ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ
ವಿಜಯಪುರ: ಭೀಮಾತೀರದ ನಟೋರಿಯಸ್ ಹಂತಕ ಬಾಗಪ್ಪ ಹರಿಜನ ಬರ್ಬರವಾಗಿ ಹತ್ಯೆಯಾಗಿರುವ ಘಟನೆ ನಗರದ ರೇಡಿಯೋ ಕೇಂದ್ರ ಬಳಿ ಮಂಗಳವಾರ ರಾತ್ರಿ ನಡೆದಿದೆ.
ಎರಡು ದಶಕಗಳ ಹಿಂದೆ ಭೀಮಾತೀರದ ನಟೋರಿಯಸ್ ಹಂತಕನೆಂದೇ ಕುಖ್ಯಾತಿ ಪಡೆದಿದ್ದ ಚಂದಪ್ಪ ಹರಿಜನ ಅಪ್ಪಟ ಶಿಷ್ಯನಾಗಿದ್ದ ಬಾಗಪ್ಪ ಹರಿಜನನ ಮೇಲೆ ಈ ಹಿಂದೆಯು ಗುಂಡಿನ ದಾಳಿ ನಡೆದಿತ್ತು, ಕೆಲ ವರ್ಷಗಳ ಚಿಕಿತ್ಸೆ ನಂತರ ಚೇತರಿಸಿಕೊಂಡಿದ್ದ, ಸದ್ಯ ಆಗಂತುಕರ ಗುಂಡಿಗೆ ಬಲಿಯಾಗಿದ್ದಾನೆ.
ಮಾರಕಾಸ್ತ್ರಗಳಿಂದ ಬಾಗಪ್ಪನನ್ನು ಹತ್ಯೆಗೈದಿದ್ದು, ಬಾಗಪ್ಪನ ಎಡಗೈ ಮುಂಗೈ ಕಟ್ ಮಾಡಿದ್ದು, ಮುಖ ಹಾಗೂ ತಲೆಗೆ ಹೊಡೆದು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ.
ಘಟನಾ ಸ್ಥಳಕ್ಕೆ ಎಸ್ಪಿ ಲಕ್ಷ್ಮಣ ನಿಂಬರಗಿ ಭೇಟಿ ನೀಡಿ ಪರಿಶೀಲಿಸಿದರು.
ಗಾಂಧಿಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
