Sunday, March 9, 2025

10-03-2025 EE DIVASA KANNADA DAILY NEWS PAPER

ಚಾಂಪಿಯನ್ ಟ್ರೋಫಿ ಗೆದ್ದ ಭಾರತ

 

2025ರಲ್ಲಿ ಚಾಂಪಿಯನ್ಸ್ ಟ್ರೋಫಿ ಗೆದ್ದು ಭಾರತ ಸಂಭ್ರಮಿಸಿದೆ. ಈ ಮೂಲಕ ಸತತ 2 ಐಸಿಸಿ ಟ್ರೋಫಿ ಗೆದ್ದ ಸಾಧನೆ ಮಾಡಿದೆ.

ನ್ಯೂಜಿಲೆಂಡ್‌ ಕೊಟ್ಟ ಟಾರ್ಗೆಟ್ 252 ರನ್ ಬೆನ್ನತ್ತಿದ್ದ ಭಾರತಕ್ಕೆ ನಾಯಕ ರೋಹಿತ್ ಶರ್ಮಾ ಅಬ್ಬರಿಸಿ ಬ್ಯಾಟಿಂಗ್‌ ನಡೆಸಿದರು. ರೋಹಿತ್ ಹಾಗೂ ಶುಭಮನ್ ಗಿಲ್ ಜೊತೆಯಾಟ ಟೀಂ ಇಂಡಿಯಾ ಆತ್ಮವಿಶ್ವಾಸ ಹೆಚ್ಚಿಸಿತು. ಈ ಜೋಡಿ 100 ರನ್ ಜೊತೆಯಾಟ ನೀಡಿತು.

ಶುಭಮನ್ ಗಿಲ್ 31 ರನ್ ಸಿಡಿಸಿ ಔಟಾದರು. ಬಳಿಕ ಬಂದ ಕೊಹ್ಲಿ ಬಂದ ರಭಸದಲ್ಲಿ ವಿಕೆಟ್ ಕೈಚೆಲ್ಲಿದರು.ಈ ವೇಳೆ ಭಾರತ 106 ರನ್‌ಗೆ 2ನೇ ವಿಕೆಟ್ ಕಳೆದುಕೊಂಡಿತ್ತು.

ಕೋಹ್ಲಿ ವಿಕೆಟ್ ಪತನಗೊಂಡರೂ ಅಭಿಮಾನಿಗಳಿಗೆ ರೋಹಿತ್ ಶರ್ಮಾ ಸ್ಫೋಟಕ ಬ್ಯಾಟಿಂಗ್ ಕೊಂಚ ಸಮಾಧಾನ ತಂದಿತ್ತು. ಆದರೆ ರೋಹಿತ್ ಶರ್ಮಾ 76 ರನ್‌ ಸಿಡಿಸಿ ಔಟಾದರು.

ಬಳಿಕ ಶ್ರೇಯಸ್‌ ಅಯ್ಯರ್ ಹಾಗೂ ಅಕ್ಸರ್ ಪಟೇಲ್ ಹೋರಾಟ ನಿಧಾನವಾಗಿ ಭಾರತ ಚೇತರಿಸಿಕೊಳ್ಳಲು ಆರಂಭಿಸಿತು. ಅಯ್ಯರ್ 48 ರನ್ ಸಿಡಿಸಿ ಔಟಾದರು.ಅಕ್ಸರ್ ಪಟೇಲ್ ಕೂಡ 29 ರನ್ ಸಿಡಿಸಿ ಔಟಾದರು. ಅಂತಿಮ ಹಂತದಲ್ಲಿ ಕೆಎಲ್ ರಾಹುಲ್ ಹಾಗೂ ಹಾರ್ದಿಕ್ ಪಾಂಡ್ಯ ಟೀಂ ಇಂಡಿಯಾ ಗೆಲುವು ಖಚಿತಪಡಿಸಿದರು. ಕೊನೆಯವರೆಗೂ ಕ್ರೀಸ್‌ನಲ್ಲೇ ನಿಂತು ಕೆ.ಎಲ್ ರಾಹುಲ್ ಭಾರತ ತಂಡವನ್ನು ಗೆಲ್ಲಿಸಿದರು. ರಾಹುಲ್ 1 ಸಿಕ್ಸರ್, 1 ಫೋ‌ರ್ ಸಮೇತ 34 ರನ್ ಸಿಡಿಸಿದರು. ಭಾರತ 49 ಓವರ್‌ನಲ್ಲಿ 254 ರನ್ ಗಳಿಸಿ ಗೆಲುವು ಸಾಧಿಸಿದೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.