ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ವಿಜಯಪುರ ವಿಭಾಗದಿಂದ ಪ್ರತಿ ವರ್ಷದಂತೆ ಈ ವರ್ಷವು ಕೂಡ ಸವದತ್ತಿ ಹಾಗೂ ಬನಶಂಕರಿ ಜಾತ್ರೆ ನಿಮಿತ್ತ ಜ. 12 ರಿಂದ 17ರ ವರೆಗೆ ಬೆಳಗಾವಿ ಜಿಲ್ಲೆಯ ಸವದತ್ತಿಯ ಯಲಮ್ಮದೇವಿ ಜಾತ್ರೆ ಹಾಗೂ ಜ.13 ರಿಂದ 18ರ ವರೆಗೆ ಬಾಗಲಕೋಟೆ ಜಿಲ್ಲೆಯ ಬದಾಮಿಯ ಬನಶಂಕರಿ ದೇವಿ ಜಾತ್ರೆ ನಿಮಿತ್ತ ಜಾತ್ರೆಗೆ ತೆರಳುವ ಭಕ್ತಾದಿಗಳಿಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ವಿಜಯಪುರ ವಿಭಾಗದಿಂದ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ.
ಕೇಂದ್ರ ಬಸ್ ನಿಲ್ದಾಣ, ಇಂಡಿ, ಸಿಂದಗಿ, ಮುದ್ದೇಬಿಹಾಳ, ತಾಳಿಕೋಟ, ಬಸವನಬಾಗೇವಾಡಿ ಹಾಗೂ ನಿಡಗುಂದಿ ಬಸ್ ನಿಲ್ದಾಣದಿಂದ ವಿಶೇಷ ಸಾರಿಗೆ ಕಾರ್ಯಾಚರಣೆ ಮಾಡಲಾಗುತ್ತಿದ್ದು, ಪ್ರಯಾಣಿಕರು ಇದರ ಸದುಪಯೋಗ ಪಡೆಸಿಕೊಳ್ಳುವಂತೆ ವಿನಂತಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ವಿಜಯಪುರ 1ನೇ ಘಟಕದ ವ್ಯವಸ್ಥಾಪಕರ (ಮೊ. 7760992263), 2ನೇ ಘಟಕದ (ಮೊ.7760992264), ಇಂಡಿ (ಮೊ.7760992265), ಸಿಂದಗಿ (ಮೊ.7760992266), ಮುದ್ದೇಬಿಹಾಳ (ಮೊ.7760992267), ತಾಳಿಕೋಟ (ಮೊ.7760992268), ಬಸವನಬಾಗೇವಾಡಿ (ಮೊ.7760992269), ವಿಜಯಪುರ ಕೇಂದ್ರ ಬಸ್ ನಿಲ್ದಾಣಾಧಿಕಾರಿ (ಮೊ. 7760992258) ಮತ್ತು ವಿಜಯಪುರದ ಕೇಂದ್ರ ಬಸ್ ನಿಲ್ದಾಣದ ಸ್ಥಿರ (ದೂರವಾಣಿ ಸಂಖ್ಯೆ: 08352-251344)ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.