ಸಿಂದಗಿ: ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಪಟ್ಟಣದಲ್ಲಿ ಸೋಮವಾರ ಭವ್ಯ ಮೆರವಣಿಗೆ ಜರುಗಿತು. ಮೆರವಣಿಗೆಯಲ್ಲಿ ಮಹಾರಾಷ್ಟ್ರದ ನಾಶಿಕ್‌ನ ಡೋಲು ವಾದ್ಯಗಳು, ಗೊಂಬೆಗಳು, ಕಲಾ ತಂಡಗಳು ಮೆರವಣಿಗೆಯ ಕಳೆ ಹೆಚ್ಚಿಸಿತು. ನೀಲಿ ಧ್ವಜ, ಜಯಘೋಷ ಎಲ್ಲೆಡೆ ಮೊಳಗಿದ್ದು ವಿಶೇಷವಾಗಿದ್ದವು.
ಜನಾಕರ್ಷಿಸಿತ ಸ್ತಭ್ದ ಚಿತ್ರ: ಮೆರವಣಿಗೆಯಲ್ಲಿ ಸಂಸತ್ತ ರೂಪಕ ವಾಹನದಲ್ಲಿ ಡಾ.ಅಂಬೇಡ್ಕರ್ ಅವರ ಕುಳಿತ ಬಂಗಿಯ ಭಾವಚಿತ್ರವನ್ನು ಇಟ್ಟು ಅಲಂಕರಿಸಲಾಗಿತ್ತು. ನಾನಾ ಸಂಘಟನೆಗಳ ಪದಾಧಿಕಾರಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಅಂಬೇಡ್ಕರ್ ಜಯಂತಿ ಅಂಗವಾಗಿ ಸಿಂದಗಿಯಲ್ಲಿ ನಡೆದ ಮೆರವಣಿಗೆಯಲ್ಲಿ ಮಹಿಳೆಯರು, ಯುವಕರು ಡಿ.ಜೆ ಸದ್ದಿಗೆ ಕುಣಿದು ಕುಪ್ಪಳಿಸಿದರು.
ಪುರಸಭೆ ಮಾಜಿ ಸದಸ್ಯ ರಾಜಶೇಖರ ಕೂಚಬಾಳ, ದಲಿತ ಸಂಘಟನೆಗಳ ಪ್ರಮುಖರಾದ ಚಂದ್ರಕಾಂತ ಸಿಂಗೆ, ಶ್ರೀಕಾಂತ ಸೋಮಜಾಳ, ಪರುಶರಾಮ ಕಾಂಬಳೆ, ರವಿ ಹೋಳಿ, ಮಲ್ಲು ಕೂಚಬಾಳ, ದತ್ತು ನಾಲ್ಕಮಾನ, ರಮೇಶ ನಡುವಿನಕೇರಿ, ಶ್ರೀನಿವಾಸ ಓಲೇಕಾರ, ರಾವುತ ತಳಕೇರಿ, ಶ್ರೀಶೈಲ ಜಾಲವಾದಿ, ರಾಕೇಶ ಕಾಂಬಳೆ, ಶಿವಾನಂದ ಆಲಮೇಲ, ನಿಂಗರಾಜ, ಹರ್ಷವರ್ಧನ ಪೂಜಾರಿ ಸೇರಿದಂತೆ ಅಭಿಮಾನಿಗಳು ಇದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.



