ವಿಜಯಪುರ : ಜಿಲ್ಲೆಯು ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಅತಿ ಹೆಚ್ಚು ಸ್ಮಾರಕಗಳನ್ನು ಹೊಂದಿರುವ ಜಿಲ್ಲೆ. ಈ ಐತಿಹಾಸಿಕ
ಸ್ಮಾರಕಗಳನ್ನು ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಭಾರತೀಯ ಪುರಾತತ್ವ ಇಲಾಖೆಯ ಸಮೀಕ್ಷೇ ಸಂರಕ್ಷಣಾ ಸಹಾಯಕ ವಿಜಯ್ ಕುಮಾರ್ ಹೇಳಿದರು.
ಬಿ ಎಲ್ ಈ ಸಂಸ್ಥೆಯ ಎಸ್ ಬಿ ಕಲಾ ಮತ್ತು ಕೆ ಸಿ ಪಿ ವಿಜ್ಞಾನ ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕದ ಸಂಯುಕ್ತಾಶ್ರಯದಲ್ಲಿ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಮೈಸೂರು ಇವರ ಸಹಯೋಗದಲ್ಲಿ ಎಸ್ ಬಿ ಕಲಾ ಮತ್ತು ಕೆಸಿಪೀ ವಿಜ್ಞಾನ ಎನ್ಎಸ್ಎಸ್ ವಿದ್ಯಾರ್ಥಿಗಳೊಂದಿಗೆ ವಿಜಯಪುರ ನಗರದ ತರವಿ ದೇವಸ್ಥಾನದಿಂದ ಸಂಗೀತ್ ಮಹಲ್ ವರೆಗೆ ಪಾರಂಪರಿಕ ನಡಿಗೆ ಸ್ಮಾರಕಗಳ ಸ್ವಚ್ಛತೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಪಾರಂಪರಿಕ ನಡಿಗೆಯಲ್ಲಿ ವಿದ್ಯಾರ್ಥಿಗಳು '"ಐತಿಹಾಸಿಕ ಸ್ಮಾರಕ ಉಳಿಸಿ ಸಂಸ್ಕೃತಿ ಬೆಳೆಸಿ " "ಪ್ರತಿ ಕಲ್ಲು ಒಂದೊಂದು ಕಥೆ ಹೇಳುತ್ತವೆ " ಎಂದು ಸ್ಲೋಗನ್ ಗಳನ್ನು ಹೇಳಿದರು.
ಮಹಾವಿದ್ಯಾಲಯದ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ವಿಜಯಪುರ ಐತಿಹಾಸಿಕ ಸ್ಥಳಗಳಿಗೆ ಪ್ರಸಿದ್ಧ ತಾಣ.
ವಿಜಯಪುರ ಜಿಲ್ಲೆಯಲ್ಲಿ ಅತಿ ಹೆಚ್ಚು ಸ್ಮಾರಕಗಳು ಐತಿಹಾಸಿಕ ಸ್ಥಳಗಳು ಇವೆ. ಈ ಈ ಎಲ್ಲ ಐತಿಹಾಸಿಕ ಸ್ಥಳಗಳ ಮತ್ತು ಸ್ಮಾರಕಗಳ ರಕ್ಷಣೆ ನಮ್ಮೆಲ್ಲರ ಹೊಣೆ. ಪ್ರತಿಕಲ್ಲು ಒಂದೊಂದು ಕಥೆ ಹೇಳುತ್ತದೆ ಎಂದು ವಿಜಯ್ ಕುಮಾರ್ ಅವರು ಹೇಳಿದರು
ಈ ಸಂದರ್ಭದಲ್ಲಿ ಪುರಾತತ್ವ ಇಲಾಖೆ ವಾಸ್ತು ಸಂಗ್ರಹಾಲಯಗಳ ನಿರ್ದೇಶಕರಾದ ಸ್ಮೀತಾ ರೆಡ್ಡಿ ಅವರು ಎನ್ಎಸ್ಎಸ್ ವಿದ್ಯಾರ್ಥಿಗಳಿಗೆ ಐತಿಹಾಸಿಕ ಸ್ಮಾರಕಗಳ ರಕ್ಷಣೆಯ ಮಹತ್ವವನ್ನು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರವಾಸೋದ್ಯಮ ಸಲಹೆಗಾರರ ಅನಿಲ್ ಬಣಜಿಗೆ, ಮತ್ತು ಎಸ್ ಬೀ ಕಲಾ ಮತ್ತು ಕೆ ಸಿ ಪಿ ವಿಜ್ಞಾನ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾಕ್ಟರ್ ಆರ್ ಎಂ ಮಿರ್ದೆ ಹಾಗೂ ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕದ ಮುಖ್ಯಸ್ಥರಾದ ಡಾ. ತರುಣಮ ಜಬೀನ್ ಖಾನ್ ಮತ್ತು ಮಿಲನ್ ರಾಠೋಡ್ ಹಾಗೂ ಎಲ್ಲ ಎನ್ ಎಸ್ ಎಸ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.



