Tuesday, November 4, 2025

ಮಾಧ್ಯಮ ಮಿತ್ರರು ತಮ್ಮ ಅಮೂಲ್ಯವಾದ ಮತ ನನಗೆ ನೀಡಿ : ಅಶೋಕ ಯಡಳ್ಳಿ

ಸಿಂದಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಕಾನಿಪ ಚುನಾವಣೆ ಪ್ರಚಾರ ಸಭೆಯಲ್ಲಿ ಜಿಲ್ಲಾಧ್ಯಕ್ಷ ಸ್ಥಾನದ ಅಭ್ಯರ್ಥಿ ಅಶೋಕ ಯಡಳ್ಳಿ ಮತಯಾಚಿಸಿದರು.

ಸಿಂದಗಿ: ಗ್ರಾಮೀಣ ಭಾಗದ ಪತ್ರಕರ್ತರಿಗಾಗಿ ತಾಲೂಕು ಕೇಂದ್ರದಲ್ಲಿ ಪತ್ರಿಕಾ ಭವನಕ್ಕಾಗಿ ನಿವೇಶನ, ಆರೋಗ್ಯ ವಿಮೆ, ಮಕ್ಕಳ ಶಿಕ್ಷಣಕ್ಕಾಗಿ ಸರಕಾರದ ಸೌಕರ್ಯ ಸೇರಿದಂತೆ ಸಂಘದ ವಿವಿಧ ರೀತಿಯ ಅನುದಾನದಲ್ಲಿ ಸಹಾಯ ಸೌಲಭ್ಯ ಒದಗಿಸಲು ನಮ್ಮ ತಂಡ ಪ್ರಾಮಾಣಿಕ ಪ್ರಯತ್ನ ಮಾಡುತ್ತದೆ ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ ಜಿಲ್ಲಾಧ್ಯಕ್ಷ ಸ್ಥಾನದ ಅಭ್ಯರ್ಥಿ ಅಶೋಕ ಯಡಳ್ಳಿ ಭರವಸೆ ನೀಡಿದರು.

ಸಿಂದಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಕಾನಿಪ ಚುನಾವಣೆ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮತಯಾಚಿಸಿ ಅವರು ಮಾತನಾಡಿದರು.

ಒತ್ತಡದ ಬದುಕಿನ ಮದ್ಯದಲ್ಲಿಯೂ ಪತ್ರಕರ್ತರು ಸಮಾಜದ ಅಂಕುಡೊಂಕುಗಳನ್ನು ಜನತೆಗೆ ತಿಳಿಸುತ್ತಾ ಸಮಾಜದ ಏಳ್ಗೆಗೆ ಶ್ರಮಿಸುವ ನಮ್ಮ ಪತ್ರಕರ್ತರಿಗೆ ಹಾಗೂ ಅವರ ಕುಟುಂಬಗಳಿಗೆ ಸಾಮಾಜಿಕ ಭದ್ರತೆ ಅತ್ಯವಶ್ಯವಾಗಿದೆ. ಜಿಲ್ಲೆಯ ಹಿರಿಯ ಪತ್ರಕರ್ತರ ಮಾರ್ಗದರ್ಶನ, ಸಹಕಾರ ಮತ್ತು ಬೆಂಬಲದಿಂದ 24 ಅಭ್ಯರ್ಥಿಗಳು ವಿವಿಧ ಹುದ್ದೆಗಳಿಗೆ ಅವಿರೋಧವಾಗಿ ಆಯ್ಕೆಯಾಗಿದ್ದು, ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಮಾತ್ರ ನ.09 ರಂದು ಚುನಾವಣೆ ನಡೆಯಲಿದೆ. ಮಾಧ್ಯಮ ಮಿತ್ರರೆಲ್ಲರೂ ತಮ್ಮ ಅಮೂಲ್ಯವಾದ ಮತವನ್ನು ನೀಡಿ ಬೆಂಬಲಿಸಬೇಕು ಎಂದರು.

ಈ ಸಂದರ್ಭ ಇಂದುಶೇಖ ಮಣೂರ, ರಾಜು ಕೊಂಡಗೂಳಿ, ಶರಣು ಮಸಳಿ, ಮೊಹ್ಮದಸಮೀರ ಇನಾಮದಾರ, ಪ್ರಕಾಶ ಬೆಣ್ಣೂರ, ಪ್ರಭು ಕುಮಟಗಿ, ಬಾಬು ತಡಲಗಿ, ಮೋಹನ ಕುಲಕರ್ಣಿ, ಗುರುರಾಜ ಗದ್ದನಕೇರಿ, ದೇವೆಂದ್ರ ಹೆಳವರ, ಶಶಿಕಾಂತ ಮೇಂಡೆಗಾರ, ರಾಹುಲ ಆಪ್ಟೆ, ಕಾನಿಪ ತಾಲೂಕಾಧ್ಯಕ್ಷ ಆನಂದ ಶಾಬಾದಿ, ಉಪಾಧ್ಯಕ್ಷ ಮಲ್ಲಿಕಾರ್ಜುನ ಅಲ್ಲಾಪುರ, ಎಂ.ಎ.ಖತೀಬ, ಸಲೀಂಪಟೇಲ್ ಮರ್ತೂರ, ನವೀನ ಶೆಳ್ಳಗಿ, ಶಿವಾನಂದ ಆಲಮೇಲ, ಗುಂಡು ಕುಲಕರ್ಣಿ, ಸಿದ್ದು ಕಡಗಂಚಿ, ವಿಜಯಕುಮಾರ ಪತ್ತಾರ, ಅಂಬರೀಷ ಸುಣಗಾರ, ಸಿದ್ದಲಿಂಗ ಕಿಣಗಿ, ರಮೇಶ ಪೂಜಾರಿ ಸೇರಿದಂತೆ ಅನೇಕರು ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಗುಮ್ಮಟ ನಗರಿಯಲ್ಲಿ ಹೆಚ್ಚಿದ ಆತಂಕ ಅಧಿಕಾರಿಗಳು ಮಾತ್ರ ನಿರಾತಂಕ ಮುಂಜಾಗೃತೆ-ಜನಜಾಗೃತೆಗಿಲ್ಲ ಕ್ರಮ ಪದೇ ಪದೇ ಭೂಕಂಪನ-ಬೆಚ್ಚಿಬಿದ್ದ ಜನ


ವಿಜಯಪುರ: ಕಳೆದೊಂದು ವರ್ಷದಿಂದ ಪದೇ ಪದೇ ಭೂಮಿ ಕಂಪಿಸುತ್ತಲೇ ಇದ್ದ, ಜನರ ಆತಂಕ ಹೆಚ್ಚಾಗಿದ್ದರೂ ಅಧಿಕಾರಿಗಳು ಮಾತ್ರ ನಿರಾತಂಕವಾಗಿದ್ದಾರೆ.

ಆಗಾಗ ಕೇಳಿ ಬರುತ್ತಿರುವ ಜೋರಾದ ಸದ್ದು ಜನರ ಎದೆ ನಡುಗಿಸುತ್ತಿದೆ. ಆದರೆ, ಅಧಿಕಾರಿಗಳು ಇದೊಂದು ಸಾಮಾನ್ಯ ಪ್ರಕ್ರಿಯೆ ಎನ್ನುತ್ತಿದ್ದಾರೆ. ಕೆಲವೊಮ್ಮ ದೊಡ್ಡ ಪ್ರಮಾಣದಲ್ಲಿ ಭೂಮಿ ಕಂಪಿಸಿದರೂ ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರ ದಾಖಲಾಗಿಲ್ಲ ಎನ್ನುತ್ತಾರೆ. ಹೀಗಾಗಿ ಜನರ ಆತಂಕ ಹೆಚ್ಚಾಗುತ್ತಿದ್ದು, ಜೀವ ಅಂಗೈಯಲ್ಲಿ ಹಿಡಿದು ಜೀವಿಸುವಂತಾಗಿದೆ. ಸ್ವಲ್ಪ ನೆಲ ಅದುರಿದರೂ ರಾತ್ರಿಯಿಡೀ ನಿದ್ರೆಗೆಡುವ ಸ್ಥಿತಿ ನಿರ್ಮಾಣವಾಗಿದೆ. ಯಾವಾಗ ಏನಾಗುತ್ತದೆಯೋ ಎಂಬ ಭಯ ಕಾಡಲಾರಂಭಿಸಿದೆ. 

ಕಳೆದ ಎರಡು ವಾರದಲ್ಲಿ ಹಲವು ಬಾರಿ ಹಲವರಿಗೆ ಭೂಕಂಪನದ ಅನುಭವ ಹಾಗೂ ಭಾರಿ ಶಬ್ದದಿಂದ ನಗರದ ಕೆಲವೊಂದು ಬಡಾವಣೆಗಳಲ್ಲಿ ಜನರ ಭಯಭೀತರಾಗಿ ಮನೆಯಿಂದ ಹೊರ ಬಂದಿದ್ದಾರೆ. ಇದು ಭೂಕಂಪನ ಅಥವಾ ಯಾವುದೇ ಬೇರೆ ಕಾರಣಗಳಿಗೆ ಇಂತಹ ಘಟನೆಗಳಾಗುತ್ತಿವೆಯೇ ಎಂಬುದು ಜನರಿಗೆ ತಿಳಿಯದಾಗಿದೆ. ಪರಸ್ಪರ ತಮ್ಮ ಸ್ನೇಹಿತರಿಗೆ- ನೆರೆ ಹೊರೆಯವರಿಗೆ ಫೋನ್ ಮಾಡಿ ನಿಮಗೆ ಭೂಕಂಪನದ ಅನುಭವದ ಕುರಿತು ವಿಚಾರಣೆ ಮಾಡಿ, ಗೊಂದಲಕ್ಕೀಡಾಗಿದ್ದಾರೆ. 

ಜನರಲ್ಲಿನ ಆತಂಕವನ್ನು ದೂರ ಮಾಡಲು ಸಂಬಂಧಿಸಿದ ಅಧಿಕಾರಿಗಳು, ಪರೀಕ್ಷೆ ನಡೆಸಿ ನಿಖರ ಕಾರಣ ಕಂಡು ಹಿಡಿಯಬೇಕಿದೆ. ವಿಜ್ಞಾನಿಗಳಿಂದ ಅಧ್ಯಯನ ನಡೆಯಬೇಕಿದೆ. ಯಾವುದೇ ದೊಡ್ಡ ಅನಾಹುತ ಸಂಭವಿಸುವ ಮೊದಲೇ ಅಧಿಕಾರಿಗಳು ಈ ವಿಷಯದ ಗಂಭೀರತೆಯನ್ನು ಅರಿತುಕೊಂಡು ಇಂತಹ ಘಟನೆಗಳು ಜರುಗಲು ಇರುವ ವೈಜ್ಞಾನಿಕ ಕಾರಣವನ್ನು ಕಂಡು ಹಿಡಿದು ಜನರಿಗೆ ಈ ಕುರಿತು ತಿಳುವಳಿಕೆ ಮೂಡಿಸಿದ್ದಲ್ಲಿ ಮಾತ್ರ ಜನರು ನಿಟ್ಟುಸಿರು ಬಿಡಲು ಸಾಧ್ಯವಾಗುತ್ತದೆ. ಇಲ್ಲಿ ನಡೆಯುತ್ತಿರುವ ಶಬ್ದ-ಕಂಪನ ಭೂಕಂಪನವೇ  ಆಗಿದ್ದಲ್ಲಿ ಸೂಕ್ತ ಎಚ್ಚರಿಕೆ ಜಿಲ್ಲಾಡಳಿತದಿಂದ ನೀಡಿ, ಯಾವುದೇ ಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸುವುದು ಸೂಕ್ತವಾಗಿದೆ.

ಭೂಕಂಪನ ಸಂಭವಿಸಿರುವ ಕುರಿತು ಜಿಲ್ಲೆಯಲ್ಲಿ  ಸ್ಥಾಪಿಸಲಾದ ಭೂಕಂಪನ ಮಾಪನ ಕೇಂದ್ರದಲ್ಲಿ ದಾಖಲಾಗಿಲ್ಲ. ಪದೇ ಪದೇ ಕಂಪನ ಹಾಗೂ ಭಾರಿ ಶಬ್ದವಾಗುವುದು ಇದು ಭೂಕಂಪನವಲ್ಲ, ಇದೊಂದು ಭೂಮಿಯೊಳಗೆ ಕ್ರಿಯೆಯಾಗಿದೆ. ಇದರಿಂದ ಭೂಮಿಯ ಮೇಲ್ಮೈ ಭಾಗದಲ್ಲಿ ಯಾವುದೇ ಹಾನಿವುಂಟು ಮಾಡುವುದಿಲ್ಲ ಎಂದು ಅಧಿಕಾರಿಗಳ ಪ್ರಾಥಮಿಕ ವರದಿಯಿಂದ ತಿಳಿದು ಬಂದಿದೆ.

ವರದಿ: A.I.Bagewadi

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

05-11-2025 EE DIVASA KANNADA DAILY NEWS PAPER

ಐಎಎಸ್-ಕೆಎಎಸ್ ಹಾಗೂ ಗ್ರೂಪ್ ಸಿ ಪರೀಕ್ಷಾ ಪೂರ್ವ ತರಬೇತಿಗೆ ಸಾಮಾನ್ಯ ಪರೀಕ್ಷೆ ವ್ಯವಸ್ಥಿತವಾಗಿ ಪರೀಕ್ಷೆ ನಡೆಸುವಂತೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ

 ವಿಜಯಪುರ  : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನಡೆಸುವ ಪ್ರಸಕ್ತ 2025-26ನೇ ಸಾಲಿನ ಯುಪಿಎಸ್‌ಸಿ ನಾಗರೀಕ ಸೇವೆ, ಕೆಎಎಸ್ ಗೆಜೆಟೆಡ್ ಪ್ರೊಬೆಷನರ್ ಮತ್ತು ಗ್ರೂಪ್-ಸಿ ಪರೀಕ್ಷಾ ಪೂರ್ವ ತರಬೇತಿಗೆ ಆಯ್ಕೆ ಮಾಡಲು ವಿಜಯಪುರ ನಗರದಲ್ಲಿ ನ.8 ಹಾಗೂ 9 ರಂದು ಸಾಮಾನ್ಯ ಪ್ರವೇಶ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಯನ್ನು ವ್ಯವಸ್ಥಿತ ಹಾಗೂ ಪಾರದರ್ಶಕವಾಗಿ ನಡೆಸುವಂತೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. 

 ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಗರದ ಸರ್ಕಾರಿ ಪದವಿಪೂರ್ವ ಬಾಲಕರ ಕಾಲೇಜ್‌ನಲ್ಲಿ ನಡೆಯಲಿದ್ದು, ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಸಮುದಾಯದ ಗ್ರೂಪ್-ಸಿ ಪರೀಕ್ಷೆಗೆ 131 ಹಾಗೂ ಐಎಎಸ್ ಮತ್ತು ಕೆಎಎಸ್ ಪರೀಕ್ಷೆ 381 ಅಭ್ಯರ್ಥಿಗಳು ನೊಂದಾಯಿಸಿಕೊAಡಿದ್ದು, ನ.8 ರ ಶನಿವಾರ ಬೆಳಿಗ್ಗೆ 10-30ರಿಂದ ಮಧ್ಯಾಹ್ನ 12-30ರವರೆಗೆ ಗ್ರೂಪ್-ಸಿ ಪರೀಕ್ಷೆಗಳು ಹಾಗೂ ನ.9ರ ಭಾನುವಾರ ಬೆಳಿಗ್ಗೆ 10-30ರಿಂದ 12-30ರವರೆಗೆ ಪತ್ರಿಕೆ-1 ಮತ್ತು ಮಧ್ಯಾಹ್ನ 2 ರಿಂದ 3-30ರವರೆಗೆ ಪತ್ರಿಕೆ-2 ಯುಪಿಎಸ್‌ಸಿ ನಾಗರಿಕ ಸೇವೆ, ಕೆಎಎಸ್ ಗೆಜೆಟೆಡ್ ಪ್ರೊಬೇಷನರ್ ಪರೀಕ್ಷೆಗಳು ಜರುಗಲಿವೆ. 

 ವ್ಯವಸ್ತಿತ ಪರೀಕ್ಷೆಗಾಗಿ ತ್ರಿ-ಸದಸ್ಯ ಸಮಿತಿ ನಿಯೋಜಿಸಲಾಗಿದೆ. ಪರೀಕ್ಷಾ ದಿನದಂದು ಸೂಕ್ತ ಪೊಲೀಸ್ ಭದ್ರತೆ, ಪ್ರಾಥಮಿಕ ಚಿಕಿತ್ಸಾ ವ್ಯವಸ್ಥೆ, ಪಶ್ನೆ ಪತ್ರಿಕೆಗಳನ್ನು ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ ಸ್ವೀಕರಿಸಿ, ಭದ್ರಪಡಿಸುವುದು ಹಾಗೂ ನಿಯಮಾನುಸಾರ ಪರೀಕ್ಷಾ ದಿನದಂದು ಜಿಲ್ಲಾ ಖಜಾನೆಯಿಂದ ಪ್ರಶ್ನೆ ಪತ್ರಿಕೆ ರವಾನೆ, ನಿಗದಿತ ಸಮಯಕ್ಕೆ ಪ್ರಶ್ನೆ ಪತ್ರಿಕೆ ತಲುಪಿಸುವುದು, ನಂತರ ಉತ್ತರ ಪತ್ರಿಕೆಗಳನ್ನು ನಿಯಮಾನುಸಾರ ಜಿಲ್ಲಾ ಖಜಾನೆಗೆ ಮರಳಿಸುವುದು, ಪರೀಕ್ಷೆಗೆ ನಿಯೋಜಿತ ಸ್ಥಾನಿತ ಜಾಗೃತ ಅಧಿಕಾರಿಗಳು ಯಾವುದೇ ರೀತಿಯ ಅಕ್ರಮ ನಡೆಯದಂತೆ ಸೂಕ್ತ ಗಮನ ಹರಿಸಬೇಕು. ಮುಖ್ಯ ಅಧೀಕ್ಷಕರು ಮತ್ತು ಉಪ ಅಧೀಕ್ಷಕರು ಪರೀಕ್ಷೆಗೆ ಮುನ್ನ ಪರೀಕ್ಷಾ ಕೇಂದ್ರಗಳಲ್ಲಿ ಕಲ್ಪಿಸಲಾಗಿರುವ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿ ಖಚಿತಪಡಿಸಿಕೊಳ್ಳುವುದು ಸೇರಿದಂತೆ ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಿ ಪರೀಕ್ಷೆಯನ್ನು ಯಶಸ್ವಿಗೊಳಿಸಲು ಸೂಕ್ತ ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು. 

 ಪರೀಕ್ಷೆ ಮುಗಿಯವರೆಗೂ ಯಾವುದೇ ಕಾರಣಕ್ಕೂ ಪರೀಕ್ಷಾ ಕೇಂದ್ರ-ಕೊಠಡಿಗಳಿAದ ಪ್ರಶ್ನೆ ಪತ್ರಿಕೆ ಬಹಿರಂಗವಾಗುವAತಿಲ್ಲ. ಈ ಬಗ್ಗೆ ಜಿಲ್ಲಾ ನೊಡಲ್ ಅಧಿಕಾರಿಗಳು ತೀವ್ರ ನಿಗಾ ಇರಿಸಬೇಕು. ತಪ್ಪಿದ್ದಲ್ಲಿ ನೊಡಲ್ ಅಧಿಕಾರಿಗಳನ್ನೇ ಹೊಣೆಗಾರನ್ನಾಗಿಸಲಾಗುವುದು ಎಂದು ಅವರು ಹೇಳಿದರು. 

 ಸಭೆಯಲ್ಲಿ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಅಧಿಕಾರಿ ಪ್ರಶಾಂತ ಪೂಜಾರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸಂಪತ್ ಗುಣಾರಿ, ಅಲ್ಪಸಂಖ್ಯಾತ ಅಭಿವೃದ್ದಿ ನಿಗಮದ ವ್ಯವಸ್ಥಾಪಕ ಎಂ.ಎ.ಶೇಖ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ತಾಲೂಕಾ ವಿಸ್ತರಣಾಧಿಕಾರಿ ರಾಮಲಿಂಗ ಭೈರೋಡಗಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸೋಮಶೇಖರ ಕೊಲ್ಲೂರು, ಅರಕೇರಿಯ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಕಾಲೇಜ್ ಪ್ರಾಂಶುಪಾಲ ಸಂಗಣ್ಣ ಆಲಗೂರ, ಅಫಜಲಪೂರ ಟಕ್ಕೆ ಮುಸ್ಲಿಂ ವಸತಿ ಶಾಲೆ ಪ್ರಾಂಶುಪಾಲ ಸಿದ್ರಾಮ ಎಂಟೆತ್ತ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ತಾಲೂಕಾ ವಿಸ್ತರಣಾಧಿಕಾರಿ ಇಲಾಯಿ ನಾಗರಾಳ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಮಾದಕ ವಸ್ತು ನಿಷೇಧ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮ


 ವಿಜಯಪುರ : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ ಹಾಗೂ ಬಾಲಿಕೆಯರ ಸರ್ಕಾರಿ ಪದವಿ ಪೂರ್ವ ಕಾಲೇಜ್ ವಿಜಯಪೂರ ಇವರ ಸಂಯುಕ್ತಾಶ್ರಯದಲ್ಲಿ ನ.4ರ ಮಂಗಳವಾರ ನಗರದ ಬಾಲಿಕೆಯರ ಸರ್ಕಾರಿ ಪದವಿಪೂರ್ವ ಕಾಲೇಜ್ ಸಭಾಂಗಣದಲ್ಲಿ ಮಾದಕ ವಸ್ತು ನಿಷೇಧ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮ ಜರುಗಿತು. 

 ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹಿರಿಯ ಸಿವಿಲ್ ನ್ಯಾಯಾಧೀಶ ಅರವಿಂದ ಎಸ್. ಹಾಗರಗಿ ಅವರು ಉದ್ಘಾಟಿಸಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಮಾದಕ ವಸ್ತುಗಳನ್ನು ಚಾಕಲೇಟ, ಪಾನ್ ಮಸಾಲಾ ಮತ್ತು ಇತರೆ ತಿಂಡಿ-ತಿನಿಸುಗಳಲ್ಲಿ ಕಲಬೆರಕೆ ಮಾಡುತ್ತಿರುವ ಕುರಿತು ಆತಂಕ ವ್ಯಕ್ತಪಡಿಸಿದ ಅವರು, ಮಾದಕ ವಸ್ತುಗಳ ನಿಯಂತ್ರಣವು ವ್ಯಸನದ ತಡೆಗಟ್ಟುವಿಕೆ, ಚಿಕಿತ್ಸೆ ಮತ್ತು ತಡೆಗಟ್ಟುವಿಕೆಯ ಹಂತಗಳನ್ನು ಒಳಗೊಂಡಿದೆ. ಇದು ವ್ಯಸನದ ಮೂಲ ಕಾರಣಗಳನ್ನು ಮತ್ತು ಅದರ ಪರಿಣಾಮಗಳನ್ನು ನಿರ್ವಹಿಸಲು ವಿವಿಧ ವಿಧಾನಗಳನ್ನು ಬಳಸುತ್ತದೆ. ಉತ್ತೇಜಕಗಳು ನಮ್ಮ ದೇಹದ ನೈಸರ್ಗಿಕ ಕಾರ್ಯಗಳನ್ನು ಹೆಚ್ಚಿಸುವ ಔಷಧಿಗಳ ವಿಧಗಳಾಗಿವೆ. ಅವು ಜಾಗರೂಕತೆ ಮತ್ತು ಸಂಭ್ರಮದ ಭಾವನೆಯನ್ನು ಉಂಟುಮಾಡುತ್ತವೆ. ಒಬ್ಬ ವ್ಯಕ್ತಿಯು ನಿಗದಿತ ಪ್ರಮಾಣವನ್ನು ಅನುಸರಿಸದೆ ಅದನ್ನು ಸೇವಿಸಿದರೆ, ಅದು ಮಾದಕತೆ ಅಥವಾ ಅವಲಂಬನೆಗೆ ಕಾರಣವಾಗಹುಬುದು ಎಂದು ಅವರು ಹೇಳಿದರು. 

 ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷರಾದ ಡಿ.ಜಿ. ಬಿರಾದಾರ, ಮಾದಕ ವಸ್ತು ನಿಷೇದ ಕುರಿತು ಸ-ವಿಸ್ತಾರವಾಗಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಸಿ.ಚಿ.ನಾಟೀಕಾರ ವಹಿಸಿದ್ದರು. ಜಿಲ್ಲಾ ನ್ಯಾಯವಾದಿಗಳ ಸಂಘದ ಕಾರ್ಯದರ್ಶಿ ಎಸ್.ಎಸ್.ಚೂರಿ ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು ಎಂದು ಪ್ರಕಟಣೆ ತಿಳಿಸಿದೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Monday, November 3, 2025

ಸಿದ್ಧರಾಮೇಶ್ವರ ಸ್ಮರಣೆಗಾಗಿ ಪ್ರತಿವರ್ಷ ಒಂದು ಕೆರೆ ನಿರ್ಮಾಣ : ಸಚಿವ ಶಿವಾನಂದ ಪಾಟೀಲ

 

ಚಿಕ್ಕಬಾಸೂರು : 12ನೇ ಶತಮಾನದ ಸಿದ್ಧರಾಮೇಶ್ವರ ಶರಣ ಸಾಮಾಜಿಕ ಕಾಳಜಿಯ ಪರಿಣಾಮ ಜೀವಜಲ ಸಂರಕ್ಷಣೆಯಿಂದಾಗಿ ನಾಡು ಜೀವಜಲ ಕಂಡಿದೆ. ಹೀಗಾಗಿ ಸಿದ್ಧರಾಮೇಶ್ವರ ಸ್ಮರಣೆಗಾಗಿ ರಾಜ್ಯದಲ್ಲಿ ಪ್ರತಿವರ್ಷ ಒಂದೊಂದು ಕೆರೆ ನಿರ್ಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡುವುದಾಗಿ ಹಾವೇರಿ ಜಿಲ್ಲಾ ಉಸ್ತುವಾರಿ ಹೊಂದಿರುವ ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಹೇಳಿದರು.

ಸೋಮವಾರ ನಗರದ ಚಿಕ್ಕಬಾಸೂರು ಗ್ರಾಮದಲ್ಲಿ ಶ್ರೀಗುರು ಸಿದ್ಧರಾಮೇಶ್ವರ ದೇವಸ್ಥಾನ ನಿರ್ಮಾಣ ಹಾಗೂ ಸರ್ಕಾರಿ ಪದವಿ ಕಾಲೇಜಿನ ಸಭಾಭವನ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಸಿದ್ಧರಾಮೇಶ್ವರ ಶರಣರು ನಾಡಿನಾದ್ಯಂದ ಜಲ ಸಂರಕ್ಷಣೆಗಾಗಿ ಕೆರೆ, ಭಾವಿಗಳನ್ನು ನಿರ್ಮಿಸಿ ಸಮಾಜಕ್ಕೆ ಅನುಕರಣೀಯ ಸೇವಾ ಮಾರ್ಗ ಹಾಕಿ ಕೊಟ್ಟಿದ್ದಾರೆ ಎಂದು ವಿವರಿಸಿದರು.

ಬಸವೇಶ್ವರರ ನೇತೃತ್ವದಲ್ಲಿ ಸಮ ಸಮಾಜ ನಿರ್ಮಾಣಕ್ಕೆ ಜಾತಿ, ಮತ‌, ಪಂಥಗಳಿಲ್ಲದೇ, ಲಿಂಗಭೇದ ಇಲ್ಲದೇ ಸೌಹಾರ್ದಯುತ ಸಮಾಜ ಕಟ್ಟಲಾಗಿತ್ತು. ಸಿದ್ಧರಾಮೇಶ್ವರರ ಹೆಸರಿನಲ್ಲಿ ದೇವಸ್ಥಾನ ನಿರ್ಮಿಸುತ್ತಿರುವ ಚಿಕ್ಕಬಾಸೂರು ಗ್ರಾಮಸ್ಥರು ಶರಣರ ಆಶಯದಂತೆ ಸಾಮರಸ್ಯದ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಸಲಹೆ ನೀಡಿದರು.

ಸಿದ್ಧರಾಮೇಶ್ವರ ಶರಣರ ಸ್ಮರಣೆಗಾಗಿ ಚಿಕ್ಕಬಾಸೂರು ಗ್ರಾಮಸ್ಥರು ದೇವಸ್ಥಾನ ಜೀರ್ಣೋದ್ಧಾರಕ್ಕೆ ಮುಂದಾಗಿದ್ದೀರಿ. ರಾಜ್ಯದಲ್ಲಿ ದೇವಸ್ಥಾನಗಳ ಅಭಿವೃದ್ಧಿಗೆ ಸರ್ಕಾರ ಅನುದಾನ ನೀಡುತ್ತಿದ್ದು, ಜನರು ಕೂಡ ದೇಣಿಗೆ ಸಂಗ್ರಹಿಸಿ ದೇವಸ್ಥಾನ ಕಟ್ಟುತ್ತಿದ್ದಾರೆ ಎಂದರು.

ಈ ಹಿಂದೆ ಹಲವು ಬಾರಿ ಮಳೆ ಇಲ್ಲದೇ ಭೀಕರ ಬರ ಕಂಡಿರುವ  ನಾವು, ಇದೀಗ ಅತಿವೃಷ್ಟಿ ಕಾಡಿದೆ. ಪ್ರಸಕ್ತ ವರ್ಷ ನಿರೀಕ್ಷೆ ಮೀರಿ ಮಳೆಯಾಗಿದ್ದು, ಅಂತರ್ಜಲದ ಮಟ್ಟ ಮೇಲೇರಿದೆ. ರಾಜ್ಯದ ಎಲ್ಲ ಜಲಾಶಯಗಳು ಸಂಪೂರ್ಣ ಭರ್ತಿ ಆಗಿವೆ. ಆದರೆ ರೈತರು ಹಸಿಬರದಿಂದ ಆರ್ಥಿಕ ನಷ್ಟ ಅನುಭವಿಸಿದ್ದಾರೆ. ಈಗಾಗಲೇ ನಮ್ಮ ಸರ್ಕಾರ ಬೆಳೆ ಹಾನಿ ಪರಿಹಾರ ನೀಡುತ್ತಿದ್ದು, ಶೀಘ್ರವೇ ಹಾವೇರಿ ಜಿಲ್ಲೆಯಲ್ಲೂ ಬೆಳೆಹಾನಿ ಪರಿಹಾರ ವಿತರಿಸುವುದಾಗಿ ಹೇಳಿದರು.

ಇದಲ್ಲದೇ ಚಿಕ್ಕಬಾಸೂರು ಗ್ರಾಮದಲ್ಲಿ ಸರಕಾರಿ ಪದವಿ ಕಾಲೇಜಿನಲ್ಲಿ 1.50 ಕೋಟಿ ರೂ. ವೆಚ್ಚದಲ್ಲಿ ಸಭಾಭವನ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಗಿದೆ. ಸ್ಥಳೀಯ ಶಾಸಕರಾದ ಬಸವರಾಜ ಶಿವಣ್ಣವರ ಪರಿಶ್ರಮದಿಂದ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಚಿಕ್ಕಬಾಸೂರು ಗ್ರಾಮದ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯಕ್ಕೆ ಮನವಿ ಮಾಡಿದ್ದು, ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದರು.

ಬ್ಯಾಡಗಿ ಶಾಸಕರಾದ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬಸವರಾಜ ಶಿವಣ್ಣವರ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ಸುರೇಶಗೌಡ ಪಾಟೀಲ, ವಿರೂಪಾಕ್ಷಪ್ಪ ಬಳ್ಳಾರಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಂಜೀವ ನೀರಲಕೇರಿ, ಪಂಚ ಗ್ಯಾರಂಟಿ ಯೋಜನೆ ರಾಜ್ಯ ಉಪಾಧ್ಯಕ್ಷ ಎಸ್.ಆರ್.ಪಾಟೀಲ,  ಸೋಮಶೇಖರ ಬಣಕಾರ, ಜಗದೀಶ್ವರಯ್ಯ ಮಠದ,  ಷಣ್ಮುಖಪ್ಪ ತಲ್ಲೂರು, ಜಯಣ್ಣ ಮಲ್ಲಿಗಾರ, ಸುರೇಶಗೌಡ ಪಾಟೀಲ ದಿಡಗೂರು ಸೇರಿದಂತೆ ಇತರರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು