Friday, January 17, 2025

ಗೆಜೆಟೆಡ್ ಪ್ರೊಬ್ರೇಷನರ್ ಪರೀಕ್ಷೆ: ಅಚ್ಚುಕಟ್ಟಾಗಿ ನಡೆಸುವಂತೆ ಸೂಚನೆ

ವಿಜಯಪುರ: ಕರ್ನಾಟಕ ಲೋಕಸೇವಾ ಆಯೋಗ ವತಿಯಿಂದ ವಿವಿಧ ಇಲಾಖೆಗಳಲ್ಲಿನ ಗ್ರೂಪ್ ಬಿ ವೃಂದದ ಹುದ್ದೆಗಳಿಗೆ ನಡೆಸಲಿರುವ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳು ವ್ಯವಸ್ಥಿತ ಹಾಗೂ ಅತ್ಯಂತ ಎಚ್ಚರಿಕೆ ಹಾಗೂ ಸೂಕ್ಷö್ಮವಾಗಿ, ಪಾರದರ್ಶಕತೆಯಿಂದ ನಡೆಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡ 2023-24ನೇ ಸಾಲಿನ ಗೆಜೆಟೆಡ್ ಪ್ರೊಬ್ರೇಷನರ್ ಗ್ರೂಪ್ ಬಿ ವೃಂದದ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜ. 19 ರಂದು ನಡೆಯುವ 21 ಕೇಂದ್ರಗಳಲ್ಲಿ ಒಟ್ಟು 8599 ಅಭ್ಯರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ. ಅಂದು ಬೆಳಗ್ಗೆ 10 ಗಂಟೆಯಿAದ 11.30 ಗಂಟೆಯ ವರೆಗೆ ಸಾಮಾನ್ಯ ಪರೀಕ್ಷೆ ಹಾಗೂ ಜ. 25 ರಂದು ನಡೆಯುವ 20 ಕೇಂದ್ರಗಳಲ್ಲಿ ಒಟ್ಟು 8011 ಅಭ್ಯರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದು ಮಧ್ಯಾಹ್ನ 3 ರಿಂದ 5 ಗಂಟೆ ವರೆಗೆ ನಿರ್ದಿಷ್ಟ ಪಡಿಸಿದ್ದ ಪರೀಕ್ಷೆ ಜರುಗಲಿದೆ. ಅಭ್ಯರ್ಥಿಗಳು ಪರೀಕ್ಷಾ ದಿನಗಳಂದು ಅಧಿವೇಶನದ ಪರೀಕ್ಷೆ ಪ್ರಾರಂಭವಾಗುವ 2 ಗಂಟೆ ಮೊದಲು ಕಡ್ಡಾಯವಾಗಿ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು. ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗುತ್ತದೆ ಎಂದರು.

ಪರೀಕ್ಷಾ ಕೇಂದ್ರಗಳಿಗೆ ಉಪಕೇಂದ್ರಗಳ ಮೇಲ್ವಿಚಾರಣೆಗೆ ಓರ್ವ ಎ ಹಾಗೂ ಬಿ ದರ್ಜೆಯ ಅಧಿಕಾರಿಯನ್ನು ನೇಮಿಸಿವುದು ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆ ಕೊಂಡೊಯ್ಯಲು ಮಾರ್ಗಾಧಿಕಾರಿಯನ್ನು ನೇಮಿಸಿ ಅವರಿಗೆ ಬೆಂಗಾವಲು ಕಾರ್ಯಕ್ಕಾಗಿ ಓರ್ವ ಸಶಸ್ತç ಪೊಲೀಸ್ ಸಿಬ್ಬಂದಿ, ಗ್ರೂಪ್-ಡಿ ಸಿಬ್ಬಂದಿ, ವಾಹನÀದ ವ್ಯವಸ್ಥೆಗೆ ಅವರು ಸೂಚನೆ ನೀಡಿದರು.

ಅಭ್ಯರ್ಥಿಗಳನ್ನು ಕಟ್ಟುನಿಟ್ಟಾಗಿ ತಪಾಸಣೆಗೊಳಪಡಿಸಬೇಕು. ಅಭ್ಯರ್ಥಿಗಳ ಯಾವುದೇ ಎಲೆಕ್ಟಾçನಿಕ್ ಡಿವೈಸ್, ಮೈಕ್ರೋಪೂನ್ ಇನ್ನಿತರ ಉಪಕರಣ ಬಳಸದಿರುವ ಬಗ್ಗೆ ತಪಾಸಣೆ ನಡೆಸಬೇಕು. ಪರೀಕ್ಷಾ ಹಿಂದಿನ ದಿನ ಸಿಸಿಟಿವಿ ಕ್ಯಾಮರಾ ಬಾಡಿ ಕ್ಯಾಮರಾ, ಪ್ರಿಸ್ಕಿಂಗ್, ಮುಖ ಚಹರೆ ಮತ್ತು ಜಾಮರ್ ಗಳನ್ನು ಉಪ ಪರೀಕ್ಷಾ ಕೇಂದ್ರದ ಪರೀಕ್ಷಾ ಕೊಠಡಿಗಳಲ್ಲಿ ಅಳವಡಿಸುವುದು, ಪರೀಕ್ಷಾ ದಿನದಂದು ಅವುಗಳು ಕಾರ್ಯನಿರ್ವಹಿಸುತ್ತಿರುವ ಕುರಿತು ಪರಿಶೀಲಿಸಿಕೊಳ್ಳಬೇಕು ಎಂದರು.

ತಹಶೀಲ್ದಾರರು, ಡಿಡಿಪಿಐ (ಆಡಳಿತ) ಟಿ.ಎಸ್.ಕೋಲಾರ್, ಖಜಾನೆ ಇಲಾಖೆಯ ಉಪ ನಿರ್ದೇಶಕ ಹನುಮಂತ ಕಾಲತಿಪ್ಪಿ, ವೀಕ್ಷಕರು, ಪ್ರಶ್ನೇ ಪತ್ರಿಕೆ ವಿತರಣಾ ತಂಡ, ಪರೀಕ್ಷಾ ಕೇಂದ್ರಗಳ ಮೇಲ್ವಿಚಾರಕ, ಮಾರ್ಗಾಧಿಕಾರಿ, ಸ್ಥಾನಿಕ ಜಾಗೃತ ದಳದವರು ಹಾಗೂ ಇತರ ಅಧಿಕಾರಿಗಳು ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.



ಜ. 25 ರಂದು ರಾಷ್ಟ್ರೀಯ ಮತದಾರರ ದಿನಾಚರಣೆ- 2025


ವಿಜಯಪುರ: ಭಾರತ ಚುನಾವಣಾ ಆಯೋಗವು ಚುನಾವಣೆ ಕುರಿತ ಮತದಾನಕ್ಕಿಂತ ಇನ್ನೊಂದಿಲ್ಲ, ನಾನು ಖಚಿತವಾಗಿ ಮತದಾನ ಮಾಡುವೆ ಎಂಬ ಧ್ಯೇಯವಾಕ್ಯವನ್ನು ಜ.25 ರಂದು ತಮ್ಮ ತಮ್ಮ ಕಚೇರಿಯ ಪತ್ರ ವ್ಯವಹಾರಗಳಲ್ಲಿ ಬಳಕೆ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಹೇಳಿದರು.

ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜ. 25 ರಂದು ನಡೆಯುವು 15 ನೇ ರಾಷ್ಟ್ರೀಯ ಮತದಾರರ ದಿನಾಚರಣೆ ನಿಮಿತ್ತ ಹಮ್ಮಿಕೊಂಡ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸರ್ಕಾರಿ ಹಾಗೂ ಅಧೀನ ಕಚೇರಿಗಳಲ್ಲ್ಲಿ ಅಂದು ಬೆಳಗ್ಗೆ 11 ಗಂಟೆಗೆ ಮತದಾರರ ಪ್ರತಿಜ್ಞಾ ವಿಧಿ ಬೋಧನೆ ಬೋಧಿಸುವುದರ ಜೊತೆಗೆ ಛಾಯಾಚಿತ್ರ ತೆಗೆದು ಪ್ರಚಾರ ಪಡಿಸಬೇಕು. ಸಾಮಾಜಿಕ ಸೇವಾ ಸಂಸ್ಥೆಗಳು, ಯುವ ಸ್ವಯಂ ಸೇವಾ ಸಂಸ್ಥೆಗಳು, ಎನ್‍ಎಸ್‍ಎಸ್, ಎನ್‍ಸಿಸಿ ಸ್ಕೌಟ್ ಮತ್ತು ಗೈಡ್ಸ್. ನೆಹರು ಯುವಕ ಕೇಂದ್ರ ಸೇರಿದಂತೆ ರಾಷ್ಟ್ರೀಯ ಮತದಾರರ ದಿನಾಚರಣೆ 2025 ರ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸೂಚಿಸಿದರು.

ಕಾರ್ಯಕ್ರಮಗಳನ್ನು ಜಿಲ್ಲಾ ಪಂಚಾಯಿತಿ ಸಭಾಂಗಣದ ವೇದಿಕೆ ಆಯೋಜಿಸಬೇಕು, ವೇದಿಕ ಕಾರ್ಯಕ್ರಮ ಮುಂಚೆ ಜಾಥಾ ಕಾರ್ಯಕ್ರಮ ಏರ್ಪಡಿಸುವುದು, ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಚುನಾವಣೆಯ ಮತದಾನ ಕುರಿತು ಪ್ರಬಂಧ ಸ್ಪರ್ಧೇ ಏರ್ಪಡಿಸಬೇಕು, ಸ್ಪರ್ಧೇಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಿಸಲು ಕ್ರಮ ವಹಿಸಬೇಕು ಎಂದರು.

ಪತ್ರಿಕೆ, ರೇಡಿಯೋ, ಟಿವಿ ಸಾಮಾಜಿಕ ಜಾಲತಾಣ ಹಾಗೂ ಪರಸ್ಪರ ಸಂವಹನ ಮೂಲಕ ವ್ಯಾಪಕ ಪ್ರಚಾರ ಕೈಗೊಳ್ಳುವುದು ಭಾವಚಿತ್ರವಿರುವ ಮತದಾರರ ಗುರುತಿನ ಚೀಟಿ ವಿತರಿಸುವುದು ಅಂಚೆ ಮತಪತ್ರ, ಮತದಾರರಿಗೆ ಮತ್ತು ಮತಗಟ್ಟೆಗಳಲ್ಲಿ ಒದಗಿಸಿರುವ ಮೂಲಭೂತ ಸೌಲಭ್ಯಗಳು, ಇವಿಎಮ್, ವಿವಿ ಪ್ಯಾಟ್, ಓಟರ್ ಹೆಲ್ಪಲೈನ್ ನೈತಿಕ ಮತದಾನ ಇತ್ಯಾದಿಗಳ ಕುರಿತು ಜಾಗೃತಿ ಚಿತ್ರಗಳನ್ನು ಪ್ರದರ್ಶಿಸುವುದು ಇದರ ಜೊತೆಗೆ ಸ್ವೀಪ್ ಕಾರ್ಯಕ್ರಮಗಳು ಕೂಡ ಒಂದು ಭಾಗವಾಗಿವೆ ಎಂದರು.

ಜ.30 ರಂದು ಹುತಾತ್ಮ ದಿನಾಚರಣೆ: ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪ್ರಾಣತೆತ್ತು ಹುತಾತ್ಮರಾದ ಮಹಣೀಯರ ಸ್ಮರಣಾರ್ಥ ಜ. 30 ರಂದು ಜಿಲ್ಲಾಡಳಿತ ವತಿಯಿಂದ ಪರ್ವಾಹ್ನ 11.2 ಕ್ಕೆ ನಗರದ ಮೀನಾಕ್ಷೀ ವೃತ್ತದಲ್ಲಿ ಆಚರಿಸಲು ನಿರ್ಧರಿಸಲಾಯಿತು.

ವೇದಿಕೆ ಕಾರ್ಯಕ್ರಮದಲ್ಲಿ ಶಿಷ್ಟಾಚರದಂತೆ ಆಹ್ವಾನ ನೀಡುವುದು, ಭಾರತದ ಸ್ವಾತಂತ್ರಕ್ಕಾಗಿ ಹೋರಾಟಗಾರರ ಪಾತ್ರವನ್ನು ತಿಳಿಸುವಂತಹ ಭಾಷಣ, ಚರ್ಚೆಗಳನ್ನು ಏರ್ಪಡಿಸುವುದು ಹಾಗೂ ಪ್ರಾರ್ಥನೆ ಸರ್ವಧರ್ಮ ಭಜನೆ ಕಾರ್ಯಕ್ರಮ ಆಯೋಜಿಸಲು ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಈ ಸಂದರ್ಭದಲ್ಲಿ ಸೂಚಿಸಲಾಯಿತು.

ಸಭೆಯಲ್ಲಿ ಹೆಚ್ಚುವರಿ ಪೆÇಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ವಿಜಯಕುಮಾರ ಆಜೂರ, ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಸಂಘಟನೆ ಮುಖಂಡರು ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.



18-01-2025 EE DIVASA KANNADA DAILY NEWS PAPER

17-01-2025 EE DIVASA KANNADA DAILY NEWS PAPER