ವಿಜಯಪುರ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಶ್ರೀ ನುಲಿಯ ಚಂದಯ್ಯ ಜಯಂತಿ ಕಾರ್ಯಕ್ರಮವನ್ನು ಆಗಸ್ಟ್ 9ರಂದು ಆಯೋಜಿಸಲಾಗಿದೆ. ಅಂದು ಬೆಳಿಗ್ಗೆ 9.30ಕ್ಕೆ ನುಲಿಯ ಚಂದಯ್ಯ ಅವರ ಭಾವಚಿತ್ರದ ಮೆರವಣಿಗೆ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಿಂದ ಪ್ರಾರಂಭಗೊAಡು ಬಸವೇಶ್ವರ ವೃತ್ತದ ಮಾರ್ಗವಾಗಿ ಕಂದಗಲ್ ಶ್ರೀ ಹನುಮಂತರಾಯ ರಂಗಮAದಿರದಲ್ಲಿ ಸಮಾವೇಶಗೊಳ್ಳಲಿದೆ. ವೇದಿಕೆ ಕಾರ್ಯಕ್ರಮ ಬೆಳಿಗ್ಗೆ 10.30ಕ್ಕೆ ಕಂದಗಲ್ ಶ್ರೀ ಹನುಮಂತರಾಯ ರಂಗಮAದಿರದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಇಲಾಖೆ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವರಾz ಡಾ.ಎಂ.ಬಿ.ಪಾಟೀಲ ಅವರು ನೆರವೇರಿಸಲಿದ್ದು, ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆಯ ಸಚಿವರಾದ ಶಿವಾನಂದ ಎಸ್. ಪಾಟೀಲ ಅವರು ಕಾರ್ಯಕ್ರಮದಲ್ಲಿ ಗೌರವ ಉಪಸ್ಥಿತರಿರಲಿದ್ದಾರೆ.
ಶಾಸಕ ಬಸನಗೌಡ ಆರ್.ಪಾಟೀಲ (ಯತ್ನಾಳ) ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ರವಿಕುಮಾರ ಎನ್., ನವದೆಹಲಿಯ ಕರ್ನಾಟಕ ಸರ್ಕಾದ ವಿಶೇಷ ಪ್ರತಿನಿಧಿ-2 ಹಾಗೂ ಶಾಸಕ ಪ್ರಕಾಶ ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ನಿಯಮಿತದ ಅಧ್ಯಕ್ಷರಾದ ಶಾಸಕರಾದ ಅಪ್ಪಾಜಿ ಸಿ.ಎಸ್.ನಾಡಗೌಡ, ಸಂಸದರಾದ ರಮೇಶ ಜಿಗಜಿಣಗಿ ಹಾಗೂ ಸುಧಾ ಮೂರ್ತಿ ಸೇರಿದಂತೆ ಜಿಲ್ಲೆಯ ವಿವಿಧ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಸಾಹಿತಿ ಡಾ.ಮಾಧವ ಎಚ್. ಗುಡಿ ಅವರು ವಿಶೇಷ ಉಪನ್ಯಾಸ ನೀಡಲಿದ್ದು, ಗಿರಿಮಲ್ಲಪ್ಪ ಸತ್ಯಪ್ಪ ಭಜಂತ್ರಿ ಅವರು ಶಹನಾಯ್ ವಾದನ ಮತ್ತು ಗಾಯನ ನಡೆಸಿಕೊಡಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿದೇಶಕ ಸಂತೋಷ ಭೋವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

No comments:
Post a Comment