Saturday, April 12, 2025

ಮನುಷ್ಯತ್ವ ಇರದ ಕಲೆ, ಸಾಹಿತ್ಯ, ಸಂಸ್ಕೃತಿ ಉತ್ಸವಗಳಿಗೆ ಅರ್ಥವಿಲ್ಲ: ಜಾಜಿ ಮಲ್ಲಿಗೆ ಕವಿ ಡಾ. ಸತ್ಯಾನಂದ ಪಾತ್ರೋಟ

ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

 ವಿಜಯಪುರ: "ಮನುಷ್ಯ ಸಂಬಂಧಗಳ ಹುಡುಕಾಟವೇ ಸಾಂಸ್ಕೃತಿಕ ಆಂದೋಲನವಾಗಬೇಕು. ಮನುಷ್ಯತ್ವ ಇರದ ಕಲೆ, ಸಾಹಿತ್ಯ, ಸಂಸ್ಕೃತಿ ಉತ್ಸವಗಳಿಗೆ ಅರ್ಥವಿಲ್ಲ. ದೇಶವೆಂದರೆ ಬರಿ ಮಣ್ಣಲ್ಲ, ಕುರ್ಚಿಯಲ್ಲ ಮನುಷ್ಯರು. ನಾವು ಜಾತಿ-ಧರ್ಮಗಳ ಮಧ್ಯವರ್ತಿಗಳಾಗದೇ ಸತ್ಯದ ಮಧ್ಯವರ್ತಿಗಳಾಗಬೇಕು." ಎಂದು ಜಾಜಿ ಮಲ್ಲಿಗೆ ಕವಿ ಡಾ. ಸತ್ಯಾನಂದ ಪಾತ್ರೋಟ ಅಭಿಪ್ರಾಯಪಟ್ಟರು.

ಆವಿಷ್ಕಾರ, ಎಐಡಿಎಸ್‌ಓ, ಎಐಡಿವೈಓ ಹಾಗೂ ಎಐಎಮ್ಎಸ್‌ಎಸ್ ಸಂಘಟನೆಗಳ ನೇತೃತ್ವದಲ್ಲಿ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ನಡೆದ 14ನೇ ವಿಜಯಪುರ ಸಾಂಸ್ಕೃತಿಕ ಜನೋತ್ಸವ'ದ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು.



ಮುಂದುವರೆದು ಹೇಳಿದ ಅವರು "ನಮ್ಮ ಮಧ್ಯ ಬರೆಯದ ಬರಹಗಾರರಿದ್ದಾರೆ. ಹಾಡದ ಹಾಡುಗಾರರಿದ್ದಾರೆ. ನರ್ತಿಸದ ನರ್ತಕಿಯರಿದ್ದಾರೆ. ಅಂತಹವರ ಬಗ್ಗೆ ನಾವು ಹಾಡಬೇಕು. ಬರೆಯಬೇಕು. ಇಂದು ಮುಖಂಡರು, ಅಧಿಕಾರಿಗಳು ಬ್ರಷ್ಟರಾಗುವ ಜೊತೆಗೆ ಲೇಖನ ಸಹ ಬ್ರಷ್ಟವಾಗಿದೆ. ಹೀಗಾದರೆ ರಕ್ಷಣೆ ಎಲ್ಲಿ. ನಮ್ಮನ್ನು ನಾವು ಕಂಡು ಕೊಳ್ಳುವುದೇ ಇದಕ್ಕೆ ಪರಿಹಾರ. ತನ್ನ ಸಮುದಾಯವನ್ನೂ ಮೀರಿ ಜನಸಾಮಾನ್ಯರಿಗೆ ನಾಯಕರಾದ ಜ್ಯೋತಿಬಾ ಫುಲೆಯವರಂತಹವರು ನಮಗೆ ಆದರ್ಶವಾಗಬೇಕು" ಎಂದು ಹೇಳಿದರು.



ಅತಿಥಿಗಳಾಗಿ ಆಗಮಿಸಿದ್ದ ಎಐಯುಟಿಯುಸಿ ಕಾರ್ಮಿಕ ಸಂಘಟನೆಯ ರಾಜ್ಯ ಅಧ್ಯಕ್ಷರಾದ ಕಾ. ಕೆ. ಸೋಮಶೇಖರ ಅವರು ಮಾತನಾಡಿ, "ಮೂಲ ಸೌಲಭ್ಯ, ವಿಜ್ಞಾನಗಳ ಅಭಿವೃದ್ಧಿಗಿಂತ ನೀತಿ, ಸಂಸ್ಕೃತಿ, ಮೌಲ್ಯಗಳ ಅಭಿವೃದ್ಧಿ ನಿಜವಾದ ಅಭಿವೃದ್ಧಿ, ಇಂದಿನ ಸಮಾಜದ ಪ್ರಗತಿಗೆ ಪೂರಕವಾದದನ್ನು ಮಾತ್ರ ನಾವು ಇತಿಹಾಸದಿಂದ ಅನುಸರಿಸಬೇಕು. ಹೊರತು ಜನರನ್ನು ಓಡೆದು ಆಳುವ ಇತಿಹಾಸ, ಸಂಸ್ಕೃತಿಯನ್ನು ಇತಿಹಾಸದಲ್ಲಿ ಇದ್ದರೂ ಅದನ್ನು ಅನುಸರಿಸಬಾರದು" ಎಂದು ಹೇಳಿದರು.

ರಂಗಮಂದಿರದ ಆವರಣದಲ್ಲಿಯ ಸೂಕ್ತಿ ಹಾಗೂ ಛಾಯಾಚಿತ್ರ ಪ್ರದರ್ಶನವನ್ನು ಸಾಹಿತಿಗಳಾದ ಶ್ರೀ ಮನು ಪತ್ತಾರ ಅವರು ಉದ್ಘಾಟಿಸಿದರು.

ಎಐಡಿಎಸ್‌ಓನ ಜಿಲ್ಲಾ ಕಾರ್ಯದರ್ಶಿಗಳಾದ ಕಾವೇರಿ ರಜಪೂತರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಎಐಎಮ್‌ಎಸ್‌ಎಸ್‌ನ ಜಿಲ್ಲಾಧ್ಯಕ್ಷರಾದ ಗೀತಾ ಎಚ್. ಹಾಗೂ ಆವಿಷ್ಕಾರದ ಮುಖಂಡರಾದ ಶ್ರೀ ಅಶೋಕ ದೇಸಾಯಿ ಅವರು ಉಪಸ್ಥಿತರಿದ್ದರು. ಹಾಗೂ ಎ.ಐ.ಡಿ.ವೈ.ಓ. ರಾಜ್ಯ ಕಾರ್ಯದರ್ಶಿಗಳಾದ ಶ್ರೀ ಸಿದ್ಧಲಿಂಗ ಬಾಗೇವಾಡಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ನಂತರ ಜರುಗಿದ ಸಾಂಸ್ಕೃತಿಕ ಕಾರ್ಯಕ್ರಮಗಳಾದ ವಿಜಯಪುರದ ವಿದೂಷಿ ಲಕ್ಷ್ಮೀ ತೇರದಾಳಮಠ ಅವರ ನಾಟ್ಯಕಲಾ ಡಾನ್ಸ್ ಕ್ಲಾಸ್‌ನವರ ನೃತ್ಯ ರೂಪಕ, ಧಾರವಾಡ ಆಕಾಶವಾಣಿಯ ಬಿ ಹೈಗ್ರೇಡ್ ಕಲಾವಿದೆ ಕುಮಾರಿ ಕೃತಿಕಾ ವಿ ಜಂಗಿನಮಠ ಅವರ ಕೊಳಲು ವಾದನ, ಹಾಗೂ ವಿಜಯಪುರದ ಸ್ವಯಂಭೋ ಆರ್ಟ್ ಫೌಂಡೇಶನ್ನ

ನಟಿ ಹಾಗೂ ಭರತನಾಟ್ಯ ಕಲಾವಿದೆ ವಿದೂಷಿ ದೀಕ್ಷಾ ಭೀಸೆ ಹಾಗೂ ದಿವ್ಯಾ ಭೀಸೆ ಮತ್ತು ತಂಡದವರ ನೃತ್ಯ ಪ್ರದರ್ಶನ ಗಳು ಜನರ ಮನ ಸೆಳೆದವು.

ಹಾಗೂ ಬಾದಲ್ ಸರ್ಕಾರರವರು ರಚಿಸಿದ. ರಾಜೇಂದ್ರ ಕಾರಂತ್ ಅವರು ಕನ್ನಡಕ್ಕೆ ರೂಪಾಂತರಿಸಿದ ನಾಟಕ 'ಮೋಜಿನ ಸೀಮೆಯಾಚೆ ಒಂದೂರು' ಒಂದು ಸುಂದರ ವ್ಯವಸ್ಥೆಯ ಬಗ್ಗೆ ಬೆಳಕು ಚೆಲ್ಲಿತು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಸ್ತ್ರಿವಾದಿ ಹಾಗೂ ಪ್ರಗತಿಪರ ಚಿಂತಕಿ ಅಕ್ಕ ಮಹಾದೇವಿ: : ಹಂಗಾಮಿ ಕುಲಪತಿ ಪ್ರೊ. ಶಾಂತಾದೇವಿ ಟಿ

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ  ಶನಿವಾರ ಆಯೋಜಿಸಿದ್ದ ಶಿವಶರಣೆ ಅಕ್ಕಮಹಾದೇವಿ ಜಯಂತಿ ಕಾರ್ಯಕ್ರಮದಲ್ಲಿ ಮಹಿಳಾ ವಿವಿಯ ಹಂಗಾಮಿ ಕುಲಪತಿ ಪ್ರೊ. ಶಾಂತಾದೇವಿ ಟಿ, ಮಹಿಳಾ ವಿವಿ ಕುಲಸಚಿವ ಶಂಕರಗೌಡ ಸೋಮನಾಳ, ಪ್ರೊ. ಎಂ.ಪಿ ಬಳಿಗಾರ ಹಾಗೂ ಮತ್ತಿತರು  ಅಕ್ಕಮಹಾದೇವಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.


ಈ ದಿವಸ ಕನ್ನಡ ದಿನ ಪತ್ರಿಕೆ

 ವಿಜಯಪುರ: ಅಕ್ಕ ಮಹಾದೇವಿಯವರು ರಾಜಪ್ರಭುತ್ವ ಮತ್ತು ಪುರುಷಪ್ರಧಾನ ವ್ಯವಸ್ಥೆಯನ್ನು ತಿರಸ್ಕರಿಸಿ, ಮಹಿಳಾ ಹಕ್ಕುಗಳ ಪರವಾಗಿ ಧ್ವನಿಯೆತ್ತಿದ ಮೊದಲ ಸ್ತ್ರಿವಾದಿ ಹಾಗೂ ಪ್ರಗತಿಪರ ಚಿಂತಕಿ ಎಂದು ಮಹಿಳಾ ವಿವಿಯ ಹಂಗಾಮಿ ಕುಲಪತಿ ಪ್ರೊ. ಶಾಂತಾದೇವಿ ಟಿ ಹೇಳಿದರು.

ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ  ಶನಿವಾರ ಆಯೋಜಿಸಿದ್ದ ಶಿವಶರಣೆ ಅಕ್ಕಮಹಾದೇವಿ ಜಯಂತಿಯನ್ನು ಆಚರಿಸಿ ಅವರು ಮಾತನಾಡಿದರು.

ಅಕ್ಕಮಹಾದೇವಿಯವರು 12ನೇ ಶತಮಾನದ ಶರಣ ಚಿಂತಕಿಯಾಗಿ, ರಾಜಪ್ರಭುತ್ವ ಹಾಗೂ ಪುರುಷ ಪ್ರಧಾನ ವ್ಯವಸ್ಥೆಯನ್ನು ತಿರಸ್ಕರಿಸಿ, ಮಹಿಳಾ ಪರವಾಗಿ ಧ್ವನಿ ಎತ್ತಿದ ಪ್ರಥಮ ಸ್ತ್ರೀವಾದಿ ಹಾಗೂ ಪ್ರಗತಿಪರ ಚಿಂತಕಿ ಎನಿಸಿಕೊಂಡವರು. ತಮ್ಮ ವಚನಗಳ ಮೂಲಕ ಮಹಿಳೆಯ ಆತ್ಮಸ್ವಾತಂತ್ರ್ಯ, ವ್ಯಕ್ತಿತ್ವ, ಹಾಗೂ ಮಾನವೀಯ ಮೌಲ್ಯಗಳಿಗೆ ಪ್ರಾಮುಖ್ಯತೆ ನೀಡಿದರು ಎಂದರು.

ಇದೇ ಸಂದರ್ಭದಲ್ಲಿ ಮಹಿಳಾ ವಿವಿ ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, ಅಕ್ಕಮಹಾದೇವಿಯವರು ಹಲವು ವಚನಗಳನ್ನು ರಚಿಸುವ ಮೂಲಕ ಸಮಾಜದಲ್ಲಿ ಪ್ರಮುಖ ಬದಲಾವಣೆಗಳಿಗೆ ಕಾರಣರಾಗಿದ್ದಾರೆ. ಅವರು ಸ್ತ್ರೀ-ಪುರುಷ ಭೇದವೆನ್ನುವ ಜಾತ್ಯತೀತ ಮನೋಭಾವನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದರು ಮತ್ತು ಅಂತಹ ಭೇದಭಾವನೆಗಳನ್ನು ಹೊಡೆದು ಹಾಕಲು ಶ್ರಮಿಸಿದರು. ಅವರ ವಚನಗಳು ಮಹಿಳೆಯರ ಆತ್ಮಬಲ, ಸ್ವಾತಂತ್ರ್ಯ ಹಾಗೂ ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿದಿವೆ. ಅಂತಹ ಮಹಾನ್ ವ್ಯಕ್ತಿತ್ವದ ಆದರ್ಶವನ್ನು ಎಲ್ಲ ವಿದ್ಯಾರ್ಥಿಯು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಇದೇ ಸಂದರ್ಭದಲ್ಲಿ  ವಿಶ್ವವಿದ್ಯಾನಿಲಯ ಆವರಣದ ಅಕ್ಕಮಹಾದೇವಿ ಮೂರ್ತಿಗೆ ಕುಲಪತಿ ಪ್ರೊ. ಶಾಂತಾದೇವಿ ಟಿ ರುದ್ರಾಕ್ಷಿ ಮಾಲೆ ಹಾಕಿ ಮತ್ತು ಉದ್ಯಾನದಲ್ಲಿ ಕದಳಿಯ ಸಸಿಗಳನ್ನು ನೆಡುವ ಮೂಲಕ ಗೌರವ ಸಲ್ಲಿಸಿದರು.

ಪ್ರೊ. ಎಂ.ಪಿ ಬಳಿಗಾರ ಪ್ರಾರ್ಥಿಸಿದರು. ನಾರಾಯಣ ಪವಾರ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ಅತಿಥಿ ಉಪನ್ಯಾಸಕಿ ಡಾ.ಸುಧಾರಾಣಿ ಮಣೂರ, ಪ್ರಾಧ್ಯಾಪಕರು, ವಿದ್ಯಾರ್ಥಿನಿಯರು ಹಾಗೂ ಮತ್ತಿತರು ಉಪಸ್ಥಿತರಿದ್ದರು.  ವಿಜಯಕುಮಾರ್ ಹಿರೇಮಠ ವಂದಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.