Thursday, May 15, 2025
ಸರ್ಕಾರಿ ಜಾಗ ಅತಿಕ್ರಮಣ-ಒತ್ತುವರಿಯಾದಲ್ಲಿ ಸಂಬಂಧಿಸಿದ ಅಧಿಕಾರಿಗಳೇ ಹೊಣೆ -ಸಚಿವ ಬಿ.ಎಸ್.ಸುರೇಶ
ವಿಜಯಪುರ : ನಗರಾಭಿವೃದ್ದಿ ಪ್ರಾಧಿಕಾರ, ಮಹಾನಗರ ಪಾಲಿಕೆ ವ್ಯಾಪ್ತಿಯ ಜಾಗಗಳನ್ನು ಗುರುತಿಸಿ ಸೂಕ್ತ ಸಂರಕ್ಷಣೆಗೆ ಕ್ರಮ ವಹಿಸಬೇಕು. ಒಂದಡಿ ಸರ್ಕಾರಿ ಜಾಗ ಅತಿಕ್ರಮಣ, ಒತ್ತುವರಿ ಕಬಳಿಕೆಯಾದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿಸಿ ಕ್ರಮ ವಹಿಸಲಾಗುವುದು ಎಂದು ನಗರಾಭಿವೃದ್ದಿ ಮತ್ತು ನಗರ ಯೋಜನೆ ಖಾತೆ ಸಚಿವರಾದ ಬಿ.ಎಸ್.ಸುರೇಶ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಗುರುವಾರ ಮಹಾನಗರ ಪಾಲಿಕೆ ಕಚೇರಿ ಸಭಾಂಗಣದಲ್ಲಿ ಮಹಾನಗರ ಪಾಲಿಕೆ, ನಗರಾಭಿವೃದ್ದಿ ಪ್ರಾಧಿಕಾರ, ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆ, ಕೆಯುಐಡಿಎಫ್‍ಸಿ ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಪ್ರಗರಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಸರ್ಕಾರಿ ಜಾಗವನ್ನು ಗುರುತಿಸಿ ತಂತಿ ಬೇಲಿ ಸೇರಿದಂತೆ ಸೂಕ್ತ ಸಂರಕ್ಷಣೆಗೆ ಕ್ರಮ ವಹಿಸಬೇಕು. ಸರ್ಕಾರಿ ಜಾಗ ಒತ್ತುವರಿ, ಅತಿಕ್ರಮಣ ಮಾಡಿಕೊಂಡವರ ಮೇಲೆ ಕ್ರಿಮಿನಲ್ ಮೂಕದ್ದಮೆ ದಾಖಲಿಸುವುದರೊಂದಿಗೆ ಸಂಬಂಧಿಸಿದ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಸೂಕ್ತ ಕ್ರಮ ವಹಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.
ಸರ್ಕಾರದಿಂದ ರಾಜ್ಯದ ಮಹಾನಗರ ಪಾಲಿಕೆಗಳಿಗೆ ಅತಿ ಹೆಚ್ಚು ಅನುದಾನ ಒದಗಿಸಲಾಗಿದೆ. ವಿಜಯಪುರ ಮಹಾನಗರ ಪಾಲಿಕೆಗೆ 150 ಕೋಟಿ ರೂ. ಬಿಡುಗಡೆಯಾಗಿದ್ದು, ಮುಂದಿನ 15 ದಿನದೊಳಗಾಗಿ ವಾರ್ಡವಾರು 4 ಕೋಟಿ ರೂ.ನಂತೆ ವಿಂಗಡಿಸಿ ಹಂಚಿಕೆ ಮಾಡಲಾಗುವುದು. ಮುಂದಿನ 2 ತಿಂಗಳೊಳಗಾಗಿ ಟೆಂಡರ್ ಸೇರಿದಂತೆ ಎಲ್ಲ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ನಗರದ ಪ್ರತಿ ವಾರ್ಡಗಳಲ್ಲಿ ಕಾಮಗಾರಿ ಆರಂಭಿಸುವಂತೆ ಅವರು ಸೂಚನೆ ನೀಡಿದರು.
ಮಹಾನಗರ ಪಾಲಿಕೆ ವತಿಯಿಂದ ಸಮರ್ಪಕವಾಗಿ ಕರ ವಸೂಲಾತಿಗೆ ಕ್ರಮ ವಹಿಸಬೇಕು. ಪಾಲಿಕೆಯ ವ್ಯಾಪ್ತಿಯ ಎಲ್ಲ ವಾರ್ಡಗಳಲ್ಲಿ ಯಾವುದೇ ಸಮಸ್ಯೆಯಾಗದಂತೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆ ಮಾಡಬೇಕು. ನಿಯಮಾನುಸಾರ ಕರ ವಸೂಲಾತಿಯಲ್ಲಿ ಪ್ರಗತಿ ಸಾಧಿಸಬೇಕು. ಈ ಖಾತಾ ನೀಡುವಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಸಮರ್ಪಕವಾಗಿ ದಾಖಲೆಗಳನ್ನು ಪರಿಶೀಲಿಸಿ ನಿಯಮಾನುಸಾರ ಈ-ಖಾತಾ ಒದಗಿಸಲು ಕ್ರಮ ವಹಿಸಬೇಕು. ಸರ್ವರ ಸಮಸ್ಯೆ, ಸಿಬ್ಬಂದಿಗಳ ಸಮಸ್ಯೆ ಎಂದು ಸಬೂಬು ನೀಡದೇ ಕೂಡಲೇ ನಿಮ್ಮ ಹಂತದಲ್ಲಿಯೇ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿಕೊಂಡು ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಅವರು ಸೂಚನೆ ನೀಡಿದರು.
ಸಮರ್ಪಕವಾಗಿ ದಾಖಲೆಗಳನ್ನು ಪರಿಶೀಲನೆ ನಡೆಸಿ ಅರ್ಹರಿಗೆ ಕಟ್ಟಡ ಪರವಾನಿಗೆ ನೀಡಲು ಕ್ರಮ ವಹಿಸುವಂತೆ ಸೂಚಿಸಿದ ಅವರು, ಕಟ್ಟಡ ಪರವಾನಿಗೆ ನೀಡಲು ಇರುವ ತಾಂತ್ರಿಕ ತೊಂದರೆಗಳ ನಿವಾರಿಸಿಕೊಂಡು ಕಟ್ಟಡ ಪರವಾನಿಗೆ ಒದಗಿಸಲು ಕ್ರಮ ವಹಿಸಬೇಕು. ಆಸ್ತಿ ಕರ ಪಾವತಿ ಕುರಿತಂತೆ ಒಟಿಸ್ ಸ್ಕೀಮ್‍ದಿಂದ ಸಾರ್ವಜನಿಕರೂ ಅನುಕೂಲವಾಗುವುದಲ್ಲದೇ ಸರ್ಕಾರಕ್ಕೂ ಆದಾಯ ಬರುತ್ತದೆ. ಈ ಯೋಜನೆ ಬಿಬಿಎಂಪಿಗಳಲ್ಲಿ ಮಾತ್ರ ಅನ್ವಯವಾಗಿದ್ದು, ಪಾಲಿಕೆ ವ್ಯಾಪ್ತಿಯಲ್ಲಿಯೂ ಸಹ ಓಟಿಸ್ ಯೋಜನೆಗೊಳಪಡಿಸುವ ಕುರಿತಂತೆ ಸೂಕ್ತ ಪ್ರಸ್ತಾವನೆಯೊಂದನ್ನು ತಯಾರಿಸಿ ಸಲ್ಲಿಸುವಂತೆ ಅವರು ಮಹಾನಗರ ಪಾಲಿಕೆ ಆಯುಕ್ತರಿಗೆ ಸೂಚನೆ ನೀಡಿದರು.
ನಾಗಠಾಣ ಮತಕ್ಷೇತ್ರದ ಶಾಸಕರಾದ ವಿಠ್ಠಲ ಕಟಕದೊಂಡ ಅವರು ವಿಜಯಪುರ ನಗರದ ಹಮಾಲ ಕಾಲನಿ, ಗಾಂಧಿನಗರ, ಕಸ್ತೂರಿ ಕಾಲನಿ ಸೇರಿದಂತೆ ವಿವಿಧ ಬಡಾವಣೆಗಳ ಜನರಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಹಕ್ಕು ಪತ್ರ ವಿತರಣೆಗೆ ಕ್ರಮ ವಹಿಸುವಂತೆ ತಿಳಿಸಿದ ಹಿನ್ನಲೆಯಲ್ಲಿ ಇದಕ್ಕೆ ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಅವರು ಮಾತನಾಡಿ, ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರ ನಿರ್ದೇಶನದಂತೆ ಈ ಪ್ರದೇಶಗಳ ಮನೆ ಮಾಲೀಕರಿಗೆ ಹಕ್ಕು ಪತ್ರ ವಿತರಣೆಗೆ ಸಂಬಂಧಿಸಿದಂತೆ ಸರ್ವೇ ಮಾಡಲಾಗಿದೆ. 3617 ಮನೆಗಳಿಗೆ ಹಕ್ಕು ಪತ್ರ ವಿತರಿಸಲು ಗುರುತಿಸಲಾಗಿದ್ದು, ಬಾಕಿ ಉಳಿದ ಮನೆಗಳಿಗೆ ಹಕ್ಕು ಪತ್ರ ವಿತರಣೆಗೆ ಕ್ರಮ ವಹಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.
ನಗರಾಭಿವೃದ್ದಿ ಪ್ರಾಧಿಕಾರದಲ್ಲಿರುವ ಹಣವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು, ನಿವೇಶನ ರಚನೆಗೆ ಕ್ರಮ ವಹಿಸಬೇಕು. ಕೆರೆ ಅಭಿವೃದ್ದಿಯ ಹಣವನ್ನು ಕೆರೆ ಅಭಿವೃದ್ದಿಗಾಗಿ ಬಳಸಬೇಕು. ನಿವೇಶನ ರಚನೆ ಮಾಡುವ ಕುರಿತು ಸರ್ಕಾರಿ ಜಾಗವನ್ನು ಗುರುತಿಸಿ ನಿವೇಶನ ರಚನೆಗೆ ಕ್ರಮ ವಹಿಸುವಂತೆ ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತರಿಗೆ ಅವರು ಸೂಚನೆ ನೀಡಿದ ಅವರು, ಸರ್ಕಾರಿ ಜಾಗ ಲಭ್ಯವಿಲ್ಲದಿದ್ದಲಿ ಖಾಸಗಿ ಜಮೀನು ಖರೀದಿಸುವ ಕುರಿತಂತೆ ಸೂಕ್ತ ಪ್ರಸ್ತಾವನೆ ಸಿದ್ಧಪಡಿಸಿ ಸಲ್ಲಿಸುವಂತೆ ಅವರು ಸೂಚನೆ ನೀಡಿದರು.
ಸಭೆಯಲ್ಲಿ ವಿಧಾನ ಪರಿಷತ್ ಶಾಸಕರಾದ ಸುನೀಲಗೌಡ ಪಾಟೀಲ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಕನ್ನಾನ ಮುಶ್ರೀಫ್, ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಿಂದ ಕುಂದು-ಕೊರತೆಗಳ ಸಭೆ
ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿಜಯಪುರ ಹಾಗೂ ಕರ್ನಾಟಕ ರಾಜ್ಯ ಮಹಿಳಾ ಆಯೋಗ ಬೆಂಗಳೂರು ಇವರ ಸಹಯೋಗದಲ್ಲಿ ವಿಧವೆಯರ ಕುಂದು ಕೊರತೆ ಸಭೆಯನ್ನು ನಗರದ ಕಂದಗಲ್ ಶ್ರೀ ಹಣಮಂತರಾಯ ರಂಗಮAದಿರದಲ್ಲಿ ಗುರುವಾರ ಆಯೋಜಿಸಿಲಾಗಿತ್ತು.
ಸಭೆಯ ಅಧ್ಯಕ್ಷತೆ ವಹಿಸಿದ್ದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಅವರು ಮಹಿಳೆಯರ ಸಮಸ್ಯೆಯನ್ನು ಅತ್ಯಂತ ಶಾಂತಚಿತ್ತದಿAದ ಆಲಿಸಿ, ಅವರ ಸಮಸ್ಯೆಗಳಿಗೆ ಪರಿಹಾರಕ್ಕೆ ಸಂಬAಧಪಟ್ಟವರಿಗೆ ಸೂಚಿಸಿದರು. ಈ ಕುಂದು ಕೊರತೆ ಸಭೆಯಲ್ಲಿ ವಿಜಯಪುರ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಮಹಿಳೆಯರ ಸಮಸ್ಯೆಗಳನ್ನು ಆಲಿಸಲಾಯಿತು.
ಸಮಸ್ಯೆಗಳನ್ನು ಆಲಿಸಿದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಮಹಿಳೆಯರ ಸಮಸ್ಯೆಗಳಿಗೆ ಪರಿಹಾರ ದೊರಕಿಸಿ ಕೊಡುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಸಂಬAಧಿಸಿದ ಸರ್ಕಾರಿ ಇಲಾಖೆಗಳಿಗೆ ತಮ್ಮ ಸಮಸ್ಯೆಗಳನ್ನು ಕೊಂಡೊಯ್ದು ತಮ್ಮ ಸಮಸ್ಯೆಗಳಿಗೆ ಪರಿಹರಿಸಲಾಗುವುದು ಎಂದು ಅವರು ಹೇಳಿದರು.
ವಿಜಯಪುರದ ಅನ್ನಪೂರ್ಣ ನಾಗನೂರು ಎಂಬುವವರು ಬದುಕಿಗೆ ಯಾವುದೇ ಸೂರಿಲ್ಲದೇ ತುಂಬ ತೊಂದರೆಯಾಗುತ್ತಿದ್ದು, ಸರ್ಕಾರಿ ಯೋಜನೆಯಡಿ ಯಾವುದಾದರೊಂದು ಮನೆ ಹಾಗೂ ಉದ್ಯೋಗ ಒದಗಿಸುವಂತೆ ಮನವಿ ಮಾಡಿಕೊಂಡ ಹಿನ್ನಲೆಯಲ್ಲಿ ಆಶ್ರಯ ಯೋಜನೆ ಮನೆ ಹಾಗೂ ಉದ್ಯೋಗ ದೊರಕಿಸುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ರಬಕವಿ ಬನ್ನಟ್ಟಿಯಿಂದ ಬಂದಿದ್ದ 20 ವರ್ಷದ ರೇಖಾ ತುಂಗಳ ಎಂಬುವವರು ತನಗೆ ಎರಡು ಮಕ್ಕಳ ಹಾಗೂ ವೃದ್ಧ ತಂದೆ ತಾಯಿ ಇದ್ದು, ಜೀವನ ನಿರ್ವಹಣೆಗೆ ಆಧಾರ ಕಲ್ಪಿಸಿಕೊಡುವಂತೆ ಕೋರಿದ ಮನವಿಗೆ ಸ್ಪಂದಿಸಿದ ಅಧ್ಯಕ್ಷರು ಪೋಷಕತ್ವ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆಯೂ ಉದ್ಯೋಗ ದೊರಕಿಸಿ ಕೊಡುವುದಾಗಿ ಭರವಸೆ ನೀಡಿದರು.
ವಿಜಯಪುರದÀ ಸವಿತಾ ಜಮಾದಾರ ಎಂಬುವವರು ಶ್ರವಣ ದೋಷವಿರುವ ತಮ್ಮ ಮಗನ ಚಿಕಿತ್ಸೆಗೆ ಸಹಾಯ, ಚಡಚಣದ ಬಾಕಿಯೋರ್ವಳು ಮುಂದಿನ ವಿದ್ಯಾಭ್ಯಾಸಕ್ಕೆ ಅಗತ್ಯ ದಾಖಲೆಗಳು ಹಾಗೂ ತನ್ನ ಸಹೋದರಿಗೆ ಹೃದ್ರೋಗದ ಚಿಕಿತ್ಸೆಗೆ ಸಹಾಯ, ಕಲ್ಬುರ್ಗಿಯ ಜಯಶ್ರೀ ಕಲ್ಲೂರ ಅವರ ಮಕ್ಕಳ ಶಿಕ್ಷಣ ಹಾಗೂ ಉದ್ಯೋಗಕ್ಕೆ ಸಹಾಯ, ಬಿಎಡ್, ಡಿಎಡ್ ಶಿಕ್ಷಣ ಹೊಂದಿರುವ ಸಿಂದಗಿಯ ಗುರುಸಿದ್ದಮ್ಮ ಹೊಸಮನಿಯವರು ಮನವಿ ಸಲ್ಲಿಸಿ, ಪತಿ ನಿಧನವಾಗಿದ್ದು, ಮೂರು ಮಕ್ಕಳಿಗೆ ಕಷ್ಟಸಾಧ್ಯವಾಗುತ್ತಿದೆ. ಕುಟುಂಬ ನಿರ್ವಹಣೆಗೆ ಉದ್ಯೋಗ ದೊರಕಿಸಬೇಕು. ಅದರಂತೆ ಹಿಟ್ನಳ್ಳಿಯ ವಿಕಲಚೇತನೆ ಚನ್ನಮ್ಮ ಮೇತ್ರಿ ಎಂಬುವವರು ತಾನು ಬಿಎಡ್, ಎಂ ಎಡ್ ಓದಿದ್ದು, ನನಗೆ ಉದ್ಯೋಗ ದೊರಕಿಸುವಂತೆ ಮನವಿ ಸಲ್ಲಿಸಿದ್ದು, ಸಲ್ಲಿಕೆಯಾದ ಎಲ್ಲ ಬೇಡಿಕೆಗಳಿಗೆ ಸ್ಪಂದಿಸಿ, ಪರಿಹಾರ ಒದಗಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದು ಅವರು ಹೇಳಿದರು.
ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿತಿದ್ದ ಮಹಿಳೆಯೋರ್ವಳು, ತಮ್ಮ ದೂರು ಸಲ್ಲಿಸಿ, ಪತಿಯ ನಿಧನದ ನಂತರ ಜಮೀನು ಮಾರಿದ್ದ ಮಾಲೀಕನು ಇದೀಗ ಜಮೀನಿನಲ್ಲಿ ಉಳುಮೆ ಮಾಡಲು ತಡೆಯೊಡ್ಡುತ್ತಿದ್ದು, ನನಗೆ ಸಹಾಯ ಒದಗಿಸುವಂತೆ ಕೋರಿ ಬಂದ ಮನವಿ ನಾಗಲಕ್ಷ್ಮಿಯವರು ಸ್ಥಳದಲ್ಲಿದ್ದ ಸಂಬAದಿಸಿದ್ದ ಅಧಿಕಾರಿಗಳಿಗೆ ಸಮಸ್ಯೆ ಪರಿಹಾರಕ್ಕೆ ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಕೆ.ಕೆ.ಚವ್ಹಾಣ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಪುಂಡಲಿಕ ಮಾನವರ, ಜಿಲ್ಲಾ ಶಸ್ತ್ರಚಿಕಿತ್ಸಕರಾದ ಶಿವಾನಂದ ಮಾಸ್ತಿಹೊಳಿ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳಾದ ಸಿ.ಬಿ.ಕುಂಬಾರ, ಜಿಲ್ಲಾ ಪಂಚಾಯತಿಯ ಯೋಜನಾ ನಿರ್ದೇಶರಾದ ರಾಠೋಡ, ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು, ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
ವಿಜಯಪುರ : ಹೆಸ್ಕಾಂ ವಿಜಯಪುರ ವಿಭಾಗದ ವ್ಯಾಪ್ತಿಯಲ್ಲಿ ಬರುವ ವಿಜಯಪುರ-ಅಥಣಿ ರಸ್ತೆಯ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಮಧ್ಯದಲ್ಲಿ ಬರುವ ವಿದ್ಯುತ್ ಕಂಬಗಳನ್ನು ಹಾಗೂ ಪರಿವರ್ತಕ ಕೇಂದ್ರಗಳನ್ನು ಸ್ಥಳಾಂತರಗೊಳಿಸಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಸೇನಾ ನಗರದ ಪೀಡರ್ ಮೇಲೆ ಬರುವ ಟ್ರೇಜರಿ ಕಾಲೋನಿ,ರಾಮದೇವ ನಗರ,ಅಯ್ಯಪ್ಪ ಸ್ವಾಮಿ ದೇವಸ್ಥಾನ, ಇಟಗಿ ಕಾಲೋನಿ, ವೇದಾಂತ ಆಸ್ಪತ್ರೆ, ಖುರೇಷಿ ಕಾಲೋನಿ ಹತ್ತಿರದ ಪ್ರದೇಶಗಳಲ್ಲಿ ಮೇ 17ರಂದು ಬೆಳಿಗ್ಗೆ 10 ರಿಂದ ಸಂಜೆ 06 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ವಿಜಯಪುರ ಹೆಸ್ಕಾಂನ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
.jpeg)
