Saturday, November 22, 2025

ಕನ್ನಡ ಪುಸ್ತಕ ಪ್ರಾಧಿಕಾರ ಮನೆಗೊಂದು ಗ್ರಂಥಾಲಯ ಜಾಗೃತ ಸಮಿತಿ ಸದಸ್ಯರಾಗಿ ಸಾಹಿತಿ, ಪತ್ರಕರ್ತ ಪರಶುರಾಮ ಶಿವಶರಣ ನೇಮಕ

ಈ ದಿವಸ ಕನ್ನಡ ದಿನ ಪತ್ರಿಕೆ ವಿಜಯಪುರ

ವಿಜಯಪುರ: ಕನ್ನಡ ಪುಸ್ತಕ ಪ್ರಾಧಿಕಾರದ ಮನೆ ಮನೆ ಗ್ರಂಥಾಲಯ ಜಾಗೃತಿ ಸಮಿತಿ ಸದಸ್ಯರಾಗಿ ನಗರದ ಸಾಹಿತಿ, ಪತ್ರಕರ್ತ ಪರಶುರಾಮ ಶಿವಶರಣ ಅವರನ್ನು ಕನ್ನಡ ಪುಸ್ತಕ ಪ್ರಾಧಿಕಾರ ಅಧ್ಯಕ್ಷ ಡಾ. ಮಾನಸ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಪರಶುರಾಮ ಶಿವಶರಣ ಅವರ ‘ಜೀವಪೀಠ’ ಕೃತಿ ಬೆಂಗಳೂರಿನ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಅರಳು ಪ್ರಶಸ್ತಿ ಪಡೆದಿದೆ, ರಾಣಿಬಗೀಚ ಕಥಾ ಸಂಕಲನ, ವಾರ ನೋಟ ಅಂಕಲನ ಸಂಕಲನ, ನೀಲಿ ಮಿಂಚು ಕರ್ನಾಟಕ ಸರ್ಕಾರ ಬೆಂಗಳೂರಿನ ಕನ್ನಡ ಪುಸ್ತಕ ಪ್ರಾಧಿಕಾರದಿಂದ ಪ್ರಕಟವಾಗಿದೆ. ಇವರ ಕಾದಂಬರಿ ಜೀವಯಂತ್ರ ಯೋನಿ, ಕಥಾ ಸಂಕಲನ ಹುಳಿ ಮಜ್ಜಿಗೆ, ಕವನ ಸಂಕಲನ ಕಾಡು ಕವಿತೆ ಮುದ್ರಣ ಅಂಚಿನಲ್ಲಿವೆ.

ಅದರಂತೆ ಸಾಮಾಜಿಕ ಕಾಳಜಿಯನ್ನು ಮೈಗೂಡಿಸಿಕೊಂಡು ಬದ್ಧತೆಯಿಂದ, ಜವಾಬ್ದಾರಿ, ನಿರ್ಭೀಡೆಯಿಂದ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ನಿಟ್ಟಿನಲ್ಲಿ ಪತ್ರಕರ್ತರಾಗಿ ಕಳೆದ 20 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ದೀನ ದಲಿತರ, ಶೋಷಿತರ, ನೊಂದವರ, ನಿರ್ಗತಿಕರ, ಅನ್ಯಾಯ ದೌರ್ಜನ್ಯಕ್ಕೆ ಒಳಗಾದವರ ಧ್ವನಿಯಾಗಿ ವಿಶೇಷ ವರದಿಗಳನ್ನು ಮಾಡಿ ಸಮಾಜ ಹಾಗೂ ಸರ್ಕಾರವನ್ನು ಎಚ್ಚರಿಸುತ್ತಿದ್ದಾರೆೆ. ಪರಶುರಾಮ ಅವರ ಸಮಾಜ ಮುಖಿ, ಜನಮುಖಿ ಹಲವು ವಿಶೇಷ ವರದಿಗಳು ವಿಧಾನ ಸೌಧದ ಅಧಿವೇಶನದಲ್ಲಿ ಪ್ರತಿಧ್ವನಿಸಿ ಸರ್ಕಾರದ ಗಮನ ಸೆಳೆದಿದ್ದು, ಹಲವು ಪ್ರಶಸ್ತಿಗಳು ಅರಿಸಿ ಬಂದಿವೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Thursday, November 20, 2025

21-11-2025 EE DIVASA KANNADA DAILY NEWS PAPER

ವಿವಿಧ ಅನಿಷ್ಠ ಪದ್ಧತಿಗೆ ಕಡಿವಾಣ-ಮಕ್ಕಳ ರಕ್ಷಣಾ ಕಾನೂನಿನ ಕುರಿತು ಪ್ರತಿ ತಿಂಗಳಿಗೊಮ್ಮೆ ಕಾವಲು ಸಮಿತಿ ಸಭೆ ನಡೆಸಿ ಸೂಕ್ತ ತಿಳುವಳಿಕೆ ಮೂಡಿಸಲು ಸೂಚನೆ


 ವಿಜಯಪುರ : ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿ, ಪೋಕ್ಸೋ ಕಾಯ್ದೆ, ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ನಿಷೇಧ ಕಾನೂನು ಸೇರಿದಂತೆ ವಿವಿಧ ಅನಿಷ್ಠ ಪದ್ಧತಿಗಳನ್ನು ಹೋಗಲಾಡಿಸಲು, ಜನರಲ್ಲಿ ಸೂಕ್ತ ತಿಳುವಳಿಕೆ ಮೂಡಿಸಲು ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪ್ರತಿ ತಿಂಗಳಿಗೊಮ್ಮೆ ಕಾವಲು ಸಮಿತಿ ಸಭೆ ನಡೆಸುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸೂಚನೆ ನೀಡಿದರು. 

 ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು, ವಿವಿಧ ಅನಿಷ್ಠ ಪದ್ಧತಿಗಳ ನಿರ್ಮೂಲನೆಗಳಾಗಿ ಜಾರಿಗೊಳಿಸಿರುವ ಕಾನೂನಿನ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಗ್ರಾಮ ಮಟ್ಟದಲ್ಲಿ ಸಭೆ ನಡೆಸುವುದು ಅತ್ಯಂತ ಮಹತ್ವದ್ದಾಗಿದ್ದು, ಇಂತಹ ಸಭೆಗಳಲ್ಲಿ ಗ್ರಾಮಸ್ಥರ ಪಾಲ್ಗೊಳ್ಳುವಿಕೆಯಿಂದ ಕಾನೂನು ಅರಿವು ಹೊಂದಿ ಪ್ರಕರಣ ಇಳಿಮುಖವಾಗಲು ಸಾಧ್ಯವಾಗುತ್ತದೆ ಹಾಗೂ ಕಾವಲು ಸಮಿತಿ ಉದ್ದೇಶ ಸಾಫಲ್ಯತೆ ಕಾಣಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು. 

 ಪ್ರತಿ ತಿಂಗಳಿಗೊಮ್ಮೆ ಸಂಬAಧಿಸಿದ ಸ್ಥಳೀಯ ಮಟ್ಟದಲ್ಲಿ ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು, ಶಾಲಾ ಮುಖ್ಯೊಪಾಧ್ಯಾಯರು, ಪೊಲಿಸ್ ಇಲಾಖೆ ಬೀಟ್ ಸಿಬ್ಬಂದಿ, ಗ್ರಾಮ ಪಂಚಾಯತ್ ಸದಸ್ಯರನ್ನೊಳಗೊಂಡು ಸಭೆ ನಡೆಸಿ ಕಾನೂನಿನ್ವಯ ನಿಷೇಧಕ್ಕೊಳಗಾಗಿರುವ ಕಾಯ್ದೆಗಳ ಕುರಿತು ಅರಿವು ಮೂಡಿಸುವುದಲ್ಲದೇ, ಸಭೆ ಜರುಗಿಸಿರುವ ಕುರಿತು ಮಾಹಿತಿ ಒದಗಿಸುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು. 

 ಈ ಹಿಂದೆಯೂ ಹಲವಾರು ಬಾರಿ ಸಭೆ ನಡೆಸಲು ಸೂಚಿಸಲಾಗಿತ್ತಾದ್ದರೂ ಸಭೆ ನಡೆಸದೇ ಇರುವುದರಿಂದ ಆಕ್ರೋಶ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು, ಸರ್ಕಾರಿ ಮಕ್ಕಳ ಸರ್ವಾಂಗೀಣ ಅಭಿವೃದ್ದಿಗಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿ ಅನುಷ್ಠಾನಗೊಳಿಸುತ್ತಿದೆ, ಈ ಯೋಜನೆ ಲಾಭ ಮಕ್ಕಳಿಗೆ ದೊರಕಿಸಲು ಅಧಿಕಾರಿಗಳು ಕ್ರಮ ವಹಿಸಬೇಕು. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು. ಗ್ರಾಮ ಪಂಚಾಯತ್ ಮಟ್ಟದಲ್ಲಿ ಸಭೆ ನಡೆಸದಿದ್ದಲ್ಲಿ ಸಂಬAಧಿಸಿದವರ ಮೇಲೆ ಸೂಕ್ತ ಕ್ರಮ ವಹಿಸಲಾಗುವುದು ಎಂದು ಎಚ್ಚರಿಕೆ ನೀಡಿದ ಅವರು, ಪ್ರತಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಸಭೆ ಜರುಗಿಸಿರುವ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮಾಹಿತಿ ಕ್ರೋಢಿಕರಿಸಬೇಕು ಎಂದು ಅವರು ಹೇಳಿದರು. 

 ಅದರಂತೆ ಜಿಲ್ಲೆಯ ವಿವಿಧ ಸಾರ್ವಜನಿಕ ಸ್ಥಳಗಳು, ಗ್ರಾಮ ಪಂಚಾಯತ್, ಸ್ಥಳೀಯ ಸಂಸ್ಥೆ ಹಾಗೂ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಜಿಂಗಲ್ಸ್ ಮೂಲಕ ಬಾಲ್ಯ ವಿವಾಹ ನಿಷೇಧ ಕುರಿತು ಜಾಗೃತಿ ಮೂಡಿಸಲು ಕ್ರಮ ವಹಿಸಬೇಕು. ಸಾಮಾಜಿಕ ಪಿಡುಗು ತೊಡೆದು ಹಾಕಲು ಸಂಬAಧಿಸಿದ ಇಲಾಖೆಗಳು ಹೆಚ್ಚೆಚ್ಚು ಅರಿವು ಮೂಡಿಸಲು ಕ್ರಮ ವಹಿಸಬೇಕು. ಅತ್ಯಂತ ಕಾಳಜಿಪೂರ್ವಕವಾಗಿ ಜವಾಬ್ದಾರಿಯುತವಾಗಿ ಈ ಅನಿಷ್ಠ ಪದ್ಧತಿಗಳ ವಿರುದ್ಧ ಜನ ಜಾಗೃತಿ ಮೂಡಿಸುವಲ್ಲಿ ಎಲ್ಲ ಇಲಾಖೆಗಳ ಸಹಯೋಗದೊಂದಿಗೆ ಸಮನ್ವಯ ಸಾಧಿಸಿಕೊಂಡು ಇಂತಹ ಅನಿಷ್ಠ ಪದ್ಧತಿಗಳು ಜರುಗದಂತೆ ಎಚ್ಚರಿಕೆ ವಹಿಸುವಂತೆ ಅವರು ಸೂಚನೆ ನೀಡಿದರು. 

 ಬಾಣಂತಿ ಮತ್ತು ಗರ್ಭೀಣಿ ಮಹಿಳೆಯರಿಗಾಗಿರುವ ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯನ್ನು ಜಿಲ್ಲೆಯಲ್ಲಿ ಅನುಷ್ಠಾನಗೊಂಡಿದ್ದು, ಈ ಯೋಜನೆಯಡಿ ಮೊದಲನೆ ಹರಿಗೆಗೆ 5 ಸಾವಿರ ರೂ. ನೇರ ನಗದು ವರ್ಗಾವಣೆ ಮೂಲಕ ಎರಡು ಕಂತುಗಳಲ್ಲಿ ಪಾವತಿಸಲಾಗುತ್ತದೆ. ದಿನಾಂಕ : 01-04-2022ರಂದು ಅಥವಾ ನಂತರ ಜನನವಾದ ಎರಡನೇ ಮಗು ಹೆಣ್ಣು ಮಗು ಫಲಾನುಭವಿಗೆ ಒಂದೇ ಕಂತಿನಲ್ಲಿ 6 ಸಾವಿರ ರೂ.ಗಳನ್ನು ನೇರ ನಗದು ವರ್ಗಾವಣೆ ಮೂಲಕ ಪಾವತಿಸಲಾಗುತ್ತದೆ. ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯನ್ನು ಗುರಿ ನಿಗದಿಪಡಿಸಿಕೊಂಡು ನೂರರಕ್ಕೆ ನೂರು ಪ್ರಗತಿ ಸಾಧಿಸಬೇಕು. ಎಲ್ಲ ಇಲಾಖೆಗಳು ಮಕ್ಕಳ ಕ್ಷೇತ್ರದದಲ್ಲಿ ಸರ್ಕಾರ ಜಾರಿಗೊಳಿಸಿರುವ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ ಸೌಲಭ್ಯ ಒದಗಿಸಲು ಶ್ರಮಿಸಬೇಕು ಎಂದು ಅವರು ಹೇಳಿದರು. 

 ಶಕ್ತಿ ಸದನಕ್ಕೆ ನಿರಂತರ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಶಕ್ತಿ ಸದನದಲ್ಲಿ ಪುನಶ್ಚೇತನ ಹೊಂದಿದ ಮಹಿಳೆಯರಿಗೆ ಕೌಶಲ್ಯಾಧಾರಿತ ತರಬೇತಿ ಒದಗಿಸುವ ಮೂಲಕ ಅವರ ಜೀವನಾಧಾರಕ್ಕೆ ಕ್ರಮ ವಹಿಸಬೇಕು ಅವಶ್ಯವಿದ್ದಲ್ಲಿ ಕಾನೂನು ನೆರವು ಒದಗಿಸಲು ಕ್ರಮ ವಹಿಸಬೇಕು ಎಂದು ಅವರು ಸೂಚನೆ ನೀಡಿದರು. 

 ರಾಷ್ಟಿçÃಯ ಪೋಷಣ ಅಭಿಯಾನವನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಜಾರಿಗೊಳಿಸಬೇಕು. ಮಕ್ಕಳಿಗೆ ಲಾಭ ತಲುಪಿಸುವ ಮೂಲಕ ಯೋಜನೆ ಯಶಸ್ವಿಗೊಳಿಸಬೇಕು. ಮಹಿಳಾ ಮತ್ತು ಮಕ್ಕಳ ಇಲಾಕೆ ಮಹತ್ತರ ಜವಾಬ್ದಾರಿಯಾಗಿದೆ. ಜಿಲ್ಲೆಯಲ್ಲಿ ಅಪೌಷ್ಠಿಕತೆಯಿಂದ ಹಾಗೂ ವಿವಿಧ ಆರೋಗ್ಯ ಸಮಸ್ಯೆಯಿಂದ ಅಪೌಷ್ಠಿಠಿಕತೆಯಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಲು ಮನೆ-ಮನೆಗೆ ಭೇಟಿ ನೀಡಿ. ಪರಿಶೀಲನೆ ನಡೆಸಬೇಕು. ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳಿದ್ದಲ್ಲಿ, ಅಂತಹ ಮಕ್ಕಳಿಗೆ ಎಲ್ಲ ಅಗತ್ಯ ಸೌಲಭ್ಯ ಒದಗಿಸಬೇಕು. ಜಿಲ್ಲೆಯಲ್ಲಿ ತೀವ್ರ ನಿಗಾ ವಹಿಸುವ ಮೂಲಕ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆಯನ್ನು ಶೂನ್ಯಕ್ಕೆ ತರಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.

 ಅನಿಮಿಯಾದಿಂದ ಬಳಲುವ ಗರ್ಭೀಣಿ ಮಹಿಳೆಯಿಂದ ಮಕ್ಕಳಲ್ಲಿ ಆರೋಗ್ಯ ಸಮಸ್ಯೆಗಳು ಎದುರಾಗಲಿದ್ದು, ಈ ಕುರಿತು ಜನರಲ್ಲಿ ಸೂಕ್ತ ತಿಳುವಳಿಕೆ ಮೂಡಿಸಬೇಕು. ಈ ಕುರಿತು ಜನರಲ್ಲಿರುವ ಅನುಮಾನವನ್ನು ದೂರ ಮಾಡಿ ಅಗತ್ಯ ಆರೋಗ್ಯ ಸಲಹೆ ನೀಡುವಂತೆ ಅವರು ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

 ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಮಾತನಾಡಿ, ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿ ಗುಣಮಟ್ಟದ ಆಹಾರ ಮತ್ತು ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು. ಒಂದು ವೇಳೆ ಅಂಗನವಾಡಿ ಕೇಂದ್ರಗಳು ವಿವಿಧ ಕಾರಣಗಳಿಂದ ಸ್ಥಳಾಂತರಗೊAಡಿದ್ದಲ್ಲಿ, ಈ ಕುರಿತು ಮಾಹಿತಿಯನ್ನು ಸ್ಥಳೀಯ ಸಾರ್ವಜನಿಕರಿಗೆ ಒದಗಿಸಬೇಕು. ಮಕ್ಕಳ ಸರ್ವಾಗೀಣ ಅಭಿವೃದ್ದಿ ಸರ್ಕಾರ ಹಲವು ಯೋಜನೆ ಸೌಲಭ್ಯಗಳನ್ನು ಒದಗಿಸಿದ್ದು, ಇದರ ಸದುಪಯೋಗ ಮಕ್ಕಳಿಗೆ ದೊರಕಿಸಲು ಅಧಿಕಾರಿಗಳು ಸೇವಾಮನೋಭಾವದಿಂದ ಕಾರ್ಯನಿರ್ವಹಿಸಿ ಸೌಲಭ್ಯ ಒದಗಿಸಲು ಕ್ರಮ ವಹಿಸಬೇಕು ಎಂದು ಅವರು ಹೇಳಿದರು. 

ಪ್ರಗತಿ ಪರಿಶೀಲನಾ ಸಭೆ : ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರ ಅಧ್ಯಕ್ಷತೆಯಲ್ಲಿ ಬುಧವಾರ ಜಿಲ್ಲಾ ಮಕ್ಕಳ ಕಲ್ಯಾಣ ಹಾಗೂ ರಕ್ಷಣಾ ಸಮಿತಿ ಮತ್ತು ಮಕ್ಕಳ ಕಲ್ಯಾಣ ಸಮಿತಿ ಪ್ರಗತಿ ಪರಿಶೀಲನಾ ಸಭೆ ಜರುಗಿತು.

 ಸಭೆಯಲ್ಲಿ ಬಾಲ ನ್ಯಾಯ ಕಾಯ್ದೆಯಡಿ ನೊಂದಣಿಯಾದ 11 ಕೇಂದ್ರಗಳು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಈ ಕೇಂದ್ರಗಳಲ್ಲಿ ಎಲ್ಲ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿರುವ ಕುರಿತು ನೋಡಲ್ ಅಧಿಕಾರಿಗಳನ್ನು ನೇಮಿಸಬೇಕು. ಶಿಶು ಅಭಿವೃದ್ದಿ ಯೋಜನಾಧಿಕಾರಿಗಳನ್ನು ನಿಯೋಜಿಸಿ ಮೂಲಭೂತ ಸೌಕರ್ಯಗಳು ಕಲ್ಪಿಸಿರುವ ಬಗ್ಗೆ ಪರಿಶೀಲನೆ ನಡೆಸಿ ವರದಿ ಸಲ್ಲಿಸಬೇಕು. ಕೇಂದ್ರಗಳಲ್ಲಿ ಸುರಕ್ಷತೆ ಕುರಿತು ಸಿಸಿಟಿವಿ ಅಳವಡಿಸಿಕೊಂಡಿರುವ ಕುರಿತು ಪರಿಶೀಲನೆ ನಡೆಸಬೇಕು. ದುರಸ್ತಿಗೊಳಗಾದಲ್ಲಿ ಅಂತಹ ಸಿಸಿಟಿ ಟಿವಿಗಳನ್ನು ದುರಸ್ತಿಗೊಳಿಸಲು ಕ್ರಮ ವಹಿಸಬೇಕು. ಬಾಲಮಂದಿರ ಮತ್ತು ಅಂಗನವಾಡಿ ಕೇಂದ್ರಗಳಿಗೆ ಅಗತ್ಯ ಔಷಧ ಪೂರೈಸಬೇಕು. ನಿರಂತರÀವಾಗಿ ಮಕ್ಕಳ ಆರೋಗ್ಯ ತಪಾಸಣೆ ನಡೆಸುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು. 

 ಮಕ್ಕಳ ಸಹಾಯವಾಣಿ ಸಂಖ್ಯೆ 1098/112 ಗೆ ಏಪ್ರಿಲ್‌ದಿಂದ ಅಕ್ಟೋಬರ್ ವರೆಗೆ ಸ್ವೀಕರಿಸಲಾದ ಕರೆಗಳ ಮಾಹಿತಿಯನ್ನು ಸಭೆಗೆ ನೀಡಲಾಯಿತು. 

 ಸಭೆಯಲ್ಲಿ ಹಿರಿಯ ಸಿವ್ಹಿಲ್ ನ್ಯಾಯಾಧೀಶರಾದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಹಾಗರಗಿ, ಡಿವೈಎಸ್‌ಪಿ ಬಸವರಾಜ ಯಲಿಗಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಕೆ.ಕೆ.ಚವ್ಹಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಅಧಿಕಾರಿ ದೀಪಾ ಕಾಳೆ, ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ದೀಪಾಕ್ಷಿ ಜಾನಕಿ, ಪಾಲಿಕೆ ಉಪ ಆಯುಕ್ತ ಮಹಾವೀರ ಬೋರಣ್ಣವರ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಅಧಿಕಾರಿ ಪ್ರಶಾಂತ ಪೂಜಾರ, ಕಾರ್ಮಿಕ ಇಲಾಖೆ ಅಧಿಕಾರಿ ಉಮಾಶ್ರೀ ಕೋಳಿ ಸೇರಿದಂತೆ ಜಿಲ್ಲೆಯ ವಿವಿಧ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ವಿವಿಧ ಸಂಘ-ಸAಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Tuesday, November 4, 2025

ಮಾಧ್ಯಮ ಮಿತ್ರರು ತಮ್ಮ ಅಮೂಲ್ಯವಾದ ಮತ ನನಗೆ ನೀಡಿ : ಅಶೋಕ ಯಡಳ್ಳಿ

ಸಿಂದಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಕಾನಿಪ ಚುನಾವಣೆ ಪ್ರಚಾರ ಸಭೆಯಲ್ಲಿ ಜಿಲ್ಲಾಧ್ಯಕ್ಷ ಸ್ಥಾನದ ಅಭ್ಯರ್ಥಿ ಅಶೋಕ ಯಡಳ್ಳಿ ಮತಯಾಚಿಸಿದರು.

ಸಿಂದಗಿ: ಗ್ರಾಮೀಣ ಭಾಗದ ಪತ್ರಕರ್ತರಿಗಾಗಿ ತಾಲೂಕು ಕೇಂದ್ರದಲ್ಲಿ ಪತ್ರಿಕಾ ಭವನಕ್ಕಾಗಿ ನಿವೇಶನ, ಆರೋಗ್ಯ ವಿಮೆ, ಮಕ್ಕಳ ಶಿಕ್ಷಣಕ್ಕಾಗಿ ಸರಕಾರದ ಸೌಕರ್ಯ ಸೇರಿದಂತೆ ಸಂಘದ ವಿವಿಧ ರೀತಿಯ ಅನುದಾನದಲ್ಲಿ ಸಹಾಯ ಸೌಲಭ್ಯ ಒದಗಿಸಲು ನಮ್ಮ ತಂಡ ಪ್ರಾಮಾಣಿಕ ಪ್ರಯತ್ನ ಮಾಡುತ್ತದೆ ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ ಜಿಲ್ಲಾಧ್ಯಕ್ಷ ಸ್ಥಾನದ ಅಭ್ಯರ್ಥಿ ಅಶೋಕ ಯಡಳ್ಳಿ ಭರವಸೆ ನೀಡಿದರು.

ಸಿಂದಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಕಾನಿಪ ಚುನಾವಣೆ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮತಯಾಚಿಸಿ ಅವರು ಮಾತನಾಡಿದರು.

ಒತ್ತಡದ ಬದುಕಿನ ಮದ್ಯದಲ್ಲಿಯೂ ಪತ್ರಕರ್ತರು ಸಮಾಜದ ಅಂಕುಡೊಂಕುಗಳನ್ನು ಜನತೆಗೆ ತಿಳಿಸುತ್ತಾ ಸಮಾಜದ ಏಳ್ಗೆಗೆ ಶ್ರಮಿಸುವ ನಮ್ಮ ಪತ್ರಕರ್ತರಿಗೆ ಹಾಗೂ ಅವರ ಕುಟುಂಬಗಳಿಗೆ ಸಾಮಾಜಿಕ ಭದ್ರತೆ ಅತ್ಯವಶ್ಯವಾಗಿದೆ. ಜಿಲ್ಲೆಯ ಹಿರಿಯ ಪತ್ರಕರ್ತರ ಮಾರ್ಗದರ್ಶನ, ಸಹಕಾರ ಮತ್ತು ಬೆಂಬಲದಿಂದ 24 ಅಭ್ಯರ್ಥಿಗಳು ವಿವಿಧ ಹುದ್ದೆಗಳಿಗೆ ಅವಿರೋಧವಾಗಿ ಆಯ್ಕೆಯಾಗಿದ್ದು, ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಮಾತ್ರ ನ.09 ರಂದು ಚುನಾವಣೆ ನಡೆಯಲಿದೆ. ಮಾಧ್ಯಮ ಮಿತ್ರರೆಲ್ಲರೂ ತಮ್ಮ ಅಮೂಲ್ಯವಾದ ಮತವನ್ನು ನೀಡಿ ಬೆಂಬಲಿಸಬೇಕು ಎಂದರು.

ಈ ಸಂದರ್ಭ ಇಂದುಶೇಖ ಮಣೂರ, ರಾಜು ಕೊಂಡಗೂಳಿ, ಶರಣು ಮಸಳಿ, ಮೊಹ್ಮದಸಮೀರ ಇನಾಮದಾರ, ಪ್ರಕಾಶ ಬೆಣ್ಣೂರ, ಪ್ರಭು ಕುಮಟಗಿ, ಬಾಬು ತಡಲಗಿ, ಮೋಹನ ಕುಲಕರ್ಣಿ, ಗುರುರಾಜ ಗದ್ದನಕೇರಿ, ದೇವೆಂದ್ರ ಹೆಳವರ, ಶಶಿಕಾಂತ ಮೇಂಡೆಗಾರ, ರಾಹುಲ ಆಪ್ಟೆ, ಕಾನಿಪ ತಾಲೂಕಾಧ್ಯಕ್ಷ ಆನಂದ ಶಾಬಾದಿ, ಉಪಾಧ್ಯಕ್ಷ ಮಲ್ಲಿಕಾರ್ಜುನ ಅಲ್ಲಾಪುರ, ಎಂ.ಎ.ಖತೀಬ, ಸಲೀಂಪಟೇಲ್ ಮರ್ತೂರ, ನವೀನ ಶೆಳ್ಳಗಿ, ಶಿವಾನಂದ ಆಲಮೇಲ, ಗುಂಡು ಕುಲಕರ್ಣಿ, ಸಿದ್ದು ಕಡಗಂಚಿ, ವಿಜಯಕುಮಾರ ಪತ್ತಾರ, ಅಂಬರೀಷ ಸುಣಗಾರ, ಸಿದ್ದಲಿಂಗ ಕಿಣಗಿ, ರಮೇಶ ಪೂಜಾರಿ ಸೇರಿದಂತೆ ಅನೇಕರು ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಗುಮ್ಮಟ ನಗರಿಯಲ್ಲಿ ಹೆಚ್ಚಿದ ಆತಂಕ ಅಧಿಕಾರಿಗಳು ಮಾತ್ರ ನಿರಾತಂಕ ಮುಂಜಾಗೃತೆ-ಜನಜಾಗೃತೆಗಿಲ್ಲ ಕ್ರಮ ಪದೇ ಪದೇ ಭೂಕಂಪನ-ಬೆಚ್ಚಿಬಿದ್ದ ಜನ


ವಿಜಯಪುರ: ಕಳೆದೊಂದು ವರ್ಷದಿಂದ ಪದೇ ಪದೇ ಭೂಮಿ ಕಂಪಿಸುತ್ತಲೇ ಇದ್ದ, ಜನರ ಆತಂಕ ಹೆಚ್ಚಾಗಿದ್ದರೂ ಅಧಿಕಾರಿಗಳು ಮಾತ್ರ ನಿರಾತಂಕವಾಗಿದ್ದಾರೆ.

ಆಗಾಗ ಕೇಳಿ ಬರುತ್ತಿರುವ ಜೋರಾದ ಸದ್ದು ಜನರ ಎದೆ ನಡುಗಿಸುತ್ತಿದೆ. ಆದರೆ, ಅಧಿಕಾರಿಗಳು ಇದೊಂದು ಸಾಮಾನ್ಯ ಪ್ರಕ್ರಿಯೆ ಎನ್ನುತ್ತಿದ್ದಾರೆ. ಕೆಲವೊಮ್ಮ ದೊಡ್ಡ ಪ್ರಮಾಣದಲ್ಲಿ ಭೂಮಿ ಕಂಪಿಸಿದರೂ ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರ ದಾಖಲಾಗಿಲ್ಲ ಎನ್ನುತ್ತಾರೆ. ಹೀಗಾಗಿ ಜನರ ಆತಂಕ ಹೆಚ್ಚಾಗುತ್ತಿದ್ದು, ಜೀವ ಅಂಗೈಯಲ್ಲಿ ಹಿಡಿದು ಜೀವಿಸುವಂತಾಗಿದೆ. ಸ್ವಲ್ಪ ನೆಲ ಅದುರಿದರೂ ರಾತ್ರಿಯಿಡೀ ನಿದ್ರೆಗೆಡುವ ಸ್ಥಿತಿ ನಿರ್ಮಾಣವಾಗಿದೆ. ಯಾವಾಗ ಏನಾಗುತ್ತದೆಯೋ ಎಂಬ ಭಯ ಕಾಡಲಾರಂಭಿಸಿದೆ. 

ಕಳೆದ ಎರಡು ವಾರದಲ್ಲಿ ಹಲವು ಬಾರಿ ಹಲವರಿಗೆ ಭೂಕಂಪನದ ಅನುಭವ ಹಾಗೂ ಭಾರಿ ಶಬ್ದದಿಂದ ನಗರದ ಕೆಲವೊಂದು ಬಡಾವಣೆಗಳಲ್ಲಿ ಜನರ ಭಯಭೀತರಾಗಿ ಮನೆಯಿಂದ ಹೊರ ಬಂದಿದ್ದಾರೆ. ಇದು ಭೂಕಂಪನ ಅಥವಾ ಯಾವುದೇ ಬೇರೆ ಕಾರಣಗಳಿಗೆ ಇಂತಹ ಘಟನೆಗಳಾಗುತ್ತಿವೆಯೇ ಎಂಬುದು ಜನರಿಗೆ ತಿಳಿಯದಾಗಿದೆ. ಪರಸ್ಪರ ತಮ್ಮ ಸ್ನೇಹಿತರಿಗೆ- ನೆರೆ ಹೊರೆಯವರಿಗೆ ಫೋನ್ ಮಾಡಿ ನಿಮಗೆ ಭೂಕಂಪನದ ಅನುಭವದ ಕುರಿತು ವಿಚಾರಣೆ ಮಾಡಿ, ಗೊಂದಲಕ್ಕೀಡಾಗಿದ್ದಾರೆ. 

ಜನರಲ್ಲಿನ ಆತಂಕವನ್ನು ದೂರ ಮಾಡಲು ಸಂಬಂಧಿಸಿದ ಅಧಿಕಾರಿಗಳು, ಪರೀಕ್ಷೆ ನಡೆಸಿ ನಿಖರ ಕಾರಣ ಕಂಡು ಹಿಡಿಯಬೇಕಿದೆ. ವಿಜ್ಞಾನಿಗಳಿಂದ ಅಧ್ಯಯನ ನಡೆಯಬೇಕಿದೆ. ಯಾವುದೇ ದೊಡ್ಡ ಅನಾಹುತ ಸಂಭವಿಸುವ ಮೊದಲೇ ಅಧಿಕಾರಿಗಳು ಈ ವಿಷಯದ ಗಂಭೀರತೆಯನ್ನು ಅರಿತುಕೊಂಡು ಇಂತಹ ಘಟನೆಗಳು ಜರುಗಲು ಇರುವ ವೈಜ್ಞಾನಿಕ ಕಾರಣವನ್ನು ಕಂಡು ಹಿಡಿದು ಜನರಿಗೆ ಈ ಕುರಿತು ತಿಳುವಳಿಕೆ ಮೂಡಿಸಿದ್ದಲ್ಲಿ ಮಾತ್ರ ಜನರು ನಿಟ್ಟುಸಿರು ಬಿಡಲು ಸಾಧ್ಯವಾಗುತ್ತದೆ. ಇಲ್ಲಿ ನಡೆಯುತ್ತಿರುವ ಶಬ್ದ-ಕಂಪನ ಭೂಕಂಪನವೇ  ಆಗಿದ್ದಲ್ಲಿ ಸೂಕ್ತ ಎಚ್ಚರಿಕೆ ಜಿಲ್ಲಾಡಳಿತದಿಂದ ನೀಡಿ, ಯಾವುದೇ ಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸುವುದು ಸೂಕ್ತವಾಗಿದೆ.

ಭೂಕಂಪನ ಸಂಭವಿಸಿರುವ ಕುರಿತು ಜಿಲ್ಲೆಯಲ್ಲಿ  ಸ್ಥಾಪಿಸಲಾದ ಭೂಕಂಪನ ಮಾಪನ ಕೇಂದ್ರದಲ್ಲಿ ದಾಖಲಾಗಿಲ್ಲ. ಪದೇ ಪದೇ ಕಂಪನ ಹಾಗೂ ಭಾರಿ ಶಬ್ದವಾಗುವುದು ಇದು ಭೂಕಂಪನವಲ್ಲ, ಇದೊಂದು ಭೂಮಿಯೊಳಗೆ ಕ್ರಿಯೆಯಾಗಿದೆ. ಇದರಿಂದ ಭೂಮಿಯ ಮೇಲ್ಮೈ ಭಾಗದಲ್ಲಿ ಯಾವುದೇ ಹಾನಿವುಂಟು ಮಾಡುವುದಿಲ್ಲ ಎಂದು ಅಧಿಕಾರಿಗಳ ಪ್ರಾಥಮಿಕ ವರದಿಯಿಂದ ತಿಳಿದು ಬಂದಿದೆ.

ವರದಿ: A.I.Bagewadi

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

05-11-2025 EE DIVASA KANNADA DAILY NEWS PAPER

ಐಎಎಸ್-ಕೆಎಎಸ್ ಹಾಗೂ ಗ್ರೂಪ್ ಸಿ ಪರೀಕ್ಷಾ ಪೂರ್ವ ತರಬೇತಿಗೆ ಸಾಮಾನ್ಯ ಪರೀಕ್ಷೆ ವ್ಯವಸ್ಥಿತವಾಗಿ ಪರೀಕ್ಷೆ ನಡೆಸುವಂತೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ

 ವಿಜಯಪುರ  : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನಡೆಸುವ ಪ್ರಸಕ್ತ 2025-26ನೇ ಸಾಲಿನ ಯುಪಿಎಸ್‌ಸಿ ನಾಗರೀಕ ಸೇವೆ, ಕೆಎಎಸ್ ಗೆಜೆಟೆಡ್ ಪ್ರೊಬೆಷನರ್ ಮತ್ತು ಗ್ರೂಪ್-ಸಿ ಪರೀಕ್ಷಾ ಪೂರ್ವ ತರಬೇತಿಗೆ ಆಯ್ಕೆ ಮಾಡಲು ವಿಜಯಪುರ ನಗರದಲ್ಲಿ ನ.8 ಹಾಗೂ 9 ರಂದು ಸಾಮಾನ್ಯ ಪ್ರವೇಶ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಯನ್ನು ವ್ಯವಸ್ಥಿತ ಹಾಗೂ ಪಾರದರ್ಶಕವಾಗಿ ನಡೆಸುವಂತೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. 

 ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಗರದ ಸರ್ಕಾರಿ ಪದವಿಪೂರ್ವ ಬಾಲಕರ ಕಾಲೇಜ್‌ನಲ್ಲಿ ನಡೆಯಲಿದ್ದು, ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಸಮುದಾಯದ ಗ್ರೂಪ್-ಸಿ ಪರೀಕ್ಷೆಗೆ 131 ಹಾಗೂ ಐಎಎಸ್ ಮತ್ತು ಕೆಎಎಸ್ ಪರೀಕ್ಷೆ 381 ಅಭ್ಯರ್ಥಿಗಳು ನೊಂದಾಯಿಸಿಕೊAಡಿದ್ದು, ನ.8 ರ ಶನಿವಾರ ಬೆಳಿಗ್ಗೆ 10-30ರಿಂದ ಮಧ್ಯಾಹ್ನ 12-30ರವರೆಗೆ ಗ್ರೂಪ್-ಸಿ ಪರೀಕ್ಷೆಗಳು ಹಾಗೂ ನ.9ರ ಭಾನುವಾರ ಬೆಳಿಗ್ಗೆ 10-30ರಿಂದ 12-30ರವರೆಗೆ ಪತ್ರಿಕೆ-1 ಮತ್ತು ಮಧ್ಯಾಹ್ನ 2 ರಿಂದ 3-30ರವರೆಗೆ ಪತ್ರಿಕೆ-2 ಯುಪಿಎಸ್‌ಸಿ ನಾಗರಿಕ ಸೇವೆ, ಕೆಎಎಸ್ ಗೆಜೆಟೆಡ್ ಪ್ರೊಬೇಷನರ್ ಪರೀಕ್ಷೆಗಳು ಜರುಗಲಿವೆ. 

 ವ್ಯವಸ್ತಿತ ಪರೀಕ್ಷೆಗಾಗಿ ತ್ರಿ-ಸದಸ್ಯ ಸಮಿತಿ ನಿಯೋಜಿಸಲಾಗಿದೆ. ಪರೀಕ್ಷಾ ದಿನದಂದು ಸೂಕ್ತ ಪೊಲೀಸ್ ಭದ್ರತೆ, ಪ್ರಾಥಮಿಕ ಚಿಕಿತ್ಸಾ ವ್ಯವಸ್ಥೆ, ಪಶ್ನೆ ಪತ್ರಿಕೆಗಳನ್ನು ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ ಸ್ವೀಕರಿಸಿ, ಭದ್ರಪಡಿಸುವುದು ಹಾಗೂ ನಿಯಮಾನುಸಾರ ಪರೀಕ್ಷಾ ದಿನದಂದು ಜಿಲ್ಲಾ ಖಜಾನೆಯಿಂದ ಪ್ರಶ್ನೆ ಪತ್ರಿಕೆ ರವಾನೆ, ನಿಗದಿತ ಸಮಯಕ್ಕೆ ಪ್ರಶ್ನೆ ಪತ್ರಿಕೆ ತಲುಪಿಸುವುದು, ನಂತರ ಉತ್ತರ ಪತ್ರಿಕೆಗಳನ್ನು ನಿಯಮಾನುಸಾರ ಜಿಲ್ಲಾ ಖಜಾನೆಗೆ ಮರಳಿಸುವುದು, ಪರೀಕ್ಷೆಗೆ ನಿಯೋಜಿತ ಸ್ಥಾನಿತ ಜಾಗೃತ ಅಧಿಕಾರಿಗಳು ಯಾವುದೇ ರೀತಿಯ ಅಕ್ರಮ ನಡೆಯದಂತೆ ಸೂಕ್ತ ಗಮನ ಹರಿಸಬೇಕು. ಮುಖ್ಯ ಅಧೀಕ್ಷಕರು ಮತ್ತು ಉಪ ಅಧೀಕ್ಷಕರು ಪರೀಕ್ಷೆಗೆ ಮುನ್ನ ಪರೀಕ್ಷಾ ಕೇಂದ್ರಗಳಲ್ಲಿ ಕಲ್ಪಿಸಲಾಗಿರುವ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿ ಖಚಿತಪಡಿಸಿಕೊಳ್ಳುವುದು ಸೇರಿದಂತೆ ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಿ ಪರೀಕ್ಷೆಯನ್ನು ಯಶಸ್ವಿಗೊಳಿಸಲು ಸೂಕ್ತ ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು. 

 ಪರೀಕ್ಷೆ ಮುಗಿಯವರೆಗೂ ಯಾವುದೇ ಕಾರಣಕ್ಕೂ ಪರೀಕ್ಷಾ ಕೇಂದ್ರ-ಕೊಠಡಿಗಳಿAದ ಪ್ರಶ್ನೆ ಪತ್ರಿಕೆ ಬಹಿರಂಗವಾಗುವAತಿಲ್ಲ. ಈ ಬಗ್ಗೆ ಜಿಲ್ಲಾ ನೊಡಲ್ ಅಧಿಕಾರಿಗಳು ತೀವ್ರ ನಿಗಾ ಇರಿಸಬೇಕು. ತಪ್ಪಿದ್ದಲ್ಲಿ ನೊಡಲ್ ಅಧಿಕಾರಿಗಳನ್ನೇ ಹೊಣೆಗಾರನ್ನಾಗಿಸಲಾಗುವುದು ಎಂದು ಅವರು ಹೇಳಿದರು. 

 ಸಭೆಯಲ್ಲಿ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಅಧಿಕಾರಿ ಪ್ರಶಾಂತ ಪೂಜಾರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸಂಪತ್ ಗುಣಾರಿ, ಅಲ್ಪಸಂಖ್ಯಾತ ಅಭಿವೃದ್ದಿ ನಿಗಮದ ವ್ಯವಸ್ಥಾಪಕ ಎಂ.ಎ.ಶೇಖ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ತಾಲೂಕಾ ವಿಸ್ತರಣಾಧಿಕಾರಿ ರಾಮಲಿಂಗ ಭೈರೋಡಗಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸೋಮಶೇಖರ ಕೊಲ್ಲೂರು, ಅರಕೇರಿಯ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಕಾಲೇಜ್ ಪ್ರಾಂಶುಪಾಲ ಸಂಗಣ್ಣ ಆಲಗೂರ, ಅಫಜಲಪೂರ ಟಕ್ಕೆ ಮುಸ್ಲಿಂ ವಸತಿ ಶಾಲೆ ಪ್ರಾಂಶುಪಾಲ ಸಿದ್ರಾಮ ಎಂಟೆತ್ತ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ತಾಲೂಕಾ ವಿಸ್ತರಣಾಧಿಕಾರಿ ಇಲಾಯಿ ನಾಗರಾಳ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಮಾದಕ ವಸ್ತು ನಿಷೇಧ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮ


 ವಿಜಯಪುರ : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ ಹಾಗೂ ಬಾಲಿಕೆಯರ ಸರ್ಕಾರಿ ಪದವಿ ಪೂರ್ವ ಕಾಲೇಜ್ ವಿಜಯಪೂರ ಇವರ ಸಂಯುಕ್ತಾಶ್ರಯದಲ್ಲಿ ನ.4ರ ಮಂಗಳವಾರ ನಗರದ ಬಾಲಿಕೆಯರ ಸರ್ಕಾರಿ ಪದವಿಪೂರ್ವ ಕಾಲೇಜ್ ಸಭಾಂಗಣದಲ್ಲಿ ಮಾದಕ ವಸ್ತು ನಿಷೇಧ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮ ಜರುಗಿತು. 

 ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹಿರಿಯ ಸಿವಿಲ್ ನ್ಯಾಯಾಧೀಶ ಅರವಿಂದ ಎಸ್. ಹಾಗರಗಿ ಅವರು ಉದ್ಘಾಟಿಸಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಮಾದಕ ವಸ್ತುಗಳನ್ನು ಚಾಕಲೇಟ, ಪಾನ್ ಮಸಾಲಾ ಮತ್ತು ಇತರೆ ತಿಂಡಿ-ತಿನಿಸುಗಳಲ್ಲಿ ಕಲಬೆರಕೆ ಮಾಡುತ್ತಿರುವ ಕುರಿತು ಆತಂಕ ವ್ಯಕ್ತಪಡಿಸಿದ ಅವರು, ಮಾದಕ ವಸ್ತುಗಳ ನಿಯಂತ್ರಣವು ವ್ಯಸನದ ತಡೆಗಟ್ಟುವಿಕೆ, ಚಿಕಿತ್ಸೆ ಮತ್ತು ತಡೆಗಟ್ಟುವಿಕೆಯ ಹಂತಗಳನ್ನು ಒಳಗೊಂಡಿದೆ. ಇದು ವ್ಯಸನದ ಮೂಲ ಕಾರಣಗಳನ್ನು ಮತ್ತು ಅದರ ಪರಿಣಾಮಗಳನ್ನು ನಿರ್ವಹಿಸಲು ವಿವಿಧ ವಿಧಾನಗಳನ್ನು ಬಳಸುತ್ತದೆ. ಉತ್ತೇಜಕಗಳು ನಮ್ಮ ದೇಹದ ನೈಸರ್ಗಿಕ ಕಾರ್ಯಗಳನ್ನು ಹೆಚ್ಚಿಸುವ ಔಷಧಿಗಳ ವಿಧಗಳಾಗಿವೆ. ಅವು ಜಾಗರೂಕತೆ ಮತ್ತು ಸಂಭ್ರಮದ ಭಾವನೆಯನ್ನು ಉಂಟುಮಾಡುತ್ತವೆ. ಒಬ್ಬ ವ್ಯಕ್ತಿಯು ನಿಗದಿತ ಪ್ರಮಾಣವನ್ನು ಅನುಸರಿಸದೆ ಅದನ್ನು ಸೇವಿಸಿದರೆ, ಅದು ಮಾದಕತೆ ಅಥವಾ ಅವಲಂಬನೆಗೆ ಕಾರಣವಾಗಹುಬುದು ಎಂದು ಅವರು ಹೇಳಿದರು. 

 ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷರಾದ ಡಿ.ಜಿ. ಬಿರಾದಾರ, ಮಾದಕ ವಸ್ತು ನಿಷೇದ ಕುರಿತು ಸ-ವಿಸ್ತಾರವಾಗಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಸಿ.ಚಿ.ನಾಟೀಕಾರ ವಹಿಸಿದ್ದರು. ಜಿಲ್ಲಾ ನ್ಯಾಯವಾದಿಗಳ ಸಂಘದ ಕಾರ್ಯದರ್ಶಿ ಎಸ್.ಎಸ್.ಚೂರಿ ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು ಎಂದು ಪ್ರಕಟಣೆ ತಿಳಿಸಿದೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Monday, November 3, 2025

ಸಿದ್ಧರಾಮೇಶ್ವರ ಸ್ಮರಣೆಗಾಗಿ ಪ್ರತಿವರ್ಷ ಒಂದು ಕೆರೆ ನಿರ್ಮಾಣ : ಸಚಿವ ಶಿವಾನಂದ ಪಾಟೀಲ

 

ಚಿಕ್ಕಬಾಸೂರು : 12ನೇ ಶತಮಾನದ ಸಿದ್ಧರಾಮೇಶ್ವರ ಶರಣ ಸಾಮಾಜಿಕ ಕಾಳಜಿಯ ಪರಿಣಾಮ ಜೀವಜಲ ಸಂರಕ್ಷಣೆಯಿಂದಾಗಿ ನಾಡು ಜೀವಜಲ ಕಂಡಿದೆ. ಹೀಗಾಗಿ ಸಿದ್ಧರಾಮೇಶ್ವರ ಸ್ಮರಣೆಗಾಗಿ ರಾಜ್ಯದಲ್ಲಿ ಪ್ರತಿವರ್ಷ ಒಂದೊಂದು ಕೆರೆ ನಿರ್ಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡುವುದಾಗಿ ಹಾವೇರಿ ಜಿಲ್ಲಾ ಉಸ್ತುವಾರಿ ಹೊಂದಿರುವ ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಹೇಳಿದರು.

ಸೋಮವಾರ ನಗರದ ಚಿಕ್ಕಬಾಸೂರು ಗ್ರಾಮದಲ್ಲಿ ಶ್ರೀಗುರು ಸಿದ್ಧರಾಮೇಶ್ವರ ದೇವಸ್ಥಾನ ನಿರ್ಮಾಣ ಹಾಗೂ ಸರ್ಕಾರಿ ಪದವಿ ಕಾಲೇಜಿನ ಸಭಾಭವನ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಸಿದ್ಧರಾಮೇಶ್ವರ ಶರಣರು ನಾಡಿನಾದ್ಯಂದ ಜಲ ಸಂರಕ್ಷಣೆಗಾಗಿ ಕೆರೆ, ಭಾವಿಗಳನ್ನು ನಿರ್ಮಿಸಿ ಸಮಾಜಕ್ಕೆ ಅನುಕರಣೀಯ ಸೇವಾ ಮಾರ್ಗ ಹಾಕಿ ಕೊಟ್ಟಿದ್ದಾರೆ ಎಂದು ವಿವರಿಸಿದರು.

ಬಸವೇಶ್ವರರ ನೇತೃತ್ವದಲ್ಲಿ ಸಮ ಸಮಾಜ ನಿರ್ಮಾಣಕ್ಕೆ ಜಾತಿ, ಮತ‌, ಪಂಥಗಳಿಲ್ಲದೇ, ಲಿಂಗಭೇದ ಇಲ್ಲದೇ ಸೌಹಾರ್ದಯುತ ಸಮಾಜ ಕಟ್ಟಲಾಗಿತ್ತು. ಸಿದ್ಧರಾಮೇಶ್ವರರ ಹೆಸರಿನಲ್ಲಿ ದೇವಸ್ಥಾನ ನಿರ್ಮಿಸುತ್ತಿರುವ ಚಿಕ್ಕಬಾಸೂರು ಗ್ರಾಮಸ್ಥರು ಶರಣರ ಆಶಯದಂತೆ ಸಾಮರಸ್ಯದ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಸಲಹೆ ನೀಡಿದರು.

ಸಿದ್ಧರಾಮೇಶ್ವರ ಶರಣರ ಸ್ಮರಣೆಗಾಗಿ ಚಿಕ್ಕಬಾಸೂರು ಗ್ರಾಮಸ್ಥರು ದೇವಸ್ಥಾನ ಜೀರ್ಣೋದ್ಧಾರಕ್ಕೆ ಮುಂದಾಗಿದ್ದೀರಿ. ರಾಜ್ಯದಲ್ಲಿ ದೇವಸ್ಥಾನಗಳ ಅಭಿವೃದ್ಧಿಗೆ ಸರ್ಕಾರ ಅನುದಾನ ನೀಡುತ್ತಿದ್ದು, ಜನರು ಕೂಡ ದೇಣಿಗೆ ಸಂಗ್ರಹಿಸಿ ದೇವಸ್ಥಾನ ಕಟ್ಟುತ್ತಿದ್ದಾರೆ ಎಂದರು.

ಈ ಹಿಂದೆ ಹಲವು ಬಾರಿ ಮಳೆ ಇಲ್ಲದೇ ಭೀಕರ ಬರ ಕಂಡಿರುವ  ನಾವು, ಇದೀಗ ಅತಿವೃಷ್ಟಿ ಕಾಡಿದೆ. ಪ್ರಸಕ್ತ ವರ್ಷ ನಿರೀಕ್ಷೆ ಮೀರಿ ಮಳೆಯಾಗಿದ್ದು, ಅಂತರ್ಜಲದ ಮಟ್ಟ ಮೇಲೇರಿದೆ. ರಾಜ್ಯದ ಎಲ್ಲ ಜಲಾಶಯಗಳು ಸಂಪೂರ್ಣ ಭರ್ತಿ ಆಗಿವೆ. ಆದರೆ ರೈತರು ಹಸಿಬರದಿಂದ ಆರ್ಥಿಕ ನಷ್ಟ ಅನುಭವಿಸಿದ್ದಾರೆ. ಈಗಾಗಲೇ ನಮ್ಮ ಸರ್ಕಾರ ಬೆಳೆ ಹಾನಿ ಪರಿಹಾರ ನೀಡುತ್ತಿದ್ದು, ಶೀಘ್ರವೇ ಹಾವೇರಿ ಜಿಲ್ಲೆಯಲ್ಲೂ ಬೆಳೆಹಾನಿ ಪರಿಹಾರ ವಿತರಿಸುವುದಾಗಿ ಹೇಳಿದರು.

ಇದಲ್ಲದೇ ಚಿಕ್ಕಬಾಸೂರು ಗ್ರಾಮದಲ್ಲಿ ಸರಕಾರಿ ಪದವಿ ಕಾಲೇಜಿನಲ್ಲಿ 1.50 ಕೋಟಿ ರೂ. ವೆಚ್ಚದಲ್ಲಿ ಸಭಾಭವನ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಗಿದೆ. ಸ್ಥಳೀಯ ಶಾಸಕರಾದ ಬಸವರಾಜ ಶಿವಣ್ಣವರ ಪರಿಶ್ರಮದಿಂದ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಚಿಕ್ಕಬಾಸೂರು ಗ್ರಾಮದ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯಕ್ಕೆ ಮನವಿ ಮಾಡಿದ್ದು, ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದರು.

ಬ್ಯಾಡಗಿ ಶಾಸಕರಾದ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬಸವರಾಜ ಶಿವಣ್ಣವರ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ಸುರೇಶಗೌಡ ಪಾಟೀಲ, ವಿರೂಪಾಕ್ಷಪ್ಪ ಬಳ್ಳಾರಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಂಜೀವ ನೀರಲಕೇರಿ, ಪಂಚ ಗ್ಯಾರಂಟಿ ಯೋಜನೆ ರಾಜ್ಯ ಉಪಾಧ್ಯಕ್ಷ ಎಸ್.ಆರ್.ಪಾಟೀಲ,  ಸೋಮಶೇಖರ ಬಣಕಾರ, ಜಗದೀಶ್ವರಯ್ಯ ಮಠದ,  ಷಣ್ಮುಖಪ್ಪ ತಲ್ಲೂರು, ಜಯಣ್ಣ ಮಲ್ಲಿಗಾರ, ಸುರೇಶಗೌಡ ಪಾಟೀಲ ದಿಡಗೂರು ಸೇರಿದಂತೆ ಇತರರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು