Sunday, August 31, 2025
ಹಿಂದುಳಿದ ವರ್ಗಗಳ ಹಿತರಕ್ಷಕ ಅಂಬೇಡ್ಕರ್: ಡಾ. ಪೋತೆ
ವಿಜಯಪುರದಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರ ಕೃತಿಗಳ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ವಿಜಯಪುರ: ದುಂಡು ಮೇಜಿನ ಸಭೆಯಲ್ಲಿ ಭಾಗವಹಿಸಿದ್ದ ಡಾ.ಅಂಬೇಡ್ಕರ್ ಅವರು ಹಿಂದುಳಿದ ವರ್ಗಗಳ ಹಿತರಕ್ಷಣೆಯ ಬಗ್ಗೆಯೂ ಯೋಚಿಸಿ ಹಿಂದುಳಿದ ವರ್ಗದವರ ಪರ ಧ್ವನಿಯಾಗಿದ್ದರು, ಇದನ್ನು ಹಿಂದುಳಿದ ವರ್ಗದವರು ಅಂಬೇಡ್ಕರ್ ಅವರನ್ನು ಮರೆಯಬಾರದು ಎಂದು ಹಿರಿಯ ಸಾಹಿತಿ ಡಾ.ಎಚ್.ಟಿ. ಪೋತೆ ಹೇಳಿದರು.
ನಗರದ ಕಂದಗಲ್ ಹನುಮಂತರಾಯ ರಂಗಮAದಿರದಲ್ಲಿ ಕವಿತಾ ಪ್ರಕಾಶನ ಚನ್ನಬಸಮ್ಮ ಚಂದಪ್ಪ ಪ್ರತಿಷ್ಠಾನದ ಆಶ್ರಯದಲ್ಲಿ ಹಮ್ಮಿಕೊಂಡ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ರಚಿಸಿದ ನಮ್ಮ ಸಂವಿಧಾನ- ನಮ್ಮ ಹೆಮ್ಮೆ ಹಾಗೂ ದೇವರ ಗೆಣ್ಣೂರ ಎಂಬ ಕೃತಿ ಬಿಡುಗಡೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಡಾ.ಬಿ.ಆರ್. ಅಂಬೇಡ್ಕರ್ ಅವರು ತಮ್ಮ ಮನೆಯಲ್ಲಿ ಸಾವು ಸಂಭವಿಸಿದರೂ ಸಹ ಲಕ್ಷಾಂತರ ಮಕ್ಕಳು ಕಣ್ಣೀರು ಸುರಿಸಬಾರದು ಎಂಬ ಏಕೈಕ ಉದ್ದೇಶದಿಂದ ಲಂಡನ್‌ಗೆ ಹೋಗಿ ದುಂಡು ಮೇಜಿನ ಸಭೆಯಲ್ಲಿ ಭಾಗವಹಿಸಿ ಧ್ವನಿ ಮಂಡಿಸಿದ್ದರು ಎಂದರು.
ಸರ್ಕಾರಿ ಅಧಿಕಾರಿಗಳಿಗೆ ಬುದ್ಧ, ಬಸವಣ್ಣ, ಡಾ.ಅಂಬೇಡ್ಕರ್, ಕುವೆಂಪು ಮತ್ತಿತರರ ಮನಸ್ಥಿತಿ ಬರಬೇಕೇ ಹೊರತು, ದರ್ಪದ ಮನಸ್ಥಿತಿ ಇರಬಾರದು. ಈ ಎಲ್ಲ ಮಹನೀಯರ ಆಶಯಗಳನ್ನು ಈಡೇರಿಸುವ ನಿಟ್ಟಿನಲ್ಲಿ ಸರ್ಕಾರಿ ಅಧಿಕಾರಿಗಳು ಮುಂದಾಗಬೇಕು ಎಂದರು.
ಶಾಲೆಗಳಲ್ಲಿ ಹೋಮ, ಹವನ ಮಾಡುವುದು ಕಲಿಸಲಾಗುತ್ತದೆ. ಆದರೆ, ಸಂವಿಧಾನ ಓದುವುದನ್ನು ಕಲಿಸುತ್ತಿಲ್ಲ ಎಂಬುದು ಬೇಸರದ ಸಂಗತಿ. ಇಂದು ಮೊಬೈಲ್ ಬದಿಗಿಟ್ಟು ಪುಸ್ತಕ ಕೈಗೆ ತೆಗೆದುಕೊಳ್ಳಿ, ಮಾಂಸಾಹಾರ ಒಂದು ಬಾರಿ ಬಿಟ್ಟರೂ ಚಿಂತೆಯಿಲ್ಲ ಆ ಹಣದಲ್ಲಿ ಪುಸ್ತಕ ಖರೀದಿಸಿ ಎಂದರು.
ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್. ಮುಕುಂದರಾಜ್ ಮಾತನಾಡಿ, ವ್ಯಕ್ತಿಯೊಬ್ಬ ಪ್ರಾಮಾಣಿಕನಾಗಿದ್ದಾಗ ಸಾಹಿತ್ಯ ಬರೆಯಲು ಸಾಧ್ಯ, ಗೆಣ್ಣೂರ ಅವರಲ್ಲಿ ಪ್ರಾಮಾಣಿಕತೆ ಇದ್ದ ಕಾರಣಕ್ಕೆ ಅವರು ಬರೆಯಲು ಸಾಧ್ಯವಾಯಿತು, ಇದೇ ನೆಲದಲ್ಲಿ ಒಬ್ಬ ರಾಜಕಾರಣಿ ಸಾಹಿತಿಗಳನ್ನು ಗಂಜಿ ಗಿರಾಕಿಗಳು ಎಂದು ಕರೆದಿದ್ದರು ದುರದೃಷ್ಟಕರ ಎಂದರು.
ದೇಶದಲ್ಲಿ ಸಮೃದ್ಧತೆ, ಸೌಹಾರ್ದತೆ ಮೂಡಲು ಯಾವುದೇ ದೇವರು ಕಾರಣವಲ್ಲ ಅದಕ್ಕೆ ಕಾರಣ ಡಾ.ಅಂಬೇಡ್ಕರ್, ಹೀಗಾಗಿ ಡಾ.ಅಂಬೇಡ್ಕರ್ ಅವರು ರಾಷ್ಟçದ ಮಹಾಪಿತ ಎಂದರು.
ಜಿಲ್ಲಾಧಿಕಾರಿ ಡಾ.ಆನಂದ ಕೆ. ಮಾತನಾಡಿ, ಸರ್ಕಾರದ ಕೆಲಸದ ಒತ್ತಡದ ನಡುವೆ ಸಾಹಿತ್ಯ ಬರೆಯುವ ಕಲ್ಪನೆ ಬರುವುದು ವಿಶೇಷ. ನಮ್ಮ ಶಾಲಾ, ಕಾಲೇಜು ದಿನಗಳ ಹವ್ಯಾಸ ಮುಂದುವರಿಸಿಕೊAಡು ಹೋಗುವುದು ಕಷ್ಟದ ಕೆಲಸ. ಜನರ ಕೆಲಸದ ನಡುವೆ ಸಾಹಿತ್ಯ ರಚಿಸಿರುವುದು ಶ್ಲಾಘನೀಯ ಎಂದರು.
ಎಸ್ಪಿ ಲಕ್ಷ್ಮಣ ನಿಂಬರಗಿ ಮಾತನಾಡಿ, ದೇವನೂರು ಮಹಾದೇವ ಅವರ ಒಡಲಾಳದ ಭಾಷೆಯಂತೆ ದೇವರ ಗೆಣ್ಣೂರ ಅವರ ಆತ್ಮಕಥೆಯೂ ಸ್ವಾತಂತ್ರ‍್ಯ, ಸಮಾನತೆ, ಭ್ರಾತೃತ್ವದ ಆಶಯದ ಸ್ವರೂಪದಂತಿದೆ ಎಂದರು.
ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ, ಕೆಎಎಸ್ ಅಧಿಕಾರಿ ಮೇಜರ್ ಸಿದ್ದಲಿಂಗಯ್ಯ ಹಿರೇಮಠ, ಕವಿತಾ ಪ್ರಕಾಶನದ ಗಣೇಶ ಅಮೀನಗಡ, ಕಸಾಪ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ, ಅಡಿವೆಪ್ಪ ಸಾಲಗಲ್, ರಾಜಶೇಖರ ಯಡಹಳ್ಳಿ, ಸುರೇಶ ಶೆಡಶ್ಯಾಳ, ನಾಗರಾಜ ಲಂಬು, ಪ್ರೊ.ದೊಡ್ಡಣ್ಣ ಭಜಂತ್ರಿ, ಸುಜಾತಾ ಚಲವಾದಿ, ರಮೇಶ ಆಸಂಗಿ, ಅಭಿಷೇಕ ಚಕ್ರವರ್ತಿ ಇದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
ಡಾ. ಸುಧಾರಾಣಿ ಮಣೂರವರ ಕೃತಿ ಬಿಡುಗಡೆಗೊಳಿಸಿದ ಗುರುಮಹಾಂತ ಶ್ರೀಗಳು ಮಕ್ಕಳ ಸಾಹಿತ್ಯ ಅವಲೋಕನ ಕೃತಿ ; ಮಕ್ಕಳ ಸಾಹಿತ್ಯದಲ್ಲಿ ಕೃಷಿಮಾಡುವವರಿಗೆ ದಿಕ್ಸೂಚಿ
ವಿಜಯಪುರ: ಡಾ. ಸುಧಾರಾಣಿ ಮಣೂರ ಅವರು ‘ಮಕ್ಕಳ ಸಾಹಿತ್ಯ ಅವಲೋಕನ' ಕೃತಿ ಯುವ ಬರಹಗಾರರಿಗೆ ಆಕರ ಗ್ರಂಥವಾಗಿದೆ. ಮಕ್ಕಳ ಸಾಹಿತ್ಯದಲ್ಲಿ ಕೃಷಿಮಾಡುವವರಿಗೆ ದಿಕ್ಸೂಚಿಯಾಗಿದೆ ಎಂದು ಇಲಕಲ್ ಚಿತ್ತರಗಿ ಮಹಾಂತಮಠದ ಪೂಜ್ಯರಾದ ಮನಿಪ್ರ ಶ್ರೀ ಗುರುಮಹಾಂತ ಮಹಾಸ್ವಾಮಿಗಳು ಹೇಳಿದರು.
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಕ್ಕಳ ಸಾಹಿತಿ ಪ.ಗು.ಸಿದ್ದಾಪುರ ಅವರ ಮನೆಯಲ್ಲಿ ಹಮ್ಮಿಕೊಂಡ ವಿಶೇಷ ಕಾರ್ಯಕ್ರಮದಲ್ಲಿ ಡಾ. ಸುಧಾರಾಣಿ ಮಣೂರ ಅವರು ರಚಿಸಿದ ಮಕ್ಕಳ ಸಾಹಿತ್ಯ ಅವಲೋಕನ ಗ್ರಂಥವನ್ನು ಬಿಡುಗಡೆಗೊಳಿಸಿ ಆಶೀರ್ವಚನ ನೀಡಿ ಅವರು ಮಾತನಾಡಿದರು.
ಡಾ. ಸುಧಾ ರಾಣಿ ಮಣೂರ ಅವರು ‘ಮಕ್ಕಳ ಸಾಹಿತ್ಯ ಅವಲೋಕನ' ಕೃತಿಯಲ್ಲಿ ಮಕ್ಕಳ ಸಾಹಿತ್ಯದಲ್ಲಿ ಕೃಷಿ ಮಾಡಿದ ಹಿರಿಯ ಮಕ್ಕಳ ಸಾಹಿತಿಗಳ ಕೃತಿಗಳನ್ನು ವಿಮರ್ಶೆ ಮಾಡಿದ್ದಾರೆ. ಮಕ್ಕಳ ಸಾಹಿತ್ಯದ ಕುರಿತು ವಿಶೇಷ ಲೇಖನಗಳನ್ನು ಬರೆದಿದ್ದಾರೆ ಎಂದರು.
ಈ ಸಂದರ್ಭ ಬಸವರಾಜ ಸಿದ್ದಾಪುರ, ಅರವಿಂದಕುಮಾರ ಸಿದ್ದಾಪುರ, ಶಿವಪ್ಪ ಮಣೂರ, ಡಾ.ಸುಧಾರಾಣಿ ಮಣೂರ ಇದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
Saturday, August 30, 2025
ಡೋಣಿ ನದಿ ಪಾತ್ರದಲ್ಲಿನ ಬೆಳೆ ನಷ್ಟ ಕುರಿತು ಜಂಟಿ ಸಮೀಕ್ಷೆ ಶೀಘ್ರದಲ್ಲೇ ಪೂರ್ಣ ಸಮೀಕ್ಷೆ ವರದಿಯಾಧಾರಿಸಿ ಬೆಳೆ ಪರಿಹಾರಕ್ಕೆ ಕ್ರಮ : ಜಿಲ್ಲಾಧಿಕಾರಿ ಡಾ.ಆನಂದ ಕೆ.
ವಿಜಯಪುರ: ಮುಂಗಾರು ಮಳೆ ಹಿನ್ನಲೆಯಲ್ಲಿ ಡೋಣಿ ನದಿ ತೀರದ ಪ್ರದೇಶದಲ್ಲಿನ ಕೃಷಿ ಭೂಮಿ ಪ್ರವಾಹಕ್ಕೊಳಗಾಗಿ ಅಂದಾಜು 5500 ಹೆಕ್ಟೇರ್ ಜಮೀನು ಮುಳುಗಡೆಯಾಗಿ ಬೆಳೆಗಳು ಹಾನಿಯಾಗಿದ್ದು, ಈ ಕುರಿತು ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳು ಶೀಘ್ರದಲ್ಲೇ ಜಂಟಿ ಸಮೀಕ್ಷೆ ಪೂರ್ಣಗೊಳಿಸಿ ವರದಿ ಸಲ್ಲಿಸಲಿದ್ದು, ವರದಿಯನುಸಾರ ಬೆಳೆ ನಷ್ಟವಾಗಿರುವ ರೈತರ ಖಾತೆಗೆ ನೇರವಾಗಿ ಪರಿಹಾರ ಹಣ ಜಮೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ತಿಳಿಸಿದರು.
ಡೋಣಿ ನದಿಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಶನಿವಾರ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ರಿಷಿ ಆನಂದ ಅವರೊಂದಿಗೆ ಜಂಟಿಯಾಗಿ ಜಿಲ್ಲೆಯ ಸಾರವಾಡ, ದದಾಮಟ್ಟಿ, ಉಕುಮನಾಳ ಹಾಗೂ ಎಂಬತ್ನಾಳ ಸೇರಿದಂತೆ ವಿವಿಧೆಡೆ ಭೇಟಿ ನೀಡಿ ಅವರು ಪರಿಶೀಲನೆ ನಡೆಸಿ ಮಾತನಾಡಿದರು.
ಡೋಣಿ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿಯಂತ್ರಣಕ್ಕಾಗಿ ಶಾಶ್ವತ ಪರಿಹಾರ ಕಲ್ಪಿಸುವಂತೆ ಈಗಾಗಲೇ ಸ್ಥಳೀಯ ರೈತರು ಕೆಲವು ಬೇಡಿಕೆಗಳನ್ನು ಸಲ್ಲಿಸಿದ್ದು, ಇವರ ಬೇಡಿಕೆಯನ್ವಯ ಕಾಮಗಾರಿಗಳನ್ನು ಕೈಗೊಳ್ಳಲು ಬೇಕಾಗುವ ಅನುದಾನ, ಸೂಕ್ತ ಯೋಜನೆ ಕುರಿತಂತೆ ಜಿಲ್ಲಾ ಮಟ್ಟದಲ್ಲಿ ಚರ್ಚಿಸಿ ಕ್ರಮ ವಹಿಸಲಾಗುವುದು.
ಡೋಣಿ ನದಿಯ ಪ್ರವಾಹ ನಿಯಂತ್ರಣಕ್ಕಾಗಿ ಅಂದಾಜು 7.5 ಕೋಟಿ ರೂ.ಗಳ ವಿಪತ್ತು ನಿರ್ವಹನಾ ಉಪಶಮನ ನಿಧಿಯಡಿ ಈಗಾಗಲೇ ಪಂಚಾಯತ್ ರಾಜ್ ಇಂಜಿನೀಯರಿAಗ್ ವಿಭಾಗದಿಂದ ಸೇತುವೆ ಮುಂಭಾಗ ಹಾಗೂ ಹಿಂಭಾಗದಲ್ಲಿನ ಒಂದು ಕಿ.ಮೀ. ಅಂತರದಲ್ಲಿ ಹೂಳೂ ತೆಗೆಯುವುದು, ಗಿಡಗಂಟಿಗಳನ್ನು ತೆರವುಗೊಳಿಸುವುದು ಹಾಗೂ ಪಕ್ಕದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗದಂತೆ ಅರಣ್ಯೀಕರಣ ಕಾಮಗಾರಿ ಸೇರಿದಂತೆ ಪ್ರವಾಹ ನಿಯಂತ್ರಣಕ್ಕಾಗಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ನವೆಂಬರ್ ಅಂತ್ಯದಲ್ಲಿ ಹೂಳು ತೆಗೆಯುವುದು, sಸೇತುವೆ ಪಾತ್ರದಲ್ಲಿ ಅರಣ್ಯೀಕರಣ ಕಾಮಗಾರಿ ಸಹ ಆರಂಭವಾಗಲಿದ್ದು, ಡೋಣಿನದಿ ಪ್ರವಾಹ ನಿಯಂತ್ರಣ ಕಾಮಗಾರಿಗಳನ್ನು ಆದ್ಯತೆಯಾಗಿ ತೆಗೆದುಕೊಂಡು ಡೋಣಿ ನದಿಯಿಂದಾಗುವ ಸಮಸ್ಯೆಗಳನ್ನು ಅವಲೋಕಿಸಿ ಅದಕ್ಕೆ ಸಂಬAಧಿಸಿದ ಕಾಮಗಾರಿಗಳನ್ನು ಹಂತ ಹಂತವಾಗಿ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಕೃಷಿ ಜಂಟಿ ನಿರ್ದೇಶಕರಾದ ಶಿವನಗೌಡ ಪಾಟೀಲ,ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ರಾಹುಲ್ ಭಾವಿದೊಡ್ಡಿ,ಅಲ್ಪಸಂಖ್ಯಾತರ ಇಲಾಖೆಯ ಅಧಿಕಾರಿ ಪ್ರಶಾಂತ ಪೂಜಾರಿ ತಹಶಿಲ್ದಾರರಾದ ಶ್ರೀಮತಿ ಶಾಂತಲಾ ಚಂದನ, ರೈತರಾದ ಭೀಮಸೇನ, ಮಲ್ಲಿಕಾರ್ಜುನ ಭಟಗಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
ಕ್ರೀಡೆ ಕೇವಲ ಆಟವಲ್ಲ, ಜೀವನದ ಶಿಸ್ತು, ಮೌಲ್ಯಗಳ ಪಾಠ – ಡಾ.ರವಿ ಗೋಲಾ
ವಿಜಯಪುರ: ಹಾಕಿಯ ಜಾದುಗಾರ ಮೇಜರ್ ಧ್ಯಾನಚಂದ ಕೇವಲ ಆಟಗಾರರಲ್ಲ, ದೇಶಪ್ರೇಮಿ ಹಾಗೂ ಶಿಸ್ತುಪರ ವ್ಯಕ್ತಿತ್ವದ ಮಾದರಿ ಎಂದು ಸಿಂದಗಿ ಪೊರವಾಲ್ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ.ರವಿ ಗೋಲಾ ಅವರು ಹೇಳಿದರು.
“ನಗರದ ಮಹಿಳಾ ವಿಶ್ವವಿದ್ಯಾನಿಲಯದ ಕ್ರೀಡಾ ನಿರ್ದೇಶನಾಲಯ ಹಾಗೂ ದೈಹಿಕ ಶಿಕ್ಷಣ ಅಧ್ಯಯನ ಮತ್ತು ಕ್ರೀಡಾ ವಿಜ್ಞಾನ ವಿಭಾಗದ ಸಹಯೋಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣಾ ಕಾರ್ಯಕ್ರಮದಲ್ಲಿ, ಭಾರತದ ಹಾಕಿ ದಂತಕಥೆ ಮೇಜರ್ ಧ್ಯಾನಚಂದರವರ ಜನ್ಮದಿನದ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.”
ಅವರ ಅದ್ಭುತ ಆಟದ ಬಗ್ಗೆ ಮಾತನಾಡಿ, ಹಿಟ್ಲರ್ ಕೂಡ ಧ್ಯಾನಚಂದರನ್ನು ಮೆಚ್ಚಿಕೊಂಡಿದ್ದ ಘಟನೆ ಪ್ರಸ್ತಾಪ ಮಾಡಿದರು. ಒಲಿಂಪಿಕ್ ಕ್ರೀಡಾಕೂಟದಲ್ಲಿ ನೀಡಿದ ಶ್ರೇಷ್ಠ ಪ್ರದರ್ಶನದಿಂದ ಧ್ಯಾನಚಂದ ವಿಶ್ವದ ಗಮನ ಸೆಳೆದಿದ್ದರು. ಹಿಟ್ಲರ್ ಅವರಿಗೂ ಆಶ್ಚರ್ಯ ಹುಟ್ಟಿದಂತಹ ಕ್ರೀಡಾ ಪ್ರತಿಭೆ ಅವರದ್ದಾಗಿತ್ತು. ಧ್ಯಾನಚಂದರ ಸಾಧನೆಗಳು ಇಂದಿಗೂ ಪ್ರತಿಯೊಬ್ಬ ಕ್ರೀಡಾಭಿಮಾನಿಗೆ ಪ್ರೇರಣೆಯಾಗಿದೆ ಎಂದು ಅವರು ಹೇಳಿದರು.
ವಿವಿಯ ಕುಲಸಚಿವ ಶಂಕರಗೌಡ ಎಸ್. ಸೋಮನಾಳ ಮಾತನಾಡಿ, ವಿದ್ಯಾರ್ಥಿಗಳೊಂದಿಗೆ ರಸಪ್ರಶ್ನೆ ನಡೆಸಿ ನಗದು ಬಹುಮಾನ ವಿತರಿಸಿದರು. ಇದೇ ಸಂದರ್ಭದಲ್ಲಿ ಪ್ರತಿಜ್ಞಾವಿಧಿ ಭೋದಿಸಿ, ಮಕ್ಕಳಿಗೆ ಕ್ರೀಡೆಯ ಮಹತ್ವವನ್ನು ಮನದಟ್ಟು ಮಾಡಿಕೊಟ್ಟರು. ಕ್ರೀಡೆಯ ಮೂಲಕ ಶಿಸ್ತು, ಆರೋಗ್ಯ ಹಾಗೂ ಸಹಕಾರ ಮನೋಭಾವವನ್ನು ಬೆಳೆಸಿಕೊಳ್ಳಬಹುದೆಂದು ಅವರು ವಿದ್ಯಾರ್ಥಿಗಳಿಗೆ ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಲಪತಿ ವಿಜಯಾ ಕೋರಿಶೆಟ್ಟಿ ಮಾತನಾಡಿ, ಕ್ರೀಡೆಯ ಮೂಲಕ ಅನೇಕ ಸಾಮಾಜಿಕ ಹಾಗೂ ನೈತಿಕ ಗುಣಗಳನ್ನು ಬೆಳೆಸಿಕೊಳ್ಳಬಹುದು. ಪ್ರತಿಯೊಬ್ಬರೂ ಕ್ರೀಡೆಯಲ್ಲಿ ಭಾಗವಹಿಸಬೇಕು. ಇದರಿಂದ ದೈಹಿಕ ಮತ್ತು ಮಾನಸಿಕ ಶಕ್ತಿ ವೃದ್ಧಿಯಾಗುವುದರೊಂದಿಗೆ, ಸೋಲು–ಗೆಲುವುಗಳನ್ನು ಸಮಾನ ಮನೋಭಾವದಿಂದ ಸ್ವೀಕರಿಸುವ ಗುಣ ಬೆಳೆಯುತ್ತದೆ ಎಂದು ವಿದ್ಯಾರ್ಥಿನಿಯರಿಗೆ ತಿಳಿಸಿದರು.
ಶಿಕ್ಷಣ ನಿಕಾಯದ ಡೀನ್ ಪ್ರೊ. ಸಕ್ಪಾಲ್ ಹೂವಣ್ಣ ಮಾತನಾಡಿ, ವಿದ್ಯಾರ್ಥಿನಿಯರಿಗೆ ದೈಹಿಕ ಚಟುವಟಿಕೆಗಳ ಮಹತ್ವವನ್ನು ವಿವರಿಸಿದರು. ನಿತ್ಯದ ವ್ಯಾಯಾಮ ಹಾಗೂ ಕ್ರೀಡಾ ಚಟುವಟಿಕೆಗಳಿಂದ ದೈಹಿಕ ಆರೋಗ್ಯ ಮಾತ್ರವಲ್ಲ, ಮಾನಸಿಕ ಶಕ್ತಿ, ಆತ್ಮವಿಶ್ವಾಸ ಮತ್ತು ಶಿಸ್ತು ಕೂಡ ಬೆಳೆಸಿಕೊಳ್ಳಬಹುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಡಾ.ಶ್ರೀನಿವಾಸ, ಡಾ.ಕಿರಣ ಜಿ.ಎನ್, ಪ್ರೊ.ಜ್ಯೋತಿ ಉಪಾದ್ಯೆ, ಡಾ.ರಮೇಶ ಸೋನಕಾಂಬ್ಳೆ, ಡಾ.ವಿಶ್ವನಾಥ ನಡಕಟ್ಟಿ, ಮತ್ತು ಸ್ನಾತಕ, ಸ್ನಾತಕೋತ್ತರ ಹಾಗೂ ಬೊಧಕ ಮತ್ತು ಬೊಧಕೇತರ ಸಿಬ್ಬಂದಿಗಳು ಮತ್ತಿತರಿದ್ದರು. ಕ್ರೀಡಾ ನಿರ್ದೇಶಕ ಪ್ರೊ. ಹನುಮಂತಯ್ಯ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪ್ರೊ.ಜ್ಯೋತಿ ಉಪಾದ್ಯೆಯವರು ನಿರೂಪಿಸಿದರು, ಡಾ.ಕಿರಣ ಜಿ.ಎನ್ ವಂದಿಸಿದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
Friday, August 29, 2025
ರೈತರು ಕೃಷಿಯೊಂದಿಗೆ ಆಹಾರ ಸಂಸ್ಕರಣಾ ಉದ್ದಿಮೆ ಆರಂಭಿಸಿ - ಡಾ.ಆನಂದ.ಕೆ
ವಿಜಯಪುರ : ಕೃಷಿ ಚಟುವಟಿಕೆಯೊಂದಿಗೆ ರೈತರು ಆಹಾರ ಸಂಸ್ಕರಣಾ ಉದ್ದಿಮೆ ಆರಂಭಿಸಲು ಆಸಕ್ತಿ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಆನಂದ.ಕೆ ಹೇಳಿದರು.
ಶುಕ್ರವಾರ ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕೃಷಿ ಇಲಾಖೆ, ಹಾಗೂ ಕೆಪೆಕ್ ಸಂಸ್ಥೆ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆಯ ಯೋಜನೆ ಕುರಿತು ಜಿಲ್ಲಾ ಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಸ್ವಸಹಾಯ ಗುಂಪು ಚಟುವಟಿಕೆಗಳ ಕಾರ್ಯವ್ಯಾಪ್ತಿ ವಿಸ್ತರಿಸುವ ದೃಷ್ಟಿಯಿಂದ ಸಣ್ಣ ಉದ್ದಿಮೆ ಆಹಾರ ಸಂಸ್ಕರಣಾ ಘಟಕಗ¼ನ್ನು ಸ್ಥಾಪಿಸುವ ಮೂಲಕ ಸಿಗುವ ಸಾಲ-ಸೌಲಭ್ಯ ಪಡೆದುಕೊಂಡು ಪ್ರಗತಿ ಸಾಧಿಸುವಂತೆ ತಿಳಿಸಿದ ಅವರು, ಈ ಬಗ್ಗೆ ಸಂಬAಧಿಸಿದ ಇಲಾಖೆಗಳು ಪೂರಕ ಮಾಹಿತಿ ಒದಗಿಸುವಂತೆ ಬ್ಯಾಂಕಗಳು ಅರ್ಹರಿಗೆ ಸಾಲ ಸೌಲಭ್ಯ ಒದಗಿಸಿ ಈ ಯೋಜನೆಯ ಲಾಭ ಅರ್ಹರಿಗೆ ತಲುಪಿಸುವಂತೆ ಅವರು ಹೇಳಿದರು.
ಜಿಲ್ಲೆಯಲ್ಲಿ ದ್ರಾಕ್ಷಿ, ದಾಳಿಂಬೆ, ಲಿಂಬೆ, ಬಿಳಿಜೋಳ ಹಾಗೂ ವಾಣಿಜ್ಯ ಬೆಳೆಗಳು ಸೆರಿದಂತೆ ತೋಟಗಾರಿಕೆ ಬೆಳೆಗಳನ್ನು ಬೆಳೆಯಲಾಗುತ್ತದೆ. ರೈತರು ತಮ್ಮ ವ್ಯವಸಾಯದೊಂದಿಗೆ ಕಿರು ಆಹಾರ ಧಾನ್ಯ ಘಟಕಗಳ ಉದ್ದಿಮೆಗಳನ್ನು ಸ್ಥಾಪಿಸುವ ಮೂಲಕ ಉದ್ದಿಮೆದಾರರಾಗಿ ತಾವುಗಳು ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸಿದ ಅಭಿವೃದ್ಧಿ ಹೊಂದಲು ಸಾಧ್ಯವಿದ್ದು, ಈ ಕುರಿತು ಚಿಂತನೆ ಅಗತ್ಯ ಎಂದು ಅವರು ಹೇಳಿದರು.
ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಔಪಚಾರೀಕರಣ ಯೋಜನೆ ಒಂದು ಉತ್ತಮ ಯೋಜನೆಯಾಗಿದೆ. ಫಲಾನುಭವಿಗಳಿಗೆ ಜಿಲ್ಲೆಯ ರೈತರು, ಸ್ವಸಹಾಯ ಗುಂಪುಗಳು, ವೈಯಕ್ತಿಕ ಉದ್ದಿಮೆದಾರರು, ಮಾಲಿಕತ್ವ ಸಂಸ್ಥೆಗಳು, ಪಾಲುದಾರಿಕೆ ಸಂಸ್ಥೆಗಳು, ಖಾಸಗಿ ಸಂಸ್ಥೆಗಳು, ರೈತ ಉತ್ಪಾದಕ ಸಂಸ್ಥೆಗಳು, ಸರ್ಕಾರೇತರ ಸಂಸ್ಥೆಗಳು ಈ ಯೋಜನೆಯ ಸದುಪಯೋಗ ಪಡಿಸಿಕೊಳ್ಳಬೇಕು ಇದರಿಂದ ರೈತರಿಗೂ, ಬ್ಯಾಂಕುಗಳಿಗೂ ಹಾಗೂ ಮಹಿಳಾ ಸಂಘಗಳಿಗೂ ಅನುಕೂಲವಾಗಲಿದೆ ಎಂದು ಅವರು ತಿಳಿಸಿದರು.
ಬೆಂಗಳೂರಿನ ಕೆಪೆಕ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಸಿ.ಎನ್.ಶಿವಪ್ರಕಾಶ ಮಾತನಾಡಿ 18 ವರ್ಷ ಮೇಲ್ಪಟ್ಟವರು ಈ ಯೋಜನೆಯ ವ್ಯಾಪ್ತಿಗೆ ಬರಲಿದ್ದಾರೆ. ಈ ಯೋಜನೆಗೆ ಯಾವುದೇ ವಿದ್ಯಾರ್ಹತೆ ಅವಶ್ಯಕತೆ ಇಲ್ಲ. ತಾವು ಬೆಳೆದ ಬೆಳೆಗಳÀನ್ನು ಸಂಸ್ಕರಿಸಿ ವಿವಿಧ ಬಗೆಯ ಉತ್ಪನ್ನಗಳನ್ನು ತಯಾರಿಸಿ ಒಂದು ಉದ್ದಿಮೆಯಾಗಿ ಮಾರ್ಪಡಿಸಿದಲ್ಲಿ ಹೆಚ್ಚು ಲಾಭ ಪಡೆಯಬಹುದು. ರಾಜ್ಯದ ಪ್ರತಿಯೊಂದು ಜಿಲ್ಲೆಗಳಲ್ಲಿ ಸಿರಿಧಾನ್ಯ, ಎಣ್ಣೆಗಾಣ, ಬೆಲ್ಲದ ಘಟಕಗಳು, ಮಸಾಲೆ ಪದಾರ್ಥಗಳಂತಹ 3 ರಿಂದ 4 ಕಿರು ಆಹಾರ ಸಂಸ್ಕರಣೆಗಳ ಘಟಕಗಳನ್ನು ಸ್ಥಾಪಿಸುವುದರಿಂದ ಉದ್ಯೋಗ ಲಭಿಸಲಿವೆ. ಆದ್ದರಿಂದ, ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಔಪಚಾರೀಕರಣ ಯೋಜನೆ ಕುರಿತು ಜನರಿಗೆ ಜಾಗೃತಿ ಮೂಡಿಸಬೇಕು ಹಾಗೂ ಪ್ರತಿಯೊಬ್ಬರಿಗೂ ಈ ಯೋಜನೆ ಮಾಹಿತಿ ಲಭಿಸುವಂತಾಗಬೇಕು ಎಂದು ಅವರು ಹೇಳಿದರು.
ಕೃಷಿ ಮಹಾವಿದ್ಯಾಲಯದ ಆಹಾರ ವಿಜ್ಞಾನ ಮತ್ತು ಪೋಷಣೆ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾದ ಡಾ. ಕಾಶಿಬಾಯಿ ಖ್ಯಾಡಗಿ ಮಾತನಾಡಿ, ಜಿಲ್ಲೆಯ ಇಂಡಿ ತಾಲೂಕಿನಾದ್ಯಂತ ರೈತರು ಹೆಚ್ಚು ಲಿಂಬೆ ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದು ಲಿಂಬೆಯಿAದ ಪರ್ಯಾಯವಾಗಿ ಜ್ಯೂಸ್, ಉಪ್ಪಿನಕಾಯಿ ಉಪಉತ್ಪದಾನೆಗಳಲ್ಲಿ ತೊಡಗಿದಲ್ಲಿ ಹೆಚ್ಚು ಆದಾಯ ಮೂಲವಾಗಬಲ್ಲದು ಲಿಂಬೆ ಸಿಪ್ಪೆಗಳಲ್ಲಿ ವೈಜ್ಞಾನಿಕವಾಗಿ ಔಷಧೀಯ ಗುಣ ಹೊಂದಿದ್ದು ಅದರಿಂದ ವಿವಿಧ ಬಗೆಯ ಕ್ಯಾಂಡಿ, ಸ್ವೀಟ ಕ್ಯಾಂಡಿ ಹಾಗೂ ಪೌಡರಗಳನ್ನು ತಯಾರಿಸಬಹುದಾಗಿದೆ. ಇದರಿಂದ ಪೌಷ್ಟಿಕತೆ ಹೆಚ್ಚುತ್ತದೆ ಹಾಗೂ ಮೌಲ್ಯವರ್ಧಿತ ಗುಣಗಳನ್ನು ಹೊಂದಿದೆ. ಯಾವುದೇ ಉತ್ಪನ್ನಗಳನ್ನು ತಯಾರಿಸುವಲ್ಲಿ ಸ್ವಚ್ಚತೆಗೆ ಹೆಚ್ಚು ಗಮನ ನೀಡಬೇಕು ಎಂದು ಅವರು ತಿಳಿಸಿದರು.
ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಿವನಗೌಡ ಪಾಟೀಲ ಮಾತನಾಡಿ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಔಪಚಾರೀಕರಣ ಯೋಜನೆ ಸ್ವಂತ ಉದ್ಯೋಗ ಹೊಂದಲು ಬಹಳ ಅನುಕೂಲವಾಗಲಿದೆ. ರೈತರು ಬೆಳೆದಂತಹ ವಸ್ತುಗಳನ್ನು ಮೌಲ್ಯವರ್ಧನೆ ಮಾಡಿ ಮಾರಾಟ ಮಾಡಿದಲ್ಲಿ ಒಳ್ಳೆಯ ಲಾಭ ಸಿಗಲಿದೆ. ರೈತರು, ಮಹಿಳಾ ಸ್ವಸಹಾಯ ಗುಂಪುಗಳು, ಉದ್ದಿಮೆದಾರರು ಹೆಚ್ಚು ಪಾಲ್ಗೊಳ್ಳುವುದರೊಂದಿಗೆ ಈ ಯೋಜನೆಯ ಲಾಭವನ್ನು ಪಡೆದುಕೊಳ್ಳುವಂತೆ ಅವರು ತಿಳಿಸಿದರು.
ಕಾರ್ಯಕ್ರಮದ ಮುಂಚೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ವಿವಿಧ ಬಗೆಯ ಆಹಾರ ಉತ್ಪನ್ನಗಳ ಮಳಿಗೆಯನ್ನು ವೀಕ್ಷಿಸಿದರು. ಕಾರ್ಯಾಗಾರದಲ್ಲಿ ಕೆಪೆಕ್ ಸಂಸ್ಥೆ ಸಮಾಲೋಚಕರಾದ ವಿಘ್ನೇಶ ಗಾಯತೊಂಡೆ ಯೋಜನೆಗಳ ಕುರಿತು ಮಾಹಿತಿ ನೀಡಿದರು. ಜಿಲ್ಲಾ ಅಗ್ರಣೀಯ ಬ್ಯಾಂಕ ವ್ಯವಸ್ಥಾಪಕರಾದ ಬಿ.ಸಿದ್ದಯ್ಯ ಯೋಜನೆಯಡಿ ಸಾಲ ಸೌಲಭ್ಯಗಳ ಅವಕಾಶಗಳ ಕುರಿತು ವಿವರಣೆ ನೀಡಿದರು. ಉಪ ಕೃಷಿ ನಿರ್ದೇಶಕ ಚಂದ್ರಕಾAತ ಪವಾರ ಸ್ವಾಗತಿಸಿದರು. ಉಪ ಕೃಷಿ ನಿರ್ದೇಶಕರಾದ ಶರಣಗೌಡ ರಂಗನಗೌಡ ವಂದಿಸಿದರು. ಜಿಲ್ಲೆಯ ವಿವಿಧ ಗ್ರಾಮಗಳ ಉದ್ದಿಮೆದಾರರು, ಸ್ವಸಹಾಯ ಗುಂಪಿನ ಸದಸ್ಯರು, ಕೃಷಿ ಇಲಾಖೆಯ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
Thursday, August 28, 2025
ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಹಮ್ಮಿಕೊಂಡ ತರಬೇತಿ ಎಣ್ಣೆಕಾಳು ಉತ್ಪಾದನೆ ಹೆಚ್ಚಳಕ್ಕೆ ಕ್ರಮವಹಿಸಿ
ವಿಜಯಪುರ : ಇತ್ತೀಚೆಗೆ ಎಣ್ಣೆಕಾಳು ಬೆಳೆಗಳ ಉತ್ಪಾದನೆ ಕುಂಠಿತಗೊಳ್ಳುತ್ತಿದ್ದು, ಇವುಗಳ ಉತ್ಪಾದನೆ ಹೆಚ್ಚಳಕ್ಕಾಗಿ ಸರಕಾರದ ವಿಶೇಷ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕೆಂದು ನಿವೃತ್ತ ಸಹ ವಿಸ್ತರಣಾ ನಿರ್ದೇಶಕ ಡಾ. ರವೀಂದ್ರ ಬೆಳ್ಳಿ ಹೇಳಿದರು.
2025-26ನೇ ಸಾಲಿನ ರಾಷ್ಟಿçÃಯ ಖಾದ್ಯತೈಲ ಅಭಿಯಾನ ಎಣ್ಣೆಕಾಳು ಯೋಜನೆ ಅಡಿಯಲ್ಲಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಹಮ್ಮಿಕೊಂಡ ತರಬೇತಿದಾರರ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಎಣ್ಣೆಕಾಳುಗಳನ್ನು ಪ್ರಮುಖವಾಗಿ ಅಡುಗೆಗಾಗಿ, ಸೌದರ್ಯವರ್ದಕವಾಗಿ, ಜೈವಿಕ ಇಂದನ ಉತ್ಪಾದನೆಯಲ್ಲಿ ಬಳಸಲಾಗುತ್ತಿದೆ. ನಮ್ಮ ಪ್ರದೇಶದಲ್ಲಿ ಶೇಂಗಾ, ಸೂರ್ಯಕಾಂತಿ, ಸೋಯಾಬೀನ್ ಅಗಸೆ, ಎಳ್ಳು, ಸಾಸಿವೆ ಇತ್ಯಾದಿ ಬೆಳೆಗಳನ್ನು ಬೆಳೆಯಲಾಗುತ್ತದೆ. ಇವುಗಳು ಹೇರಳ ವಿಟಮನ್, ಖನಿಜಾಂಶ ಹಾಗೂ ಓಮೇಗಾ-3 ಹೊಂದಿದ್ದು, ಪ್ರತಿಯೊಬ್ಬನ ಆರೋಗ್ಯವೃದ್ಧಿಗೆ ಸಹಕಾರಿಯಾಗಲಿದ್ದು, ಕೃಷಿ ಅಧಿಕಾರಿಗಳು ರೈತರಿಗೆ ಈ ಬೆಳೆಗಳನ್ನು ಬೆಳೆಯಲು ಪ್ರೋತ್ಸಾಹಿಸಬೇಕೆಂದರು.
ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಉಪ ಕೃಷಿ ನಿರ್ದೇಶಕ ಡಾ. ಬಾಲರಾಜ ಬಿರಾದಾರ ಮಾತನಾಡಿ, ರೈತರಿಗೆ, ಅಧಿಕಾರಿಗಳಿಗೆ ಕಾಲಕಾಲಕ್ಕೆ ವಿವಿಧ ವಿಷಯಗಳ ಕುರಿತು ಸಾಂಸ್ಥಿಕ ತರಬೇತಿಗಳನ್ನು ಆಯೋಜಿಸಿ, ಅವರ ಜ್ಞಾನ, ಕೌಶಲ್ಯ ವೃದ್ಧಿಸಲಾಗುತ್ತಿದೆ. ಈ ಸಲ ಹವಾಮಾನ ವೈಪರೀತ್ಯದಿಂದಾಗಿ ವಿವಿಧ ಬೆಳೆಗಳಲ್ಲಿ ಇಳುವರಿಯಲ್ಲಿ ವ್ಯತ್ಯಾಸವಾಗಿದೆ. ಎಣ್ಣೆಕಾಳು ಯೋಜನೆಯಡಿಯಲ್ಲಿ ಸೂರ್ಯಕಾಂತಿ ಬೆಳೆಯ ಪ್ರದೇಶ ಹೆಚ್ಚಳವಾಗಿದ್ದು, ಇದರ ಉತ್ಪಾದನೆ, ಕೀಟರೋಗ ಹತೋಟಿ ಕುರಿತು ಸಮಗ್ರ ಮಾಹಿತಿ ನೀಡಲಾಗುತ್ತಿದೆ ಎಂದರು.
ಕ್ರಿಬ್ಕೋ ಸಂಸ್ಥೆಯ ಬಾಬು ಎ. ಜಿ. ಮಾತನಾಡಿ, ವಿವಿಧ ಎಣ್ಣೆಕಾಳು ಬೆಳೆಗಳಲ್ಲಿ ರಸಗೊಬ್ಬರ ಬಳಕೆ, ಪೋಷಕಾಂಶ ನಿರ್ವಹಣೆ ಮಾಡಬೇಕು. ಪ್ರಸಕ್ತ ಸಂದರ್ಭದಲ್ಲಿ ರಸಗೊಬ್ಬರ ಬೆಲೆ ಏರಿಕೆಯಾಗಿದ್ದು, ಪರ್ಯಾಯ ರಸಗೊಬ್ಬರ ಬಳಕೆ ಮಹತ್ವ ಕುರಿತು ಮಾಹಿತಿ ನೀಡಿದರು.
ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ. ಎಸ್. ಎಂ. ವಸ್ತçದ, ಎಣ್ಣೆಕಾಳು ಬೆಳೆಗಳ ಸಮಗ್ರರೋಗ ನಿರ್ವಹಣೆ, ಡಾ. ಶಿಲ್ಪಾ ಚೋಗಟಾಪೂರ ಎಣ್ಣೆಕಾಳು ಬೇಸಾಯ ಕ್ರಮಗಳು, ಡಾ. ಎಸ್. ಎಸ್. ಕರಬಂಟನಾಳ ಎಣ್ಣೆಕಾಳು ಬೆಳೆಗಳಿಗೆ ತಗಲುವ ವಿವಿಧ ಕೀಟ ಹತೋಟಿ ಕುರಿತು ಉಪನ್ಯಾಸ ನೀಡಿದರು. ತರಬೇತಿಯಲಿ, ಡಾ. ಶ್ರೀಕಾಂತ ಚವ್ಹಾಣ, ಕೃಷಿ ಅಧಿಕಾರಿಗಳಾದ ಗೀತಾ ಭಜಂತ್ರಿ, ಲಕ್ಷಿö್ಮÃ ಕಾಮಗೊಂಡ, ವೆಂಕನಗೌಡ ಪಾಟೀಲ, ತಮಗೊಂಡ, ಸೋಮನಗೌಡ ಬಿರಾದಾರ, ಶಿಲ್ಪಾ, ಜಯಪ್ರದಾ ದಶವಂತ, ತಹಜೀಬ, ಶಹಾನನವಾಜ್ ಸೇರಿದಂತೆ ಜಿಲ್ಲೆಯ ಕೃಷಿ ಅಧಿಕಾರಿಗಳು, ರೈತ ಭಾಂದವರು ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
ಖಾಯಂ ಜನತಾ ನ್ಯಾಯಾಲಯದ ವಿಶೇಷ ಅಭಿಯಾನಕ್ಕೆ ಚಾಲನೆ ಖಾಯಂ ಜನತಾ ನ್ಯಾಯಾಲಯದ ಸದುಪಯೋಗಕ್ಕೆ ನ್ಯಾಯಾಧೀಶ ಹರೀಶ ಕರೆ
ವಿಜಯಪುರ : ಖಾಯಂ ಜನತಾ ನ್ಯಾಯಾಲಯದ ಸದುಪಯೋಗ ಪಡೆದುಕೊಂಡು ನೆಮ್ಮದಿ ಜೀವನ ನಡೆಸುವಂತೆ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಹರೀಶ ಎ.ಕರೆ ನೀಡಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವಿಜಯಪುರ, ಖಾಯಂ ಜನತಾ ನ್ಯಾಯಾಲಯ ಕಲ್ಬುರ್ಗಿ, ಜಿಲ್ಲಾ ನ್ಯಾಯಾಂಗ ಇಲಾಖೆ, ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಇವರ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡ ಖಾಯಂ ಜನತಾ ನ್ಯಾಯಾಲಯದ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಖಾಯಂ ಜನತಾ ನ್ಯಾಯಾಲಯ ಮುಖ್ಯವಾಗಿ ಸಾರ್ವಜನಿಕ ಉಪಯುಕ್ತ ಸೇವೆಗಳಿಗೆ, ವಿವಾದಗಳನ್ನು ಹಾಗೂ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಖಾಯಂ ಜನತಾ ನ್ಯಾಯಾಲಯ ಪ್ರಮುಖ ಪಾತ್ರ ವಹಿಸುತ್ತದೆ. ಪ್ರಯಾಣಿಕರನ್ನು ಅಥವಾ ಸರಕು ಸಾಗಾಣೆ ಮಾಡುವ ಭೂಸಾರಿಗೆ, ಜಲಸಾರಿಗೆ ಹಾಗೂ ವಾಯು ಸಾರಿಗೆ ಸೇವೆಗಳು, ಅಂಚೆ, ತಂತಿ ಹಾಗೂ ದೂರವಾಣಿ ಸೇವೆಗಳು, ವಿದ್ಯುತ್, ಬೆಳಕು, ನೀರು ಸರಬರಾಜು ಮಾಡುವ ಯಾವುದೇ ಸಂಸ್ಥೆಗಳ ಸೇವೆಗಳ, ಸಾರ್ವಜನಿಕ ನೈರ್ಮಲ್ಯ ವ್ಯವಸ್ಥೆ, ಚರಂಡಿ ವ್ಯವಸ್ಥೆ ಕಾರ್ಯಗಳು ವಿಮಾ ಸೇವೆಗಳು, ಆಸ್ಪತ್ರೆ ಅಥವಾ ಔಷಧಾಲಯ ಸೇವೆಗಳು, ಬ್ಯಾಂಕ್ ಸೇರಿದಂತೆ ಹಣಕಾಸು ಸಂಸ್ಥೆಗಳಿಗೆ ಸಂಬAಧಪಟ್ಟ ಪ್ರಕರಣಗಳು, ಶಿಕ್ಷಣ ಮತ್ತು ಶಿಕ್ಷಣ ಸಂಸ್ಥೆಗಳಿಗೆ ಸಂಬAಧಿಸಿದ ಸೇವೆಗಳು, ಗೃಹ ಮತ್ತು ರಿಯಲ್ ಎಸ್ಟೇಟ್ ಸಂಬAಧಪಟ್ಟ ಸೇವೆಗಳಲ್ಲಿ ಯಾವುದೇ ಸಮಸ್ಯೆಗಳಿದ್ದಲ್ಲಿ ಅರ್ಜಿಯನ್ನು ನೇರವಾಗಿ ಅಥವಾ ವಕೀಲರ ಮೂಲಕ ಖಾಯಂ ನ್ಯಾಯಾಲಯಕ್ಕೆ ಸಲ್ಲಿಸಿ ಯಾವುದೇ ಶುಲ್ಕವಿಲ್ಲದೇ ಪರಿಹಾರ ಕಂಡು ಕೊಳ್ಳಬಹುದಾಗಿದೆ ಎಂದು ಅವರು ಹೇಳಿದರು.
ರಾಜ್ಯದಲ್ಲಿ ಒಟ್ಟು 6 ಖಾಯಂ ಜನತಾ ನ್ಯಾಯಾಲಯಗಳಿದ್ದು, ಜಿಲ್ಲೆಯು ಕಲ್ಬುರ್ಗಿಯ ಖಾಯಂ ಜನತಾ ನ್ಯಾಯಾಲಯಕ್ಕೆ ಒಳಪಡುತ್ತದೆ. ಕಲ್ಬುರ್ಗಿ ವ್ಯಾಪ್ತಿಯಲ್ಲಿ ಕಲ್ಬುರ್ಗಿ, ಬೀದರ, ರಾಯಚೂರು, ಯಾದಗಿರ ಹಾಗೂ ವಿಜಯಪುರ ಜಿಲ್ಲೆ ಒಳಪಡುತ್ತದೆ. ಜನತಾ ನ್ಯಾಯಾಲಯದಲ್ಲಿ ಒಂದು ಕೋಟಿ ರೂ. ಒಳಗಿನ ವ್ಯಾಜ್ಯಗಳ ಪ್ರಕರಣಗಳನ್ನು ಸಮಸ್ಯೆಗಳನ್ನು ದಾಖಲಿಸಬಹುದಾಗಿದೆ. ಪ್ರಕರಣಗಳನ್ನು ದಾಖಲು ಮಾಡುವ ಅರ್ಜಿದಾರರಿಗೆ ಯಾವುದೇ ಆದಾಯಮಿತಿ ಇರುವುದಿಲ್ಲ. ಜನತಾ ನ್ಯಾಯಾಲಯದಲ್ಲಿ ದಾಖಲಿಸುವ ಪ್ರಕರಣ ಬೇರೆ ಯಾವುದೇ ನ್ಯಾಯಾಲಯಗಳಲ್ಲಿ ದಾವೆ ಅಥವಾ ಪ್ರಕರಣ ಹೂಡಿರಬಾರದು. ಖಾಯಂ ಜನತಾ ನ್ಯಾಯಾಲಯ ನೀಡುವ ತೀರ್ಪು ಯಾವುದೇ ಸಿವ್ಹಿಲ್ ಅಥವಾ ಜಿಲ್ಲಾ ನ್ಯಾಯಾಲಯದಲ್ಲಿ ಪ್ರಶ್ನಿಸುವ ಅವಕಾಶವಿರುವುದಿಲ್ಲ. ಆದ್ಯಾಗ್ಯೂ ಉಚ್ಛನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸುವ ಮೂಲಕ ತೀರ್ಪನ್ನು ಪ್ರಶ್ನಿಸಬಹುದಾಗಿದೆ ಎಂದು ಅವರು ಹೇಳಿದರು.
ಖಾಯಂ ಜನತಾ ನ್ಯಾಯಾಲಯದಲ್ಲಿ ಸಲ್ಲಿಸಿದ ಪ್ರಕರಣಗಳಿಗೆ ಸಂಬAಧಿಸಿದAತೆ ಉಭಯ ಪಕ್ಷಿದಾರರಿಗೆ ಮನವೊಲಿಸಿ ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಪಡಿಸಲು ಪ್ರಯತ್ನಿಸಲಾಗುತ್ತದೆ. ಆದ್ಯಾಗ್ಯೂ ಉಭಯ ಪಕ್ಷಗಾರರು ಒಪ್ಪದೇ ಇದ್ದ ಸಂದರ್ಭದಲ್ಲಿ ಖಾಯಂ ಜನತಾ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ ಕಾನೂನಿನ್ವಯ ತ್ವರಿತವಾಗಿ ಪ್ರಕರಣ ಇತ್ಯರ್ಥಪಡಿಸಲು ಖಾಯಂ ಜನತಾ ನ್ಯಾಯಾಲಯದಿಂದ ತೀರ್ಪು ನೀಡಲಾಗುತ್ತದೆ. ಆದ್ದರಿಂದ ಸಾರ್ವಜನಿಕರು ಈ ಖಾಯಂ ಜನತಾ ನ್ಯಾಯಾಲಯದ ಸದುಪಯೋಗ ಪಡೆದುಕೊಂಡು ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡು ನೆಮ್ಮದಿ ಜೀವನಕ್ಕೆ ಮುಂದಾಗುವAತೆ ಅವರು ಕರೆ ನೀಡಿದರು.
ಜಿಲ್ಲೆಯ ವಕೀಲರ ಸತತ ಪರಿಶ್ರಮದಿಂದಾಗಿ ಜಿಲ್ಲೆಯಲ್ಲಿ ಖಾಯಂತ ಜನತಾ ನ್ಯಾಯಾಲಯ ನಿರ್ವಹಿಸಲಾಗುತ್ತಿದ್ದು, ರೈತರಿಗೆ, ಸಾಮಾನ್ಯ ಜನರಿಗೆ ಈ ಖಾಯಂ ಜನತಾ ನ್ಯಾಯಾಲಯ ಅತ್ಯುಪಯುಕ್ತವಾಗಿದೆ. ಅಧಿಕಾರಿಗಳು ತಮ್ಮ ಹಂತದ ನಗರ ಸ್ಥಳೀಯ ಸಂಸ್ಥೆಗಳು, ಗ್ರಾಮ ಪಂಚಾಯತ್ ಮಟ್ಟದಲ್ಲಿ ಈ ಕುರಿತು ಹೆಚ್ಚಿನ ಜಾಗೃತಿ ಮೂಡಿಸಿ ಜನರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಪ್ರೇರೆಪಣೆ ಹಾಗೂ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದು ಅವರು ಹೇಳಿದರು.
ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಮಾತನಾಡಿ, ಪ್ರಕರಣ ವ್ಯಾಜ್ಯಗಳಿಗೆ ಸಂಬAಧಿಸಿದAತೆ ಸಾರ್ವಜನಿಕರು ಯಾವುದೇ ಭಯವಿಲ್ಲದೇ ತಮ್ಮ ಸಮಸ್ಯೆಗಳನ್ನು ನಿವಾರಿಸಿಕೊಳ್ಳಲು ಖಾಯಂ ಜನತಾ ನ್ಯಾಯಾಲಯ ವೇದಿಕೆಯಾಗಿದೆ. ಜನರು ನೇರವಾಗಿ ಅಥವಾ ವಕೀಲರ ಮೂಲಕ ನ್ಯಾಯಾಲಯಕ್ಕೆ ಹೋಗಿ ತಮ್ಮ ಪ್ರಕರಣಗಳನ್ನು ದಾಖಲಿಸಿ ಪರಿಹರಿಸಿಕೊಳ್ಳಬಹುದಾಗಿದೆ. ಖಾಯಂ ಜನತಾ ನ್ಯಾಯಾಲಯದಿಂದ ಶೀಘ್ರವೇ ಪ್ರಕರಣವನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದ್ದು, ಈ ಕುರಿತು ಜಿಲ್ಲೆಯ ವಿವಿಧ ತಾಲೂಕಾ, ಗ್ರಾಮ ಪಂಚಾಯತ್ ಮಟ್ಟದಲ್ಲಿ ನ್ಯಾಯಬೆಲೆ ಅಂಗಡಿಗಳಲ್ಲಿ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಜಾಗೃತಿ ಮೂಡಿಸಿ ಜಿಲ್ಲೆಯ ಜನರು ಸದುಪಯೋಗ ಪಡೆದುಕೊಳ್ಳುವಂತೆ ಅವರು ಹೇಳಿದರು.
ಕಲ್ಬುರ್ಗಿಯ ಖಾಯಂ ಜನತಾ ನ್ಯಾಯಾಲಯದ ಅಧ್ಯಕ್ಷರೂ ಆದ ಜಿಲ್ಲಾ ನ್ಯಾಯಾಧೀಶ ಎಸ್.ಎಲ್. ಚವ್ಹಾಣ ಅವರು ಮಾತನಾಡಿ, ಜಿಲ್ಲೆಯಲ್ಲಿ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ನ್ಯಾಯವಾದಿಗಳ ಸಹಯೋಗದಲ್ಲಿ ಪ್ರತಿ ತಿಂಗಳೂ ಜನತಾ ನ್ಯಾಯಾಲಯ ನಡೆಸಲಾಗುತ್ತದೆ. 1987ರ ಕಾನೂನು ಸೇವೆಗಳ ಪ್ರಾಧಿಕಾರದ ಕಾಯ್ದೆಯನ್ನು 2007ರಲ್ಲಿ ತಿದ್ದುಪಡಿ ಮಾಡಿದ ನಂತರ 2007ರಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ಬೆಂಗಳೂರ, ಬೆಳಗಾವಿ, ಧಾರವಾಡ, ಕಲ್ಬುರ್ಗಿ, ಮಂಗಳೂರು ಮತ್ತು ಮೈಸೂರಿನಲ್ಲಿ ಖಾಯಂ ಜನತಾ ನ್ಯಾಯಾಲಯಗಳನ್ನು ಸ್ಥಾಪಿಸಿದೆ ಎಂದು ಅವರು ಹೇಳಿದರು.
ಹಿರಿಯ ಸಿವ್ಹಿಲ್ ನ್ಯಾಯಾಧೀಶರಾದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಹಾಗರಗಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ,ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಡಿ.ಜಿ.ಬಿರಾದಾರ, ಕಲ್ಬುರ್ಗಿ ಖಾಯಂ ಜನತಾ ನ್ಯಾಯಾಲಯದ ಸದಸ್ಯರಾದ ವಿಜಯ ವಿಠ್ಠಲ, ಜಿ.ಪಂ. ಉಪಕಾರ್ಯದರ್ಶಿ ವಿಜಯಕುಮಾರ ಆಜೂರ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಬಿ.ಸಿದ್ಧಯ್ಯ, ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು, ಜಿಲ್ಲಾ ನ್ಯಾಯವಾದಿಗಳ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
ದಾಖಲೆಗಳಿಂದ ದಿಟ್ಟ ಹೆಜ್ಜೆ: ರಾಷ್ಟ್ರ ಮಟ್ಟದಲ್ಲಿ 30ನೇ ಸ್ಥಾನ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ ನಿರಂತರ ಪ್ರಗತಿ
ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ
ವಿಜಯಪುರ : ೧೦೬ ವರ್ಷಗಳ ಇತಿಹಾಸವುಳ್ಳ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ರೈತರಿಗೆ ಆರ್ಥಿಕ ಬಲ ತುಂಬುವ ಜೊತೆಗೆ ಲಾಭಾಂಶ ಗಳಿಸುವ ಮೂಲಕ ದಾಪುಗಾಲು ಇರಿಸುತ್ತಿದ್ದು, ಈ ಎಲ್ಲ ಸಾಧನೆಗಳ ಜೊತೆಗೆ ರಾಷ್ಟçಮಟ್ಟದ ಟಾಪ್ ೩೦ಯಲ್ಲಿ ವಿವಿಧ ವಿಭಾಗಗಳಲ್ಲಿ ಅಗ್ರಸ್ಥಾನ ಪಡೆದುಕೊಂಡಿದೆ ಎಂದು ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರೂ ಆಗಿರುವ ಸಚಿವ ಶಿವಾನಂದ ಪಾಟೀಲ ಪ್ರಕಟಿಸಿದರು.
ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ಹಂಚಿಕೊAಡ ಅವರು, ರಾಷ್ಟçದಲ್ಲಿ ೩೫೧ ಕೇಂದ್ರ ಸಹಕಾರಿ ಬ್ಯಾಂಕುಗಳು ಕಾರ್ಯನಿರ್ವಹಿಸುತ್ತಿದ್ದು ಆ ಪೈಕಿ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕು ವಿವಿಧ ವಿಭಾಗಗಳಲ್ಲಿ ಟಾಪ್ ೩೦ ರಲ್ಲಿ ಸ್ಥಾನ ಪಡೆದುಕೊಂಡಿದೆ. ಠೇವಣಿ ವಿಭಾಗದಲ್ಲಿ ರಾಷ್ಟçಮಟ್ಟದಲ್ಲಿ ೨೭ ನೇ ಸ್ಥಾನ ಪಡೆದರೆ, ರಾಜ್ಯ ಮಟ್ಟದಲ್ಲಿ ನಾಲ್ಕನೇಯ ಸ್ಥಾನ, ಸಾಲ ಹಾಗೂ ಸಾಲ ಬಾಕಿ ವಸೂಲಾತಿಯಲ್ಲಿ ರಾಷ್ಟçಮಟ್ಟದಲ್ಲಿ ೨೭ ನೇ ಸ್ಥಾನ ಹಾಗೂ ರಾಜ್ಯಮಟ್ಟದಲ್ಲಿ ೫ ನೇ ಸ್ಥಾನ, ಒಟ್ಟು ವ್ಯವಹಾರ ವಿಭಾಗದಲ್ಲಿ ರಾಷ್ಟçಮಟ್ಟದಲ್ಲಿ ೨೧ ನೇ ಹಾಗೂ ರಾಜ್ಯದಲ್ಲಿ ೪ ನೇ ಸ್ಥಾನ ಹಾಗೂ ದುಡಿಯುವ ಬಂಡವಾಳ ಹೊಂದಿರುವ ವಿಭಾಗದಲ್ಲಿ ರಾಷ್ಟçಮಟ್ಟದಲ್ಲಿ ೨೮ ಹಾಗೂ ರಾಜ್ಯಮಟ್ಟದಲ್ಲಿ ನಾಲ್ಕನೇಯ ಸ್ಥಾನ ಪಡೆದುಕೊಂಡಿದೆ ಎಂದರು.
ಕೋ-ಆಪರೇಟಿವ್-ತರಬೇತಿಗೆ ಕಾರ್ಪೋರೇಟ್ ಟಚ್:
ಉತ್ತರ ಕರ್ನಾಟಕದಲ್ಲಿಯೇ ಸಹಕಾರ ಸಂಘಗಳ ಸಿಇಓ ಹಾಗೂ ವಲಯದಲ್ಲಿ ತೊಡಗಿಸಿಕೊಂಡವರಿಗೆ ಅತ್ಯಾಧುನಿಕ ರೀತಿಯ ತರಬೇತಿ ನೀಡುವ ಮಹತ್ವದ ಯೋಜನೆಯನ್ನು ವಿಜಯಪುರ ಜಿಲ್ಲಾ ಕೇಂದ್ರ ಡಿಸಿಸಿ ಬ್ಯಾಂಕ್ ಮುಂದಾಗಿದ್ದು, ೮೦ ಕೋಟಿ ರೂ. ಒಟ್ಟು ಯೋಜನಾ ವೆಚ್ಚದಲ್ಲಿ ಅತ್ಯಾಧುನಿಕ ಕಾರ್ಪೋರೇಟ್ ಶೈಲಿಯ ತರಬೇತಿ ಕೇಂದ್ರ ಕಾರ್ಯಾರಂಭಕ್ಕೆ ಮುಂದಾಗಿರುವ ವಿಷಯವನ್ನು ಸಚಿವ ಶಿವಾನಂದ ಪಾಟೀಲ ಪ್ರಕಟಿಸಿದರು.
ಪಿಪಿಪಿ ಮೂಲಕ ಉದ್ದೇಶಿತ ಕಟ್ಟಡದ ಕಾರ್ಯವೈಖರಿ, ಸ್ವರೂಪವನ್ನು ಪ್ರದರ್ಶಿಸಿದ ಅವರು, ಕಾರ್ಪೋರೇಟ್ ಮಾದರಿಯಲ್ಲಿ ಅತ್ಯಾಧುನಿಕ ವರ್ಕ್ ಸ್ಟೇಷನ್, ೨೫೦೦ ಸಾವಿರಕ್ಕೂ ಹೆಚ್ಚು ಜನರಿಗೆ ಏಕಕಾಲಕ್ಕೆ ತರಬೇತಿ ನೀಡಲು ಅನುಕೂಲವಾಗುವ ನಿಟ್ಟಿನಲ್ಲಿ ಈ ದೊಡ್ಡ ಯೋಜನೆಯನ್ನು ರೂಪಿಸಲಾಗಿದ್ದು, ಉತ್ತರ ಕರ್ನಾಟದಲ್ಲಿಯೇ ಈ ತರಬೇತಿ ಕೇಂದ್ರ ಪ್ರಥಮ ಹಾಗೂ ಏಕೈಕವಾಗಲಿದೆ ಎಂದರು.
ತೋಟದ ಮನೆ ನಿರ್ಮಾಣಕ್ಕೆ ರಾಜ್ಯದಲ್ಲಿಯೇ ಹೊಸ ಸಾಲ ವ್ಯವಸ್ಥೆ:
ರೈತರು ತೋಟದ ಮನೆ ನಿರ್ಮಾಣಕ್ಕೆ ಸಾಲ ನೀಡುವ ವ್ಯವಸ್ಥೆಯನ್ನು ವಿಜಯಪುರ ಡಿಸಿಸಿ ಬ್ಯಾಂಕ್ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಜಾರಿಗೆ ತಂದಿದೆ. ಈ ಯೋಜನೆಯಡಿಯಲ್ಲಿ ರೈತರು ಸ್ವಂತ ಕೃಷಿ ಭೂಮಿಯಲ್ಲಿ ತಓಟದ ಮನೆ ನಿರ್ಮಿಸಿಕೊಳ್ಳಲು ಶೇ.೧೦ ರಷ್ಟು ಬಡ್ಡಿದರದಲ್ಲಿ ೨೦ ಲಕ್ಷ ರೂ.ವರೆಗೆ ಸಾಲ ನೀಡಲು ನಿರ್ಧರಿಸಲಾಗಿದೆ. ಈ ಸಾಲ ಪಡೆದುಕೊಳ್ಳಲು ಎನ್.ಎ. ಸರ್ಟಿಫಿಕೇಟ್ ಬೇಕಾಗಿಲ್ಲ, ರೈತರು ತಮ್ಮ ಜಮೀನುಗಳಲ್ಲಿಯೇ ವಾಸ್ತವ್ಯ ಮಾಡುವುದರಿಂದ ಕೃಷಿಗೆ ಹೆಚ್ಚಿನ ಸಮಯ ಕೊಡಲು ಅನುಕೂಲವಾಗುತ್ತದೆ, ಹೀಗಾಗಿಯೇ ರಾಜ್ಯದಲ್ಲಿಯೇ ಈ ರೀತಿ ಸಾಲ ಕೊಡುವ ಯೋಜನೆಯನ್ನು ಪ್ರಥಮ ಬಾರಿಗೆ ಜಾರಿಗೆ ತರಲಾಗಿದೆ ಎಂದರು.
27 ವರ್ಷಗಳಿಂದ ಅಧ್ಯಕ್ಷ ಹೊಸ ದಾಖಲೆ:
ಈ ಎಲ್ಲ ದಾಖಲೆಗಳ ಜೊತೆಗೆ ಸಹಕಾರಿ ರಂಗದ ದಿಗ್ಗಜ ಪಿ.ಎಂ. ನಾಡಗೌಡರು ೨೫ ವರ್ಷ ೦೯ ತಿಂಗಳು ಕಾಲ ಡಿಸಿಸಿ ಬ್ಯಾಂಕ್ ಕರ್ಣಧಾರತ್ವವನ್ನು ವಹಿಸಿದ್ದರೆ, ಈಗ ೨೭ ವರ್ಷಗಳ ಕಾಲ ಅಧ್ಯಕ್ಷರಾಗಿರುವ ಶಿವಾನಂದ ಪಾಟೀಲರು ಹೊಸ ದಾಖಲೆ ಬರೆದಿದ್ದಾರೆ.
ರಾಜ್ಯದಲ್ಲಿಯೇ ಗರಿಷ್ಠ ಕೃಷಿ ಸಾಲ ನೀಡಿದ ಪ್ರಥಮ ಮೂರು ಬ್ಯಾಂಕುಗಳಲ್ಲಿಯೂ ವಿಡಿಸಿಸಿ ಸ್ಥಾನ ಪಡೆದಿದ್ದು, ೨೦೦೮ ಕೋಟಿ ರೂ. ಕೃಷಿ ಸಾಲ ನೀಡುವ ಮೂಲಕ ರಾಜ್ಯದಲ್ಲಿಯೇ ಅತೀ ಹೆಚ್ಚು ಕೃಷಿ ಸಾಲ ನೀಡಿದ ಮೂರನೇಯ ಬ್ಯಾಂಕ ಪಟ್ಟಿಯಲ್ಲಿದೆ.
ವಿಡಿಸಿಸಿ ಬ್ಯಾಂಕ್ ಆರ್ಥಿಕ ವರ್ಷದಲ್ಲಿ ೨೫.೧೮ ಕೋಟಿ ರೂ. ನಿವ್ವಳ ಲಾಭ:
ವಿಜಯಪುರ : ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರಸಕ್ತ ರ್ಥಿಕ ರ್ಷದಲ್ಲಿ ೨೫.೧೮ ಕೋಟಿ ರೂ. ನಿವ್ವಳ ಲಾಭ ಗಳಿಸಿದೆ ಎಂದು ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರೂ ಆಗಿರುವ ಜವಳಿ, ಸಕ್ಕರ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಟಕಟ್ಟೆ ಸಚಿವ ರಾದ ಶಿವಾನಂದ ಪಾಟೀಲ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸಕ್ತ ರ್ಷ ಬ್ಯಾಂಕು ಗಳಿಸಿರುವ ನಿವ್ವಳ ಲಾಭದ ಪ್ರಮಾಣ ಬ್ಯಾಂಕಿನ ಇತಿಹಾಸದಲ್ಲಿಯೇ ಗರಿಷ್ಠವಾಗಿದ್ದು, ವಾಸ್ತವವಾಗಿ ಬ್ಯಾಂಕು ೩೩.೭೧ ಕೋಟಿ ರೂ. ಲಾಭ ಗಳಿಸಿದ್ದು, ಅದರಲ್ಲಿ ೮.೫೩ ಕೋಟಿ ರೂ. ತೆರಿಗೆ ಪಾವತಿ ಮಾಡುವ ಮೂಲಕ ೨೫.೧೮ ಕೋಟಿ ರೂ. ನಿವ್ವಳ ಲಾಭಗಳಿಸಿದಂತಾಗಿದೆ ಎಂದರು.
ಪ್ರಸಕ್ತ ರ್ಥಿಕ ರ್ಷದ ಮರ್ಚ್ ಮಾಸಾಂತ್ಯದ ಅಂಕಿ-ಅಂಶಗಳನ್ನು ಅವಲೋಕಿಸಿದಾಗ ಬ್ಯಾಂಕು ೧೮೫.೪೦ ಕೋಟಿ ರೂ. ಷೇರು, ೪೧೨.೩೬ ಕೋಟಿ ರೂ. ನಿಧಿಗಳು, ೩೮೧೪.೧೬ ಕೋಟಿ ರೂ. ಠೇವು, ೪೯೦೧ ಕೋಟಿ ರೂ. ದುಡಿಯುವ ಬಂಡವಾಳ, ೧೬೮ ಕೋಟಿ ರೂ. ಸಾಲದ ಬಾಕಿ ಹೊಂದಿದೆ ಎಂದು ವಿವರಿಸಿದರು.
ಸ್ವಂತ ಬಂಡವಾಳ ಪ್ರಮಾಣದಲ್ಲಿಯೂ ಏರಿಕೆಯಾಗಿದ್ದು, ಕಳೆದ ರ್ಷ ೫೪೦ ಕೋಟಿ ರೂ. ಇದ್ದ ಸ್ವಂತ ಬಂಡವಾಳ ಪ್ರಸಕ್ತ ರ್ಷದಲ್ಲಿ ೫೯೮ ಕೋಟಿ ರೂ.ಗೆ ಏರಿಕೆಯಾಗಿದ್ದು, ಠೇವಣಿ ಪ್ರಮಾಣ ೩೪೯೫ ಕೋಟಿ ರೂ.ಗಳಿಂದ ೩೮೧೪ ಕೋಟಿ ರೂ.ಗಳಷ್ಟು ಏರಿಕೆ, ದುಡಿಯುವ ಬಂಡವಾಳ ಪ್ರಮಾಣ ೪೭೦೧ ಕೋಟಿ ರೂ.ಗಳಿಂದ ೪೯೦೨ ಕೋಟಿ ರೂ ಅಂದರೆ ೨೦೧ ಕೋಟಿ ರೂ. ಏರಿಕೆಯಾಗಿರುವ ವಿಷಯವನ್ನು ಸಚಿವ ಶಿವಾನಂದ ಪಾಟೀಲ ಹಂಚಿಕೊಂಡರು. ಕೃಷಿ ಚಟುವಟಿಕೆಗಳಿಗಾಗಿ ೧೮೬೪ ಕೋಟಿ ರೂ. ಕೃಷಿಯೇತರ ಸಾಲವಾಗಿ ೧೧೦೬ ಕೋಟಿ ರೂ. ಸೇರಿದಂತೆ ಒಟ್ಟು ೨೯೭೦ ಕೋಟಿ ರೂ. ಸಾಲ ವಿತರಿಸಲಾಗಿದೆ ಎಂದರು.
ವಹಿವಾಟು ಪ್ರಮಾಣದಲ್ಲಿ ದಾಖಲೆ ಏರಿಕೆ:
೧೨೩೩ ಕೋಟಿ ರೂ,.ಗಳ ಹೆಚ್ಚುವರಿ ಸಂಪನ್ಮೂಲವನ್ನು ಶಾಸನಬದ್ಧ ಹಾಗೂ ಇತರ ಬ್ಯಾಂಕುಗಳಲ್ಲಿ ಲಾಭದಾಯಕವಾಗಿ ಹೂಡಿಕೆ ಮಾಡಲಾಗಿದೆ, ಕಳೆದ ರ್ಷ ೬೬೦೭ ಕೋಟಿ ರೂ. ವಹಿವಾಟು ನಡೆಸಿದ್ದು ಬ್ಯಾಂಕು ಈ ರ್ಷ ೭೦೯೫ ಕೋಟಿ ರೂ. ವಹಿವಾಟು ನಡೆಸಿದ್ದು, ವಹಿವಾಟು ಪ್ರಮಾಣದಲ್ಲಿ ೪೮೮ ಕೋಟಿ ರೂ. ಏರಿಕೆಯಾಗಿದೆ ಎಂದರು.
ಶಿವಾನಂದ ಪಾಟೀಲರ ಅವಧಿಯಲ್ಲಿ ೨೩೩ ಕೋಟಿ ರೂ.ಲಾಭ:
ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಸಚಿವ ಶಿವಾನಂದ ಪಾಟೀಲರು ಅಧಿಕಾರ ಸ್ವೀಕರಿಸಿದ ಅವಧಿಯಿಂದ ಇಲ್ಲಿಯವರೆಗೂ ಬ್ಯಾಂಕು ಲಾಭದತ್ತ ಮುನ್ನಡೆಯುತ್ತಿದೆ, ಇದಕ್ಕೆ ಎಲ್ಲ ರೈತ ಬಂಧುಗಳು, ಆಡಳಿತ ಮಂಡಳಿ, ಸಿಬ್ಬಂದಿಯ ಸಹಕಾರವೇ ಕಾರಣ ಎಂದ ಅವರು ಬ್ಯಾಂಕಿನ ಒಟ್ಟು ಲಾಭಕ್ಕೆ ನನ್ನ ಅವಧಿಯಲ್ಲಿ ಆಗಿರುವ ಲಾಭದ ಪ್ರಮಾಣ ಶೇ. ೯೭.೪೪ ರಷ್ಟು ಸೇರಿದೆ ಎಂದು ಸಂತಸ ಹಂಚಿಕೊಂಡರು.
೧೯೯೭ ರಿಂದ ಇಲ್ಲಿಯವರೆಗೆ ವಿಭಜನೆ ಪರ್ವದಲ್ಲಿ ೩೩.೨೬ ಕೋಟಿ ರೂ. ಲಾಭ ಗಳಿಸಿದ್ದರೆ ವಿಭಜನೆ ನಂತರ ೨೦೦೩ ರಿಂದ ೨೦೨೫ ರವರೆಗೆ ಒಟ್ಟು ೨೦೦.೪೨ ಕೋಟಿ ರೂ. ಸೇರಿದಂತೆ ಒಟ್ಟು ೨೩೩.೬೮ ಕೋಟಿ ರೂ. ಲಾಭ ಗಳಿಸಿದೆ.
ಪುರ್ಧನಕ್ಕಾಗಿ ಕೇಂದ್ರಕ್ಕೆ ಒತ್ತಾಯಿಸಿ:
ಡಿಸಿಸಿ ಬ್ಯಾಂಕುಗಳು ಷೆಡ್ಯೂಲ್ಡ್ ಬ್ಯಾಂಕ್ ಆಗಲು ಎಲ್ಲ ರ್ಹತೆ ಹೊಂದಿವೆ, ಆದರೆ ಆರ್ಬಿಐ ನಿಯಮಾವಳಿಗಳ ಪ್ರಕಾರ ಷೆಡ್ಯೂಲ್ಡ್ ಬ್ಯಾಂಕ್ ಆಗಲು ಇನ್ನೂ ಸಮಯ ಬೇಕು, ಏಕೆಂದರೆ ಈ ಎಲ್ಲ ಬ್ಯಾಂಕುಗಳು ರೈತರಿಗೆ ಸಾಲ ನೀಡುತ್ತವೆ ಲಾಭದ ದೃಷ್ಟಿಯಿಂದ ಈ ಸಂಸ್ಥೆಗಳು ಸಾಲ ನೀಡುವುದಿಲ್ಲ, ಹೀಗಾಗಿ ಲಾಭಾಂಶ ಕಡಿಮೆ ಆಗುವುದರಿಂದ ಷೆಡ್ಯೂಲ್ಡ್ ಬ್ಯಾಂಕ್ ಆಗುವುದು ಕಷ್ಟ ಸಾಧ್ಯ ಎಂದು ಸಚಿವ ಶಿವಾನಂದ ಪಾಟೀಲ ವಿಶ್ಲೇಷಿಸಿದರು.
ಈ ಹಿಂದೆ ನಬಾರ್ಡ್ ಪುರ್ಧನ ಡಿಸಿಸಿ ಬ್ಯಾಂಕುಗಳ ಮೂಲಕ ರೈತರಿಗೂ ವರದಾನವಾಗಿತ್ತು, ಈ ಹಿಂದೆ ನಬರ್ಡ್ ಶೇ.೬೦ ರಷ್ಟು ಪುರ್ಧನ ನೀಡುತ್ತಿತ್ತು, ಈ ಪ್ರಮಾಣ ಶೇ.೫೦, ನಂತರ ಶೇ.೪೦ ಕ್ಕೆ ಇಳಿಕೆಯಾಗಿ ಈಗ ಕೇವಲ ಶೇ.೧೩ ಕ್ಕೆ ಸೀಮಿತಗೊಂಡಿದೆ, ಹೀಗಾಗಿ ಈ ಪುರ್ಧನ ಪ್ರಮಾಣ ಏರಿಕೆಗಾಗಿ ರಾಜ್ಯದ ಎಲ್ಲ ಸಂಸದರು ಕೇಂದ್ರ ರ್ಕಾರಕ್ಕೆ ಒತ್ತಾಯ ಮಾಡಬೇಕು ಎಂದು ಈ ಸಂರ್ಭದಲ್ಲಿ ಅವರಿಗೆ ಮನವಿ ಮಾಡಿಕೊಳ್ಳುವೆ ಎಂದರು.
ಡಿಸಿಸಿ ಬ್ಯಾಂಕ್ ನರ್ದೇಶಕರಾದ ಚಂದ್ರಶೇಖರಗೌಡ ಪಾಟೀಲ ಮನಗೂಳಿ, ಸುರೇಶ ಬಿರಾದಾರ, ಸಹಕಾರ ಸಂಘಗಳ ಉಪನಿಬಂಧಕಿ ಎಸ್.ಕೆ. ಭಾಗ್ಯಶ್ರೀ, ಆಡಳಿತ ಮಂಡಳಿ ಸಲಹೆಗಾರ ಜೆ. ಕೋಟ್ರೇಶಿ, ಸಿಇಓ ಎಸ್.ಎ. ಢವಳಗಿ ಮೊದಲಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
ಪಿಪಿಪಿ ಮಾದರಿ ಕಾಲೇಜಿನಿಂದ ಶೋಷಣೆಗೆ ದಾರಿ : ಸಚಿವ ಶಿವಾನಂದ ಆತಂಕ
ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ
ವಿಜಯಪುರ : ಖಾಸಗಿ ಸಹಭಾಗಿತ್ವದಲ್ಲಿ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಯ ಅಪರಸ್ವರ ಜಿಲ್ಲೆಯಾದ್ಯಂತ ಪ್ರತಿಧ್ವನಿಸುತ್ತಿದ್ದು, ಈ ಖಾಸಗಿ ಸಹಭಾಗಿತ್ವದಲ್ಲಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಯ ಬಗ್ಗೆ ಸ್ವತ: ಸಚಿವ ಶಿವಾನಂದ ಪಾಟೀಲ ಸಹ ವಿರೋಧ ವ್ಯಕ್ತಪಡಿಸಿದ್ದು, ಇದು ಜನರ ಶೋಷಣೆಗೆ ಕಾರಣವಾಗುತ್ತದೆ ಹೊರತು ಜನರಿಗೆ ಯಾವ ರೀತಿಯ ಪ್ರಯೋಜನವೂ ಆಗುವುದಿಲ್ಲ ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಸ್ಪಷ್ಟ ನಿಲುವು ವ್ಯಕ್ತಪಡಿಸಿದ್ದಾರೆ.
ಗುರುವಾರ ನಗರದಲ್ಲಿರುವ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಖಾಸಗಿ ಸಹಭಾಗಿತ್ವದಲ್ಲಿ ಮೆಡಿಕಲ್ ಕಾಲೇಜ್ ಸ್ಥಾಪನೆಯ ಅನಿವಾರ್ಯತೆಯೇ ಇಲ್ಲ, ಒಂದು ವೇಳೆ ಈ ಮಾದರಿಯಲ್ಲಿ ವೈದ್ಯಕೀಯ ಕಾಲೇಜ್ ಸ್ಥಾಪನೆಯಾದರೆ ಅದು ಒಂದು ರೀತಿ ಜನರ ಶೋಷಣೆಗೆ ಕಾರಣವಾಗುತ್ತದೆ, ಈ ನಿರ್ಧಾರವನ್ನು ಸಚಿವ ಸಂಪುಟ ಸಭೆಯಲ್ಲಿಯೂ ವಿರೋಧಿಸಿದ್ದೇನೆ, ಮುಖ್ಯಮಂತ್ರಿಗಳಿಗೂ ಸಹ ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡಿರುವೆ ಎಂದರು.
ವಿಜಯಪುರ ಜಿಲ್ಲಾ ಆಸ್ಪತ್ರೆಯಲ್ಲಿಯೇ ಸಾಕಷ್ಟು ಜಾಗ ಹಾಗೂ ನಾನು ಸಚಿವನಾಗಿದ್ದ ಸಂದರ್ಭದಲ್ಲಿ ಅನೇಕ ಪೂರಕ ಸೌಲಭ್ಯಗಳನ್ನು ಕಲ್ಪಿಸಿದ್ದೇನೆ, ನೂರಾರು ಎಕರೆ ಜಾಗ, ಟ್ರಾಮಾ ಸೆಂಟರ್, ಕ್ಯಾನ್ಸರ್ ಸೆಂಟರ್ ಹೀಗೆ ಎಲ್ಲವೂ ಇದೆ, ಹೀಗಿರುವಾಗ ಖಾಸಗಿಯವರೆಗೆ ಮಣೆ ಹಾಕುವ ಅವಶ್ಯಕತೆಯೇ ಇಲ್ಲ ಎಂದರು.
ಖಾಸಗಿ ಸಹಭಾಗಿತ್ವದಲ್ಲಿ ಮೆಡಿಕಲ್ ಕಾಲೇಜ್ ಸ್ಥಾಪನೆ ಕೈಬಿಟ್ಟು ಸರ್ಕಾರಿ ವೈದ್ಯಕೀಯ ಕಾಲೇಜ್ ಸ್ಥಾಪನೆಯ ವಿಷಯವಾಗಿ ಈ ಹಿಂದೆಯೂ ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾಕ್ಕೆ ಪತ್ರ ಬರೆದಿದ್ದೇನೆ, ಅವಶ್ಯಕತೆ ಇದ್ದರೆ ಇನ್ನೊಮ್ಮೆ ಪತ್ರ ಬರೆಯುವೆ ಎಂದರು.
ನನಗೆ ಕ್ರೆಡಿಟ್ ಬೇಡವೇ ಬೇಡ :
ನಾನು ಆರೋಗ್ಯ ಸಚಿವನಾಗಿದ್ದ ಸಂದರ್ಭದಲ್ಲಿ ಟ್ರಾಮಾ ಸೆಂಟರ್, ೩೦೦ ಹಾಸಿಗೆಯುಳ್ಳ ಸುಸಜ್ಜಿತ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಕ್ಯಾನ್ಸರ್ ಸೆಂಟರ್ ಎಲ್ಲವೂ ಆರಂಭಿಸಲು ದಿವ್ಯ ಸಂಕಲ್ಪ ಮಾಡಿ ಯಶಸ್ವಿಯೂ ಆಗಿದೆ, ಆದರೆ ಅದರ ಕಾರ್ಯಾರಂಭಕ್ಕೆ ಸರ್ಕಾರಕ್ಕೆ ಅನೇಕ ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂಬ ನೋವು ನನ್ನನ್ನು ಈಗಲೂ ಕಾಡುತ್ತದೆ ಎಂದು ಸಚಿವ ಶಿವಾನಂದ ಪಾಟೀಲ ಬೇಸರ ವ್ಯಕ್ತಪಡಿಸಿದರು.
ನನಗೆ ಕ್ರೆಡಿಟ್ ಬರುವುದನ್ನು ತಪ್ಪಿಸಲು ಸಹ ಈ ರೀತಿ ವಿಳಂಬವಾಗುತ್ತಿದೆಯೇನೋ ಎಂದು ಸಹ ನೋವಾಗುತ್ತದೆ, ಆದರೆ ನಾನು ಕ್ರೆಡಿಟ್ಗಾಗಿ ಮಾಡಿಲ್ಲ, ಜನರ ಒಳಿತಿಗಾಗಿ ಇದನ್ನು ಮಾಡಿದ್ದೇನೆ, ನನಗೆ ಕ್ರೆಡಿಟ್ ಬರುತ್ತದೆ ಎಂದು ಯೋಚಿಸುವವರು ಬೇಕಾದರೆ ತಾವೇ ಕ್ರೆಡಿಟ್ ತೆಗೆದುಕೊಂಡರೂ ಚಿಂತೆಯಿಲ್ಲ ಜನರಿಗಾಗಿ ಈ ಕಾರ್ಯ ಮಾಡಲಿ ಎಂದರು. ಈ ವಿಷಯದಲ್ಲಿ ನನಗೆ ಸಹಕಾರ ಸಿಗಲಿಲ್ಲ ಎನ್ನುವ ವಿಷಯದಲ್ಲಿಯೂ ನನಗೆ ನೋವಿದೆ ಎಂದರು.
ವಿಜಯಪುರಕ್ಕೆ ಸಂಸದರು ಏಮ್ಸ್ ತರಲಿ:
ವಿಜಯಪುರ : ನೀವು ಗೋಳಗುಮ್ಮಟವಂತೂ ಕಟ್ಟಲು ಆಗಲ್ಲ, ಕೊನೆಪಕ್ಷ ಏಮ್ಸ್ ಕಾಲೇಜು ವಿಜಯಪುರದಲ್ಲಿ ಸ್ಥಾಪನೆಯಾಗುವಂತೆ ಮಾಡಲು ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡಿ ಎಂದು ಸಚಿವ ಶಿವಾನಂದ ಪಾಟೀಲ ಸಂಸದ ರಮೇಶ ಜಿಗಜಿಣಗಿ ಅವರಿಗೆ ಒತ್ತಾಯಿಸಿದರು.
ಈಗಾಗಲೇ ಧಾರವಾಡದಲ್ಲಿ ಐಐಟಿ ಸೇರಿದಂತೆ ಅನೇಕ ಪ್ರತಿಷ್ಠಿತ ಕಾಲೇಜುಗಳು ಸ್ಥಾಪನೆಯಾಗಿವೆ, ವಿಜಯಪುರದಲ್ಲಿ ಏಮ್ಸ್ ಸ್ಥಾಪನೆಯಾದರೆ ಅತ್ಯಂತ ಅನುಕೂಲವಾಗಿದೆ, ಈ ವಿಷಯದಲ್ಲಿ ಸಂಸದರು ಗಂಭೀರವಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ ಏಮ್ಸ್ ಸ್ಥಾಪನೆಗೆ ಕ್ರಮ ಕೈಗೊಳ್ಳಬೇಕು ಎಂದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
ಸೆ.1 ರಂದು ಬಸವ ಸಂಸ್ಕೃತಿ ಅಭಿಯಾನಕ್ಕೆ ಚಾಲನೆ | ನಾಡಿನ ಎಲ್ಲೆಡೆಯಿಂದ ಬಸವ ಜನ್ಮಭೂಮಿಗೆ ಜನಸಾಗರ
ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ
ವಿಜಯಪುರ : ಬಸವ ಸಂಸ್ಕೃತಿ ವಿಶ್ವ ಸಂಸ್ಕೃತಿ, ಈ ಸಂಸ್ಕೃತಿಯ ಶ್ರೇಷ್ಠತೆಯ ಪ್ರಸಾರಕ್ಕಾಗಿ ಬಸವ ಸಂಸ್ಕೃತಿ ಅಭಿಯಾನವನ್ನು ಲಿಂಗಾಯತ ಮಠಾಧೀಪತಿಗಳ ಒಕ್ಕೂಟದ ನೇತೃತ್ವದಲ್ಲಿ ಸಂಘಟಿಸಲಾಗಿದ್ದು, ಸೆ.೧ ರಿಂದ ಬಸವ ಜನ್ಮಭೂಮಿ ಬಸವನ ಬಾಗೇವಾಡಿಯಿಂದ ಈ ಅಭಿಯಾನ ಆರಂಭಗೊಳ್ಳಲಿದ್ದು ಅ.೧ರವರೆಗೆ ಬಸವ ಸಂಸ್ಕೃತಿ ಅಭಿಯಾನ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ತಲುಪಲಿದೆ ಎಂದು ಬಸವನಬಾಗೇವಾಡಿ ವಿರಕ್ತಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮೀಜಿಗಳು ಹೇಳಿದರು,
ಗುರುವಾರ ವಿಜಯಪುರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅಭಿಯಾನದ ವಿವರ ನೀಡಿದ ಶ್ರೀಗಳು, ಬಸವಾದಿ ಶರಣರ ಆಶಯಗಳನ್ನು ಬಿತ್ತುವ ದೃಷ್ಟಿಯಿಂದ ಈ ಅಭಿಯಾನ ನಡೆಸಲಾಗುತ್ತಿದೆ, ಬಸವಣ್ಣ ಅವರನ್ನು ರಾಜ್ಯದ ಸಾಂಸ್ಕೃತಿಕ ನಾಯಕನನ್ನಾಗಿ ಘೋಷಣೆ ಮಾಡಿ ಒಂದು ವರ್ಷ ಪೂರ್ಣಗೊಂಡ ಸಂತಸದಲ್ಲಿಯೂ ಈ ಅಭಿಯಾನ ಮಹತ್ವ ಪಡೆದುಕೊಂಡಿದೆ ಎಂದರು.
ಸೆ.೧ ರಂದು ಬಸವನ ಬಾಗೇವಾಡಿಯಲ್ಲಿ ಸಂಜೆ ೬ ಕ್ಕೆ ಬಸವೇಶ್ವರ ಸಿಬಿಎಸ್ಐ ಶಾಲೆಯ ಆವರಣದಲ್ಲಿ ನಡೆಯುವ ಸಮಾರಂಭದಲ್ಲಿ ಈ ಅಭಿಯಾನಕ್ಕೆ ವಿದ್ಯುಕ್ತವಾಗಿ ಸಂಚರಿಸಲಿದೆ. ಅದಕ್ಕೂ ಮುನ್ನ ಬಸವಜನ್ಮ ಸ್ಮಾರಕದಿಂದ ಅಭಿಯಾನ ಉದ್ಘಾಟನೆಯಾಗುವ ಸ್ಥಳದವರೆಗೆ ಬೃಹತ್ ಪಾದಯಾತ್ರೆ ನಡೆಯಲಿದೆ. ಹುಬ್ಬಳ್ಳಿ ಮೂರು ಸಾವಿರಮಠದ ಶ್ರೀ ಡಾ.ಗುರುಸಿದ್ಧ ರಾಜಯೋಗಿಂದ್ರ ಮಹಾಸ್ವಾಮಿಜಿ, ಶಿವಮೊಗ್ಗದ ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮೀಜಿ, ಡಾ.ಗಂಗಾಮಾತಾಜಿ ಸೇರಿದಂತೆ ಹಲವಾರು ಮಠಾಧೀಶರ ಪಾವನ ಸಾನಿಧ್ಯದಲ್ಲಿ ಅಭಿಯಾನಕ್ಕೆ ಚಾಲನೆ ದೊರಕಲಿದೆ. `ಮಾತು ವಚನವಾಗಬೇಕು' ಎಂಬ ವಿಷಯದ ಕುರಿತು ಖ್ಯಾತ ಸಾಹಿತಿ ವೀರಣ್ಣ ರಾಜೂರ ಹಾಗೂ ಶಿವಶರಣೆಯರೆ ಜೀವನಾದರ್ಶ ಎಂಬ ವಿಷಯದ ಕುರಿತು ಡಾ.ಮೀನಾಕ್ಷಿ ಬಾಳಿ ಉಪನ್ಯಾಸ ಮಂಡಿಸಲಿದ್ದು, ಸಚಿವರಾದ ಡಾ.ಎಂ.ಬಿ. ಪಾಟೀಲ, ಶಿವಾನಂದ ಪಾಟೀಲ, ಸಂಸದ ರಮೇಶ ಜಿಗಜಿಣಗಿ ಸೇರಿದಂತೆ ಹಲವಾರು ಜನಪ್ರತಿನಿಧಿಗಳು ಉಪಸ್ಥಿತರಿರುವರು ಎಂದರು.
ಅಂದು ಆರಂಭವಾಗುವ ಅಭಿಯಾನ ಹಾಗೂ ಅಭಿಯಾನಕ್ಕಾಗಿ ಸಿದ್ಧಪಡಿಸಿದ ಬಸವಾದಿ ಶರಣರ ರಥ ಕಲಬುರ್ಗಿ, ಬೀದರ್, ಯಾದಗೀರ, ರಾಯಚೂರು, ಬಳ್ಳಾರಿ, ವಿಜಯನಗರ ಸೇರಿದಂತೆ ಎಲ್ಲ ಜಿಲ್ಲೆಗಳಲ್ಲಿ ಸಂಚರಿಸಿ ಬೆಂಗಳೂರು ನಗರಕ್ಕೆ ತಲುಪಿ ಸಂಪನ್ನಗೊಳ್ಳಲಿದೆ ಎಂದರು.
ಒಟ್ಟುಗೂಡಿಸುವ ಪ್ರಯತ್ನ
ಆಮಮಂತ್ರಣ ಪತ್ರಿಕೆ ಹಾಗೂ ಪ್ರಚಾರ ಪರಿಕರಗಳನ್ನು ಬಿಡುಗಡೆ ಮಾಡಿದ ಮಾತನಾಡಿದ ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ, ವೀರಶೈವ ಹಾಗೂ ಲಿಂಗಾಯತದಲ್ಲಿ ಆಗಿರುವ ಎಲ್ಲ ಭಿನ್ನಾಭಿಪ್ರಾಯಗಳನ್ನು ದೂರ ಮಾಡಿ ಒಟ್ಟಿಗೆ ಹೋಗುವ ನಿಟ್ಟಿನಲ್ಲಿ ಮೊನ್ನೆ ಮಹತ್ವದ ಚರ್ಚೆ ನಡೆದಿದೆ, ಹೀಗಾಗಿ ಸಾಮರಸ್ಯ ಕಾಪಾಡಿಕೊಂಡು ಹೋಗಲು ಎರಡು ಕಡೆ ಮನವಿ ಮಾಡಿಕೊಳ್ಳಲಾಗಿದೆ. ಹೀಗಾಗಿ ಒಟ್ಟಾಗಿ ಹೋಗುವ ಪ್ರಯತ್ನ ನಡೆದಿದೆ ಎಂದರು.
ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರಕ್ಕೆ ವಿಶೇಷ ಅನುದಾನ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದೇನೆ, ಸರ್ಕಾರ ಅನುದಾನ ಒದಗಿಸದೇ ಹೋದರೆ ಸ್ಥಳೀಯ ಸಂಪನ್ಮೂಲಗಳಿಂದ ಅರ್ಧ ಅನುದಾನ ಪ್ರಾಧಿಕಾರ ಬಳಕೆ ಮಾಡುವ ನಿಟ್ಟಿನಲ್ಲಿಯೂ ಕ್ರಮ ವಹಿಸಲಾಗುವುದು ಎಂದರು.
ಸಂಘಟಕರಾದ ಬಸನಗೌಡ ಹರನಾಳ ಮಾತನಾಡಿ, ಬಸವ ಸಂಸ್ಕೃತಿ ವಿಶ್ವ ಸಂಸ್ಕೃತಿ, ನಮ್ಮಲ್ಲಿ ಯಾವ ಬೇಧವಿಲ್ಲ, ಈ ಬಸವಾದಿ ಶರಣರ ಆಶಯವನ್ನು ತಿಳಿಸುವುದಕ್ಕಾಗಿಯೇ ಈ ಅಭಿಯಾನ ನಡೆಸಲಾಗುತ್ತಿದ್ದು, ೧,೧೦೦ ಮಹಿಳೆಯರು ವಚನ ಪುಸ್ತಕಗಳ ಹೊತ್ತು ಮೆರವಣಿಗೆಯಲ್ಲಿ ಭಾಗಿಯಾಗಲಿದ್ದಾರೆ ಎಂದರು.
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ವಿ.ಸಿ. ನಾಗಠಾಣ, ಸಾಹಿತಿ ಜಂಬುನಾಥ ಕಂಚ್ಯಾಣಿ, ಈರಣ್ಣ ಪಟ್ಟಣಶೆಟ್ಟಿ, ಡಾ.ರವಿ ಬಿರಾದಾರ, ಪ್ರಭುಗೌಡ ಪಾಟೀಲ, ಮಹಾದೇವಿ ಗೋಕಾಕ, ಹಾಸಿಂಪೀರ ವಾಲೀಕಾರ, ಪ್ರಕಾಶ ಬೆಣ್ಣೂರು ಸೇರಿದಂತೆ ಇತರರು ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
Tuesday, August 26, 2025
ಇಂದಿನ ಪೀಳಿಗೆ ದೇವರಾಜ ಅರಸು ಅವರ ಜೀವನ ಸಾಧನೆ ತಿಳಿದುಕೊಳ್ಳಬೇಕು : ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಮಂಡಳಿಯ ಅಧ್ಯಕ್ಷ ಹಾಗೂ ನಿವೃತ್ತ ಹಿರಿಯ ಐಎಎಸ್ ಅಧಿಕಾರಿ ಅಶೋಕ ದಳವಾಯಿ
ವಿಜಯಪುರ: ದಿವಂಗತ ಡಿ.ದೇವರಾಜ ಅರಸು ಅವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ರಾಜ್ಯದಲ್ಲಿ ಜಾರಿಗೆ ತಂದಿದ್ದ “ಊಳುವವನೇ ಭೂಮಿಯ ಒಡೆಯ” ಎಂಬ ಕ್ರಾಂತಿಕಾರಿ ಭೂ ಸುಧಾರಣಾ ಕಾಯ್ದೆ ದೇಶದಲ್ಲಿಯೇ ಮಾದರಿಯಾಗಿತ್ತು ಎಂದು ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಮಂಡಳಿಯ ಅಧ್ಯಕ್ಷ ಹಾಗೂ ನಿವೃತ್ತ ಹಿರಿಯ ಐಎಎಸ್ ಅಧಿಕಾರಿ ಅಶೋಕ ದಳವಾಯಿ ಅವರು ಅಭಿಪ್ರಾಯಪಟ್ಟರು.
ಮಹಿಳಾ ವಿಶ್ವವಿದ್ಯಾಲಯದ ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶನಾಲಯ ಮತ್ತು ಸಮಾನ ಅವಕಾಶ ಘಟಕದ ಆಶ್ರಯದಲ್ಲಿ ದಿವಂಗತ ಡಿ.ದೇವರಾಜ ಅರಸರ ೧೧೦ನೇ ಜನ್ಮ ದಿನಾಚರಣೆ ಅಂಗವಾಗಿ ಮಂಗಳವಾರ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕರ್ನಾಟಕದಲ್ಲಿ ಜಮೀನ್ದಾರಿ ಪದ್ಧತಿ, ಜೀತ ಪದ್ಧತಿ ಮತ್ತು ತಲೆಮೇಲೆ ಮಲ ಹೊರುವ ಅನಿಷ್ಟ ಪದ್ಧತಿಗಳನ್ನು ನಿರ್ಮೂಲನೆ ಮಾಡಿದ ಶ್ರೇಯಸ್ಸು ದೇವರಾಜ ಅರಸು ಅವರಿಗೆ ಸಲ್ಲುತ್ತದೆ. ಅರಸು ರಾಜ್ಯದಲ್ಲಿ ಕ್ರಾಂತಿಕಾರಿ ಬದಲಾವಣೆ ತರಲು ಬಹುವಾಗಿ ಶ್ರಮಿಸಿದ್ದರು ಎಂದ ಅವರು, ಅರಸು ಒಬ್ಬ ಕರ್ಮಯೋಗಿ, ರಾಜಕೀಯ ಮುತ್ಸದ್ಧಿಯಾಗಿದ್ದರು ಎಂದು ಬಣ್ಣಿಸಿದರು.
ರಾಜ್ಯದಲ್ಲಿ ೭೦-೮೦ರ ದಶಕದಲ್ಲಿ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಪರಿವರ್ತನೆಗೆ ಗಟ್ಟಿಯಾದ ಅಡಿಗಲ್ಲು ಹಾಕಿದ್ದ ದೇವರಾಜ ಅರಸು ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರು ರೂಪಿಸಿದ ಸಂವಿಧಾನದ ಆಶಯಗಳನ್ನು ಜಾರಿಗೆ ತರಲು ಪ್ರಾಮಾಣಿಕ ಪ್ರಯತ್ನಗಳನ್ನು ನಡೆಸಿದ್ದರು. ಇದರ ಪರಿಣಾಮವಾಗಿ ಜನರ ಬಡತನ ದೂರ ಮಾಡುವ ಇಚ್ಛಾಶಕ್ತಿ ಅವರಲ್ಲಿತ್ತು ಎಂದು ಅವರು ವಿವರಿಸಿದರು.
ಇಂದಿನ ಪೀಳಿಗೆ ದೇವರಾಜ ಅರಸು ಅವರ ಜೀವನ ಸಾಧನೆ ತಿಳಿದುಕೊಳ್ಳಬೇಕು. ಅವರ ಜೀವನಾದರ್ಶಗಳನ್ನು ನಾವೆಲ್ಲರೂ ನಮ್ಮ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಲು ಪ್ರಾಮಾಣಿಕ ಪ್ರಯತ್ನಗಳನ್ನು ಮಾಡಬೇಕು. ಅಂದಾಗ ಮಾತ್ರ ನಾವು ಅವರಿಗೆ ಗೌರವ ಸಲ್ಲಿಸಿದಂತಾಗುತ್ತದೆ ಎಂದು ಅಶೋಕ ದಳವಾಯಿ ಪ್ರತಿಪಾದಿಸಿದರು.
ಡಿ.ದೇವರಾಜ ಅರಸು ಅವರು ಸದಾ ಸಮಾನತೆಯ ಹಾದಿಯನ್ನು ತೋರಿದ ಮಹಾನ್ ನಾಯಕ. ಸಮಾಜದಲ್ಲಿ ಮೇಲು–ಕೀಳು ಎಂಬ ಅಸಮಾನತೆಗಳನ್ನು ಹೋಗಲಾಡಿಸಲು ಅವರು ದೃಢ ಪ್ರಯತ್ನ ನಡೆಸಿದರು. ತಮ್ಮ ದೃಢ ಸಂಕಲ್ಪದಿAದ ಶ್ರಮಜೀವಿಗಳ ಹಕ್ಕನ್ನು ಸಂರಕ್ಚಿಸಿದರು. ಅರಸು ಅವರ ಜೀವನವೇ ಒಂದು ಪಾಠ. ಸಾಮಾನ್ಯ ಜನರ ಕಲ್ಯಾಣಕ್ಕಾಗಿ ಅವರು ಬದ್ಧರಾಗಿ ದುಡಿಯುವುದರ ಮೂಲಕವೇ ನಿಜವಾದ ನಾಯಕತ್ವವೆಂದರೇನು ಎಂಬುದನ್ನು ತೋರಿಸಿಕೊಟ್ಟವರು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಿವಿಯ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಮಾತನಾಡಿ, ಡಿ.ದೇವರಾಜ್ ಅರಸು ಅವರು ಕರ್ನಾಟಕದ ರಾಜಕೀಯದಲ್ಲಿ ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಜನಪರ ಆಡಳಿತದ ನಿಜವಾದ ಪ್ರತಿರೂಪವಾಗಿದ್ದರು. ಹಿಂದುಳಿದ ವರ್ಗಗಳ ಸಬಲೀಕರಣಕ್ಕಾಗಿ ಅವರು ಕೈಗೊಂಡ ಕಲ್ಯಾಣಕಾರಿ ಕ್ರಮಗಳು ಇಂದಿಗೂ ಮಾದರಿಯಾಗಿವೆ. ಪಾರದರ್ಶಕತೆ, ಸರಳತೆ ಹಾಗೂ ನೈತಿಕತೆಗೆ ಹೆಸರಾಗಿದ್ದ ಅವರ ಆಡಳಿತ ಶೈಲಿ ಇಂದಿನ ರಾಜಕೀಯ ನಾಯಕತ್ವಕ್ಕೆ ದಿಕ್ಕು ತೋರಿಸುವಂತಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ಘಟಕದ ಸಂಯೋಜಕ ಪ್ರೊ.ಶ್ರೀನಿವಾಸ, ವಿವಿಧ ವಿಭಾಗಗಳ ಮುಖ್ಯಸ್ಥರು, ಡೀನರು, ಪ್ರಾಧ್ಯಾಪಕರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ಸಂಶೋಧನಾ ವಿದ್ಯಾರ್ಥಿನಿಯರು, ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಯರು ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸ್ನಾತಕ ಅಧ್ಯಯನ ವಿಭಾಗದ ವಿಶೇಷ ಅಧಿಕಾರಿ ಪ್ರೊ.ಸಕ್ಪಾಲ ಹೂವಣ್ಣ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಶ್ವೇತಾ ಅತಿಥಿಗಳನ್ನು ಪರಿಚಯಿಸಿದರು. ಡಾ.ತಹಮೀನಾ ನಿಗಾರ ಸುಲ್ತಾನಾ ನಿರೂಪಿಸಿದರು. ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶನಾಲಯದ ನಿರ್ದೇಶಕಿ ಪ್ರೊ.ಜ್ಯೋತಿ ಉಪಾಧ್ಯೆ ವಂದಿಸಿದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
ಪತ್ರಕರ್ತೆ ಪ್ರೇಮಾ ಕುಲಕರ್ಣಿ ಅವರು ರಚಿಸಿರುವ 'ಹೂ ಮಾಲೆ' ಗ್ರಂಥ ಲೋಕಾರ್ಪಣೆ | ಮಾನವೀಯತೆ, ಪ್ರೀತಿ ಬೋಧಿಸುವ ಪಠ್ಯ ಹಿಂದೆಂದಿಗಿಂತಲೂ ಈಗ ಅಗತ್ಯ : ಲೇಖಕಿ ಭಾರತಿ ಪಾಟೀಲ
ವಿಜಯಪುರ : ಪಠ್ಯ ಪುಸ್ತಕ ರಚನೆ ರಾಜಕೀಯ ಪ್ರೇರಿತವಾಗಿರಬಾರದು, ಅದು ರಾಜಕೀಯ ಮುಕ್ತವಾಗಿರಬೇಕು, ಮಾನವೀಯತೆ, ಪ್ರೀತಿ ಬೋಧಿಸುವ ಪಠ್ಯ ಹಿಂದೆಂದಿಗಿಂತಲೂ ಈಗ ಅಗತ್ಯವಾಗಿದೆ ಎಂದು ಲೇಖಕಿ ಭಾರತಿ ಪಾಟೀಲ ಹೇಳಿದರು.
ವಿಜಯಪುರದ ಜಿಲ್ಲಾ ಪಂಚಾಯತ ಬಳಿ ಇರುವ ಗಾಂಧೀ ಭವನದಲ್ಲಿ ಶ್ರೀ ಹಲಗಣೀಶ ಪ್ರಕಾಶನ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಪತ್ರಕರ್ತೆ ಪ್ರೇಮಾ ಕುಲಕರ್ಣಿ ಅವರು ರಚಿಸಿರುವ 'ಹೂ ಮಾಲೆ' ಗ್ರಂಥ ಲೋಕಾರ್ಪಣೆ ಸಮಾರಂಭ ಉದ್ಘಾಟಿಸಿದ ಅವರು, ಇಂದು ಹೊಡಿ, ಬಡಿ, ಕಡಿ ಸಾಹಿತ್ಯವೇ ಮಕ್ಕಳಲ್ಲಿ ಪ್ರಭಾವ ಬೀರುತ್ತಿದೆ, ಮಕ್ಕಳಿಗೆ ಹಾಡು ಹೇಳಲು ಹೇಳಿದರೆ ಹೊಡಿ ಮಗ ಹಾಡು ಹೇಳುತ್ತಾರೆ, ಹೀಗಾಗಿ ಪಠ್ಯದಲ್ಲಿ ಮಾನವೀಯತೆ, ಪ್ರೀತಿ ಪ್ರತಿಪಾದಿಸುವ ವಿಷಯಗಳು ಪಠ್ಯದಲ್ಲಿರಬೇಕು ಎಂದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
Monday, August 25, 2025
ಕೈ ಎತ್ತದೆ.. ಕೈಪಿಡಿ ಹೊರ ತಂದ ಬಸವರಾಜ ಜಾಲವಾದಿ". ಪ್ರಾಚಾರ್ಯ ಕೆ. ಜಿ. ಲಮಾಣಿ
ಕೂಡಗಿ: ವೆಬ್ ಕ್ಯಾಮೆರಾದ ಕೆಳಗೆ ಕೂತು ಆನಂದದಿಂದ ಪರೀಕ್ಷೆ ಬರೆಯಬೇಕೆ ವಿನಹ ಭಯದಿಂದಲ್ಲ. ಹಾಗಾದರೆ ಪ್ರತಿ ಘಟಕದ ಅಂಶಗಳನ್ನು ಸಹಿತ ನೀವು ಓದಿಕೊಳ್ಳಬೇಕಾಗುತ್ತದೆ. ಅದಕ್ಕೆ ಇಂತಹ ಕೈಪಿಡಿಗಳು ಮಾದರಿಯಾಗಿ ನಿಲ್ಲುತ್ತವೆ. ಕೈ ಎತ್ತದೆ ಕೈಪಿಡಿಯನ್ನು ಹೊರ ತಂದಿರುವ ಬಸವರಾಜ ಜಾಲವಾದಿಯವರು ನಿಜಕ್ಕೂ ಅಭಿನಂದನಾರ್ಹರು ಎಂದು ಪ್ರಾಚಾರ್ಯ ಕೆಜಿ ಲಮಾಣಿ ಹೇಳಿದರು.
ಪ್ರೊ: ಬಸವರಾಜ ಜಾಲವಾದಿ ಅವರು ಬರೆದ ದ್ವಿತೀಯ ಪಿಯುಸಿಯ ಸಮಾಜ ಶಾಸ್ತ್ರದ ಕೈಪಿಡಿ ಬಿಡುಗಡೆ ಮಾಡಿ ಮಾತನಾಡುತ್ತಿದ್ದರು. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಆಳವಾಗಿ ಓದುವುದು ಕಡಿಮೆಯಾದಷ್ಟು ಸಮಸ್ಯೆಗಳನ್ನೆದುರಿಸಬೇಕಾಗುತ್ತದೆ ಇಂತಹ ಸಂದರ್ಭದಲ್ಲಿ ಈ ತರನಾದ ಕೈಪಿಡಿಗಳು ಪಾಠದ ಅಂಶಗಳಾದ ಜ್ಞಾನ, ಕೌಶಲ್ಯ, ತಿಳುವಳಿಕೆ, ಅಳವಡಿಕೆ, ಅನ್ವಯ, ಹೋಲಿಕೆ ಎಲ್ಲ ಅಂಶಗಳನ್ನು ಒಳಗೊಂಡಿರುವ ಸೃಜನಾತ್ಮಕವಾದ ಇಂಥಹ ಕೈಪಿಡಿ ಹೊರ ತಂದ ಪ್ರೊ ಬಸವರಾಜ ಜಾಲವಾದಿ ಅಭಿನಂನಾರ್ಹರು. ಉಪನ್ಯಾಸಕರಾದವರು ಪ್ರತಿಯೊಂದು ಕಾಲೇಜಿನಲ್ಲಿ ಈ ತರದ ಕೈಪಿಡಿ ಮಾಡಿದರೆ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ಎದುರಿಸುವುದು ಸುಲಭವಾಗುತ್ತದೆ. ಆ ದಿಶೆಯಲ್ಲಿ ಪ್ರೊ ಬಸವರಾಜ ಜಾಲವಾದಿಯವರು ಮಾದರಿಯಾಗಿ ನಿಲ್ಲುತ್ತಾರೆ ಎಂದರು.
ಸ್ವಾಗತ ಹಾಗೂ ಪ್ರಾಸ್ತಾನಿಕ ಮಾತುಗಳನ್ನಾಡಿದ ಬಸವರಾಜ ಜಾಲವಾದಿಯವರು ಓದುವುದನ್ನು ಕಲಿತರೆ ಬರೆಯಲು ಮಾತನಾಡಲು ತಾನಾಗಿಯೇ ಬರುತ್ತದೆ ವಿನಯ ವೃದ್ಧಿಯಾಗುತ್ತದೆ ನಮ್ಮ ಮನಸ್ಥಿತಿ ಸರಿಯಾದ ಮಾರ್ಗದತ್ತ ನಮ್ಮನ್ನು ಕೊಂಡೊಯ್ಯುತ್ತದೆ ಪಿಯುಸಿ ಎಂಬುದು ವಿದ್ಯಾರ್ಥಿ ಜೀವನದಲ್ಲಿ ಬಹಳ ಮಹತ್ತರ ತಿರುವುಗಳಿಗೆ ಕಾರಣವಾಗಬಲ್ಲ ಹಂತ 2015 ರಿಂದ ನಿರಂತರವಾಗಿ ನಾನು ಪ್ರತಿ ವರ್ಷ ಇಂತಹ ಕೈಪಿಡಿಗಳನ್ನು ಹೊರ ತರುತ್ತಿದ್ದೇನೆ ವಿದ್ಯಾರ್ಥಿಗಳು ಅದರ ಸದುಪಯೋಗವನ್ನು ಪಡಿಸಿಕೊಳ್ಳಬೇಕೆಂದು ತಿಳಿ ಹೇಳಿದರು.
ಕಳೆದ ಮೂರು ಘಟಕಗಳ ಮೇಲಿನ ರಸಪ್ರಶ್ನೆ ಕಾರ್ಯಕ್ರಮಗಳನ್ನು ಏರ್ಪಡಿಸಿ ಹಾಗೂ ಘಟಕ ಪರೀಕ್ಷಗಳನ್ನ ಏರ್ಪಡಿಸಿ ಅದರಲ್ಲಿ ಪ್ರಥಮ ದ್ವಿತೀಯ, ತೃತೀಯ, ಬಂದ ಎಲ್ಲ ವಿದ್ಯಾರ್ಥಿಗಳಿಗೂ ಬಹುಮಾನವನ್ನು ಕೈಪಿಡಿಯ ರೂಪದಲ್ಲಿ ನೀಡಲಾಯಿತು. ವೇದಿಕೆಯ ಮೇಲೆ
ಪ್ರೊ:ಎಸ್. ಬಿ.ದೇಸಾಯಿ ಪ್ರೊ ವ್ಹಿ.ಜಿ ಕಿವುಡಜಾಡರ್, ಡಾ ಲಕ್ಷ್ಮಿ ಅಂಗಡಿ, ಡಾ ಅಮರೇಶಗೌಡ ಪಾಟೀಲ್, ಮೇಘನಾ ಹೆರಕಲ್ ರಾಜೇಶ್ವರಿ ಜಾಧವ್ ಹಾಜರಿದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
Sunday, August 24, 2025
Friday, August 22, 2025
Thursday, August 21, 2025
Wednesday, August 20, 2025
Tuesday, August 19, 2025
ಆಗಸ್ಟ್ 22 ಮೂರು ದಿನಗಳವರೆಗೆ ಲಕ್ಷ್ಮೀ ಹಾಗೂ ಮಾಳಿಂಗೇಶ್ವರ ಜಾತ್ರಾ ಮಹೋತ್ಸವ
ವಿಜಯಪುರ : ಪ್ರತಿವರ್ಷದಂತೆ ಈ ಬಾರಿಯೂ ಮಲಕನದೇವರಹಟ್ಟಿ ಗ್ರಾಮದೇವತೆಯಾದ ಲಕ್ಷ್ಮೀ ಹಾಗೂ ಮಾಳಿಂಗೇಶ್ವರ ಜಾತ್ರಾ ಮಹೋತ್ಸವ ಮೂರು ದಿನಗಳವರೆಗೆ ಅದ್ದೂರಿಯಾಗಿ ನಡೆಯಲಿದೆ ಎಂದು ಲಕ್ಷ್ಮೀ ಮಾಳಿಂಗೇಶ್ವರ ಕಮಿಟಿಯವರು ತಿಳಿಸಿದರು.
ತಿಕೋಟಾ ತಾಲೂಕಿನ ಮಲಕನದೇವರಹಟ್ಟಿ ಗ್ರಾಮದೇವತೆಯಾದ ಲಕ್ಷ್ಮೀ ಹಾಗೂ ಮಾಳಿಂಗೇಶ್ವರ ಜಾತ್ರಾ ಮಹೋತ್ಸವವು ಮೂರ ದಿನಗಳ ಕಾಲ ಅದ್ದೂರಿಯಾಗಿ ನಡಿಯಲಿದೆ. ಇದೆ ಆಗಸ್ಟ್ 22 ಶುಕ್ರವಾರ ಹೊಳೆಗಂಗೆ ಪೂಜೆ ಮುಗಿಸಿಕೊಂಡು ರಾತ್ರಿ ವಿಜೃಂಭಣೆಯಿಂದ ದೇವರ ಭೇಟಿ ಜರುಗಲಿದೆ. ಮರುದಿನ ಶನಿವಾರ ಆಗಸ್ಟ್ 23 ಬೆಳಗ್ಗೆ ಎಲ್ಲ ದೇವರ ಗಂಗೆ ಪೂಜೆ ಮಾಡಿಕೊಂಡು ವಾಲಗ ಸಂಘದ ಜೊತೆಗೆ ವಿಜೃಂಭಣೆಯಿಂದ ಊರಲ್ಲಿ ಸಬೀಣಿ ಜರುಗುವುದು, ರಾತ್ರಿ ಡೊಳ್ಳಿನ ಗಾಯನದ ಜೊತೆ ಜಾಗರಣೆ ನಡೆಸಲಾಗುವದು. ಅ. 24 ರವಿವಾರ ಭಾರ ಎತ್ತುವ ಸ್ಪರ್ಧೆಯ ಕಾರ್ಯಕ್ರಮ ನಡಿಯಲಿದೆ.
ಈ ಜಾತ್ರೆಯಲ್ಲಿ ಮಹೋತ್ಸವದಲ್ಲಿ ಲಕ್ಷ್ಮೀ ಮಾಳಿಂಗೇಶ್ವರ ಚೌಕಿ ಜೊತೆಯಲ್ಲಿ ಮಡ್ಡಿ ಮಾಳಿಂಗೇಶ್ವರ ಪಲ್ಲಕ್ಕಿ,ಹುಲಿಗೆಮ್ಮದೇವಿ ಚೌಕಿ ಮಲಕನದೇವರಹಟ್ಟಿ,ಕರಿಸಿದ್ದೇಶ್ವರ ಪಲ್ಲಕ್ಕಿ ಹಾಗೂ ಲಕ್ಷ್ಮೀ ಪಲ್ಲಕ್ಕಿ ತಿಕೋಟಾ,ಮಡ್ಡಿ ಸಿದ್ದೇಶ್ವರ ಪಲ್ಲಕ್ಕಿ ಹೊನವಾಡ,ಲಾಯಮ್ಮ ದೇವಿ ಪಲ್ಲಕ್ಕಿ ಸಂಖ, ಮಾಳಿಂಗೇಶ್ವರ ಪಲ್ಲಕ್ಕಿ ಕಳ್ಳಕವಟಗಿ,ಬೀರದೇವರ ಪಲ್ಲಕ್ಕಿ ಘೋಣಸಗಿ ಈ ಜಾತ್ರಾ ಮಹೋತ್ಸವದ ದೇವರ ಭೇಟಿಯಲ್ಲಿ ಪಾಲ್ಗೊಳ್ಳುವುವು. ಲಕ್ಷ್ಮೀ ಮಾಳಿಂಗೇಶ್ವರ ಜಾತ್ರಾ ಮಹೋತ್ಸವದಲ್ಲಿ ಮೂರುದಿನ ಅನ್ನಪ್ರಸಾದ ಇರುವುದು. ಲಕ್ಷ್ಮೀಮಾಳಿಂಗೇಶ್ವರ ಜಾತ್ರಾ ಮಹೋತ್ಸವ ಕಮಿಟಿ,ಊರಿನ ಹಿರಿಯರು ಹಾಗೂ ಎಲ್ಲ ಸದ್ಭಕ್ತರು ಸೇರಿ ಈ ಜಾತ್ರೆಯನ್ನು ವಿಜೃಂಭಣೆಯಿಂದ ನಡೆಸಿಕೊಡಲಿದ್ದಾರೆ.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
Friday, August 15, 2025
Thursday, August 14, 2025
Wednesday, August 13, 2025
Tuesday, August 12, 2025
Monday, August 11, 2025
ಸಸಿಗಳನ್ನು ನೆಡುವುದರ ಮೂಲಕ ಪರಿಸರ ಸಮತೋಲನವನ್ನು ಕಾಪಾಡಿಕೊಳ್ಳಲು ಸಾಧ್ಯ
ವಿಜಯಪುರ: ವಿದ್ಯಾರ್ಥಿನಿಯರು ಹೆಚ್ಚು ಹೆಚ್ಚು ಸಸಿಗಳನ್ನು ನೆಡುವುದರ ಮೂಲಕ ಪರಿಸರ ಸಮತೋಲನವನ್ನು ಕಾಪಾಡಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಸಹಾಯಕ ಉಪ ಸಂರಕ್ಷಣಾಧಿಕಾರಿ ಅನಂತಕುಮಾರ.ಎಸ್.ಪಾಕಿ. ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ, ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಥಿ ಮಂಡಳಿ ಬೆಂಗಳೂರು (ಕೆಎಸ್‌ಬಿಡಿಬಿ), ಜಿಲ್ಲಾ ಪಂಚಾಯತ, ಸಾಮಾಜಿಕ ಅರಣ್ಯ ವಿಭಾಗ, ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ವಿಜಯಪುರ ಇವರ ಸಂಯೋಗದಲ್ಲಿ ಸೋಮವಾರ ಆಯೋಜಿಸಿದ್ದ ಅಂತರಾಷ್ಟಿçಯ ಜೈವಿಕ ಇಂಧನ ದಿನಾಚಾರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿನಿಯರು ಹೆಚ್ಚು ಹೆಚ್ಚು ಸಸಿಗಳನ್ನು ನೆಡುವುದರ ಮೂಲಕ ಹಸಿರು ಆವರಣವನ್ನು ವಿಸ್ತರಿಸಿ, ಪರಿಸರ ಸಮತೋಲನವನ್ನು ಕಾಪಾಡಿಕೊಳ್ಳಲು ಸಹಕರಿಸಬಹುದು. ಪ್ರತಿ ವಿದ್ಯಾರ್ಥಿನಿಯೂ ಕನಿಷ್ಠ ಒಂದು ಗಿಡವನ್ನು ನೆಡುವ ಸಂಕಲ್ಪ ಕೈಗೊಂಡರೆ, ಭವಿಷ್ಯದ ಪೀಳಿಗೆಯಿಗಾಗಿ ಹಸಿರು, ಶುದ್ಧ ಮತ್ತು ಆರೋಗ್ಯಕರ ವಾತಾವರಣವನ್ನು ನಿರ್ಮಿಸಬಹುದು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮಹಿಳಾ ವಿವಿಯ ಕುಲಪತಿ ಪ್ರೊ.ವಿಜಯಾ.ಬಿ.ಕೋರಿಶೆಟ್ಟಿ ಮಾತನಾಡಿ, ಜೈವಿಕ ಇಂಧನವು ನವೀಕರಿಸಬಹುದಾದ ಶಕ್ತಿಯ ಮೂಲವಾಗಿದ್ದು, ಇದು ಪರಿಸರ ಸಂರಕ್ಷಣೆಗೂ, ಶಾಶ್ವತ ಅಭಿವೃದ್ಧಿಗೂ ಮಹತ್ವದ ಪಾತ್ರ ವಹಿಸುತ್ತದೆ. ಭಾರತ ದೇಶವು ಇಂಧನಗಳ ಅವಲಂಬನೆಯನ್ನು ಹಂತ ಹಂತವಾಗಿ ಕಡಿಮೆ ಮಾಡಿದರೆ, ವಿದೇಶಿ ಇಂಧನ ಆಮದು ವೆಚ್ಚ ಕಡಿಮೆಯಾಗುತ್ತದೆ. ಇದÀರಿಂದ ಆರ್ಥಿಕ ಸ್ಥಿತಿ ಉತ್ತಮಗೊಳ್ಳುತ್ತದೆ ಮತ್ತು ಶಕ್ತಿಯಲ್ಲಿ ಸ್ವಾವಲಂಬನೆ ಸಾಧಿಸಲು ಸಹಕಾರಿಯಾಗುತ್ತದೆ ಎಂದರು.
ಇದೇ ಸಂದರ್ಭದಲ್ಲಿ ಮಹಿಳಾ ವಿವಿಯ ಕಲಸಚಿವ ಶಂಕರಗೌಡ ಸೋಮನಾಳ ವಿದ್ಯಾರ್ಥಿನಿಯರಿಗೆ ಜೈವಿಕ ಇಂಧನದ ಮಹತ್ವ ತಿಳಿಸಿ, ರಸ ಪ್ರಶ್ನೆ ಕಾರ್ಯಕ್ರಮ ನಡೆಸಿಕೊಟ್ಟರು.
ಕಾರ್ಯಕ್ರಮದ ಅಂಗವಾಗಿ ವಿಶ್ವವಿದ್ಯಾನಿಲಯ ಆವರಣದಲ್ಲಿ ಸ್ನಾತಕ ವಿಭಾಗದ ವಿದ್ಯಾರ್ಥಿನಿಯರು ಜೈವಿಕ ಇಂಧನ ಸಂಬAಧಿತ ಸಸಿಗಳನ್ನು ನೆಟ್ಟರು.
ಕಾರ್ಯಕ್ರಮದಲ್ಲಿ ಮಹಿಳಾ ಕೌಶಲ್ಯ ತಂತ್ರಜ್ಞಾನ ಪಾರ್ಕ ವಿಶೇಷಾಧಿಕಾರಿ ಪ್ರೊ.ಅಶೋಕುಮಾರ ಸುರಪುರ, ಸ್ನಾತಕ ಅಧ್ಯಯನ ವಿಭಾಗದ ವಿಶೇಷಾಧಿಕಾರಿ ಡಾ.ಸಕ್ಪಾಲ. ಹೂವಣ್ಣ, ಡಾ.ಶ್ರೀನಿವಾಸ ಮತ್ತು ಬೋಧಕ, ಬೋಧಕೇತರ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. ಕಾರ್ಯಕ್ರಮದ ಮುಖ್ಯ ಸಂಚಾಲಕ ಡಾ.ಬಾಬು ಆರ್. ಎಲ್. ಪ್ರಾಸ್ತಾವಿಕ ನುಡಿಗಳ್ನಾಡಿದರು. ಗ್ರಾಮೀಣ ಅಭಿವೃದ್ದಿ ಸಂಸ್ಥೆಯ ಮುಖ್ಯ ನಿರ್ವಾಹಕ ಅಧಿಕಾರಿ ಡಾ. ಬಾಬು ಸಜ್ಜನ ವಂದಿಸಿದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
ಗ್ರಾಮೀಣರ ಬದುಕು ಸುಧಾರಣೆಗೆ ಆದ್ಯತೆ ನೀಡಿ -ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಸೂಚನೆ
ವಿಜಯಪುರ : ಜಿಲ್ಲೆಯ ಗ್ರಾಮೀಣ ಜನರ ಜೀವನ ಸುಧಾರಿಸುವ ನಿಟ್ಟಿನಲ್ಲಿ ಹಾಗೂ ಸಾರ್ವಜನಿಕ ಸಮಸ್ಯೆಗಳಿಗೆ ತತ್‌ಕ್ಷಣ ಸ್ಪಂದಿಸಿ, ಪರಿಹಾರ ಒದಗಿಸಲು ಹಾಗೂ ಮೂಲಸೌಲಭ್ಯಗಳನ್ನು ಆದ್ಯತೆ ಮೇಲೆ ಕಲ್ಪಿಸಲು ಕ್ರಮಕೈಗೊಳ್ಳಲು ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸೋಮವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಗ್ರಾಮೀಣ ಭಾಗದ ಜನರು ಯಾವುದೇ ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಬಾರದು. ಈ ನಿಟ್ಟಿನಲ್ಲಿ ಅಧಿಕಾರಿಗಳು ಸಾಮಾಜಿಕ ಕಳಕಳಿಯೊಂದಿಗೆ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು. ಗ್ರಾಮೀಣ ಭಾಗದಲ್ಲಿ ಸ್ವಚ್ಚತೆಗೆ ಪ್ರಥಮಾದ್ಯತೆ ನೀಡಬೇಕು, ನೈರ್ಮಲ್ಯೀಕರಣ ಮಹತ್ವ ತಿಳಿಸುವ ನಿಟ್ಟಿನಲ್ಲಿ ಜನರಲ್ಲಿ ಶೌಚಾಲಯ ನಿರ್ಮಾಣ ಮಾಡಿಕೊಡುವ ಮೂಲಕ ಬಳಕೆ ಕುರಿತು ಜಾಗೃತಿ ಮೂಡಿಸಬೇಕು. ಜನರ ಆರೋಗ್ಯ ಹಾಗೂ ಗ್ರಾಮ ನೈರ್ಮಲ್ಯ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಗ್ರಾಮ ಮಟ್ಟದಲ್ಲಿ ಸಂಬAಧಿಸಿದ ಅಧಿಕಾರಿಗಳು ಈ ಬಗ್ಗೆ ಅಭಿಯಾನ ಹಮ್ಮಿಕೊಳ್ಳಬೇಕು. ಆಗಾಗ ಸಭೆ ನಡೆಸಿ ಸಾರ್ವಜನಿಕರಿಗೆ ಅಗತ್ಯ ತಿಳುವಳಿಕೆ ನೀಡಬೇಕು ಎಂದು ಅವರು ತಿಳಿಸಿದರು.
ಚರಂಡಿಯ ನೀರು ಒಂದೆಡೆ ನಿಲ್ಲದೇ ಸರಾಗವಾಗಿ ಹರಿಯುವ ವ್ಯವಸ್ಥೆ ಮಾಡಿ, ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸುವಂತೆಯೂ, ಸಮರ್ಥವಾಗಿ ಕಾರ್ಯ ನಿರ್ವಹಿಸಿ ಈ ವಿಷಯದಲ್ಲಿ ನಿರ್ಲಕ್ಷöವಹಿಸಬಾರದು. ಸಾರ್ವಜನಿಕರ ಕಾಳಜಿಗೆ ಆದ್ಯತೆಯಾಗಿಸಿಕೊಂಡು ಕಾರ್ಯ ನಿರ್ವಹಿಸಿ, ಈ ಕುರಿತು ತಾಲೂಕ್ ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳು ತೀವ್ರ ನಿಗಾ ವಹಿಸುವಂತೆ ಅವರು ಸೂಚನೆ ನೀಡಿದರು.
ವಸತಿ ನಿಲಯಗಳಲ್ಲಿ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ವಸತಿ ನಿಲಯಗಳ ಕಟ್ಟಡಗಳ ಕಿಟಕಿಗಳಿಗೆ ಜಾಳಿಗೆ ಅಳವಡಿಸಿ, ಸೊಳ್ಳೆಗಳು ಬರದಂತೆ ನೋಡಿಕೊಂಡು ಎಂದು ಅವರು ತಿಳಿಸಿದರು.
ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ಸಮಾಜ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ವಸತಿ ನಿಲಯಗಳಲ್ಲಿ ಸ್ವಚ್ಛತೆ, ಗುಣಮಟ್ಟ ಆಹಾರ ಹಾಗೂ ಅಗತ್ಯ ಮೂಲಭೂತ ಸೌಲಭ್ಯಕ್ಕೆ ಆದ್ಯತೆ ನೀಡಿ, ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಹೆಚ್ಚಿನ ನಿಗಾ ವಹಿಸಬೇಕು. ಈ ಕುರಿತಾಗಿ ಸಂಬAಧಿಸಿದ ಅಧಿಕಾರಿಗಳು ವಾರಕ್ಕೆ ನಾಲ್ಕು ಬಾರಿ ವಸತಿ ನಿಲಯಕ್ಕೆ ದಿಢೀರ ಭೇಟಿ ನೀಡಿ, ಪರಿಶೀಲನೆ ನಡೆಸಬೇಕು ಎಂದು ಅವರು ಸೂಚನೆ ನೀಡಿದರು.
ಪ್ರವಾಸೋದ್ಯಮ ಉತ್ತೇಜನ ನೀಡುವ ದೃಷ್ಟಿಯಲ್ಲಿ ನಗರ ಸ್ಚಚ್ಛತೆಗೆ ಆದ್ಯತೆ ನೀಡಬೇಕು. ಈ ಹಿಂದಿಗಿAತಲೂ ಈಗ ನಗರದ ಸ್ವಚ್ಚತೆ ಸುಧಾರಣೆಯಾಗಿದೆ. ಆದಾಗ್ಯೂ ಜನರು ಎಲ್ಲೆಂದರಲ್ಲಿ ಕಸ ಬೀಸಾಕದಂತೆ ಮನೆ-ಮನೆಗೆ ತೆರಳಿ ಜಾಗೃತಿ ಮೂಡಿಸಿ, ಹಾಗೂ ಈ ಬಗ್ಗೆ ವಾರ್ಡವಾರು ಸಭೆ ನಡೆಸಿ ಸಾರ್ವಜನಿಕರಿಗೆ ಸೂಕ್ತ ತಿಳುವಳಿಕೆ ನೀಡಿ, ಬ್ಲಾಕ್‌ಸ್ಫಾಟ್‌ಗಳಲ್ಲಿ ಸಿಸಿಟಿವಿ ಅಳವಡಿಸಲು ಕ್ರಮವಹಿಸುವಂತೆ ಸೂಚಿಸಿದ ಅವರು. ರಾಜ್ಯದಲ್ಲಿಯೇ ಸ್ವಚ್ಛತಾ ನಗರವನ್ನಾಗಿಸಲು ಶ್ರಮಿಸುವಂತೆ ಅಧಿಕಾರಿಗಳಿಗೆ ಅವರು ಸೂಚಿಸಿದರು.
ಜಿಲ್ಲೆಯಲ್ಲಿರುವ ಕೆರೆ ಸಮೀಕ್ಷೆ ನಡೆಸಿ ಒತ್ತುವರಿ ತೆರವುಗೊಳಿಸಲು ಈಗಾಗಲೇ ಸೂಚಿಸಿದಂತೆ ಕ್ರಮವಹಿಸಲಾಗಿದೆ. ಕೆರೆಗಳು ನಿಸರ್ಗದತ್ತ ಕೊಡುಗೆಯಾಗಿದೆ. ಅವುಗಳಿಗೆ ಕಲುಷಿತ ನೀರು ಪೂರೈಕೆಯಾಗದಂತೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು. ಜೀವಜಲ ಸಂರಕ್ಷಣೆಗೆ ಆದ್ಯತೆ ನೀಡಬೇಕೆಂದು ಸೂಚನೆ ನೀಡಿದ ಅವರು. ಅಭಿವೃದ್ಧಿ ಪುನಃಶ್ಚೇತನ ಕೈಗೊಂಡು, ನಮ್ಮ ಮುಂದಿನ ಪೀಳಿಗೆಗೆ ಜಲಸಂರಕ್ಷಣೆಯ ಬಹು ದೊಡ್ಡ ಕೊಡುಗೆ ನೀಡಬೇಕು. ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ ಕಡಿವಾಣಕ್ಕೆ ಅಗತ್ಯ ಕ್ರಮ ವಹಿಸಬೇಕು. ಅಧಿಕಾರಿಗಳು ದಿಢೀರ ಬೇಟಿ ನೀಡಿ, ಪರಿಶೀಲನೆ ನಡೆಸಬೇಕು ಎಂದು ಅವರು ಸೂಚನೆ ನೀಡಿದರು.
ಜಿಲ್ಲಾಸ್ಪತ್ರೆ ಕಾರ್ಯವೈಖರಿಗೆ ಪ್ರಶಂಸೆ : ಸೋಮವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಲೋಕಾಯುಕ್ತ ಬಿ.ಎಸ್.ಪಾಟೀಲ ಅವರು ಜಿಲ್ಲೆಯ ಜಿಲ್ಲಾ ಆಸ್ಪತ್ರೆಯ ಕಾರ್ಯವೈಖರಿ ಕುರಿತು ಪ್ರಶಂಸೆ ವ್ಯಕ್ತಪಡಿಸಿ, ಪ್ರತಿದಿನ ಆಸ್ಪತ್ರೆಗೆ ಬರುವ ಬಡ ರೋಗಿಗಳಿಗೆ ಉತ್ತಮ ವೈದ್ಯಕೀಯ ಸೌಲಭ್ಯ ಕಲ್ಪಿಸುವುದೂ ಸೇರಿದಂತೆ ಆವರಣದಲ್ಲಿ ಸ್ವಚ್ಛತೆ ಕಾಪಾಡಲು ಮತ್ತಷ್ಟು ಆದ್ಯತೆ ನೀಡಬೇಕು. ಅಪೌಷ್ಟಿಕೆತಯಿಂದ ಬಳಲುತ್ತಿರುವ ಮಕ್ಕಳ ದೃಷ್ಡಿಯಿಂದ ಗುರಿ ನಿಗದಿಪಡಿಸಿಕೊಂಡು ಮಕ್ಕಳ ಆರೋಗ್ಯ ಕಾಳಜಿ ಹೊಂದಿ ಕಾರ್ಯ ನಿರ್ವಹಿಸಬೇಕು. ಜಿಲ್ಲೆಯಲ್ಲಿ 108 ಅಂಬುಲೆನ್ಸಗಳ ಸೇವೆ ಸಮರ್ಪಕವಾಗಿ ಇರುವಂತೆ ನೋಡಿಕೊಳ್ಳಬೇಕು. ದುರಸ್ತಿ ಕಾರ್ಯಗಳನ್ನು ನಿಮ್ಮ ಹಂತದಲ್ಲಿಯೇ ನಿರ್ವಹಿಸಿಕೊಂಡು ಜನರಿಗೆ ತೊಂದರೆಯಾಗದAತೆ ನಿಗಾವಹಿಸಬೇಕು ಎಂದು ಹೇಳಿದರು. ಆರೋಗ್ಯ ಕ್ಷೇತ್ರದಲ್ಲಿ ಜಿಲ್ಲೆಗೆ ಒದಗುವ ಮೂಲಭೂತ ಸೌಲಭ್ಯ ಹಾಗೂ ಸಿಬ್ಬಂದಿ ಕೊರತೆ ತಮಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚಿಸಿದರು.
ಜಿಲ್ಲಾಧಿಕಾರಿಗಳಾದ ಡಾ.ಆನಂದ ಕೆ ಅವರು ಮಾತನಾಡಿ, ನಗರ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದ ನಗರ ಸೌಂದರ್ಯಿಕರಣಕ್ಕಾಗಿ ಸ್ವಚ್ಚತೆ ಕಾಪಾಡಲು “ಕಸ ಕಂಡರೆ ಫೋಟೋ ಕಳಿಸಿ” ವಿಶೇಷ ಆಭಿಯಾನ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲು ಈಗಾಗಲೇ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳ ಸಭೆ ಕರೆದು, ಅಗತ್ಯ ಸಲಹೆ ಸೂಚನೆ ನೀಡಲಾಗಿದೆ. ಜಿಲ್ಲೆಯ ಕೆರೆಗಳ ಸಂರಕ್ಷಣೆಗಾಗಿ ಕ್ರಮವಹಿಸಲಾಗುತ್ತಿದೆ. ಜಿಲ್ಲೆಯಲ್ಲಿನ 267 ಕೆರೆಗಳ ಪೈಕಿ ಎಲ್ಲಾ ಕೆರೆಗಳ ಅಳತೆ ಹಾಗೂ ಒತ್ತುವರಿ ತೆರವು ಕಾರ್ಯ ಪೂರ್ಣಗೊಳಿಸಲಾಗಿದೆ. 11 ಕೆರೆಗಳ ವಿವಿಧ ಕಾರಣಗಳಿಂದ ಒತ್ತುವರಿ ತೆರವು ಬಾಕಿ ಇದ್ದು ಇರುವ ಅಡೆತಡೆ ನಿವಾರಿಸಿಕೊಂಡು ಕ್ರಮವಹಿಸಲಾಗುವುದು ಎಂದು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಮಾತನಾಡಿ, ಶಾಲಾ-ಕಾಲೇಜ್ ವಿದ್ಯಾರ್ಥಿಗಳಿಂದ ಶನಿವಾರ ಸ್ವಚ್ಛತಾ ಅಭಿಯಾನ ಕೈಗೊಂಡು ಜಾಗೃತಿ ಮೂಡಿಸಲಾಗುತ್ತಿದೆ. ಕ್ಷೇತ್ರ ವೀಕ್ಷಣೆ ಮಾಡುವ ಮೂಲಕ ಅಂಗನವಾಡಿ ಶಾಲಾ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆ, ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿರುವ ಕುರಿತು ಸ್ಥಿತಿಗತಿಗಳನ್ನು ಅರಿತು ಅಗತ್ಯ ಕ್ರಮಗಳನ್ನು ವಹಿಸಲಾಗಿದೆ ಎಂದು ಹೇಳಿದರು.
ಸಭೆsೆಯಲ್ಲಿ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿಗಳಾದ ಬಿ.ಎಸ್.ಪಾಟೀಲ ಅವರು ಸಾರ್ವಜನಿಕರ ಕುಂದು-ಕೊರತೆ, ಅಹವಾಲುಗಳನ್ನು ಆಲಿಸಿ ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆsÉಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹಿರಿಯ ಸಿವಿಲ್ ನ್ಯಾಯಾಧೀಶರಾದ ಅರವಿಂದ ಹಾಗರಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷö್ಮಣ ನಿಂಬರಗಿ, ಲೋಕಾಯುಕ್ತರ ಕಾರ್ಯದರ್ಶಿಗಳಾದ ಕೆ.ಶ್ರೀನಾಥ, ಕರ್ನಾಟಕ ಲೋಕಾಯುಕ್ತ ವಿಜಯಪುರ ಪೊಲೀಸ್ ಅಧೀಕ್ಷಕ ಟಿ.ಮಲ್ಲೇಶ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಲೋಕಾಯುಕ್ತ ಡಿವೈಎಸ್‌ಪಿ ಸುರೇಶ ರೆಡ್ಡಿ, ವಿಜಯಪುರ ಉಪವಿಭಾಗಾಧಿಕಾರಿ ಗುರುನಾಥ ದಡ್ಡೆÀ, ಸೇರಿದಂತೆ ವಿವಿಧ ಇಲಾಖೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
Sunday, August 10, 2025
Saturday, August 9, 2025
Thursday, August 7, 2025
ಶ್ರೀ ನುಲಿಯ ಚಂದಯ್ಯ ಜಯಂತಿ ಕಾರ್ಯಕ್ರಮ ಆ.9ರಂದು ಜಿಲ್ಲಾಡಳಿತದಿಂದ ಜಯಂತಿ ಆಚರಣೆ
ವಿಜಯಪುರ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಶ್ರೀ ನುಲಿಯ ಚಂದಯ್ಯ ಜಯಂತಿ ಕಾರ್ಯಕ್ರಮವನ್ನು ಆಗಸ್ಟ್ 9ರಂದು ಆಯೋಜಿಸಲಾಗಿದೆ. ಅಂದು ಬೆಳಿಗ್ಗೆ 9.30ಕ್ಕೆ ನುಲಿಯ ಚಂದಯ್ಯ ಅವರ ಭಾವಚಿತ್ರದ ಮೆರವಣಿಗೆ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಿಂದ ಪ್ರಾರಂಭಗೊAಡು ಬಸವೇಶ್ವರ ವೃತ್ತದ ಮಾರ್ಗವಾಗಿ ಕಂದಗಲ್ ಶ್ರೀ ಹನುಮಂತರಾಯ ರಂಗಮAದಿರದಲ್ಲಿ ಸಮಾವೇಶಗೊಳ್ಳಲಿದೆ. ವೇದಿಕೆ ಕಾರ್ಯಕ್ರಮ ಬೆಳಿಗ್ಗೆ 10.30ಕ್ಕೆ ಕಂದಗಲ್ ಶ್ರೀ ಹನುಮಂತರಾಯ ರಂಗಮAದಿರದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಇಲಾಖೆ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವರಾz ಡಾ.ಎಂ.ಬಿ.ಪಾಟೀಲ ಅವರು ನೆರವೇರಿಸಲಿದ್ದು, ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆಯ ಸಚಿವರಾದ ಶಿವಾನಂದ ಎಸ್. ಪಾಟೀಲ ಅವರು ಕಾರ್ಯಕ್ರಮದಲ್ಲಿ ಗೌರವ ಉಪಸ್ಥಿತರಿರಲಿದ್ದಾರೆ.
ಶಾಸಕ ಬಸನಗೌಡ ಆರ್.ಪಾಟೀಲ (ಯತ್ನಾಳ) ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ರವಿಕುಮಾರ ಎನ್., ನವದೆಹಲಿಯ ಕರ್ನಾಟಕ ಸರ್ಕಾದ ವಿಶೇಷ ಪ್ರತಿನಿಧಿ-2 ಹಾಗೂ ಶಾಸಕ ಪ್ರಕಾಶ ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ನಿಯಮಿತದ ಅಧ್ಯಕ್ಷರಾದ ಶಾಸಕರಾದ ಅಪ್ಪಾಜಿ ಸಿ.ಎಸ್.ನಾಡಗೌಡ, ಸಂಸದರಾದ ರಮೇಶ ಜಿಗಜಿಣಗಿ ಹಾಗೂ ಸುಧಾ ಮೂರ್ತಿ ಸೇರಿದಂತೆ ಜಿಲ್ಲೆಯ ವಿವಿಧ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಸಾಹಿತಿ ಡಾ.ಮಾಧವ ಎಚ್. ಗುಡಿ ಅವರು ವಿಶೇಷ ಉಪನ್ಯಾಸ ನೀಡಲಿದ್ದು, ಗಿರಿಮಲ್ಲಪ್ಪ ಸತ್ಯಪ್ಪ ಭಜಂತ್ರಿ ಅವರು ಶಹನಾಯ್ ವಾದನ ಮತ್ತು ಗಾಯನ ನಡೆಸಿಕೊಡಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿದೇಶಕ ಸಂತೋಷ ಭೋವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
ಪ್ರವಾಹ ಪರಿಸ್ಥಿತಿಯಾಗದಂತೆ ಮುನ್ನಚ್ಚರಿಕೆ ಕ್ರಮ ವಹಿಸಿ : ಜಿಪಂ ಸಿಇಓ ರಿಷಿ ಆನಂದ
ವಿಜಯಪುರ : ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ಗುರುವಾರ ತಿಕೋಟಾ & ಬಬಲೇಶ್ವರ ತಾಲೂಕಿಗೆ ಭೇಟಿ ನೀಡಿ ವಿವಿಧ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.
ತಿಕೋಟಾ ಪಟ್ಟಣದ ಕೆ.ಜಿ.ಎಸ್ ಶಾಲೆಗೆ ಭೇಟಿ ನೀಡಿ, ಶಾಲೆಯ ಮೂಲಭೂತ ಸೌಕರ್ಯಗಳನ್ನು ವೀಕ್ಷಿಸಿದ ಅವರು, ಶಿಥಿಲಾವಸ್ಥೆಗೊಂಡಿರುವ ಶಾಲಾ ಕೊಠಡಿಗಳಲ್ಲಿ ಮಕ್ಕಳಿಗೆ ಪಾಠ ಭೋಧನೆ ಮಾಡದೇ ಪರ್ಯಾಯ ವ್ಯವಸ್ಥೆ ಮಾಡಿಕೊಂಡು ಪಾಠ ಭೋಧನೆ ಮಾಡಲು ಉಸ್ತುವಾರಿ ಸಚಿವರ ನಿರ್ದೇಶನದಂತೆ ಕ್ರಮ ವಹಿಸಬೇಕ.ಶಾಲೆಯಲ್ಲಿನ ಕಂಪ್ಯೂಟರಗಳನ್ನು ವಿದ್ಯಾರ್ಥಿಗಳು ಜ್ಞಾನ ಅಭಿವೃದ್ಧಿಗೆ ಉಪಯೋಗಿಸುವಂತೆ ಪ್ರೇರಣೆ ನೀಡಬೇಕು. ಎಂದು ಅವರು ಹೇಳಿದರು.
ಮಳೆ ಬಂದ ಸಂದರ್ಭದಲ್ಲಿ ಯಾವುದೇ ಶಾಲಾ ಆವರಣದಲ್ಲಿ ಮಳೆ ನೀರು ನೀಲದಂತೆ ಅಗತ್ಯ ಮುಂಜಾಗೃತೆ ವಹಿಸಬೇಕು. ದುರಸ್ತಿಗೊಳಿಸುವುದು ಅವಶ್ಯಕವಿದ್ದಲ್ಲಿ ಕ್ರಿಯಾಯೋಜನೆ ತಯಾರಿಸಿ, ಇಲಾಖೆಯ ಮೇಲಾಧಿಕಾರಿಗಳಿಗೆ ಸಲ್ಲಿಸುವಂತೆ ಅವರು ಸೂಚನೆ ನೀಡಿದರು.
ಅಡುಗೆ ಕೋಣೆಯಲ್ಲಿರಿಸಿದ ಆಹಾರ ಧಾನ್ಯಗಳನ್ನು ವೀಕ್ಷಿಸಿದ ಅವರು, ದಾಸ್ತಾನುಗಳು ಹಾಗೂ ತರಕಾರಿ ಸಾಮಗ್ರಿಗಳನ್ನು ಪ್ರತಿನಿತ್ಯ ಸ್ವಚ್ಛತೆಯಿಂದ ಕಾಯ್ದುಕೊಳ್ಳಬೇಕು ಎಂದು ಅಲ್ಲಿನ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಅಂಗನವಾಡಿ ಕೇಂದ್ರಗಳ ಕಟ್ಟಡಗಳಲ್ಲಿ ಮಳೆ ಬಂದ ಸಮಯದಲ್ಲಿ ಯಾವುದೇ ಸಮಸ್ಯೆ ಉದ್ಭವಿಸÀದಂತೆ ಎಚ್ಚರಿಕೆ ವಹಿಸಬೇಕು ಮತ್ತು ಕಟ್ಟಡಗಳ ದುರಸ್ತಿ ಕಾರ್ಯ ಬಾಕಿಯಿದ್ದಲ್ಲಿ ಕೂಡಲೇ ದುರಸ್ತಿ ಕಾರ್ಯ ಕೈಗೊಳ್ಳುವಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಸೂಚನೆ ನೀಡಿದರು.
ತಿಕೋಟಾ ಪಟ್ಟಣದಿಂದ ತಾಜಪುರ ಹೆಚ್ ಗ್ರಾಮ ಪಂಚಾಯಿತಿಗೆ ಹೋಗುವ ರಸ್ತೆಯ ಮಧ್ಯದಲ್ಲಿ ಇರುವ ಹಳ್ಳಕ್ಕೆ ಭೇಟಿ ನೀಡಿದ ಅವರು, ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಂತರ ಕೋಟ್ಯಾಳ ಗ್ರಾ.ಪಂ. ವ್ಯಾಪ್ತಿಯ ಹರನಾಳ ಗ್ರಾಮದ ಡೋಣಿ ನದಿ ಬ್ರಿಡ್ಜ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಇತ್ತೀಚೆಗೆ ಸುರಿದ ಮಳೆ ನೀರಿನಿಂದ ಬ್ರಿಡ್ಜ್ ಮೇಲೆ ನೀರು ಹರಿಯುತ್ತಿರುವುದರಿಂದ ಅನಾನೂಕೂಲವಾಗುತ್ತಿದ್ದು, ಪ್ರಗತಿಯಲ್ಲಿರುವ ಕಾಮಗಾರಿಯನ್ನು ಕೂಡಲೇ ಪೂರ್ಣಗೊಳಿಸಿ, ರೈತರು ಮತ್ತು ಸಾರ್ವಜನಿಕರು ಓಡಾಡಲು ಮುಕ್ತ ಅವಕಾಶ ಕಲ್ಪಿಸುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬೆಳೆ ಹಾನಿ ಕುರಿತು ಸಮಗ್ರ ಸಮೀಕ್ಷೆ ನಡೆಸಿ, ರೈತರಿಗೆ ಪರಿಹಾರ ಒದಗಿಸಲು ಆದ್ಯತೆಯ ಮೇರೆಗೆ ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ತೋಟಗಾರಿಕೆ ಅಧಿಕಾರಿಗಳು ಮತ್ತು ಕೃಷಿ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಅತ್ಯಂತ ಜವಾಬ್ದಾರಿಯಿಂದ ಕೆಲಸ ನಿರ್ವಹಿಸಬೇಕು ಎಂದು ಸೂಚನೆ ನೀಡಿದರು.
ಕೋಟ್ಯಾಳ ಗ್ರಾಮದ ಹತ್ತಿರ ಇರುವ ಬ್ರಿಡ್ಜ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಮುಂಬರುವ ದಿನಗಳಲ್ಲಿ ಹೆಚ್ಚು ಮಳೆ ಬರುವ ಸಂಭವವಿರುವುದರಿAದ ರೈತ್ತರ ಬೆಳೆ ಹಾನಿಯಾಗದಂತೆ ಅದಕ್ಕೆ ಪೂರಕವಾಗಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಗ್ರಾಮ ಪಂಚಾಯಿತಿ ಮತ್ತು ಇಲಾಖಾಧಿಕಾರಿಗಳಿಗೆ ಸೂಚನೆ ನೀಡಿದರು.
ಹೊನವಾಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ಅವರು, ಶಾಲಾ ಕೊಠಡಿಗಳಿಗೆ ತೆರಳಿ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದರು. ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಶೌಚಾಲಯ, ಪಾಠ ಬೋಧನೆ ಸೇರಿದಂತೆ ಮೂಲ ಸೌಕರ್ಯಗಳನ್ನು ಪೂರೈಸಬೇಕು. ಪ್ರಗತಿ ಹಂತದಲ್ಲಿರುವ ಶೌಚಾಲಯ ಕಾಮಗಾರಿಯನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಬೇಕು. ಅಡುಗೆ ಕೋಣೆ ಕಾಮಗಾರಿಯನ್ನು ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಅನುಷ್ಠಾನ ಮಾಡಲು ಕ್ರಮ ಕೈಗೊಳ್ಳಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಸೂಚಿಸಿದ ಅವರು, ಇದೇ ವೇಳೆ ಬಸವಂತರಾಯ ಪ್ರೌಢ ಶಾಲೆಗೆ ಭೇಟಿ ನೀಡಿ, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಪ್ರತಿದಿನ ವಿದ್ಯಾರ್ಥಿಗಳು ಉತ್ತಮ ಓದು, ಉತ್ತಮ ಆಟ ಹಾಗೂ ಉತ್ತಮ ಊಟ ಈ ವಿಷಯಗಳಲ್ಲಿ ಆಸಕ್ತಿ ವಹಿಸಬೇಕು. ವಿಧ್ಯಾರ್ಥಿಗಳ ಕುಂದು ಕೊರತೆಗಳ ಬಗ್ಗೆ ಚರ್ಚಿಸಿದರು. ವಿದ್ಯಾರ್ಥಿಗಳು ವಿಜ್ಞಾನ ವಿಷಯದಲ್ಲಿ ಸಸ್ಯ ಜೀವಕೋಶಗಳು ಮತ್ತು ಪ್ರಾಣಿ ಜೀವಕೋಶಗಳು ಹಾಗೂ ಇನ್ನಿತರ ಚಿತ್ರಗಳನ್ನು ಬಿಡಿಸಿದ್ದರು. ಸದರಿ ಚಿತ್ರಗಳನ್ನು ವೀಕ್ಷಿಸಿ ಹರ್ಷ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳಿಗೆ ನಿಯಮಿತವಾಗಿ ಕಾಲ ಕಾಲಕ್ಕೆ ಪರೀಕ್ಷೆಗಳನ್ನು ಏರ್ಪಡಿಸಬೇಕು. ಪರೀಕ್ಷೆಯಿಂದ ವಿದ್ಯಾರ್ಥಿಗಳ ಜ್ಞಾನ ವರ್ಧನೆಗೆ ವಿನೂತನ ಚಟುವಟಿಕೆಗಳನ್ನು ಜರುಗಿಸಬೇಕು. ಈ ಮೂಲಕ ಮಕ್ಕಳ ಕಲಿಕಾ ಮಟ್ಟವನ್ನು ಸುಧಾರಿಸುವುದು. ಪರೀಕ್ಷೆ ಕೈಗೊಂಡ ಎರಡು ದಿನಗಳಲ್ಲಿ ಉತ್ತರ ಪತ್ರಿಕೆಗಳನ್ನು ಮರಳಿಸಬೇಕು. ಏನಾದರೂ ತಪ್ಪಿದ್ದರೆ ಅದನ್ನು ತಿದ್ದಿ ಸರಿಪಡಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಸಲಹೆ ನೀಡಬೇಕು ಎಂದು ಮುಖ್ಯ ಗುರುಗಳಿಗೆ ಸೂಚನೆ ನೀಡಿದರು. ಪ್ರೌಢಶಾಲೆಗೆ ಖಾಲಿ ಇದ್ದ ಶಿಕ್ಷಕರ ಹುದ್ದೆಗೆ ಪ್ರಸ್ತಾವನೆ ಕೂಡಲೇ ಜಿಲ್ಲಾ ಪಂಚಾಯಿತಿಗೆ ಸಲ್ಲಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದರು.
ನಂತರ ಬಬಲೇಶ್ವರ ತಾಲೂಕಿನ ನಿಡೋಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಾಶ್ಯಾಳ, ಸಾರವಾಡ ಹಾಗೂ ದದಾಮಟ್ಟಿ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ವಚ್ಚ ವಾಹಿನಿಗಳ ಮೂಲಕ & ಡಂಗುರ ಸಾರುವ ಮೂಲಕ ಪ್ರವಾಹದಿಂದ ಸುರಕ್ಷೀತವಾಗಿರಲು ಸಾರ್ವಜನಿಕರಿಗೆ ಮಾಹಿತಿ ನೀಡಬೇಕು ಹಾಗೂ ಪ್ರವಾಹದಿಂದ ಬೆಳೆ ನಷ್ಟವಾದ ರೈತರ ಮಾಹಿತಿ ಸಂಗ್ರಹಿಸಲು ಬಬಲೇಶ್ವರ ತಾಲೂಕಿನ ಕಾರ್ಯ ನಿರ್ವಾಹಕ ಅಧಿಕಾರಿಗಳು ಜೆ ಎಸ್ ಪಠಾಣ್ ಅವರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಿವನಗೌಡ ಪಾಟೀಲ, ತಿಕೋಟಾ ತಾಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಸವಂತ್ರಾಯಗೌಡ ಬಿರಾದಾರ, ಬಬಲೇಶ್ವರ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿ ಜೆ.ಎಸ್.ಪಠಾಣ, ಪಂಚಾಯತ್ ರಾಜ್ ಇಂಜಿನಿಯರಿAಗ್ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ರವಿ ಪವಾರ, ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಮೋದಿನಿ ಬಳೋಲಮಟ್ಟಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಸ್ . ಎಸ್. ಮ್ಯಾಗೇರಿ, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ಬಸನಗೌಡ ಪಾಟೀಲ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ಮಂಜುನಾಥ ಜನಮಟ್ಟಿ, ತಾಲೂಕು ಪಂಚಾಯಿತಿಯ ಸಹಾಯಕ ನಿರ್ದೇಶಕರು (ಗ್ರಾ.ಉ) ಬಸವರಾಜ ಸಂಕಗೊAಡ, ಸೆಕ್ಷನ್ ಇಂಜಿನಿಯರ್ ಪ್ರಶಾಂತ ಹೆಬ್ಬಾರೆ, ತಾಲೂಕು ಪಂಚಾಯಿತಿ ಲೆಕ್ಕಾಧಿಕಾರಿಗಳಾದ ಅನ್ವರ್ ನದಾಫ್, ಹೊನವಾಡ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶೋಭಾ ಶೀಳಿನ, ತಾಜಪುರ ಹೆಚ್ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಉಮೇಶ ಕನಮಡಿ, ಕೋಟ್ಯಾಳ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂತೋಷಕುಮಾರ ಬಿರಾದಾರ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ, ಸಾರ್ವಜನಿಕರು ಹಾಗೂ ಇತರರು ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
ಜಿಲ್ಲಾಧಿಕಾರಿ ಡಾ.ಆನಂದ ಕೆ.ನಗರದ ವಿವಿಧೆಡೆ ಭೇಟಿ : ಪರಿಶೀಲನೆ
ವಿಜಯಪುರ : ವಿಜಯಪುರ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ನಗರದ ಶಿವಾಜಿ ಸರ್ಕಲ್ ಹತ್ತಿರ, ರಾಮನಗರ ರಸ್ತೆ, ನವಬಾಗ ರಸ್ತೆ, ಮನಗೂಳಿ ಅಗಸಿ, ಜುಮ್ಮಾ ಮಸೀದಿ, ಕಸ್ತೂರಿ ಕಾಲನಿ, ರೇಲ್ವೆ ಸ್ಟೇಶನ್ ಸೇರಿದಂತೆ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗುರುವಾರ ಬೆಳಿಗ್ಗೆ ನಗರದ ವಿವಿಧೆಡೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ನಗರದಾದ್ಯಂತ ಇರುವ ಕೋಟೆಗೋಡೆ ಆವರಣಗಳಲ್ಲಿ ಮಳೆ ನೀರು ನಿಲ್ಲದಂತೆ ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡಬೇಕು. ಮುಳ್ಳುಗಂಟಿಗಳನ್ನು ತೆರವುಗೊಳಿಸಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಕೋಟೆಗೋಡೆಯನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿ ಸೌಂದರ್ಯಿಕರಣಕ್ಕೆ ಒತ್ತು ನೀಡುವಂತೆ ಸೂಚಿಸಿದ ಅವರು, ಐತಿಹಾಸಿಕ ವಿಜಯಪುರ ನಗರಕ್ಕೆ ಪ್ರವಾಸಿಗರು ಆಗಮಿಸುತ್ತಿರುವುದರಿಂದ ನಗರದಾದ್ಯಂತೆ ಸ್ವಚ್ಛತೆಗೆ ಆದ್ಯತೆ ನೀಡಿ, ಅವಶ್ಯಕತೆ ಇದ್ದಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ಪ್ರವಾಸಿಗರಿಗೆ ಅನುಕೂಲ ಕಲ್ಪಿಸಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.
ಮಳೆ ನೀರು ಒಂದೆಡೆ ನಿಂತು ಪ್ರವಾಹ ಪರಿಸ್ಥಿತಿಯಾಗದಂತೆ ನೋಡಿಕೊಳ್ಳಲು ಅವಶ್ಯಕವಿದ್ದೆಡೆ ಮಳೆ ನೀರು ಚರಂಡಿ ನಿರ್ಮಿಸಲು ಯೋಜನೆ ರೂಪಿಸಿ ಶಾಶ್ವತ ಪರಿಹಾರ ಕಂಡು ಕೊಳ್ಳಲು ಸೂಕ್ತ ಕ್ರಿಯಾಯೋಜನೆ ರೂಪಿಸುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ನಗರದ ಇಂಡಿ ರಸ್ತೆಯಲ್ಲಿರುವ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಘನತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿಗೆ ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಅಧೀಕ್ಷಕ ಅಭಿಯಂತರ ತಿಮ್ಮಪ್ಪ, ಕಾರ್ಯನಿರ್ವಾಹಕ ಅಭಿಯಂತರ ವಿಠ್ಠಲ ಹೊನ್ನಳ್ಳಿ, ಆರೋಗ್ಯಾಧಿಕಾರಿ ಎಸ್.ಎಲ್.ಲಕ್ಕಣ್ಣವರ ಸೇರಿದಂತೆ ಪಾಲಿಕೆಯ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
Wednesday, August 6, 2025
Tuesday, August 5, 2025
Monday, August 4, 2025
ಶ್ರೀ ರಾಘವೇಂದ್ರ ಸ್ವಾಮೀಜಿಗಳ 354 ನೇ ಆರಾಧನಾ ಮಹೋತ್ಸವ
ದಿ.10 ರಂದು ಪೂರ್ವಾರಾಧನೆ ನಡೆಯಲಿದ್ದು, ಬೆಳಿಗ್ಗೆ 5 ಕ್ಕೆ ಸುಪ್ರಭಾತ, ಬೆಳಿಗ್ಗೆ 6 ರಿಂದ ಗೋಪೂಜೆ, ಧ್ವಜಾರೋಹಣ, ಬೆಳಿಗ್ಗೆ 7 ಕ್ಕೆ ಶ್ರೀ ಗುರುರಾಜರ ಭಾವಚಿತ್ರದ ಮೆರವಣಿಗೆ, ನಂತರ ಶ್ರೀಹರಿ ವಾಯುಸ್ತುತಿ ಪುನಶ್ಚರಣ, ಶ್ರೀ ಗುರುಸ್ತೋತ್ರ ಪಠಣ, ನಂತರ ಶ್ರೀ ಗುರು ಸಾರ್ವಭೌಮರಿಗೆ ಕ್ಷೀರಾಭೀಷೇಕ, ಪಂಚಾಮೃತಮಹಾಭಿಷೇಕ ನಡೆಯಲಿದೆ. ಮಧ್ಯಾಹ್ನ ಮಹಾಪೂಜೆ, ನೈವೇದ್ಯ, ಅಲಂಕಾರ, ಹಸ್ತೋದಕ, ಮಹಾಮಂಗಳಾರತಿ, ತೀರ್ಥಪ್ರಸಾದ ವಿತರಣೆ ನಡೆಯಲಿದೆ. ಸಂಜೆ 5 ಕ್ಕೆ ಪಲ್ಲಕ್ಕಿ ಸೇವೆ, ರಜತ ರಥೋತ್ಸವ, ಡೋಲೋತ್ಸವ, ಅಷ್ಟಾವಧಾನ ಸೇವೆ, ಮಹಾಮಂಗಳಾರತಿ, ಮಂತ್ರಪುಷ್ಪ, ಶ್ರೇಯ:ಪ್ರಾರ್ಥನೆ ನಡೆಯಲಿದೆ.
ದಿನಾಂಕ 11 ರಂದು ಮಧ್ಯಾರಾಧನೆ ಪ್ರಯುಕ್ತ ಬೆಳಿಗ್ಗೆ 5 ಕ್ಕೆ ಸುಪ್ರಭಾತ, ನಂತರ ಶ್ರೀಹರಿ ವಾಯುಸ್ತುತಿ ಪುನಶ್ಚರಣ ಸಪ್ತಕಹವನ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿದ್ದು, ಮಧ್ಯಾಹ್ನ 12 ಕ್ಕೆ ಪೂರ್ಣಾಹುತಿ ಸಮರ್ಪಣೆ ನಡೆಯಲಿದೆ, ಮಧ್ಯಾಹ್ನ 12 ರಿಂದ ಪೂರ್ಣಾಹುತಿ ಸಮರ್ಪಣೆ, ಮಹಾಪೂಜೆ, ನೈವೇದ್ಯ, ಅಲಂಕಾರ, ತೀರ್ಥಪ್ರಸಾದ ವಿತರಣೆ ನಡೆಯಲಿದೆ. ಸಂಜೆ 5 ಕ್ಕೆ ಪಲ್ಲಕ್ಕಿ ಸೇವೆ ಮೊದಲಾದ ಕಾರ್ಯಕ್ರಮಗಳು ಜರುಗಲಿವೆ.
ದಿನಾಂಕ 12 ರಂದು ಉತ್ತರಾರಾಧನೆ ನಡೆಯಲಿದ್ದು, ಬೆಳಿಗ್ಗೆ 5 ಕ್ಕೆ ಸುಪ್ರಭಾತ, ಬೆಳಿಗ್ಗೆ 7 ಕ್ಕೆ ರಥಾಂಗ ಹವನ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ.
ಇದಕ್ಕೂ ಮುನ್ನ ದಿ.7 ರಂದು ಸಂಜೆ 7 ಕ್ಕೆ ಕಲಬುರ್ಗಿಯ ಖ್ಯಾತ ಸಂಗೀತಕಾರ ಡಾ.ರಮೇಶ ಕುಲಕರ್ಣಿ ಅವರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
Sunday, August 3, 2025
ಗಡಿಕಾಯುವ ವೀರಯೋಧರಿಗಾಗಿ ರಾಖಿ ರವಾನಿಸಿ ದೇಶಪ್ರೇಮ ಮೆರೆದ ಚಿಣ್ಣರು
ವಿಜಯಪುರ : ಶ್ರೀಮತಿ ವಿಜಯಲಕ್ಷ್ಮಿ ಸರ್ವೋತ್ತಮ ದೇಶಪಾಂಡೆ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಂಘದ ವಿಶೇಷ ಚೇತನ ಮಕ್ಕಳ ಪುನಶ್ಚೇತನ ಕೇಂದ್ರದ ಮಕ್ಕಳು ಹಾಗೂ ಶ್ರೀ ರುಕ್ಮಾಂಗದ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳು ಮನೆಯಲ್ಲಿರುವ ನಿರುಪಯುಕ್ತ ವಸ್ತುಗಳನ್ನು ಬಳಸಿ ವಿಭಿನ್ನವಾದ ರೀತಿಯಲ್ಲಿ ರಾಖಿಯನ್ನು ತಯಾರಿಸಿ ಗಡಿಕಾಯುವ ಯೋಧರಿಗೆ ಕಳುಹಿಸುವ ಮೂಲಕ ದೇಶನಿಷ್ಠೆಯನ್ನು ಮೆರೆದಿದ್ದಾರೆ.
ಮಕ್ಕಳು ತಯಾರಿಸಿದ ರಾಖಿಗಳು ಒಳಗೊಂಡ ಪೆಟ್ಟಿಗೆಯನ್ನು ವೀರಯೋಧರ ವಿಳಾಸಕ್ಕೆ ರವಾನಿಸುವಂತೆ ವಿಜಯಪುರ ಜಿಲ್ಲೆಯ ಜಿಲ್ಲಾಧಿಕಾರಿ ಆನಂದ ಅವರಲ್ಲಿ ಮನವಿ ಮಾಡಿಕೊಂಡರು.
ಈ ಸಂದರ್ಭ ಶ್ರೀಮತಿ ವಿಜಯಲಕ್ಷ್ಮಿ ಸರ್ವೋತ್ತಮ ದೇಶಪಾಂಡೆ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಂಘ, ಸ್ಥಾಪಕರು ಹಾಗೂ ವಿಶೇಷ ಚೇತನ ಮಕ್ಕಳ ಪುನಶ್ಚೇತನ ಕೇಂದ್ರದ ಮುಖ್ಯಸ್ಥರಾದ ಪ್ರಶಾಂತ್ ದೇಶಪಾಂಡೆ ಮಾತನಾಡಿ, ಇಂದು ನಮಗಾಗಿ ಹಗಲಿರುಳು ಎನ್ನದೆ ದೇಶವನ್ನು ಕಾಯುತ್ತಿರುವ ಯೋದÀರಿಂದಲೇ ನಾವುಇಷ್ಟು ನೆಮ್ಮದಿಯಿಂದ ಬದುಕಲು ಸಾಧ್ಯವಾಗಿದೆ ಮಾತ್ರವಲ್ಲ ಅವರಿಂದ ದೇಶ ಸುಭದ್ರವಾಗಿರಲು ಸಾಧ್ಯವಾಗಿದೆ. ಅಂತಹ ವೀರ ಯೋಧರಿಗೆ ರಾಖಿಯನ್ನು ಕಳಿಸುತ್ತಿರುವುದು ಬಹಳ ಆನಂದವನ್ನು ತಂದಿದೆ ಎಂದರು.
ಈ ಸಂದರ್ಭ ಮನೋಜ ಗಿರಗಾಂವಿ ಮಾತನಾಡಿ, ಹೆತ್ತ ತಾಯಿ, ಭೂಮಿ ತಾಯಿ ಸ್ವರ್ಗಕ್ಕಿಂತ ದೊಡ್ಡವಳು. ಅಂತಹ ಭಾರತದ ನೆಲ ,ಜಲ ರಕ್ಷಣೆಗಾಗಿ ಸೇವೆಸಲ್ಲಿಸುತ್ತಿರುವ ಯೋಧರ ಕಾರ್ಯ ನಿಜವಾಗಲೂ ಅಭಿನಂದನೀಯ. ಮಕ್ಕಳಲ್ಲಿ ದೇಶಪ್ರೇಮ ಬೆಳಸುವ ನಿಟ್ಟಿನಲ್ಲಿ ಮಕ್ಕಳು ತಾವೇ ತಯಾರಿಸಿ ರಾಖಿಯನ್ನು ಯೋಧರಿಗೆ ಕಳುಹಿಸುತ್ತಿರುವುದು ಹೆಮ್ಮೆಯೆನಿಸುತ್ತಿದೆ ಎಂದರು.
ಈ ಸಂದರ್ಭ ಅಶೋಕ ಹಿರೇಮಠ, ಪ್ರತಿಮಾ ಪೂಜಾರಿ, ಕಸ್ತೂರಿ ಕಾಂಬಳೆ, ಮಂಜುನಾಥ ಕಾಂಬಳೆ, ಸುಪ್ರಿತ್ ಅಲಬನೂರು, ಅಂಬರೀಶ್, ಜ್ಯೋತಿ ತಡ, ರಿಯಾಜ್ ಚಿಗರೊಳ್ಳಿ ಇದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.








.jpeg)



.jpg)










.jpeg)

