Tuesday, February 18, 2025

19-02-2025 EE DIVASA KANNADA DAILY NEWS PAPER

ಸರ್ಕಾರದ ಯೋಜನೆಗಳ ಲಾಭ ದೊರಕಿಸಿ ಅಲೆಮಾರಿ ಸಮುದಾಯವನ್ನು ಮುಖ್ಯವಾಹಿನಿಗೆ ತರಲು ಕ್ರಮ ವಹಿಸಿ : ಅಧ್ಯಕ್ಷೆ ಶ್ರೀಮತಿ ಪಲ್ಲವಿ ಜಿ.

ವಿಜಯಪುರ : ಸ್ವ ಉದ್ಯೋಗ, ವೃತ್ತಿ ಕೌಶಲ್ಯತೆ, ಶಿಕ್ಷಣಕ್ಕೆ ಆದ್ಯತೆ ನೀಡಿ, ಸರ್ಕಾರ ಜಾರಿಗೊಳಿಸಿರುವ ವಿವಿಧ ಆರ್ಥಿಕ ಬೆಂಬಲ ನೀಡುವ ಯೋಜನೆಗಳನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಲೆಮಾರಿ ಜನಾಂಗಕ್ಕೆ ದೊರಕಿಸಲು ಅಧಿಕಾರಿಗಳು ಇಚ್ಛಾಶಕ್ತಿ ಹಾಗೂ ಅಂತಕರಣದಿAದ ಕಾರ್ಯನಿರ್ವಹಿಸಿ ಇಂತಹ ಸಮುದಾಯದವನ್ನು ಮುಖ್ಯವಾಹಿನಿಗೆ ತರಲು ಶ್ರಮಿಸಬೇಕು ಎಂದು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಶ್ರೀಮತಿ ಪಲ್ಲವಿ ಜಿ. ಅವರು ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. 

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಈ ಸಮುದಾಯ ಆರ್ಥಿಕವಾಗಿ ಸದೃಢಗೊಳ್ಳುವುದರೊಂದಿಗೆ ಸಮಾಜದ ಮುಖ್ಯವಾಹಿನಿಗೆ ತರಲು ಅಧಿಕಾರಿಗಳು ಯೋಜನೆಗಳ ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಲೆಮಾರಿ ಸಮುದಾಯಗಳಿಗೆ ಸರ್ಕಾರ ನೀಡುವ ಆರ್ಥಿಕ ಬೆಂಬಲದ ಯೋಜನೆಗಳ ಬಗ್ಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸೂಕ್ತ ಜಾಗೃತಿ ಮೂಡಿಸುವಂತೆ ಅವರು ಸೂಚನೆ ನೀಡಿದರು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯಗಳ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಹಲವು ಯೋಜನೆಗಳನ್ನು ನೀಡಿದೆ. ಈ ಸಮುದಾಯದ ಜನರಿಗೆ ಸರ್ಕಾರದ ಯೋಜನೆಗಳ ಜಾಗೃತಿ ಅತ್ಯವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಯೋಜನೆಗಳ ಸಂಪೂರ್ಣ ಅರಿವನ್ನು ಜನರಲ್ಲಿ ಮೂಡಿಸಿ, ಅರ್ಹರಿಗೆ ಲಾಭ ದೊರಕಿಸಲು ಕ್ರಮ ವಹಿಸಬೇಕು ಎಂದು ಅವರು ಹೇಳಿದರು. 


ವಿವಿಧ ವಸತಿ ಶಾಲೆಗಳಲ್ಲಿ ಈ ಸಮುದಾಯ ಮಕ್ಕಳಿಗೆ ಆದ್ಯತೆಯ ಮೇರೆಗೆ ಯಾವುದೇ ಪ್ರವೇಶ ಪರೀಕ್ಷೆ ನಡೆಸದೇ ಪ್ರವೇಶಾವಕಾಶ ದೊರಕಿಸಲು ಸರ್ಕಾರ ಅವಕಾಶ ನೀಡಿದ್ದು, ಇದರ ಸದ್ಬಳಕೆಯಾಗಿ ಈ ಸಮುದಾಯದ ಮಕ್ಕಳು ಉನ್ನತ, ಗುಣಮಟ್ಟದ ಶಿಕ್ಷಣ ಪಡೆದುಕೊಂಡು, ಸ್ವಾವಲಂಬಿ ಜೀವನ ನಡೆಸಲು ಈ ಯೋಜನೆಗಳ ಮೂಲಕ ಅನುವು ಮಾಡಿಕೊಡಬೇಕು. ನಿಗಮದಿಂದ ದೊರೆಯುವ ಸರ್ಕಾರದ ಹಲವು ಸೌಲಭ್ಯ-ಸವಲತ್ತುಗಳನ್ನು ಅರ್ಹರಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಿ, ಅರ್ಹರು ಈ ಯೋಜನೆಗಳ ಲಾಭ ಪಡೆದುಕೊಳ್ಳುವಂತೆ ನೋಡಿಕೊಳ್ಳಬೇಕು ಎಂದು ಅವರು ಹೇಳಿದರು.

ಸಮಾಜ ಕಲ್ಯಾಣ ಇಲಾಖೆಯಿಂದ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಯೋಜನೆಗಳ ಕುರಿತು ಸೂಕ್ತ ಅರಿವು ಮೂಡಿಸಬೇಕು. ನಿವೇಶನ ರಹಿತ ಅಲೆಮಾರಿ ಕುಟುಂಬಗಳ ಸರ್ಕಾರಿ ಭೂಮಿಯನ್ನು ಗುರುತಿಸುವ ಕಾರ್ಯ ಕೈಗೊಳ್ಳಬೇಕು. ವಸತಿ ರಹಿತ-ವಸಹಿತರ ಸಮೀಕ್ಷೆ ಕೈಗೊಂಡು ವರದಿ ನೀಡುವಂತೆ ಅವರು ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಯಡಿ ನಿಗದಿಪಡಿಸಲಾದ ಭೌತಿಕ ಗುರಿಗಳಗನುಗುಣವಾಗಿ ವಿವಿಧ ಹಂತಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಆದ್ಯತೆಯ ಮೇಲೆ ಇತ್ಯರ್ಥಪಡಿಸಬೇಕು. ಉದ್ಯಮಶೀಲತಾ ಯೋಜನೆಯಡಿ ಫಲಾನುಭವಿಗಳ ಯೋಜನೆಯನ್ನು ಸಾಕಾರಗೊಳಿಸಬೇಕು. ಈ ಬಗ್ಗೆ ಬ್ಯಾಂಕ್‌ಗಳು ಸಹ ಅಗತ್ಯ ದಾಖಲೆಗಳನ್ನು ಪಡೆದು, ಸ್ವಾವಲಂಬಿ ಜೀವನ ನಡೆಸಲು ಸ್ವ ಉದ್ಯೋಗ ಕೈಗೊಳ್ಳಲು ಸಾಲ-ಸೌಲಭ್ಯ ಒದಗಿಸಲು ಕ್ರಮ ವಹಿಸಬೇಕು ಎಂದು ಅವರು ಸೂಚನೆ ನೀಡಿದರು. 

ಜಿಲ್ಲೆಯಲ್ಲಿ ಮೂರು ದಿನಗಳ ಕಾಲ ಪ್ರವಾಸ ಕೈಗೊಂಡು ಈ ಸಮುದಾಯಗಳ ವಿವಿಧ ಕಾಲನಿಗಳಿಗೆ ಭೇಟಿ ನೀಡಿ, ಕುಂದು-ಕೊರತೆಗಳನ್ನು ಆಲಿಸಲಾಯಿತು. ಕೊಲ್ಹಾರದಲ್ಲಿರುವ ಹರಿಣಶಿಕಾರಿ ಕಾಲನಿ, ಇಂಡಿಯ ಬಬಲಾದಿಯ ಚನ್ನದಾಸರ ಕಾಲನಿ, ಚವಡಿಹಾಳ, ಇಂಡಿ ಪಟ್ಟಣದ ಹರಿಣಶಿಕಾರಿ ಕಾಲನಿ, ಮಾವಿನಹಳ್ಳಿಯ ಚನ್ನದಾಸರ ಕಾಲನಿ, ವಿಜಯಪುರದ ಕುಂಚಿ-ಕೊರವರ ಓಣಿ, ಸಂಜಯ ಗಾಂಧಿ ಕಾಲನಿಯ ಹಂದಿಜೋಗಿ ಸಮುದಾಯದವರು ವಾಸಿಸುತ್ತಿರುವ ಕಾಲನಿಗಳಿಗೆ ಭೇಟಿ ನೀಡಿ, ಅವರ ಕುಂದು ಕೊರತೆಗಳನ್ನು ಆಲಿಸಲಾಗಿದೆ. ಈ ಸಂದರ್ಭದಲ್ಲಿ ಅತಿ ಹೆಚ್ಚು ಮೂಲಭೂತ ಸೌಲಭ್ಯಗಳು ಕಲ್ಪಿಸುವ ಕುಂದು-ಕೊರತೆಗಳಾಗಿದ್ದು, ಈ ನಿಟ್ಟಿನಲ್ಲಿ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ ಅಗತ್ಯ ಕ್ರಮ ವಹಿಸಿ, ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಅವರು ಸೂಚನೆ ನೀಡಿದರು. 

ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸಭೆ, ಕುಂದು-ಕೊರತೆ, ಪ್ರಗತಿ ಪರಿಶೀಲನಾ ಸಭೆಯನ್ನು ಪ್ರತಿ ಮೂರು ತಿಂಗಳಿಗೊಮ್ಮೆ ನಡೆಸಿ, ಈ ಸಮುದಾಯ ಕುಂದು-ಕೊರತೆಗಳನ್ನು ಪರಿಹರಿಸಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು. 

ಸಭೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಲೆಮಾರಿ ಸಮುದಾಯದ ದಾಖಲಾದ ಪ್ರಕರಣಳ ಸ್ಥಿತಿಗತಿ ಕುರಿತು ಪರಿಶೀಲನೆ ನಡೆಸಲಾಯಿತು. 

ಕಾಲೋನಿಗಳಲ್ಲಿ ಗ್ರಂಥಾಲಯ ಬೇಡಿಕೆ :ಪÀರಿಶಿಷ್ಟ ಪಂಗಡದ ಅಲೆಮಾರಿ ಸಮುದಾಯದ ಜನಾಂಗದವರಿAದ ಕಾಲೋನಿಗಳಲ್ಲಿ ಗ್ರಂಥಾಲಯ ಬೇಡಿಕೆ ಸಲ್ಲಿಸಲಾಗಿದ್ದು, ಈ ಕುರಿತು ಸಂತಸ ವ್ಯಕ್ತಪಡಿಸಿದ ಅವರು, ಆದ್ಯತೆಯ ಮೇಲೆ ಈ ಮನವಿಯನ್ನು ಪರಿಗಣಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. 

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಮಾತನಾಡಿ, ಈಗಾಗಲೇ 201 ಗ್ರಂಥಾಲಯಗಳಿದ್ದು, 280 ಮಂಜೂರಾಗಿದ್ದು, ಈ ಸಮುದಾಯದ ಬೇಡಿಕೆಯನ್ನು ಪರಿಶೀಲಿಸಿ ಕ್ರಮ ವಹಿಸಲಾಗುವುದು ಎಂದು ಅವರು ಹೇಳಿದರು. 

ಸಭೆಯಲ್ಲಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪುಂಡಲೀಕ ಮಾನವರ, ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಆನಂದಕುಮಾರ, ಜಿಲ್ಲಾ ಅನುಷ್ಠಾನ ಸಮಿತಿ ಸದಸ್ಯರು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಮುದಾಯದ ಮುಖಂಡರು, ಸಾರ್ವಜನಿಕರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.