Tuesday, September 30, 2025

01-10-2025 EE DIVASA KANNADA DAILY NEWS PAPER

ರಾಷ್ಟಿçÃಯ ಪೋಷಣ ಮಾಸಾಚರಣೆ-ಸ್ವಸ್ಥö್ಯನಾರಿ- ಸಶಕ್ತ ಪರಿವಾರ ಅಭಿಯಾನ ಮತ್ತು ಕಾನೂನು ಅರಿವು ನೆರವು ಕಾರ್ಯಕ್ರಮಕ್ಕೆ ಚಾಲನೆ

 ವಿಜಯಪುರ : ತಾಯಂದಿರು ಸಂಸಾರವನ್ನು ಸಾಗಿಸುವುದರ ಜೊತೆ ಸ್ವಸ್ಥö್ಯವಾಗಿರಲು ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹರೀಶ ಎ. ಅವರು ಹೇಳಿದರು. 

 ಮಂಗಳವಾರ ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದ ಈಶ್ವರಲಿಂಗ ದೇವಸ್ಥಾನದ ಆವರಣದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಂಗ ಇಲಾಖೆ, ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,ಆರೋಗ್ಯ ಇಲಾಖೆ ಹಾಗೂ ಬಿ.ಎಲ್.ಡಿ.ಇ ಕಾನೂನು ಶಾಲೆ ಇವುಗಳ ಸಂಯುಕ್ತಾಶ್ರಯದಲ್ಲಿ ರಾಷ್ಟಿçÃಯ ಪೋಷಣ ಮಾಸಾಚರಣೆ, ಸ್ವಸ್ತ ನಾರಿ, ಸಶಕ್ತ ಪರಿವಾರ ಅಭಿಯಾನ ಮತ್ತು ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

 ತಾಯಂದಿರು ಬೆಳಿಗ್ಗೆಯಿಂದ ರಾತ್ರಿಯವರೆಗೆ ಪ್ರತಿಯೊಂದು ಕೆಲಸಗಳಲ್ಲಿ ನಿರತರಾಗಿರುತ್ತಾರೆ ಅವರಿಗೆ ಬಿಡುವು ಅನ್ನುವುದೆ ಮರಿಚಿಕೆಯಾಗಿರುತ್ತದೆ ಇಂತಹ ಸಮಯದಲ್ಲಿ ಅವರು ಅನಾರೋಗ್ಯ ತುತ್ತಾಗಿ ಕಷ್ಟ ಪಡುವಂತಹ ಪರಿಸ್ಥಿತಿ ಒದಗಿ ಬರುತ್ತವೆ ಈ ದೃಷ್ಟಿಯಲ್ಲಿ ತಮ್ಮ ಆರೋಗ್ಯ ರಕ್ಷಣೆ ಕೂಡ ಅಷ್ಟೆ ಮಹತ್ವದಾಗಿರುತ್ತದೆ. ಕೆಲಸಗಳ ಮದ್ಯ ತಮ್ಮ ಆರೋಗ್ಯಕ್ಕೂ ಮೀಸಲಿಡಬೇಕು. ಹೆಣ್ಣು ಮಕ್ಕಳಿಗಾಗಿ ಉಚಿತ ಕಾನೂನು ಹಾಗೂ ಆರೋಗ್ಯ ಸೇವೆಗಳ ಕುರಿತು ಅಧಿಕಾರಿಗಳು ತಮಗೆ ಸಂಪೂರ್ಣವಾಗಿ ಮಾಹಿತಿ ನೀಡಲಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಹೇಳಿದರು.

 ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರಿನ ಜಿಲ್ಲಾ ನ್ಯಾಯಾದೀಶರು ಮತ್ತು ಸದಸ್ಯ ಕಾರ್ಯದರ್ಶಿಗಳಾದ ಹೆಚ್ ಶಶಿಧರ ಶೆಟ್ಟಿ ಅವರು ಮಾತನಾಡಿ, ನಿರಂತರ ಕರ್ತವ್ಯಗಳ ಮದ್ಯ ಮಹಿಳೆಯರು, ಮಕ್ಕಳು ಆರೋಗ್ಯ ಕಾಪಾಡಿಕೊಳ್ಳುವುದರ ಜೊತೆ ತಮ್ಮ ಸ್ವಾಸ್ತö್ಯವನ್ನು ಕಾಪಾಡಿಕೊಳ್ಳಬೇಕು. ದೌರ್ಜನ್ಯ, ಅನ್ಯಾಯವಾದಲ್ಲಿ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಹಾಗೂ ಪ್ರಶ್ನಿಸುವ ಹಕ್ಕವುಳ್ಳವರಾಗಿದ್ದು ತಮಗೆ ಹತ್ತಿರದ ಗ್ರಾಮ ಪಂಚಾಯತಿ ಇಲ್ಲವೆ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿರುವ ಜನತಾ ನ್ಯಾಯಾಲಯಗಳಲ್ಲಿ ದೂರು ದಾಖಲಿಸಬೇಕು. ತಮಗೆ ಕಾನೂನುಗಳ ಕುರಿತು ಅರಿವು ಮೂಡಿಸಲು ತಮ್ಮ ಗ್ರಾಮ ಮಟ್ಟಗಳಲ್ಲಿ ಶಿಭಿರಗಳನ್ನು ಆಯೋಜಿಸಲಾಗುತ್ತಿದೆ ಅದರ ಸದುಪಯೊಗ ಪಡೆದುಕೊಳ್ಳಬೇಕು ಎಂದು ಅವರು ಹೇಳಿದರು.

 ಕಾನೂನು ಸೇವಾ ಪ್ರಾಧಿಕಾರವು ಹಲವಾರು ಜನರಿಗೆ ಉಚಿತ ಕಾನೂನಿನ ನೆರವನ್ನು ನೀಡುತ್ತಿದೆ ಮಹಿಳೆಯರು ಹಾಗೂ ಮಕ್ಕಳ ಹಕ್ಕುಗಳಿಗಾಗಿ ಇದು ಕಾನೂನಾತ್ಮಕ ಹಕ್ಕಾಗಿದೆ. ಇತ್ತೀಚೆಗೆ ಪೋಕ್ಸೊ ಪ್ರಕರಣಗಳು ಹೆಚ್ಚಾಗುತ್ತಿದ್ದು ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ಮನೆಯಲ್ಲಿ ಮಕ್ಕಳಿಗೆ ಒಳ್ಳೆಯ ಶಿಕ್ಷಣ ನೀಡುವುದು ಮತ್ತು ಪೋಕ್ಸೊ ಕಾಯಿದೆ ಕುರಿತು ಅರಿವು ಹೊಂದಬೇಕು ಎಂದು ಅವರು ಹೇಳಿದರು. 

 ತಮ್ಮ ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಚವಾಗಿಡುವುದು ಅದರೊಂದಿಗೆ ಪ್ಲಾಸ್ಟಿಕ್ ಬಳಕೆ ಮಾಡುವುದನ್ನು ನಿಷೇದ, ಗ್ರಾಮದ ಕೆರೆಗಳನ್ನು ರಕ್ಷಿಸಿ ಅದರಲ್ಲಿರುವ ಹೂಳು ತೆಗೆಯುವುದರಿಂದ ಅಂತರ್ಜಲ ಮಟ್ಟ ಹೆಚ್ಚುವುದು ಇದಕ್ಕೆ ತಾವೆಲ್ಲರೂ ಕೈಜೋಡಿಸಬೇಕು. ಕಾನೂನಿನ ಅರಿವಿನ ಕಾರ್ಯಕ್ರಮಗಳನ್ನು ಸಾಮಾನ್ಯವಾಗಿ ಎಲ್ಲಾ ನಾಗರಿಕರಿಗೆ ವಿಶೇಷವಾಗಿ ಸಮಾಜದ ದುರ್ಬಲ ವರ್ಗಗಳಿಗೆ ಕಾನೂನು ಜ್ಞಾನದ ಸಬಲೀಕರಣಕ್ಕಾಗಿ ತೆಗೆದುಕೊಳ್ಳಲಾಗುತ್ತದೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮಹಿಳೆಯರು ಮತ್ತು ಮಕ್ಕಳಂತಹ ಸಮಾಜದ ದುರ್ಬಲ ವರ್ಗಗಳನ್ನು ತಲುಪಲು ವಿವಿಧ ಕಾರ್ಯಚಟುವಟಿಕೆಗಳನ್ನು ಏರ್ಪಡಿಸಲಾಗುತ್ತಿದೆ. ಎಂದು ಅವರು ಹೇಳಿದರು. 

 ಪ್ರತಿ ಗ್ರಾಮ ಪಂಚಾಯತಿ, ಕಾನೂನು ಮಹಾವಿದ್ಯಾಲಯಗಳಲ್ಲಿ, ಲೀಗಲ್ ಸೇವಾ ಕ್ಲಿನಿಕ್‌ಗಳನ್ನು ತೆರೆಲು ಕ್ರಮ ವಹಿಸಲಾಗುತ್ತಿದೆ. ಲೋಕ ಅದಾಲತ್‌ಗಳಂತಹ ಕಾರ್ಯಕ್ರಮಗಳನ್ನು ಆಯೋಜಿಸಿ ರಾಜಿ ಸಂದಾನದ ಮೂಲಕ ಮಧ್ಯಸ್ಥಿಕೆ ವಹಿಸಿ ತಮ್ಮ ತಮ್ಮ ದೂರುಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ ಸಾರ್ವಜನಿಕರು, ಮಹಿಳೆಯರು, ಮಕ್ಕಳು ಇದರ ಸದುಪಯೊಗ ಪಡೆದುಕೊಳ್ಳುವಂತೆ ಅವರು ತಿಳಿಸಿದರು. 

 ಬೆಂಗಳೂರಿನ ಖಾಯಂ ಜನತಾ ನ್ಯಾಯಾಲಯದ ಅಧ್ಯಕ್ಷರು ಹಾಗೂ ಜಿಲ್ಲಾ ನ್ಯಾಯಾಧೀಶರಾದ ಜೈ ಶಂಕರ ಮಾತಾನಾಡಿ, ಈಗ ಸರ್ಕಾರದ ವಿವಿಧ ಯೋಜನೆಗಳನ್ನು ಜನ ಸಾಮಾನ್ಯರಿಗೆ ತಲುಪಿಸು ಸಮಯೋಚಿತ ನ್ಯಾಯವನ್ನು ಒದಗಿಸಲು ತಮ್ಮ ಗ್ರಾಮಗಳಿಗೆ ಅಧಿಕಾರಿಗಳು ಬಂದು ಸಲಹೆ ಸೂಚನೆಗಳನ್ನು ನೀಡಿ ವಿವಿಧ ಇಲಾಖೆಗಳ ಯೋಜನೆಗಳ ಕುರಿತು ಮಾಹಿತಿ ಗರ್ಭಿಣಿ ಮಹಿಳೆಯರಿಗೆ ಮಕ್ಕಳಿಗೆ ಉತ್ತಮ ಪೌಷ್ಟಿಕ ಆಹಾರ ದೊರಕುವಂತೆ ಕಾನೂನು ಸೇವಾ ಪ್ರಾಧಿಕಾರ ಕರ್ತವ್ಯ ನಿರ್ವಹಿಸುತ್ತದೆ ಹಾಗೂ ನ್ಯಾಯಾಧೀಶರೆ ಇದರ ಉಸ್ತುವಾರಿ ವಹಿಸಿಕೊಳ್ಳುತ್ತದ್ದಾರೆ ಎಂದು ಅವರು ತಿಳಿಸಿದರು.

 ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳಾದ ಗೃಹಲಕ್ಷಿö್ಮÃ ಯೋಜನೆ ಐಸಿಡಿಎಸ್ ಯೋಜನೆ,ಐಸಿಡಿಎಸ್ ಯೋಜನೆ,ಬೇಟಿ ಬಚಾವೋ ಬೇಟಿ ಪಡಾವೋ, ಪ್ರಧಾನಮಂತ್ರಿ ಮಾತೃವಂದನಾ ಯೋಜನೆ, ಪೋಷಣ್ ಅಭಿಯಾನ ಸಾಂತ್ವನ ಯೋಜನೆ, ಬಾಲಕಿಯರ ವಸತಿ ನಿಲಯ ಯೋಜನೆ, ಉದ್ಯೋಗಿನಿ ಚೇತನಾ ಯೋಜನೆ, ಲಿಂಗತ್ವ ಅಲ್ಪ ಸಂಖ್ಯಾತರ ಪುನರ್ವಸತಿ ಯೋಜನೆ, ಧನಶ್ರೀ ಯೋಜನೆ, ಮಿಷÀನ್ ಶಕ್ತಿ ಯೋಜನೆಗಳ ಕುರಿತು ಸಮಗ್ರವಾಗಿ ವಿವರ ನೀಡಿದರು.

 ಗ್ರಾಮ ಪಂಚಾಯತ ಅಧ್ಯಕ್ಷರಾದ ಮಕಲನಗೌಡ ಪಾಟೀಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳಾದ ಅರವಿಂದ ಹಾಗರಗಿ, ಬಬಲೇಶ್ವರ ತಹಶೀಲ್ಧಾರರಾದ ಶಾಂತಲಾ ಚಡಚಣ, ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷರಾದ ಡಿ.ಬಿ. ಬಿರಾದಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಸಂಪತ ಗುಣಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಕೆ.ಕೆ. ಚವ್ಹಾಣ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಮಲ್ಲನಗೌಡ ಬಿರಾದಾರ, ಬಬಲೇಶ್ವರ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳಾದ ಜಿ.ಎಚ್ ಪಠಾಣ, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ಪವಿತ್ರಾ ನೀಲಖೇಣಿ, ಎಸ್.ಸಿ ಮ್ಯಾಗೇರಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, ಕಾನೂನು ಮಹಾವಿದ್ಯಾಲಯಗಳ ಪ್ರಾಂಶುಪಾಲರು, ವಿದ್ಯಾರ್ಥಿಗಳು, ಗ್ರಾಮದ ಸಮಸ್ತ ನಾಗರೀಕರು ಹಾಗೂ ಇತರರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ನವರಾತ್ರಿ ಪ್ರಯುಕ್ತ ಗಂಗಾಧರ ಕೋರಳ್ಳಿ ಮಹಾಶಕ್ತಿ ಮಂದಿರದಲ್ಲಿ ಅನ್ನ ಪ್ರಸಾದ

ವಿಜಯಪುರ : ನಗರದ ಇಂಡಿ ರಸ್ತೆಯಲ್ಲಿರುವ ಗೋಕಾಕ ಚಳುವಳಿ ಹೋರಾಟಗಾರ ಗಂಗಾಧರ ಕೋರಳ್ಳಿ ಪ್ರತಿಷ್ಠಾಪಿತ ಮಹಾಶಕ್ತಿ ನಾಡದೇವಿ ಮಂದಿರದಲ್ಲಿ ನವರಾತ್ರಿ ಪ್ರಯುಕ್ತ ಮಂಗಳವಾರ ಭಕ್ತಾದಿಗಳು ಹಾಗೂ ಸಾರ್ವಜನಿಕರಿಗೆ ಅನ್ನ ದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಈ ಸಂದÀರ್ಭದಲ್ಲಿ ನೀಲಕಂಠ ಕೋರಳ್ಳಿ, ಮಹಾದೇವಿ ಕೋರಳ್ಳಿ, ವೀಣಾ ಕೋರಳ್ಳಿ ಆದಿತ್ಯ ಕೋರಳ್ಳಿ, ಗಂಗಾಬಾಯಿ ಮನಗೂಳಿ, ತ್ರಿವೇಣಿ ಮನಗೂಳಿ, ಸವಿತಾ ಬಿರಾದಾರ, ನಿಹಾರಿಕಾ ಮಂಟಾಳೆ, ಶಾಂತಾಬಾಯಿ ಬಿದರಿ, ಹಣಮಂತ ಕಲಾದಗಿ, ಶೋಭಾ ಪಾಟೀಲ, ಉಮಾ ಇಟ್ಟಂಗಿ, ಕವಿತಾ ಪ್ಯಾಟಿ ಎಚ್ ಜಿ ವಾಲಿ, ರಾಜೇಂದ್ರ, ಗುರು ಹಿರೇಮಠ, ಸಂಗು ಹಿರೇಮಠ, ಭೀಮರಾಯ ಕುಂಟೋಜಿ, ಕಲ್ಲಪ್ಪ ಶಿವಶರಣ, ಕನ್ನಡದ ಕಟ್ಟಾಳು ಗಂಗಾಧರ ಕೋರಳ್ಳಿ ಪ್ರತಿಷ್ಠಾನದ ಕಾರ್ಯದರ್ಶಿ ಲಾಯಪ್ಪ ಇಂಗಳೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Thursday, September 25, 2025

26-09-2025 EE DIVASA KANNADA DAILY NEWS PAPER

ನಮಗೆ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಕೊಡಿ ರಾಜ್ಯಮಟ್ಟದ ಕವಿಗೋಷ್ಠಿಗೆ ಆಹ್ವಾನ

ವಿಜಯಪುರ : ವಿಜಯಪುರ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಸರಕಾರಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪಿಸಬೇಕೆಂಬ ಬೇಡಿಕೆ ಅನೇಕ ವರ್ಷಗಳಿಂದ ಇದೆ. ಸರಕಾರಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪಿಸಿ ಬಡ ಜನರಿಗೆ ಆರೋಗ್ಯ ರಕ್ಷಣೆ ಹಾಗೂ ಜಿಲ್ಲೆಯ ಬಡ ಮಕ್ಕಳಿಗೆ ವೈದ್ಯಕೀಯ ಶಿಕ್ಷಣ ಕೊಡಬೇಕಾದ ಸರಕಾರ ಜಿಲ್ಲೆಗೆ ಖಾಸಗಿ ಸಹ ಭಾಗಿತ್ವದ ವೈದ್ಯಕೀಯ ಮಹಾವಿದ್ಯಾಲಯ ಘೋಷಣೆ ಮಾಡಿರುವುದರಿಂದ ಜಿಲ್ಲೆಗೆ ದೊಡ್ಡ ಅನ್ಯಾಯವಾಗಿದೆ.

ಜಿಲ್ಲೆಯಲ್ಲಿ ಸರಕಾರಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಗೆ ಆಗ್ರಹಿಸಿ “ನಮಗೆ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಕೊಡಿ” ಎಂಬ ವಿಷಯದ ಕುರಿತು ಕನ್ನಡದ ಕಟ್ಟಾಳು ಗಂಗಾಧರ ಕೋರಳ್ಳಿ ಪ್ರತಿಷ್ಠಾನ ಹಾಗೂ ಶಿವಶರಣ ಶೈಕ್ಷಣಿಕ, ಗ್ರಾಮೀಣಾಭಿವೃದ್ಧಿ ಹಾಗೂ ವಿವಿದೋದ್ದೇಶಗಳ ಸಂಸ್ಥೆ ವಿಜಯಪುರ ಇವರ ಸಂಯುಕ್ತ ಆಶ್ರಯದಲ್ಲಿ ನಾಡಿನ ಕವಿಗಳಿಂದ ರಾಜ್ಯ ಮಟ್ಟದ ಬಹು ಭಾಷಾ ಕವಿಗೋಷ್ಠಿ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ.

ಕವಿಗೋಷ್ಠಿಯಲ್ಲಿ ಭಾಗವಹಿಸುವ ಕವಿಗಳು ಸೆಪ್ಟೆಂಬರ್ 27ರ ಒಳಗಾಗಿ ತಮ್ಮ ಹೆಸರು ನೋಂದಾಯಿಸಿಕೊಳ್ಳಲು 9632096714/ 72042 79187 ಗೆ ಸಂಪರ್ಕಿಸಬೇಕೆAದು  ಕನ್ನಡದ ಕಟ್ಟಾಳು ಗಂಗಾಧರ ಕೋರಳ್ಳಿ ಪ್ರತಿಷ್ಠಾನದ ಕಾರ್ಯದರ್ಶಿ ಲಾಯಪ್ಪ ಇಂಗಳೆ ಮತ್ತು ಶಿವಶರಣ ಶೈಕ್ಷಣಿಕ ಗ್ರಾಮೀಣಾಭಿವೃದ್ಧಿ ಹಾಗೂ ವಿವಿದೋದ್ದೇಶ ಸಂಸ್ಥೆ ಅಧ್ಯಕ್ಷ ಕಲ್ಲಪ್ಪ ಶಿವಶರಣ ಅವರು ಜಂಟಿಯಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Tuesday, September 23, 2025

ವಿಜಯಪುರ ಜಿಲ್ಲಾ ಮಾಧ್ಯಮ ಪ್ರತಿನಿಧಿಗಳಿಗೆ ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತು ‘ವಾರ್ತಾಲಾಪ’ ಭಾರತ ಸರ್ಕಾರದ ವಾರ್ತಾ ಶಾಖೆಯಿಂದ ವಿಜಯಪುರದಲ್ಲಿ 26 ಸೆಪ್ಟೆಂಬರ್, 2025ರಂದು ಕಾರ್ಯಾಗಾರ ಆಯೋಜನೆ

 ವಿಜಯಪುರ: ಭಾರತ ಸರ್ಕಾರದ ವಾರ್ತಾ ಶಾಖೆ (ಪಿಐಬಿ) ಬೆಂಗಳೂರು ಹಾಗೂ ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮ (ಎನ್‌ಟಿಪಿಸಿ) ಕೂಡಗಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ (ರಿ), ಕರ್ನಾಟಕ ಕಾರ್ಯನಿರತ ಸಂಪಾದಕರ ಸಂಘ (ರಿ), ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ (ರಿ) ಮತ್ತು ಕರ್ನಾಟಕ ಸಂಪಾದಕೀಯರ ಸಂಘ (ರಿ), ವಿಜಯಪುರ ಇವರ ಸಂಯುಕ್ತಾಶ್ರಯದಲ್ಲಿ ಇದೇ 26 ಶುಕ್ರವಾರದಂದು ವಿಜಯಪುರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ವಾರ್ತಾಲಾಪ ಕಾರ್ಯಾಗಾರ ಆಯೋಜಿಸಲಾಗಿದೆ. 

ಕರ್ನಾಟಕ ಸರ್ಕಾರದ ಮಾನ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಬಿ. ಪಾಟೀಲ ಅವರು ಕಾರ್ಯಕ್ರಮದಲ್ಲಿ ಘನ ಉಪಸ್ಥಿತಿ ವಹಿಸಲಿದ್ದಾರೆ. ಕರ್ನಾಟಕ ಸರ್ಕಾರದ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶ್ರೀ ಶಿವಾನಂದ ಎಸ್. ಪಾಟೀಲ ಗೌರವ ಉಪಸ್ಥಿತಿ ವಹಿಸಲಿದ್ದು, ವಿಜಯಪುರ ನಗರದ ಶಾಸಕರಾದ ಶ್ರೀ ಬಸನಗೌಡ ಆರ್. ಪಾಟೀಲ (ಯತ್ನಾಳ) ಅಧ್ಯಕ್ಷತೆ ವಹಿಸಲಿದ್ದಾರೆ. ವಿಜಯಪುರ ಕ್ಷೇತ್ರದ ಸಂಸದರಾದ ಶ್ರೀ ರಮೇಶ ಚಂ. ಜಿಗಜಿಣಗಿ ಹಾಗೂ ರಾಜ್ಯಸಭೆ ಸಂಸದರಾದ ಶ್ರೀಮತಿ ಸುಧಾ ಮೂರ್ತಿ ಅವರು ವಾರ್ತಾಲಾಪ ಕಾರ್ಯಾಗಾರವನ್ನು ಉದ್ಘಾಟಿಸಲಿದ್ದಾರೆ. 

ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಶ್ರೀ ರವಿಕುಮಾರ್ ಎನ್., ವಿಧಾನ ಪರಿಷತ್ ಶಾಸಕ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ - 2, ನವದೆಹಲಿ ಶ್ರೀ ಪ್ರಕಾಶ ಬಿ. ಹುಕ್ಕೇರಿ, ಮುದ್ದೇಬಿಹಾಳ ಕ್ಷೇತ್ರದ ಶಾಸಕರು ಹಾಗೂ ಕೆ.ಎಸ್.ಡಿ.ಎಲ್. ಅಧ್ಯಕ್ಷರಾದ ಶ್ರೀ ಅಪ್ಪಾಜಿ ಸಿ.ಎಸ್. ನಾಡಗೌಡ, ಇಂಡಿ ಕ್ಷೇತ್ರದ ಶಾಸಕರಾದ ಶ್ರೀ ಯಶವಂತರಾಯಗೌಡ ಬಿ. ಪಾಟೀಲ, ವಿಧಾನ ಪರಿಷತ್ ಶಾಸಕರಾದ ಶ್ರೀ ಹನುಮಂತ ಆರ್. ನಿರಾಣಿ, ಶ್ರೀ ಸುನೀಲ್ ಗೌಡ ಬಿ. ಪಾಟೀಲ್, ಶ್ರೀ ಪಿ.ಎಚ್. ಪೂಜಾರ, ನಾಗಠಾಣ ಕ್ಷೇತ್ರದ ಶಾಸಕರಾದ ಶ್ರೀ ವಿಠ್ಠಲ ಧೋಂಡಿಬಾ ಕಟಕಧೋಂಡ, ದೇವರಹಿಪ್ಪರಗಿ ಶಾಸಕರಾದ ಭೀಮನಗೌಡ (ರಾಜುಗೌಡ) ಬಸನಗೌಡ ಪಾಟೀಲ, ಸಿಂಧಗಿ ಶಾಸಕರಾದ ಶ್ರೀ ಅಶೋಕ ಮಲ್ಲಪ್ಪ ಮನಗೂಳಿ, ವಿಧಾನ ಪರಿಷತ್ ಶಾಸಕರಾದ ಶ್ರೀ ಕೇಶವ ಪ್ರಸಾದ ಎಸ್., ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಮತಿ ಕಾಂತಾ ನಾಯ್ಕ, ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷರಾದ ಶ್ರೀ ಸಂಗಮೇಶ ಅಪ್ಪಾಸಿ ಬಬಲೇಶ್ವರ, ವಿಜಯಪುರ ಮಹಾನಗರ ಪಾಲಿಕೆಯ ಮಹಾಪೌರರಾದ ಶ್ರೀ ಮಡಿವಾಳಪ್ಪ ಸಿದ್ದರಾಮಪ್ಪ ಕರಡಿ, ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಕಾನನ್ ಅಬ್ದುಲ್ ಹಮೀದ್ ಮುಶ್ರೀಫ್, ಭಾರತ ಸರ್ಕಾರದ ವಾರ್ತಾ ಶಾಖೆಯ ಹೆಚ್ಚುವರಿ ಮಹಾನಿರ್ದೇಶಕರಾದ ಶ್ರೀ ಎಸ್.ಜಿ. ರವೀಂದ್ರ, ವಿಜಯಪುರ ಜಿಲ್ಲಾಧಿಕಾರಿ ಡಾ. ಆನಂದ್ ಕೆ., ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಲಕ್ಷ್ಮಣ ನಿಂಬರಗಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ರಿಷಿ ಆನಂದ್, ಕೂಡಗಿ ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮದ ಪ್ರಧಾನ ವ್ಯವಸ್ಥಾಪಕರಾದ ಶ್ರೀ ಸಂತೋಷ್ ತಿವಾರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಅಮರೇಶ ದೊಡಮನಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷರಾದ ಶ್ರೀ ಪ್ರಕಾಶ್ ಜಿ. ಬೆಣ್ಣೂರ, ಕರ್ನಾಟಕ ಕಾರ್ಯನಿರತ ಸಂಪಾದಕರ ಸಂಘದ ಅಧ್ಯಕ್ಷರಾದ ಶ್ರೀ ಈರ್ಫಾನ್ ಶೇಖ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ಅಧ್ಯಕ್ಷರಾದ ಶ್ರೀ ಗುರುರಾಜ್ ಹೂಗಾರ್, ಕರ್ನಾಟಕ ರಾಜ್ಯ ಮಹಿಳಾ ಸಂಪಾದಕಿಯರ ಸಂಘದ ಅಧ್ಯಕ್ಷರಾದ ಶ್ರೀಮತಿ ರಶ್ಮಿ ಪಾಟೀಲ್ ಅವರು ಭಾಗವಹಿಸಲಿದ್ದಾರೆ. 

ಕಾರ್ಯಾಗಾರದ ಮೊದಲ ಅಧಿವೇಷನದಲ್ಲಿ ‘ಸ್ವಚ್ಛತಾ ಹೀ ಸೇವಾ’ ಅಭಿಯಾನದ ಕುರಿತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ರಿಷಿ ಆನಂದ್ ಅವರು ಮಾತನಾಡಲಿದ್ದಾರೆ. ‘ಜಿ.ಎಸ್.ಟಿ. 2.0’ ಕುರಿತು ಸಿಜಿಎಸ್‌ಟಿ ವಿಜಯಪುರ ವಿಭಾಗದ ಸಹಾಯಕ ಆಯುಕ್ತರಾದ ಶ್ರೀ ವಾಯ್.ಸಿ. ಪೂಜಾರಿ, ‘ಸ್ವಸ್ಥ ನಾರಿ ಸಶಕ್ತ ಪರಿವಾರ’ ಅಭಿಯಾನ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಯೋಜನೆಗಳ ಅನುಷ್ಠಾನ ಕುರಿತು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸಂಪತ್ ಕುಮಾರ್ ಗುಣಾರಿ, ‘ಕೃಷಿ ತೋಟಗಾರಿಕಾ ವಲಯದ ಯೋಜನೆಗಳ ಅನುಷ್ಠಾನ’ ಕುರಿತು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶ್ರೀ ಶಿವನಗೌಡ ಎಸ್. ಪಾಟೀಲ್ ಮಾಹಿತಿ ಹಂಚಿಕೊಳ್ಳಲಿದ್ದಾರೆ. 

ಕಾರ್ಯಾಗಾರದ ಎರಡನೇ ಅಧಿವೇಶನದಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ, ಭಾರತೀಯ ನ್ಯಾಯ ಸಂಹಿತೆ, ಭಾರತೀಯ ಸಾಕ್ಷ್ಯಾ ಅಧಿನಿಯಮ 2023 ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಲಕ್ಷ್ಮಣ ನಿಂಬರಗಿ, ‘ಹಣಕಾಸು ಸೇರ್ಪಡೆ ಪರಿಪೂರ್ಣತೆ ಅಭಿಯಾನ’ ಕುರಿತು ಕೆನರಾ ಬ್ಯಾಂಕ್ ಮತ್ತು ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ವ್ಯವಸ್ಥಾಪಕರಾದ ಶ್ರೀ ಬಿ. ಸಿದ್ದಯ್ಯ, ‘ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನೆಗಳ ಅನುಷ್ಠಾನ ಹಾಗೂ ಪೋಷಣಾ ಅಭಿಯಾನ’ದ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಶ್ರೀ ಕೆ.ಕೆ. ಚವ್ಹಾಣ್ ಅವರು ಮಾಹಿತಿ ಹಂಚಿಕೊಳ್ಳಲಿದ್ದಾರೆ. 

24-09-2025 EE DIVASA KANNADA DAILY NEWS PAPER

Monday, September 22, 2025

23-09-2025 EE DIVASA KANNADA DAILY NEWS PAPER

ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಸರ್ಕಾರಕ್ಕೆ ಮನವರಿಕೆ ಮಾಡಿಸುವೆ ಜಿಲ್ಲೆಗೆ ನನ್ನ ಕೊಡುಗೆ ಸರ್ಕಾರಿ ಆಸ್ಪತ್ರೆ ಆವರಣದಲ್ಲಿದೆ ಸಾಕ್ಷಿ 100 ಕೋಟಿ ರೂ. ಕೊಡಿ ಸಾಕು- ಸಚಿವ ಶಿವಾನಂದ ಪಾಟೀಲ

ವಿಜಯಪುರ : ನಾನು ಆರೋಗ್ಯ ಸಚಿವನಾಗಿದ್ದಾಗ ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಅಗತ್ಯವಾದ ಸಂಪನ್ಮೂಲ, ಸೌಲಭ್ಯ ಕಲ್ಪಿಸಿದ್ದೇನೆ. ಹೀಗಾಗಿ ಖಾಸಗಿ ಸಹಭಾಗಿತ್ವದ ಬದಲಾಗಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಅಗತ್ಯದ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರಿಗೆ ಮನವರಿಕೆ ಮಾಡಿಕೊಡುವುದಾಗಿ ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಭರವಸೆ ನೀಡಿದರು.

ನಗರದ ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ನಡೆದಿರುವ ಸರ್ಕಾರ ಘೋಷಿಸಿರುವ ಖಾಸಗಿ ಸಹಭಾಗಿತ್ವದ ಬದಲಾಗಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ನಡೆದಿರುವ ಅನಿರ್ಧಿಷ್ಟಾವಧಿ ಧರಣಿ ಸ್ಥಳಕ್ಕೆ ಭೇಟಿ ನೀಡಿ, ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ಮಾತನಾಡಿದ ಸಚಿವರು, ಅವಿಭಜಿತ ವಿಜಯಪುರ ಜಿಲ್ಲೆಯಲ್ಲಿ ಶೈಕ್ಷಣಿಕ ಕ್ರಾಂತಿ ಮಾಡಿರುವ ಬಂಥನಾಳ ಶಿವಯೋಗಿಗಳ ಹೆಸರಿನಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಬೇಕೆಂಬ ಕನಸಿದೆ. ಇದಕ್ಕಾಗಿ ನಾನು ಆರೋಗ್ಯ ಸಚಿವನಾಗಿದ್ದ ಸಂದರ್ಭದಲ್ಲಿ ಸರ್ಕಾರಿ ಕಾಲೇಜು ಆರಂಭಕ್ಕೆ ಬೇಕಿರುವ ಎಲ್ಲ ಸೌಲಭ್ಯ ಕಲ್ಪಿಸಿದ್ದೇನೆ ಎಂದು ವಿವರಿಸಿದರು.

ಹೊಸದಾಗಿ ಸರ್ಕಾರಿ ಕಾಲೇಜು ಸ್ಥಾಪನೆಗೆ ಕನಿಷ್ಟ 500 ಕೋಟಿ ರೂ. ಬೇಕು‌. ಆದರೆ ವಿಜಯಪುರ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ನಾನು ಸಚಿವನಾಗಿ ಅಗತ್ಯ ಸೌಲಭ್ಯ ಕಲ್ಪಿಸಿದ್ದೇನೆ. ಹೀಗಾಗಿ ಸರ್ಕಾರ ಆರಂಭದಲ್ಲಿ 50 ಕೋಟಿ ರೂ.ನಂತೆ ಕೇವಲ 100 ಕೋಟಿ ರೂ‌. ಅನುದಾನ ನೀಡಿದರೂ ಸಾಕು ಎಂದರು.

ವಿಜಯಪುರ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ 2013 ರಿಂದಲೂ ನಾನು ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಪ್ರಯತ್ನಿಸುತ್ತಿದ್ದೇನೆ. ಆಗ ಮುಖ್ಯಮಂತ್ರಿ ಆಗಿದ್ದ ಸಿದ್ಧರಾಮಯ್ಯ ಹಾಗೂ ಈ ಹಿಂದೆ ಅಧಿಕಾರದಲ್ಲಿದ್ದ ಬಸವರಾಜ ಬೊಮ್ಮಾಯಿ ಇಬ್ಬರೂ ಈ ವಿಷಯವಾಗಿ ನನಗೆ ಸದನದಲ್ಲೂ ಭರವಸೆ ನೀಡಿದ್ದರು. ಆದರೂ ರಾಜ್ಯದಲ್ಲಿ ಮಾತ್ರವಲ್ಲ ದೇಶದ ಯಾವುದೇ ರಾಜ್ಯದಲ್ಲಿ ಇಲ್ಲದ ಖಾಸಗಿ ಸಹಭಾಗಿತ್ವದ ವೈದ್ಯಕೀಯ ಕಾಲೇಜು ಅನುಷ್ಠಾನ ವಿಜಯಪುರ ಜಿಲ್ಲೆಗೆ ಮಾತ್ರ ಏಕೆ ಎಂಬುದು ನನಗೂ ಅರ್ಥವಾಗುತ್ತಿಲ್ಲ ಎಂದರು‌

ವಿಜಯಪುರ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಅಗತ್ಯವಾದ ಸುಪರ್ ಸ್ಪೆಶಾಲಿಟಿ ಆಸ್ಪತ್ರೆ, ಟ್ರಾಮಾ ಸೆಂಟರ್, ಎಂ.ಆರ್.ಐ. ಸ್ಕ್ಯಾನಿಂಗ್ ಸೆಂಟರ್, ರಾಜ್ಯದಲ್ಲೇ ಎಲ್ಲೂ ಇಲ್ಲದ 150 ಹಾಸಿಗೆ ಸಾಮರ್ಥ್ಯದ ತಾಯಿ ಮತ್ತು ಮಕ್ಕಳ ಆಸ್ಪತ್ರೆ, ಬಿಎಸ್ಸಿ ನರ್ಸಿಂಗ್ ಹಾಗೂ ಡಿಪ್ಲೊಮಾ ನರ್ಸಿಂಗ್ ಕಾಲೇಜುಗಳು, 150  ಎಕರೆ ವಿಸ್ತೀರ್ಣದ ಸರ್ಕಾರಿ ಆಸ್ಪತ್ರೆ ಆಸ್ತಿ ಸಂರಕ್ಷಣೆಗಾಗಿ ಕಾಂಪೌಂಡ್ ನಿರ್ಮಿಸಿದ್ದೇನೆ ಎಂದು ವಿವರಿಸಿದರು.

ವಿಜಯಪುರ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ಐತಿಹಾಸಿಕ ತಾಜ್ ಬಾವಡಿಯಿಂದ ನೀರಿನ ಸೌಲಭ್ಯ ಕಲ್ಪಿಸಿದ್ದು ಹಾಗೂ  ರಾಜ್ಯದಲ್ಲಿ ಅತ್ಯಾಧುನಿಕ ಸೌಲಭ್ಯಗಳುಳ್ಳ ಆಯುಷ್ಯ ಆಸ್ಪತ್ರೆ ನಿರ್ಮಿಸಿದ್ದು ನನ್ನ ಅವಧಿಯಲ್ಲೇ ಎಂದು ವಿವರಿಸಿದರು.

ಬೆಳಗಾವಿ ಕಲಬುರಗಿ ವಿಭಾಗದ ಮಧ್ಯದಲ್ಲಿ ವಿಜಯಪುರದಲ್ಲಿ ಆರೋಗ್ಯ ಇಲಾಖೆಯ ಹೆಚ್ಚುವರಿ ನಿರ್ದೇಶಕರ ಹುದ್ದೆ ಸೃಷ್ಟಿಸಿದ್ದೇ ನಾನು. ನನ್ನ ಅವಧಿಯಲ್ಲಿ ನಿರ್ಮಿಸಿದ ಸುಪರ್ ಸ್ಪೆಶಾಲಿಟಿ ಆಸ್ಪತ್ರೆಗೆ ಈಚೆಗೆ ನಾನೇ ಸಂಪುಟ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿ 200 ಹುದ್ದೆ ಮಂಜೂರು ಮಾಡಿಸಿದ್ದೇನೆ ಎನ್ನುವ ಮೂಲಕ ಸಚಿವನಾಗಿ ಮಾಡಿದ ಕೆಲಸಗಳು ಎಂದು ಜಿಲ್ಲೆಗೆ ಶಿವಾನಂದ ಪಾಟೀಲ ಅವರ ಕೊಡುಗೆ ಏನು ಎಂದು ಪ್ರಶ್ನಿಸುವವರಿಗೆ ಕಣ್ಣ ಮುಂದಿರುವ ದಾಖಲೆಗಳನ್ನು ಬಿಚ್ಚಿಟ್ಟರು.

ನಾನು ಬಸವವನಬಾಗೇವಾಡಿ ಕ್ಷೇತ್ರದಲ್ಲಿ ಸರ್ಕಾರಿ ಪದವಿ ಕಾಲೇಜು ಆರಂಭಿಸಿದ ಬಳಿಕವೇ ಜಿಲ್ಲಾ ಕೇಂದ್ರ ವಿಜಯಪುರದಲ್ಲಿ ಪದವಿ ಕಾಲೇಜು ಸ್ಥಾಪನೆ ಆಗಿದ್ದು. ನಮ್ಮ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಮಾತ್ರವಲ್ಲ ಸರ್ಕಾರಿ ಎಂಜಿನಿಯರಿಂಗ್ ಹಾಗೂ ಕಾನೂನು ಕಾಲೇಜುಗಳಂಥ ಶೈಕ್ಷಣಿಕ ಸೌಲಭ್ಯಗಳೂ ಇಲ್ಲವಾಗಿವೆ. 

ಏಮ್ಸ್ ತಂದರೆ ಸಂಸದ ಜಿಗಜಿಣಗಿಗೆ ಸನ್ಮಾನ

ಬಡ ಮಕ್ಕಳು ವೈದ್ಯಕೀಯ ಶಿಕ್ಷಣ ಪಡೆಯುವಂತಾಗಲು

ವಿಜಯಪುರ ಜಿಲ್ಲೆಗೆ ಏಮ್ಸ್ ಕಾಲೇಜು ಮಂಜೂರು ಮಾಡಿಸಿದರೆ ಸಂಸದ ರಮೇಶ ಜಿಗಜಿಣಗಿ ಅವರನ್ನು ಸನ್ಮಾನ ಮಾಡುತ್ತೇನೆ ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಹೇಳಿದರು.

ಕುರಿತು ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ ಅವರೊಂದಿಗೆ ಮಾತನಾಡಿದ್ದೆ. ಆದರೆ ಧಾರವಾಡ, ರಾಯಚೂರು ಭಾಗದವರು ಪ್ರಯತ್ನ ಮಾಡಿದರು‌. ಈಗಲೂ ಕಾಲ ಮಿಂಚಿಲ್ಲ, ಸಂಸದ ಜಿಗಜಿಣಗಿ, ಜಿಲ್ಲೆಯ ಸಚಿವರು, ಶಾಸಕರು ಪಕ್ಷಾತೀತವಾಗಿ ಏಮ್ಸ್ ಕಾಲೇಜಿಗೆ ಪ್ರಯತ್ನ ಮಾಡಬೇಕು ಎಂದು ಮನವಿ ಮಾಡಿದರು.

ಧರಣಿಯಲ್ಲಿ ಪ್ರಮುಖರಾದ ಅರವಿಂದ ಕುಲಕರ್ಣಿ, ಪೂಜ್ಯ ಸಂಗನಬಸವ ಶ್ರೀಗಳು, ಅನೀಲ ಹೊಸಮನಿ, ಅಕ್ರಮ ಮಾಶ್ಯಾಳಕರ, ಅಪ್ಪಾಸಾಬ ಯರನಾಳ, ಡಾ. ಗೋಪಾಲ ದಾಬಡೆ, ಶ್ರೀನಾಥ ಪೂಜಾರಿ, ಬೋಗೇಶ ಸೋಲಾಪೂರ, ಮಲ್ಲಿಕಾರ್ಜುನ ಬಟಗಿ, ಪ್ರಭುಗೌಡ ಪಾಟೀಲ, ಲಕ್ಷö್ಮಣ ಹಂದ್ರಾಳ, ಸುರೇಶ ಬಿಜಾಪೂರ, ಭರತಕುಮಾರ ಎಚ್.ಟಿ., ಮಲ್ಲಿಕಾರ್ಜುನ ಎಸ್.ಟಿ., ಸಂಜು ಕಂಬಾಗಿ, ಸಿದ್ದಲಿಂಗ ಬಾಗೇವಾಡಿ, ಗಿರೀಶ ಕಲಘಟಗಿ, ಲಕ್ಷö್ಮಣ ಕಂಬಾಗಿ, ವಿ.ಎ. ಪಾಟೀಲ, ಚನ್ನು ಕಟ್ಟಿಮನಿ, ಬಾಳು ಜೇವೂರ, ಗೀತಾ ಎಚ್., ಸಿದ್ರಾಮ ಹಿರೇಮಠ, ಜಗದೀಶ ಸೂರ್ಯವಂಶಿ, ದಸ್ತಗೀರ ಉಕ್ಕಲಿ, ವಿದ್ಯಾವತಿ ಅಂಕಲಗಿ, ಗೀತಾ ಕಟ್ಟಿ, ಗೀತಾ ಪಾಟೀಲ, ಕಾಮಿನಿ ಕಸಬೆ, ಶೋಭಾ ವಾಲೀಕಾರ, ಶಿವಬಾಳಮ್ಮ ಕೊಂಡಗೂಳಿ, ಸೋಮು ರಣದೇವ ಹಾಗೂ ಅಖಂಡ ಕರ್ನಾಟಕ ರೈತ ಸಂಘಟನೆ ಮುಖಂಡರಾದ ಬಾಪುಗೌಡ ಲಿಂಗದಳ್ಳಿ, ವಿಠ್ಠಲ ಬಿರಾದಾರ, ಗುರುಲಿಂಗಪ್ಪ ಪಡಸಲಗಿ, ರಾಜೇಸಾಬ ವಾಲೀಕಾರ ಮುಂತಾದವರು ಭಾಗವಹಿಸಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Saturday, September 20, 2025

ಸರ್ಕಾರಿ ವೈದ್ಯಕೀಯ ಕಾಲೇಜ್ ಸ್ಥಾಪನೆ ಧರಣಿ 3 ನೇ ದಿನಕ್ಕೆ


ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ಧರಣಿ ನಡೆಸುತ್ತಿರುವುದು.

ವಿಜಯಪುರ: ನಗರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡುವಂತೆ ಆಗ್ರಹಿಸಿ ಇಲ್ಲಿನ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜ್ ಸ್ಥಾಪನೆ ಹೋರಾಟ ಸಮಿತಿ ಪದಾಧಿಕಾರಿಗಳು ಹಮ್ಮಿಕೊಂಡ ಧರಣಿ ಶನಿವಾರ 3 ನೇ ದಿನ ಪೂರೈಸಿ, ಭಾನುವಾರ 4 ನೇ ದಿನಕ್ಕೆ ಕಾಲಿಟ್ಟಿದೆ.

ಈ ಸಂದರ್ಭ ಧರಣಿಗೆ ವಿವಿಧ ಸಂಘಟನೆಗಳು ಹಾಗೂ ಛಾಯಾಗ್ರಾಹಕರ ಸಂಘದವರು ಬೆಂಬಲ ವ್ಯಕ್ತಪಡಿಸಿದರು.

ಛಾಯಾಗ್ರಾಹಕ ಸಂಘದ ಜಿಲ್ಲಾಧ್ಯಕ್ಷ ರಮೇಶ ಚವ್ಹಾಣ ಮಾತನಾಡಿ, ನಮ್ಮ ಜಿಲ್ಲೆಯಲ್ಲಿ ಸಚಿವದ್ವಯರು ರಾಜ್ಯ ಕಂಡ ಪ್ರಭಾವಿ ನಾಯಕರುಗಳಾಗಿದ್ದು, ನಮ್ಮ ಜಿಲ್ಲೆಯು ಅತಿ ಹಿಂದುಳಿದ ಜಿಲ್ಲೆ ಎಂಬುದು ಗೊತ್ತಿದೆ. ಇದಕ್ಕೆ ಕೂಡಲೇ ಸ್ಪಂದಿಸಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಬೇಕು. ನಾವು ಜಿಲ್ಲೆಯಲ್ಲಿ ಏನೇ ಯೋಜನೆ ಅಥವಾ ಯಾವುದೇ ಸೌಲಭ್ಯಗಳು ಪಡೆಯಬೇಕು ಎಂದರೆ ಹೋರಾಟ, ಪ್ರತಿಭಟನೆ ಮಾಡಲೇಬೇಕಾದಂತಹ ಅನಿವಾರ್ಯವಾಗಿದೆ ಎಂದರು.

ಅನಿರ್ಧಿಷ್ಟ ಧರಣಿಯನು ಉದ್ದೇಶಿಸಿ ಮುಸ್ಲಿಂ ವೆಲ್ಫೇರ್ ಅಸೋಸಿಯೇಷನ್ ಜಿಲ್ಲಾಧ್ಯಕ್ಷ ಎಮ್.ಎಮ್. ಶೇಖ ಮಾತನಾಡಿ, ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡುವವರೆಗೆ ನಾವು ಹೋರಾಟದಶ ಜೊತೆ ಇರುತ್ತೇವೆ, ಯಾವುದೇ ಕಾರಣಕ್ಕೂ ಖಾಸಗೀಯವರಿಗೆ ಬಿಟ್ಟುಕೊಡಲು ಬಿಡುವುದಿಲ್ಲ ಎಂದರು.

ನಿವೃತ್ತ ಉಪನ್ಯಾಸಕ ಎಸ್.ಆರ್. ಟಿಂಗ್ರಿ, ಮುಖಂಡರಾದ ಡಾ. ಗುರಿಕಾರ, ಪರಶುರಾಮ ಬಂದಪಟೆ, ವಿಶ್ವನಾಥ ಅಲಕುಂಟೆ, ಬಸವರಾಜ ಬಾಗೇವಾಡಿ, ದಾವಲಸಾಬ ಸೊಲ್ಲಾಪುರ, ಕರವೇ ಜಿಲ್ಲಾಧ್ಯಕ್ಷ ಗಿರೀಶ ಕಲಘಟಗಿ, ಸುಶಿಲಾ ಮಿಣಜಗಿ, ಜ್ಯೋತಿ ಮಿಣಜಗಿ, ರೈತ ಸಂಘಟನೆಯ ನೀಲಾಂಬಿಕಾ ಬಿರಾದಾರ, ಅರವಿಂದ ಕುಲಕರ್ಣಿ, ಅಕ್ರಂ ಮಾಶಾಳಕರ, ಮಲ್ಲಿಕಾರ್ಜುನ ಬಟಗಿ, ಬಾಬುರಾವ್ ಬೀರಬ್ಬಿ, ಬೋಗೇಶ ಸೊಲ್ಲಾಪುರ, ಅನಿಲ ಹೊಸಮನಿ, ಭರತಕುಮಾರ ಎಚ್.ಟಿ., ಸಿದ್ದಲಿಂಗ ಬಾಗೇವಾಡಿ, ಗೀತಾ ಎಚ್., ದಸ್ತಗಿರಿ ಉಕ್ಕಲಿ, ಸಿದ್ರಾಮ ಹಿರೇಮಠ, ಮಹಾದೇವಿ ಧರ್ಮಶೆಟ್ಟಿ, ಜಯದೇವ ಸರ‍್ಯವಂಶಿ, ಸುರೇಶ ಬಿಜಾಪುರ, ಶಮಸೊದ್ದಿನ ಬಾವಿಕಟ್ಟಿ, ಕಾವೇರಿ ರಜಪುತ, ಪ್ರಭುಗೌಡ ಪಾಟೀಲ, ಸತೀಶ ಕಲಾಲ ಇತರರು ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

21-09-2025 EE DIVASA KANNADA DAILY NEWS PAPER

Friday, September 19, 2025

20-09-2025 EE DIVASA KANNADA DAILY NEWS PAPER

ದುರ್ಬಲ ವರ್ಗದವರ ಅಭಿವೃದ್ಧಿಯೇ ನಿಜವಾದ ಅಭಿವೃದ್ಧಿ ಸರ್ಕಾರದ ಜನಪರ ವಿಚಾರಗಳನ್ನು ಜನರಿಗೆ ತಿಳಿಸಲು ಪ್ರಯತ್ನಿಸಿ- ಮಾಧ್ಯಮದವರಿಗೆ ಮುಖ್ಯಮಂತ್ರಿಗಳ ಸಲಹೆ- ಎಲ್ಲಾ ಪ್ರಶಸ್ತಿಗಳನ್ನು ಆಯಾ ವರ್ಷವೇ ನೀಡಲಾಗುವುದು - ಮುಖ್ಯಮಂತ್ರಿ ಸಿದ್ದರಾಮಯ್ಯ

 ವಿಜಯಪುರ : ಸಮಾಜದಲ್ಲಿನ ಅಸಮಾನತೆಗೆ ಕಾರಣಗಳು ಹಾಗೂ ಸಾಮಾಜಿಕ ನ್ಯಾಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯದಲ್ಲಿ ಮಾಧ್ಯಮಗಳು ತೊಡಗಬೇಕು. ಸರ್ಕಾರದ ಜನಪರ ವಿಚಾರಗಳನ್ನು ಜನರಿಗೆ ತಿಳಿಸಬೇಕು. ಹಾಗೆಯೇ ದುರ್ಬಲ ವರ್ಗದವರ ಅಭಿವೃದ್ಧಿಯೇ ನಿಜವಾದ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದರು.

 ಇಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ವಾರ್ತಾ ಸೌಧದ ಸುಲೋಚನಾ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ, 2024 ನೇ ಕ್ಯಾಲೆಂಡರ್ ವರ್ಷದ ವಡ್ಡರ್ಸೆ ರಘುರಾಮ ಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ ಹಾಗೂ 2017 ರಿಂದ 2023 ನೇ ಕ್ಯಾಲೆಂಡರ್ ವರ್ಷದ ಪರಿಸರ ಮತ್ತು ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಸಮಾರಂಭ ದಲ್ಲಿ ಭಾಗವಹಿಸಿ ಮಾತನಾಡಿದ ಮುಖ್ಯಮಂತ್ರಿಗಳು ಮಾಧ್ಯಮಗಳು ಸತ್ಯ ಅಸತ್ಯದ ಶೋಧನೆ ನಡೆಸಬೇಕು. ವರದಿಗಳಾಗಲಿ ಅಥವಾ ಅಭಿಪ್ರಾಯಗಳಾಗಲಿ ವಸ್ತುಸ್ಥಿತಿಯಿಂದ ಕೂಡಿರಬೇಕು. ಕಲ್ಪನೆಯ ವರದಿ ಆಗಬಾರದು ಎಂದು ತಿಳಿಸಿದರು.

 ಇತ್ತೀಚಿನ ದಿನಗಳಲ್ಲಿ ಮಾಧ್ಯಮಗಳು ಊಹಾ ಪತ್ರಿಕೋದ್ಯಮ ಜೋತುಬೀಳುತ್ತಿವೆ. ಅದು ಆಗಬಾರದು. ಸತ್ಯ ಅಸತ್ಯಗಳನ್ನು ಪತ್ತೆ ಹಚ್ಚಿ, ಸತ್ಯವನ್ನು ಶೋಧನೆ ಮಾಡುವ ಕಾರ್ಯವನ್ನು ಪತ್ರಿಕೋದ್ಯಮ ಮಾಡಬೇಕು ಎಂದು ತಿಳಿಸಿದರು.

 ಯಾವುದೇ ಕಾರಣಕ್ಕೂ ಒಬ್ಬ ವ್ಯಕ್ತಿಯು ತಪ್ಪು ಮಾಡದಿದ್ದರೂ, ಸುಮ್ಮನೆ ಆರೋಪಗಳನ್ನು ಮಾಡಬಾರದು. ಸರ್ಕಾರದಲ್ಲಿ ಎಲ್ಲವೂ ಸರಿಯಾಗಿರುವುದಿಲ್ಲ ನಿಜ, ಆದರೆ ಸರ್ಕಾರದ ಜನಪರ ವಿಚಾರಗಳನ್ನು ಜನರಿಗೆ ತಿಳಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಜನ ವಿರೋಧಿ ಕಾರ್ಯವನ್ನು ಸರ್ಕಾರ ಮಾಡಿದರೆ ಅದನ್ನೂ ಜನರಿಗೆ ತಿಳಿಸುವ ಕಾರ್ಯ ಮಾಡಬೇಕು ಎಂದರು.

ಅಸಮಾನತೆ ಹೋದರೆ ಮಾತ್ರ ಜಾತಿ ವ್ಯವಸ್ಥೆ ನಿಲ್ಲುವುದು :ಸಮಾಜದಲ್ಲಿ ಜಾತಿ ವ್ಯವಸ್ಥೆ, ಅಸಮಾನತೆ ಇದೆ. ಸಾಮಾಜಿಕ ಅಸಮಾನತೆ ಬಗ್ಗೆ ಜನರಿಗೆ ತಿಳಿಸುವ ಕಾರ್ಯ ಮಾಡಬೇಕು. ಬಹುಸಂಖ್ಯಾತರಾಗಿರುವ ಜನ ಅಕ್ಷರ ಸಂಸ್ಕೃತಿಯಿAದ ವಂಚಿತರಾಗಿರುವುದು ಅಸಮಾನತೆಗೆ ಪ್ರಮುಖ ಕಾರಣ. ಇದನ್ನು ನೇರವಾಗಿ ಜನರಿಗೆ ತಿಳಿಸುವ ಪ್ರಯತ್ನವಾಗಬೇಕು. ಯಾವುದೇ ರಾಜಿ ಇಲ್ಲದೆ, ಸಾಮಾಜಿಕ ನ್ಯಾಯ ಎಲ್ಲರಿಗೂ ಸಿಕ್ಕಿದೆಯೇ, ಇಲ್ಲವೇ, ಸಮಬಾಳು, ಸಮಪಾಲು ಅನುಷ್ಠಾನಕ್ಕೆ ಬಂದಿದೆಯೇ ಎಂಬುದನ್ನು ಪರಿಶೀಲಿಸಬೇಕು. ಸಾಮಾಜಿಕ ನ್ಯಾಯ ಕೇವಲ ಭಾಷಣಕ್ಕೆ ಮಾತ್ರ ಸೀಮಿತವಾಗಿರಬೇಕಾದ ವಿಚಾರವಲ್ಲ. ಎಲ್ಲರಿಗೂ ದೇಶದ ವ್ಯವಸ್ಥೆಯಲ್ಲಿ ಇನ್ನೂ ಸಹ ಸಮಾನವಾದ ಅವಕಾಶ ಸಿಗದಿರಲು ಕಾರಣಗಳೇನು ಎಂಬ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಧ್ಯಮ ಮಾಡಬೇಕು ಎಂದರು

ದಸರಾ- ಸಾಂಸ್ಕೃತಿಕ ನಾಡ ಹಬ್ಬ: ಇತ್ತೀಚಿಗೆ ಟಿವಿ ಚಾನೆಲ್‌ಗಳು ಇನ್ನೊಬ್ಬರ ಹೇಳಿಕೆ ಬಗ್ಗೆ ಪ್ರತಿಕ್ರಿಯೆಯನ್ನು ಕೇಳಿ ಸುದ್ದಿ ಮಾಡುತ್ತವೆ. ಅದರಲ್ಲಿ ಅನೇಕ ವಿಚಾರಗಳು ಸಮಾಜಕ್ಕೆ ಸಂಬAಧವೇ ಪಟ್ಟಿರುವುದಿಲ್ಲ. ಸಮಾಜಕ್ಕೆ ಸಂಬAಧಪಟ್ಟAತಹ ವಿಚಾರಗಳ ಬಗ್ಗೆ ಪ್ರಶ್ನೆಗಳನ್ನು ಕೇಳಿ. ಭಾನು ಮುಷ್ತಾಕ್ ದಸರಾ ಉದ್ಘಾಟನೆಯನ್ನು ವಿಷಯವನ್ನಾಗಿಸಲು ಹೊರಟರು. ಹೈಕೋರ್ಟ್ ಮತ್ತು ಸುಪ್ರಿಂಕೋರ್ಟ್ ಸಹ ಇದನ್ನು ವಜಾಗೊಳಿಸಿದೆ. ದಸರಾ ಹಬ್ಬ ಧಾರ್ಮಿಕ ವಿಚಾರವಲ್ಲ, ಅದು ನಾಡ ಹಬ್ಬವಾಗಿದ್ದು, ಸಾಂಸ್ಕೃತಿಕ ವಿಚಾರವಾಗಿದೆ. ನಮ್ಮಲ್ಲಿ ಸಹಬಾಳ್ವೆ ಇರಬೇಕು. ಸಮಾಜದಲ್ಲಿ ವೈವಿಧ್ಯತೆಯಲ್ಲಿ ಏಕತೆಯನ್ನು ನಿರ್ಮಾಣ ಮಾಡಬೇಕು. ಅಂಬೇಡ್ಕರ್ ಅವರು ಸ್ವಾತಂತ್ರ‍್ಯ ದೊರೆತ ಸಂದರ್ಭದಲ್ಲಿ ನಾವು ವೈರುಧ್ಯಗಳಿಂದ ಕೂಡಿದ ಸಮಾಜಕ್ಕೆ ಕಾಲಿಡುತ್ತಿದ್ದೇವೆ. ಸಮಾಜದ ದುರ್ಬಲ ವರ್ಗದವರ ಅಭಿವೃದ್ಧಿಯಾದರೆ ಮಾತ್ರ ನಿಜವಾದ ಅಭಿವೃದ್ಧಿ ಎಂದು ಹೇಳಿದ್ದರು. ಆ ನಿಟ್ಟಿನಲ್ಲಿ ನಾವು ಕಾರ್ಯ ನಿರ್ವಹಿಬೇಕು. ದುರ್ಬಲ ವರ್ಗಗಳ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ತಿಳಿಸಿದರು.

ಸಮ ಸಮಾಜದ ಕನಸು ಕಂಡ ಪರ್ತಕರ್ತ - ರಘುರಾಮ ಶೆಟ್ಟಿ :ವಡ್ಡರ್ಸೆ ರಘುರಾಮ ಶೆಟ್ಟರು ಸಮ ಸಮಾಜ ನಿರ್ಮಾಣದ ಕನಸು ಕಂಡ ಪತ್ರಕರ್ತರು. ಜಾತಿ ಸಮಸ್ಯೆಗಳ ವಿರುದ್ಧ ಬರೆದವರು. ಬದ್ದತೆಯುಳ್ಳ, ಯಾವುದೇ ಪ್ರಶಸ್ತಿ, ಪ್ರಚಾರ ಬಯಸದ ವ್ಯಕ್ತಿ. ಮಾಧ್ಯಮ ರಂಗವು ಓದುಗರನ್ನೇ ಇಡಯರನ್ನಾಗಿ ಅವಲಂಬಿಸಬೇಕು ಹಾಗಾದಾಗ ಮಾತ್ರ ನಿಷ್ಠುರ ಮತ್ತು ವಸ್ತುನಿಷ್ಠ, ಜನಪರ ಪತ್ರಿಕೋದ್ಯಮ ಸಾಧ್ಯ ಎಂದು ಬಲವಾಗಿ ನಂಬಿ ಆ ನಿಟ್ಟಿನಲ್ಲಿ ಕನ್ನಡ ಪತ್ರಿಕೋದ್ಯಮದಲ್ಲಿ ಸಾಮಾಜಿಕ ನ್ಯಾಯದ ಸ್ಪಷ್ಟ ಧ್ವನಿಯಾಗಿ ಹೊಸ ಮಾರ್ಗದಲ್ಲಿ ನೆಡೆದ ವ್ಯಕ್ತಿ ಎಂದು ರಘುರಾಮ ಶೆಟ್ಟಿಯವರನ್ನು ಸ್ಮರಿಸಿದರು.

ಪತ್ರಕರ್ತರು ಪರಿಸರ ನ್ಯಾಯಕ್ಕೆ ಬದ್ಧವಾಗಿರಬೇಕು :ಪರಿಸರ ಅಭಿವೃದ್ಧಿ ಸಂರಕ್ಷಣೆಗೆ ಮಾಧ್ಯಮಗಳು ಹೆಚ್ಚು ಒತ್ತು ನೀಡಬೇಕು. ಪತ್ರಕರ್ತರು ಪರಿಸರ ನ್ಯಾಯಕ್ಕೆ ಬದ್ಧವಾಗಿರಬೇಕು. ಸ್ವಾತಂತ್ರ‍್ಯ ಪೂರ್ವದ ಮಾಧ್ಯಮ ರಂಗಕ್ಕೂ ಇಂದಿನ ಮಾಧ್ಯಮ ರಂಗಕ್ಕೂ ಅಜಗಜಾಂತರ ವ್ಯತ್ಯಾಸವಿದೆ ಸ್ವಾತಂತ್ರ‍್ಯೋತ್ತರ ಪತ್ರಿಕೋದ್ಯಮ ಶ್ರೀಮಂತರ ಕೈಗಳಿಗೆ ಸಿಕ್ಕಿಹಾಕಿಕೊಂಡಿದೆ. ಪತ್ರಕರ್ತರು ಇದನ್ನು ಅರ್ಥ ಮಾಡಿಕೊಂಡು ಕರ್ತವ್ಯ ನಿರ್ವಹಿಸಬೇಕಿದೆ ಎಂದರು.

ಮಹಿಳೆಯರಿಗೂ ಸಮಾನತೆ :ನಮ್ಮ ಸಮಾಜದಲ್ಲಿ ಜಾತಿ ವ್ಯವಸ್ಥೆ ಹೇಗೆ ಬೇರು ಬಿಟ್ಟಿದೆ ಎಂದರೆ ಐದಾರು ವರ್ಷಗಳಲ್ಲಿ, ಹತ್ತಿಪ್ಪತ್ತು ವರ್ಷಗಳಲ್ಲಿ ಹೋಗುವಂತದ್ದಲ್ಲ. ಆದರೆ ಅಸಮಾನತೆಯ ಮಟ್ಟವನ್ನು ಕಡಿಮೆ ಮಾಡಿ ಸಮ ಸಮಾಜ ನಿರ್ಮಾಣಕ್ಕೆ ನಮ್ಮ ಸರ್ಕಾರ ಅನೇಕ ಜನಪರ ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ. ಮಹಿಳೆಯರಿಗೂ ಸಮಾನತೆ ಬರಬೇಕು ಎನ್ನುವ ನಿಟ್ಟಿನಲ್ಲಿ ಮಹಿಳಾ ಸಬಲೀಕರಣಕ್ಕೂ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಎಲ್ಲರ ಅಭಿವೃದ್ಧಿಯೇ ನಿಜವಾದ ಅಭಿವೃದ್ಧಿ , ದುರ್ಬಲ ವರ್ಗದವರ ಅಭಿವೃದ್ಧಿಯೇ ನಿಜವಾದ ಅಭಿವೃದ್ಧಿ ಎಂದರು.

ಶಾಲಾ - ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ :ಬಹಳಷ್ಟು ಜನರು ಸಂವಿಧಾನವನ್ನೇ ಓದಿರುವುದಿಲ್ಲ ಇದೇ ಕಾರಣಕ್ಕೆ ನಮ್ಮ ಸರ್ಕಾರ, ಶಾಲಾ - ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವಂತಹ ಕಾರ್ಯಕ್ರಮ ಹಮ್ಮಿಕೊಂಡಿತು ಸಂವಿಧಾನದ ಕರ್ತವ್ಯಗಳನ್ನು, ಹಕ್ಕುಗಳನ್ನು ತಿಳಿದುಕೊಂಡಲ್ಲಿ ಜನರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲು ಸಹಾಯಕವಾಗುತ್ತದೆ ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ಕೆಲಸ ಮಾಡಿದರೆ ಸಮಾಜ, ನಾಡು ದೇಶ ಎಲ್ಲಕ್ಕೂ ಒಳ್ಳೆಯದಾಗುತ್ತದೆ ಎಂದರು.

 ಸುಮಾರು 2017ರಿಂದ ಬಾಕಿ ಇದ್ದ ಪ್ರಶಸ್ತಿಗಳನ್ನು ಇಂದು ಪ್ರದಾನ ಮಾಡಲಾಗಿದೆ ಆಯಾ ವರ್ಷದ ಪ್ರಶಸ್ತಿಗಳನ್ನು ಆಯಾ ವರ್ಷವೇ ನೀಡಿದರೆ ಉತ್ತಮ. ಅನೇಕ ವರ್ಷಗಳ ಪ್ರಶಸ್ತಿಗಳನ್ನು ಒಟ್ಟಿಗೆ ನೀಡುವುದು ಒಳ್ಳೆಯ ಪದ್ಧತಿಯಲ್ಲ ಎನ್ನುವ ಅಭಿಪ್ರಾಯ ವ್ಯಕ್ತಪಡಿಸುತ್ತಾ ಇನ್ನು ಮುಂದೆ ಯಾವುದೇ ಪ್ರಶಸ್ತಿಗಳಿರಲಿ ಆಯಾ ವರ್ಷವೇ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.

 ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾದ ಹೇಮಂತ್ ಎಂ.ನಿAಬಾಳ್ಕರ್ ಅವರು ಪ್ರಾಸ್ತಾವಿಕ ಮಾತನಾಡುತ್ತಾ, ಪ್ರಸಕ್ತ ವರ್ಷ ವಡ್ಡರ್ಸೆ ರಘುರಾಮಶೆಟ್ಟಿ ಅವರ ಸ್ಮರಣಾರ್ಥವಾಗಿ 2024ನೇ ಕ್ಯಾಲೆಂಡರ್ ವರ್ಷದ ವಡ್ಡರ್ಸೆ ರಘುರಾಮಶೆಟ್ಟಿ “ಸಾಮಾಜಿಕ ನ್ಯಾಯ ಪತ್ರಿಕೋದ್ಯಮ” ವಿಶೇಷ ಪ್ರಶಸ್ತಿ ಹಾಗೂ 2017 ರಿಂದ 2023ನೇ ಕ್ಯಾಲೆಂಡರ್ ವರ್ಷದ ಪರಿಸರ ಮತ್ತು ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿಯನ್ನು ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮೂಲಕ ಪ್ರದಾನ ಮಾಡಲಾಗುತ್ತಿದೆ ಎಂದರು.

ಸರ್ಕಾರವು 2017 ರಿಂದ ಬಾಕಿ ಇದ್ದ ಪರಿಸರ ಮತ್ತು ಅಭಿವೃದ್ಧಿ ಪ್ರಶಸ್ತಿ ಹಾಗೂ 5 ವರ್ಷಗಳಿಂದ ಬಾಕಿ ಇದ್ದ ಮೊಹರೆ ಹಣಮಂತರಾಯ ಹಾಗೂ ಟಿಯೇಸ್ಸಾರ್ ಪ್ರಶಸ್ತಿ ನೀಡಲು ಸಮಿತಿಯನ್ನು ರಚಿಸಿ, ಪ್ರಶಸ್ತಿ ನೀಡುವ ಮೂಲಕ ಪತ್ರಕರ್ತರಿಗೆೆ ಶಬ್ಬಾಷ್ ಎಂದು ಸರ್ಕಾರ ಹೇಳಿದೆ. ಅಲ್ಲದೆ ಸರ್ಕಾರವು ಕಳೆದ ಎರಡು ವರ್ಷಗಳಿಂದ ಪತ್ರಕರ್ತರಿಗೆ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ. ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್, ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಿದೆ. ಸಂಕಷ್ಟದಲ್ಲಿರುವ ಪತ್ರಕರ್ತರ ಮಾಸಾಶನ, ಕುಟುಂಬ ಮಾಸಾಶನವನ್ನು ಸಹ ನೀಡಿದೆ. ಪತ್ರಕರ್ತರಿಗಾಗಿ ಮೀಡಿಯಾ ಫೆಸ್ಟ್, ಕಾರ್ಯಾಗಾರಗಳು ಇಂತಹ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರೊಂದಿಗೆ ಕ್ಯಾಮೆರಾ, ಲ್ಯಾಪ್ ಟಾಪ್ ಹಾಗೂ ಇನ್ನಿತರ ಉಪಕರಣಗಳನ್ನೊಳಗೊಂಡ ಮಾಧ್ಯಮ ಕಿಟ್‌ಗಳನ್ನು ಸಹ ವಿತರಿಸುವುದರ ಮೂಲಕ ಸರ್ಕಾರ ಪತ್ರಕರ್ತರಿಗೆ ಶಬ್ಬಾಷ್ ಹೇಳುವಂತಹ ಕೆಲಸ ಮಾಡುತ್ತಿದೆ.

 ಕನ್ನಡ ಚಿತ್ರರಂಗಕ್ಕೆ ಶಕ್ತಿ ತುಂಬಲು ಕಲಾವಿದರಿಗೂ ಅನುಕೂಲ ಕಲ್ಪಿಸಿಕೊಟ್ಟಿದೆ. ಚಿತ್ರರಂಗದಲ್ಲಿ 25 ವರ್ಷಗಳ ಸೇವೆ ಪೂರೈಸಿದ ಮಹಿಳಾ ಕಲಾವಿದರಿಗೆ ಪ್ರಶಸ್ತಿ ನೀಡಲು ಹಿರಿಯ ನಟಿ, ಬಿ.ಸರೋಜದೇವಿ ಅವರ ಹೆಸರಿನಲ್ಲಿ ಜೀವಮಾನ ಸಾಧನೆಗಾಗಿ ಅಭಿನಯ ಸರಸ್ವತಿ ಪ್ರಶಸ್ತಿಯನ್ನು ಪ್ರದಾನ ಮಾಡಲು ಸರ್ಕಾರವು ಆದೇಶ ಹೊರಡಿಸಿದೆ. ಈ ಪ್ರಶಸ್ತಿಯು 2025 ನೇ ಸಾಲಿನಿಂದಲೇ ನೀಡಲಾಗುವುದು. ಬಡಜನರು ಚಲನಚಿತ್ರ ನೋಡಲು ಅನುಕೂಲವಾಗುವಂತೆ ಟಿಕೆಟ್ ದರವನ್ನು ರೂ.200 ಗಳಿಗೆ ನಿಗಧಿ ಮಾಡಿದೆ. ಮೈಸೂರಿನಲ್ಲಿ 160 ಎಕರೆ ಪ್ರದೇಶದಲ್ಲಿ ಫಿಲಂಸಿಟಿ ನಿರ್ಮಿಸಲು ಕ್ರಮವಹಿಸಿದೆ. ಸರ್ಕಾರ ತಾವು ಮಾಡಿರುವ ಕೆಲಸಕ್ಕೆ ಪುರಸ್ಕಾರ ನೀಡಿ ಶ್ಲಾಘಿಸುತ್ತಿದೆ. ಪತ್ರಕರ್ತರ ಹಿತಕ್ಕಾಗಿ ಹಲವಾರು ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ ಎಂದು ತಿಳಿಸಿದರು.

 ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ ಪುರಸ್ಕೃತ ಡಿ.ಉಮಾಪತಿ ಅವರು ಮಾತನಾಡುತ್ತಾ, ಸಮಾಜದ ಅಭಿವೃದ್ಧಿಯಾಗಬೇಕೆಂದರೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸವಲತ್ತುಗಳು ತಲುಪಬೇಕು. ಇದು ಸರ್ಕಾರ, ಸಮಾಜ ಹಾಗೂ ಪತ್ರಿಕೆಗಳ ಸಾಮೂಹಿಕ ಜವಾಬ್ದಾರಿಯಾಗಿದೆ. ಜನಪರ ಆಶಯಗಳನ್ನಿಟ್ಟುಕೊಂಡು ಪತ್ರಿಕೆಗಳು, ಮಾಧ್ಯಮಗಳು ಜನಪರ ಆಶಯಗಳನ್ನಿಟುಕೊಂಡು ಕೆಲಸ ನಿರ್ವಹಿಸಬೇಕು. ದೀನ ದಲಿತರ, ದಮನಿತರ ಧ್ವನಿಯಾಗಬೇಕು ಎಂದರು.

 ವಡ್ಡರ್ಸೆ ರಘುರಾಮಶೆಟ್ಟಿ ಅವರು “ಮುಂಗಾರು” ಪತ್ರಿಕೆಯನ್ನು ಹೊರತಂದು ಶೋಷಿತರ ಧ್ವನಿಗಳಿಗೆ ಸ್ಪಂದಿಸಿ ಸಾಮಾಜಿಕ ಚಿಂತನೆಗಳು ಹಾಗೂ ತಮ್ಮ ಬರಹಗಳ ಮೂಲಕ ಗಟ್ಟಿ ಪತ್ರಿಕೋದ್ಯಮವನ್ನು ಕಟ್ಟಿದವರು. ಜನರ ದನಿಯಾಗಿ ಹೊರಹೊಮ್ಮಿದ ಅವರ ಪತ್ರಿಕೆ ಸಾಮಾಜಿಕ ನ್ಯಾಯದ ಪರಿಕಲ್ಪನೆಯನ್ನು ಎತ್ತು ಹಿಡಿಯುವಲ್ಲಿ ಯಶಸ್ವಿಯಾಯಿತು. ಆದರೆ ಈಗಿನ ಕೆಲವು ಮಾಧ್ಯಮಗಳು ಸತ್ಯ, ನ್ಯಾಯವನ್ನು ಮರೆಮಾಚಿ ವರದಿಗಳನ್ನು ಮಾಡುತ್ತಿರುವುದು ಖೇದಕರ ಸಂಗತಿಯಾಗಿದೆ. ಯಾವುದೇ ಮಾಧ್ಯಮಗಳಿರಲಿ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

 ಕಾರ್ಯಕ್ರಮದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಮುಖ್ಯಮಂತ್ರಿಗಳ ಕಾರ್ಯದರ್ಶಿಗಳಾದ ಶ್ರೀಮತಿ ಬಿ.ಬಿ.ಕಾವೇರಿ ಅವರು ಸ್ವಾಗತ ಕೋರಿದರು.

 ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗೆ 2017ನೇ ಸಾಲಿಗೆ, ಶ್ರೀಮತಿ ವಿಜಯಲಕ್ಷ್ಮಿ ಶಿಬರೂರು, 2018 ನೇ ಸಾಲಿಗೆ ಶ್ರೀ ಬಿ.ಟಿ.ಎಂ. ರಾಜೀವ್, 2019ನೇ ಸಾಲಿಗೆ ಶ್ರೀ ವಿನೋದ ಕುಮಾರ್ ನಾಯ್ಕ್, 2020ನೇ ಸಾಲಿಗೆ ಶ್ರೀ ಮಾಲತೇಶ ಅಂಗೂರ, 2021ನೇ ಸಾಲಿಗೆ ಶ್ರೀ ಸುಧೀರ್ ಶೆಟ್ಟಿ, 2022ನೇ ಸಾಲಿಗೆ ಶ್ರೀ ಮಲ್ಲಿಕಾರ್ಜುನ ಹೊಸಪಾಳ್ಯ ಹಾಗೂ 2023ನೇ ಸಾಲಿಗೆ ಆರ್. ಮಂಜುನಾಥ್ ಅವರು ಭಾಜನರಾಗಿದ್ದು ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.


ಅಭಿವೃದ್ಧಿ ಪತ್ರಿಕೋದ್ಯಮಕ್ಕೆ 2017ನೇ ಸಾಲಿಗೆ ಶ್ರೀ ಚೀ.ಜ. ರಾಜೀವ್, 2018ನೇ ಸಾಲಿಗೆ ಶ್ರೀ ದೇವಯ್ಯ ಗುತ್ತೇದಾರ್, 2019ನೇ ಸಾಲಿಗೆ ಶ್ರೀ ಗಿರೀಶ್ ಲಿಂಗಣ್ಣ, 2020ನೇ ಸಾಲಿಗೆ ಶ್ರೀ ಯೋಗೀಶ್ ಎಂ.ಎನ್., 2021ನೇ ಸಾಲಿಗೆ ಶ್ರೀ ನೌಶಾದ್ ಬಿಜಾಪುರ, 2022ನೇ ಸಾಲಿಗೆ ಶ್ರೀ ಸತೀಶ್ ಜಿ.ಟಿ ಮತ್ತು 2023ನೇ ಸಾಲಿಗೆ ಶ್ರೀ ಗಿರೀಶ್ ಬಾಬು ಅವರು ಭಾಜನರಾಗಿದ್ದು ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.

2024 ನೇ ಕ್ಯಾಲೆಂಡರ್ ವರ್ಷದ ಶ್ರೀ ವಡ್ಡರ್ಸೆ ರಘುರಾಮ ಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ ಯನ್ನು ಹಿರಿಯ ಪತ್ರಕರ್ತರಾದ ಡಿ.ಉಮಾಪತಿ ಅವರಿಗೆ ಪ್ರದಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಸಚಿವರಾದ ಬಿ.ಎಸ್.ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ನಸೀರ್ ಅಹಮದ್, ವಿಧಾನ ಪರಿಷತ್ತಿನ ಮುಖ್ಯ ಸಚೇತಕರಾದ ಸಲೀಂ ಅಹಮದ್, ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳು ಹಾಗೂ ಕಾನೂನು ಆಯೋಗದ ಅಧ್ಯಕ್ಷರು ಮತ್ತು 2024 ನೇ ಕ್ಯಾಲೆಂಡರ್ ವರ್ಷದ ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾದ ಅಶೋಕ್ ಬಿ ಹಿಂಚಿಗೇರಿ, ವಿಧಾನ ಪರಿಷತ್ ಸದಸ್ಯರು ಹಾಗೂ ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ ಆಯ್ಕೆ ಸಮಿತಿಯ ಸದಸ್ಯರೂ ಆದ ಕೆ.ಶಿವಕುಮಾರ್, ಮಾನ್ಯ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾದ ಆಯೇಷಾ ಖಾನಂ, ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರಾದ ಸಾಧು ಕೋಕಿಲ, ಶ್ರೀ ಕಂಠೀರವ ಸ್ಟುಡಿಯೋಸ್ ಅಧ್ಯಕ್ಷರಾದ ಮೆಹಬೂಬ್ ಪಾಷಾ ಸೇರಿದಂತೆ ಹಿರಿಯ ಪತ್ರಕರ್ತರು, ಪ್ರಶಸ್ತಿ ಪುರಸ್ಕೃತರ ಕುಟುಂಬದವರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಮಾಧ್ಯಮದವರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಇಂಡಿ-ಚಡಚಣ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಜಂಟಿಯಾಗಿ ಪರಿಶೀಲನೆ ನಡೆಸಿದ ಡಿಸಿ-ಸಿಇಓ


 ವಿಜಯಪುರ : ಮಳೆಯಿಂದ ಪ್ರವಾಹ ಪರಿಸ್ಥಿತಿ ಎದುರಾಗಿರುವ ಜಿಲ್ಲೆಯ ಇಂಡಿ ಹಾಗೂ ಚಡಚಣ ತಾಲೂಕಿನ ವಿವಿಧ ಗ್ರಾಮಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. 

 ಶುಕ್ರವಾರ ಜಿಲ್ಲೆಯ ಗುಂದವಾನ, ನಂದರಗಿ, ಶೀಗನಾಪುರ, ಧೂಮಕನಾಳ, ದೇವರನಿಂಬರಗಿ, ಹಾಗೂ ಜಿಗಜೇವಣಿ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿರುವುದರಿಂದ ರೈತರ ಜಮೀನಿನಲ್ಲಿ ಕೆರೆ ಮತ್ತು ಹಳ್ಳದ ನೀರು ಹರಿಯುತ್ತಿರುವುದರಿಂದ ಬೆಳೆ ನಷ್ಟವಾಗಿರುವ ಕುರಿತು ವೀಕ್ಷಣೆ ನಡೆಸಿದ ಅವರು, ಬೆಳೆ ಹಾನಿ ಕುರಿತು ಸಮೀಕ್ಷೆ ಕೈಗೊಂಡು ಒಂದು ವಾರದೊಳಗೆ ಸೂಕ್ತ ವರದಿಯನ್ನು ಸಲ್ಲಿಸುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು. 

 ಈ ಸಂದರ್ಭದಲ್ಲಿ ಇಂಡಿ ಉಪವಿಭಾಗಾಧಿಕಾರಿ ಶ್ರೀಮತಿ. ಅನುರಾಧ ವಸ್ತ್ರದ ಜಂಟಿ ಕೃಷಿ ನಿರ್ದೇಶಕ ಶಿವನಗೌಡ ಪಾಟೀಲ, ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿ ಸಂಜಯ ಖಡಗೇಕರ, ತಹಶಿಲ್ದಾರರ ಸಂಜಯ್ ಇಂಗಳೆ, ಉಪ ಕೃಷಿ ನಿರ್ದೇಶಕ(ಇಂಡಿ) ಚಂದ್ರಕಾAತ್ ಪವಾರ್, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ರಾಹುಲ ಭಾವಿದೊಡ್ಡಿ, ಸಹಾಯಕ ಕೃಷಿ ನಿರ್ದೇಶಕÀ ಮಹದೇವಪ್ಪ ಏವೂರ್, ಪಂಚಾಯತ್ ರಾಜ್ ಇಲಾಖೆಯ ಸಹಾಯಕ ಅಭಿಯಂತರ ಬನಸೋಡೆ,À ಬಾನಿ, ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯ ಸಹಾಯಕ ಅಭಿಯಂತ ಜಮಾದಾರ್ ಮತ್ತು ಸಂಬAಧಪಟ್ಟ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಆಡಳಿತ ಅಧಿಕಾರಿಗಳು ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಮಹಿಳೆಯರ ಸಬಲೀಕರಣ ಆರ್ಥಿಕ ಸ್ವಾವಲಂಬನೆಯನ್ನು ಅವಲಂಬಿಸಿದೆ : ಶ್ರೀಮತಿ ಉಜ್ವಲ ಎ ಸರನಾಡಗೌಡ

ವಿಜಯಪುರ : ನಗರದ ಮಹಿಳಾ ವಿಶ್ವವಿದ್ಯಾನಿಲಯದ ಸ್ನಾತಕ ಅಧ್ಯಯನ ವಿಭಾಗ 2025-26ನೇ ಶೈಕ್ಷಣಿಕ ಸಾಲಿಗೆ ಪ್ರವೇಶ ಪಡೆದ ವಿದ್ಯಾರ್ಥಿನಿಯರಿಗೆ ಸ್ವಾಗತÀ ‘ಸಂಗಮ’ ಕಾರ್ಯಕ್ರಮದಲ್ಲಿ ಭಾಗವಹಿಸಿ ‘ವಿದ್ಯಾರ್ಥಿಗಳು ಕೌಟುಂಬಿಕ ಸಮಸ್ಯೆಗಳನ್ನು ನಿಭಾಯಿಸುವುದರ ಮೂಲಕ ಉತ್ತಮ ಜೀವನವನ್ನು ಕಟ್ಟಿಕೊಳ್ಳಬೇಕು. ಇದರಿಂದ ಮಹಿಳಾ ಸಬಲೀಕರಣ ಮಹಿಳೆಯರ ಬದುಕಿನಲ್ಲಿ ಸೃಷ್ಟಿಯಾಗುತ್ತದೆಂದು ಕಾನೂನು ಮಹಾವಿದ್ಯಾಲಯದ ಪ್ರಾಧ್ಯಾಪಕರಾದ ಶ್ರೀಮತಿ ಉಜ್ವಲ ಎ ಸರನಾಡಗೌಡ ಅವರು ಹೇಳಿದರು. ವಿದ್ಯಾರ್ಥಿನಿಯರು ಕಠಿಣ ಪರಿಶ್ರಮ ಮತ್ತು ನಿರಂತರತೆ ಕಾಯ್ದುಕೊಳ್ಳುವುದು ಬಹಳ ಮುಖ್ಯ. ಮಹಿಳೆಯರು ಕೀಳರಿಮೆಯನ್ನು ಬೆಳೆಸಿಕೊಳ್ಳದೆ ಬಲಿಷ್ಠವಾದ ವರ್ತನೆಯ ಇಚ್ಛಾಶಕ್ತಿಯನ್ನು ರೂಢಿಸಿಕೊಳ್ಳಬೇಕೆಂದು ಹೇಳುತ್ತ, ಮಹಿಳೆಯರು ಸದಾ ಧನಾತ್ಮಕ ಚಿಂತನೆಗಳೊAದಿಗೆ ಬದುಕಬೇಕೆಂದು ತಿಳಿಸಿದರು. ಹೆಣ್ಣುಮಕ್ಕಳು ಸಮಾಜದ ಸಾಮಾಜಿಕ ಪರಿವರ್ತನೆಗಳನ್ನು ಸದಾ ಗಮನಿಸುತ್ತ ಇರಬೇಕೆಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ವಿದ್ಯಾರ್ಥಿನಿಯರು ಶಿಸ್ತು, ತಾಳ್ಮೆ ಮತ್ತು ಸಂಯಮಗಳೊAದಿಗೆ ಗುರಿಯನ್ನು ಸಾಧಿಸುವ ಆತ್ಮವಿಶ್ವಾಸ ಮತ್ತು ದೃಢಸಂಕಲ್ಪವನ್ನು ಬೆಳೆಸಿಕೊಳ್ಳಬೇಕೆಂದು’ ವಿಶ್ಲೇಷಿಸಿದರು.

ಕುಲಸಚಿವರು ಶ್ರೀ ಶಂಕರಗೌಡ ಸೋಮನಾಳರವರು ಮಾತನಾಡಿ, ಹೆಣ್ಣುಮಕ್ಕಳ ಬದುಕು ಮಹಿಳಾ ಸಬಲೀಕರಣದ ಮೇಲೆ ನಿಂತಿದೆ. ವಿದ್ಯಾರ್ಥಿನಿಯರು ಮೊಬೈಲಗಳನ್ನು ಸಾಧ್ಯವಾದಷ್ಟು ಕಡಿಮೆ ಪ್ರಮಾಣದಲ್ಲಿ ಬಳಸಿ ಹೆಚ್ಚು ಪುಸ್ತಕಗಳನ್ನು ಅಧ್ಯಯನ ಮಾಡಬೇಕೆಂದು ಹೇಳಿದರು. ಜೀವನದಲ್ಲಿ ಬರುವ ಎಲ್ಲ ಆಕರ್ಷಣೆಗಳಿಂದ ದೂರವಿರವಿದ್ದು ಸಾಧನೆಗೆ ಒತ್ತು ಕೊಡಬೇಕೆಂದು ಹೇಳಿದರು.

ಕುಲಸಚಿವರು (ಮೌಲ್ಯಮಾಪನ) ಪ್ರೊ. ಬಸವರಾಜ ಲಕ್ಕಣ್ಣವರ ಅವರು ‘ಜೀವನದಲ್ಲಿ ಪ್ರತಿಯೊಬ್ಬರಿಗೂ ಸಮಸ್ಯೆಗಳು ಎದುರಾಗುತ್ತವೆ. ಯಾರೂ ಸಮಸ್ಯೆಗಳನ್ನು ಮೆಟ್ಟಿ ಮುಂದೆ ಸಾಗುತ್ತಾರೋ ಅವರು ಮಾತ್ರ ಗುರಿಯನ್ನು ತಲುಪುತ್ತಾರೆಂದು ಸ್ನಾತಕ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ಸ್ಥಾನಿಕ ಅಭಿಯಂತರರು ಶ್ರೀ ಮಾರುತಿ ಪಿ. ಕದಮ ಅವರು ವಿದ್ಯಾರ್ಥಿಗಳು ಮೊಬೈಲನ್ನು ಬಿಟ್ಟು ತಮ್ಮ ಅಧ್ಯಯನ ಗುರಿಯ ಕಡೆಗೆ ಲಕ್ಷö್ಯ ವಹಿಸಬೇಕೆಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಸಿದ ಪ್ರೊ. ಸಕ್ಪಾಲ ಹೂವಣ್ಣ ಅವರು ವಿದ್ಯಾರ್ಥಿನಿಯರು ಬದುಕಿನಲ್ಲಿ ಸಾಮಾನ್ಯ ಜ್ಞಾನವನ್ನು ಹೊಂದಬೇಕೆAದು ತಿಳಿಸಿದರು. 

ಸ್ನಾತಕ ಅಧ್ಯಯನ ವಿಭಾಗದ ಸಂಯೋಜಕರು ಡಾ. ಜಿ. ಸೌಭಾಗ್ಯ, ಸಮಾಜಶಾಸ್ತç ಅಧ್ಯಯನ ವಿಭಾಗದ ಮುಖ್ಯಸ್ಥರು ಪ್ರೊ. ಎಂ. ಪಿ. ಬಳೆಗಾರ, ಸಾಂಸ್ಕೃತಿಕ ಸಂಯೋಜಕರು ಕು. ದೀಪಾ ಸೂರ್ಯವಂಶಿ, ವಿದ್ಯಾರ್ಥಿಗಳ ಕಾರ್ಯದರ್ಶಿ ಕು. ಲಕ್ಷಿö್ಮÃ ಕರ್ನಾಳ ಮತ್ತು ಬೋಧಕ-ಬೋಧಕೇತರರು ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಶೃತಿ ಕುಲಕರ್ಣಿ ಅವರ ತಂಡದವರು ಮಹಿಳಾ ಗೀತೆಯನ್ನು ಪ್ರಾರ್ಥಿಸಿದರು. ಗೌತಮಿ ನಾಟೇಕರ ಸ್ವಾಗತಿಸಿದರು. ಸ್ಪಂದನಾ ಪರಿಚಯಿಸಿದರು. ರುಶ್ದಾ ಖಾನಂ ರೂಗಿ ವಂದಿಸಿದರು. ಶ್ವೇತಾ, ಗೀತಾ, ವಂದನಾ, ಸಾನಿಯಾ ಮತ್ತು ರೋಹಿಣಿ ನಿರೂಪಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Wednesday, September 17, 2025

18-09-2025 EE DIVASA KANNADA DAILY NEWS PAPER

ಮಹಿಳೆಯರಿಗೆ ಸ್ವಾವಲಂಬಿಯಾಗಲು ಆರೋಗ್ಯ ಮುಖ್ಯ : ಸಂಸದ ರಮೇಶ ಜಿಗಜಿಣಗಿ

 ವಿಜಯಪುರ : ಭಾರತ ದೇಶದಲ್ಲಿ ಕಳೆದ ಹಲವು ವರ್ಷಗಳಿಂದ ಅನೇಕ ಜನಪರ ಅಭಿವೃದ್ಧಿ ಕಾರ್ಯಕ್ರಮಗಳು ಅನುಷ್ಠಾನಗೊಳ್ಳುತ್ತಿವೆ. ಇಂದು ದೇಶ ಹಾಗೂ ರಾಜ್ಯಾದ್ಯಂತ “ಸ್ವಸ್ಥ ನಾರಿ ಸಶಕ್ತ ಪರಿವಾರ” ಅಭಿಯಾನವನ್ನು ದಿನಾಂಕ: 17-09-2025 ರಿಂದ ದಿನಾಂಕ: 02-10-2025ರ ವರೆಗೆ ಹಮ್ಮಿಕೊಳ್ಳಲಾಗಿದ್ದು. ಸಮುದಾಯದ ಅಭಿವೃದ್ಧಿಯ ಸಂಕಲ್ಪವನ್ನು ಹೊಂದಲಾಗಿರುತ್ತದೆ. ಸಾರ್ವಜನಿಕರ ಬದಕನ್ನು ಸುಗಮಗೊಳಿಸುವಲ್ಲಿ ಮುಖ್ಯವಾಗಿ ಮಹಿಳೆಯರು ಮತ್ತು ಮಕ್ಕಳಿಗಾಗಿ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿರುತ್ತದೆ. ಮಹಿಳೆಯರಿಗೆ ಸ್ವಾವಲಂಬಿಯಾಗಲು ಆರೋಗ್ಯ ಮುಖ್ಯ ಎಂದು ಸನ್ಮಾನ್ಯ ಸಂಸದರಾದ ರಮೇಶ ಜಿಗಜಿಣಗಿ ಹೇಳಿದರು. 

 ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಆಸ್ಪತ್ರೆ ವಿಜಯಪುರ ಇವರ ಸಂಯುಕ್ತ ಆಶ್ರಯದಲ್ಲಿ “ಸ್ವಸ್ತ ನಾರಿ ಶಸಕ್ತ ಪರಿವಾರ “ಅಭಿಯಾನ ಉದ್ಘಾಟನಾ ಕಾರ್ಯಕ್ರಮವನ್ನು ಹಾಗೂ ಮಹಾನಗರ ಪಾಲಿಕೆಯ ಮಹಾಪೌರರಾದ ಎಮ್.ಎಸ್. ಕರಡಿಯವರೊಂದಿಗೆ ಜಂಟಿಯಾಗಿ ಚಾಲನೆ ನೀಡಿ ಅವರು ಮಾತನಾಡಿದರು.

 ಮಹಾನಗರ ಪಾಲಿಕೆಯ ಮಹಾಪೌರ ಮಡಿವಾಳಪ್ಪ ಕರಡಿ ಮಾತನಾಡಿ, ಸಮಾಜದ ಏಳಿಗೆಗಾಗಿ ಮಹಿಳೆಯರು ಸ್ವಾವಲಂಬಿ ಬದಕನ್ನು ಕಟ್ಟಿಕೊಳ್ಳಲು ಅವರು ಮಾನಸಿಕ, ದೈಹಿಕ, ಕೌಟಂಬಿಕ ಸಮಾಜಿಕವಾಗಿ ಆರೋಗ್ಯವಂತರಾಗಿ ಇರಲು ಈ ಅಭಿಯಾನದಲ್ಲಿ ನಡೆಯುವ ಮಹಿಳೆಯರಿಗಾಗಿ ವೈದ್ಯಕೀಯ ಆರೋಗ್ಯ ತಪಾಸಣೆ ಮಾಡಿಸುವದರಿಂದ ಆರೋಗ್ಯವಂತ ಸಮಾಜವನ್ನು ಕಾಪಾಡುವದು ನಮ್ಮಲ್ಲೆರ ಹೊಣೆಯಾಗಿದೆ ಎಂದು ಹೇಳಿದರು.

 ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ|| ಸಂಪತ್ತ ಗುಣಾರಿ ಮಾತನಾಡಿ, ವಿಶೇಷವಾಗಿ ಮಹಿಳೆಯರ ಆರೋಗ್ಯ ತಪಾಸಣೆ, ತಾಯಿ ಮತ್ತು ಮಕ್ಕಳ ಆರೈಕೆ, ಜಾಗೃತಿ ಮತ್ತು ವರ್ತನೆಯ ಬದಲಾವಣೆ, ರಕ್ತದಾನ ಶಿಬಿರಗಳು ಹೀಗೆ ಹಲವಾರು ಕಾರ್ಯಕ್ರಮಗಳನ್ನು ಈ ಅಭಿಯಾನದಲ್ಲಿ ಹಮ್ಮಿಕೊಳ್ಳಲಾಗಿದೆ. ಉಪಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲೂಕಾ ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ಉಚಿತವಾಗಿ ದಿನಾಂಕ: 17-09-2025 ರಿಂದ 02-10-2025ರ ವರೆಗೆ ಉಚಿತ ಮಹಿಳಾ ಆರೋಗ್ಯ ತಪಾಸಣೆಯನ್ನು ಹಮ್ಮಿಕೊಳ್ಳಲಾಗಿದ್ದು. ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಅವರು ಹೇಳಿದರು. 

 ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ|| ಶಿವಾನಂದ ಮಾಸ್ತಿಹೊಳಿ ಪ್ರಾಸ್ತಾವಿಕವಾಗಿ ಮಾತನಾಡಿದರು. 

 ಕಾರ್ಯಕ್ರಮದಲ್ಲಿ ಉಪ ಮಹಾಪೌರರಾದ ಸುಮಿತ್ರಾ ಜಾಧವ, ಮಾಜಿ ಸಚಿವರಾದ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಮಹಾನಗರ ಪಾಲಿಕೆಯ ಸದಸ್ಯರುಗಳಾದ ರಾಜಶೇಖರ್ ಮಗಿಮಠ, ಶಿವರುದ್ರ ಬಾಗಲಕೋಟ, ರಾಹುಲ್ ಜಾಧವ ಸೇರಿದಂತೆ ವಿವಿಧ ಜನಪ್ರತಿನಿಧಿಗಳು, ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿ-ಸಿಬ್ಬಂದಿ ವರ್ಗದವರು ಮತ್ತು ಸಾರ್ಜನಿಕರು ಹಾಗೂ ಸರ್ನಿಂಗ್ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಜಿಲ್ಲಾ ಆಸ್ಪತ್ರೆಯ ಹಿರಿಯ ಆಪ್ತಸಮಾಲೋಚಕರಾದ ರವಿ ಕಿತ್ತೂರ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Tuesday, September 16, 2025

17-09-2025 EE DIVASA KANNADA DAILY NEWS PAPER

ಚಡಚಣ ಎಸ್ ಬಿಐ ಬ್ಯಾಂಕ್ ನಲ್ಲಿ ಪಿಸ್ತೂಲ್ ತೋರಿಸಿ ಸಿಬ್ಬಂದಿಗೆ ಕಟ್ಟಿಹಾಕಿ ದರೋಡೆ

ವಿಜಯಪುರ: ಜಿಲ್ಲೆಯ ಭೀಮಾತೀರದ ಚಡಚಣ ಪಟ್ಟಣದ ಎಸ್ ಬಿಐ ಬ್ಯಾಂಕ್ ನಲ್ಲಿ ಸಿನಿಮೀಯ ರೀತಿಯಲ್ಲಿ ಕಳ್ಳರು ಪಿಸ್ತೂಲ್ ತೋರಿಸಿ, ಸಿಬ್ಬಂದಿಗೆ ಕಟ್ಟಿಹಾಕಿ, ದರೋಡೆ ಮಾಡಿರುವ ಘಟನೆ  ಚಡಚಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ  ಮಂಗಳವಾರ ಸಂಜೆ ನಡೆದಿದೆ.

ಇಲ್ಲಿನ ಬ್ಯಾಂಕ್ ನ ವ್ಯವಹಾರದ ಸಮಯ ಮುಗಿದ ಮೇಲೆ, 3 ಜನ ಮುಸುಕುಧಾರಿ ಖದೀಮರು, ಏಕಾಏಕಿ ಬ್ಯಾಂಕಿಗೆ ನುಗ್ಗಿ, ಪಿಸ್ತೂಲ್ ತೋರಿಸಿ ಸಿಬ್ಬಂದಿಯನ್ನು ಹೆದರಿಸಿ, ಕೈಕಾಲು ಕಟ್ಟಿ ಹಾಕಿ ಕಳ್ಳತನ ಮಾಡಿ, ಪರಾರಿಯಾಗಿದ್ದಾರೆ.

ಸುದ್ದಿ ತಿಳಿದು ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲಿಸಿದ್ದಾರೆ. ಬ್ಯಾಂಕ್ ನಲ್ಲಿ ಎಷ್ಟು ಹಣ ಕಳ್ಳತನವಾಗಿದೆ ಎನ್ನುವ ಕುರಿತು ತಿಳಿದು ಬಂದಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

 ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Monday, September 15, 2025

16-09-2025 EE DIVASA KANNADA DAILY NEWS PAPER

ಮತಗಳನ್ನು ಮಾರಿಕೊಳ್ಳದೆ ವಿವೇಚನೆಯಿಂದ ಚಲಾಯಿಸಬೇಕು : ಕುಲಸಚಿವ ಶಂಕರಗೌಡ ಸೋಮನಾಳ

ವಿಜಯಪುರ: ಪ್ರಜಾಪ್ರಭುತ್ವದ ಯಶಸ್ಸಿಗೆ ಮುಖ್ಯವಾಗಿ ಚುನಾವಣೆಗಳಲ್ಲಿ ಸಕಾರಾತ್ಮಕವಾಗಿ ಭಾಗವಹಿಸಬೇಕು ಹಾಗೂ ತಮ್ಮ ತಮ್ಮ ಮತಗಳನ್ನು ಹಣ ಮತ್ತು ಇತರೆ ಪ್ರಲೋಭನೆಗಳಿಗೆ ಮಾರಿಕೊಳ್ಳದೆ ವಿವೇಚನೆಯಿಂದ ಚಲಾಯಿಸಬೇಕು ಎಂದು ಕುಲಸಚಿವ ಶಂಕರಗೌಡ ಸೋಮನಾಳ ಸಲಹೆ ನೀಡಿದರು. 

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರ ಮತ್ತು ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡಗಳ ಘಟಕದ ಸಹಯೋಗದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಅಂತಾರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವದ ಪರಿಕಲ್ಪನೆ, ಅದರ ಹುಟ್ಟು ಹಾಗೂ ವಿಶ್ವದ ಅನೇಕ ರಾಷ್ಟçಗಳಲ್ಲಿ ಅದು ಬೆಳೆದುಬಂದ ದಾರಿಗಳನ್ನು ವಿದ್ಯಾರ್ಥಿನಿಯರಿಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಘಟಕದ ನಿರ್ದೇಶಕ ಪ್ರೊ.ಮಲ್ಲಿಕಾರ್ಜುನ.ಎನ್.ಎಲ್. ಅವರು, ಪ್ರಜಾಪ್ರಭುತ್ವ ಯಶಸ್ವಿಯಾಗಬೇಕಾದರೆ ಯುವಜನಾಂಗಕ್ಕೆ ಸರಿಯಾದ ಮಾರ್ಗದರ್ಶನ ಅಗತ್ಯ. ಒಂದೊಮ್ಮೆ ಪ್ರಜಾಪ್ರಭುತ್ವ ಸಡಿಲಗೊಂಡರೆ ಅರಾಜಕತೆ ಉಂಟಾಗುವ ಅಪಾಯಗಳಿವೆ ಎಂದರು. 

ಕಾರ್ಯಕ್ರಮದ ಕೊನೆಯಲ್ಲಿ ವಿದ್ಯಾರ್ಥಿನಿಯರಿಗಾಗಿ ಅಂತಾರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ, ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತು ಸಾಮಾನ್ಯ ಜ್ಞಾನದ ಕುರಿತು ರಸಪ್ರಸ್ನೆ ಸ್ಪರ್ಧೆಯನ್ನು ಕುಲಸಚಿವರು ನಡೆಸಿಕೊಟ್ಟರು. ರಸಪ್ರಶ್ನೆಯಲ್ಲಿ ವಿಜೇತ ವಿಧ್ಯಾರ್ಥಿನಿಯರಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕ ಡಾ.ಸಂಜೀವಕುಮಾರ ಗಿರಿ ಪ್ರಾಧ್ಯಾಪಕರಾದ ಡಾ.ವೆಂಕೋಬಾ ನಾರಾಯಣಪ್ಪ, ಡಾ.ಬಾಬು ಆರ್.ಎಲ್, ಡಾ.ರಮೇಶ ಸೋನಕಾಂಬ್ಳೆ, ಡಾ.ಯಲ್ಲಪ್ಪ ಕೋಂಬಿನೋರ್ ಉಪಸ್ಥಿತರಿದ್ದರು.

 ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಸಮಾನತೆ ಸ್ಥಾಪನೆಗೆ ಪ್ರಜಾಪ್ರಭುತ್ವ ತತ್ವ ಮಹತ್ವವಾಗಿದೆ: ವಿಠ್ಠಲ ಕಟಕಧೋಂಡ

 ವಿಜಯಪುರ  : ಸಂವಿಧಾನದ ಮುಂದೆ ದೇಶದ ಎಲ್ಲ ಪ್ರಜೆಗಳು ಸಮಾನರು ಎಂಬ ಸಮಾನತೆ ಸಂದೇಶವನ್ನು ಸಾರುವ ನಿಟ್ಟಿನಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಅತ್ಯಂತ ಮಹತ್ವದಾಗಿದೆ ಎಂದು ಶಾಸಕ ವಿಠ್ಠಲ ಧೋಂಡಿಬಾ ಕಟಕಧೋಂಡ ಹೇಳಿದರು.

 ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಹಯೋಗದೊಂದಿಗೆ ಸೋಮವಾರ ನಗರದ ಕಂದಗಲ್ ಶ್ರೀ ಹನುಮಂತರಾಯರ ರಂಗಮAದಿರದಲ್ಲಿ ನಡೆದ ಅಂತಾರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ ನನ್ನ ಮತ ನನ್ನ ಹಕ್ಕು ಎಂಬ ಘೋಷ ವಾಕ್ಯದೊಂದಿಗೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಜಗತ್ತಿನ ಅನೇಕ ದೇಶಗಳಲ್ಲಿ ಹಂತ ಹಂತವಾಗಿ ಸಂವಿಧಾನ ಜಾರಿಗೆ ಬಂದು ಅಲ್ಲಿನ ಜನತೆಗೆ ಸಮಾನತೆ ದೊರಕಲು ದೀರ್ಘ ಕಾಲ ಪಡೆಯಿತು. ಆದರೆ, ವಿವಿಧತೆಯಲ್ಲಿ ಏಕತೆವಿರುವ ಭಾರತ ದೇಶದಲ್ಲಿ ಪ್ರಜಾಪ್ರಭುತ್ವ ಆಧಾರದ ಸಂವಿಧಾನ ಜಾರಿಗೆ ಬಂದ ದಿನದಿಂದಲೇ ಪ್ರತಿಯೊಬ್ಬರಿಗೂ ಸಮಾನತೆ ದೊರೆತಿದೆ ಎಂದು ಅವರು ಹೇಳಿದರು. 

ಸರ್ವರ ಏಳ್ಗೆಯ ಅಂಶಗಳನ್ನು ಹೊಂದಿರುವ ಪ್ರಜಾಪ್ರಭುತ್ವದ ಸಂವಿಧಾನದ ಆಶಯಗಳನ್ನು ಸಾರ್ವಜನಿಕರು ಅರಿತುಕೊಂಡು ತಮ್ಮ ಹಕ್ಕು ಪಡೆದುಕೊಳ್ಳುವುದರೊಂದಿಗೆ ದೇಶದ ಪರ ತಮ್ಮ ಕರ್ತವ್ಯಗಳನ್ನು ನಿಭಾಯಿಸಲು ಕಟಿಬದ್ಧವಾಗಿರಬೇಕು ಎಂದು ಅವರು ತಿಳಿಸಿದರು.

 ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಮಾತನಾಡಿ, ಪ್ರಜಾಪ್ರಭುತ್ವದ ತತ್ವಗಳನ್ನು ಪ್ರತಿಯೊಬ್ಬ ನಾಗರಿಕರು ಅರಿತುಕೊಂಡು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ದೇಶದ ಸರ್ಕಾರ, ಕಾನೂನುಗಳು ಸಂವಿಧಾನದ ಚೌಕಟ್ಟಿನಲ್ಲಿ ನಿರ್ಮಾಣವಾಗುತ್ತವೆ. ಇಲ್ಲಿ ಎಲ್ಲರೂ ಸಮಾನ, ಎಲ್ಲರಿಗೂ ಸಮಾನ ಅವಕಾಶವನ್ನು ಕಲ್ಪಿಸಿಕೊಟ್ಟಿರುವ ನಮ್ಮ ಪ್ರಜಾಪ್ರಭುತ್ವದ ತತ್ವಗಳನ್ನು ಕೇವಲ ಒಂದೇ ದಿನಕ್ಕೆ ಸಿಮಿತಗೊಳಿಸಿದೆ ಪ್ರತಿದಿನವು ಚಾಚುತಪ್ಪದೆ ಪಾಲಿಸಬೇಕು ಎಂದು ಅವರು ಹೇಳಿದರು. 

ಪ್ರಜಾಪ್ರಭುತ್ವದ ಎಲ್ಲ ತತ್ವಗಳನ್ನು ನಾಗರಿಕರು ಅರ್ಥ ಮಾಡಿಕೊಳ್ಳಬೇಕು ಮತದಾನ ಪ್ರಜಾತಂತ್ರದ ಒಂದು ಭಾಗ. ನಮ್ಮ ದೇಶದಲ್ಲಿ ಮತದಾನದ ಹಕ್ಕು ಸಂವಿಧಾನದ ಜಾರಿಯಾದ ಪ್ರಾರಂಭದಲ್ಲಿಯೇ ಎಲ್ಲರಿಗೂ ದಕ್ಕಿದೆ, ಬೇರೆ ದೇಶಗಳ ಸಂವಿಧಾನ ತಿಳಿದುಕೊಂಡಾಗ ಮತದಾನ ಹಕ್ಕಿನ ಮಹತ್ವ ತಿಳಿದುಕೊಳ್ಳಬುದಾಗಿದೆ ಎಂದು ಅವರು ಹೇಳಿದರು. 

 ಭಾರತವು ಅತ್ಯಂತ ಯಶಸ್ವಿನ ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿದ ದೇಶವಾಗಿದೆ. ಅನೇಕ ಗಣ್ಯರ ಪರಿಶ್ರಮದಿಂದ ರಚಿಸಿರುವ ಅಮೂಲ್ಯವಾದ ನಮ್ಮ ಸಂವಿಧಾನ ಪ್ರತಿಯೊಬ್ಬರಿಗೆ ಸಮಾನ ಅವಕಾಶ ನೀಡಿದ್ದು, ಅದರ ಆಶಯದಂತೆ ನಾವೆಲ್ಲರೂ ನಡೆದುಕೊಳ್ಳೋಣ ಎಂದು ಅವರು ಹೇಳಿದರು.

ಪ್ರಜೆಗಳಿಂದ, ಪ್ರಜೆಗಳಿಗಾಗಿ, ಪ್ರಜೆಗಳಿಗೊಸ್ಕರ ಇರುವ ಪ್ರಜಾಪ್ರಭುತ್ವದ ದಿನಾಚರಣೆಯ ಅಂಗವಾಗಿ ರಾಜ್ಯದ ಎಲ್ಲ ಜಿಲ್ಲೆಯಿಂದ ನಿನ್ನೆ ತೆರಳಿದ 10 ಬೈಕ್‌ಗಳ ರ‍್ಯಾಲಿಯು ಇಂದು ಬೆಂಗಳೂರಿನ ವಿಧಾನ ಸಭೆಯಲ್ಲಿ ನಡೆಯುವ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿವೆ. ಹಾಗೂ ಇಂದು ಬೆಳಿಗ್ಗೆ ಜಿಲ್ಲಾಮಟ್ಟದ ಆಯೋಜಿಸಿದ ಸೈಕಲ್ ರ‍್ಯಾಲಿಯೂ ಅತ್ಯಂತ ಯಶಸ್ವಿಯಾಗಿ ಜರುಗಿತು ಎಂದು ಹೇಳಿದ ಅವರು ಪ್ರಜಾಪ್ರಭುತ್ವದ ಅಂಗವಾಗಿ ಭಾಷಣ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ ಹಾಗೂ ಛಾಯಾಚಿತ್ರ ಸ್ಪರ್ಧೆಗಳನ್ನು ಏರ್ಪಡಿಸಲಾಗುತ್ತಿದೆ ಈ ಸ್ಪರ್ಧೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸುವಂತೆ ಅವರು ಕರೆ ನೀಡಿದರು.

 ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಮಾತನಾಡಿ, ಬಸವಣ್ಣನವರು 12ನೇ ಶತಮಾನದಲ್ಲಿಯೇ ಅನುಭವ ಮಂಟಪ ಸ್ಥಾಪಿಸಿ, ಸಮಾನತೆಯ ಸಂದೇಶವನ್ನು ಸಾರಿದರು. ಜಗತ್ತಿನಾದ್ಯಂತ ಪ್ರಖ್ಯಾತಿ ಪಡೆದಿರುವ ಅನುಭವ ಮಂಟಪ ನಮ್ಮ ಕರ್ನಾಟಕದಲ್ಲಿರುವುದು ನಮ್ಮ ಹೆಮ್ಮೆಯಾಗಿದೆ ಎಂದು ಅವರು ಹೇಳಿದರು. 

 ಪ್ರಜಾಪ್ರಭುತ್ವದಲ್ಲಿ ಸರ್ವೋಚ್ಚ ಅಧಿಕಾರಿ ಸಾರ್ವಜನಿಕರ ಕೈಯಲ್ಲಿರುತ್ತದೆ. ತಮ್ಮ ನಾಯಕರನ್ನು ಆಯ್ಕೆ ಮಾಡುವ ಸ್ವಾತಂತ್ರö ಸಾರ್ವಜನಿಕರಿಗೆ ಸಂವಿಧಾನ ನೀಡಿದೆ. ವಿಶ್ವದಲ್ಲಿ ಅತ್ಯಂತ ದೊಡ್ಡ ಸಂವಿಧಾನ ಎಂಬ ಹೆಗ್ಗಳಿಗೆ ಪಾತ್ರವಾಗಿರುವ ನಮ್ಮ ಸಂವಿಧಾನದ ಪರ ನಮ್ಮ ಜವಾಬ್ದಾರಿಯನ್ನು ನಾವೇಲ್ಲರೂ ಪಾಲಿಸಬೇಕು ಎಂದು ಅವರು ಹೇಳಿದರು.

 ಡಾ.ಮಂಜುನಾಥ ಕೋರಿ ಅವರು ಉಪನ್ಯಾಸ ನೀಡಿ, ದೇಶದ ಪ್ರಜಾಪ್ರಭುತ್ವ ಸಂವಿಧಾನ ಜಗತ್ತಿಗೆ ಮಾದರಿಯಾಗಿದೆ. ಸಾರ್ವಭೌಮ, ಸ್ವಾತಂತ್ರ, ಕಾನೂನು ಪ್ರಭುತ್ವ, ಬಹುಮತ ತತ್ವ, ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆ ಅಂಶಗಳನ್ನು ಹೊಂದಿರುವ ಸಂವಿಧಾನದ ರಚನೆ ಮಾಡಿರುವ ಹಕ್ಕು ಮತ್ತು ಕರ್ತವ್ಯಗಳ ಸಮತೋಲನವನ್ನು ಸಂವಿಧಾನದಲ್ಲಿ ಸೇರಿಸುವುದರ ಮೂಲಕ ದೇಶದ ಪ್ರತಿ ಪ್ರಜೆಗೂ ದೇಶದ ಪರ ಕರ್ತವ್ಯಗಳನ್ನು ವಹಿಸಿದ್ದಾರೆ. ಎಲ್ಲರಿಗೂ ಹೊಂದಿಕೆಯಾಗುವAತಹ ಸಂವಿಧಾನವನ್ನು ರಚಿಸಿ, ಸಂವಿಧಾನಕ್ಕೆ ಮತದಾನ ಎಂಬ ಜೀವಾಳ ತುಂಬಿದ ಕೀರ್ತಿ ಡಾ.ಬಿ.ಆರ್. ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ. ಮತದಾನವು ಸಮಾನತೆಯ ಆಧಾರದ ಮೇಲೆ ಸರ್ವರಿಗು ಸಲ್ಲಿದ ಅವಕಾಶ. ಮತದಾರರು ಸರ್ಕಾರದ ನಿರ್ಣಯದಲ್ಲಿ ಮಹತ್ವದ ಪಾತ್ರ ನಿರ್ವಹಿಸುವರು ಎಂದು ಅವರು ಹೇಳಿದರು. ಮತದಾರರು ಉತ್ತಮ ನಾಯಕರ ಆಯ್ಕೆ ಮಾಡವ ಜವಾಬ್ದಾರಿ ಹೊಂದಿರುತ್ತಾರೆ ಮತದಾರರ ಮತವು ಭಾರತದ ಉಜ್ವಲ ಭವಿಷ್ಯದ ನಿರ್ಣಯ ಮಾಡುತ್ತದೆ ಎಂದು ಅವರು ಹೇಳಿದರು. ಇತ್ತೀಚೆಗೆ ನೇಪಾಳದ ಪ್ರಧಾನಿಯಾಗಿ ಆಯ್ಕೆಯಾಗಿರುವ ಸುಶೀಲಾ ಕರ್ಕಿಯವರು ಭಾರತದ ಸಹಾಯದೊಂದಿಗೆ ಸಂಸತು ರಚಿಸುತ್ತೇವೆ ತಮ್ಮ ದೇಶದ ಹೊಸ ಸಂಸತಿಯ ಸರ್ಕಾರ ರಚಿಸುತ್ತೇವೆ ಎಂದು ಹೇಳಿದರುವುದು ನಮ್ಮ ಸಂವಿಧಾನದ ಹೆಮ್ಮೆಯಾಗಿದೆ ಎಂದು ಅವರು ಹೇಳಿದರು.

 ಈ ಸಂದರ್ಭದಲ್ಲಿ ಭಾಷಣ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ ಹಾಗೂ ಛಾಯಾಚಿತ್ರ ಸ್ಪರ್ಧೆಗಳ ಕರಪತ್ರ ಬಿಡುಗಡೆಗೊಳಿಸಲಾಯಿತು. ಸಂವಿದಾನ ಶಿಲ್ಪಿ ಡಾ ಬಾಬಾಸಾಹೇಬ್ ಅಂಬೇಡ್ಕರ್ ರವರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಮಹೇಶ ಪೋತದಾರ ಸ್ವಾಗತಿಸಿದರು. ಯುವಸಬಲೀಕರಣ ಮತ್ತು ಕ್ರೀಡಾ ಇಲಾಕೆಯ ಸಹಾಯಕ ನಿರ್ದೇಶಕರಾದ ರಾಜಶೇಖರ ದೈವಾಡಿ ನಿರೂಪಿಸಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಬಿ.ಜೆ ಇಂಡಿ ವಂದಿಸಿದರು.

 ಕಾರ್ಯಕ್ರಮದಲ್ಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ರಾಮಣ್ಣಗೌಡ ಹಟ್ಟಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಪುಂಡಲಿಕ ಮಾನವರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂತೋಷ ಭೋವಿ, ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರಾದ ವೀರಯ್ಯ ಸಾಲಿಮಠ, ಪಶುಸಂಗೋಪನಾ ಇಲಾಖೆಯ ಉಪ ನಿರ್ದೇಶಕರಾದ ಅಶೋಕ ಗೋಣಸಗಿ, ಮುಖಂಡರುಗಳಾದ ವಿದ್ಯಾವತಿ ಅಂಕಲಗಿ, ಅಡಿವೆಪ್ಪ ಸಾಲಗಲ, ಸಿದ್ದು ರಾಯಣ್ಣವರ, ಅಭಿಷೇಕ ಚಕ್ರವರ್ತಿ, ಭೀಮರಾಯ ಜಿಗಜಿಣಗಿ, ಸಂತೋಷ ಶಹಾಪೂರ, ವಿನಾಯಕ ಗುಣಸಾಗರ, ಅಶೋಕ ಚಲವಾದಿ, ಚೆನ್ನು ಕಟ್ಟಿಮಣಿ, ಮಲ್ಲಿಕಾರ್ಜುನ ಬಟಗಿ, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು. 

 ಸೈಕಲ್ ಜಾಥಾ: ಅಂತರಾಷ್ಟಿçಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ನನ್ನ ಮತ ನನ್ನ ಹಕ್ಕು ಜಾಗೃತಿ ಅಭಿಯಾನದ ಅಂಗವಾಗಿ ಜಿಲ್ಲಾಡಳಿತ ವತಿಯಿಂದ ಸೋಮವಾರ ಬೆಳಿಗ್ಗೆ ಆಯೋಜಿಸಿದ ಸೈಕಲ್ ಜಾಥಾಕ್ಕೆ ಮಹಾನಗರ ಪಾಲಿಕೆಯ ಮಹಾಪೌರರಾದ ಮಡಿವಾಳಪ್ಪ ಸಿದ್ದರಾಮಪ್ಪ ಕರಡಿ ಅವರು ಗೋಲಗುಂಬಜ್ ಆವರಣದಲ್ಲಿ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು. ಗೋಲಗುಂಬಜ್ ಆವರಣದಿಂದ ಪ್ರಾರಂಭಗೊAಡ ಈ ಜಾಥಾವು ಕನಕದಾಸ ವೃತ್ತ, ಗಣಪತಿ ವೃತ್ತ, ಶ್ರೀ ಸಿದ್ದೇಶ್ವರ್ ದೇವಸ್ಥಾನ, ಗಾಂಧಿ ವೃತ್ತ, ಶಿವಾಜಿ ವೃತ್ತ, ಮೀನಾಕ್ಷಿ ವೃತ್ತ, ಕೇಂದ್ರ ಬಸ್ ನಿಲ್ದಾಣ, ಬಸವೇಶ್ವರ ವೃತ್ತದಿಂದ, ಅಂಬೇಡ್ಕರ್ ವೃತ್ತದವರೆಗೆ ಸಮಾವೇಶಗೊಂಡಿತ್ತು. ವಿದ್ಯಾರ್ಥಿಗಳು, ಅಧಿಕಾರಿಗಳು, ಸಿಬ್ಬಂದಿಗಳು, ವಿವಿಧ ಸಂಘ-ಸAಸ್ಥೆಗಳ ಪದಾಧಿಕಾರಿಗಳು ಈ ಜಾಥಾದಲ್ಲಿ ಪಾಲ್ಗೊಂಡಿದ್ದರು. 

 ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಮಹಾನಗರ ಪಾಲಿಕೆಯ ಆಯುಕ್ತರಾದ ವಿಜಯಕುಮಾರ ಮೆಕ್ಕಳಕಿ, ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿ ಸಿ.ಬಿ.ಕುಂಬಾರ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಮಹೇಶ ಪೋತದಾರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಪುಂಡಲಿಕ ಮಾನವರ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಕೆಯ ಸಹಾಯಕ ನಿರ್ದೇಶಕರಾದ ರಾಜಶೇಖರ ದೈವಾಡಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಶಿಕ್ಷಕರು ಆದರ್ಶ ಸಮಾಜ ರೂಪಿಸುವ ಶಿಲ್ಪಿಗಳಾಗಿ ಸಚಿವ ಶಿವಾನಂದ ಪಾಟೀಲ ಕರೆ

ಗೊಳಸಂಗಿ : ಕೆಲವೇ ಕೆಲವು ಶಿಕ್ಷಕರಿಂದಾಗಿ ಶಿಕ್ಷಣ ಕ್ಷೇತ್ರಕ್ಕೆ ಕಳಂಕ ಬರುತ್ತಿದೆ. ಪ್ರಸ್ತುತ ಸಂದರ್ಭದಲ್ಲಿ ಶಿಕ್ಷಕರು ಆದರ್ಶಮಯ ಜೀವನದ ಮೂಲಕ ಆದರ್ಶ ಸಮಾಜ ರೂಪಿಸುವ ಶಿಲ್ಪಿಗಳಾಗಬೇಕು ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಶಿಕ್ಷಕರಿಗೆ ಕಿವಿ ಮಾತು ಹೇಳಿದರು.

ಸೋಮವಾರ ಗೊಳಸಂಗಿ ಗ್ರಾಮದ ಅಪ್ಪಣ್ಣ ದಳವಾಯಿ ಪ್ರೌಢ ಶಾಲಾ ಸಭಾಭವನದಲ್ಲಿ ಬಸವವನಬಾಗೇವಾಡಿ ತಾಲೂಕ ಆಡಳಿತ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕೊಲ್ಹಾರ, ನಿಡಗುಂದಿ ಹಾಗೂ ಬಸವವನಬಾಗೇವಾಡಿ ತಾಲೂಕ ಶಿಕ್ಷಕರ ದಿನಾಚರಣೆ ಹಾಗೂ ನಿವೃತ್ತ ಶಿಕ್ಷಕರ ಅಭಿನಂದನಾ  ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು, ಶಿಕ್ಷಕರ ದಿನಾಚರಣೆ ಆಚರಿಸುತ್ತಿರುವ ಶಿಕ್ಷಕರಿಗೆ ಶುಭಾಶಯ ತಿಳಿಸಿದರು.

ಸರ್ಕಾರ ತನ್ನ ಆದಾಯದಲ್ಲಿ ಅತಿಹೆಚ್ಚು ಅನುದಾನವನ್ನು ಶಿಕ್ಷಣ ಹಾಗೂ ವೈದ್ಯಕೀಯ ಇಲಾಖೆಗಳಿಗೆ ಆರ್ಥಿಕ ವೆಚ್ಚ ಮಾಡುತ್ತಿದೆ. ಹೀಗಾಗಿ ಶಿಕ್ಷಕರು ಗುಣಮಟ್ಟ ಹಾಗೂ ಗುಣಾತ್ಮಕ ಶಿಕ್ಷಣ ನೀಡುವ ಮೂಲಕ ಸಮಾಜ ತಮ್ಮ ಮೇಲೆ ಇರಿಸಿರುವ ನಿರೀಕ್ಷ ಹುಸಿ ಆಗದಂತೆ ವೃತ್ತಿ ಘನತೆ ಮೆರೆಯಬೇಕು ಎಂದು ಸಲಹೆ ನೀಡಿದರು. 

ತಮ್ಮ ಪತ್ನಿಯ ತಂದೆಯವರು ಶಿಕ್ಷಕರಾಗಿ, ನಿವೃತ್ತಿ ಹೊಂದಿದ್ದಾರೆ ಎಂದ ಸಚಿವರು, ಪಾಟೀಲ ಎಂಬ ಶಿಕ್ಷಕರೊಬ್ಬರು ಮಸಬಿನಾಳವದಿಂದ ದೇವರಹಿಪ್ಪರಗಿ ವರೆಗೆ ನಡೆದುಕೊಂಡುಹೋಗಿ ಪಾಠ ಮಾಡುತ್ತಿದ್ದರು. ಇಂಥ ಶಿಕ್ಷಕರು ಇಂದಿನ‌ ಶಿಕ್ಷಕರಿಗೆ ಮಾದರಿಯಾಗಲಿ ಎಂದು ಆಶಿಸಿದರು.

ಪ್ರಸಕ್ತ ಸಂದರ್ಭದಲ್ಲಿ ಸರ್ಕಾರ ಶಿಕ್ಷಕರ ಬೇಡಿಕೆ ಈಡೇರಿಕೆ ಮಾಡುತ್ತದೋ, ಇಲ್ಲವೋ ಆದರೆ ಸರ್ಕಾರ ಶಿಕ್ಷಕರ ಬೇಡಿಕೆ ಈಡೇರಿಸಲಿ ಎಂದು ಆಶಿಸಿದರು.

ಕೇಂದ್ರ ಸರ್ಕಾರ ಸೇರಿದಂತೆ ದೇಶದ ಯಾವುದೇ ರಾಜ್ಯ ಸಾಲ ಮಾಡದೇ ಬಜೆಟ್ ಮಂಡಿಸುವ ಹಾಗೂ ಅಭಿವೃದ್ಧಿ ಮಾಡುವ ಸ್ಥಿತಿ ಇಲ್ಲ. ರಾಜ್ಯದ ಸ್ಥಿತಿಯನ್ನೇ ಅವಲೊಕಿಸಿದರೆ 15 ಲಕ್ಷ ಕೋಟಿ ಸಾಲ ಮಾಡಿದ್ದೇವೆ.

ಸಾಲ ಮಾಡದೇ ಯಾವುದೇ ಸರ್ಕಾರ ನಡೆಸಲು ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗಿದೆ. ದೇಶದ 31 ರಾಜ್ಯಗಳ ಬಜೆಟ್ ನಲ್ಲಿ ಸಾಲ ಇಲ್ಲದ ಬಜೆಟ್ ಮಂಡನೆ ಇಲ್ಲ. ದೇಶದ ಎಲ್ಲ ರಾಜ್ಯಗಳ ಆರ್ಥಿಕ ಸ್ಥಿತಿಯೂ ಇದೇ ಎಂದು ವಿವರಿಸಿದರು.

ಒಟ್ಟು ಜನಸಂಖ್ಯೆಯಲ್ಲಿ  : ಶೇ.3 ಜನರಿಗೆ ಸರ್ಕಾರ ಉದ್ಯೋಗ ಕೊಡಲು ಸಾಧ್ಯವಿಲ್ಲ. ಆದರೂ ಸರ್ಕಾರ ತನ್ನ ಆದಾಯದ ಬಹುತೇಕ ಹಣವನ್ನು ಸರ್ಕಾರಿ ನೌಕರರಿಗೆ ವೆಚ್ಚ ಮಾಡುತ್ತಿದೆ. ಈ ಅಂಶವನ್ನು ಅರಿತು ಸರ್ಕಾರಿ ನೌಕರರು ಹಾಗೂ ಶಿಕ್ಷಕರು ತಮ್ನ ಜವಾಬ್ದಾರಿ ನಿಭಾಯಿಸಿ, ಸಮಾಜದ ಋಣ ತೀರಿಸಬೇಕು ಎಂದು ಸಲಹೆ ಕಿವಿ ಮಾತು ಹೇಳಿದರು.

ಆದರೆ ಕೃಷಿ ಕ್ಷೇತ್ರ ಒಟ್ಟು ಜನಸಂಖ್ಯೆಯ  ಶೇ.70-80 ರಷ್ಟು ಪ್ರಮಾಣದಲ್ಲಿ ಉದ್ಯೋಗ ನೀಡಿದೆ. ಭಾರತೀಯರು ಅನ್ನಕ್ಕೆ ದಾರಿಯಾಗಿರುವುದೇ ಕೃಷಿರಂಗ ಹಾಗೂ ಅನ್ನದಾತ ರೈತ ಎಂಬುದು ಹೆಮ್ಮೆಯ ಸಂಗತಿ. ಹೀಗಾಗಿ ಸರ್ಕಾರದ ಸೌಲಭ್ಯ ಪಡೆಯುವ ಶಿಕ್ಷಕರು ತಮ್ಮನ್ನು ತಾವು ಅರಿತು ಸೇವೆ ಸಲ್ಲಿಸಬೇಕು ಎಂದರು.

ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವಲ್ಲಿ ಮಹತ್ವದ ಜವಾಬ್ದಾರಿ ನಿರ್ವಹಿಸುವಲ್ಲಿ ಶಿಕ್ಷಕರು ಬದ್ಧತೆ ತೋರಬೇಕು ಎಂದರು.

ಕ್ರೀಡಾಪಟುಗಳಲ್ಲಿ ಹಲವರು ತಮ್ಮ ದುಡಿಮೆಯ ಹಣದಲ್ಲಿ ಬಹುತೇಕ ಹಣವನ್ನು ಸಮಾಜಕ್ಕೆ ವೆಚ್ಚ ಮಾಡು ಮಾಡುತ್ತಿದ್ದಾರೆ.

ಅಂಬಾನಿ, ಅದಾನಿ ಹೆಸರು ಮಾತ್ರ ದೊಡ್ಡದು. ಆದರೆ ಟಾಟಾ, ಇನ್ಫೋಸಿಸ್ ನಾರಾಯಣಮೂರ್ತಿ, ಸುಧಾಮೂರ್ತಿ, ಅಜೀಂ ಪ್ರೇಮಜೀ ಅವರಂಥ ಉದ್ಯಮಿಗಳು ಸಾಮಾಜಿಕ ಹೊಣೆಗಾರಿಕೆ ನಿಭಾಯಿಸುವಲ್ಲಿ ಮುಂಚೂಣಿಯಲ್ಲಿ ಇರುವುದು ಸಂತಸದ ಸಂಗತಿ ಎಂದರು.

ಶಿಕ್ಷಕರು ಬಸವವನಬಾಗೇವಾಡಿ ಗುರು ಭವನ ಕಟ್ಟಲು ಮುಂದಾಗಿ ಎಂದು ಸಲಹೆ ನೀಡಿದ ಸಚಿವರು, ಜಿಲ್ಲೆಯಲ್ಲಿ ನನ್ನ ವಿಧಾನಸಭೆ ಕ್ಷೇತ್ರದ ಕನಿಷ್ಟ ಐದಾರು ಮಕ್ಕಳಾದರೂ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿ ಕೀರ್ತಿ ತರುವಂತೆ ರೂಪಿಸುವಲ್ಲಿ ಶಿಕ್ಷಕರು ಪ್ರಾಮಾಣಿಕ ಪ್ರಯತ್ನ ಮಾಡುವಂತೆ ಸಲಹೆ ನೀಡಿದರು.

ಶಿಕ್ಷಕರು ತಮ್ಮ ವೃತ್ತಿ ಘನೆಯ ಸಾಧನೆ ಮೂಲಕ ಪ್ರಶಸ್ತಿ ಪಡೆಯುವಂತೆ ಆಗಬೇಕು. ಆದರೆ ಈಚೆಗೆ  ಶಿಫಾರಸು ಮೂಲಕ ಪ್ರಶಸ್ತಿ ಪಡೆಯವ ಪ್ರವೃತ್ತಿಯಲ್ಲಿ ತೊಡಗಿದ್ದು, ಇಂಥ ವ್ಯವಸ್ಥೆಯಿಂದ ಶಿಕ್ಷಕರು ವಿಮುಖರಾಗಬೇಕು ಎಂದು ಕಿವಿ ಮಾತು ಹೇಳಿದರು.

ವಿಜಯಪುರ ಜಿಲ್ಲೆ ಎಸ್.ಎಸ್.ಎಲ್.ಸಿ. ಫಲಿತಾಂಶದಲ್ಲಿ ಭಾರಿ ಕುಸಿತ ಕಂಡಿರುವುದು ಅತ್ಯಂತ ಖೇದಕರ ಸಂಗತಿ. ಜಿಲ್ಲೆಯ ಭವಿಷ್ಯ ಮಕ್ಕಳ ಶೈಕ್ಷಣಿಕ ಫಲಿತಾಂಶ ಹಾಗೂ ಶೈಕ್ಷಣಿಕ ಅಭಿವೃದ್ಧಿ ಮೇಲೆ ಅವಲಂವಿತವಾಗಿದೆ ಇದನ್ನರಿತು ಶಿಕ್ಷಕರು ಬದ್ಧತೆಯ ಸೇವೆ ಸಲ್ಲಿಸಲಿ ಎಂದರು.

ಗೊಳಸಂಗಿ ಮೂಲದ ಕಾ.ವು.ಬಿಜಾಪುರ ಸೇರಿದಂತೆ ಜಿಲ್ಲೆಯಲ್ಲಿ ಅನುಕರಣೀಯ ಶಿಕ್ಷಕರಾಗಿದ್ದ ಈಶ್ವರಚಂದ್ರ ಚಿಂತಾಮಣಿ, ಶರಣಪ್ಪ ಕಂಚ್ಯಾಣಿ, ಫ.ಗು.ಸಿದ್ಧಾಪುರ ಸೇರಿದಂತೆ ಜಿಲ್ಲೆ ಮಾತ್ರವಲ್ಲದೆ ರಾಜ್ಯ, ರಾಷ್ಟ್ರ ಮಟ್ಟದ ಪ್ರಶಸ್ತಿ ವಿಜೇತ ಜಿಲ್ಲೆ ಶಿಕ್ಷಕರು ಇಂದಿನ ಶಿಕ್ಷಕರಿಗೆ ಆದರ್ಶವಾಗಲಿ ಎಂದರು.

ಉತ್ತಮ ಶಿಕ್ಷಣ ವ್ಯವಸ್ಥೆ ಇರುವ ದೇಶ ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿ ಇರುತ್ತವೆ. ಇದಕ್ಕೆಲ್ಲ ಪ್ರಮುಖ ಕಾರಣ ಶಿಕ್ಷಕರು ಎಂದರು.

ಭಾಷಾ ಸಂಘರ್ಷ ಹೆಚ್ಚುತ್ತಿದ್ದು, ಭಾಷೆ, ರಾಜ್ಯದ ಗಡಿ ಮೀರಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರನ್ನು ಇಡೀ ದೇಶ ರಾಷ್ಟ್ರದ ಅಧ್ಯಕ್ಷರನ್ನಾಗಿ ಸ್ವೀಕರಿಸಿತ್ತು. ಇಂದಿನ ಶಿಕ್ಷಕರು ರಾಷ್ಟ್ರೀಯ ಮನೋಭಾವ ಬೆಳೆಸಿಕೊಂಡು ಸಾಧಕ ಪ್ರತಿಭೆಗಳನ್ನು ರೂಪಿಸಬೇಕು ಎಂದು ಸಲಹೆ ನೀಡಿದರು.

ವಿಶ್ವದ ಯಾವುದೇ ದೇಶಕ್ಕೆ ಹೋದರೂ ಭಾರತೀಯ ಮೂಲದ ವೈದ್ಯರು, ಎಂಜಿನಿಯರಗಳು, ಜಗತ್ತಿನ ಕಂಪನಿಗಳಲ್ಲಿ ಬಹುತೇಕ ಸಿಇಒ ಗಳು ಭಾರತೀಯರೇ ಆಗಿದ್ದಾರೆ ಎಂಬುದು ಹಿರಿಮೆಯ ಸಂಗತಿಯಾಗಿದ್ದು, ಇದಕ್ಕೆಲ್ಲ ಪ್ರಮುಖ ಕಾರಣ ಶಿಕ್ಷಕರು ನೀಡಿದ ಜ್ಞಾನ ಎಂಬುದು ಗಮನೀಯ ಎಂದರು.

ಬಸವವನಬಾಗೇವಾಡಿ ವಿರಕ್ತ ಮಠದ ಸಿದ್ಧಲಿಂಗ ಶ್ರೀಗಳು ಸಾನ್ನಿಧ್ಯ ವಹಿಸಿದ್ದರು. 

ವಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಶೇಖರ ದಳವಾಯಿ, ಗ್ರಾ.ಪಂ. ಅಧ್ಯಕ್ಷ ರಾವುತ್ ಸೀಮಿಕೇರಿ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಮಹಿಬೂಬ ನಾಯ್ಕೋಡಿ, ಚಂದ್ರಶೇಖರ ಹಳೇಮನಿ, ಸಂತೋಷ ಗಣಾಚಾರಿ, ಕರ್ನಾಟಕ ರಾಜ್ಯ ಸಹಕಾರಿ ಮಹಾ ಮಂಡಳದ ನಿರ್ದೇಶಕರಾದ ಈರಣ್ಣ ಪಟ್ಟಣಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುರೇಶ ಹಾರಿವಾಳ, ಜಾನಪದ ಸಾಹಿತಿಗಳಾದ ಅಮರಯ್ಯಸ್ವಾಮಿ ಜಾಲಿಬೆಂಚಿ, ತಹಶಿಲ್ದಾರಾದ ವೈ.ಎಸ್. ಸೋಮನಕಟ್ಟಿ, ಎ.ಡಿ.ಅಮರವಾಡಗಿ, ಸಂತೋಷ ಮ್ಯಾಗೇರಿ,  ತಾ.ಪಂ. ಇಒಗಳಾದ ವೆಂಕಟೇಶ ವಂದಾಲ, ಸುನಿಲ ಮದ್ದಿನ, ಬಿಇಒ ವಸಂತ ರಾಠೋಡ, ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ಶಿವಾನಂದ ಮಂಗಾನವರ ಸೇರಿದಂತೆ ಇತರರು ವೇದಿಕೆ ಮೇಲೆ ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಗಾಂಧಿ ಚೌಕ್ ಪೊಲೀಸ್ ಠಾಣೆಯಲ್ಲಿ ಸಂಚಾರ ಕಮಾಂಡ್ ಕೇಂದ್ರ ಸ್ಥಾಪನೆಗೆ ಸಿದ್ದಸಿರಿ ಸೌಹಾರ್ದ ಸಹಕಾರಿಯಿಂದ ರೂ.25 ಲಕ್ಷ ದೇಣಿಗೆ

ವಿಜಯಪುರ: ನಗರದ ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಸಂಚಾರ ಕಮಾಂಡ್ ಕೇಂದ್ರ ಸ್ಥಾಪಿಸಲು ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರ ಅಧ್ಯಕ್ಷತೆಯ ಸಿದ್ದಸಿರಿ ಸೌಹಾರ್ದ್ ಸಹಕಾರಿ ಸಂಘ ನಿಯಮಿತದಿಂದ ರೂ.25 ಲಕ್ಷ ದೇಣಿಗೆ ಚೆಕ್ ನ್ನು ಸೋಮವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರಿಗೆ ಹಸ್ತಾಂತರಿಸಲಾಯಿತು.

ಕರ್ನಾಟಕ ರಾಜ್ಯ ಸೌಹಾರ್ದ್ ಸಂಯುಕ್ತ ಸಹಕಾರಿ ನಿ ಹಾಗೂ ಸಿದ್ದಸಿರಿ ಸೌಹಾರ್ದ ಸಹಕಾರಿ ನಿ. ನಿರ್ದೇಶಕರಾದ ರಾಮನಗೌಡ ಪಾಟೀಲ ಯತ್ನಾಳ ರವರು, ವಿಜಯಪುರ ನಗರವು ಬೃಹತ್ತಾಗಿ ಬೆಳೆದಿದೆ ಮತ್ತು ವರ್ಷದಿಂದ ವರ್ಷಕ್ಕೆ ಎಲ್ಲ ದಿಕ್ಕಿನಲ್ಲಿಯೂ ಬೆಳೆಯುತ್ತಿದೆ. ಅದಕ್ಕೆ ಅನುಗುಣವಾಗಿ ವಾಹನಗಳ ಸಂಖ್ಯೆಯೂ ಹೆಚ್ಚಾಗುತ್ತಿರುವುದರಿಂದ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಸಾರ್ವಜನಿಕರ ಸುರಕ್ಷತೆಯಿಂದ ಈ ಸಂಚಾರ ನಿರ್ವಹಣೆಯನ್ನು ಸಮರ್ಥವಾಗಿ ನಿಭಾಯಿಸಲು, ಅಪಘಾತಗಳನ್ನು ತಡೆಯಲು, ಸುಧಾರಿತ ಸಂಚಾರ ಕಣ್ಗಾವಲು ವ್ಯವಸ್ಥೆಗಳು, ಪ್ರಮುಖ ವೃತ್ತಗಳ ಮೇಲ್ವಿಚಾರಣೆ, ಸ್ವಯಂಚಾಲಿತ ನಂಬರ್ ಪ್ಲೇಟ್ ಗುರುತಿಸುವಿಕೆ ಮತ್ತು ಸಂಯೋಜಿತ ಸಂವಹನ ಸೌಲಭ್ಯ ಒಳಗೊಂಡ ಸಂಚಾರ ಕಮಾಂಡ್ ಕೇಂದ್ರವನ್ನು ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಸ್ಥಾಪಿಸಲು ಆರ್ಥಿಕ ನೆರವು ಕೋರಿ ಜಿಲ್ಲಾ ಪೊಲೀಸ್ ಇಲಾಖೆಗೆ ಮನವಿ ಮಾಡಿದಕ್ಕೆ ಸಕರಾತ್ಮಕವಾಗಿ ಸ್ಪಂದಿಸಿ ರೂ.25 ಲಕ್ಷ ದೇಣಿಗೆ ನೀಡಲಾಗಿದೆ ಎಂದರು.

ಸಿದ್ದಸಿರಿ ಸೌಹಾರ್ದ್ ಸಹಕಾರಿ ಸಂಘದ ನಿರ್ದೇಶಕರುಗಳಾದ ಪ್ರಬುಗೌಡ ದೇಸಾಯಿ, ಜಗದೀಶ ಕ್ಷತ್ರಿ, ವ್ಯವಸ್ಥಾಪಕ ನಿರ್ದೇಶಕರಾದ ಜ್ಯೋತಿಬಾ ಖಂಡಾಗಳೆ, ಮಹಾಪ್ರಬಂಧಕರು ಉಮೇಶ ಹಾರಿವಾಳ ಇತರರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Thursday, September 4, 2025

ಭವಿಷ್ಯದ ಉತ್ತಮ ಪ್ರಜೆಗಳನ್ನು ರೂಪಿಸುವ ಶಿಲ್ಪಿಗಳು ಶಿಕ್ಷಕರು

ಕೈಹಿಡಿದು ಅಕ್ಷರ ತಿದ್ದಿ, ಓದು–ಬರಹ ಕಲಿಸುವುದಷ್ಟೇ ಅಲ್ಲದೇ ಬದುಕಿನ ಕೌಶಲ್ಯಗಳನ್ನೂ ಕಲಿಸುತ್ತಾ ಜೀವನದಲ್ಲಿ ಮುಂದೆ ಸಾಗಲು ಪ್ರೇರಣೆ ನೀಡುವರು ಶಿಕ್ಷಕರು.

ಮಕ್ಕಳಲ್ಲಿನ ಕೌಶಲ್ಯಗಳನ್ನು ಅರಿತು ಸೂಕ್ತ ಮಾರ್ಗದರ್ಶನ ನೀಡಿ, ಸಾಧನೆಗೆ ಸ್ಪೂರ್ತಿಯಾಗುವರು. ಸಾಧಿಸುವ ಭರವಸೆ, ಕಲಿಕಾ ಆಸಕ್ತಿಯನ್ನು ಹುಟ್ಟು ಹಾಕಿ, ಕನಸನ್ನು ಸಾಕಾರಕ್ಕೆ ಶ್ರಮಿಸುವ ಸೂತ್ರಧಾರ, ಪ್ರತಿಯೊಬ್ಬರ ಬದುಕಿನ ನಂದಾ ದೀಪವಾಗಿರುವವರು ಈ ಶಿಕ್ಷಕರು. 

 ವಿದ್ಯೆಗಿಂತ ದೊಡ್ಡ ದೇವರಿಲ್ಲ, ವಿದ್ಯೆ ಕರುಣಿಸುವ ಶಿಕ್ಷಕರಿಗಿಂತ ದೊಡ್ಡ ಜ್ಞಾನಿಗಳಿಲ್ಲ. ವಿಷಯದ ಸಮಗ್ರ ಮಾಹಿತಿಗಳನ್ನು ಮಕ್ಕಳ ಮನ-ಮಸ್ತಕಕ್ಕೆ ಅರ್ಥವಾಗುವಂತೆ ತಿಳಿಸುವ ಕಲೆಯನ್ನು ಮೈಗೂಡಿಸಿಕೊಂಡು ಕಲಾಕಾರರು ಶಿಕ್ಷಕರು ಎಂದರೇ ತಪ್ಪಾಗಲಾರದು. ಶಾಲೆಗಳಲ್ಲಿ ಮಕ್ಕಳ ಶಿಕ್ಷಣಕ್ಕೆ ಶಿಕ್ಷಣ ವೃತ್ತಿ ಕೇವಲ ಒಂದು ವೃತ್ತಿಯಲ್ಲ ಇದು ಒಂದು ಜವಾಬ್ದಾರಿ ಮಕ್ಕಳನ್ನು ಸಮಾಜ, ದೇಶದ ಆಸ್ತಿಯನ್ನಾಗಿ ಮಾರ್ಪಾಡಿಸುವ ಜವಾಬ್ದಾರಿ. 

ಮಾರ್ಗದರ್ಶನವಿಲ್ಲದೇ ಯಾವ ಗುರಿಯನ್ನು ತಲುಪಲು ಸಾಧ್ಯವಿಲ್ಲ. ಮುಂದೆ ಗುರಿ ಹಿಂದೆ ಗುರು ಎಂಬ ನಾನುಡಿ ಸರ್ವಕಾಲಕ್ಕೂ ಸತ್ಯ. ಮುಗ್ದ ಮನಸ್ಸಿನ ಚಿನ್ನರು ತಪ್ಪು ಮಾಡಿದ್ದಾಗ ಶಿಕ್ಷಿಸಿ, ಒಳ್ಳೆ ಕಾರ್ಯ ಮಾಡಿದ್ದಾಗ ಪ್ರಶಂಸೆ ಮಾಡಿ, ಅವರಲ್ಲಿನ ಅಂಕು-ಡೊAಕುಗಳನ್ನು ತಿದ್ದಿ, ತೀಡಿ ವಿದ್ಯೆಯನ್ನು ಧಾರೆಯೆರೆಯುವ ಶಿಕ್ಷಕರು ಭವಿಷ್ಯದ ಉತ್ತಮ ಪ್ರಜೆಗಳನ್ನು ರೂಪಿಸುವ ಶಿಲ್ಪಿಗಳಾಗಿರುವರು. ಇಂತಹ ಶಿಲ್ಪಿಗಳನ್ನು ಸನ್ಮಾನಿಸುವ ದಿನವೇ ಶಿಕ್ಷಕರ ದಿನಾಚರಣೆ. ಪ್ರತಿ ವರ್ಷ ಸೆಪ್ಟೆಂಬರ್ 5ರಂದು ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಗುತ್ತದೆ.


- ವಿದ್ಯಾಶ್ರೀ ಹೊಸಮನಿ

ಪ್ರಶಿಕ್ಷಣಾರ್ಥಿ, ವಾರ್ತಾ ಮತ್ತು 

ಸಾರ್ವಜನಿಕ ಸಂಪರ್ಕ ಇಲಾಖೆ

ವಿಜಯಪುರ

Wednesday, September 3, 2025

04-09-2025 EE DIVASA KANNADA DAILY NEWS PAPER

ಭೀಮಾತೀರದಲ್ಲಿ ಗುಂಡಿನ ದಾಳಿ: ಗ್ರಾಪಂ ಅಧ್ಯಕ್ಷ ದಾರುಣ ಸಾವು

 


ವಿಜಯಪುರ: ಜಿಲ್ಲೆಯ ಭೀಮಾತೀರದ ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ ಗುಂಡಿನ ದಾಳಿ ನಡೆದಿದ್ದು, ಗ್ರಾಪಂ ಅಧ್ಯಕ್ಷ ದಾರುಣ ಸಾವಿಗೀಡಾಗಿದ್ದಾನೆ.

ದೇವರನಿಂಬರಗಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಭೀಮನಗೌಡ ಬಿರಾದಾರ ಮೇಲೆ, ದುಷ್ಕರ್ಮಿಗಳು ಮೂರು ಸುತ್ತು ಗುಂಡು ಹಾರಿಸಿ  ಪರಾರಿಯಾಗಿದ್ದಾರೆ. 

ಭೀಮನಗೌಡ ಬಿರಾದಾರ ತಲೆ ಹಾಗೂ ಎದೆಗೆ ಗುಂಡುಗಳು ತಗಲಿದ್ದು, ಹಳೇ ವೈಷಮ್ಯದ ಹಿನ್ನೆಲೆ ಈ ಕೃತ್ಯ ನಡೆದಿದೆ ಎಂದು ಹೇಳಲಾಗುತ್ತಿದೆ. ಇನ್ನು ಭೀಮನಗೌಡ ಬಿರಾದಾರ ಭೀಮಾತೀರದ ಮಹಾದೇವ ಸಾಹುಕಾರ ಭೈರಗೊಂಡ ಪರಮಾಪ್ತನಾಗಿದ್ದು, ಮೂರರಿಂದ ನಾಲ್ಕು ಜನ ಮುಸುಕುಧಾರಿಗಳಿಂದ ಕೃತ್ಯ ನಡೆದಿದೆ. ಗುಂಡು ಹಾರಿಸಿದ ಬಳಿಕ‌ ದುಷ್ಕರ್ಮಿಗಳು ಪರಾರಿ ಆಗಿದ್ದಾರೆ.

ದೇವರ ನಿಂಬರಗಿ ಗ್ರಾಮದ ಕಟಿಂಗ್ ಶಾಪ್ ನಲ್ಲಿ ಕಟಿಂಗ್ ಮಾಡಿಸಿಕೊಳ್ಳಲು ಭೀಮನಗೌಡ ಬಿರಾದಾರ ಬಂದಿದ್ದರು. ಈ ವೇಳೆ ಕಟಿಂಗ್ ಮಾಡುವನ ಕಣ್ಣಿಗೆ ಖಾರದ ಪುಡಿ ಎರಚಿ ಕೃತ್ಯ ಮಾಡಲಾಗಿದೆ. ಭೀಮನಗೌಡ ದೆಹವನ್ನು ವಿಜಯಪುರದ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ‌.

ಚಡಚಣ ಪೊಲೀಸ್ ಠಾಣಾ  ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Monday, September 1, 2025

ಮನುಷ್ಯ ಜಾತಿ ತಾನೊಂದೇ ವಲಂ ಎಂದು ಹೇಳಿ ಜಾತ್ಯತೀತ ತತ್ವವನ್ನು ಸಾರಿದ ಪಂಪ ಮತ್ತು ಕುಲ ಕುಲವೆಂದು ಹೊಡೆದಾಡದಿರಿ ಎಂದು ಸಾರಿದ ಕನಕದಾಸರ ಕೀರ್ತನೆಗಳು ಕನ್ನಡ ಸಾಹಿತ್ಯದ ಉನ್ನತ ಪರಂಪರೆಯ ಕುರುಹುಗಳು : ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಡಾ.ಎಲ್.ಎನ್. ಮುಕುಂದರಾಜ

ವಿಜಯಪುರ: ಮನುಷ್ಯ ಜಾತಿ ತಾನೊಂದೇ ವಲಂ ಎಂದು ಹೇಳಿ ಜಾತ್ಯತೀತ ತತ್ವವನ್ನು ಸಾರಿದ ಪಂಪ ಮತ್ತು ಕುಲ ಕುಲವೆಂದು ಹೊಡೆದಾಡದಿರಿ ಎಂದು ಸಾರಿದ ಕನಕದಾಸರ ಕೀರ್ತನೆಗಳು ಕನ್ನಡ ಸಾಹಿತ್ಯದ ಉನ್ನತ ಪರಂಪರೆಯ ಕುರುಹುಗಳು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಡಾ.ಎಲ್.ಎನ್. ಮುಕುಂದರಾಜ ಅವರು ಹೇಳಿದರು.

ನಗರದ ಮಹಿಳಾ ವಿಶ್ವವಿದ್ಯಾನಿಲಯದ ಸ್ನಾತಕ ಮತ್ತು ಸ್ನಾತಕೋತ್ತರ ಕನ್ನಡ ಅಧ್ಯಯನ ವಿಭಾಗಗಳ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ‘ಕನ್ನಡ ಸಾಹಿತ್ಯ ಪರಂಪರೆ - ಅವಲೋಕನ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. 

ಭಾರತದ ಯಾವುದೇ ಭಾಷೆಗೆ ಬರದಷ್ಟು ಜ್ಞಾನಪೀಠ ಪ್ರಶಸ್ತಿಗಳು ಕನ್ನಡ ಭಾಷೆಗೆ ಬಂದಿವೆ. ಇದಕ್ಕೆ ಮುಕುಟಪ್ರಾಯವೆಂಬAತೆ ಇತ್ತೀಚೆಗೆ ಭಾನು ಮುಸ್ತಾಕ್ ಅವರ ‘ಹೃದಯದ ಹಣತೆ’ ಕೃತಿಗೆ ಅಂತರಾಷ್ಟ್ರೀಯ ಮಟ್ಟದ ಬೂಕರ್ ಪ್ರಶಸ್ತಿ ಬಂದಿರುವುದು ಕನ್ನಡ ಸಾಹಿತ್ಯ ಪರಂಪರೆಯ ಶ್ರೀಮಂತಿಕೆಯ ದ್ಯೋತಕವಾಗಿದೆ ಎಂದು ವಿಶ್ಲೇಷಿಸಿದರು.

ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ಭಾರತ ಸಂವಿಧಾನವು ಜನತೆಗೆ ನೆಮ್ಮದಿಯ ಬದುಕನ್ನು ನೀಡಿದ್ದು, ಹೆಣ್ಣು ಮಕ್ಕಳ ಭವಿಷ್ಯಕ್ಕೆ ಆಶಾಕಿರಣವಾಗಿ ಪರಿಣಮಿಸಿದೆ ಎಂದ ಅವರು, ಭಾರತ ಸಂವಿಧಾನ ಈ ದೇಶದ ಹೆಣ್ಣು ಮಕ್ಕಳು ವಿಶ್ವವಿದ್ಯಾಲಯದ ಕುಲಪತಿಗಳು, ರಾಜ್ಯದ ಮುಖ್ಯಮಂತ್ರಿಗಳು, ರಾಷ್ಟ್ರದ ಪ್ರಧಾನಮಂತ್ರಿಗಳು ಮತ್ತು ರಾಷ್ಟ್ರಪತಿಗಳು ಆಗಬಹುದಾದ ಅವಕಾಶಗಳನ್ನು ಸೃಷ್ಟಿಸಿದ್ದು ಈ ಅವಕಾಶಗಳನ್ನು ಈಗಾಗಲೇ ಹಲವು ಮಹಿಳೆಯರು ಸಮರ್ಥವಾಗಿ ಬಳಸಿಕೊಂಡಿದ್ದಾರೆ. ಆ ಮೂಲಕ ನಿಜವಾದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದರು.

ಪ್ರಾಚೀನ ಕಾಲದಲ್ಲಿಯೇ ಕನ್ನಡ ನಾಡಿನ ಜನರು ಯೋಧರು, ಕವಿಗಳು, ಒಳ್ಳೆಯ ಪ್ರಭುಗಳು, ಸುಂದರರು, ವಿನಯವಂತರು, ಗುಣವಂತರು ಅಭಿಮಾನಿಗಳು, ಉಗ್ರ ಪ್ರತಾಪಿಗಳು, ಗಂಭೀರ ಸ್ವಭಾವದವರು, ವಿವೇಕವಂತರು ಆಗಿದ್ದರು ಎಂಬುದಕ್ಕೆ ಕನ್ನಡ ಸಾಹಿತ್ಯದಲ್ಲಿ ಹಲವಾರು ಉದಾಹರಣೆಗಳು ಸಿಗುತ್ತವೆ ಎಂದು ಡಾ.ಮುಕುಂದರಾಜ್ ಹೇಳಿದರು.  

ಪತ್ರಕರ್ತ ಡಾ.ಗಣೇಶ್ ಅಮೀನಗಡ ಮಾತನಾಡಿ, ಹೆಣ್ಣು ಮಕ್ಕಳು ಇನ್‌ಸ್ಟಾಗ್ರಾಂ ಪ್ರೀತಿಗೆ ಮರುಳಾಗದೆ ಎಚ್ಚರಿಕೆಯಿಂದ ಬದುಕಬೇಕು. ಸಾಮಾಜಿಕ ಜಾಲತಾಣದ ದಾಸರಾಗದೆ ಬುದ್ಧಿವಂತಿಕೆಯಿAದ ಮುಂದುವರಿಯಬೇಕು. ಉನ್ನತ ಹುದ್ದೆಗಳನ್ನು ಪಡೆಯಲು ಶಿಸ್ತುಬದ್ಧ ಅಧ್ಯಯನ ಅತ್ಯಾವಶ್ಯಕವೆಂದು ತಿಳಿಸಿದರು. 

 ಕುಲಸಚಿವ  ಶಂಕರಗೌಡ ಎಸ್ ಸೋಮನಾಳ ಮಾತನಾಡಿ, ವಿದ್ಯಾರ್ಥಿಗಳು ಮೊಬೈಲ್‌ನಲ್ಲಿ ಸಮಯ ವ್ಯರ್ಥ ಮಾಡದೆ, ಪುಸ್ತಕಗಳನ್ನು ಹಿಡಿದು ಅಧ್ಯಯನದಲ್ಲಿ ತೊಡಗಿಕೊಳ್ಳಬೇಕು. ಅಧ್ಯಯನವೇ ಭವಿಷ್ಯ ಕಟ್ಟುವ ನಿಜವಾದ ಬಂಡವಾಳ. ನಿರಂತರ ಅಧ್ಯಯನದಿಂದ ವಿದ್ಯಾರ್ಥಿಗಳ ಯಶಸ್ಸಿಗೆ ದಾರಿ ದೀಪವಾಗಲಿದೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಚರಿತ್ರೆ ಕುರಿತು ರಸಪ್ರಶ್ನೆ ಕಾರ್ಯಕ್ರಮ ನಡೆಸಿಕೊಟ್ಟು ವಿಜೇತ ವಿದ್ಯಾರ್ಥಿನಿಯರಿಗೆ ಬಹುಮಾನಗಳನ್ನು ವಿತರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಮಾತನಾಡಿ,  ಹೆಣ್ಣು ಮಕ್ಕಳು ಮೊಬೈಲ್ ಪ್ರೇಮಪ್ರಕರಣದಿಂದ ಬಲಿಪಶುವಾಗುತ್ತಿರುವುದು ಚಿಂತಾಜನಕವಾಗಿದೆ. ಆದ್ದರಿಂದ, ಸಾಮಾಜಿಕ ಮಾಧ್ಯಮದ ಅತಿ ಹೆಚ್ಚು ಬಳಕೆಯಿಂದ ದೂರವಿದ್ದು, ಎಚ್ಚರಿಕೆಯಿಂದ ನಡೆದುಕೊಳ್ಳಬೇಕು. ಮಹಿಳೆಯರ ಮೇಲೆ ಆಗುವ ಅತ್ಯಾಚಾರಗಳ ಬಗ್ಗೆ ಜಾಗರೂಕತೆಯೊಂದಿಗೆ ಹೆಣ್ಣು ಮಕ್ಕಳು ತಮ್ಮ ಸುರಕ್ಷತೆಯನ್ನು ಕಾಪಾಡಿಕೊಳ್ಳಬೇಕು ಎಂದು ಬಲವಾಗಿ ಪ್ರತಿಪಾದಿಸಿದರು. 

ಕಾರ್ಯಕ್ರಮದಲ್ಲಿ ಸ್ನಾತಕ ಅಧ್ಯಯನ ವಿಭಾಗದ ವಿಶೇಷಾಧಿಕಾರಿಗಳಾದ ಪ್ರೊ.ಸಕ್ಪಾಲ್ ಹೂವಣ್ಣ, ಸಂಯೋಜಕರಾದ ಡಾ.ಸೌಭಾಗ್ಯ, ಉಪಸ್ಥಿತರಿದ್ದರು. ಸ್ನಾತಕ ವಿದ್ಯಾರ್ಥಿನಿಯರಾದ ಗೌತಮಿ ನಾಟೇಕರ್, ಶೃತಿ ಕುಲಕರ್ಣಿ, ಅನಿತಾ ಪಾಟೀಲ್ ಪ್ರಾರ್ಥಿಸಿದರು. ಪ್ರೊ.ಎಂ.ನಾಗರಾಜು ಸ್ವಾಗತಿಸಿದರು.  ಡಾ. ರೂಪಾ ಇಂಗಳೆ ಅತಿಥಿಗಳನ್ನು ಪರಿಚಯಿಸಿದರು. ಡಾ.ಚಲುವರಾಜು ವಂದಿಸಿದರು. ಡಾ.ಚೇತನಾ ಸಂಕೊAಡ ನಿರೂಪಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.