು. ಸಹಕಾರಿ ಯುನಿಯನ್ ಬ್ಯಾಂಕ್ ಸಿಇಒ ಕೆ.ಎನ್.ಪಾರಗೊಂಡ ವಂದಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


Tuesday, June 3, 2025

04-06-2025 EE DIVASA KANNADA DAILY NEWS PAPER

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನೆಗಳ ಕುರಿತು ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ


 ವಿಜಯಪುರ : ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರ ಸಹಯೋಗದೊಂದಿಗೆ ಬಾಲ್ಯವಿವಾಹ ಹಾಗೂ ಪೋಕ್ಸೊ ಕಾಯ್ದೆಗಳ ಕುರಿತು ಜನಜಾಗೃತಿ ಕಾರ್ಯಕ್ರಮಗಳನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಆಯೋಜಿಸುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತಿಳಿಸಿದರು.

 ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆಗಾಗಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

 ಬಾಲ್ಯವಿವಾಹವನ್ನು ತಡೆಗಟ್ಟಲು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಶಿಕ್ಷಣ ಸಂಸ್ಥೆಗಳಲ್ಲಿ ಸಮಿತಿಗಳನ್ನು ರಚಿಸಿಕೊಂಡು, ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ವಿದ್ಯಾರ್ಥಿಗಳು, ಪಾಲಕರು ಹಾಗೂ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದು ಅವರು ಹೇಳಿದರು. 

ಬಾಲ್ಯವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಶಾಲೆಗಳಲ್ಲಿ ಒಂದು ವಾರಗಳಿಂತ ಹೆಚ್ಚು ಗೈರಾದ ಮಕ್ಕಳ ಮಾಹಿತಿಗಳನ್ನು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಖುದ್ದಾಗಿ ಶಾಲೆಗಳಿಗೆ ಭೇಟಿ ನೀಡುವುದರ ಮೂಲಕ ಸಮಗ್ರ ಮಾಹಿತಿ ಪಡೆದುಕೊಳ್ಳಬೇಕು. ಬಾಲ್ಯ ವಿವಾಹ ಘಟನೆ ಕಂಡುಬAದಲ್ಲಿ ಅವುಗಳನ್ನು ತಡೆÀಗಟ್ಟಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಸೂಚಿಸಿದರು. 

ಬಾಲ್ಯವಿವಾಹ ಕಂಡುಬAದಲ್ಲಿ ಬಾಲ್ಯ ವಿವಾಹಕ್ಕೆ ಪ್ರೋತ್ಸಾಹ ನೀಡುವವರೂ ಸೇರಿದಂತೆ ಮಗುವಿನ ಪೋಷಕರು, ಮಗುವಿನ ಜವಾಬ್ದಾರಿಯನ್ನು ಹೊತ್ತವರ, ಭಾಗವಹಿಸಿದ ಇತರರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಅವರು ನಿರ್ದೇಶನ ನೀಡಿದರು. 

ಬಾಲ್ಯ ವಿವಾಹದ ಘಟಿಸದಂತೆ ನೋಡಿಕೊಳ್ಳಬೇಕು ಹಾಗೂ ಬಾಲ್ಯ ವಿವಾಹ ತಡೆಗೆ ಇರುವ ಸಹಾಯವಾಣಿ ಸಂಖ್ಯೆ 1098 ಬಗ್ಗೆ ವ್ಯಾಪಕ ಪ್ರಚಾರ ಮಾಡಬೇಕು ಹಾಗೂ ಬಾಲ್ಯ ವಿವಾಹ ಮುಕ್ತ ಗ್ರಾಮ ಪಂಚಾಯಿತಿಗಳನ್ನು ಗುರುತಿಸಿ ಅಂತಹ ಗ್ರಾಮ ಪಂಚಾಯತಿಗಳಿಗೆ ಸನ್ಮಾನಿಸುವ ಕಾರ್ಯ ನಡೆಯಬೇಕು ಎಂದು ಸಂಬAಧಿಸಿದ ಅಧಿಕಾರಿಗಳಿಗೆ ಅವರು ತಿಳಿಸಿದರು. 

ಬಾಣಂತಿ ಮತ್ತು ಗರ್ಭಿಣಿ ಮಹಿಳೆಯರ ಕ್ಷೇಮಾಭಿವೃದ್ಧಿಗಾಗಿ ಇರುವ ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುವುದರ ಮೂಲಕ ತಾಯಿ ಮತ್ತು ಮಗುವಿನ ಆರೋಗ್ಯ ಮತ್ತು ಪೋಷಣೆಯನ್ನು ಉತ್ತಮಪಡಿಸಲು ಅನುವಾಗಬೇಕೆಂದು ಸಂಬAಧಿಸಿದ ಅಧಿಕಾರಿಗಳಿಗೆ ಅವರು ತಿಳಿಸಿದರು. 

 ಜಿಲ್ಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ನೊಂದ ಮಹಿಳೆಯರಿಗಾಗಿ ಸ್ಥಾಪಿಸಲಾಗಿರುವ ಸಖಿ ಒನ್ ಸ್ಟಾಪ್ ಸೆಂಟರ್‌ನಲ್ಲಿ ನೊಂದ ಮಹಿಳೆಯರಿಗೆ ಆರೋಗ್ಯ, ಆರೈಕೆ, ಪೊಲೀಸ್ ಹಾಗೂ ಕಾನೂನು ನೆರವು, ವಸತಿ ಹಾಗೂ ಆಪ್ತ ಸಮಾಲೋಚನೆ ಇತ್ಯಾದಿ ಸೇವೆಗಳನ್ನು ಸಮರ್ಪಕವಾಗಿ ದೊರಕುವಂತೆ ಎಲ್ಲ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸುವಂತೆ ಅವರು ಸೂಚಿಸಿದರು.

ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾದ ನೊಂದ ಮಹಿಳೆಯರಿಗಾಗಿ ಜಿಲ್ಲೆಯಲ್ಲಿ ಒಟ್ಟು 06 ಸಾಂತ್ವನ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಸದರಿ ಕೇಂದ್ರಗಳಲ್ಲಿ ನೊಂದ ಮಹಿಳೆಯರಿಗೆ ಆಪ್ತ ಸಮಾಲೋಚನೆ, ಕಾನೂನು ಅರಿವು, ನೆರವು ನೀಡಲಾಗುವುದು. ಅಂತಹ ಮಹಿಳೆಯರಿಗೆ ಆತ್ಮ ಸ್ಥೆöÊರ್ಯ ನೀಡಿ ಪುನಃ ಕುಟುಂಬದೊAದಿಗೆ ಸೇರಿಸುವ ಕಾರ್ಯವಾಗಬೇಕು. ಸಾಂತ್ವನ ಕೇಂದ್ರಗಳಲ್ಲಿ ಯಾವುದೇ ಸಮಸ್ಯೆಗಳಿದ್ದಲ್ಲಿ ಅಧಿಕಾರಿಗಳ ಗಮನಕ್ಕೆ ತಂದು ಇತ್ಯರ್ಥ ಪಡೆಸಿಕೊಳ್ಳುವಂತೆ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ರಿಷಿ ಆನಂದ ಅವರು ಸಾಂತ್ವನ ಕೇಂದ್ರಗಳ ವ್ಯವಸ್ಥಾಪಕರಿಗೆ ಸೂಚಿಸಿದರು. 

ಪೋಕ್ಸೋ ಹಾಗೂ ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸಂಬAಧಿಸಿದ ಇಲಾಖೆಗಳಿಗೆ ಎಲ್ಲ ರೀತಿಯ ಸಹಾಯ ಸಹಕಾರವನ್ನು ಪೊಲೀಸ್ ಇಲಾಖೆ ವತಿಯಿಂದ ನೀಡಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷö್ಮಣ ನಿಂಬರಗಿ ಹೇಳಿದರು. 

ಸಭೆಯಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿಗಳಾದ ನಿಂಗಪ್ಪ ಗೋಠೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಶಂಕರ್ ಮಾರಿಹಾಳ, ಜಿಲ್ಲಾ ಶಸ್ತçಚಿಕಿತ್ಸಕರಾದ ಶಿವಾನಂದ ಮಾಸ್ತಿಹೊಳಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಸಂಪತ್ತ ಗುಣಾರೆ, ಮಹಾ ನಗರ ಪಾಲಿಕೆಯ ಆಯುಕ್ತರಾದ ವಿಜಯಕುಮಾರ ಮೆಕ್ಕಳಕಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಕೆ.ಕೆ.ಚವ್ಹಾಣ, ಕೌಶಲ್ಯಾಭಿವೃದ್ಧಿ ಇಲಾಖೆಯ ಅಧಿಕಾರಿ ಸಿ.ಬಿ.ಕುಂಬಾರ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಟಿ.ಎಸ್.ಕೊಲ್ಹಾರ್ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.