Wednesday, December 31, 2025

ಸಚಿವರ ನಿವಾಸದ ಎದುರು ಪ್ರತಿಭಟನೆ ಸರ್ಕಾರಿ ವೈದ್ಯಕೀಯ ಕಾಲೇಜು ಹೋರಾಟಗಾರರ ಬಂಧನ

ವಿಜಯಪುರ : ಜಿಲ್ಲೆಗೆ ಸಂಪೂರ್ಣ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ನಡೆಯುತ್ತಿರುವ ಹೋರಾಟ ಗುರುವಾರ 106ನೇ ದಿನಕ್ಕೆ ಕಾಲಿಟ್ಟ ಹಿನ್ನೆಲೆ, ಹೊಸ ವರ್ಷದಂದೂ ನಗರದ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ನಿವಾಸದ ಎದುರು ಪ್ರತಿಭಟನೆ ಹಮ್ಮಿಕೊಂಡಿದ್ದ ಸಂದರ್ಭ ಪೊಲೀಸರು ಹೋರಾಟಗಾರರನ್ನು ಬಂಧಿಸಿ ವಾಹನದಲ್ಲಿ ಹೊರ್ತಿ ಪೊಲೀಸ್ ಠಾಣಾ ವ್ಯಾಪ್ತಿಗೆ ಕರೆದೊಯ್ದಿರುವ ಘಟನೆ ನಡೆದಿದೆ.

ಹೋರಾಟಗಾರರು ಉಸ್ತುವಾರಿ ಸಚಿವ ಎಂ.ಬಿ. ಪಾಟೀಲರ ನಿವಾಸದ ಎದುರು ಪ್ರತಿಭಟನೆ ನಡೆಸುತ್ತಿದ್ದಾಗ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆಯಿತು. ಈ ವೇಳೆ ಹೋರಾಟಗಾರರು ಸರ್ಕಾರಕ್ಕೆ ಧಿಕ್ಕಾರ.. ಧಿಕ್ಕಾರ.., ಸರ್ಕಾರಿ ವೈದ್ಯಕೀಯ ಕಾಲೇಜು ಹೊರಾಟವನ್ನು ಪೊಲೀಸರ ಮೂಲಕ ಹತ್ತಿಕ್ಕುತ್ತಿರುವ ಸರ್ಕಾರದ ನಡೆಗೆ ಆಕ್ರೋಶ ವ್ಯಕ್ತಪಡಿಸಿ, ಜಿಲ್ಲಾಡಳಿತ ಹಾಗೂ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

 ಸಂಗನ ಬಸವೇಶ್ವರ ಶ್ರೀಗಳು, ಹೋರಾಟಗಾರರಾದ ಅರವಿಂದ ಕುಲಕರ್ಣಿ, ಸುರೇಖಾ ರಜಪೂತ, ಅನಿಲ ಹೊಸಮನಿ, ಭಿ. ಭಗವಾನ ರೆಡ್ಡಿ, ಸಿದ್ಧರಾಮ ಹಳ್ಳೂರ, ಜಗದೇವ ಸೂರ್ಯವಂಶಿ, ಮಲ್ಲಿಕಾರ್ಜುನ ಎಚ್. ಟಿ, ಗಿರೀಶ ಕಲಘಟಗಿ, ವಿನೋದ ಖೇಡ, ಮಲ್ಲಿಕಾರ್ಜುನ ಬಟಗಿ, ಅಕ್ರಮ ಮಾಶ್ಯಾಳಕರ, ಲಲಿತಾ ಬಿಜ್ಜರಗಿ, ಲಾಯಪ್ಪ ಇಂಗಳೆ, ಭೋಗೇಶ ಸೋಲಾಪುರ, ಸಿದ್ದಲಿಂಗ ಬಾಗೇವಾಡಿ, ಭರತಕುಮಾರ ಎಚ್., ಶಿವಬಾಳಮ್ಮ ಕೊಂಡಗೂಳಿ ಇದ್ದರು.

Saturday, December 27, 2025

ಪರೀಕ್ಷೆಗಳಿಗೆ ಅರ್ಜಿ ಆಹ್ವಾನ : ಕಲಬುರ್ಗಿ ಕೇಂದ್ರಿಯ ವಿವಿ ಹಿಂದಿ ವಿಭಾಗದ ಪ್ರಾಧ್ಯಾಪಕ ಪ್ರೊ.ಗಣೇಶ ಪವಾರ

 ವಿಜಯಪುರ : ಕಲಬುರ್ಗಿಯ ಕೇಂದ್ರಿಯ ವಿಶ್ವವಿದ್ಯಾಲಯಕ್ಕೆ ಸಿಯುಇಟಿ ಮೂಲಕ ಸ್ನಾತಕೋತ್ತರ ಪರೀಕ್ಷೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಗೊAಡಿದ್ದು, ಜನವರಿ 14 ರವರೆಗೆ ಪ್ರವೇಶ ಪಡೆದುಕೊಳ್ಳಬಹುದಾಗಿದೆ ಎಂದು ಕಲಬುರ್ಗಿ ಕೇಂದ್ರಿಯ ವಿವಿ ಹಿಂದಿ ವಿಭಾಗದ ಪ್ರಾಧ್ಯಾಪಕ ಪ್ರೊ.ಗಣೇಶ ಪವಾರ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರಣೆ ನೀಡಿದ ಅವರು, ವಿಶ್ವವಿದ್ಯಾಲಯದಲ್ಲಿ ಹಲವಾರು ಕೋರ್ಸ್ಗಳ ಅಧ್ಯಯನ ಅವಕಾಶವಿದ್ದು, ಇಂಗ್ಲಿಷ್, ಹಿಂದಿ, ಕನ್ನಡ, ಭಾಷಾಶಾಸ್ತ್ರ, ಜಾನಪದ ಮತ್ತು ಬುಡಕಟ್ಟು ಅಧ್ಯಯನ, ಅರ್ಥಶಾಸ್ತ್ರ, ಇತಿಹಾಸ, ಸಾರ್ವಜನಿಕ ಆಡಳಿತ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ,

ಪ್ರವಾಸೋದ್ಯಮ - ಪ್ರಯಾಣ ನಿರ್ವಹಣೆ, ಮನೋವಿಜ್ಞಾನ, ಭುಗೋಳಶಾಸ್ತç, ಭೂವಿಜ್ಞಾನ, ಗಣಿತ ಮೊದಲಾದ ಕೋರ್ಸ್ಗಳ ಪ್ರವೇಶ ಜೊತೆಗೆ ಎಂ.ಟೆಕ್ ಪವರ್ ಆ್ಯಂಡ್ ಎನರ್ಜಿ ಸೋರ್ಸಸ್ ಇಂಜಿನಿಯರಿAಗ್, ಆರ್‌ಎಫ್ ಮೈಕ್ರೋವೇವ್ ಇಂಜಿನಿಯರಿAಗ್‌ನಲ್ಲಿ ಅಧ್ಯಯನಕ್ಕೆ ಅವಕಾಶವಿದೆ, ಹಿಂದೂಸ್ತಾನಿ ಶಾಸ್ತಿçÃಯ ಸಂಗೀತದಲ್ಲಿ ಎಂಪಿಎ, ಇನ್ಸುö್ಯಟ್ರುö್ಯಮೆಂಟಲ್ ಸಂಗೀತದಲ್ಲಿ ಎಂಪಿಎ, ಸಸ್ಯಶಾಸ್ತç, ಪ್ರಾಣಿ ಶಾಸ್ತç ಹೀಗೆ ಅನೇಕ ಕೋರ್ಸ್ಗಳ ಅಧ್ಯಯನಕ್ಕೆ ಅವಕಾಶವಿದೆ ಎಂದರು.

ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ಶೇ.8 ರಷ್ಟು ಮೀಸಲಾತಿ ಕಲ್ಪಿಸಲಾಗುತ್ತಿದೆ, ಕರ್ನಾಟಕದಾದ್ಯಂತ 16 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಯಲಿದೆ ಎಂದು ವಿವರಿಸಿದರು. ಎಂ.ಟೆಕ್‌ನ ಶೇ.50 ರಷ್ಟು ಸೀಟುಗಳನ್ನು ಸಿಯುಇಟಿ ಮೂಲಕ ಹಾಗೂ ಶೇ.50 ರಷ್ಟು ಸೀಟುಗಳನ್ನು ಗೇಟ್ ಮೂಲಕ ಭರ್ತಿ ಮಾಡಲಾಗುತ್ತಿದೆ ಎಂದರು.

ಹೆಲ್ಪ್ ಡೆಸ್ಕ್  : ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆ ಪ್ರಕ್ರಿಯೆಯಲ್ಲಿ ತೊಂದರೆ ಎದುರಿಸಿದರೆ ಅದರ ನಿವಾರಣೆಗಾಗಿ ವಿಶೇಷ ಹೆಲ್ಪ್ಡೆಸ್ಕ್ ಸ್ಥಾಪಿಸಲಾಗಿದೆ. ತೊಂದರೆ ಎದುರಿಸುವ ವಿದ್ಯಾರ್ಥಿಗಳು 011-40759000 ಅಥವಾ 011-69227700 ಸಂಪರ್ಕಿಸಬಹುದಾಗಿದೆ, ಅಲ್ಲಿ ತಂತ್ರಜ್ಞರು ಸೂಕ್ತವಾದ ಮಾರ್ಗದರ್ಶನ ನೀಡಲಿದ್ದಾರೆ. ಅಥವಾ ಜಾಲತಾಣದ ವಿಳಾಸ Www.nta.ac.in https://exams.nta.nic.in/cuet-pgನೊಂದಿಗೆ ಸಂಪರ್ಕ ಸಾಧಿಸಿ ಸಮಸ್ಯೆಗೆ ಪರಿಹಾರ ಕಲ್ಪಿಸಿಕೊಳ್ಳಬಹುದಾಗಿದೆ ಎಂದು ವಿವರಿಸಿದರು. ಸಂಪೂರ್ಣ ಪುವೇಶ ಪ್ರಕ್ರಿಯೆಯು ಆನ್‌ಲೈನ್ ಮೂಲಕ ನಡೆಯುತ್ತದೆ, ಆದ್ದರಿಂದ ಅಭ್ಯರ್ಥಿಗಳು ಭವಿಷ್ಯದ ಸಂವಹನಕ್ಕಾಗಿ ಅರ್ಜಿಯಲ್ಲಿ ಸರಿಯಾದ ಇಮೇಲ್ ಮತ್ತು ಫೋನ್ ಸಂಖ್ಯೆಯನ್ನು ನಮೂದಿಸಬೇಕು ಎಂದು ಕೋರಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


ಡಿ.30 ರಂದು 330 ಜೋಡೆತ್ತಿನ ಬಂಡಿಗಳ ಐತಿಹಾಸಿಕ ಸಮಾವೇಶ



ವಿಜಯಪುರ : ನಡೆದಾಡುವ ಸಂತ ಶ್ರೀ ಸಿದ್ದೇಶ್ವರ ಸ್ವಾಮಿಗಳ ಜನ್ಮಭೂಮಿ ಪವಿತ್ರ ಬಿಜ್ಜರಗಿಯಲ್ಲಿ ಇದೇ ದಿನಾಂಕ 30 ರಂದು ವೈಕುಂಠ ಏಕಾದಶಿಯಂದು 330 ಜೋಡೆತ್ತಿನ ಬಂಡಿಗಳ ಐತಿಹಾಸಿಕ ಸಮಾವೇಶ ಹಾಗೂ ಬಸವ ತತ್ವದಡಿಯಲ್ಲಿ ಸ್ವಾವಲಂಬಿ ಗ್ರಾಮ ನಿರ್ಮಾಣಕ್ಕೆ ಸಂಬAಧಿಸಿದ ವೈಜ್ಞಾನಿಕ ಚಿಂತನ-ಮAಥನ ಸಮಾವೇಶ ನಡೆಯಲಿದೆ, ಕೀನ್ಯಾ ಸೇರಿದಂತೆ ಹಲವು ಭಾಗಗಳಿಂದ ಪರಿಣಿತರು ಭಾಗವಹಿಸಿ ಅನುಭವ ಹಂಚಿಕೊಳ್ಳಲಿದ್ದಾರೆ ಎಂದು ಕೃಷಿ ಇಲಾಖೆ ನಿವೃತ್ತ ಸಹಾಯಕ ನಿರ್ದೇಶಕ ಎಸ್.ಜೆ. ನಾಡಗೌಡ ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹತ್ವಪೂರ್ಣವಾಗಿರುವ ಈ ಸಮಾವೇಶಕ್ಕೆ ಸಕಲ ಸಿದ್ಧತೆ ಕೈಗೊಳ್ಳಲಾಗುತ್ತಿದೆ, ನಂದಿ ಕೂಗು ಅಭಿಯಾನದ ಅಡಿಯಲ್ಲಿ ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿಯವರ 3ನೇ ಪುಣ್ಯ ಸ್ಮರಣೆ ಅಂಗವಾಗಿ ಈ ಕಾರ್ಯಕ್ರಮ ಸಂಘಟಿಸಲಾಗುತ್ತಿದೆ, 

ಮುಗಳಖೋಡ ಮಠದ ಶ್ರೀ ಡಾ.ಮುರಘರಾಜೇಂದ್ರ ಮಹಾಸ್ವಾಮಿಗಳು, ಜ್ಞಾನಯೋಗಾಶ್ರಮದ ಶ್ರೀ ಬಸವಲಿಂಗ ಮಹಾಸ್ವಾಮೀಜಿಗಳ ಸಾನಿಧ್ಯದಲ್ಲಿ ಜರಗುವುದು. ರೈತ ಹೋರಾಟದಲ್ಲಿ ತೊಡಗಿಸಿಕೊಂಡಿರುವ ಯುವ ಸನ್ಯಾಸಿ ಶಶಿಕಾಂತ ಗುರುಜಿ ಕಾರ್ಯಕ್ರಮದಲ್ಲಿ ಮಾರ್ಗದರ್ಶನ ನುಡಿಗಳನ್ನಾಡಲಿದ್ದಾರೆ, ಜೋಡೆತ್ತಿನ ಕೃಷಿಯ ಕುರಿತು ವಿಶೇಷ ಒಲವು ಹೊಂದಿರುವ ಕರ್ನಾಟಕ ರಾಜ್ಯ ಕೃಷಿ ತಂತ್ರಜ್ಞರ ಸಂಸ್ಥೆಯ ನಿರ್ದೇಶಕ ವೆಂಕನಗೌಡ ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ. 

ಭಾರತೀಯ ಕಿಸಾನ್ ಸಂಘದ ರಾಜ್ಯಾಧ್ಯಕ್ಷ ಭೀಮಸೇನ ಕೋಕರೆ, ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಅಧ್ಯಕ್ಷ ಚುನ್ನಪ್ಪ ಪುಜಾರಿ ಆಗಮಿಸಲಿದ್ದು, ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕೀನ್ಯಾ ದೇಶದಲ್ಲಿ ಬೃಹತ್ ಕೃಷಿ ಉದ್ದಿಮೆ ಸ್ಥಾಪಿಸುವುದರ ಜೊತೆಗೆ ನಂದಿ ಸಂತತಿ ರಕ್ಷಣೆಯಲ್ಲಿ ಹೆಸರುವಾಸಿಯಾಗಿರುವ ಮಲ್ಲಿಕಾರ್ಜುನ ಕೋರಿ ಅವರು ಬಸವ ತತ್ವದಿಂದ ಸ್ವಾವಲಂಬಿ ಗ್ರಾಮ ನಿರ್ಮಿಸುವ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದು ನಾಡಗೌಡರು ವಿವರಿಸಿದರು.

ಬಸವ ತತ್ವದಿಂದ ಸ್ವಾವಲಂಬಿ ಗ್ರಾಮ ನಿರ್ಮಾಣ ಸಾಧ್ಯ :

ಕರ್ನಾಟಕ ರಾಜ್ಯ ಕೃಷಿ ತಂತ್ರಜ್ಞರ ಸಂಸ್ಥೆಯ ನಿರ್ದೇಶಕ ವೆಂಕನಗೌಡ ಪಾಟೀಲ ಮಾತನಾಡಿ, ಬಸವ ತತ್ವವೆಂದರೆ ಜೋಡೆತ್ತಿನ ರೈತರು ತಮ್ಮ ಕಾಯಕದಿಂದ ಪಂಚ ಮಹಾಭೂತಗಳ ಜೀವಂತಿಕೆಯನ್ನು ಉಳಿಸುವುದರ ಜೊತೆಗೆ ಕಾಯಕ ಹಾಗೂ ದಾಸೋಹ ಸಂಸ್ಕೃತಿ ನಾಶವಾಗದಂತೆ ನೋಡಿಕೊಳ್ಳುವ ಕಲೆ ಎಂದು ಅರ್ಥ. ಕ್ರಿಸ್ತಶಕ 6 ರಿಂದ 12 ನೇ ಶತಮಾನದ ಕಾಲಘಟ್ಟದಲ್ಲಿ ಜೋಡೆತ್ತಿನ ಕೃಷಿಕರ ಬಸವ ತತ್ವದ ಅನುಷ್ಠಾನದಿಂದ ರಾಜರುಗಳು ಸುಸಂಸ್ಕೃತ ಸಮಾಜ ನಿರ್ಮಿಸಿದರು. ಸಮಾಜದಲ್ಲಿ ಜೋಡೆತ್ತಿನ ಕೃಷಿಕರ ಪಾದಗಳ ಕೊರತೆಯಾದರೆ ಸಮಾಜದ ಮಾರ್ಗದರ್ಶಕರಾದ ಗುರುಗಳಿಗೆ ಭವಿಷ್ಯವಿಲ್ಲ ಎಂದು ಅಣ್ಣ ಬಸವಣ್ಣ ಸಹ ಹೇಳಿದ್ದಾರೆ ಎಂದರು.

ಕೃಷಿಕರ ಬಸವ ತತ್ವಕ್ಕೆ ವಿರುದ್ಧವಾದ ಪೆಟ್ರೋಲ್ ಹಾಗೂ ಡೀಸೆಲ್ ಆಧಾರಿತ ತೈಲ ತತ್ವಕ್ಕೆ ಸರ್ಕಾರಗಳು ಹೆಚ್ಚು ಆದ್ಯತೆ ನೀಡುತ್ತಾ ಬಂದ ಕಾರಣ ಜೋಡೆತ್ತಿನ ಕೃಷಿಕರು ನಾಶವಾಗಿ ಗ್ರಾಮಗಳು ಸರ್ವ ರೀತಿಯಲ್ಲಿ ಪರಾವಲಂಬಿಗಳಾಗುತ್ತಾ ಸಾಗುತ್ತಿವೆ. ಜೋಡೆತ್ತಿನ ಕೃಷಿ ನಾಶವಾದಂತೆ ರೈತರ ಸಾಗುವಳಿ ವೆಚ್ಚ ಹೆಚ್ಚಾಗಿ ರೈತರ ತೊಂದರೆ ಅಧಿಕವಾಗಿದೆ, ಈ ಹಿನ್ನೆಲೆಯಲ್ಲಿ ಜೋಡೆತ್ತಿನ ಕೃಷಿಕರಿಗೆ ಪ್ರತಿ ತಿಂಗಳು ರೂ. 11000 ಪ್ರೋತ್ಸಾಹ ಧನ ನೀಡುವ ಯೋಜನೆ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು. 

ನಿವೃತ್ತ ಸಹಾಯಕ ಕೃಷಿ ನಿರ್ದೇಶಕ ಸಂಗಮೇಶ ಕಾಮನ್ನವರ, ಬಸವರಾಜ ಬಿರಾದಾರ, ಬಸವರಾಜ ಕೋನರೆಡ್ಡಿ ಮೊದಲಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Tuesday, December 23, 2025

2.50 ಕೋಟಿ ಅಕ್ರಮ ಆಸ್ತಿ ಪತ್ತೆ : ಕೃಷಿ ಅಧಿಕಾರಿ ಮನೆ ಮೇಲೆ ಲೋಕಾ ದಾಳಿ

ವಿಜಯಪುರ: ಆದಾಯಕ್ಕಿಂತ ಹೆಚ್ಚು ಆಸ್ತಿ ಸಂಪಾದಿಸಿದ ಆರೋಪದ ಹಿನ್ನೆಲೆ ಜಿಲ್ಲೆಯ ಬಸವನಬಾಗೇವಾಡಿಯ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮಲ್ಲಪ್ಪ ಹನಮಂತಪ್ಪ ಯರಝರಿ ಅವರಿಗೆ ಸಂಬಂಧಿಸಿದ ನಾಲ್ಕು ಕಡೆ ಆಸ್ತಿಗಳ ಮೇಲೆ ಲೋಕಾಯುಕ್ತರು ದಾಳಿ ನಡೆಸಿದ್ದು, 2.50 ಕೋಟಿ ರೂ.ಗೂ ಹೆಚ್ಚು ಅಕ್ರಮ ಆಸ್ತಿ ಗಳಿಸಿರುವುದು ಪತ್ತೆಯಾಗಿದೆ.

ಅಕ್ರಮ ಆಸ್ತಿ ಕುರಿತು ವಿಜಯಪುರ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಅಧಿಕಾರಿಗಳು ಆರೋಪಿ ನೌಕರನಿಗೆ ಸಂಬಂಧಿಸಿದ ಮನೆಯ ಶೋಧನೆ ನಡೆಸಲು ನ್ಯಾಯಾಲಯದಿಂದ ವಾರಂಟ್‌ನ್ನು ಪಡೆದು. ಬೆಳಗ್ಗೆ ಆರೋಪಿ ನೌಕರರಿಗೆ ಸಂಬಂಧಿಸಿದ ವಿಜಯಪುರ ನಗರದ ನವರಸಪುರದ ಮನೆ, ನೌಕರರಿಗೆ ಸಂಬಂಧಿಸಿದ ಬಸವನಬಾಗೇವಾಡಿ ತಾಲೂಕಿನ ಕಣಕಾಲ ಗ್ರಾಮದ ಫಾರ್ಮಹೌಸ್, ಮುದ್ದೇಬಿಹಾಳ ನಗರದಲ್ಲಿರುವ ಆರೋಪಿ ಅಧಿಕಾರಿಯ ಮಾವನ ಮನೆ, ಅಪಾದಿತರು ಕರ್ತವ್ಯ ನಿರ್ವಹಿಸುತ್ತಿರುವ ಕಚೇರಿ ಶೋಧನೆ ಕಾರ್ಯ ನಡೆಸಿದ್ದು, ಶೋಧನೆ ವೇಳೆ ಆರೋಪಿ ವಿಜಯಪುರ ನವರಸಪುರ ಮನೆ, ಲಾಕರ್ ಮತ್ತು ಮಾವನ ಮನೆ ಸೇರಿ ಸುಮಾರು 29,42,000 ರೂ. ನಗದು ಹಣ, ಬೆಳ್ಳಿ ಬಂಗಾರದ ಆಭರಣಗಳು, ವಾಹನಗಳು ಮತ್ತು ಇತರೆ ಆಸ್ತಿಗಳಿಗೆ ಸಂಬಂಧಿಸಿದ ದಾಖಲಾತಿಗಳು ದೊರೆತಿದ್ದು, ಅಂದಾಜು 2.50 ಕೋಟಿಗೂ ಹೆಚ್ಚಿನ ಅಕ್ರಮ ಆಸ್ತಿ ಗಳಿಸಿರುವದು ಪತ್ತೆಯಾಗಿದೆ.

ಲೋಕಾಯುಕ್ತ ಎಸ್ಪಿ ಟಿ. ಮಲ್ಲೇಶ್ ಮಾರ್ಗದರ್ಶನದಲ್ಲಿ ಡಿಎಸ್‌ಪಿಗಳಾದ ಮಲ್ಲಿಕಾರ್ಜುನ ತುಳಸಿಗೇರಿ, ಬಿ.ಎಸ್. ಪಾಟೀಲ್, ಪೊಲೀಸ್ ಇನ್ಸಪೆಕ್ಟರ್‌ಗಳಾದ ಆನಂದ ಟಕ್ಕನ್ನವರ್, ಆನಂದ ಡೋಣಿ, ನಿಂಗಪ್ಪ ಪೂಜೇರಿ, ಸಂಗಮನಾಥ ಹೊಸಮನಿ ಹಾಗೂ ವಿಜಯಪುರ ಹಾಗೂ ಬೆಳಗಾವಿ ಪೊಲೀಸ್ ಠಾಣೆಯ ಸಿಬ್ಬಂದಿ ತಂಡ ಕಾರ್ಯಾಚರಣೆ ನಡೆಸಿದೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Tuesday, December 9, 2025

https://drive.google.com/file/d/1ue_FGs31toJBL_Q-s565xGBbGsQe8l6e/view?usp=sharing

Monday, December 8, 2025

ವಿಜಯಪುರ ಸರ್ಕಾರಿ ವೈದ್ಯಕೀಯ ಕಾಲೇಜು ಬೇಡಿಕೆ | ಸುವರ್ಣ ವಿಧಾನಸೌಧದಲ್ಲಿ ಪ್ರತಿಧ್ವನಿ

ವರದಿ : ಉಮೇಶ ಶಿವಶರಣ, ಸಂಪಾದಕ

ಈ ದಿವಸ ವಾರ್ತೆ ಬೆಳಗಾವಿ : ಸುವರ್ಣ ವಿಧಾನ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ವಿಜಯಪುರ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಅನಿರ್ಧಿಷ್ಟಾವಧಿ ಧರಣಿ ವಿಷಯ ಮೇಲ್ಮನೆಯಲ್ಲಿ ಸೋಮವಾರ ಪ್ರತಿಧ್ವನಿಸಿತು.

ವಿಧಾನ ಪರಿಷತ್ತಿನ ಸದಸ್ಯ ಕೇಶವಪ್ರಸಾದ್ ಎಸ್. ಅವರು ವಿಜಯಪುರ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಶಿಕ್ಷಣ ಕಾಲೇಜುಗಳ ಬಹುದಿನಗಳ ಬೇಡಿಕೆಯಿದ್ದು ಸದರಿ ಬೇಡಿಕೆಗೆ ಅನಿರ್ಧಿಷ್ಟಾವಧಿ ಧರಣಿ ನಡೆಯುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ ? ಬಂದಿದ್ದರೆ ವೈದ್ಯಕೀಯ ಶಿಕ್ಷಣ ಕಾಲೇಜುಗಳನ್ನು ಸ್ಥಾಪಿಸಲು ಸರ್ಕಾರ ಕೈಕೊಂಡಿರುವ ಕ್ರಮಗಳೇನು? ಎಂದು ಪ್ರಶ್ನಿಸಿದರು.

ವಿಧಾನ ಪರಿಷತ್ತಿನ ಸದಸ್ಯ ಕೇಶವ್ ಪ್ರಸಾದ್ ಎಸ್ ಅವರ ಚುಕ್ಕೆ ಗುರುತಿಲ್ಲದ ಪ್ರಶ್ನೆ 54(104)ರ ಕ್ಕೆ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲರವರು ಉತ್ತರಿಸಿ, ವಿಜಯಪುರ ಜಿಲ್ಲೆಯಲ್ಲಿ ನಡೆಯುತ್ತಿರುವ ಹೋರಾಟ ಸರ್ಕಾರದ ಗಮನಕ್ಕೆ ಬಂದಿದೆ. ರಾಜ್ಯದ ಪ್ರತಿ ಜಿಲ್ಲೆಗೊಂದು ಸರ್ಕಾರಿ ವೈದ್ಯಕೀಯ ಕಾಲೇಜು ಪ್ರಾರಂಭಿಸಬೇಕೆAಬುವುದು ಸರ್ಕಾರದ ನೀತಿಯಾಗಿರುತ್ತದೆ. ರಾಜ್ಯ ಸರ್ಕಾರದ ವತಿಯಿಂದ ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ಅಂದಾಜು ರೂ. 610 ಕೋಟಿಗಳ ಆವರ್ತಕದ ವೆಚ್ಚದ ಅವಶ್ಯಕತೆ ಇರುತ್ತದೆ. ಅದರಂತೆ ಅನುದಾನದ ಲಭ್ಯತೆಯನ್ನು ಆಧರಿಸಿ ಸರ್ಕಾರಿ ವೈದ್ಯಕಿಯ ಕಾಲೇಜುಗಳನ್ನು ಹೊಂದಿರದ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜುಗಳನ್ನು ಪ್ರಾರಂಭಿಸಲು ಕ್ರಮ ವಹಿಸಲಾಗುವುದು. ವೈದ್ಯಕೀಯ ಕಾಲೇಜುಗಳು ಇಲ್ಲದ ಜಿಲ್ಲೆಗಳಲ್ಲಿ ಪಿಪಿಪಿ ಮಾದರಿಯಲ್ಲಿ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸುವ ಬಗ್ಗೆ ಪೂರ್ವಭಾವಿ ಸಭೆಗಳನ್ನು ನಡೆಸಲಾಗಿದೆ.

ವಿಜಯಪುರ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕಿಯ ಕಾಲೇಜನ್ನು ಪ್ರಾರಂಭಿಸುವAತೆ ಧರಣಿಗಳು ನಡೆಯುತ್ತಿದ್ದು ಕಾಲೇಜು ಪ್ರಾರಂಭದ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರುಗಳು ಗಣ್ಯರು ಹಾಗೂ ಜಿಲ್ಲಾ ಮುಖಂಡರೊAದಿಗೆ ಸಭೆಯನ್ನು ನಡೆಸಿ ಪರಿಶೀಲಿಸಲಾಗುವುದು ಎಂದು ವೈದ್ಯಕೀಯ ಸಚಿವರು ತಿಳಿಸಿದ್ದಾರೆ. 

ವಿಜಯಪುರ ಜಿಲ್ಲೆಯಲ್ಲಿ ಕಳೆದ 82 ದಿನಗಳಿಂದ ಸರಕಾರಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಗೆ ಆಗ್ರಹಿಸಿ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಗಾಗಿ ಹೋರಾಟ ಸಮಿತಿಯಿಂದ ನಿರಂತರ ಧರಣಿ ನಡೆಯುತ್ತಿದೆ. ಧರಣಿಗೆ ಜಿಲ್ಲೆಯ ವಿವಿಧ ಸಂಘಟನೆಗಳು, ವಿವಿಧ ಪಕ್ಷದ ಮುಖಂಡರು, ವಿದ್ಯಾರ್ಥಿಗಳು ಸೇರಿದಂತೆ ಹಲವರು ಬೆಂಬಲ ವ್ಯಕ್ತಪಡಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Thursday, December 4, 2025

ಬಾಲ್ಯವಿವಾಹ ಹಾಗೂ ಪೋಕ್ಸ್ ಕಾಯ್ದೆ ಹಾಗೂ ಮಕ್ಕಳ ಸಂರಕ್ಷಣಾ ಕಾಯ್ದೆಗಳ ಕುರಿತ ಕಾರ್ಯಾಗಾರ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಹಾಗೂ ಬಾಲ್ಯ ವಿವಾಹ ತಡೆಗೆÀ ಕೈಜೊಡಿಸಿ - ಸಂಗಮೇಶ ಬಬಲೇಶ್ವರ

ವಿಜಯಪುರ : ಬಾಲ ಕಾರ್ಮಿಕ ಪದ್ಧತಿ ಹಾಗೂ ಬಾಲ್ಯ ವಿವಾಹದಂತಹ ಸಾಮಾಜಿಕ ಅನಿಷ್ಠ ಪಿಡುಗುಗಳ ಸಂಪೂರ್ಣ ನಿರ್ಮೂಲನೆಗೆ ಸಾರ್ವಜನಿಕರು, ಪೋಷಕರು ಹಾಗೂ ಈ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಸಂಘ-ಸAಸ್ಥೆಗಳು ಕೈಜೋಡಿಸಬೇಕು. ಅದರಂತೆ ಜಿಲ್ಲೆಯ ವಸತಿ ನಿಲಯಗಳ ವಾರ್ಡ್ನ ಹಾಗೂ ಶಾಲಾ ಶಿಕ್ಷಕರು ಈ ಕಾಯ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಹೊಂದಿ, ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ವ್ಯಾಪಕ ಜಾಗೃತಿ ಮೂಡಿಸಿ, ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಹಾಗೂ ಬಾಲ್ಯ ವಿವಾಹ ತಡೆಗೆÀ ಕೈಜೊಡಿಸಬೇಕು ಎಂದು ಧಾರವಾಡದ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಅವರು ಹೇಳಿದರು.

 ಅವರು ಗುರುವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮAದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,ಜಿಲ್ಲಾ ಮಕ್ಕಳ ರಕ್ಷಣಾ ಘಟಕ,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಪೊಲೀಸ್ ಇಲಾಖೆ, ಸಮಾಜ ಕಲ್ಯಾಣ ಇಲಾಖೆ,ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ,ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಬಾಲ್ಯ ವಿವಾಹ-ಫೋಕ್ಸೊ ಕಾಯ್ದೆ ಹಾಗೂ ಮಕ್ಕಳ ಸಂರಕ್ಷಣಾ ಕಾಯ್ದೆಗಳ ಕುರಿತ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮ ಅತ್ಯಂತ ಮಾದರಿಯಾಗಿದೆ. ಮಕ್ಕಳ ರಕ್ಷಣೆಗಾಗಿ ಇರುವ ಬಾಲ್ಯ ವಿವಾಹ-ಫೋಕ್ಸೊ ಕಾಯ್ದೆ, ಬಾಲ ಕಾರ್ಮಿಕ ತಡೆ ಕಾಯ್ದೆಗಳ ಕುರಿತಾಗಿ ಮಕ್ಕಳೊಂದಿಗೆ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳಿಗೆ ತಿಳಿಸಿಕೊಡುತ್ತಿರುವ ಈ ಕಾರ್ಯಾಗಾರ ಅತ್ಯಂತ ಸಮಂಜಸವಾಗಿದೆ.ಮಕ್ಕಳ ಹಿತಕಾಯುವಲ್ಲಿ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಎಲ್ಲರೂ ಜವಾಬ್ದಾರಿ ಅರಿತು ಮಕ್ಕಳ ಒಳಿತಿಗಾಗಿ ಕಾರ್ಯನಿರ್ವಹಿಸೋಣ ಎಂದು ಹೇಳಿದರು. ಐತಿಹಾಸಿಕ ಹಿನ್ನೆಲೆ ಇರುವ ನಮ್ಮ ಹೆಮ್ಮೆಯ ಜಿಲ್ಲೆಯಲ್ಲಿ ಸಂಪೂರ್ಣ ಬಾಲಕಾರ್ಮಿಕ, ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿಸುವ ನಿಟ್ಟಿನಲ್ಲಿ ನಮ್ಮೆಲ್ಲರ ಜವಾಬ್ದಾರಿ ಹೆಚ್ಚಾಗಿದೆ. ಎಲ್ಲ ಮಕ್ಕಳನ್ನು ಶಾಲಾ ದಾಖಲಾತಿ ಮಾಡಿಸುವ ಮೂಲಕ ಶಾಲೆಯಿಂದ ಯಾವುದೇ ಮಗು ಹೊರಗುಳಿಯದಂತೆ ಸಂಬAಧಿಸಿದ ಇಲಾಖೆಯ ಅಧಿಕಾರಿಗಳು ನಿಗಾ ವಹಿಸಿ, ಶಾಲೆಬಿಟ್ಟ ಮಕ್ಕಳ ಮಾಹಿತಿ ಕ್ರೋಢಿಕರಿಸಬೇಕು. ಈ ಬಗ್ಗೆ ಪಾಲಕರಿಗೆ ತಿಳುವಳಿಕೆ ನೀಡಬೇಕು. ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ಸುಂದರಗೊಳಿಸಿಕೊAಡು ಸಮಾಜಕ್ಕೆ ತಮ್ಮ ಕೊಡುಗೆ ನೀಡಬೇಕು ಎಂದು ಹೇಳಿದರು.

 ವಸತಿ ನಿಲಯಗಳಲ್ಲಿ ಮಕ್ಕಳ ರಕ್ಷಣೆಯ ಕುರಿತು ಅತ್ಯಂತ ಕಾಳಜಿವಹಿಸಿ ಕಾರ್ಯ ನಿರ್ವಹಿಸಬೇಕು. ಪಾಲಕರು ಗಂಡು-ಹೆಣ್ಣು ಎಂಬ ಭೇದವೆಣಿಸದೇ ಮಕ್ಕ್ಕಳ ಉಜ್ವಲ ಭವಿಷ್ಯಕ್ಕೆ ಶ್ರಮಿಸಬೇಕು. ಈ ಕಾರ್ಯಕ್ರಮದಲ್ಲಿ ಮಕ್ಕಳ ಸಂರಕ್ಷಣೆಯಲ್ಲಿರುವ ವಿವಿಧ ಕಾಯ್ದೆ, ಕಾನೂನು ಕುರಿತು ವಿಷಯ ತಜ್ಞರು ಇಲ್ಲಿ ವ್ಯಕ್ತಪಡಿಸುವ ಮಾಹಿತಿಯನ್ನು ಪೂರಕವಾಗಿ ಮಕ್ಕಳಿಗೆ ತಿಳಿಸಿಕೊಡಬೇಕು ಎಂದು ಅವರು ಹೇಳಿದರು. 

 ಜಿಲ್ಲಾಧಿಕಾರಿ ಡಾ.ಆನಂದ.ಕೆ ಮಾತನಾಡಿ, ಮಕ್ಕಳ ಕ್ಷೇತ್ರಗಳ ಕಾಯ್ದೆಗಳ ಬಗ್ಗೆ ಅರಿವು ಮತ್ತು ಜಾಗೃತಿ ಅಗತ್ಯವಾಗಿದೆ. ನಮಗೆ ಹಾಕಿಕೊಟ್ಟ ಕಾರ್ಯನಿರ್ವಹಣೆಯ ಪರಿಧಿಯನ್ನು ಹೊರತುಪಡಿಸಿ,ಸಾಮಾಜಿಕ ಕಳ-ಕಳಿಯ ಹೊಂದಿ, ಸಮಾಜಮುಖಿಯಾಗಿ ಹಾಗೂ ಮಕ್ಕಳ ಹಿತದೃಷ್ಟಿಯಿಂದ ನಾವೆಲ್ಲರೂ ಕಾರ್ಯನಿರ್ವಹಿಸಿ,ಸಾಮಾಜಿಕ ಬದ್ಧತೆಯನ್ನು ಮೆರೆಯೋಣ.ಮಕ್ಕಳೊಂದಿಗೆ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ ಹಾಗೂ ಸಿಬ್ಬಂದಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳು ಅರಿತುಕೊಂಡು ಪರಿಹರಿಸಿ ಎಂದು ಹೇಳಿದರು.

 ಬಾಲ್ಯವಿವಾಹ ಸೇರಿದಂತೆ ಅನಿಷ್ಟ ಪದ್ಧತಿ ಕುರಿತ ಸಾರ್ವಜನಿಕರು ಜಾಗೃತಿ ಹೊಂದುವುದು ಅಗತ್ಯವಾಗಿದೆ. ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಸ್ಪಂದಿಸಿ, ಮಕ್ಕಳ ಮನಸ್ಸನ್ನು ಅರಿತು ಸಮಸ್ಯೆ ಪರಿಹರಿಸುವ ಮೂಲಕ ಮಕ್ಕಳ ಸರ್ವಾಂಗೀಣ ವ್ಯಕ್ತಿತ್ವದ ಬದಲಾವಣೆಗೆ ಪೂರಕವಾಗಿ ಕಾರ್ಯನಿರ್ವಹಿಸಬೇಕು.ಶಿಕ್ಷಕರು ಮಕ್ಕಳ ವರ್ತನಾ ಬದಲಾವಣೆ ಅವಲೋಕಿಸಿ ಸೂಕ್ಷö್ಮವಾಗಿ ಗ್ರಹಿಸಿ,ಅವರಿಗೆ ಸೂಕ್ತ ಸಲಹೆ ನೀಡಬೇಕು. ಇಂದಿನ ಸ್ಪರ್ಧಾತ್ಮಕ ಜಗತ್ತಿಗೆ ಅಣಿಗೊಳ್ಳುವಂತೆ ಮಕ್ಕಳನ್ನು ಪ್ರೋತ್ಸಾಹಿಸಬೇಕು. ಲಿಂಗಾನುಪಾತ ಬಗ್ಗೆ ಜಾಗೃತಿ ಮೂಡಿಸಬೇಕು. ಗಂಡು-ಹೆಣ್ಣು ಎಂಬ ಲಿಂಗ ತಾರತಮ್ಯ ತೊಡೆದು ಹಾಕಲು ಶ್ರಮಿಸಿ, ಬಾಲ್ಯ ವಿವಾಹ, ಬಾಲಕಾರ್ಮಿಕ ಪದ್ಧತಿ, ಪ್ರಸವ ಪೂರ್ವ ಭ್ರೂಣ ಲಿಂಗ ಪತ್ಯೆ ಸೇರಿದಂತೆ ವಿವಿಧ ಅನಿಷ್ಠ ಪದ್ಧತಿ ಹೋಗಲಾಡಿಸಲು, ಜನರಲ್ಲಿ ಸೂಕ್ತ ಜಾಗೃತಿ ಮೂಡಿಸಲು ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಿಯಮಿತವಾಗಿ ಕಾವಲು ಸಮಿತಿ ನಡೆಸಿ, ಸ್ಥಳೀಯವಾಗಿ ಎದುರಾಗುವÀ ಸಮಸ್ಯೆಗಳನ್ನು ಪರಿಹರಿಸುವುದಕ್ಕಾಗಿ ಗ್ರಾಮ ಹಂತದಲ್ಲಿ ಸಭೆ ನಡೆಸುವುದು ಅತ್ಯಂತ ಮಹತ್ವದಾಗಿದೆ. ಈ ಸಭೆಗಳಲ್ಲಿ ಗ್ರಾಮಸ್ಥರು ಪಾಲ್ಗೊಳ್ಳುವಿಕೆಯಿಂದ ಕಾನೂನು ಅರಿವು ಹೊಂದಿ ಇಂತಹ ಪ್ರಕರಣ ಇಳಿಮುಖವಾಗಲು ಸಾಧ್ಯವಾಗುತ್ತದೆ. ಮಕ್ಕಳ ಉಚಿತ ಸಹಾಯವಾಣಿ ಸಂಖ್ಯೆ 1098 ದೂರು ಕರ ಮಾಡಿ ಸಮಸ್ಯೆ ಪರಿಹಾರ ಕಂಡುಕೊಳ್ಳಬಹುದಾಗಿದೆ. ಜಿಲ್ಲೆಯಲ್ಲಿ ಇದರ ಪ್ರಕ್ರಿಯೆ ಅತ್ಯತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಮಾನಸಿಕ ಖಿನ್ನತೆಗೆ ಸಮಬಂಧಿಸಿದ ಪರಿಹಾರ ದೊರಕಿಸಿಕೊಡುವ ಟೆಲಿ ಮನಸ್ ಉಚಿತ ಸಹಾವಾಣಿ ಸಂಖ್ಯೆ 14416 ಸಂಪರ್ಕಿಸಿ ತಮ್ಮ ಸಮಸ್ಯೆ ಬಗೆಹರಿಸಿಕೊಳ್ಳಬಹುದಾಗಿದೆ ಎಂದು ಹೇಳಿದರು. ಮಕ್ಕಳ ಸಂರಕ್ಷಣಾ ಕಾಯ್ದೆಗಳ ಕುರಿತು ತಿಳಿದುಕೊಂಡು, ಮಕ್ಕಳ ಹಿತದೃಷ್ಟಿಯಿಂತ ತಾವೆಲ್ಲ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಅವರು ಹೇಳಿದರು. 

 ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಅರವಿಂದ ಹಾಗರಗಿ ಮಾತನಾಡಿ, ಮಕ್ಕಳಿಗೆ ಪಠ್ಯ ಬೋಧನೆ ಜೊತೆಗೆ ಮಕ್ಕಳಲ್ಲಿ ಸಂಸ್ಕೃತಿ,ಮಕ್ಕಳ ರಕ್ಷಣೆಗಾಗಿ ಇರುವ ಹಕ್ಕುಗಳ ಬಗ್ಗೆ ತಿಳಿಸಿಕೊಡಬೇಕು. ಶಾಲೆಯಲ್ಲಿ ನಡೆಯುವ ಪಾಲಕರ ಸಭೆಯಲ್ಲಿ ಕಾನೂನು ಅರಿವು ಮೂಡಿಸುವ ಮೂಲಕ ಕಾಯ್ದೆಗಳ ಸಮರ್ಪಕ ಅನುಷ್ಠಾನಕ್ಕೆ ಮುಂದಾಗಬೇಕು. ಮಕ್ಕಳ ಹಿತದೃಷ್ಟಿಯಿಂದ ಎಲ್ಲ ಇಲಾಖೆಗಳು ಸಮನÀ್ವಯದಿಂದ ಕಾರ್ಯನಿರ್ವಹಿಸಬೇಕು. ಈ ಕಾರ್ಯಾಗಾರದಲ್ಲಿನ ಮಾಹಿತಿಯನ್ನು ಮನೆ-ಮನೆಗೂ ಹಾಗೂ ಮಗು-ಮಗುವಿಗೂ ತಲುಪಿಸಬೇಕು ಎಂದು ಹೇಳಿದರು. 

 ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷö್ಮಣ ನಿಂಬರಗಿ ಅವರು ಮಾತನಾಡಿ, ಸೈಬರ್ ಅಪರಾಧದ ಕುರಿತು ಜಾಗೃತಿ ಹೊಂದುವುದು ಅತಿ ಅಗತ್ಯವಾಗಿದೆ. ಆನ್‌ಲೈನ್ ಆ್ಯಪ್ ನಂಬಿ ಹಣ ಹೂಡಿಕೆ ಮಾಡಿ ವಂಚನೆಗೊಳಗಾಗುವ ಪ್ರಕರಣಗಳು ಹೆಚ್ಚಾಗುತ್ತಿವೆ. ಸೈಬರ್ ಅಪರಾಧಗಳ ಬಗ್ಗೆ ಮಕ್ಕಳಿಗೆ ತಿಳುವಳಿಕೆ ನೀಡಬೇಕು. ವಿವಿಧ ಸೈಬರ್ ಅಪರಾಧಗಳ ಕುರಿತು ಪಿಪಿಟಿಯ ಮೂಲಕ ವಿಸ್ತೃತವಾಗಿ ವಿವರಿಸಿದ ಅವರು ವಂಚಕರು ಎಸಗುವ ಆಮಿಷಕ್ಕೆ ಒಳಗಾಗದೇ ಸಾರ್ವಜನಿಕರು ಜಾಗೃತಿ ವಹಿಸಬೇಕು. ಇಂದಿನ ತಂತ್ರಜ್ಞಾನದ ಯುಗದಲ್ಲಿ ಸೈಬರ ಅಪರಾಧದ ಕುರಿತು ಜಾಗೃತಿ ಹೊಂದಿ, ಸೈಬರ್ ವಂಚಕರಿAದ ತಮ್ಮನ್ನು ತಾವು ರಕ್ಷಿಸಿಕೊಳ್ಳಬೇಕು. ಸೈಬರ್ ವಂಚನೆಗೆ ಒಳಗಾದ ಸಂದರ್ಭದಲ್ಲಿ 1930 ಉಚಿತ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡುವಂತೆ ಅವರು ಹೇಳಿದರು.

 ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಿಷಿ ಆನಂದ ಅವರು ಮಾತನಾಡಿ, ವಸತಿ ನಿಲಯ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಕಾಲಕಾಲಕ್ಕೆ ಆರೋಗ್ಯ ತಪಾಸಣೆ ನಡೆಸಬೇಕು. ಮಕ್ಕಳ ಕಲ್ಯಾಣಕ್ಕಾಗಿ ಒಗ್ಗೂಡಿ ಕಾರ್ಯನಿರ್ವಹಿಸೋಣ. ಕಾಯ್ದೆಗಳ ಅನುಷ್ಠಾನ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಮಕ್ಕಳ ಹಿತದೃಷ್ಟಿಯಿಂದ ಕಾಳಜಿಪೂರ್ವಕವಾಗಿ ಕಾರ್ಯನಿರ್ವಹಿಸಿ ಸಮಸ್ಯೆಗಳಿದ್ದಲ್ಲಿ ತಮ್ಮನ್ನು ಖುದ್ದಾಗಿ ಸಂಪರ್ಕಿಸುವAತೆ ಹೇಳಿದರು. 

 ನ್ಯಾಯವಾದಿಗಳೂ ಆದ ಮಕ್ಕಳ ಕಲ್ಯಾಣ ಸಮಿತಿಯ ಮಾಜಿ ಅಧ್ಯಕ್ಷರಾದ ಶ್ರೀಧರ ಕುಲಕರ್ಣಿ ಅವರು, ಬಾಲ್ಯ ವಿವಾಹ ಕಾಯ್ದೆ ಬಗ್ಗೆ, ನ್ಯಾಯವಾದಿಗಳೂ ಆದ ಮಕ್ಕಳ ಕಲ್ಯಾಣ ಸಮಿತಿಯ ಮಾಜಿ ಅಧ್ಯಕ್ಷರಾದ ಪ್ರಶಾಂತ ದೇಶಪಾಂಡೆ ಅವರು ಫೋಕ್ಷೆÆ ಕಾಯ್ದೆಯ ಕುರಿತಾಗಿ, ಕಾರ್ಮಿಕ ಅಧಿಕಾರಿ ಶ್ರೀಮತಿ ಉಮಾಶ್ರೀ ಕೋಳಿ ಅವರು ಬಾಲ ಕಾರ್ಮಿಕ ನಿಷೇಧ ಹಾಗೂ ನಿಯಂತ್ರಣ ಕಾಯ್ದೆಯ ಬಗ್ಗೆ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮ ಹಾಗೂ ಆತ್ಮಹತ್ಯೆ ತಡೆ ವಿಷಯದ ಕುರಿತಾಗಿ ಮನೋವೈದ್ಯ ಡಾ.ಮಂಜುನಾಥ ಮಸಳಿ ಅವರು ವಿಷಯ ಮಂಡಿಸಿದರು. 

 ಈ ಸಂದರ್ಭದಲ್ಲಿ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಬಸಮ್ಮ ಹತ್ತರಕಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಪ್ರಶಾಂತ ಪೂಜಾರಿ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ವೀರಯ್ಯ ಸಾಲಿಮಠ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಪುಂಡಲಿಕ ಮಾನವರ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸಿ.ಕೆ ಹೊಸಮನಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಕೆ.ಕೆ.ಚವ್ಹಾಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸಂಪತ್ ಗುಣಾರಿ, ಜಿಲ್ಲಾ ಕಾರ್ಮಿಕ ಇಲಾಖೆಯ ಅಧಿಕಾರಿ ಶ್ರೀಮತಿ ಉಮಾಶ್ರೀ ಕೋಳಿ, ವಾರ್ತಾಧಿಕಾರಿ ಅಮರೇಶ ದೊಡಮನಿ ಸೇರಿದಂತೆ ಜಿಲ್ಲೆಯ ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರು, ವಸತಿ ನಿಲಯಗಳ ವಾರ್ಡ್ನ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.