ಈ ದಿವಸ ಕನ್ನಡ ದಿನ ಪತ್ರಿಕೆ
ವಿಜಯಪುರ : ಜಿಲ್ಲಾ ಪೊಲೀಸ್ ವತಿಯಿಂದ ಮಾ.9 ರಂದು "ಡ್ರಗ್ ಫ್ರೀ ಕರ್ನಾಟಕ" "ಫಿಟ್‌ನೆಸ್ ಫಾರ್ ಆಲ್" ಹಾಗೂ "ನಮ್ಮ ಪೊಲೀಸ್ ನಮ್ಮ ಹೆಮ್ಮೆ" ಥೀಮ್‌ನ ಅಡಿಯಲ್ಲಿ ಕರ್ನಾಟಕ ಪೊಲೀಸ್ ರನ್ 2025 ಮ್ಯಾರಾಥಾನ್ ಓಟವನ್ನು (5 KM) ಆಯೋಜಿಸಲಾಗಿದೆ ಎಂದು ವಿಜಯಪುರ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿದ ಅವರು ಮಾ. 9 ರಂದು ಬೆಳಗ್ಗೆ 06.30 ಗಂಟೆಗೆ ಮ್ಯಾರಾಥಾನ್ ಓಟವು ಗೋಲಗುಂಬಜ್ ನಿಂದ ಆರಂಭವಾಗಿ, ಜಿಲ್ಲಾ ಕ್ರೀಡಾಂಗಣ, ಬಸವೇಶ್ವರ ವೃತ್ತ, ಗಾಂಧಿಚೌಕ, ಶಿವಾಜಿ ವೃತ್ತ, ವಾಟರ್ ಟ್ಯಾಂಕ್, ಸೋಲಾಪೂರ ರಸ್ತೆ ಮಾರ್ಗವಾಗಿ ಜಿಲ್ಲಾ ಪೊಲೀಸ್ ಕವಾಯತು ಮೈದಾನಕ್ಕೆ ಬಂದು ಮುಕ್ತಾಯಗೊಳ್ಳಲಿದೆ.
ಮ್ಯಾರಾಥಾನ್‌ನಲ್ಲಿ ಭಾಗವಹಿಸಿ, ವಿವಿಧ ವಿಭಾಗಗಳಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆಯುವ ವಿಜೇತರಿಗೆ ಪ್ರಮಾಣ ಪತ್ರ ಹಾಗೂ ಮೆಡಲ್‌ಗಳನ್ನು ವಿತರಣೆ ಮಾಡಲಾಗುವುದು.
ಮ್ಯಾರಾಥಾನ್‌ನಲ್ಲಿ ಭಾಗವಹಿಸುವ ಆಸಕ್ತರು, ದಿನಾಂಕ: 08-03-2025 ರವರೆಗೆ ತಮ್ಮ ಹೆಸರುಗಳನ್ನು ವಿಜಯಪುರ ಡಿಎಆರ್ ಘಟಕದ ಶ್ರೀರಂಗಪ್ಪ ಆರ್‌ಎಸ್‌ಐ (ಮೋ: 9901145001), ಮಲ್ಲನಗೌಡ ಆರ್‌ಎಸ್‌ಐ (ಮೋ: 9880299439) ಹಾಗೂ ದಾನೇಶ ಕಲ್ಯಾಣಿ ಆರ್‌ಎಸ್‌ಐ (ಮೋ: 8050481012) ರವರ ಬಳಿ ಹೆಸರನ್ನು ನೋಂದಾಯಿಸಬಹುದಾಗಿದೆ. ಭಾಗವಹಿಸುವ ಸ್ಪರ್ಧಾಳುಗಳಿಗೆ ಟಿ-ಶರ್ಟ್ ಹಾಗೂ ಕ್ಯಾಪ್ ವಿತರಣೆ ಮಾಡಲಾಗುವುದು.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಕರ್ನಾಟಕ ಪೊಲೀಸ್ ರನ್-2025 ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

