ವಿಜಯಪುರ: ಇಂದಿನ ಗಣರಾಜ್ಯೋತ್ಸವ ಕೇವಲ ಸಂಭ್ರಮದ ದಿನ ಮಾತ್ರವಲ್ಲ. ಭಾರತೀಯರ ಪಾಲಿಗೆ ಆತ್ಮಾವಲೋಕನ ಹಾಗೂ ಸಂಕಲ್ಪದ ಸುದಿನ ಎಂದು ವಿಜಯಪುರದ ಛತ್ರಪತಿ ಶಿವಾಜಿ ಮಹಾರಾಜ ಶಿಕ್ಷಣ ಸಂಸ್ಥೆ ಹಾಗೂ ವೀರ ಶಿವಾಜಿ ಡಿಫೆನ್ಸ್ ಅಕಾಡೆಮಿ ಅಧ್ಯಕ್ಷ ಶಿವಾಜಿ ಗಾಯಕವಾಡ ಹೇಳಿದರು. ಅವರು ಇಂದು ನಗರದ ರವೀಂದ್ರನಾಥ ಠಾಗೋರ್ ಶಾಲಾ ಕಾಲೇಜಿನ ಆವರಣದಲ್ಲಿ 76 ನೇ ಗಣರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ನೇರವೇರಿಸಿ ಮಾತನಾಡಿದರು. ಭಾರತೀಯ ಪಾಲಿಗೆ ಜನವರಿ 26 ಹೆಮ್ಮೆಯ ದಿನವಾಗಿದ್ದು, ಸ್ವಾತಂತ್ರ್ಯ ಸಿಕ್ಕ ದಿನವನ್ನು ಎಷ್ಟು ಸಂಭ್ರಮದಿಂದ ಆಚರಿಸುತ್ತೇವೋ ಅಷ್ಟೇ ಸಂಭ್ರಮದಿಂದ ಈ ದಿನವನ್ನು ಆಚರಿಸುತ್ತೇವೆ. ದೇಶದ ಸಂವಿಧಾನ ಅಸ್ತಿತ್ವಕ್ಕೆ ಬಂದ ದಿನವಾಗಿದ್ದು, ಜನವರಿ 26 ರಂದು ಈ ಐತಿಹಾಸಿಕ ಕ್ಷಣವನ್ನು ಆಚರಿಸುವ ಮೂಲಕ ನೆನಪಿಸಿಕೊಳ್ಳುತ್ತೇವೆ. ಈ ವರ್ಷ 75ನೇ ಗಣರಾಜ್ಯೋತ್ಸವ ದಿನವನ್ನು ಆಚರಿಸುತ್ತಿದ್ದು, ಈ ದಿನದ ಮಹತ್ವ ಹಾಗೂ ಇತಿಹಾಸ ಎಲ್ಲರಿಗೂ ಗೊತ್ತಿರಬೇಕು ಎಂದು ತಿಳಿಸಿದರು. ವಿದ್ಯಾರ್ಥಿಗಳು ಇತ್ತಿಚೆಗೆ ಮೊಬೈಲ್ ಎಂಬ ಮಾಯಾಲೋಕದ ಜಾಲದಲ್ಲಿ ಬಿದ್ದು ತಮ್ಮ ಭವಿಷ್ಯ ಹಾಳು ಮಾಡಿಕೊಳ್ಳುತ್ತಿದ್ದಿರಿ. ಮೊಬೈಲ್ ಮಾಯೆ ಎಂಬ ಜಾಲದಿಂದ ಹೊರ ಬಂದು ಉತ್ತಮ ಭವಿಷ್ಯ ನಿರ್ಮಿಸಿಕೊಳ್ಳಿ. ನಿಮ್ಮ ಕುಟುಂಬ, ದೇಶ ರಾಜ್ಯದ ಏಳಿಗೆಯಲ್ಲಿ ನಿಮ್ಮ ಪಾತ್ರ ಮಹತ್ವದ್ದು, ಆದ್ದರಿಂದ ಶಿಕ್ಷಣದ ಕಡೆ ಹೆಚ್ಚಿನ ಗಮನ ಹರಿಸಿ ಎಂದು ಕರೆ ನೀಡಿದರು. ಮುಖ್ಯ ಅತಿಥಿಯಾಗಿ ಸಂಸ್ಥೆಯ ಕಾರ್ಯದರ್ಶಿ ರೀತಾ ಗಾಯಕವಾಡ, ಪ್ರಿನ್ಸಿಪಲ್ ಶ್ರೀನಿವಾಸ ಪುಕಾಳೆ, ಹೆಡ್ ಮಾಸ್ಟರ್ ಶಿವರಾಮ ಜಮ್ಮನಕಟ್ಟಿ, ಪ್ರಲ್ಹಾದ ಹೂಗಾರ ವೇದಿಕೆ ಮೇಲಿದ್ದರು. ಧ್ವಜಾರೋಹಣ ಬಳಿಕ ವಿದ್ಯಾರ್ಥಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಇದೇ ಪ್ರಥಮ ಬಾರಿಗೆ ರವೀಂದ್ರನಾಥ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮ ಪಥ ಸಂಚಲನದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದ ಬಳಿಕ ದೇಶಭಕ್ತಿಯ ಜಾಗೃತಿ ಮನರಂಜನಾ ಕಾರ್ಯಕ್ರಮಗಳು ಜರುಗಿದವು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.