Saturday, March 1, 2025

ಮೂಲಭೂತ ಸೌಕರ್ಯ ಒದಗಿಸಲು ಮನವಿ

 


ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ: ಜಯ ಕರ್ನಾಟಕ ಸಂಘಟನೆ ಸಿಂದಗಿ ತಾಲೂಕಾ ಘಟಕದ ವತಿಯಿಂದ ಸಿಂದಗಿ ತಾಲ್ಲೂಕಿನ ಹಂದಿಗನೂರ ಗ್ರಾಮದ ಸರಕಾರಿ ಕನ್ನಡ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಸಮಸ್ಯೆಗಳಾದ ಕುಡಿಯುವ ನೀರು, ಮೂರು ನೂತನ ಕೋಣೆಗಳು ನಿರ್ಮಿಸುವುದು, ಮತ್ತು ಶಾಲಾ ಕಂಪೌಂಡ ನಿರ್ಮಿಸುವುದು, ಹಾಗೂ ವಿವಿಧ ಬೇಡಿಕೆಗಳ ಕುರಿತು. ಮಾನ್ಯ ತಹಶಿಲ್ದಾರರ ಸಾಹೇಬರಿಗೆ ಮನವಿ ಸಲ್ಲಿಸಲಾಯಿತು.

ಇದೇ ಸಂದರ್ಭದಲ್ಲಿ ಜಯ ಕರ್ನಾಟಕ ಸಂಘಟನೆಯ ಜಿಲ್ಲಾ ವಕ್ತಾರರು, ಹಾಗೂ ಸಿಂದಗಿ ತಾಲೂಕಾ ಉಸ್ತುವಾರಿಗಳಾದ ಚನ್ನಪ್ಪಗೌಡ ಎಸ್, ಬಿರಾದಾರ, ಹಾಗೂ ಸಿಂದಗಿ ತಾಲೂಕಾಧ್ಯಕ್ಷರಾದ ಸಂತೋಷ ಮನಗೂಳಿ, ಮತ್ತು ಜಯ ಕರ್ನಾಟಕ ಸಂಘಟನೆಯ ತಾಲೂಕಾ ಪದಾಧಿಕಾರಿಗಳಾದ,

ನಾಗಣ್ಣ ಪಡೇಕನೂರ, ತಾಲೂಕಾ ಉಪಾಧ್ಯಕ್ಷರು, ರಮೇಶ ರಾಠೋಡ, ಕಾರ್ಯಧ್ಯಕ್ಷರು, ಭೀಮನಗೌಡ ಬಿರಾದಾರ, ಪ್ರಧಾನ ಕಾರ್ಯದರ್ಶಿಗಳು, ಸಿದ್ದನಗೌಡ ಅಂಬಳನೂರ, ಸಂಘಟನಾ ಕಾರ್ಯದರ್ಶಿ, ಶಿವಪುತ್ರ ಮಲ್ಲೇದ, ಸಿಂದಗಿ 21, ನೇ ವಾರ್ಡ ಅಧ್ಯಕ್ಷರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


02-03-2025 EE DIVASA KANNADA DAILY NEWS PAPER

371 ಜೆ ಕಲಂ ಅಡಿ ಬಿಟ್ಟು ಹೋದ ಪ್ರದೇಶವಾದ ಅಖಂಡ ವಿಜಯಪುರ ಜಿಲ್ಲೆಯನ್ನು ಕಲ್ಯಾಣ ಕರ್ನಾಟಕ ಮೀಸಲಾತಿಗೆ ಸೇರಿಸಲು ರೈತ ಭಾರತ ಪಕ್ಷ ಆಗ್ರಹ

 ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ : ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರ ಮೂಲಕ ರಾಜ್ಯಪಾಲರಾದ ಥಾವರಚೆಂದ್ ಗೆಹ್ಲೋಟ್, ಕರ್ನಾಟಕ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ವಿರೋಧ ಪಕ್ಷದ ನಾಯಕ ಆರ್ ಅಶೋಕ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ, ನಾರಾಯಣ ಸ್ವಾಮಿ, ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ರೈತ ಭಾರತ ಪಕ್ಷ (ರಿ) ಕರ್ನಾಟಕದ ರಾಜ್ಯಾಧ್ಯಕ್ಷರಾದ ಮಲ್ಲಿಕಾರ್ಜುನ ಕೆಂಗನಾಳ ಮಾತನಾಡಿ, ಅಖಂಡ ವಿಜಯಪುರ ಜಿಲ್ಲೆ ರಾಜಾಡಳಿತ ಕಾಲದಲ್ಲಿ ಹೈದ್ರಾಬಾದ್ ನಿಜಾಮನ ಆಡಳಿತದಲ್ಲಿತ್ತು ಎಂಬುವುದಕ್ಕೆ ಸರ್ಕಾರದಿಂದ ಪ್ರಕಟಗೊಂಡ ಗೆಜಿಟಿಯರ್‍ನಲ್ಲಿ ದಾಖಲಾಗಿದೆ. ಕ್ರಿ.ಶÀ. 1744 ರಲ್ಲಿ ಹೈದ್ರಾಬಾದಿನ ನಿಜಾಮನು ಕೃಷ್ಣೆಯ ಉತ್ತರದ ಭಾಗದ ಆಡಳಿತದ ಹೊಣೆಯನ್ನು ನಾಶಿರ ಜಂಗನಿಗೂ, ದಕ್ಷಿಣದ ಬಾದಾಮಿ ಬಾಗಲಕೋಟೆ ಗ್ರಾಮದ ಸವಣೂರಿನ ನವಾಬನ ಆಡಳಿಕ್ಕೆ ನೀಡಿದ್ದ ಕ್ರಿ.ಶ. 1746 ರಲ್ಲಿ ಸವಣೂರಿನ ನವಾಬನು ಮರಾಠಾ ಪೇಶ್ವೆಗಳೊಂದಿಗೆ ಒಪ್ಪಂದ ಮಾಡಿಕೊಂಡು ಸದರಿ ಪ್ರದೇಶಗಳನ್ನು ಅವರಿಗೆ ಬಿಟ್ಟುಕೊಟ್ಟಿದ್ದರ ಕುರಿತು ಅಧಿಕೃತ ದಾಖಲೆಗಳಿವೆ.  ಕಲ್ಯಾಣರ ಚಾಲುಕ್ಯರ ಕಾಲದಿಂದ ವಿಜಯಪುರ ಜಿಲ್ಲೆ ಕಲ್ಯಾಣ ನಾಡಿನಲ್ಲಿಯೇ ಇತ್ತು. ಈಗಾಗಲೇ ಸಾರಿಗೆ ವ್ಯವಸ್ಥೆ , ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ಅಡಿ ಇದೆ. ನ್ಯಾಯಾಂಗ ವ್ಯವಸ್ಥೆ ಕೂಡಾ ಕಲ್ಬುರ್ಗಿ ಉಚ್ಛ ನ್ಯಾಯಾಲಯದಡಿ ಬರುತ್ತದೆ. ಹೀಗಿದ್ದರೂ ಕೂಡಾ, ಜಿಲ್ಲೆಯನ್ನು ಕಲ್ಯಾಣ ಕರ್ನಾಟಕ ಮೀಸಲಾತಿ ಅಡಿ ಸೇರಿಸದೆ ಇರುವುದು ಐತಿಹಾಸಿಕ ಪ್ರಮಾದವಾಗಿದೆ. 

ನಿಜಾಮನ ಆಡಳಿತದಲ್ಲಿ ಇಲ್ಲದೆ ಇರುವ ಬಳ್ಳಾರಿ ಜಿಲ್ಲೆಯನ್ನು (ವಿಜಯನಗರ ಸೇರಿ) 371 ಜೆ ಮೀಸಲಾತಿಯಡಿ ಸೇರಿಸಿದ್ದಾರೆ. ನಂಜುಂಡಪ್ಪ ವರದಿ ಪ್ರಕಾರ ವಿಜಯಪುರ ಜಿಲ್ಲೆ ಕೂಡಾ ಹಿಂದುಳಿದ ಪ್ರದೇಶವಾಗಿದ್ದು ಆರ್ಥಿಕವಾಗಿ ಶೈಕ್ಷಣಿಕವಾಗಿ ಸಾಮಾಜಿಕವಾಗಿ ಇಲ್ಲಿನ ಜನಸಮೂಹವು ಅತ್ಯಂತ ಹಿಂದುಳಿದಿರುತ್ತಾರೆ.

ಸದರಿ ನಮ್ಮ ಅಖಂಡ ವಿಜಯಪುರ ಜಿಲ್ಲೆ ಹೈದ್ರಾಬಾದ ನಿಜಾಮನ ಆಡಳಿತದಲ್ಲಿ ಇದ್ದ ಬಗ್ಗೆ ಅಧಿಕೃತ ಸರ್ಕಾರೆ ದಾಖಲೆಗಳಿದ್ದರೂ ಕೂಡಾ 371 ಜೆ ಮೀಸಲಾತಿ ಅಡಿ ಸೇರಿಸದೆ ಇರುವುದರಿಂದ ನಮ್ಮ ಜಿಲ್ಲೆಗೆ ಅನ್ಯಾಯವಾಗಿದೆ.ಸದರಿ ಅನ್ಯಾಯದ ಕುರಿತು ಲೋಕಸಭೆ ಚುನಾವಣೆ ಸಂದರ್ಭದಲ್ಲಿ ನಮ್ಮ ಪದವೀಧರರ ಒಕ್ಕೂಟದಿಂದ ಧ್ವನಿ ಎತ್ತಿದಾಗ ವಿಜಯಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ತಮ್ಮ ಪ್ರಣಾಳಿಕೆಯಲ್ಲಿ ಜಿಲ್ಲೆಯನ್ನು ಮೀಸಲಾತಿಯಡಿ ಸೇರಿಸುವ ಭರವಸೆ ನೀಡಿದ್ದರು.  ಚುನಾವಣೆ ಮುಗಿದ ನಂತರ ಯಾರೊಬ್ಬರು ಕೂಡ ಸದರಿ ಮೀಸಲಾತಿ ಬಗ್ಗೆ ಧ್ವನಿ ಎತ್ತದೆ ಇರುವುದರಿಂದ ರಾಜಕೀಯ ಹಿತಾಸಕ್ತಿ ಕೊರತೆ ಎದ್ದು ಕಾಣುತ್ತಿದೆ. ಅಖಂಡ ವಿಜಯಪುರ ಜಿಲ್ಲೆಗೆ 371 ಜೆ ಕಲ್ಯಾಣ ಕರ್ನಾಟಕ ಮೀಸಲಾತಿ ನೀಡುವವರೆಗೆ ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಕಲ್ಯಾಣ ಕರ್ನಾಟಕ ಮೀಸಲಾತಿಯ ಸ್ಥಳೀಯ ಹುದ್ದೆಗಳನ್ನು ಭರ್ತಿ ಮಾಡುವುದನ್ನು ತಡೆ ಹಿಡಿಯಬೇಕು ಎಂದರು.

ಕೂಡಲೇ ಮಾನ್ಯರವರಾದ ತಾವುಗಳು ವಿಜಯಪುರ ಜಿಲ್ಲೆಯನ್ನು 371 ಜೆ ಮೀಸಲಾತಿ ಅಡಿ ಬಿಟ್ಟು ಹೋದ ಪ್ರದೇಶವಾದ ಅಖಂಡ ವಿಜಯಪುರ ಜಿಲ್ಲೆಯನ್ನು ಕಲ್ಯಾಣ ಕರ್ನಾಟಕ ಮೀಸಲಾತಿ ವ್ಯಾಪ್ತಿಗೆ ್ತ ಸೇರಿಸುವ ಮೂಲಕ ಅನ್ಯಾಯಕ್ಕೊಳಗಾದ ವಿಜಯಪುರ ಜಿಲ್ಲೆಗೆ  ನ್ಯಾಯ ಒದಗಿಸಿಕೊಡಬೇಕೆಂದು ನಮ್ಮ ರೈತ ಭಾರತ ಪಕ್ಷ ಕರ್ನಾಟಕ ರಾಜ್ಯ ಸಮಿತಿ ಆಗ್ರಹಿಸುತ್ತದೆ.

ಈ ಸಂದರ್ಭದಲ್ಲಿ ದೀಪಕ ಕುಲಕರ್ಣಿ, ಎಂ.ಎ. ಮಾಲಬಾವಡಿ, ಆರ್. ಎಸ್. ನಾಗಶೆಟ್ಟಿ, ಸಿದ್ದಪ್ಪ ಶಿವಪ್ಪ ಪೂಜಾರಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


ಅಖಂಡ ವಿಜಯಪುರ ಜಿಲ್ಲೆಯನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಿ : ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಬಟಗಿ


ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ : ಅಖಂಡ ವಿಜಯಪುರ ಜಿಲ್ಲೆಯನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಿ ಅಭಿವೃದ್ಧಿ ಪಡಿಸಬೇಕೆಂದು ಒತ್ತಾಯಿಸಿ ಅಖಿಲ ಭಾರತ ವಾಲ್ಮೀಕಿ ಸಮಾಜ ಸೇವಾ ಸಂಘದವತಿಯಿಂದ ವಿಜಯಪುರ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿ, ಪ್ರಧಾನ ಮಂತ್ರಿ ಹಾಗೂ ಕರ್ನಾಟಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಬದಲ್ಲಿ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಬಟಗಿ ಮಾತನಾಡಿ, ಕರ್ನಾಟಕ ರಾಜ್ಯದ ಅಖಂಡ ವಿಜಯಪುರ ಜಿಲ್ಲೆಯು (ಬಾಗಲಕೋಟ) ಸೇರಿದಂತೆ ಅತ್ಯಂತ ಹಿಂದುಳಿದ ಪ್ರದೇಶವಾಗಿದ್ದು ಪ್ರೊ. ನಂಜುಂಡಪ್ಪ ವರದಿ ಪ್ರಕಾರ ಜಿಲ್ಲೆಯು ಅತ್ಯಂತ ಹಿಂದುಳಿದ ಪ್ರದೇಶವೆಂದು ಗುರುತಿಸಲ್ಪಟ್ಟರು ಕೂಡಾ, ಕರ್ನಾಟಕ ಸರ್ಕಾರ ವಿಜಯಪುರ ಜಿಲ್ಲೆಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸದೆ ನಿರಂತರವಾಗಿ ಅನ್ಯಾಯ ಎಸಗುತ್ತಾ ಬಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜಾಡಳಿತ ಕಾಲದಲ್ಲಿ ಹೈದ್ರಾಬಾದ್ ನಿಜಾಮನ ಆಡಳಿತದಲ್ಲಿದ್ದ ವಿಜಯಪುರ ಜಿಲ್ಲೆಯನ್ನು ವಿಶೇಷ ಮೀಸಲಾತಿಯಡಿ ಸೇರಿಸಬೇಕೆಂದು ಜಿಲ್ಲೆಯ ಜನ ನಿರಂತರವಾಗಿ ಹೋರಾಟ ಮಾಡುತ್ತಾ ಬಂದಿದ್ದರೂ ಕೂಡ, 371 ಜೆ ಕಲ್ಯಾಣ ಕರ್ನಾಟಕ ವಿಶೇಷ ಮೀಸಲಾತಿ ಸೇರ್ಪಡೆಗೆ ವಿಜಯಪುರ ಜಿಲ್ಲೆಯನ್ನು ಶಿಫಾರಸ್ಸು ಮಾಡದೇ ಕೈಬಿಡುವ ಮೂಲಕ ರಾಜ್ಯ ಸರ್ಕಾರ ಘೋರ ಅನ್ಯಾಯ ಎಸಗಿದೆ. ಇದರಿಂದ ಜಿಲ್ಲೆಯ ಮಕ್ಕಳು ಶೈಕ್ಷಣಿಕ ಮೀಸಲಾತಿ ಹಾಗೂ ಯುವ ಜನತೆಗೆ ಸರ್ಕಾರದ ಉದ್ಯೋಗ ಮೀಸಲಾತಿಯಿಂದ ವಂಚನೆಗೊಳಗಾಗಿದ್ದಾರೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಬಹುದಿನಗಳಿಂದ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸರ್ಕಾರಿ ತಾಂತ್ರಿಕ ಮಹಾವಿದ್ಯಾಲಯ ಸ್ಥಾಪಿಸಬೇಕೆಂದು ಒತ್ತಾಯಿಸುತ್ತಾ ಬಂದಿದ್ದರೂ ಕೂಡಾ, ಇಲ್ಲಿ ಪಕ್ಷಾತೀತವಾಗಿ ಎಲ್ಲ ಪಕ್ಷದ ರಾಜ್ಯ ಸರ್ಕಾರ ಇಲ್ಲಿನ ಜನರ ಬೇಡಿಕೆಗೆ ಸ್ಪಂದಿಸದೆ ನಿರಂತರವಾಗಿ ದ್ರೋಹ ಬಗೆಯುತ್ತಾ ಬಂದಿದ್ದಾರೆ. ಇದರಿಂದ ಜಿಲ್ಲೆಯ ಜನರಿಗೆ ಸಿಗಬೇಕಾದ ಆರೋಗ್ಯ ಸೌಲಭ್ಯ ಹಾಗೂ ಜಿಲ್ಲೆಯ ಯುವ ಜನತೆಗೆ ಸಿಗಬೇಕಾದ ವೈದ್ಯಕೀಯ ಶಿಕ್ಷಣದಿಂದ ವಂಚಿತಗೊಳಿಸಲಾಗಿದೆ. ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ವಿಜಯಪುರ ಜಿಲ್ಲೆ ನಿರಂತರವಾಗಿ ಬರಗಾಲಪೀಡಿತ ಜಿಲ್ಲೆಯಾಗಿದೆ. ಇಲ್ಲಿನ ಜನ ಉದ್ಯೋಗ ಅರಸಿ ಗೋವಾ- ಮಹಾರಾಷ್ಟ್ರಕ್ಕೆ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರತಿ ವರ್ಷ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಂದ ಆಯ್ಕೆವ್ಯ ಯ ಮಂಡನೆಯಲ್ಲಿ ವಿಜಯಪುರ ಜಿಲ್ಲೆಯ ಶಾಶ್ವತ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್‌ಗಳನ್ನು ಘೋಷಣೆ ಮಾಡದೆ ನಿರಂತರವಾಗಿ ಅನ್ಯಾಯ ಎಸಗುತ್ತಾ ಬಂದಿರುತ್ತಾರೆ. ಸದರಿ ನಮ್ಮ ಅಖಂಡ ವಿಜಯಪುರ ಜಿಲ್ಲೆಯನ್ನು ಪ್ರತಿನಿಧಿಸುವ ಲೋಕಸಭಾ ಸದಸ್ಯರು, ವಿಧಾನ ಸಭಾ ಸದಸ್ಯರು ಹಾಗೂ ವಿಧಾನ ಪರಿಷತ್ತಿನ ಸದಸ್ಯರು, ಜಿಲ್ಲೆಯ ಜ್ವಲಂತ ಸಮಸ್ಯೆಗಳ ಕುರಿತು ಧ್ವನಿ ಎತ್ತಿ ಜಿಲ್ಲೆಗೆ ನ್ಯಾಯ ಒದಗಿಸಲು ವಿಫಲರಾಗಿರುವುದರಿಂದ ಸದರಿ ನಮ್ಮ ಜಿಲ್ಲೆಯ ಅಭಿವೃದ್ಧಿಯ ದೃಷ್ಟಿಯಿಂದ ಸನ್ಮಾನ್ಯರಾದ ತಾವುಗಳು ದೇಶದಲ್ಲಿ ಅತ್ಯಂತ ಹಿಂದುಳಿದ ಪ್ರದೇಶವಾದ ವಿಜಯಪುರ ಜಿಲ್ಲೆಯನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಜಿಲ್ಲೆಯನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಿ ರಾಷ್ಟ್ರಪತಿ ಆಡಳಿತ ಹೇರಿ, ಈ ವಿಜಯಪುರ ಪ್ರದೇಶಕ್ಕೆ 371 ಜೆ ಸಮಾಂತರ ಮೀಸಲಾತಿ, ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸರ್ಕಾರಿ ತಾಂತ್ರಿಕ ಮಹಾವಿದ್ಯಾಲಯ ಸೇರಿದಂತೆ ಎಲ್ಲ ಈತಿಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕೆಂದು ಒತ್ತಾಯಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.