ವಿಜಯಪುರ: ಸಿಂದಗಿ ತಾಲೂಕಿನ ಬೋರಗಿ ಗ್ರಾಮದ ಆರಕ್ಷಕ ಮೌಲಾಲಿ ಆಲಗೂರ ಬರೆದ 'ನಲುಗದಿರಲಿ ಪರಿಸರ' ಶಿಶು ಗೀತೆಗಳ ಸಂಕಲನಕ್ಕೆ ವಸುದೇವ ಭೂಪಾಲಂ ದತ್ತಿ ಪುರಸ್ಕಾರ ದೊರೆತಿದೆ.
ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ವಿವಿಧ 52 ದತ್ತಿ ಪ್ರಶಸ್ತಿಗಾಗಿ ಬರಹಗಾರರಿಂದ 2023ರಲ್ಲಿ ಪ್ರಕಟವಾದ ಕೃತಿಗಳನ್ನು ಆಹ್ವಾನಿಸಿತ್ತು. ಮಕ್ಕಳ ಸಾಹಿತ್ಯ ವಿಭಾಗದಲ್ಲಿ ಮೌಲಾಲಿ ಕೃತಿಗೆ ದತ್ತಿ ಪುರಸ್ಕಾರ ದೊರೆತಿದೆ. ದೇಶ ವಿದೇಶಗಳಿಂದ 4 ಸಾವಿರಕ್ಕೂ ಅಧಿಕ ಕೃತಿಗಳು ಸಲ್ಲಿಕೆಯಾಗಿದ್ದು, 12 ಜನರ ಪರಿಣತರ ಸಮಿತಿ ಆಯ್ಕೆ ಮಾಡಿದ ಪಟ್ಟಿಯನ್ನು ಕಸಾಪ ರಾಜ್ಯಾಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ನೇತೃತ್ವದ ತಂಡ ಪರಿಶೀಲಿಸಿ ಅಂತಿಮ ಪಟ್ಟಿ ಬಿಡುಗಡೆ ಮಾಡಿದೆ. ಶೀಘ್ರದಲ್ಲೇ ದತ್ತಿ ಪ್ರಶಸ್ತಿಗೆ ಆಯ್ಕೆಯಾದ ಬರಹಗಾರರಿಗೂ ಪ್ರಶಸ್ತಿ ಪ್ರದಾನ ಸಮಾರಂಭ ಏರ್ಪಡಿಸಲಾಗು ವುದು ಎಂದು ಕಸಾಪ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೌಲಾಲಿ ಆಲಗೂರ ಅವರಿಗೆ ಪ್ರಶಸ್ತಿ ದೊರೆತಿರುವುದಕ್ಕೆ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿ, ಸಿಬ್ಬಂದಿ ಹಾಗೂ ಸಿಂದಗಿ ಸಾಹಿತ್ಯ ಬಳಗ ಹರ್ಷ ವ್ಯಕ್ತಪಡಿಸಿದ್ದಾರೆ.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
