ವಿಜಯಪುರ: ವಿದ್ಯಾರ್ಥಿನಿಯರು ಹೆಚ್ಚು ಹೆಚ್ಚು ಸಸಿಗಳನ್ನು ನೆಡುವುದರ ಮೂಲಕ ಪರಿಸರ ಸಮತೋಲನವನ್ನು ಕಾಪಾಡಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಸಹಾಯಕ ಉಪ ಸಂರಕ್ಷಣಾಧಿಕಾರಿ ಅನಂತಕುಮಾರ.ಎಸ್.ಪಾಕಿ. ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ, ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಥಿ ಮಂಡಳಿ ಬೆಂಗಳೂರು (ಕೆಎಸ್‌ಬಿಡಿಬಿ), ಜಿಲ್ಲಾ ಪಂಚಾಯತ, ಸಾಮಾಜಿಕ ಅರಣ್ಯ ವಿಭಾಗ, ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ವಿಜಯಪುರ ಇವರ ಸಂಯೋಗದಲ್ಲಿ ಸೋಮವಾರ ಆಯೋಜಿಸಿದ್ದ ಅಂತರಾಷ್ಟಿçಯ ಜೈವಿಕ ಇಂಧನ ದಿನಾಚಾರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿನಿಯರು ಹೆಚ್ಚು ಹೆಚ್ಚು ಸಸಿಗಳನ್ನು ನೆಡುವುದರ ಮೂಲಕ ಹಸಿರು ಆವರಣವನ್ನು ವಿಸ್ತರಿಸಿ, ಪರಿಸರ ಸಮತೋಲನವನ್ನು ಕಾಪಾಡಿಕೊಳ್ಳಲು ಸಹಕರಿಸಬಹುದು. ಪ್ರತಿ ವಿದ್ಯಾರ್ಥಿನಿಯೂ ಕನಿಷ್ಠ ಒಂದು ಗಿಡವನ್ನು ನೆಡುವ ಸಂಕಲ್ಪ ಕೈಗೊಂಡರೆ, ಭವಿಷ್ಯದ ಪೀಳಿಗೆಯಿಗಾಗಿ ಹಸಿರು, ಶುದ್ಧ ಮತ್ತು ಆರೋಗ್ಯಕರ ವಾತಾವರಣವನ್ನು ನಿರ್ಮಿಸಬಹುದು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮಹಿಳಾ ವಿವಿಯ ಕುಲಪತಿ ಪ್ರೊ.ವಿಜಯಾ.ಬಿ.ಕೋರಿಶೆಟ್ಟಿ ಮಾತನಾಡಿ, ಜೈವಿಕ ಇಂಧನವು ನವೀಕರಿಸಬಹುದಾದ ಶಕ್ತಿಯ ಮೂಲವಾಗಿದ್ದು, ಇದು ಪರಿಸರ ಸಂರಕ್ಷಣೆಗೂ, ಶಾಶ್ವತ ಅಭಿವೃದ್ಧಿಗೂ ಮಹತ್ವದ ಪಾತ್ರ ವಹಿಸುತ್ತದೆ. ಭಾರತ ದೇಶವು ಇಂಧನಗಳ ಅವಲಂಬನೆಯನ್ನು ಹಂತ ಹಂತವಾಗಿ ಕಡಿಮೆ ಮಾಡಿದರೆ, ವಿದೇಶಿ ಇಂಧನ ಆಮದು ವೆಚ್ಚ ಕಡಿಮೆಯಾಗುತ್ತದೆ. ಇದÀರಿಂದ ಆರ್ಥಿಕ ಸ್ಥಿತಿ ಉತ್ತಮಗೊಳ್ಳುತ್ತದೆ ಮತ್ತು ಶಕ್ತಿಯಲ್ಲಿ ಸ್ವಾವಲಂಬನೆ ಸಾಧಿಸಲು ಸಹಕಾರಿಯಾಗುತ್ತದೆ ಎಂದರು.
ಇದೇ ಸಂದರ್ಭದಲ್ಲಿ ಮಹಿಳಾ ವಿವಿಯ ಕಲಸಚಿವ ಶಂಕರಗೌಡ ಸೋಮನಾಳ ವಿದ್ಯಾರ್ಥಿನಿಯರಿಗೆ ಜೈವಿಕ ಇಂಧನದ ಮಹತ್ವ ತಿಳಿಸಿ, ರಸ ಪ್ರಶ್ನೆ ಕಾರ್ಯಕ್ರಮ ನಡೆಸಿಕೊಟ್ಟರು.
ಕಾರ್ಯಕ್ರಮದ ಅಂಗವಾಗಿ ವಿಶ್ವವಿದ್ಯಾನಿಲಯ ಆವರಣದಲ್ಲಿ ಸ್ನಾತಕ ವಿಭಾಗದ ವಿದ್ಯಾರ್ಥಿನಿಯರು ಜೈವಿಕ ಇಂಧನ ಸಂಬAಧಿತ ಸಸಿಗಳನ್ನು ನೆಟ್ಟರು.
ಕಾರ್ಯಕ್ರಮದಲ್ಲಿ ಮಹಿಳಾ ಕೌಶಲ್ಯ ತಂತ್ರಜ್ಞಾನ ಪಾರ್ಕ ವಿಶೇಷಾಧಿಕಾರಿ ಪ್ರೊ.ಅಶೋಕುಮಾರ ಸುರಪುರ, ಸ್ನಾತಕ ಅಧ್ಯಯನ ವಿಭಾಗದ ವಿಶೇಷಾಧಿಕಾರಿ ಡಾ.ಸಕ್ಪಾಲ. ಹೂವಣ್ಣ, ಡಾ.ಶ್ರೀನಿವಾಸ ಮತ್ತು ಬೋಧಕ, ಬೋಧಕೇತರ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. ಕಾರ್ಯಕ್ರಮದ ಮುಖ್ಯ ಸಂಚಾಲಕ ಡಾ.ಬಾಬು ಆರ್. ಎಲ್. ಪ್ರಾಸ್ತಾವಿಕ ನುಡಿಗಳ್ನಾಡಿದರು. ಗ್ರಾಮೀಣ ಅಭಿವೃದ್ದಿ ಸಂಸ್ಥೆಯ ಮುಖ್ಯ ನಿರ್ವಾಹಕ ಅಧಿಕಾರಿ ಡಾ. ಬಾಬು ಸಜ್ಜನ ವಂದಿಸಿದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

No comments:
Post a Comment