Monday, June 30, 2025

ಕಸಾಪ ಅಧ್ಯಕ್ಷರಿಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡಿ ; ಮುಖ್ಯಮಂತ್ರಿ ತಾವು ಕನ್ನಡ ಪ್ರೇಮಿ ಎಂದು ಸಾಬೀತು ಪಡಿಸಲಿ : ಲಾಯಪ್ಪ ಇಂಗಳೆ

ವಿಜಯಪುರ : ಕನ್ನಡ ಸಾಹಿತ್ಯ ಪರಿಷತ್ತಿನ ಚುನಾಯಿತ ರಾಜ್ಯ ಘಟಕದ ಅಧ್ಯಕರಾದ ನಾಡೋಜ ಮಹೇಶ ಜೋಶಿ ಅವರಿಗೆ ಹಿಂದಿನ ಸರ್ಕಾರ ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಕನ್ನಡದ ಕೆಲಸಕ್ಕೆ ಪ್ರೋತ್ಸಾಹಿಸಿತ್ತು. ಸದ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಿಗೆ ನೀಡಿದ ಸಂಪುಟ ದರ್ಜೆಯ ಸ್ಥಾನವನ್ನು ಹಿಂಪಡೆದಿರುವ ಪುನಃ ನೀಡಬೇಕೆಂದು ಒತ್ತಾಯಿಸಿ ವಿಜಯಪುರ ಜಿಲ್ಲಾಧಿಕಾರಿಗಳ ಮೂಲಕ ಘನತವೆತ್ತ ರಾಜ್ಯ ಪಾಲರಿಗೆ ಹಾಗೂ ಮುಖ್ಯಮಂತ್ರಿಗಳಿಗೆ ಕನ್ನಡದ ಕಟ್ಟಾಳು ಗಂಗಾಧರ ಕೋರಳ್ಳಿ ಪ್ರತಿಷ್ಠಾನದ ಕಾರ್ಯದರ್ಶಿ ಲಾಯಪ್ಪ ಇಂಗಳೆ ಅವರು ಮನವಿ ಸಲ್ಲಿಸಿದ್ದಾರೆ.

ಈ ಕುರಿತು ಮನವಿ ಮಾಡಿಕೊಂಡಿರುವ ಅವರು, ಮೈಸೂರಿನ ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ಸರ್. ಎಂ.ವಿಶ್ವೇಶ್ವರಯ್ಯ ನವರು ಸ್ಥಾಪಿಸಿದ ಕನ್ನಡ ನಾಡಿನ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತು ಶತಮಾನ ಪೂರೈಸಿದ ಕನ್ನಡದ ಹೆಮ್ಮೆಯ ಸಂಸ್ಥೆಯಾಗಿದೆ. ಕನ್ನಡ ಸಾಹಿತ್ಯ ಪರಿಷತ್ತು ಅನೇಕ ಹಿರಿಯ ಸಾಹಿತಿಗಳು ಹಾಗೂ ನಾಡು ನುಡಿಗಾಗಿ ಶ್ರಮಿಸಿದ ಹಿರಿಯರ ಮಾರ್ಗದರ್ಶನದಲ್ಲಿ ನಾಡಿನಲ್ಲಿ ಕನ್ನಡವನ್ನು ಕಟ್ಟಿ ಬೆಳೆಸುವ, ಉಳಿಸುವ ಕೆಲಸ ಮಾಡುತ್ತಾ ಬಂದಿರುವುದು ಅದರ ಹಿರಿಮೆ ಹಿಡಿದ ಕೈಗನ್ನಡಿಯಾಗಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯನವರು ತಮ್ಮ ಹಿಂಬಾಲಕರ ಮಾತನ್ನು ಕೇಳಿ ಸಾಹಿತ್ಯ ಪರಿಷತ್ತಿನಲ್ಲಿ ರಾಜಕೀಯ ಮಾಡಲು ಹೊರಟಿರುವುದು ಪರಿಷತ್ತಿನ ಇತಿಹಾಸದಲ್ಲಿಯೇ ಕಪ್ಪು ಚುಕ್ಕೆಯಾಗಿದೆ. ಕೂಡಲೇ ಈ ಹಿಂದಿನAತೆ ಸಂಪುಟ ದರ್ಜೆಯ ಸ್ಥಾನಮಾನವನ್ನು ಮುಂದುವರೆಸಿ ಕನ್ನಡ ಕಟ್ಟುವ ಕೆಲಸಕ್ಕೆ ಅನುಕೂಲ ಮಾಡಿಕೊಟ್ಟು, ತಾವು ಅಪ್ಪಟ ಕನ್ನಡ ಪ್ರೇಮಿ ಎಂದು ಸಾಬೀತು ಪಡಿಸಬೇಕು ಎಂದು ಮನವಿ ಪತ್ರದಲ್ಲಿ ಇಂಗಳೆ ಅವರು ಆಗ್ರಹಿಸಿದ್ದಾರೆ.

 ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

No comments:

Post a Comment