Sunday, February 16, 2025

ಬೆಂಗಳೂರು ವಿವಿ: ಚಲಪತಿ ಕೆ. ಅವರಿಗೆ ಪಿಎಚ್‌.ಡಿ ಪ್ರದಾನ


ಬೆಂಗಳೂರು:  ಬೆಂಗಳೂರು ವಿಶ್ವವಿದ್ಯಾಲಯದ ಯುನಿವರ್ಸಿಟಿ ವಿಶ್ವೇಶ್ವರಯ್ಯ ಕಾಲೇಜ್ ಆಫ್ ಇಂಜಿನಿಯರಿಂಗ್"ನ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಸಂಶೋಧನಾ ವಿದ್ಯಾರ್ಥಿಯಾಗಿರುವ ಚಲಪತಿ ಕೆ. ಅವರಿಗೆ ಪಿಎಚ್.ಡಿ ಪ್ರದಾನ ಮಾಡಲಾಗಿದೆ.

ಬೆಂಗಳೂರು ವಿವಿಯ "ಯುನಿವರ್ಸಿಟಿ ವಿಶ್ವೇಶ್ವರಯ್ಯ ಕಾಲೇಜ್ ಆಫ್ ಇಂಜಿನಿಯರಿಂಗ್"ನ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಸಂಶೋಧನಾ ವಿದ್ಯಾರ್ಥಿ ಚಲಪತಿ ಕೆ. ಅವರು ಯುವಿಸಿಇ, ಸಿವಿಲ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕರಾದ ಡಾ. ಇನಾಯತುಲ್ಲಾ ಎಂ ಇವರ ಮಾರ್ಗದರ್ಶನದಲ್ಲಿ ಮಂಡಿಸಿದ "ಕ್ವಾಂಟೇಟಿವ್ ಅಂಡ್ ಕ್ವಾಲಿಟಿಯೇಟಿವ್ ಅನಾಲಿಸಿಸ್ ಆಫ್ ಸೀಸೊನಾಲ್ ಅಂಡ್ ಸ್ಪೆಷಿಯಲ್ ವೇರಿಯೇಷನ್ಸ್ ಇನ್ ಸರ್ಫೇಸ್ ಅಂಡ್ ಗ್ರೌಂಡ್ ವಾಟರ್ ಅಟ್ ರಿವರ್ ಬೇಸಿನ್ ಸ್ಕೇಲ್" ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಪಿಎಚ್.ಡಿ ಪದವಿ ಪ್ರದಾನ ಮಾಡಲಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.

 ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರ ನ್ಯಾಯಾಲಯ ಉದ್ಘಾಟನೆ

ವಿಜಯಪುರ : ದೇಶದ ಕಾನೂನು ಸುವ್ಯಸ್ಥೆ ನ್ಯಾಯಾಂಗ ಪದ್ದತಿ ಬಹಳ ಬಲಿಷ್ಟವಾಗಿರಬೇಕು ಅದು ಅತ್ಯಗತ್ಯ ಅದು ಸಾಕಾರಗೊಳ್ಳಬೇಕಾದರೆ ನ್ಯಾಯಾಲಯಗಳ ಪಾತ್ರ ಬಹಳ ಮುಖ್ಯ ಎಂದು ಕರ್ನಾಟಕ ಉಚ್ಚ ನ್ಯಾಯಾಲಯ ಹಾಗೂ ವಿಜಯಪುರ ಆಡಳಿತಾತ್ಮಕ ನ್ಯಾಯಮೂರ್ತಿಗಳಾದಾದ ಎಂ.ಐ ಅರುಣ ಹೇಳಿದರು.

ಮುದ್ದೇಬಿಹಾಳ ನಗರದ ಜಿಲ್ಲಾ ನ್ಯಾಯಾಂಗ ಇಲಾಖೆ, ಲೋಕೋಪಯೋಗಿ ಇಲಾಖೆ, ಹಾಗೂ ನ್ಯಾಯವಾದಿಗಳ ಸಂಘ ಮುದ್ದೇಬಿಹಾಳ ಇವರ ಸಂಯುಕ್ತಾಶ್ರಯದಲ್ಲಿ ನೂತನವಾಗಿ ಸೃಜಿಸಲ್ಪಟ್ಟ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರ ನ್ಯಾಯಾಲಯ ವಿಜಯಪುರ (ಕಾರ್ಯಸ್ಥಳ: ಮುದ್ದೇಬಿಹಾಳ) ಮತ್ತು ಮುದ್ದೇಬಿಹಾಳ ನ್ಯಾಯಾಲಯದ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಲಾ ಛೇಂರ‍್ಸ್ ಮತ್ತು ಸಹಾಯಕ ಸರ್ಕಾರಿ ಅಭಿಯೋಜಕರ ಕಚೇರಿ ಕಟ್ಟಡ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು. ನಾವು ಜನಸಾಮಾನ್ಯರ ಬಾಗಿಲಿಗೆ ನ್ಯಾಯ ಒದಗಿಸಬೇಕಾದರೆ ನ್ಯಾಯಾಲಯಗಳ ವಿಕೇಂದ್ರೀಕರಣ ಹಾಗೂ ಅಲ್ಲಲ್ಲಿ ನ್ಯಾಯಾಲಯಗಳನ್ನು ಸ್ಥಾಪಿಸಬೇಕು ಈ ನಿಟ್ಟಿನಲ್ಲಿ ಮುದ್ದೇಬಿಹಾಳ ಹಾಗೂ ತಾಳಿಕೋಟೆಯ ನ್ಯಾಯಾಲಯಗಳಲ್ಲಿ ಹೆಚ್ಚಿನ ಪ್ರಕರಣಗಳು ಇದ್ದು ಇದಕ್ಕೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ನೂತನವಾಗಿ ಸೃಜಿಸಲ್ಪಟ್ಟ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದು ಇಲ್ಲಿ ಉದ್ಘಾಟನೆಯಾಗಿದೆ ಅದರೊಂದಿಗೆ ನ್ಯಾಯಾದೀಶರಿಗೆ ಉತ್ತಮ ಮೂಲಭೂತ ಸೌಲಭ್ಯಗಳು ಕೂಡ ದೊರಕುವ ಉದ್ದೇಶದಿಂದ ಲಾ ಛೆಂಬರನ್ನು ಕೂಡ ನಿರ್ಮಿಸಲಾಗಿದೆ ಒಂದು ಸಂತಸದ ವಿಷಯ ಎಂದು ಅವರು ಹೇಳಿದರು.

 ಕಕ್ಷಿದಾರರೊಂದಿಗೆ ಸಮರ್ಪಕವಾದ ಸಲಹೆಗಳನ್ನು ನೀಡಿ ಅವರೊಂದಿಗೆ ಜನಾನುರಾಗಿ ವರ್ತಿಸಿದಲ್ಲಿ ಮಾತ್ರ ನಾವು ಒಳ್ಳೆಯ ನ್ಯಾಯ ಒದಗಿಸಿಕೊಟ್ಟಂತೆ ಇಂದು ಎಲ್ಲ ರಂಗಗಳಲ್ಲಿಯೂ ಹಾಗೂ ಪ್ರತಿಯೊಂದು ವಿಚಾರದಲ್ಲಿ ಕಾನೂನು ಸಲಹೆ ಅತ್ಯವಶ್ಯಕವಾಗಿವೆ ಹೊಸ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಬೇಕು ಹಾಗೂ ಅದರೊಂದಿಗೆ ಹೊಂದಿಕೊಳ್ಳಬೇಕು ವಿಡೀಯೋ ಸಂವಾದಗಳ ಮೂಲಕವೂ ಕೂಡ ನಾವು ನಮ್ಮ ನ್ಯಾಯಗಳನ್ನು ಬಗೆಹರಿಸಿಕೊಳ್ಳಬಹುದಾಗಿದೆ ಇದರಿಂದ ಹಲವಾರು ಉಪಯೋಗಗಳಿವೆ ಜನಸಾಮಾನ್ಯರಿಗೆ ಉತ್ತಮ ನ್ಯಾಯ ಒದಗಿಸಲು ಅವರು ಹೆಳಿದರು.

ಕಾನೂನು, ನ್ಯಾಯ, ಮಾನವಹಕ್ಕುಗಳು ಮತ್ತು ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಹೆಚ್.ಕೆ ಪಾಟೀಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಸರ್ಕಾರ 115 ಕೋರ್ಟಗಳನ್ನು ಸ್ಥಾಪಿಸಲು ಕ್ರಮ ವಹಿಸಲಾಗುತ್ತಿದೆ ಅದರೊಂದಿಗೆ 2200 ಹುದ್ದೆಗಳನ್ನು ಸೃಜಿಸಲಾಗುತ್ತಿದೆ. ವ್ಯಾಜ್ಯಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ನ್ಯಾಯಾಧೀಶರ ಹಾಗೂ ವಕೀಲರ ಪಾತ್ರ ಬಹಳ ಮುಖ್ಯ ಪ್ರತಿಯೊಬ್ಬರಿಗೂ ಉತ್ತಮ ನ್ಯಾಯ ಒದಗಿಸುವಂತೆ ಕಾನೂನುಗಳ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಕಕ್ಷಿದಾರರು ಹೆಚ್ಚು ಸಂಖ್ಯೆಗಳಲ್ಲಿ ನ್ಯಾಯಾಲಯಕ್ಕೆ ಆಗಮಿಸದೇ ಇರುವಂತೆ ನೋಡಿಕೊಳ್ಳಬೇಕು ನಮ್ಮ ವಕೀಲರು ಸಾಮಾಜಿಕವಾಗಿ ಕಳಕಳಿ ಹೊಂದಿ ಕಕ್ಷಿದಾರರಿಗೆ ಹಾಗೂ ಸಾಕ್ಷಿದಾರರಿಗೆ ಯೋಗ್ಯವಾದ ನ್ಯಾಯಸಮ್ಮತ ನ್ಯಾಯಗಳನ್ನು ಒದಗಿಸಲು ವ್ಯವಸ್ಥೆ ಮಾಡಿಕೊಳ್ಳಬೇಕು ನ್ಯಾಯದಾನ ವ್ಯವಸ್ಥೆಗೆ ಗೌರವ ಕೊಡುವಂತಾಗಬೇಕು ಹಾಗೂ ಈ ಭಾಗದ ಅಭಿವೃದ್ಧಿಗಾಗಿ ಎಲ್ಲ ರೀತಿಯ ಸಹಾಯ ಸಹಕಾರ ನೀಡುವುದಾಗಿ ಅವರು ಹೇಳಿದರು.

ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಹೆಚ್.ಪಿ ಸಂದೇಶ ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸಿ ಮಾತನಾಡಿದ ಅವರು ಈ ಬಾಗದ ರೈತರ ಕೋರ್ಟಗಳಲ್ಲಿ ವ್ಯಾಜ್ಯಗಳಿಗವೆ ಈ ಕಾರಣದಿಂದ ಈ ಭಾಗಕ್ಕೆ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರ ನ್ಯಾಯಾಲಯ ಅವಶ್ಯಕವಾಗಿದೆ ಈ ಬಾಗದ ಸಾರ್ವಜನಿಕರು ಜಿಲ್ಲಾ ಕೋರ್ಟಗೆ ಹೋಗಿ ಬರಬೇಕಾದಲ್ಲಿ ದೂರ ಕ್ರಮಿಸಬೇಕಾದ ಹಿನ್ನೆಲೆಯಲ್ಲಿ ಸಮಯ ಕೂಡ ವ್ಯರ್ಥವಾಗುತ್ತದೆ ಕಕ್ಷಿದಾರರ ಸಮಸ್ಯಗಳ ಅರಿತು ಅವರಿಗೆ ಸೂಕ್ತವಾದ ನ್ಯಾಯ ಒದಗಿಸಿ ಕೊಡುವ ನಿಟ್ಟಿನಲ್ಲಿ ಇಂದು ಉದ್ಘಾಟನೆಗೊಂಡ ನ್ಯಾಯಾಲಯ ಸಾರ್ಥಕವಾಗುತ್ತದೆ. ನಮ್ಮ ದೇಶಕ್ಕೆ ಸ್ವಾತಂತ್ರ ಒದಗಿಸಿಕೊಟ್ಟವರಲ್ಲಿ ನ್ಯಾಯಾದೀಶರ ಪಾತ್ರ ಬಹಳ ಅವರನ್ನು ಇಂದು ನಾವು ಸ್ಮರಿಸಬೇಕಾಗುತ್ತದೆ ನಾವು ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ದೊರಕುವಂತೆ ಹಾಗೂ ಸಮಾಜದ ದ್ವನಿಯಾಗಿ ನಮ್ಮ ವೃತ್ತಿಯನ್ನು ಮಾಡಬೇಕು ಜನರ ಹಿತವನ್ನು ಬಯಸುವವರು ದಾರ್ಶನಿಕರಾಗುತ್ತಾರೆ ದೇಶಕ್ಕಾಗಿ ಪ್ರತಿಯೊಬ್ಬ ವ್ಯಕ್ತಿಯು ದುಡಿಯಬೇಕು ಅಂದಾಗ ದೇಶ ಅಭಿವೃದ್ದಿ ಹೊಂದಲು ಸಾಧ್ಯ ಮಕ್ಕಳಿಗೆ ಉತ್ತಮ ಶಿಕ್ಷಣ, ಸಂಸ್ಕಾರ ನೀಡಿ ವಿದ್ವತ್ವವನ್ನು ಲೋಕ ಕಲ್ಯಾಣಕ್ಕೆ ಬಳಸಿಕೊಳ್ಳಬೇಕು ಎಂದು ಅವರು ಹೇಳಿದರು.

ಕರ್ನಾಟಕ ಸಾಬೂನು ಮತ್ತು ಮನಾರ್ಜಕಜ ನಿಗಮದ ಅಧ್ಯಕ್ಷರು ಹಾಗೂ ಮುದ್ದೇಬಿಹಾಳ ಕ್ಷೇತ್ರದ ಶಾಸಕರಾದ ಸಿ.ಎಸ್. ನಾಡಗೌಡ(ಅಪ್ಪಾಜಿ) ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡಿ ಈ ಬಾಗದಲ್ಲಿ ಅತಿ ಹೆಚ್ಚು ಭೂ ಸ್ವಾಧೀನ ಕುರಿತು ಹೆಚ್ಚು ವ್ಯಾಜ್ಯಗಳಿವೆ, ವ್ಯಾಜ್ಯಗಳು ಆದಷ್ಟು ಬೇಗ ಇತ್ಯರ್ಥಗೊಳಿಸುವಂತಾಗಬೇಕು. ತಾಳಿಕೋಟೆಗೆ ನೂತನ ನ್ಯಾಯಾಲಯಗಳ ಸಂಕೀರ್ಣ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು ಸಿ.ಎಸ್.ಆರ್ ಅನುದಾನದಡಿ ವಕೀಲರಿಗೆ ಆಧುನಿಕ ಉಪಕರಣಳನ್ನು ಅಳವಡಿಸಲು ಕ್ರಮ ವಹಿಸಲಾಗುವುದು ಎಂದು ಅವರು ಹೇಳಿದರು.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶಿವಾಜಿ ಅನಂತ ನಲವಡೆ ಸ್ವಾಗತಿಸಿದರು, ಮುದ್ದೇಬಿಹಾಳ ನ್ಯಾಯವಾದಿಗಳ ಸಂಘದ ಅಧ್ಯಕ್ಷರಾದ ಶಶಿಕಾಂತ ಶಿವಪ್ಪ ಮಾಲಗತ್ತಿ ಪ್ರಾಸ್ತಾವಿಕ ಮಾತನಾಡಿದರು.

ಕಾರ್ಯಕ್ರಮದಲ್ಲಿ ನ್ಯಾಯವಾದಿಗಳ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಪಿ.ಬಿ ಗೌಡರ ತಾಲೂಕು ನ್ಯಾಯವಾದಿಗಳ ಸಂಘದ ಅಧ್ಯಕ್ಷರುಗಳು, ಕಾರ್ಯಕಾರಿ ಸಮಿತಿ ಸದಸ್ಯರು, ನ್ಯಾಯವಾದಿಗಳ ಸಂಘ ಸದಸ್ಯರುಗಳು, ನ್ಯಾಯಾಲಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಗೂ ಇತರರು ಉಪಸ್ಥಿತರಿದ್ದರು.


 ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಎಸ್.ಸಿ/ ಎಸ್.ಟಿ ಜನಾಂಗದ ಶ್ರೇಯಸ್ಸಿಗೆ ಶ್ರಮಿಸಿದವರಿಗೆ ಪ್ರಶಸ್ತಿಗೆ ಅರ್ಜಿ ಆಹ್ವಾನ

ವಿಜಯಪುರ : ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಜನಾಂಗದವರ ಶ್ರೇಯಸ್ಸಿಗಾಗಿ, ಪ್ರೋತ್ಸಾಹಿಸಿ, ಶ್ರಮಿಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳನ್ನು ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸಲು ಉದ್ಧೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಏಪ್ರಿಲ್ 05 ರಂದು ಡಾ. ಬಾಬು ಜಗಜೀವನ ರಾಂ ಅವರ 118ನೇ ಹಾಗೂ ಏಪ್ರಿಲ್ 14ರಂದು ಡಾ. ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚಾರಣೆಯನ್ನು ಆಚರಿಸಲಾಗುತ್ತಿದ್ದು, ಈ ಸಂದರ್ಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಪ್ರಶಸ್ತಿಗೆ ಅರ್ಜಿ ಸಲ್ಲಿಸ ಬಯಸುವವರು ನಿಗದಿತ ಅರ್ಜಿ ನಮೂನೆಯನ್ನು ಉಪ ನಿರ್ದೇಶಕರ ಕಛೇರಿ ಸಮಾಜ ಕಲ್ಯಾಣ ಇಲಾಖೆ ವಿಜಯಪುರ ಹಾಗೂ ತಾಲೂಕಿನ ಸಮಾಜ ಕಲ್ಯಾಣ ಅಧಿಕಾರಿಗಳ ಸಹಾಯಕ ನಿರ್ದೇಶಕರ ಕಛೇರಿಯಿಂದ ಪಡೆದು, ದಿನಾಂಕ 25-02-2025ರ ಒಳಗಾಗಿ ಸಲ್ಲಿಸಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಛೇರಿ ವಿಜಯಪುರ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.