Friday, October 24, 2025

25-10-2025 EE DIVASA KANNADA DAILY NEWS PAPER

ಸರ್ಕಾರಿ ವೈದ್ಯಕೀಯ ಕಾಲೇಜ್ ಸ್ಥಾಪನೆಗೆ ರಕ್ತದಲ್ಲಿ ಸಹಿ ಮಾಡಿ ಪ್ರತಿಭಟನೆ

ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜ್ ಸ್ಥಾಪನೆಗೆ ಆಗ್ರಹಿಸಿ ಹೋರಾಟಗಾರರು ತಮ್ಮ ರಕ್ತದ ಮೂಲಕ ಸಹಿ ಮಾಡಿ ಸರ್ಕಾರಕ್ಕೆ ಸಂದೇಶ ರವಾನಿಸಿದರು.

ವಿಜಯಪುರ: ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜ್ ಸ್ಥಾಪಿಸುವಂತೆ ಆಗ್ರಹಿಸಿ ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಹಮ್ಮಿಕೊಂಡಿರುವ ಧರಣಿ ಸತ್ಯಾಗ್ರಹ 37 ನೇ ದಿನ ಪೂರೈಸಿದ ಹಿನ್ನೆಲೆ ಶುಕ್ರವಾರ ರಕ್ತದ ಮೂಲಕ ಸಹಿ ಸಂಗ್ರಹಿಸಿ ಪ್ರತಿಭಟಿಸಲಾಯಿತು.

ಸರ್ಕಾರಿ ವೈದ್ಯಕೀಯ ಕಾಲೇಜ್ ಹೋರಾಟ ಸಮಿತಿ ಪದಾಧಿಕಾರಿಗಳು, ವೈದ್ಯರು, ಮಾಧ್ಯಮ ಪ್ರತಿನಿಧಿಗಳು, ವಿವಿಧ ಸಹಕಾರಿ ಸಂಘಗಳ ಮುಖಂಡರು, ಕನ್ನಡ ಹೋರಾಟಗಾರರು, ವಿದ್ಯಾರ್ಥಿಗಳು ಬಿಳಿ ಬಟ್ಟೆ ಮೇಲೆ ತಮ್ಮ ರಕ್ತದ ಮೂಲಕ ಸಹಿ ಮಾಡಿ ಸರ್ಕಾರಕ್ಕೆ ಒತ್ತಾಯಿಸಿದ್ದು, ರಕ್ತ ಸಹಿ ಸಂಗ್ರಹ ಮಾಡಿರುವ ಬೃಹತ್ ಬ್ಯಾನರ್, ಮನವಿಯೊಂದಿಗೆ ಮುಖ್ಯಮಂತ್ರಿಗಳಿಗೆ ರವಾನಿಸಲಾಯಿತು.

ಪ್ರತಿಭಟನಾಕಾರರು, ಖಾಸಗಿ ಸಹಭಾಗಿತ್ವದಲ್ಲಿ ವೈದ್ಯಕೀಯ ಕಾಲೇಜ್ ಸ್ಥಾಪನೆಯಿಂದ ಶೋಷನೆಗೆ ದಾರಿಯಾಗಿ, ಬಡ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣ ನಿಲುಕದ ನಕ್ಷತ್ರವಾಗುವ ಜೊತೆಗೆ ಬಡ ರೋಗಿಗಳು ಚಿಕಿತ್ಸೆ ಪಡೆಯಲು ಪರದಾಡುವಂತಾಗುತ್ತದೆ. ಹೀಗಾಗಿ ಪೂರ್ಣವಾಗಿ ಸರ್ಕಾರವೇ ವೈದ್ಯಕೀಯ ಕಾಲೇಜ್ ಸ್ಥಾಪನೆಗೆ ಮುಂದಾಗಬೇಕು ಎಂದು ಒತ್ತಾಯಿಸಿದರು.

ಹೋರಾಟ ಸಮಿತಿಯ ಸದಸ್ಯರಾದ ಅರವಿಂದ ಕುಲಕರ್ಣಿ, ಭಗವಾನ್ ರೆಡ್ಡಿ, ಅಕ್ರಂ ಮಾಶಾಳಕರ, ಲಲಿತಾ ಬಿಜ್ಜರಗಿ, ಸುರೇಶ ಜೀಬಿ, ಸುರೇಶ ಬಿಜಾಪುರ, ಲಕ್ಷ್ಮಣ ಹಂದ್ರಾಳ, ಮಲ್ಲಿಕಾರ್ಜುನ ಬಟಗಿ, ಮಲ್ಲಿಕಾರ್ಜುನ ಎಚ್.ಟಿ., ಭರತಕುಮಾರ ಎಚ್.ಟಿ., ಸಿದ್ದಲಿಂಗ ಬಾಗೇವಾಡಿ, ಜಗದೇವ ಸೂರ್ಯವಂಶಿ, ಶಿವಬಾಳಮ್ಮ ಕೊಂಡಗೂಳಿ, ಸಿದ್ದರಾಮ ಹಿರೇಮಠ, ಗೀತಾ ಎಚ್., ಶ್ರೀಕಾಂತ ಕೊಂಡಗೂಳಿ, ಸಿದ್ರಾಮ ಹಳ್ಳೂರ, ಲಕ್ಷ್ಮಣ ಕಂಬಾಗಿ, ಸುಶೀಲ ಮಿಣಜಗಿ, ಜ್ಯೋತಿ ಮಿಣಜಗಿ, ಕಾವೇರಿ ರಜಪೂತ, ಸುನೀತಾ ಮೋರೆ, ಮೀನಾಕ್ಷಿ ಸಿಂಗೆ, ಬಾಬುರಾವ್ ಬೀರಕಬ್ಬಿ, ರೇಷ್ಮಾ ಕಟ್ಟಿಮನಿ, ಟೀನಾ ಜೆವರಲ್, ಫಾದರ್ ಕೆವಿನ್, ದಸ್ತಗಿರ್ ಉಕ್ಕಲಿ, ಅಬ್ದುಲ್ ರೆಹಮಾನ್ ನಾಸಿರ್, ಚಂದ್ರಶೇಖರ ಘಂಟೆಪ್ಪಗೋಳ, ಫಯಾಜ್ ಕಲಾದಗಿ, ಲಾಯಪ್ಪ ಇಂಗಳೆ, ಕಲ್ಲಪ್ಪ ಶಿವಶರಣ ಇತರರು ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು



Tuesday, October 21, 2025

22-10-2025 EE DIVASA KANNADA DAILY NEWS PAPER

21-10-2025 EE DIVASA KANNADA DAILY NEWS PAPER

ದೀಪದಲ್ಲಿ ಸರಕಾರಕ್ಕೆ ಧಿಕ್ಕಾರ ಎಂದು ಬರೆದು ; ಸರ್ಕಾರಿ ಮೆಡಿಕಲ್ ಕಾಲೇಜಿಗಾಗಿ ಕರಾಳ ದೀಪಾವಳಿ ಆಚರಣೆ

ವಿಜಯಪುರ : ನಗರದಲ್ಲಿ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಗೆ ಆಗ್ರಹಿಸಿ ನಡೆಯುತ್ತಿರುವ ಅನಿರ್ದಿಷ್ಟ ಧರಣಿ ಇಂದು 34ನೇ ದಿನ ಪೂರೈಸಿದೆ,

ದೀಪಾವಳಿ ಹಬ್ಬದ ಮಧ್ಯೆಯು ಹೋರಾಟ ನಡೆಯುತ್ತಿದೆ. ಸರಕಾರ ಹೋರಾಟಕ್ಕೆ ಸ್ಪಂದನೆ ಮಾಡದ ಹಿನ್ನೆಲೆಯಲ್ಲಿ ಹೋರಾಟಗಾರರು ದೀಪದಲ್ಲಿ ಸರಕಾರಕ್ಕೆ ಧಿಕ್ಕಾರ ಎಂದು ದೀಪದಲ್ಲಿ ಬರೆದು ಕರಾಳ. ದೀಪಾವಳಿ ಆಚರಣೆ ಮಾಡಿದರು.

ಇದೇ ಸಂದರ್ಭದಲ್ಲಿ ಸರಕಾರ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಗೆ ಆಗ್ರಹಿಸಿದ ಮುಖಂಡರು ಸರಕಾರದ ಬೇಜವಾಬ್ದಾರಿತನವನ್ನು ಕಟು ಮಾತಿನಲ್ಲಿ ಟೀಕಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ, ಅರವಿಂದ ಕುಲಕರ್ಣಿ, ಭಗವಾನ ರೆಡ್ಡಿ ಡಾ ಟಿ ಎಸ್ ಸುನೀತಕುಮಾರ, ಸುರೇಶ ಬಿಜಾಪುರ, ಬೋಗೇಶ ಸೋಲಾಪುರ, ಮಲ್ಲಿಕಾರ್ಜುನ ಬಟಗಿ, ಸಿದ್ದಲಿಂಗ ಬಾಗೇವಾಡಿ,ಲಕ್ಷ್ಮಣ ಹಂದ್ರಾಳ ಲಲಿತಾ ಬಿಜ್ಜರಗಿ, ಭರತಕುಮಾರ ಎಚ್ ಟಿ,ಸುರೇಶ ಜೇಬಿ, ಅಕ್ರಂ ಮಾಶಾಳಕರ, ಸಿದ್ದರಾಮಯ್ಯ ಹಿರೇಮಠ ಗೀತಾ ಎಚ್, ಜ್ಯೋತಿ ಮಿಣಜಗಿ, ಲಕ್ಷ್ಮಣ ಕಂಬಾಗಿ, ಭೀಮು ಉಪ್ಪಾರ ಶಿವಬಾಳಮ್ಮ ಕೊಂಡಗೂಳಿ, ಗಿರೀಶ ಕಲಘಟಗಿ, ಪೂಜಾ ಜೋಮಿವಾಲೆ,ಫಯಾಜ್ ಕಲಾದಗಿ, ಶಿವಾನಂದ ಸುತಗುಂಡಿ, ಎ ಎಂ ಪಟೇಲ್ ಚಂದ್ರಶೇಖರ ಗಬ್ಬೂರ ಸೇರಿ ಹಲವರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು

Friday, October 17, 2025

ಸಿ.ಎಂ.ಗೆ ಮನವರಿಕೆ ಮಾಡಿದ್ದೇನೆ : ಸಚಿವ ಶಿವಾನಂದ ಪಾಟೀಲ ವಿಜಯಪುರ ಸರ್ಕಾರಿ ವೈದ್ಯಕೀಯ ಕಾಲೇಜು

 


ವಿಜಯಪುರ : ವಿಜಯಪುರ ಜಿಲ್ಲೆಯಲ್ಲಿ ಖಾಸಗಿ ಸಹಭಾಗಿತ್ವದ ಬದಲಾಗಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಕುರಿತು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ
ರಾದ ಶಿವಾನಂದ ಪಾಟೀಲ ಹೇಳಿದರು.

ಶುಕ್ರವಾರ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರಧಾನ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳು ಮೊನ್ನೆ ಕರೆದಿದ್ದ ಸಚಿವರ ಸಭೆಯಲ್ಲಿ ನಮ್ಮ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಕುರಿತು ಮಾತನಾಡಿದ್ದೇನೆ. ಸಿದ್ಧರಾಮಯ್ಯ ಅವರು ಈ ಹಿಂದೆ ಮುಖ್ಯಮತ್ರಿಗಳಾಗಿದ್ದಾಗ ನಾನೇ ಮೂರು ಬಾರಿ ಸದನದಲ್ಲಿ ಪ್ರಶ್ನೆ ಮಾಡಿದ್ದೇನೆ ಎಂಬುದನ್ನು ಮುಖ್ಯಮಂತ್ರಿಗಳಿಗೆ ವಿವರಿಸಿದ್ದೇನೆ ಎಂದರು.

400 ಕೋಟಿ ರೂ. ಖರ್ಚಾಗುತ್ತದೆ ಎಂದು ಮುಖ್ಯಮಂತ್ರಿಗಳು ಹೇಳಿದಾಗ ಬೇರೆಯವರು 500 ಕೋಟಿ ರೂ. ಖರ್ಚು ಮಾಡಿದರೂ, ನಮ್ಮ ಜಿಲ್ಲೆಯಲ್ಲಿ ಅದರ ಅರ್ಧಕ್ಕಿಂತ ಕಡಿಮೆ ಖರ್ಚಿನಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಆಗಲಿದೆ ಎಂದು ಮನವರಿಕೆ ಮಾಡಿದ್ದೇನೆ. ವೈದ್ಯಕೀಯ ಶಿಕ್ಷಣ ಸಚಿವರಿಗೂ ಹೇಳಿದ್ದು, ಅವರೂ ಒಪ್ಪಿದ್ದಾರೆ. ಸಚಿವ ಸಂಪುಟ ಸಭೆಯಲ್ಲೂ ಈ ವಿಷಯವನ್ನು ಚರ್ಚೆ ಮಾಡಿದಾಗ ಜಿಲ್ಲಾ ಉಸ್ತುವಾರಿ ಮಂತ್ರಿಗಳೂ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಕುರಿತು ಮಾತನಾಡಿದ್ದಾರೆ ಎಂದರು.

ವಿಜಯಪುರ ವೈದ್ಯಕೀಯ ಕಾಲೇಜು ಸ್ಥಾಪನೆ ಕುರಿತು ಸ್ವಯಂ ಪ್ರೇರಿತ ಹೋರಾಟ ನಡೆಯುತ್ತಿದೆ. ಯಾವುದೇ ಪ್ರತಿಭಟನೆ ಒಂದು ಬೇಡಿಕೆ ಇಟ್ಟುಕೊಂಡು ನಡೆಯುತ್ತದೆ. ಧರಣಿ ಕುಳಿತವರು ಅಪರಾಧಿ-ನಿರಪರಾಧಿ ಎಂದು ಸಂಬೋಧಿಸುವುದು ಸರಿಯಲ್ಲ. ಯಾರದೋ ಕುಮ್ಮಕ್ಕಿನಿಂದ ಹೋರಾಟ ನಡೆಯುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಮಂತ್ರಿಗಳು ಹೇಳಿದ್ದಾರೆ ಎಂದು ಪತ್ರಕರ್ತರು ಪ್ರಶ್ನಿಸಿದಾಗ, ಯಾವ ದೃಷ್ಟಿಕೋನದಲ್ಲಿ ಹೇಳಿದ್ದಾರೋ ನನಗೆ ಗೊತ್ತಿಲ್ಲ, ಅವರನ್ನೇ ಕೇಳಿ.

ಖಾಸಗಿ ಸಹಭಾಗಿತ್ವದ ವೈದ್ಯಕೀಯ ಕಾಲೇಜು ಸ್ಥಾಪನೆ ಕುರಿತು ನಿರ್ಧರಿಸಿದ್ದು ಬಿಜೆಪಿ ಸರ್ಕಾರದ ಅವಧಿಯಲ್ಲಿ. ನಮ್ಮ ಸರ್ಕಾರದ ಅವಧಿಯಲ್ಲಾಗಿಲ್ಲ, ಈ ಕುರಿತು ಮರು ಪರಿಶೀಲನೆ ಪ್ರಸ್ತಾವನೆ ಸಲ್ಲಿಸಬೇಕಿದ್ದು, ಕಾನೂನು ಪ್ರಕ್ರಿಯೆ ಮುಗಿದ ಮೇಲೆ ಸರಳವಾಗಿ ಕಾಲೇಜು ಸ್ಥಾಪನೆಗೆ ಅವಕಾಶ ಸಿಗಲಿದೆ ಎಂದರು.


ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು

Wednesday, October 15, 2025

16-10-2025 EE DIVASA KANNADA DAILY NEWS PAPER

ವಿಜಯಪುರ ಬಂದ್ ; ವಾಲ್ಮೀಕಿ ಸಮಾಜದ ಬೆಂಬಲ

 ವಿಜಯಪುರ : ವಿಜಯಪುರ ನಗರದಲ್ಲಿ ಅ.16 ರಂದು ಭಾರತದ ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿಯವರ ಮೇಲಿನ ಶೂ ಎಸೆತ ಪ್ರಕರಣವನ್ನು ಖಂಡಿಸಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನೀಡಿರುವ ಬಂದ್ ಕರೆಗೆ ವಾಲ್ಮೀಕಿ ಸಮಾಜವು ಬೆಂಬಲ ವ್ಯಕ್ತಪಡಿಸುತ್ತದೆ ಎಂದು ಅಖಿಲ ಭಾರತೀಯ ವಾಲ್ಮೀಕಿ ಸಮಾಜ ಸೇವಾ ಸಂಘದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಬಟಗಿ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿದ ಅವರು, ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಯವರ ಮೇಲಿನ ಹಲ್ಲೆಯು ಭಾರತದ ಇತಿಹಾಸದಲ್ಲಿಯೇ ಒಂದು ಕರಾಳ ಘಟನೆಯಾಗಿದ್ದು ಭಾರತೀಯರಾದ ನಾವೆಲ್ಲರೂ ಅದನ್ನು ಒಕ್ಕೊರಲಿನಿಂದ ಖಂಡಿಸಬೇಕಿದೆ. ಅದಕ್ಕಾಗಿ ಪ್ರತಿಯೊಬ್ಬರು ವಿಜಯಪುರ ಬಂದ್ ಗೆ ಬೆಂಬಲಿಸುವ ಮೂಲಕ ಕರಾಳ ಘಟನೆ ಮತ್ತೊಮ್ಮೆ ಮರುಕಳಿಸದಂತೆ ಎಚ್ಚರಿಕೆ ನೀಡಬೇಕಾಗಿದೆ ಎಂದು ಮಲ್ಲಿಕಾರ್ಜುನ ಬಟಗಿ ತಿಳಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು

Tuesday, October 14, 2025

ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಆಗಬೇಕೆಂದು ಆಗ್ರಹಿಸಿ ಬೃಹತ್ ಪ್ರತಿಭಟನೆ


ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಆಗಬೇಕೆಂದು ಆಗ್ರಹಿಸಿ 27ನೇ ದಿನದದಂದು ಬಬಲೇಶ್ವರ ತಾಲೂಕಿನ ವಿವಿಧ ಸಂಘಟನೆಯ ಆಶ್ರಯದಲ್ಲಿ ಹೋರಾಟ ಸಮಿತಿಯ ವತಿಯಿಂದ ಮಂಗಳವಾರ ಬೃಹತ್ ಪ್ರತಿಭಟನೆ ನಡೆಯಿತು.

ಪಟ್ಟಣದಿಂದ ಶಾಂತವೀರ್ ವೃತ್ತದಿಂದ ತೆಹಸೀಲ್ದಾರ್ ಕಚೇರಿವರೆಗೆ ತಲುಪಿ ತಹಸೀಲ್ದಾರ್ ಅವರಿಗೆ ಮನವಿಯನ್ನು ಸಲ್ಲಿಸಲಾಯಿತು.
ಸರ್ಕಾರದ ಮಟ್ಟದಲ್ಲಿ ಜಿಲ್ಲೆಯಲ್ಲಿ ಪಿಪಿಪಿ ಮಾದರಿಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ ಆಗಬೇಕೆಂದು ಹುನ್ನಾರ ನಡೆದಿದೆ. ಜಿಲ್ಲೆಯಲ್ಲಿ ಶಾಸಕರೊಬ್ಬರು ಬಂಡವಾಳ ಹೂಡುವುದಾಗಿ ಹೇಳಿದ್ದು, ಇದು ಸರಿಯಲ್ಲ. ಬೇಕಿದ್ದರೆ ಅವರೇ ಮತ್ತೊಂದು ಖಾಸಗಿ ಕಾಲೇಜು ಸ್ಥಾಪಿಸಿಕೊಳ್ಳಲಿ ಎಂದು ಪ್ರತಿಭಟನೆಕಾರರು ಆಕ್ರೋಶ ವ್ಯಕ್ತಪಡಿಸಿದರು.
ವಿಜಯಪುರ ನಗರದಲ್ಲಿರುವ ಸರ್ಕಾರಿ ಆಸ್ಪತ್ರೆ ತುಂಬಾ ಸರಿಯಾಗಿ ನಡೆದಿದೆ. ಅಲ್ಲಿ ಸುಮಾರು 153 ಏಕರೆಗಳಷ್ಟು ಜಾಗವೂ ಕೂಡ ಇದೆ. ಸರ್ಕಾರ ಅಲ್ಲಿಯೇ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಬೇಕು. ಇದು ಬಡವರ ಪಾಲಿಗೆ ಆಶಾಕಿರಣವಾಗಲಿದೆ ಎಂದು ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನಾ ಹೋರಾಟ ಸಮಿತಿಯ ಸದಸ್ಯರು ಆಗ್ರಹಿಸಿದರು.
ಬಿ.ಭಗವಾನ್ ರೆಡ್ಡಿ ಮಾತನಾಡುತ್ತಾ 153 ಎಕರೆ ಜಮೀನು ಹೊಂದಿರುವ ಏಕೈಕ ಜಿಲ್ಲೆ ವಿಜಯಪುರ ಆಗಿದ್ದು ಬಡವರ ಮತ್ತು ಹಿಂದುಳಿದ ಮಕ್ಕಳು ಕಲಿಯಲು ಸರ್ಕಾರ ವೈದ್ಯಕೀಯ ಕಾಲೇಜು ಆರಂಭಿಸಬೇಕು ಎಂದು ಹೇಳಿದರು. ಜಮಖಂಡಿ ವಿಜಯಪುರ ರಾಜ್ಯ ಹೆದ್ದಾರಿ ತಡೆದು ಶಾಂತವೀರ ಸರ್ಕಲ್ ನಿಂದ ತಹಶಿಲ್ದಾರರ ಕಛೇರಿಯವರೆಗೆ ರ್ಯಾಲಿಯನ್ನು ಮಾಡಲಾಯಿತು. ಮಲ್ಲು ಕನ್ನೂರ ಜಿಲ್ಲಾ ಪಂಚಾಯತ ಮಾಜಿ ಸದಸ್ಯರು ಮಾತನಾಡುತ್ತಾ ಮೆಡಿಕಲ್ ಕಾಲೇಜು ಆಗಲೇಬೆಕು ಇಲ್ಲವಾದರೆ ಬಬಲೇಶ್ವರ ತಾಲ್ಲೂಕು ಬಂದ ಮಾಡುವುದಾಗಿ ಕರೆ ನೀಡಿದರು. ಮಲ್ಲಿಕಾರ್ಜುನ ಬಟಗಿ ಯವರು ಮಾತನಾಡುತ್ತಾ ಬಿಜಾಪುರ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಆಗಲೇಬೇಕು ಎಂದು ಶಾಸಕರಲ್ಲಿ ವಿನಂತಿ ಮಾಡಿಕೊಳ್ಳಲಾಯಿತು. ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದ ಹೋರಾಟವನ್ನು ಹಮ್ಮಿಕೊಳ್ಳಲಾಗುತ್ತದೆ ಮಂತ್ರಿಗಳು ಇದನ್ನು ಅರ್ಥ ಮಾಡಿಕೊಂಡು ಕಾಲೇಜು ನಿರ್ಮಾಣ ಮಾಡಬೇಕೆಂದು ಒತ್ತಾಯಿಸಲಾಯಿತು.
ಹೋರಾಟ ಸಮಿತಿಯ ಲಕ್ಷ್ಮಣ ಹಂದ್ರಾಳ ರವರು ಮಾತನಾಡುತ್ತಾ ಬಡ ಮಕ್ಕಳು ಓದಲು ಸರಕಾರಿ ಶಿಕ್ಷಣ ಸಂಸ್ಥೆಗಳನ್ನು ಅಭಿವೃದ್ಧಿ ಪಡಿಸಬೇಕು ಹಾಗೂ ಉಚಿತ ಶಿಕ್ಷಣ ಪಡೆಯಲು ಎಲ್ಲರಿಗೂ ಸಹಾಯವಾಗುತ್ತದೆ. ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡುವುದು ಸಾರ್ವಜನಿಕರ ಹಿತಾಸಕ್ತಿಗೆ ಅನುಗುಣವಾಗಿರಬೇಕು ಎಂದು ಹೇಳಿದರು.
ಈ ಪ್ರತಿಭಟನೆಯಲ್ಲಿ ಫಾತಿಮಾ ಮಕಂದಾರ್, ಗಂಗಾ ಪೂಜಾರಿ, ಮಹಾದೇವಿ ಮಾದರ, ನಿಂಗವ್ವ ಗಾದಿವಡರ, ಲಕ್ಷ್ಮಿ ಕವಟಗಿ, ಭಾಗಮ್ಮ ಗೆನ್ನರ, ಸುಜಾತಾ ಚಲಿಬೆಳಿ, ಸುನಂದಾ ಕನಮಡಿ, ಹೋರಾಟ ಸಮಿತಿಯ ಸದಸ್ಯರಾದ ಲಕ್ಷ್ಮಣ್ ಹಂದ್ರಾಳ, ಭಗವಾನ್ ರೆಡ್ಡಿ, ಅಕ್ರಮ ಮಾಶಾಲ್ಕರ್, ಲಕ್ಷ್ಮಣ್ ಕಂಬಾಗಿ, ಮಲ್ಲಿಕಾರ್ಜುನ ಬಟಗಿ, ಲಲಿತಾ ಬಿಜ್ಜರಗಿ, ಕೆವಿನ್, ಜಗದೇವ ಸೂರ್ಯವಂಶಿ, ರೈತ ಮುಖಂಡರಾದ  ಮಲ್ಲು ಕನ್ನೂರ್, ಬೀರಪ್ಪ ಸೊಡ್ಡಿ, ಈರಣ್ಣ ಶಿರಮಗೊಂಡ, ಬಸವರಾಜ್ ರೆಡ್ಡಿ, ಸುರೇಶ್ ಅರಸೂರು, ರಾಜಶೇಖರ್ ರೆಡ್ಡಿ, ಸಿದ್ರಾಮ್ ಹಲ್ಲೂರ್, ರುದ್ರಪ್ಪ ಗೋಲಸಂಗಿ, ಆಮ್ ಆದ್ಮಿ ಪಕ್ಷದ ಬಾಬು ಬಿಜಾಪುರ, ಪೀರಸಾಭ್ ವಾಲಿಕಾರ್, ಮೀರಾಸಾಬ್ ತೊದಲಬಾಗಿ, ಅಬ್ದುಲ್ ಗೋರಿ, ಮಹಿಳಾ ಸಂಘದ ಜಯಾ ಪಿಳ್ಳೈ, ಸುನಿತಾ ಮೋರೆ, ಜೀವನ್ ಜ್ಯೋತಿ ದೇವದಾಸಿ ಸಂಘದ ಚಂದಾಬಾಯಿ ಮಾದರ,  ಹೀನಾ ನದಾಫ್, ಮಹಿಳಾ ಒಕ್ಕೂಟದ ಶ್ರೀದೇವಿ ಡೆಂಗಿ, ಪಡೆವ್ವಾ ಮಾದರ, ಶೋಭಾ ಹರಿಜನ, ಸುಜಾತಾ ಏಳಿಬಲ್ಲಿ, ಮಾನಸಾ ಏಳಬಲ್ಲಿ, ಅಬ್ದುಲ್ ಕಲಾಂ ಸಂಸ್ಥೆಯ ರಜಿಯಾ ಮೊಮಿನ್  ಮತ್ತಿರರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು

15-10-2025 EE DIVASA KANNADA DAILY NEWS PAPER

Monday, October 13, 2025

14-10-2025 EE DIVASA KANNADA DAILY NEWS PAPER

ಡಾಗ್ ಶೆಲ್ಟರ್ ನಿರ್ಮಾಣಕ್ಕೆ ಕ್ರಮ ವಹಿಸಿ : ಜಿಲ್ಲಾಧಿಕಾರಿ ಡಾ.ಆನಂದ ಕೆ. ಸೂಚನೆ

 ವಿಜಯಪುರ  : ಸರ್ವೋಚ್ಛ ನ್ಯಾಯಾಲಯದ ತೀರ್ಪಿನಂತೆ ಬೀದಿ ನಾಯಿಗಳಿಗೆ ಆಶ್ರಯ ಒದಗಿಸಲು ಬುರಾನಪುರನಲ್ಲಿ ಕಾಯ್ದಿರಿಸಿದ ಎರಡು ಎಕರೆ ಜಾಗದಲ್ಲಿ ಡಾಗ್ ಶೆಲ್ಟರ್ ನಿರ್ಮಾಣಕ್ಕಾಗಿ ನೀಲ ನಕ್ಷೆ ತಯಾರಿಸಿ ಸಲ್ಲಿಸುವಂತೆ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವೆಗಳ ಇಲಾಖೆ ಉಪನಿರ್ದೇಶಕರಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸೂಚನೆ ನೀಡಿದ್ದಾರೆ. 

 ಸೋಮವಾರ ನಗರದ ಬುರಾನಪುರದಲ್ಲಿರುವ ಗೋಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ, ಡಾಗ್ ಶೆಲ್ಟರ್ ನಿರ್ಮಾಣಕ್ಕೆ ಸೂಚನೆ ನೀಡಿ, ಗೋಶಾಲೆಗಳಲ್ಲಿರುವ ಜಾನುವಾರುಗಳನ್ನು ಕಾಳಜಿಯಿಂದ ನೋಡಿಕೊಳ್ಳುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು. 

 ನಗರದಲ್ಲಿರುವ ಪಶುಪಾಲನಾ ಇಲಾಖೆ ಕಚೇರಿಗೆ ಭೇಟಿ ನೀಡಿದ ಅವರು, ಬೀದಿ ನಾಯಿಗಳ ಸಂತಾನ ಹರಣಶಸ್ತç ಚಿಕಿತ್ಸಾ ಕಾರ್ಯಕ್ರಮದ ಕಟ್ಟಡವನ್ನು ನವೀಕರಿಸಲು ಮಹಾನಗರ ಪಾಲಿಕೆ ಆಯುಕ್ತರಿಗೆ ಸೂಚಿಸಿದ ಅವರು, ಪಾಲಿಕ್ಲಿನಿಕ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಜಾನುವಾರು ಚಿಕಿತ್ಸೆ, ನಾಯಿ ಮತ್ತು ಬೆಕ್ಕುಗಳ ಚಿಕಿತ್ಸೆ ಮತ್ತು ಶಸ್ತ್ರಚಿಕಿತ್ಸಾ ಕೊಠಡಿ, ರಕ್ತದ ಮಾದರಿಗಳನ್ನು ಪರೀಕ್ಷೆ ಮಾಡುವುದನ್ನು ಸಂಬAಧಿಸಿದ ಪಶುವೈದ್ಯರು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು. 

 ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಪಶುಪಾಲನಾ ಇಲಾಖೆ ಉಪನಿರ್ದೇಶಕ ಅಶೋಕ ಘೋಣಸಗಿ, ಪಾಲಿಕ್ಲಿನಿಕ್ ಉಪನಿರ್ದೇಶಕ ಡಾ.ವಿ.ಎನ್.ಹಾಸಂಗಿಹಾಳ, ಅಮೋಘ ತಳವಾರ ಸೇರಿದಂತೆ ವಿವಿಧ ಅಧಿಕಾರಿ-ಸಿಬ್ಬಂದಿಗಳು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು

Sunday, October 12, 2025

13-10-2025 EE DIVASA KANNADA DAILY NEWS PAPER

ಶಾಂತಿ, ಸದ್ಭಾವದ ಭಾವನೆಯನ್ನು ಅರಳಿಸುವುದೇ ಬೌದ್ಧ ಧರ್ಮದ ದಿವ್ಯ ಸಂದೇಶ ಹಾಗೂ ಉದ್ದೇಶವಾಗಿದೆ,

ವಿಜಯಪುರ : ಶಾಂತಿ, ಸದ್ಭಾವದ ಭಾವನೆಯನ್ನು ಅರಳಿಸುವುದೇ ಬೌದ್ಧ ಧರ್ಮದ ದಿವ್ಯ ಸಂದೇಶ ಹಾಗೂ ಉದ್ದೇಶವಾಗಿದೆ, ಈ ಕಾರ್ಯವನ್ನಿರಿಸಿಕೊಂಡು ಇದೇ ದಿ.14 ರಂದು ಸಾರಿಪುತ್ರ-ಬೋಧಿಧಮ್ಮ ಬುದ್ಧವಿಹಾರದಲ್ಲಿ ಧಮ್ಮಚಕ್ರ ಪರಿವರ್ತನ ದಿನ ಹಾಗೂ ವರ್ಷಾವಾಸ ಸಮಾರೋಪ ಕಾರ್ಯಕ್ರಮ, ಧಮ್ಮ ರಥಯಾತ್ರೆ ನಡೆಯಲಿದೆ ಎಂದು ಬೌದ್ಧ ವಿಹಾರ ನಿರ್ಮಾಣ ಸಮಿತಿ ಗೌರವಾಧ್ಯಕ್ಷ, ಝೆನ್ ಮಾಸ್ಟರ್ ಡಾ. ಶಾಕು ಬೋಧಿಧಮ್ಮ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ವಿವರಣೆ ನೀಡಿದ ಅವರು, ಭಗವಾನ ಬುದ್ಧರು ಸಾರಾನಾಥದಲ್ಲಿ ಧರ್ಮೋಪದೇಶ ಮಾಡುವ ಮೂಲಕ ಧಮ್ಮಚಕ್ರವನ್ನು ಸ್ಥಾಪಿಸಿದರು, ಸಾಮ್ರಾಟ ಅಶೋಕನು ಸಹ ಧರ್ಮಚಕ್ರ ಸ್ಥಾಪನೆ ಮಾಡಿದರು, ನಂತರ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ ಅವರು ಲಕ್ಷಾಂತರ ಅನುಯಾಯಿಗಳ ಸಮ್ಮುಖದಲ್ಲಿ ಅಶೋಕ ವಿಜಯದಶಮಿ ದಿವಸ ಬೌದ್ಧ ಧರ್ಮ ಸ್ವೀಕರಿಸಿ ಮೂರನೇಯ ಬಾರಿಗೆ ಧರ್ಮಚಕ್ರ ಸ್ಥಾಪಿಸಿದರು, ಶಾಂತಿ, ಸಹೋದರತೆ, ಸಮಾನತೆಯ ಚಿಂತನೆಗಳು ಎಲ್ಲೆಡೆ ಪಸರಿಸಬೇಕು ಎನ್ನುವ ದೃಷ್ಟಿಯಿಂದ ಹಲವಾರು ಕಾರ್ಯಕ್ರಮಗಳನ್ನು ಸಂಘಟಿಸಲಾಗಿದೆ ಎಂದರು.

ವರ್ಷಾವಾಸ ಎಂದರೆ ಮಳೆಗಾಲ ವಾಸ, ಮಳೆಗಾಲದ ಮೂರು ತಿಂಗಳಲ್ಲಿ ಬೌದ್ಧ ಧರ್ಮ ಪ್ರಸಾರಕರು ಧ್ಯಾನ ಹಾಗೂ ಸಾಧನಕ್ಕೆ ಹೆಚ್ಚು ಒತ್ತು ನೀಡುತ್ತಿದ್ದರು, ಅಧ್ಯಾತ್ಮಿಕ ಅಧ್ಯಯನದಲ್ಲಿ ತೊಡಗಿಸಿಕೊಳ್ಳುತ್ತಿದ್ದರು, ಆಂತರಿಕ ಶುದ್ಧೀಕರಣಕ್ಕೆ ಇದು ಒಂದು ದಿವ್ಯ ಭಾಗವಾಗಿ ಪರಿಗಣಿತವಾಗಿತ್ತು. ಮಳೆಗಾಲದಲ್ಲಿ ಪ್ರಯಾಣ ಕೈಗೊಂಡರೆ ಅರಿವಿಲ್ಲದೇ ಅನೇಕ ಸಣ್ಣ ಜೀವಿಗಳಿಗೆ ಹಾನಿಯಾಗುವುದನ್ನು ತಪ್ಪಿಸುವ ಉದ್ದೇಶಕ್ಕಾಗಿ ಬೌದ್ಧ ಧರ್ಮ ಪ್ರಸಾರಕರು ಈ ಅವಧಿಯಲ್ಲಿ ಪ್ರಯಾಣ ಮಾಡುತ್ತಿರಲಿಲ್ಲ ಎಂದು ವಿವರಿಸಿದರು. ಹೀಗಾಗಿ ವರ್ಷಾವಾಸ ಎನ್ನುವುದು ಬೌದ್ಧ ಧರ್ಮದ ಪ್ರಮುಖ ಆಚರಣೆಯಾಗಿದ್ದು, ಈ ಅವಧಿಯಲ್ಲಿ ಎಲ್ಲರೂ ಆತ್ಮಶುದ್ಧೀಕರಣದ ಪವಿತ್ರ ಕಾರ್ಯದಲ್ಲಿ ಸಕ್ರೀಯವಾಗಿ ತೊಡಗಿಸಿಕೊಳ್ಳಬೇಕು ಎಂದರು.

ಧಮ್ಮ ರಥಯಾತ್ರೆ :

ವರ್ಷಾವಾಸ ಕಾರ್ಯಕ್ರಮದ ಪ್ರಯುಕ್ತ ಧಮ್ಮ ರಥಯಾತ್ರೆ ಅತ್ಯಂತ ವೈಭವದಿಂದ ನಡೆಯಲಿದ್ದು, ಜಿಲ್ಲಾ ಪಂಚಾಯತ ಬಳಿ ಇರುವ ಡಾ.ಬಿ.ಆರ್. ಅಂಬೇಡ್ಕರ ಭವನದ ಆವರಣದಿಂದ ಬೆಳಿಗ್ಗೆ 9.30 ಗಂಟೆಗೆ ಈ ರಥಯಾತ್ರೆ ಆರಂಭಗೊಳ್ಳಲಿದ್ದು, ಭಗವಾನ ಬುದ್ಧ ಹಾಗೂ ವಿಶ್ವ ರತ್ನ ಡಾ.ಬಿ.ಆರ್. ಅಂಬೇಡ್ಕರ ಅವರ ಭಾವಚಿತ್ರದ ಬೌದ್ಧ ಧಮ್ಮ ರಥ ಯಾತ್ರೆ ವಿವಿಧ ಪ್ರಮುಖ ಮಾರ್ಗಗಳಲ್ಲಿ ಸಾಗಿ ಸಾರಿಪುತ್ರ-ಬೋಧಿಧಮ್ಮ ಬುದ್ಧವಿಹಾರಕ್ಕೆ ತಲುಪಲಿದೆ. ನಂತರ ಮಧ್ಯಾಹ್ನ 11.30 ಗಂಟೆಗೆ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದರು.

ಬುದ್ಧ ವಿಹಾರ ನಿರ್ಮಾಣ ಸಮಿತಿ ಅಧ್ಯಕ್ಷ ರಾಜಶೇಖರ ಯಡಹಳ್ಳಿ, ಉಪಾಧ್ಯಕ್ಷ ಶಶಿಕಾಂತ ಹೊನವಾಡಕರ, ಪ್ರಧಾನ ಕಾರ್ಯದರ್ಶಿ ನಾಗರಾಜ ಲಂಬು, ನಿರ್ದೇಶಕರಾದ ದಶವಂತ ಗುನ್ನಾಪೂರ, ಸಾಬು ಚಲವಾದಿ, ಸುರೇಶ ಗೊಣಸಗಿ, ಕಾನೂನು ಸಲಹೆಗಾರ ಕೆ.ಎಂ. ಕೂಡಲಗಿ ಸೇರಿದಂತೆ ಮೊದಲಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು

12-10-2025 EE DIVASA KANNADA DAILY NEWS PAPER

Friday, October 10, 2025

11-10-2025 EE DIVASA KANNADA DAILY NEWS PAPER

ಮಾನಸಿಕ ಆರೋಗ್ಯ ಮತ್ತು ಸೌಲಭ್ಯಗಳ ಅರಿವು ಮೂಡಿಸಿ : ನ್ಯಾಯಾಧೀಶ ಅರವಿಂದ ಹಾಗರಗಿ


 

ವಿಜಯಪುರ  : ಮಾನಸಿಕ ಆರೋಗ್ಯದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದ ಅತ್ಯವಶ್ಯಕವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹಿರಿಯ ಸಿವ್ಹಿಲ್ ನ್ಯಾಯಾಧೀಶ ಅರವಿಂದ ಹಾಗರಗಿ ಅವರು ಹೇಳಿದರು. 

 ಜಿಲ್ಲಾ ಆಡಳಿತ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಘಟಕ ವಿಜಯಪುರ ಹಾಗೂ ವಿವಿದ ನರ್ಸಿಂಗ್ ಕಾಲೇಜು ಹಾಗೂ ಮನೋಜ್ಯೋತಿ ಫೌಂಡೇಶನ್ ವಿಜಯಪುರ ಇವರ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ಹಮ್ಮಿಕೊಂಡ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಜನಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಪದ್ಮಶ್ರೀ ಪ್ರಶಸ್ತಿ ವಿಜೇತರರು ಹಾಗೂ ಹಿರಿಯ ಮನೋರೋಗ ತಜ್ಞ ಡಾ|| ಸಿ.ಆರ್. ಚಂದ್ರಶೇಖರ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ|| ಸಂಪತ್ತ ಗುಣಾರಿ ಅವರೊಂದಿಗೆ ಜಂಟಿಯಾಗಿ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

 ಮಾನಸಿಕ ಕಾಯಿಲೆಯು ಪುರಾತನ ಕಾಲದಿಂದ ಮನುಷ್ಯನನ್ನು ಕಾಡುತ್ತಾ ಬಂದಿದೆ ಇದಕ್ಕೆ ಸರಳವಾದ ಚಿಕಿತ್ಸೆ ಇರಲಿಲ್ಲ ಈಗ ಆ ಕಾಲ ಬದಲಾಗಿದೆ. ರಾಷ್ಟಿçÃಯ ಮಾನಸಿಕ ಆರೋಗ್ಯ ಕಾರ್ಯಕ್ರಮ ಬಂದ ನಂತರ ಸಮುದಾಯಕ್ಕೆ ಆರೋಗ್ಯದ ಅರಿವು ಮತ್ತು ಜ್ಞಾನವನ್ನು ಕೊಡಲಾಗುತ್ತಿದ್ದು, ಅಲ್ಲದೇ ಮಾನಸಿಕ ಖಾಯಿಲೆಗಳಿಗೆ ಉಚಿತ ಚಿಕಿತ್ಸೆ ಹಾಗೂ ಆಪ್ತಸಮಾಲೋಚನೆ ಮೂಲಕ ಮಾನಸಿಕ ಸಮಸ್ಯೆಗಳಿಗೆ ಪರಿಹಾರ ನೀಡಲಾಗುತ್ತಿದೆ. ಸಾರ್ವಜನಿಕರು ಇದರ ಸೌಲಭ್ಯಗಳನ್ನು ಪಡೆದುಕೊಂಡು ತಮ್ಮ ಜೀವನ ಶೈಲಿಯ ಬದಲಾವಣೆಯಿಂದ ಮಾನಸಿಕವಾಗಿ ಆರೋಗ್ಯವಂತರಾಬೇಕು ಎಂದು ಅವರು ಹೇಳಿದರು. 

 ಮಾನಸಿಕ ಆರೋಗ್ಯದ ಬಗೆಗೆ ಸಾರ್ವಜನಿಕರಲ್ಲಿ ಅರಿವುವನ್ನು ಮೂಡಿಸುವುದು ಬಹಳ ಅತ್ಯವಶ್ಯಕ ಎಂಬುದನ್ನು ಮನಗಂಡು 1948ರಲ್ಲಿ ವಿಶ್ವ ಮಾನಸಿಕ ಆರೋಗ್ಯ ಒಕ್ಕೂಟ ಸ್ಥಾಪನೆಯಾಯಿತು. 1992ರಲ್ಲಿ ಮೊದಲ ಬಾರಿಗೆ ಒಕ್ಕೂಟದ ವತಿಯಿಂದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯನ್ನು ಆಚರಿಸಲಾಯಿತು ಎಂದು ಅವರು ಹೇಳಿದರು. 

 ಡಾ|| ಸಿ.ಆರ್. ಚಂದ್ರಶೇಖರ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರು ಹಾಗೂ ಹಿರಿಯ ಮನೋರೋಗ ತಜ್ಞರು ಮಾತನಾಡುತ್ತಾ ದೈಹಿಕ ರೋಗಗಳನ್ನು ಗುಣಪಡಿಸಲು ಚಿಕಿತ್ಸೆ ನೀಡುವಂತೆ ಮಾನಸಿಕ ರೋಗಗಳನ್ನು ಚಿಕಿತ್ಸೆ ನೀಡಿ ಗುಣಪಡಿಸಬಹುದು ಇದಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿವಿಧ ಕೇಂದ್ರಗಳನ್ನು ಪ್ರಾರಂಭಿಸಿ ಚಿಕಿತ್ಸಾ ಸೌಲಭ್ಯಗಳನ್ನು ನೀಡುತ್ತಿದೆ. ಈ ಸೌಲಭ್ಯದ ಅರಿವು ರೋಗಿಗಳಿಗೆ ಮೂಡಿಸುವುದು ದಿನಾಚರಣೆಯ ಉದ್ದೇಶವಾಗಿದೆ ಎಂದು ಅವರು ಹೇಳಿದರು. 

ಡಾ|| ಸಂಪತ್ತ ಗುಣಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ರವರು ರಾಜ್ಯ ಸರ್ಕಾರ 2014ರಲ್ಲಿ “ಮನೋಚೈತನ್ಯ ಕ್ಲಿನಿಕ” ಎಂಬ ಕಾರ್ಯಕ್ರಮವನ್ನು ಪ್ರಾರಂಭಿಸಿತ್ತು. ಈ ಕಾರ್ಯಕ್ರಮದಡಿಯಲ್ಲಿ ಪ್ರತಿ ಮಂಗಳವಾರ ತಾಲೂಕು ಆಸ್ಪತ್ರೆಗಳಲ್ಲಿ ಮಾನಸಿಕ ಆರೋಗ್ಯ ತಪಾಸಣೆ ಮತ್ತು ಆರೈಕೆ ಕುರಿತಾಗಿ ಶಿಬಿರಗಳನ್ನು ಆಯೋಜಿಸಲಾಗುತ್ತದೆ. ಗರ್ಭಿಣಿ ಮತ್ತು ಬಾಣಂತಿಯರ ಮಾನಸಿಕ ಸಮಸ್ಯೆಗಳನ್ನು ಗುರುತಿಸಿ ಅವರುಗಳಿಗೆ ಸೂಕ್ತ ಮಾನಸಿಕ ಚಿಕಿತ್ಸೆ ಮತ್ತು ಆಪ್ತ ಸಮಾಲೋಚನಾ ಸೇವಾ ಸೌಲಭ್ಯಗಳನ್ನು ಒದಗಿಸುವ ಉದ್ದೇಶವಾಗಿದೆ. ರಾಷ್ಟಿçÃಯ ಟೆಲಿಮಾನಸಿಕ ಆರೋಗ್ಯ ಕಾರ್ಯಕ್ರಮವಾಗಿದ್ದು ಇದು ಮಾನಸಿಕ ಆರೋಗ್ಯ ಸೇವಾ ಸೌಲಭ್ಯವನ್ನು ಉಚಿತವಾಗಿ ದಿನದ 24 ಗಂಟೆಗಳು ಒದಗಿಸುವ ಮಾನಸಿಕ ಆರೋಗ್ಯ ಸಹಾಯವಾಣಿಯಾಗಿದೆ (ಸಹಾಯವಾಣಿ ಸಂಖ್ಯೆ:14416) ಪರೀಕ್ಷೆ ಒತ್ತಡ, ಮಾದಕ ಮತ್ತು ಮಧ್ಯವ್ಯಸನಿಗಳು, ಕೌಟುಂಬಿಕ ಸಮಸ್ಯೆ, ಖಿನ್ನತೆ ಮುಂತಾದ ಮಾನಸಿಕ ರೋಗಗಳಿಂದ ಬಳಲುವವರಿಗೆ ಮಾನಸಿಕ ಆರೋಗ್ಯ ವಿಷಯ ಪರಿಣಿತರು ಆಪ್ತಸಲಹೆ ಸೇವೆಯನ್ನು ಒದಗಿಸುವರು. ಮಾನಸಿಕ ರೋಗಿಗಳ ಗೌಷ್ಯತೆಯನ್ನು ಕಾಪಾಡಲಾಗುವುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮನೋರೋಗ ತಜ್ಞರಾದ ಡಾ|| ಮಂಜುನಾಥ ಮಸಳಿ ಪ್ರಾಸ್ತಾವಿಕವಾಗಿ ಮಾತನಾಡಿ, ತಂಬಾಕು ಹಾಗೂ ದೂಮಪಾನ ಸೇವನೆಯಿಂದ ಮಾನಸಿಕ ಖಿನ್ನತೆಯಿಂದ ಹೆಚ್ಚು ಜನರು ಬಳಲುತ್ತಿದ್ದು. ಅದರಲ್ಲಿ ಮಹಿಳೆಯರು ಶೇ 3ರಷ್ಟು ಮಾನಸಿಕ ರೋಗಕ್ಕೆ ತುತ್ತಾಗುತ್ತಿದ್ದಾರೆ. ಹಾಗೂ ವಿವಿದ ರೀತಿಯ ಮಾನಸಿಕ ರೋಗಗಳ ಕುರಿತು ಮತ್ತು ಅದರ ಚಿಕಿತ್ಸೆಯ ಬಗ್ಗೆ ಮಾತನಾಡಿದರು.

ಜಾಥಾ ಹಾಗೂ ವೇಧಿಕೆ ಕಾರ್ಯಕ್ರಮದಲ್ಲಿ ಜಿಲ್ಲಾ ಕುಷ್ಠರೋಗ ನಿಮೂಲನಾ ಅಧಿಕಾರಿ ಡಾ|| ಅರ್ಚನಾ ಕುಲಕರ್ಣಿ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಪರಶುರಾಮ ಹಿಟ್ನಳ್ಳಿ, ಜಿಲ್ಲಾ ಮಲೇರಿಯಾ ಅಧಿಕಾರಿ ಡಾ.ಜಾನ್ ಕಟವಟೆ, ಮನೋರೋಗ ತಜ್ಞ ಡಾ.ಚೌಕಿಮಠ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜಿ.ಎಂ.ಕೋಲೂರ, ಸುರೇಶ ಹೊಸಮನಿ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ರೇಖಾ ದಶವಂತ, ಕೆ.ಬಿ ಬಾಗವಾನ ಕ್ಲಿನಿಕ್ ಸೈಕಾಲೋಜಿಸ್ಟ್, ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರು, ವಿವಿಧ ನರ್ಸಿಂಗ ಕಾಲೇಜಿನ ಭೋದಕ ಸಿಬ್ಬಂದಿ ವರ್ಗದವರು ಮತ್ತು ವಿಧ್ಯಾರ್ಥಿ/ವಿಧ್ಯಾರ್ಥಿನಿಯರು ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎನ್.ಆರ್ ಭಾಗವಾನ ಸ್ವಾಗತಿಸಿದರು. ರವಿ ಕಿತ್ತೂರ ನಿರೂಪಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು

ವಸತಿ ನಿಲಯ ನಿರ್ವಹಣೆಗೆ ಹಾಸ್ಟೆಲ್ ಮೆಂಟರ್-ವಾರ್ಡನ್‌ಗಳಿಗೆ ಮಾರ್ಗದರ್ಶನ ಸಭೆ ವಸತಿ ನಿಲಯಗಳಲ್ಲಿನ ಮಕ್ಕಳ ಒತ್ತಡ ನಿವಾರಣೆ-ಆತ್ಮವಿಶ್ವಾಸ ಹೆಚ್ಚಿಸಲು ಕ್ರಮ ವಹಿಸಿ -ಜಿಲ್ಲಾಧಿಕಾರಿ ಡಾ.ಆನಂದ ಕೆ.


 ವಿಜಯಪುರ  : ಜಿಲ್ಲೆಯಲ್ಲಿರುವ ವಿವಿಧ ವಸತಿ ನಿಲಯಗಳ ವಿದ್ಯಾರ್ಥಿಗಳ ಆತ್ಮವಿಶ್ವಾಸ ಹೆಚ್ಚಿಸಲು ಹಾಗೂ ಪರೀಕ್ಷಾ ಒತ್ತಡವನ್ನು ತಗ್ಗಿಸುವ ನಿಟ್ಟಿನಲ್ಲಿ ಸಂಬAಧಿಸಿದ ವಸತಿ ನಿಲಯಗಳ ವಾರ್ಡನ್‌ಗಳು ಹಾಗೂ ಹಾಸ್ಟೆಲ್ ಮೆಂಟರ್‌ಗಳು ಮಕ್ಕಳಿಗೆ ಮುಕ್ತವಾದ ವಾತಾವರಣ ಕಲ್ಪಿಸಿ, ಮಕ್ಕಳೊಂದಿಗೆ ಬೆರೆತು, ಸಮಸ್ಯೆಗಳನ್ನು ಆಲಿಸಿ-ಚರ್ಚಿಸಿ, ಪರಿಹರಿಸಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಹೇಳಿದರು. 

 ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ವಿಹಯಪುರ ಇವರ ಸಂಯುಕ್ತಾಶ್ರಯದಲ್ಲಿ ಹಾಸ್ಟೇಲ್ ಮೆಂಟರ್ ಮತ್ತು ವಾರ್ಡನ್ ರವರಿಗೆ ವಸತಿ ನಿಲಯಗಳ ನಿರ್ವಹಣೆಯ ಕುರಿತು ಮಾರ್ಗದರ್ಶಿ ಸಭೆ ಹಾಗೂ ಜಿಲ್ಲಾ ಮಟ್ಟದ. ವಿದ್ಯಾರ್ಥಿಗಳ ಸುರಕ್ಷಾ ಮೇಲುಸ್ತುವಾರಿ ಸಮಿತಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. 

 ವಸತಿ ನಿಲಯಗಳಲ್ಲಿನ ವಿದ್ಯಾರ್ಥಿಗಳು ಉತ್ತಮ ವಿದ್ಯಾಭ್ಯಾಸ ಪಡೆಯಲು ತಮ್ಮ ಕುಟುಂಬದಿAದ ದೂರವಾಗಿರುತ್ತಾರೆ. ವಾರಕ್ಕೊಮ್ಮೆಯಾದರೂ ಒಂದು ಅವರೊಂದಿಗೆ ಊಟ ಮಾಡುವ ಮೂಲಕ ಅವರೊಂದಿಗೆ ಬೆರೆತು, ಕುಟುಂಬದಿAದ ದೂರವಿರುವ ಭಾವನೆ ಹೋಗಲಾಡಿಲು ಪ್ರಯತ್ನಿಸಬೇಕು. ವಸತಿ ನಿಲಯಗಳಲ್ಲಿ ಉತ್ತಮವಾದ ಮುಕ್ತ ವಾತಾವರಣ ನಿರ್ಮಿಸಬೇಕು. ಅವರೊಂದಿಗೆ ಚರ್ಚಿಸಬೇಕು. ಮಕ್ಕಳೊಂದಿಗೆ ಮುಕ್ತವಾಗಿ ಮಾತನಾಡಿದಾಗ ಮಾತ್ರ ಅವರ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ತಮ್ಮ ಆಸಕ್ತ ವಿಷಯಗಳ ಕುರಿತು ಮಕ್ಕಳಿಗೆ ಬೋಧನೆ ಮಾಡಬೇಕು. ವಿಚಾರಗಳು ತಮ್ಮಲ್ಲಿರುವ ಅನುಭವ ಜ್ಞಾನವನ್ನು ಹಂಚಿಕೊಳ್ಳಬೇಕು. ವಸತಿ ನಿಲಯಗಳಲ್ಲಿನ ಸಣ್ಣ ಪುಟ್ಟ ಸಮಸ್ಯೆಗಳನ್ನು ತಮ್ಮ ಹಂತದಲ್ಲಿಯೇ ಪರಿಹರಿಸುವ ಮೂಲಕ ಮಕ್ಕಳಲ್ಲಿನ ಆತ್ಮವಿಶ್ವಾಸ ಹೆಚ್ಚಿಸಲು ಕ್ರಮ ವಹಿಸಬೇಕು ಎಂದು ಅವರು ಹೇಳಿದರು. 

 ವಸತಿ ನಿಲಯಗಳಲ್ಲಿ ಅವಶ್ಯಕವಿರುವ ಎಲ್ಲ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಸಕಾಲಕ್ಕೆ ಒದಗಿಸಬೇಕು. ಸಾಧಾರಣವಾಗಿ ಮಕ್ಕಳಲ್ಲಿ ಚರ್ಮರೋಗ ಸಮಸ್ಯೆ ಉಂಟಾಗುತ್ತದೆ. ಇದನ್ನು ಸಂಬAಧಿಸಿದ ಹಾಸ್ಟೆಲ್ ವಾರ್ಡನ್, ಮೆಂಟರ್‌ಗಳು ಅವಲೋಕಿಸಬೇಕು. ವಾರಕ್ಕೊಮ್ಮೆ ವೈದ್ಯರನ್ನು ಹಾಸ್ಟೇಲ್‌ಗೆ ಕರೆಸಿ ತಪಾಸಣೆ ನಡೆಸಬೇಕು. ರಕ್ತಹೀನತೆ ತಪಾಸಣೆ ನಡೆಸಬೇಕು. ಆಗಾಗ ಆರೋಗ್ಯ ಶಿಬಿರಗಳನ್ನು ಆಯೋಜಿಸಿ ವೈದ್ಯಕೀಯ ತಪಾಸಣೆ ನಡೆಸಬೇಕು. ಯೋಗ, ವ್ಯಾಯಾಮಗಳಂತಹ ದೈಹಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು. ಸುಸಜ್ಜಿತವಾದ ಗ್ರಂಥಾಲಯ ಇರುವಂತೆ ನೋಡಿಕೊಳ್ಳಬೇಕು. ಕಂಪ್ಯೂಟರ್ ತರಬೇತಿ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಮೂಲಕ ವಸತಿ ನಿಲಯಗಳ ವಿದ್ಯಾರ್ಥಿಗಳ ಬೆಳವಣಿಗೆ ಹಾಗೂ ಜೀವನ ಮಟ್ಟ ಸುಧಾರಿಸಲು ಪ್ರೇರೆಪಿಸಬೇಕು ಎಂದು ಅವರು ಹೇಳಿದರು.

 ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಮಾತನಾಡಿ, ಕುಟುಂಬದಿAದ ದೂರ ಬಂದು, ಹಾಸ್ಟೆಲ್‌ನಲ್ಲಿ ತಮ್ಮ ಭವಿಷ್ಯ ರೂಪಿಸಿಕೊಳ್ಳಲು ಬಂದಿರುವ ಮಕ್ಕಳ ಪೋಷಕರಾಗಿ ಹಾಸ್ಟೆಲ್ ವಾರ್ಡನ್‌ಗಳು ಕಾರ್ಯನಿರ್ವಹಿಸಬೇಕು. ಯಾವುದೇ ಸಮಸ್ಯೆ ಬಾರದಂತೆ ನೋಡಿಕೊಳ್ಳಬೇಕು. ಹಾಸ್ಟೆಲ್‌ಗಳಲ್ಲಿನ ಕೊಠಡಿಗಳ ಸ್ವಚ್ಛತೆ, ಶುಚಿತ್ವ ಶೌಚಾಲಯ, ಗ್ರಂಥಾಲಯಗಳಲ್ಲಿ ಮಕ್ಕಳಿಗೆ ಅಗತ್ಯವಿರುವ ಪುಸ್ತಕಗಳು ಸ್ಪರ್ಧಾತ್ಮ, ಪುಸ್ತಕಗಳು, ಉತ್ತಮ ಪೌಷ್ಠಿಕಾಂಶವುಳ್ಳ ಮೆನು ಪ್ರಕಾರ ಆಹಾರ ಒದಗಿಸುವುದು ಬಹುಮುಖ್ಯ ಜವಾಬ್ದಾರಿಯಾಗಿದೆ. ಇದನ್ನರಿತುಕೊಂಡು ಕಾರ್ಯನಿರ್ವಹಿಸಬೇಕು. ಮಿಷನ್ ವಿಜಯಪುರದಡಿ ವೆಬ್ ಕಾಸ್ಟಿಂಗ್ ಮೂಲಕ ಸಂಜೆ ಕ್ಲಾಸ್ ಗಳು ನಡೆಯುತ್ತಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುಂತೆ ನಿಗಾ ವಹಿಸಬೇಕು ಎಂದು ಅವರು ಹೇಳಿದರು. 

 ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷö್ಮಣ ನಿಂಬರಗಿ ಅವರು ಮಾತನಾಡಿ, ವಸತಿ ನಿಲಯಗಳಲ್ಲಿರುವ ಮಕ್ಕಳೊಂದಿಗೆ ಸಂಬAಧಿಸಿದ ಹಾಸ್ಟೆಲ್ ವಾರ್ಡನ್‌ಗಳು ಬೆರೆತು, ಮುಕ್ತವಾಗಿ ಮಾತನಾಡಿ, ವಿಷಯಗಳನ್ನು ಹಂಚಿಕೊAಡಾಗ ಅವರ ಸಮಸ್ಯೆಗಳನ್ನು ಅರಿಯಲು ಸಾಧ್ಯವಾಗುತ್ತದೆ. ಅವರಲ್ಲಿನ ಸಮಸ್ಯೆ ಅರ್ಥ ಮಾಡಿಕೊಂಡು ಪರಿಹಾರ ಕಲ್ಪಿಸಲು ಮುಂದಾಗಬೇಕು. ಮಕ್ಕಳಿಗೆ ಓದಿನ ವಾತಾವರಣ ಕಲ್ಪಿಸಬೇಕು. ಸರ್ಕಾರ ಮಕ್ಕಳಿಗೆ ಪೌಷ್ಠಿಕ ಆಹಾರ ಒದಗಿಸಲು, ಶೈಕ್ಷಣಿಕ ಅಭಿವೃದ್ದಿಗೆ ಸಾಕಷ್ಟು ಅನುದಾನ ನೀಡಿದೆ. ಇದರ ಸದ್ವಿನಿಯೋಗ ಪಡಿಸಿಕೊಂಡು ಮಕ್ಕಳ ಉತ್ತಮ ಭವಿಷ್ಯ ರೂಪಿಸಲು ಮುಂದಾಗಬೇಕು ಎಂದು ಅವರು ಹೇಳಿದರು. 

 ಉತ್ತಮ ಸಮಾಜ ನಿರ್ಮಾಣಕ್ಕೆ ಮಾರ್ಗದರ್ಶನ ಅಗತ್ಯವಿದೆ. ಈ ನಿಟ್ಟಿನಲ್ಲಿ ವಸತಿ ನಿಲಯಗಳ ವಿದ್ಯಾರ್ಥಿಗಳಿಗೆ ಅವರ ಶೈಕ್ಷಣಿಕ ಭವಿಷ್ಯಕ್ಕೆ ರೂಪಿಸಿಕೊಳ್ಳಲು ಉತ್ತಮ ಮಾರ್ಗದರ್ಶನ ನೀಡಬೇಕು. ದುಶ್ಚಟಗಳಿಗೆ ಬಲಿಯಾಗದಂತೆ ತಿಳುವಳಿಕೆ ಮೂಡಿಸಬೇಕು. ವಸತಿ ನಿಲಯಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಹಾಸ್ಟೆಲ್ ಜವಾಬ್ದಾರಿ ಹೊಂದಿರುವ ವಾರ್ಡನ್‌ಗಳು, ಮೆಂಟರ್‌ಗಳು ತಮ್ಮ ಕರ್ತವ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಮೂಲಕ ಮಾದರಿಯಾಗಬೇಕು. ನೂರು ವಿದ್ಯಾರ್ಥಿಗಳು ಸುಧಾರಿಸಿದಾಗ, ಬೆಳವಣಿಗೆ ಹೊಂದಿದಾಗ ನೂರು ಕುಟುಂಬಗಳು ಬೆಳವಣಿಗೆ ಹೊಂದುತ್ತವೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಸಮಾಜದಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದರು. 

 ಡಿ.ಎ.ಮೂಲಿಮನಿ ಉಪನ್ಯಾಸ ನೀಡಿದರು. ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಬದ್ರೂದ್ದೀನ್ ಸೌದಾಗರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸಂಪತ್ ಗುಣಾರಿ, ಡಾ.ನಾಗರಾಜ್, ಹೆಸ್ಕಾಂ ಅಧೀಕ್ಷಕ ಅಭಿಯಂತರ ಸಿದ್ದಪ್ಪ ಬಿಂಜಗೇರಿ, ಆಹಾರ ಸುರಕ್ಷತಾ ಅಧಿಕಾರಿ ಬಿರಾದಾರ, ಕಾರ್ಮಿಕ ಅಧಿಕಾರಿ ಉಮಾಶ್ರೀ ಕೋಳಿ, ಸಮಾಜ ಕಲ್ಯಾಣ ಇಲಾಖೆ ಮಹೇಶ ಪೋತದಾರ, ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು


ಸಹಕಾರಿ ಯಶಸ್ಸಿಗೆ ಕಾನೂನು ಅರಿವು ಅಗತ್ಯ : ಸಚಿವ ಶಿವಾನಂದ


ನಗರದಲ್ಲಿರುವ ವಿಡಿಸಿಸಿ ಬ್ಯಾಂಕ್ ಆವರಣದಲ್ಲಿ ಹಮ್ಮಿಕೊಂಡಿದ್ದ ಸಹಕಾರಿ ಕಾಯ್ದೆ ತಿದ್ದುಪಡಿಗಳ ಕುರಿತ ತರಬೇತಿ ಕಾರ್ಯಾಗಾರಕ್ಕೆ ಸಚಿವ ಶಿವಾನಂದ ಪಾಟೀಲ ಚಾಲನೆ ನೀಡಿದರು.

ವಿಜಯಪುರ : ಸಹಕಾರಿ ರಂಗದಲ್ಲಿರುವ ಎಲ್ಲರೂ ಪ್ರಾಮಾಣಿಕ, ಪಾರದರ್ಶಕ ಹಾಗೂ ಸೇವಾ ಮನೋಭಾವದ ಜೊತೆಗೆ ಕಾನೂನಿನ ಅರಿವಿನೊಂದಿಗೆ ಕೆಲಸ ಮಾಡಿಬೇಕಿದೆ. ಹಾಗಾದಲ್ಲಿ ಸಹಕಾರಿ ರಂಗವನ್ನು ಉತ್ತುಂಗಕ್ಕೆ ಕೊಂಡೊಯ್ಯಲು ಸಾಧ್ಯವಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಹೇಳಿದರು.

ಶುಕ್ರವಾರ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ವಿಜಾಪುರ ಜಿಲ್ಲಾ ಕೃಷಿಯೇತರ ಪತ್ತಿನ ಸಹಕಾರ ಸಂಘ ಹಾಗೂ ಸಹಕಾರಿ ಸಹಕಾರ ಒಕ್ಕೂಟದ ಸಹಯೋಗದಲ್ಲಿ ಪಟ್ಟಣ ಸಹಕಾರಿ ಬ್ಯಾಂಕ್, ಪತ್ತಿನ ಸಹಕಾರಿ ಸಂಘಗಳು ಹಾಗೂ ವಿವಿಧೊದ್ದೇಶಗಳ ಸಹಕಾರಿ ಸಂಘಗಳ ಅಧ್ಯಕ್ಷರು ಹಾಗೂ ಕಾರ್ಯ ನಿರ್ವಾಹಕರಿಗೆ ಹಮ್ಮಿಕೊಂಡಿದ್ದ ಸಹಕಾರಿ ಕಾಯ್ದೆಗಳಿಗೆ ತಿದ್ದುಪಡಿ, ಅಭಿವೃದ್ಧಿ ಹಾಗೂ ಎದುರಿಸುತ್ತಿರುವ ಸವಾಲುಗಳ ಸಮಾಲೋಚನೆ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸಹಕಾರಿ ರಂಗದ ಬಲವರ್ಧನೆಗೆ ಸರ್ಕಾರಗಳು ಮೇಲಿಂದ ಮೇಲೆ ಸಕಾರಾತ್ಮಕ ಕ್ರಮಗಳನ್ನು ಕೈಗೊಳ್ಳುತ್ತವೆ. ಸರ್ಕಾರದ ನಿಯಮಗಳ ಪಾಲನೆಯೊಂದಿಗೆ ಸಹಕಾರಿ ಬಲವರ್ಧನೆಗೆ ಶ್ರಮಿಸಬೇಕಿದೆ ಎಂದರು.

ಪ್ರಸಕ್ತ ಸ್ಪರ್ಧಾತ್ಮಕ ಸಂದರ್ಭದಲ್ಲಿ ಸಹಕಾರಿ ರಂಗದ ಪ್ರಗತಿ ನಿರೀಕ್ಷಿತದಂತೆ ಪ್ರಗತಿ ಕಂಡಿಲ್ಲ ಎಂಬುದು ಸತ್ಯವಾದರೂ ತೀರಾ ನಿರಾಶಾದಾಯವಾಗೇನೂ ಇಲ್ಲ. ಕಾನೂನು ಚೌಕಟ್ಟಿನೊಳಗಿನ ವ್ಯವಹಾರ ಒಂದೆಡೆಯಾದರೆ, ಮಾನವೀಯ ನೆಲೆಯಲ್ಲಿ ವ್ಯವಹರಿಸುವ ಮೂಲಕ ಸಹಕಾರಿ ರಂಗದಲ್ಲಿ ಅಭಿವೃದ್ಧಿಯ ಪರಿವರ್ತನೆ ತರುವ ಅಗತ್ಯವಿದೆ. ರೈತರು, ಜನ ಸಾಮಾನ್ಯರ ಆರ್ಥಿಕ ಜೀವನ ಮಟ್ಟ ಸುಧಾರಣೆಗಾಗಿ ಸಹಕಾರಿ ವ್ಯವಸ್ಥೆಯಲ್ಲಿ ಇರುವ ಎಲ್ಲರೂ ಬದ್ಧತೆಯಿಂದ ಸೇವೆ ಸಲ್ಲಿಸಬೇಕಿದೆ ಎಂದರು.

ಸಹಕಾರಿ ರಂಗದಲ್ಲಿ ಉತ್ತುಂಗದಲ್ಲಿರುವ ಸಹಕಾರಿ ಸಂಸ್ಥೆಗಳೂ ಇವೆ, ಕೆಲವು ಸಾಮಾನ್ಯ ಸ್ಥಿತಿಯಲ್ಲೂ, ಮತ್ತೆ ಕೆಲವು ಸುಧಾರಣೆ ಹಂತದಲ್ಲೂ, ಇನ್ನಷ್ಟು ಸಂಸ್ಥೆಗಳು ಸಂಕಷ್ಟದ ಸ್ಥಿತಿಯಲ್ಲಿವೆ. ಆದರೆ ಸೋತವರನ್ನು ಕೈ ಬಿಡದೇ ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುವುದು ಇಂದಿನ ಅಗತ್ಯವಾಗಿದೆ ಎಂದರು.

ಸಹಕಾರಿ ರಂಗದದಲ್ಲಿ ಆರ್ಥಿಕ ವ್ಯವಹಾರ ಪಾರದರ್ಶಕತೆ, ನಿಸ್ವಾರ್ಥದ ಜೊತೆಗೆ ಆಡಳಿತದ ನ್ಯೂನ್ಯತೆಗಳು ಕಂಡು ಬಂದಾಗ ತಿದ್ದಿಕೊಂಡು ಮುನ್ನಡೆಯಬೇಕು. ಸಹಕಾರಿ ರಂಗದ ಬಲವರ್ಧನೆ ಎಂದರೆ ಅದು ಜನ ಸಾಮಾನ್ಯನ ಆರ್ಥಿಕ ಬಲವರ್ಧನೆ ಎಂದೇ ಅರ್ಥ ಎಂದು ವಿಶ್ಲೇಷಿಸಿದರು.

ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಉಪಾಧ್ಯಕ್ಷರಾದ ರಾಜಶೇಖರ ಗುಡದಿನ್ನಿ ಅವರು ಮಾತನಾಡಿ, ಸಹಕಾರಿ ಕ್ಷೇತ್ರದ ಬಲವರ್ಧನೆಗಾಗಿ ಸಹಕಾರಿ ಪತ್ತಿನ ಸಂಘಗಳು ಹೆಚ್ಚಿನ ಪ್ರಮಾಣದಲ್ಲಿ ಠೇವಣಿ ಸಂಗ್ರಹಿಸಿ, ಆರ್ಥಿಕ ಸುಸ್ಥಿತಿ ಕಂಡುಕೊಳ್ಳಬೇಕು ಎಂದು ಸಲಹೆ ನೀಡಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಸಹಕಾರಿ ಸಂಘಗಳ ವಿಶ್ರಾಂತ ಅಪರ ನಿಬಂಧಕರಾದ ಎಂ.ಜಿ.ಪಾಟೀಲ ಅವರು, ಸಹಕಾರಿ ಸಂಘಗಳ ಕಾಯ್ದೆಗಳ ಇತ್ತೀಚಿನ ತಿದ್ದುಪಡಿ, ಪತ್ತಿನ ಸಹಕಾರಿ ಸಂಸ್ಥೆಗಳ ಅಭಿವೃದ್ಧಿ ಮತ್ತು ಎದುರಿಸುತ್ತಿರುವ ಸವಾಲುಗಳ ಕುರಿತು ಸಮಗ್ರ ವಿವರ ನೀಡಿದರು.

ವಿಜಾಪುರ ಜಿಲ್ಲಾ ಕೃಷಿಯೇತರ ಪತ್ತಿನ ಸಹಕಾರ ಸಂಘ ಹಾಗೂ ಸಹಕಾರಿ ಸಹಕಾರ ಒಕ್ಕೂಟದ ಅಧ್ಯಕ್ಷರಾಗಿರುವ ವಿಡಿಸಿಸಿ ನಿರ್ದೇಶಕರಾದ ಗುರುಶಾಂತ ನಿಡೋಣಿ ಅಧ್ಯಕ್ಷತೆ ವಹಿಸಿದ್ದರು. ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾದ ಚಂದ್ರಶೇಖರಗೌಡ ಪಾಟೀಲ ಮನಗೂಳಿ, ಸುರೇಶಗೌಡ ಬಿರಾದಾರ, ಎಸ್.ಎಸ್.ಜಾಗೀರದಾರ, ಶೇಖರ ದಳವಾಯಿ, ಸಿಇಒ ಎಸ್.ಎ.ಢವಳಗಿ, ಸಹಕಾರಿ ರತ್ನ ಪ್ರಶಸ್ತಿ ಪುರಸ್ಕøತರಾದ ಶ್ರೀ ಶಾಂತೇಶ್ವರ ವಿವಿಧೋದ್ದೇಶಗಳ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀಮಂತ ಇಂಡಿ, ವಿಡಿಸಿಸಿ ಹಿರಿಯ ಅಧಿಕಾರಿಗಳು ಸೇರಿದಂತೆ ಇತರರು ವೇದಿಕೆ ಮೇಲಿದ್ದರು. 

ವಿಶ್ರಾಂತ ಪ್ರಾಚಾರ್ಯ ಬಸವರಾಜ ಸಾವಕಾರ ನಿರೂಪಿಸಿದರೆ, ವಿಡಿಸಿಸಿ ಉಪ ಪ್ರಧಾನ ವ್ಯವಸ್ಥಾಪಕರಾದ ಸತೀಶ ಪಾಟೀಲ ವಂದಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು


Friday, October 3, 2025

04-10-2025 EE DIVASA KANNADA DAILY NEWS PAPER

ಸಚಿವ ಶಿವಾನಂದ ಪಾಟೀಲರಿಂದ ಬನ್ನಿ ವಿನಿಮಯ

ವಿಜಯಪುರ :  ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ, ಕೃಷಿ ಮಾರುಕಟ್ಟೆ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವಾನಂದ ಪಾಟೀಲ ಅವರು ಶುಕ್ರವಾರ ವಿಜಯಪುರ ನಗರದ ತೋಟದ ಮನೆಯಲ್ಲಿ  ಸಾರ್ವಜನಿಕ ಬನ್ನಿ ವಿನಿಮಯ ಆಚರಿಸಿದರು.

ನಗರದ ಜಮಖಂಡಿ ರಸ್ತೆಯಲ್ಲಿರುವ ತಮ್ಮ ತೋಟದ ಮನೆಯಲ್ಲಿ ತಮ್ಮ ತವರು ಕ್ಷೇತ್ರ ಬಸವನಬಾಗೇವಾಡಿ ಮಾತ್ರವಲ್ಲದೆ ವಿಜಯಪುರ, ಬಾಗಲಕೋಟೆ, ಹಾವೇರಿ ಜಿಲ್ಲೆಯಿಂದ ಆಗಮಿಸಿದ್ದ ಜನಸ್ತೋಮದ ಮಧ್ಯೆ ಬನ್ನಿ ವಿನಿಮಯ ಮಾಡಿಕೊಂಡು  ವೈರತ್ವ ಮರೆತು ಬನ್ನಿ ತಗೊಂಡ ಬಂಗಾರದಂಗ ಇರೋಣ ಎಂಬ ಸಂದೇಶ ಸಾರಿದರು.
ಶುಕ್ರವಾರ ಬೆಳಿಗ್ಗೆಯಿಂದಲೇ ವಿಜಯಪುರ ನಗರದ ಜಮಖಂಡಿ ರಸ್ತೆಯಲ್ಲಿರುವ ತೋಟದ ಮನೆಯ ಆವರಣದಲ್ಲಿ ನೆರೆದಿದ್ದ ಅಪಾರ ಜನಸ್ತೋಮ, ವಿವಿಧ ಮಠಾಧೀಶರು, ಮಾಜಿ ಸಚಿವರು, ಹಾಲಿ ಶಾಸಕರು, ರಾಜಕೀಯ ಗಣ್ಯರು, ಮುಖಂಡರು, ರೈತರು, ಸಾರ್ವಜನಿಕರು, ಯುವಕರು, ಮಹಿಳೆಯರು, ಬೆಂಬಲಿಗರು, ಅಭಿಮಾನಿಗಳು, ಸೇರಿದಂತೆ ಸುಮಾರು ಅರ್ಧ ಲಕ್ಷಕ್ಕೂ ಮಿಕ್ಕಿದ ಜನರು ಆಗಮಿಸಿ ಪರಸ್ಪರ ಬನ್ನಿ ವಿನಿಮಯ ಮಾಡಿಕೊಂಡು ಶುಭಾಶಯ ಕೋರಿದರು.
ತಮಗೆ ಪ್ರೀತಿಯಿಂದ ದಸರಾ ಶುಭಾಶಯ ಕೋರಿದ ಸಾರ್ವಜನಿಕರಿಗೆ ಸಚಿವರೂ ಕೂಡ ಬನ್ನಿ ನೀಡಿ ವಿಜಯ ದಶಮಿ ಹಬ್ಬದ ಶುಭಾಶಯ ಕೋರಿದರು.
ಸಚಿವ ಶಿವಾನಂದ ಪಾಟೀಲ ಅವರೊಂದಿಗೆ ವಿಡಿಸಿಸಿ ಬ್ಯಾಂಕ್ ನಿರ್ದೇಶಕಿತಾಗಿರುವ ಪುತ್ರು ಸಂಯುಕ್ತ ಪಾಟೀಲ, ನಂದಿ ಸಕ್ಕರೆ ಕಾರ್ಖಾನೆ ನಿರ್ದೇಶಕರಾಗಿರುವ ಪುತ್ರ ಸತ್ಯಜೀತ ಪಾಟೀಲ ಅವರೂ ಉಪಸ್ಥಿತರಿದ್ದು ಬನ್ನಿ ವಿನಿಮಯ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಬಸವನಬಾಗೇವಾಡಿ ವಿಧಾನಸಭೆ ಕ್ಷೇತ್ರ ಸೇರಿದಂತೆ ವಿಜಯಪುರ, ಹಾವೇರಿ, ಬಾಗಲಕೋಟೆ ಜಿಲ್ಲೆಯಿಂದಲೂ ಪಕ್ಷಾತೀತವಾಗಿ ಆಗಮಿಸಿದ್ದ ಜನರು ಸಚಿವ ಶಿವಾನಂದ ಪಾಟೀಲ ಅವರ ಅಭಿಮಾನಿಗಳು, ಕಾಂಗ್ರೆಸ ಮುಖಂಡರು, ಕಾರ್ಯಕರ್ತರು ಸಚಿವರೊಂದಿಗೆ ಬನ್ನಿ ವಿನಿಮಶುಭಾಶಯ ಕೋರಿದರು. 
ಬನ್ನಿ ವಿನಿಮಯ ಕಾರ್ಯಕ್ರಮದ ನಿಮಿತ್ತ ಆಗಮಿಸಿದ್ದ ಜನರಿಗೆ ಬೆಳಿಗ್ಗೆಯಿಂದಲೇ ಉಪಹಾರ, ಮಧ್ಯಾಹ್ನ ಗೋದಿ ಹುಗ್ಗಿ ಸೇರಿದಂತೆ ವಿವಿಧ ಖಾದ್ಯಗಳ ಊಟೋಪಚಾರದ ವ್ಯವಸ್ಥೆ ನಡೆದಿತ್ತು.
ಮತ್ತೊಂದೆಡೆ, ವಿವಿಧ ಜಾನಪದ ಕಲಾತಂಡಗಳ ಪ್ರದರ್ಶನ, ವಿರೇಶ ವಾಲಿ ತಂಡದಿಂದ ಸಂಗೀತ ಕಾರ್ಯಕ್ರಮ ನಡೆದಿತ್ತು.


ರಾಜ್ಯದಲ್ಲಿ ಹಲವೆಡೆ ಅತೀವೃಷ್ಟಿಯಿಂದ ರೈತರು ಸಂಕಷ್ಟದಲ್ಲಿದ್ದಾರೆ, ನಾಡದೇವಿ ಚಾಮುಂಡೇಶ್ವರಿ ನಾಡಿನಾದ್ಯಂತ ರೈತರಿಗೆ, ನಾಡಿನ ಜನತೆಗೆ ನೆಮ್ಮದಿ ಸುಖ ಶಾಂತಿ ಸಮೃದ್ದಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.
ಶಿವಾನಂದ ಪಾಟೀಲ
ಸಚಿವರು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ, ಕೃಷಿ ಮಾರುಕಟ್ಟೆ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ.

ಸ್ವಚ್ಛತೆಯು ಕೇವಲ ವೈಯಕ್ತಿಕ ಅಭ್ಯಾಸವಲ್ಲ, ಸಮಾಜದ ಉನ್ನತಿ ಮತ್ತು ಸಮೃದ್ಧಿಗೆ ಅಗತ್ಯವಾದ ಜವಾಬ್ದಾರಿ : ಮಹಿಳಾ ವಿವಿಯ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ

 ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಎನ್.ಎಸ್. ಎಸ್ ಕೋಶ ಹಾಗೂ ಗಾಂಧಿ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಶುಕ್ರವಾರ ವಿಶ್ವವಿದ್ಯಾಲಯದ ಆವರಣದಲ್ಲಿ ಮಹಾತ್ಮಾ ಗಾಂಧಿಜಿಯವರ ಜನ್ಮದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ಸ್ವಚ್ಛತಾ ಕಾರ್ಯಕ್ರಮಕ್ಕೆ ಮಹಿಳಾ ವಿವಿಯ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಚಾಲನೆ ನೀಡಿದರು.

 ವಿಜಯಪುರ: ಸ್ವಚ್ಛತೆಯು ಕೇವಲ ವೈಯಕ್ತಿಕ ಅಭ್ಯಾಸವಲ್ಲ, ಸಮಾಜದ ಉನ್ನತಿ ಮತ್ತು ಸಮೃದ್ಧಿಗೆ ಅಗತ್ಯವಾದ ಜವಾಬ್ದಾರಿ ಎಂದು ಮಹಿಳಾ ವಿವಿಯ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಹೇಳಿದರು.

ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಎನ್.ಎಸ್. ಎಸ್ ಕೋಶ ಹಾಗೂ ಗಾಂಧಿ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಶುಕ್ರವಾರ ವಿಶ್ವವಿದ್ಯಾಲಯದ ಆವರಣದಲ್ಲಿ ಮಹಾತ್ಮಾ ಗಾಂಧೀಜಿಯವರ ಜನ್ಮದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ  ಸ್ವಚ್ಛತಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸ್ವಚ್ಛತೆಯು ಉತ್ತಮ ಆರೋಗ್ಯಕ್ಕೆ ಅವಶ್ಯಕವಾಗಿದ್ದು, ಇದು ರೋಗಾಣುಗಳು ಮತ್ತು ಸೋಂಕುಗಳ ಹರಡುವಿಕೆಯನ್ನು ತಡೆಯುವುದರೊಂದಿಗೆ ಮಾನಸಿಕ ಯೋಗಕ್ಷೇಮವನ್ನು ಹೆಚ್ಚಿಸಿ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆಗೆ ಸಹಕಾರಿ ಆಗುತ್ತದೆ. ವೈಯಕ್ತಿಕ ಸ್ವಚ್ಛತೆ, ಪರಿಸರ ಸ್ವಚ್ಛತೆ ಮತ್ತು ಆಹಾರದ ನೈರ್ಮಲ್ಯವನ್ನು ಕಾಪಾಡಿಕೊಳ್ಳುವುದು ವ್ಯಕ್ತಿಗೂ ಸಮಾಜಕ್ಕೂ ಸಮಾನವಾಗಿ ಪ್ರಯೋಜನಕಾರಿ ಎಂದರು.

ಈ ಕಾರ್ಯಕ್ರಮದಲ್ಲಿ ಪ್ರೊ.ಪಿ.ಜಿ.ತಡಸದ, ಪ್ರೊ.ಸಕ್ಪಾಲ್ ಹೂವಣ್ಣ, ಪ್ರೊ.ಮಹೇಶ ಚಿಂತಾಮಣಿ, ಪ್ರೊ.ಅಶೋಕಕುಮಾರ ಸುರಪುರ, ಪ್ರೊ.ಜ್ಯೋತಿ ಉಪಾಧ್ಯಾಯ, ಪ್ರೊ. ಹಣಮಂತಯ್ಯ ಪೂಜಾರಿ, ಪ್ರೊ.ರಾಜು ಬಾಗಲಕೋಟ, ಪ್ರೊ. ರಾಜಕುಮಾರ ಮಾಲಿಪಾಟೀಲ, ಪ್ರೊ. ನಾರಾಯಣ ಪವಾರ, ಪ್ರೊ. ನಾಮದೇವ ಗೌಡ, ಡಾ. ಜಾಯ್ ಹೊಸಕೇರಿ, ಡಾ.ಅಮರನಾಥ ಪ್ರಜಾಪತಿ, ಡಾ.ಗುಲಾಬ್ ರಾಠೋಡ, ವಿವಿಧ ನಿಕಾಯಗಳ ಡೀನರು, ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿಗಳು, ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿನಿಯರು, ಸಂಶೋಧನಾ ವಿದ್ಯಾರ್ಥಿನಿಯರು, ಅತಿಥಿ ಉಪನ್ಯಾಸಕರು ಹಾಗೂ ಎನ್.ಎಸ್.ಎಸ್ ಸ್ವಯಂಸೇವಕಿಯರು ಭಾಗವಹಿಸಿ ವಿಶ್ವವಿದ್ಯಾನಿಲಯದ ಆವರಣವನ್ನು ಸ್ವಚ್ಛಗೊಳಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.