Tuesday, May 13, 2025

ಜಲ ಜೀವನ್ ಮಿಷನ್ (ಜೆಜೆಎಂ) ಯೋಜನೆಯಡಿ ನವರಸಪುರ ಕಾಲೊನಿಗಳಿಗೆ ನೀರು ಪೂರೈಕೆಗೆ ಚಾಲನೆ

ವಿಜಯಪುರ: ನಗರ ಮತಕ್ಷೇತ್ರದಲ್ಲಿ ಬರುವ ತೊರವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನವರಸಪುರದ ವಿವಿಧ ಕಾಲೊನಿಗಳಿಗೆ ಜಲ ಜೀವನ್ ಮಿಷನ್ (ಜೆಜೆಎಂ) ಯೋಜನೆಯಡಿ ಮನೆ ಮನೆಗೆ ನೀರು ಪೂರೈಕೆಗೆ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ರವರು ಬುಧವಾರ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಜೆಜೆಎಂ ಯೋಜನೆಯಡಿ ಪ್ರತಿಯೊಂದು ಮನೆಗಳಿಗೆ ನಳ ಸಂಪರ್ಕ ಕಲ್ಪಿಸುವ ಕಾಮಗಾರಿ ಪೂರ್ಣಗೊಂಡು ಎರಡು ವರ್ಷಗಳಾದರೂ, ನೀರು ಸಂಪರ್ಕ ಕಲ್ಪಿಸದೇ ಇರುವುದರಿಂದ ಅಲ್ಲಿನ ನಿವಾಸಿಗಳಿಗೆ ಬಹಳ ತೊಂದರೆ ಉಂಟಾಗಿತ್ತು. ಈ ಸಮಸ್ಯೆ ಪರಿಹಾರಕ್ಕಾಗಿ ಕಳೆದ ವಿಧಾನಸಭೆ ಅಧಿವೇಶನದಲ್ಲಿ ಚುಕ್ಕೆ ರಹಿತ ಪ್ರಶ್ನೆ ಮೂಲಕ ಸರ್ಕಾರಕ್ಕೆ ಒತ್ತಾಯಿಸಲಾಗಿತ್ತು.

ಆಗ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು, ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯೊಂದಿಗೆ ಸಮನ್ವಯ ಸಾಧಿಸಿ, ಕೂಡಲೇ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳುವುದಾಗಿ ಲಿಖಿತ ಭರವಸೆ ನೀಡಿದ್ದರು. ಅದರಂತೆ ಈಗ ನೀರು ಸರಬರಾಜು ಮಾಡಲು ಎಲ್ಲ ವ್ಯವಸ್ಥೆ ಕಲ್ಪಿಸಲಾಗಿದ್ದು, ಇನ್ನೂ ಮುಂದೆ ನವರಸಪುರದ ಎಲ್ಲ ಕಾಲೊನಿಗಳ ಪ್ರತಿ ಮನೆಗಳಿಗೆ ಶುದ್ಧ ನೀರು ಪೂರೈಕೆ ಆಗಲಿದೆ ಎಂದ ಅವರು, ಸಾರ್ವಜನಿಕರಿಗೆ ನೀರಿನ ತೊಂದರೆ ಆಗದಂತೆ ಸಮರ್ಪಕವಾಗಿ, ನೀರು ಬಿಡಲು ಸಂಬಂಧಿಸಿದ  ಅಧಿಕಾರಿಗಳಿಗೆ ಸೂಚಿಸಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಸುರೇಶ ಗಚ್ಚಿನಮನಿ, ಸದಸ್ಯ ನಾಗೇಂದ್ರ ಯಾದವ, ಮುಖಂಡರಾದ ದಾದಾಸಾಹೇಬ ಬಾಗಾಯತ, ಸಂತೋಷ ಪಾಟೀಲ, ಅಡಿವೆಪ್ಪ ಸಾಲಗಲ್ಲ, ಸುನೀಲ ಚವ್ಹಾಣ, ಸುರೇಶ ಬಬಲೇಶ್ವರ, ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಕಾರ್ಯನಿರ್ವಾಹಕ ಎಂಜನಿಯರ್ ಎಸ್.ಗೋವಿಂದ್, ಸಹಾಯಕ ಕಾರ್ಯನಿರ್ವಾಹಕ ಎಂಜನಿಯರ್ ಗಳಾದ ರಾಮರಾವ್ ರಾಠೋಡ, ಪರ್ವತಪ್ಪ, ಪಿಡಿಓ ರಾಜೇಶ್ವರಿ ತುಂಗಳ ಮತ್ತಿತರರು ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ವಿಜಯಪುರ ಕೃಷಿ ಮಹಾವಿದ್ಯಾಲಯಕ್ಕೆ ಸಮಗ್ರ ಕೃಷಿ ವಿಶ್ವವಿದ್ಯಾಲಯ ರಚನಾ ಸಮಿತಿ ಸದಸ್ಯರ ಭೇಟಿ

ವಿಜಯಪುರ: 2024-25ನೇ ಸಾಲಿನ ಆಯವ್ಯಯ ಘೋಷಣೆಯನ್ವಯ, ಕರ್ನಾಟಕ ರಾಜ್ಯದಲ್ಲಿ ಸಮಗ್ರ ಕೃಷಿ, ತೋಟಗಾರಿಕೆ, ಪಶುಸಂಗೋಪನೆ ಮತ್ತು ಅರಣ್ಯ ಕಾಲೇಜುಗಳ ಮರು ಸಂಘಟನೆಯೊAದಿಗೆ ಸಮಗ್ರ ಕೃಷಿ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲು ರಚಿಸಲಾದ ತಜ್ಞರ ಸಮಿತಿಯು ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಹಾಗೂ ಎರಡನೇಯ ಆಡಳಿತ ಸುಧಾರಣೆ ಆಯೋಗದ ಮಾಜಿ ಅಧ್ಯಕ್ಷ ಡಾ. ಟಿ. ಎಂ. ವಿಜಯಬಾಸ್ಕರ್ ನೇತೃತ್ವದಲ್ಲಿ ಇಂದು ವಿಜಯಪುರ ಕೃಷಿ ಮಹಾವಿದ್ಯಾಲಯಕ್ಕೆ ಆಗಮಿಸಿ ಇಲ್ಲಿರುವ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ರೈತ ಪ್ರತಿನಿಧಿಗಳೊಂದಿಗೆ ತನ್ನ ಅಭಿಪ್ರಾಯ ಸಂಗ್ರಹಿಸಿತು. 

ಈ ಸಂದರ್ಭ ಹಾಜರಿದ್ದ ಪ್ರತಿಯೊಬ್ಬರು ಸಮಗ್ರ ವಿವಿ ಸ್ಥಾಪಿಸುವ ಕುರಿತಂತೆ ತಮ್ಮ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಸಮಿತಿಯಲ್ಲಿ ರಾಯಚೂರು ಕೃಷಿ ವಿವಿ ವಿಶ್ರಾಂತ ಕುಲಪತಿ ಡಾ. ಪಿ. ಎಂ. ಸಾಲಿಮಠ, ವಿಶ್ರಾಂತ ಶಿಕ್ಷಣ ನಿರ್ದೇಶಕ ಡಾ. ಎಮ್. ಜಿ. ಪಾಟೀಲ, ಬೆಂಗಳೂರು ಕೃಷಿ ವಿವಿ ಪ್ರತಿನಿಧಿ ಡಾ. ಶಿವಪ್ರಕಾಶ, ಡಾ. ನಾಗರತ್ನ, ಬಾಗಲಕೋಟ ತೋಟಗಾರಿಕೆ ವಿವಿ ಪ್ರತಿನಿದಿ ಕುಲಪತಿ ಹಿಪ್ಪರಗಿ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಡೀನ್ ಡಾ. ಅಶೋಕ ಎಸ್. ಸಜ್ಜನ ಸ್ವಾಗತಿಸಿದರು. ಸಹ ಸಂಶೋಧನಾ ನಿರ್ದೇಶಕ ಡಾ. ಎಸ್. ಬಿ. ಜಗ್ಗಿನವರ ವಂದಿಸಿದರು.

ಸಭೆಯಲ್ಲಿ ಸಹ ವಿಸ್ತರಣಾ ನಿರ್ದೇಶಕ ಡಾ. ರವೀಂದ್ರ ಬೆಳ್ಳಿ, ಮುಖ್ಯ ವಿಜ್ಞಾನಿ ಡಾ. ಮಿಲಿಂದ ಪೋತದಾರ, ಹಿರಿಯ ವಿಜ್ಞಾನಿ ಡಾ. ಎಸ್. ಎಂ. ವಸ್ತçದ, ಡಾ. ಉಮರಫಾರೂಕ್ ಮೋಮಿನ್, ಪ್ರಾಧ್ಯಾಪಕರುಗಳಾದ ಡಾ. ಎಂ. ಬಿ. ಪಾಟೀಲ, ಡಾ. ಆರ್. ಬಿ. ಜೊಳ್ಳಿ, ಡಾ. ಎಮ್. ವಾಯ್. ತೆಗ್ಗಿ, ಡಾ. ಎಸ್. ಜಿ. ಅಸ್ಕಿ, ಡಾ. ಎ. ಪಿ. ಬಿರಾದಾರ. ಡಾ. ರಮೇಶ ಬೀರಗೆ, ಡಾ. ಕುಶಾಲ, ಡಾ. ಸುದೀಪಕುಮಾರ, ಡಾ. ಸಿದ್ರಾಮ ಪಾಟೀಲ, ಸಿದ್ದು ಇಂಗಳೇಶ್ವರ, ಕೃಷಿಕ ಸಮಾಜದ ಶಿವನಗೌಡ ಬಿರಾದಾರ, ಪ್ರಗತಿಪರ ರೈತರಾದ ಎಸ್. ಟಿ. ಪಾಟೀಲ, ಸಿದ್ದಪ್ಪ ಬೂಸಗೊಂಡ, ಸಂಗಮೇಶ ಸಗರ, ಶೆಟ್ಟೆಪ್ಪ ನಾವಿ, ವೀರಣ್ಣ ಸಜ್ಜನ, ಚಾಂದಬೀ ಆಲಮೇಲ, ವಿದ್ಯಾರ್ಥಿ ಮುಖಂಡರಾದ ರಿಯಾನ್‌ಮಲ್ಲಿಕ ಹಳ್ಳೂರ, ಸುಮಿತ ಕೋರೆ, ಅರವಿಂದ ಬೂಸಗೊಂಡ, ಸ್ಪೂರ್ತಿ ಹೆಚ್, ಸೇರಿದಂತೆ ಅನೇಕ ಆಮಂತ್ರಿತರು ಉಪಸ್ಥಿತರಿದ್ದರು. 

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಅನಧಿಕೃತ ಗ್ಯಾಸ್ ಬಳಕೆ ; 19 ಪ್ರಕರಣ ದಾಖಲು

 ವಿಜಯಪುರ : ವಿಜಯಪುರ ನಗರದಾದ್ಯಂತ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರಗಳನ್ನು ಅನಧಿಕೃತವಾಗಿ ಬಳಕೆ ಮಾಡುತ್ತಿರುವ ಸ್ಥಳಗಳಿಗೆ ದಾಳಿ ನಡೆಸಿ 2024ರ ನವೆಂಬರ್ ಮಾಹೆಯಿಂದ ಈವರೆಗೆ ಒಟ್ಟು 110 ಸಿಲಿಂಡರ್‌ಗಳನ್ನು ಜಪ್ತಿ ಮಾಡಿ 19 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕ ವಿನಯಕುಮಾರ ಪಾಟೀಲ ತಿಳಿಸಿದ್ದಾರೆ. 

ನಗರದಾದ್ಯಂತ ಅನಧಿಕೃತವಾಗಿ ಆಟೋಗಳಿಗೆ, ಹೋಟೆಲ್‌ಗಳು, ಬೀದಿ ಬದಿ ಆಹಾರ ತಯಾರಿಕೆ ವ್ಯಾಪಾರಸ್ಥರು ಸೇರಿದಂತೆ ವಾಣಿಜ್ಯೋದ್ಯಮ ಸಿಲಿಂಡರುಗಳಿಗೆ ಗೃಹ ಬಳಕೆ ಗ್ಯಾಸ್ ಮರು ಭರ್ತಿ ಮಾಡಿ ಮಾರಾಟ ಮಾಡುತ್ತಿರುವವರ ಮೇಲೆ ಪೊಲೀಸ್ ಇಲಾಖೆ ಸಹಯೋಗದೊಂದಿಗೆ ದಾಳಿ ನಡೆಸಿ ಪ್ರಕರಣ ದಾಖಲಿಸಲಾಗಿದೆ. 

ಅನಧಿಕೃತವಾಗಿ ಎಲ್‌ಪಿಜಿ ಗ್ಯಾಸ್ ಬಳಕೆ ಮಾಡುವುದು ಹಾಗೂ ವಾಣಿಜ್ಯೋದ್ಯಮ ಸಿಲಿಂಡರ್‌ಗಳಿಗೆ ಮರು ಭರ್ತಿ ಮಾಡುವುದು ಅಪರಾಧವಾಗಿದ್ದು,. ಇಂತಹ ಪ್ರಕರಣಗಳು ಕಂಡು ಬಂದಲ್ಲಿ ಅಂತಹವರ ವಿರುದ್ಧ ಕಾಯ್ದೆ ಉಲ್ಲಂಘನೆ ಮೇರೆಗೆ ಸಿಲಿಂಡರ್‌ಗಳನ್ನು ಜಪ್ತಿ ಮಾಡುವುದಲ್ಲದೇ ಅಗತ್ಯ ವಸ್ತುಗಳ ಕಾಯ್ದೆ 1955ರ ಸೆಕ್ಷನ್ 3/7ರನ್ವಯ ಕ್ರಿಮಿನಲ್ ಮೂಕದ್ದಮೆ ದಾಖಲಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಜಗತ್ತಿಗೆ ಶಾಂತಿ, ಅಹಿಂಸೆ ಮತ್ತು ಸತ್ಯದ ದಾರಿ ತೋರಿದ ಮಹಾನ್ ದಾರ್ಶನಿಕ ಗೌತಮ ಬುದ್ಧ

ವಿಜಯಪುರ: ಜಗತ್ತಿಗೆ ಶಾಂತಿ, ಅಹಿಂಸೆ ಮತ್ತು ಸತ್ಯದ ದಾರಿ ತೋರಿದ ಮಹಾನ್ ದಾರ್ಶನಿಕ ಗೌತಮ ಬುದ್ಧ ಎಂದು ಠಾಣೆ ಮುಂಬಯಿ ಮತ್ತು ಪಂಢರಪುರದ ಫಾರ್ಮಸಿ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ ಡಾ.ಜೆ. ಎಸ್. ಪಾಟೀಲ ಎಂದು ಹೇಳಿದರು.

ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಡಾ. ಬಿ. ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರ ಮತ್ತು ಪರಿಶಿಷ್ಠ ಜಾತಿ/ ಪರಿಶಿಷ್ಠ ಪಂಗಡಗಳ ಘಟಕದ ಸಹಯೋಗಲ್ಲಿ ಸೋಮವಾರ ಆಯೋಜಿಸಿದ್ದ ಗೌತಮ ಬುದ್ಧನ 2569 ನೇ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಾನವೀಯ ಮೌಲ್ಯಗಳನ್ನು ಸಾರಿದ ಈ ಮಹಾಚೇತನ ಅವರ ತತ್ವಗಳು ಜೀವನದ ಪರಿಪೂರ್ಣತೆಗೆ ದಾರಿ ತೋರಿಸುತ್ತವೆ. ಬುದ್ಧ ಸ್ಥಾಪಿಸಿದ ಬೌದ್ಧಧರ್ಮವು ಭಾರತದ ಮೂಲೆ ಮೂಲೆಯಲ್ಲೂ ಹರಡಿದ್ದು, ಸಾವಿರಾರು ಜನರಿಗೆ ನೆಮ್ಮದಿಯ ಜೀವನ ನೀಡಿದೆ. ಆದರೆ ಇಂದಿನ ಕೆಲ ಆಚರಣೆಗಳು ಮತ್ತು ಸಂಪ್ರದಾಯಗಳು ಮೌಢ್ಯದಿಂದ ಕೂಡಿವೆ ಎಂಬದು ವಿಷಾದಕರ. ಬುದ್ಧ, ಬಸವ ಹಾಗೂ ಡಾ. ಬಿ. ಆರ್. ಅಂಬೇಡ್ಕರ್‌ರವರು ಬೋಧಿಸಿದ ತತ್ವಗಳನ್ನು ಅನುಸರಿಸುವ ಮೂಲಕ ನಾವೆಲ್ಲರೂ ಸಮಾನತೆ, ಶಾಂತಿ ಮತ್ತು ನೈತಿಕ ಮೌಲ್ಯಗಳ ನಿರ್ಮಿಸಬೇಕಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮಹಿಳಾ ವಿವಿಯ ಹಂಗಾಮಿ ಕುಲಪತಿ ಪ್ರೊ. ಶಾಂತಾದೇವಿ ಟಿ. ಮಾತನಾಡಿ, ಇಂದಿನ ಮೋಸ, ದರೋಡೆ, ಕೊಲೆ ಸೇರಿದಂತೆ ವಿವಿಧ ಕುಕೃತ್ಯಗಳ ಕಾಲದಲ್ಲಿ ಗೌತಮ ಬುದ್ಧನ ತತ್ವ ಆದರ್ಶಗಳು ಅಪಾರ ಪ್ರಸ್ತುತತೆಯನ್ನು ಹೊಂದಿವೆ ಎಂಬುದು ಸತ್ಯ. ನಾವು ಬುದ್ಧನ ಸನ್ಮಾರ್ಗದಲ್ಲಿ ನಡೆಯುತ್ತಿದ್ದರೆ, ಜೀವನ ಉಜ್ವಲವಾಗುತ್ತದೆ ಮತ್ತು ಸಾರ್ಥಕತೆಯನ್ನು ಹೊಂದುತ್ತದೆ. ಪ್ರತಿಯೊಬ್ಬರೂ ಸುಖವಾಗಿ, ಶಾಂತಿಯಿAದ ಬದುಕಲು ಬುದ್ಧನು ಪ್ರತಿಪಾದಿಸಿದ ಪಂಚಶೀಲ ಅಹಿಂಸೆ, ಸತ್ಯ, ಕಳ್ಳತನವಿಲ್ಲದ ಜೀವನ, ಹಾಗೂ ಮಾದಕವಸ್ತುಗಳಿಂದ ದೂರವಿರುವ ನಡವಳಿಕೆ ಇವುಗಳನ್ನು ನಿಷ್ಠೆಯಿಂದ ಪಾಲಿಸುವ ಅಗತ್ಯವಿದೆ ಎಂದರು.

ಕಾರ್ಯಕ್ರಮದಲ್ಲಿ ಕುಲಸಚಿವ ಶಂಕರಗೌಡ ಸೋಮನಾಳ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತ ವಿದ್ಯಾರ್ಥಿನಿಯರಿಗೆ ರಸಪ್ರಶ್ನೆಗಳನ್ನು ಕೇಳುವ ಮೂಲಕ ಉತ್ಸಾಹ ಮತ್ತು ಪ್ರೇರಣೆಯನ್ನು ತಂದರು.

ಕಾರ್ಯಕ್ರಮದಲ್ಲಿ ಪ್ರೊ. ಮಹೇಶ ಚಿಂತಾಮಣಿ, ಪ್ರೊ. ಪಿ ಕಣ್ಣನ್, ಪ್ರೊ.ಡಿಎಮ್ ಮದರಿ, ಪ್ರೊ. ಸಕ್ಪಾಲ್ ಹೂವಣ್ಣ, ಪ್ರೊ. ವೆಂಕೋಬಾ ಎನ್. ಡಾ.ರಮೇಶ ಸೊನಕಾಂಬಳೆ ಹಾಗು ಬೋಧಕ, ಬೊಧಕೇತರ ಸಿಬ್ಬಂದಿಗಳು, ಅತಿಥಿ ಉಪನ್ಯಾಸಕರು, ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಡಾ. ಬಿ. ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕ ಡಾ.ಸಂಜೀವ ಕುಮಾರಗಿರಿ ಸ್ವಾಗತಿಸಿದರು, ಡಾ. ಕಲಾವತಿ ಕಾಂಬಳೆ ನಿರೂಪಿಸಿ ವಂದಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಭಾರತಕ್ಕೆ ಪಾಕ್ ಸೋಲಿಸುವುದು ಕಷ್ಟವಲ್ಲ : ಶಿವಾನಂದ

ವಿಜಯಪುರ : ಕದನ ವಿರಾಮ ಉಲ್ಲಂಘಿಸಿರುವ ಪಾಕಿಸ್ತಾನವನ್ನು ಸೋಲಿಸುವುದು ಭಾರತಕ್ಕೆ ದೊಡ್ಡ ಕೆಲಸವೇ ಅಲ್ಲ. ಹಿಂದೆ ಎರಡು ಬಾರಿ ಪಾಕಿಸ್ತಾನ ದೇಶವನ್ನು ಸೋಲಿಸಿರುವ ಭಾರತೀಯ ಸೈನಿಕರಿಗೆ ಮೂರನೇ ಬಾರಿಗೆ ಸೋಲಿಸುವುದು ಕಷ್ಟವೇ ಎಂದಿರುವ ಜವಳಿ, ಕೃಷಿ ಮಾರುಕಟ್ಟೆ, ಸಕ್ಕರೆ, ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ, ಅಮೆರಿಕಾ ಮಧ್ಯಪ್ರವೇಶಿಸಿದ್ದು ಸರಿಯಲ್ಲ ಎಂದಿದ್ದಾರೆ.

ಮAಗಳವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪಾಕ್ ಕದನ ವಿದಾಮ್ ಉಲ್ಲಂಘನೆ ವಿಚಾರದಲ್ಲಿ ಸರ್ವಪಕ್ಷ ನಿಯೋಗ ಪ್ರಧಾನಿಗಳಿಗೆ ಒತ್ತಾಯ ಮಾಡಿದೆ. ಸೀಸ್ ಫೈರ್ ಮಾಡುವದಾದರೆ ಅಧಿವೇಶ ಕರೆಯಬೇಕು, ಸೀಸ್ ಫೈರ್ ಮಾಡದಿದ್ದರೆ ಅಧಿವೇಶನ ಕರೆಯಬೇಡಿ. ಇಲ್ಲದಿದ್ದರೆ ವಾರ್ ಆದ್ರೂ ಮಾಡಿ ಎಂದರು.

ಯಾವುದೇ ಒಂದು ನಿಷ್ಕರ್ಷಕ್ಕೆ ಬರದೇ, ಬೇರೆ ಯಾರೋ ಹೇಳಿದರೆ ಅದಕ್ಕೊಂದು ಕಂಡಿಷನ್ ಇರಬೇಕು. ಅಮೇರಿಕಾದವರು ಇಂಟರ್ ಫಿಯರ್ ಮಾಡಿದ್ದಾರೆ. ಕಾಶ್ಮೀರ ವಿಷಯ ಇಟ್ಟುಕೊಂಡು ನಿಮ್ಮ ಇಂಟರ್ ಫೈರ್ ಮಾಡುವದಾದರೆ ಸೀಸ್ ಫೈರ್ ಮಾಡಬಾರದಿತ್ತು. ಷರತ್ತು ರಹಿತವಾಗಿದ್ದರೆ ಮಾತ್ರ ಯುದ್ಧ ವಿರಾಮ ಘೋಷಿಸುವ ಮಾತುಕತೆಗೆ ಬರುತ್ತೇವೆ ಎಂದಿದ್ದರೆ ಅದು ಸೂಕ್ತವಾಗಿತ್ತು. ಅದನ್ನೆ ವಿರೋಧ ಪಕ್ಷದವರು, ದೇಶದ ಜನ ಕೇಳುತ್ತಿರುವುದು ಎಂದರು.

ಭಾರತೀಯ ಸೈನಿಕರು ಪಾಕಿಸ್ತಾನವನ್ನು ಎರಡು ಬಾರಿ ಸೋಲಿಸಿದ್ದು, ಮೂರನೇ ಬಾರಿ ಸೋಲಿಸುವದು ಕಷ್ಟದ ಕೆಲಸವಲ್ಲ. ಸರ್ವ ಪಕ್ಷಗಳ ಸಭೆ ಕರೆದಲ್ಲಿ, ಸದರಿ ಸಭೆಯಲ್ಲಿ ಅನೇಕ ವಿಷಯ ಚರ್ಚೆ ಆಗಲಿವೆ. ಆದರೆ ಮೋದಿ ಅವರು ಸಮರ್ಪಕ ಉತ್ತರ ಕೊಟ್ಟರೆ ಎಲ್ಲರೂ ಒಪ್ಪಿಕೊಳ್ಳಬಹುದು, ಇರದಿದ್ದರೆ ವಿಮರ್ಸೆ ಆಗಬಹುದು ಎಂದರು.

ಸೀಸ್ ಫೈರ್ ಮಾಡುವದಾದರೆ ಅಧಿವೇಶನ ಕರೆಯಿರಿ, ಯುದ್ಧ ಮುಂದುವಸಿದರೆ ಸಭೆ ಕರೆಯುವ ಅವಶ್ಯಕತೆ ಇಲ್ಲ ಎಂದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಫೋಡಿ ಮುಕ್ತ ಅಭಿಯಾನ ಗ್ರಾಮಗಳಿಗೆ ತೆರಳಿ ಫೋಡಿ ಕಾರ್ಯ ಕೈಗೊಳ್ಳುವಂತೆ ಅಧಿಕಾರಿಗಳಿಗೆ -ಸಚಿವ ಕೃಷ್ಣ ಭೈರೇಗೌಡ ಸೂಚನೆ

 ವಿಜಯಪುರ : ಸರ್ಕಾರದಿಂದ ಫೋಡಿ ಮುಕ್ತ ಅಭಿಯಾನವನ್ನು ಹಮ್ಮಿಕೊಂಡಿದ್ದು, ಜನರು ಬಂದು ಅರ್ಜಿ ಸಲ್ಲಿಸುವವರೆಗೆ ಕಾಯ್ದು ಕುಳಿತುಕೊಳ್ಳದೇ ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಿ ಫೋಡಿ ಕಾರ್ಯ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಂದಾಯ ಖಾತೆ ಸಚಿವರಾದ ಕೃಷ್ಣ ಭೈರೇಗೌಡ ಅವರು ಸೂಚನೆ ನೀಡಿದರು.

ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಫೋಡಿಗೆ ಬಾಕಿ ಇರುವ ಪ್ರಕರಣಗಳನ್ನು ಖುದ್ದಾಗಿ ಗ್ರಾಮಗಳಿಗೆ ಭೇಟಿ ನೀಡಿ ಫೋಡಿಗೆ ಬಾಕಿ ಇರುವ ಜಮೀನುಗಳ ಪರಿಶೀಲನೆ ನಡೆಸಬೇಕು. ಈ ಕಾರ್ಯವನ್ನು ಅಭಿಯಾನದ ಮಾದರಿಯಲ್ಲಿ ಕೈಗೊಳ್ಳಬೇಕು. ಒಂದೇ ಆರ್‌ಟಿಸಿಯಲ್ಲಿ ಹಲವು ಹೆಸರು ನಮೂದಾಗಿರುವ ಆರ್‌ಟಿಸಿಯನ್ನು ಸರ್ವೇ ನಡೆಸಿ, ನಕ್ಷೆ ತಯಾರಿಸಿ ಪ್ರತ್ಯೇಕವಾಗಿ ಆಯಾ ಜಮೀನಿನ ಮಾಲೀಕರ ಹೆಸರಿಗೆ ಆರ್‌ಟಿಸಿ ಒದಗಿಸಲು ಕ್ರಮ ವಹಿಸಬೇಕು ಎಂದು ಅವರು ಸೂಚನೆ ನೀಡಿದರು.

ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಭೂ ಸುರಕ್ಷಾ ಯೋಜನೆಯಡಿ ದಾಖಲೆಗಳನ್ನು ಗಣಕೀಕರಣ ಮಾಡುವ ಮೂಲಕ ಹಳೆಯ ದಾಖಲೆಗಳನ್ನು ಅತ್ಯಂತ ಸುಲಭವಾಗಿ ಜನರಿಗೆ ಒದಗಿಸಲು ಉತ್ತಮ ಸೇವೆ ನೀಡುವ ನಿಟ್ಟಿನಲ್ಲಿ ಕಂದಾಯ ಇಲಾಖೆಯಲ್ಲಿನ ಭೂಸುರಕ್ಷಾ ಯೋಜನೆಯಡಿ ಮೂಲ ಹಳೆಯ ದಾಖಲೆಗಳ ಗಣಕೀಕರಣ ನಡೆಯುತ್ತಿದ್ದು, ರಾಜ್ಯದಾದ್ಯಂತೆ ಅಂದಾಜು 20 ಕೋಟಿ ಪುಟಗಳ ದಾಖಲೆಗಳ ಗಣಕೀಕರಣ ಕಾರ್ಯ ಮಾಡಲಾಗಿದೆ. ಇನ್ನೂ ಬಾಕಿ ಇರುವ ದಾಖಲೆಗಳ ಗಣಕೀಕರಣವನ್ನು ಈ ವರ್ಷದ ಅಂತ್ಯದೊಳಗೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದ್ದು, ಈ ನಿಟ್ಟಿನಲ್ಲಿ ಅಧಿಕಾರಿಗಳು ಹಳೆಯ ದಾಖಲೆಗಳ ಗಣಕೀಕರಣ ಕಾರ್ಯಕ್ಕೆ ತ್ವರಿತ ಗತಿ ನೀಡುವಂತೆ ಅವರು ಸೂಚನೆ ನೀಡಿದರು. 

 ಸಭೆಯಲ್ಲಿ ಜಿಲ್ಲೆಯ ಎಲ್ಲ ತಾಲೂಕಿನ ಭೂ ಸುರಕ್ಷಾ ಪ್ರಗತಿ ವಿವರ ಪಡೆದುಕೊಂಡ ಅವರು, ದಾಖಲೆಗಳನ್ನು ನಿಯಮಿತವಾಗಿ ಪರಿಶೀಲನೆ ನಡೆಸಿ, ಗಣಕೀಕರಣ ಮಾಡಬೇಕು. ಕಾಲಮಿತಿಯೊಳಗೆ ಗಣಕೀಕರಣ ಕಾರ್ಯ ಪೂರ್ಣಗೊಳಿಸಬೇಕು. ಈ ಕಾರ್ಯಕ್ಕೆ ವೇಗ ನೀಡಲು ತಮ್ಮ ಹಂತದಲ್ಲಿಯೇ ಸಿಬ್ಬಂದಿಗಳ ಹೊಂದಾಣಿಕೆ ಮಾಡಿಕೊಂಡು ಪ್ರಗತಿ ಸಾಧಿಸುವಂತೆ ಸೂಚಿಸಿದ ಅವರು, ಗಣಕೀಕರಣ ಕಾರ್ಯದಿಂದ ಜನರಿಗೆ ಯಾವುದೇ ದಾಖಲೆಗಳನ್ನು ಸಮರ್ಪಕವಾಗಿ ಒದಗಿಸಬಹುದಾಗಿದ್ದು, ದಾಖಲೆಗಳು ಕಳೆದು ಹೋಗುವುದು, ನಾಶವಾಗುವುದು ಸೇರಿದಂತೆ ಇದಕ್ಕೆ ಶಾಶ್ವತ ಪರಿಹಾರ ದೊರೆತು ದಾಖಲೆಗಳನ್ನು ಸುಭದ್ರವಾಗಿ ಕಾಯ್ದಿಟ್ಟುಕೊಳ್ಳಬಹುದಾಗಿರುವುದರಿಂದ ಜನರಿಗೆ ಅವಶ್ಯಕವಿರುವ ದಾಖಲೆಗಳ ಅಧಿಕೃತ ಪ್ರತಿಯನ್ನು ಸಹ ಆನ್‌ಲೈನ್ ಮೂಲಕವೇ ಪಡೆಯಲು ಅನುಕೂಲವಾಗುವುದರಿಂದ ಅಧಿಕಾರಿಗಳು ಗಣಕೀಕರಣ ಕಾರ್ಯಕ್ಕೆ ಆದ್ಯತೆ ನೀಡುವಂತೆ ಅವರು ಸೂಚನೆ ನೀಡಿದರು.

 ಜಮೀನಿನ ಮಾಲೀಕ ಮರಣ ಹೊಂದಿದ್ದರೂ ಸಹ ಇದುವರೆಗೆ ವಾರಸುದಾರರ ಹೆಸರಿಗೆ ಜಮೀನು ಬದಲಾವಣೆಯಾಗದೇ ಮರಣ ಹೊಂದಿದ ವ್ಯಕ್ತಿಯ ಹೆಸರಿನಲ್ಲಿಯೇ ಹಲವು ಖಾತಾಗಳಿವೆ. ಜಿಲ್ಲೆಯಲ್ಲಿ ಇಂತಹ ಪ್ರಕರಣಗಳನ್ನು ಗುರುತಿಸಿ ಪೌತಿ ಖಾತೆ ಮಾಡಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.

 ತಾಂಡಾ ಸೇರಿದಂತೆ ದಾಖಲೆ ರಹಿತ ವಸತಿ ಪ್ರದೇಶಗಳನ್ನು ಅಧಿಕೃತ ಗ್ರಾಮಗಳನ್ನಾಗಿ ಘೋಷಣೆ ಮಾಡಲಾಗುತ್ತಿದ್ದು, ಯಾವುದೇ ನ್ಯೂನ್ಯತೆಗಳಿದ್ದಲ್ಲಿ ನಿವಾರಿಸಿಕೊಂಡು, ಕಂದಾಯ ಗ್ರಾಮಗಳನ್ನಾಗಿಸುವ ಪ್ರಕ್ರಿಯೆಯಲ್ಲಿ ಕೈಬಿಟ್ಟು ಹೋದ ಪ್ರದೇಶವನ್ನು ಕೈಗೆತ್ತಿಕೊಳ್ಳಬೇಕು. ಬಡ ಜನರಿಗೆ ಕಾಯಕಲ್ಪ ಒದಗಿಸುವ ಕಾರ್ಯ ಇದಾಗಿರುವುದರಿಂದ ಅಧಿಕಾರಿಗಳು ಇಚ್ಛಾಶಕ್ತಿಯಿಂದ ಕಾರ್ಯನಿರ್ವಹಿಸಿ, ಕಾನೂನು ತೊಡಕುಗಳನ್ನು ನಿಮ್ಮ ಹಂತದಲ್ಲಿಯೇ ನಿವಾರಿಸಿಕೊಂಡು ಇತ್ಯರ್ಥಪಡಿಸಲು ಕ್ರಮ ವಹಿಸಬೇಕು. ಅಂತಿಮ ಅಧಿಸೂಚನೆ ಬಾಕಿ ಇರುವ ಪ್ರಕರಣಗಳನ್ನು ಆದ್ಯತೆ ಮೇಲೆ ಕೈಗೆತ್ತಿಕೊಳ್ಳಬೇಕು. ಮಾರ್ಗಸೂಚಿಯನ್ವಯ ಕಂದಾಯ ಗ್ರಾಮಗಳನ್ನಾಗಿಸಲು ನಿಯಮಗಳೊಂದಿಗೆ ಸರಿಹೊಂದಿಸಿಕೊAಡು ಸರ್ಕಾರದ ನಿಯಮಗಳನುಸಾರ ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲೆಯ ವಿವಿಧ ತಾಲೂಕಿನ ಕಂದಾಯ ಗ್ರಾಮಗಳ ರಚನೆ, ಕಂದಾಯ ಗ್ರಾಮಗಳ ಹಕ್ಕು ಪತ್ರಕ್ಕೆ ಸಂಬAಧಿಸಿದ ಬಾಕಿ ಇರುವ ಪ್ರಕರಣಗಳ ಕುರಿತು ಪ್ರಗತಿ ಪರಿಶೀಲನೆ ನಡೆಸಿ, ಆಂದೋಲನದ ಮಾದರಿಯಲ್ಲಿ ಹಕ್ಕು ಪತ್ರ ತಯಾರಿಸಲಾಗುತ್ತಿದೆ, ದಾಖಲೆ ರಹಿತ ಪ್ರದೇಶಗಳಲ್ಲಿ ವಾಸ ಮಾಡುತ್ತಿರುವ ಒಂದು ಲಕ್ಷ ಕುಟುಂಬಗಳ ಮನೆಗಳಿಗೆ ಮೇ.20 ರಂದು ಹೊಸಪೇಟೆಯಲ್ಲಿ ಹಕ್ಕು ಪತ್ರ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬಾಕಿ ಇರುವ ಹಕ್ಕುಪತ್ರಗಳನ್ನು ಮುಂದಿನ 6 ತಿಂಗಳಲ್ಲಿ ವಿತರಣೆ ಮಾಡುವ ಗುರಿ ಹೊಂದಲಾಗಿದೆ ಎಂದು ಅವರು ತಿಳಿಸಿದರು.

ಸಭೆಯಲ್ಲಿ ಜವಳಿ, ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ, ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ, ಜಿಲ್ಲಾಧಿಕಾರಿ ಟಿ.ಭೂಬಾಲನ್, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೇರಿದಂತೆ ಕಂದಾಯ ಇಲಾಖೆ ಅಧಿಕಾರಿಗಳು, ವಿವಿಧ ತಾಲೂಕಾ ತಹಶೀಲ್ದಾರರು ಉಪಸ್ಥಿತರಿದ್ದರು.