Tuesday, April 29, 2025

30-04-2025 EE DIVASA KANNADA DAILY NEWS PAPER

ಜನ್ಮಭೂಮಿಯಲ್ಲಿ ಕರ್ನಾಟಕದ ಸಾಂಸ್ಕøತಿಕ ನಾಯಕ ಬಸವೇಶ್ವರ ಜಯಂತಿ ಉತ್ಸವ ವಚನ ಚಿಂತನ ಕಾರ್ಯಕ್ರಮಕ್ಕೆ ಸಚಿವ ಶಿವಾನಂದ ಪಾಟೀಲ ಚಾಲನೆ


ವಿಜಯಪುರ :  ಬಸವನಬಾಗೇವಾಡಿ ಅಭಿವೃದ್ದಿ ಪ್ರಾಧಿಕಾರದಿಂದ ವಿಶ್ವಗುರು, ಸಾಂಸ್ಕøತಿಕ ನಾಯಕ ಶ್ರೀ ಬಸವೇಶ್ವರ ಜಯಂತಿ ಅಂಗವಾಗಿ ಏ.30 ರಂದು ಬಸವನಬಾಗೇವಾಡಿ ಪಟ್ಟಣದಲ್ಲಿ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ, ಕೃಷಿ ಮಾರುಕಟ್ಟೆ, ಸಚಿವರಾದ ಶಿವಾನಂದ ಪಾಟೀಲ ಅವರು ಚಾಲನೆ ನೀಡಲಿದ್ದಾರೆ.

ಅಂದು ಬೆಳಿಗ್ಗೆ 7 ಗಂಟೆಗೆ ಶ್ರೀ ವಿರಕ್ತಮಠದಿಂದ ಶ್ರೀ ಬಸವೇಶ್ವರ ದೇವಸ್ಥಾನದ ವರೆಗೆ  ಶ್ರೀ ಬಸವೇಶ್ವರ ಮೂರ್ತಿ ಮೆರವಣಿಗೆ, 7-30ಕ್ಕೆ ಬಸವನಬಾಗೇವಾಡಿಯ ವಿರಕ್ತಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳಿಂದ ಪಟಸ್ಥಳ ಧ್ವಜಾರೋಹಣ, ಬೆಳಿಗ್ಗೆ 9-30ಕ್ಕೆ ಶ್ರೀ ಬಸವೇಶ್ವರ ದೇವಸ್ಥಾನದಿಂದ ಬಸವ ಜನ್ಮ ಸ್ಮಾರಕದ ವರೆಗೆ ಮೆರವಣಿಗೆ, ಬೆಳಿಗ್ಗೆ 10-30ಕ್ಕೆ ಸಾಂಸ್ಕøತಿಕ ನಾಯಕ ವಿಶ್ವಗುರು ಶ್ರೀ ಬಾಲಬಸವೇಶ್ವರ ತೊಟ್ಟಿಲು ಹಾಗೂ ನಾಮಕರಣ ಸಮಾರಂಭ ನಡೆಯಲಿದೆ.

ಸಂಜೆ 5 ಗಂಟೆಗೆ ನೆಡಯಲಿರುವ ವಚನ ಚಿಂತನ ಕಾರ್ಯಕ್ರಮಕ್ಕೆ ಬಸವನಬಾಗೇವಾಡಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಸಚಿವರು ಚಾಲನೆ ನೀಡಲಿದ್ದಾರೆ.

ಬಸವನಬಾಗೇವಾಡಿ ವಿರಕ್ತ ಮಠದ ಶ್ರೀಸಿದ್ಧಲಿಂಗ ಶ್ರೀಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆಯಲಿರುವ ವಚನ ಚಿಂತನ ಕಾರ್ಯಕ್ರಮದಲ್ಲಿ ದೇವರಹಿಪ್ಪರಗಿ ಶಾಸಕರಾದ ರಾಜುಗೌಡ ಪಾಟೀಲ, ಪುರಸಭೆ ಅಧ್ಯಕ್ಷೆ ಜಗದೇವಿ ಗುಂಡಳ್ಳಿ, ಶ್ರೀ ಬಸವೇಶ್ವರರ ಸೇವಾ ಸಮಿತಿ ಅಧ್ಯಕ್ಷರಾದ ಈರಣ್ಣ ಚ ಪಟ್ಟಣಶೆಟ್ಟಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಜಿಲ್ಲಾಧಿಕಾರಿ ಭೂಬಾಲನ್, ಜಿ.ಪಂ. ಸಿಇಒ ರಿಷಿ ಆನಂದ, ತಾಲೂಕ ದಂಡಾಧಿಕಾರಿ ವೈ.ಎಸ್.ಸೋಮನಕಟ್ಟಿ, ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ.

ತಾಳಿಕೋಟೆಯ ಜೆ.ಎಸ್.ಜಿ. ಪೌಂಡೇಶನ್ ಕಾರ್ಯದರ್ಶಿ ಶ್ರೀಕಾಂತ ಪತ್ತಾರ ಉಪನ್ಯಾಸ ನೀಡಲಿದ್ದಾರೆ. ಕಲಾವಿದರಾದ ವಿರೇಶ ವಾಲಿ, ಸಾಕ್ಷಿ ಹಿರೇಮಠ ತಂಡದವರಿಂದ ವಚನ ಸಂಗೀತ ಕಾರ್ಯಕ್ರಮ ನಡೆಯಲಿದೆ. ಲಕ್ಷ್ಮೀ ತೇರದಾಳಮಠ ಇವರಿಂದ ವಚನ ನೃತ್ಯ ರೂಪಕ ಪ್ರದರ್ಶನ ನಡೆಯಲಿದೆ.

ರಾತ್ರಿ 9-30ಕ್ಕೆ ಶ್ರೀಬಸವೇಶ್ವರರ ಅಲಂಕೃತ ಪಲ್ಲಕ್ಕಿ, ಶ್ರೀಬಸವೇಶ್ವರರ ಭಾವಚಿತ್ರದ ಮೆರವಣಿಗೆ ನಡೆಯಲಿದೆ ಎಂದು ಬಸವನಬಾಗೇವಾಡಿ ಅಭಿವೃದ್ದಿ ಪ್ರಾಧಿಕಾರದ ಆಯುಕ್ತರಾದ ಮಹದೇವ ಮುರಗಿ ತಿಳಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.