Thursday, May 29, 2025

ಜುಲೈ 12 ರಂದು ಜಿಲ್ಲೆಯಾದ್ಯಂತ ರಾಷ್ಟಿçÃಯ ಲೋಕ್ ಅದಾಲತ್ ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಕ್ಕೆ ಅವಕಾಶ : ಜಿಲ್ಲಾ ನ್ಯಾಯಾಧೀಶ ಡಾ.ಕಸನಪ್ಪ ನಾಯಕ

ವಿಜಯಪುರ : ಜಿಲ್ಲಾ ಕೇಂದ್ರವೂ ಸೇರಿದಂತೆ ಜಿಲ್ಲೆಯಾದ್ಯಂತ ಇರುವ ಎಲ್ಲ ಅಧೀನ ನ್ಯಾಯಾಲಯಗಳಲ್ಲಿ ಜುಲೈ 12 ರಂದು ರಾಷ್ಟಿçÃಯ ಲೋಕ್ ಅದಾಲತ್ ಆಯೋಜಿಸಲಾಗಿದ್ದು, ಈ ಅದಾಲತ್‌ನಲ್ಲಿ ಕಕ್ಷಿದಾರರು ಭಾಗವಹಿಸಿ ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಕ್ಕೆ ಅವಕಾಶವಿರುವುದರಿಂದ ಈ ಅದಾಲತ್ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಕಸನಪ್ಪ ನಾಯಕ ಅವರು ತಿಳಿಸಿದರು.

ಗುರುವಾರ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಎಡಿಆರ್ ಕಟ್ಟಡದಲ್ಲಿ ಆಯೋಜಿಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟಿçÃಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಎಲ್ಲ ವರ್ಗದ ಕಕ್ಷಿದಾರರಿಗೆ ಅನುಕೂಲವಾಗುವ ದೃಷ್ಟಿಯಿಂದ ಜಿಲ್ಲಾ ಕೇಂದ್ರ ಹಾಗೂ ಜಿಲ್ಲೆಯ ಎಲ್ಲ ತಾಲೂಕಾ ನ್ಯಾಯಾಲಯಗಳಲ್ಲಿ ಜುಲೈ 12 ರಂದು ರಾಷ್ಟಿçÃಯ ಲೋಕ್ ಅದಾಲತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಲೋಕ್ ಅದಾಲತ್ ಕಾರ್ಯಕ್ರಮದಲ್ಲಿ ರಾಜಿ ಸಂಧಾನಕ್ಕೆ ಒಳಪಡಬಹುದಾದ ವ್ಯಾಜ್ಯ ಪೂರ್ವ ಪ್ರಕರಣಗಳು, ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕ, ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಮತ್ತು ಇತರೆ ಸಿವಿಲ್ ಪ್ರಕರಣಗಳು, ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬAಧಪಟ್ಟ ಪ್ರಕರಣಗಳು (ರೇರಾ), ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು (ಡಿಆರ್‌ಟಿ), ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್‌ಸಿ), ಕಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳು, ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಕಾರ್ಮಿಕ ವಿವಾದಗಳು, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬAಧಿಸಿದ ಸೇವಾ ಪ್ರಕರಣಗಳು, ಪಿಂಚಣಿ ಪ್ರಕರಣಗಳು, ಕಂದಾಯ ಪ್ರಕರಣಗಳು ರಾಜಿಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ರಾಷ್ಟಿçÃಯ ಲೋಕ್ ಅದಾಲತ್‌ನಲ್ಲಿ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದು ಹೇಳಿದರು.

 ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ದಿನಾಂಕ: 01-05-2025ಕ್ಕೆ 45,900 ಸಿವಿಲ್ ಪ್ರಕರಣಗಳು ಹಾಗೂ 24,535 ಕ್ರಿಮಿನಲ್ ಪ್ರಕರಣಗಳು ಒಳಗೊಂಡAತೆ ಒಟ್ಟು 70,435 ಪ್ರಕರಣಗಳು ವಿಚಾರಣೆಗೆ ಬಾಕಿ ಇದ್ದು, ಇವುಗಳಲ್ಲಿ ಈಗಾಗಲೇ 1,225 ಸಿವಿಲ್ ಪ್ರಕರಣಗಳು ಹಾಗೂ 727 ಕ್ರಿಮಿನಲ್ ಪ್ರಕರಣಗಳು ಸೇರಿದಂತೆ ಒಟ್ಟು 1,952 ಪ್ರಕರಣಗಳನ್ನು ಇತ್ಯರ್ಥಕ್ಕಾಗಿ ಗುರುತಿಸಲಾಗಿದೆ. ಸಂಬAಧಿಸಿದ ವಕೀಲರು ಹಾಗೂ ಕಕ್ಷಿದಾರರೊಂದಿಗೆ ಮಾತುಕತೆಯ ಮೂಲಕ ಇನ್ನೂ ಹೆಚ್ಚಿನ ಪ್ರಕರಣಗಳನ್ನು ಸಹ ರಾಜಿಗಾಗಿ ಗುರುತಿಸಲಾಗುತ್ತಿದೆ.ಹೆಚ್ಚಿನ ಪ್ರಕರಣಗಳು ರಾಷ್ಟಿçÃಯ ಲೋಕ ಅದಾಲತ್‌ನಲ್ಲಿ ಇತ್ಯರ್ಥಗೊಳ್ಳುವ ನಿರೀಕ್ಷೆ ಇದೆ ಎಂದು ಅವರು ತಿಳಿಸಿದರು. 

ಜಿಲ್ಲೆಯಲ್ಲಿ ಜುಲೈ 12 ರಂದು ಜರುಗುವ ರಾಷ್ಟಿçÃಯ ಲೋಕ್ ಅದಾಲತ್‌ನಲ್ಲಿ ಕಕ್ಷಿದಾರರು ತಮ್ಮ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಂಡು ನೆಮ್ಮದಿಯ ಜೀವನಕ್ಕೆ ನಾಂದಿ ಹಾಡಲು ಸುವರ್ಣಾವಕಾಶ ಕಲ್ಪಿಸಿದ್ದು, ಇದರ ಸದುಪಯೋಗ ಪಡೆದುಕೊಳ್ಳುವಂತೆ ಅವರು ತಿಳಿಸಿದರು. 

ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಎಸ್ ಹಾಗರಗಿ, ಜಿಲ್ಲಾ ನ್ಯಾಯವಾದಿಗಳ ಸಂಘದ ಕಾರ್ಯದರ್ಶಿಗಳಾದ ಎಸ್.ಎಸ್. ಚೂರಿ ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಕರ್ನಾಟಕದ ಯಾವುದೇ ಚಿತ್ರ ಮಂದಿರಗಳಲ್ಲಿ ತಮಿಳು ಚಲನಚಿತ್ರ ಥಗ್ ಲೈಫ ಬಿಡುಗಡೆ ಮಾಡದಿರಲು ಕರವೇ ಆಗ್ರಹ


ವಿಜಯಪುರ: ಕರ್ನಾಟಕದ ಯಾವುದೇ ಚಿತ್ರ ಮಂದಿರಗಳಲ್ಲಿ ತಮಿಳು ಚಲನಚಿತ್ರ ಥಗ್ ಲೈಫ ಬಿಡುಗಡೆ ಮಾಡಬಾರದು ಎಂದು ಒತ್ತಾಯಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣಕುಮಾರಶೆಟ್ಟಿ ಬಣ) ಪದಾಧಿಕಾರಿಗಳು ವಿಜಯಪುರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಬಸವರಾಜ ಅ ತಾಳಿಕೋಟಿ ಮಾತನಾಡಿ, ಮೊನ್ನೆ ನಡೆದ ಥಗ್ ಲೈಫ್ ಚಲನಚಿತ್ರದ ಧ್ವನಿ ಸುರಳಿ ಬಿಡುಗಡೆ ಸಮಾರಂಭದಲ್ಲಿ ತಮಿಳು ನಟ ಕಮಲ ಹಾಸನ್ ಕನ್ನಡ ಹುಟ್ಟಿದ್ದು ತಮಿಳುನಿಂದ ಎಂಬ ವಿವಾದಾತ್ಮಕ ಹೇಳಿಕೆ ನೀಡಿ ಕನ್ನಡಿಗರ ಭಾವನೆಗೆ ಧಕ್ಕೆ ಉಂಟು ಮಾಡುವದಲ್ಲದೆ ಕನ್ನಡಿಗರ ಹಾಗೂ ತಮಿಳು ಮಧ್ಯ ವಿಷಬಿಜ ಬಿತ್ತುವದೊರಂದಿಗೆ ಕನ್ನಡಿಗರಿಗೆ ಅಫಮಾನ ಮಾಡಿರುತ್ತಾರೆ ಪ್ರತಿ ಭಾರಿ ತಮಿಳು ಹೊಸ ಚಲನಚಿತ್ರ ಬಿಡುಗಡೆ ಸಂಧರ್ಭದಲ್ಲಿ ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ಮಾಡುತ್ತಲ್ಲೆ ಬಂದಿದ್ದಾರೆ. ಈ ಹೇಳಿಕೆಗಳು ನಿರಂತರವಾಗಿ ನಿಡಿ ಹೊಗುತ್ತಾರೆ. ನಂತರ ಇಲ್ಲಿ ಕನ್ನಡಿಗರು ಮತ್ತು ತಮಿಳು ಮಧ್ಯ ಶಾಂತಿ, ಸು ವ್ಯವಸ್ತೆ ಹದಗೆಡುವಂತೆ ಮಾಡಿರುತ್ತಾರೆ. ಆದರಿಂದ ಹಿಂತಹ ಹೇಳಿಕೆ ನೀಡಿರುವ ಈ ನಟನ ಚಿತ್ರ ನಮ್ಮ ರಾಜ್ಯದಲ್ಲಿ ಥಗ್ ಲೈಪ್ ಚಿತ್ರ ಬಿಡುಗಡೆ ಮಾಡಬಾರದೆಂದು ಎಂದು ಒತ್ತಾಯಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಮಹಾಂತೇಶ ಹಿರೇಮಠ, ಆನಂದ ಹಡಗಲಿ, ರವಿ ಗೊಳಸಂಗಿ, ಸತೀಶ, ವಿನುತ, ಭೀಮು, ವಿರೇಶ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಶಿವಾನಂದರ ದಕ್ಷ ಆಡಳಿತದಿಂದ ವಿಡಿಸಿಸಿ ಅಭ್ಯುದಯ : ಗುಡದಿನ್ನಿ

ವಿಜಯಪುರ : ವಿಜಯಪುರ ಜಿಲ್ಲೆಯ ಸಹಕಾರ ರಂಗದ ಅಭಿವೃದ್ಧಿಗೆ ಹಾಗೂ ಕೇಂದ್ರ ಸಹಕಾರಿ ಬ್ಯಾಂಕ್ ಸದೃಢವಾಗಿ, ಸಮರ್ಥ ಹಾಗೂ ದಕ್ಷತೆಯಿಂದ ಆಡಳಿತ ನಡೆಸುವಲ್ಲಿ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರೂ ಆಗಿರುವ ಕೃಷಿ ಮಾರುಕಟ್ಟೆ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಜವಳಿ ಸಚಿವರಾದ ಶಿವಾನಂದ ಎಸ್ ಪಾಟೀಲ ಅವರ ಕೊಡುಗೆ ಅನನ್ಯವಾಗಿದೆ. ಅವರ ಅವಿರತ ಪರಿಶ್ರಮ, ದೂರ ದೃಷ್ಠಿ, ಕಾಳಜಿ, ಸಕಾಲಿಕ ಕ್ರಮಗಳೇ ಬ್ಯಾಂಕ್ ಅಭ್ಯುದಯಕ್ಕೆ ಕಾರಣ ಎಂದು ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಉಪಾಧ್ಯಕ್ಷರಾದ ರಾಜಶೇಖರ ಬ. ಗುಡದಿನ್ನಿ ಬಣ್ಣಿಸಿದರು.

ಬಸವನಬಾಗೇವಾಡಿ ತಾಲೂಕಿನ ಕುಪಕಡ್ಡಿ ಗ್ರಾಮದಲ್ಲಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಛೇರಿ ಕಟ್ಟಡ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಆರ್ಥಿಕವಾಗಿ ಸದೃಢತೆ ಹೊಂದಿದ್ದು, ಜಿಲ್ಲೆಯ 2.54 ಲಕ್ಷ ರೈತರಿಗೆ ಕೃಷಿಗಾಗಿಯೇ 2008 ಕೋಟಿ ರೂ. ಸಾಲ ನೀಡುವಲ್ಲಿ ಅಧ್ಯಕ್ಷರಾದ ಸಚಿವ ಶಿವಾನಂದ ಪಾಟೀಲ ಅವರ ಇಚ್ಛಾಶಕ್ತಿಯೇ ಪ್ರಮುಖ ಕಾರಣ ಎಂದರು.

ಸಹಕಾರಿ ಸಂಘಗಳು ಗ್ರಾಮೀಣ ಜನರ ಅದರಲ್ಲೂ ಅನ್ನದಾತನ ಆರ್ಥಿಕ ಸಬಲೀಕರಣಕ್ಕೆ ವಿಶೇಷ ಕೊಡುಗೆ ನೀಡಿವೆ. ಗ್ರಾಮೀಣ ಸಹಕಾರಿ ವ್ಯವಸ್ಥೆ ರೈತರಿಗೆ ಅದರಲ್ಲೂ ಕೃಷಿ ಸಂಬಂಧಿ ಸೇವೆಗಳಿಗೆ ಹಳ್ಳಿಗಳಲ್ಲೇ  ರೈತಾಪಿ ವರ್ಗದವರಿಗೆ ಸ್ಥಾನಿಕವಾಗಿ ಆರ್ಥಿಕ ಹಾಗೂ ಕೃಷಿಗೆ ಸಂಬಂಧಿತ ಸೇವೆಗಳನ್ನು ನೀಡುತ್ತಲಿವೆ. ಸಂಘದ ಸದಸ್ಯರು ಪಾರದರ್ಶಕ ಆಡಳಿತದ ಮೂಲಕ ಗ್ರಾಹಕರು ವಿಶ್ವಾಸವಿರಿಸಿ ವ್ಯವಹರಿಸುವ ರೀತಿಯಲ್ಲಿ ಸೇವೆ ನೀಡಿದಾಗಲೇ ಸಹಕಾರ ಸಂಘಗಳ ಬೆಳವಣಿಗೆ ಸಾಧ್ಯ ಎಂದು ವಿವರಿಸಿದರು.

ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾಗಿದ್ದ ದಿ. ಬಿ.ಎಸ್.ಪಾಟೀಲ ಕುಪ್ಪಕಡಿ ಇವರು ಅವಿಭಜಿತ ವಿಜಯಪುರ ಜಿಲ್ಲೆಯಲ್ಲಿ ಸಹಕಾರ ಕ್ಷೇತ್ರದ ಬೆಳವಣಿಗೆಗೆ ಶ್ರಮಿಸಿದ್ದನ್ನು ಸ್ಮರಿಸಿದ ರಾಜಶೇಖರ ಅವರು, ಸದರಿ ಸಂಘದ ನೂತನ ಕಟ್ಟಡದಲ್ಲಿ ಹೆಚ್ಚಿನ ಅಭಿವೃದ್ದಿ ಪರ ಕೇಲಸಗಳನ್ನು ಕೈಕೊಂಡು ಉತ್ತರೊತ್ತರವಾಗಿ ಬೆಳೆಯಲ್ಲಿ ಎಂದು ಆಶಯ ವ್ಯಕ್ತಪಡಿಸಿದರು.

ಸಂಘದ ನೂತನ ಉಗ್ರಾಣ ಲೋಕಾರ್ಪಣೆ ಮಾಡಿದ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾದ ಶೇಖರ ಅ ದಳವಾಯಿ ಮಾತನಾಡಿ, ರೈತರಿಗೆ ಜಿಲ್ಲಾ ಬ್ಯಾಂಕು ಸಹಕಾರ ಸಂಘಗಳ ಮೂಲಕ ಸರ್ಕಾರದ ಬಡ್ಡಿ ಸಹಾಯಧನ ಯೋಜನೆಯಡಿ ಶೂನ್ಯ ಬಡ್ಡಿದರದಲ್ಲಿ ಬೆಳೆ ಸಾಲ ನೀಡುತ್ತಿದೆ. ಶೇ.3 ರ ರಿಯಾಯತಿ ಬಡ್ಡಿದರದಲ್ಲಿ ಮಧ್ಯಮಾವಧಿ ಸಾಲ ನೀಡುತ್ತಿದ್ದು, ಹೆಚ್ಚಿನ ರೈತರು ಪ್ರಯೊಜನೆ ಪಡೆಯುವಂತೆ ಕಿವಿ ಮಾತು ಹೇಳಿದರು.

 ಕುಪ್ಪಕಡಿ ಸಹಕಾರ ಸಂಘವು ಕಡಿಮೆ ಜಾಗದಲ್ಲೇ ಉಗ್ರಾಣ ಹಾಗೂ ಕಛೇರಿ ಕಟ್ಟಡವನ್ನು ವ್ಯವಸ್ಥಿತ ರೀತಿಯಲ್ಲಿ ನಿರ್ಮಿಸಿರುವದು ಸಂತೋಷ ಹಾಗೂ ಮಾದರಿ ಸಂಗತಿ ಎಂದರು.

 ಸಮಾರಂಭಕ್ಕೆ ಜ್ಯೋತಿ ಬೆಳಗಿಸಿ ಚಾಲನೆ ನೀಡಿದ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾದ ಚಂದ್ರಶೇಖರಗೌಡ ಪಾಟೀಲ ಮನಗೂಳಿ, ಮಾತನಾಡಿ ಜಿಲ್ಲೆಯ ಜನತೆ ಪ್ಯಾಕ್ಸುಗಳೊಂದಿಗೆ ಹೆಚ್ಚಿನ ಪ್ರಮಾಣದಲ್ಲಿ ವ್ಯವಹರಿಸುತ್ತಿವೆ. ಸದಸ್ಯರು ಪ್ಯಾಕ್ಸುಗಳಲ್ಲಿ 1039 ಕೋಟಿ ರೂ. ಠೇವಣಿ ಇರಿಸಿದ್ದಾರೆ. ಇದು ಸಂಘಗಳ ಉತ್ತಮ ಕಾರ್ಯನಿರ್ವಹಣೆಗೆ ಸಾಕ್ಷಿಯಾಗಿದೆ ಎಂದರು. 

ಅಲ್ಲದೆ 214 ಸಂಘಗಳು ಲಾಭದಲ್ಲಿದ್ದು 58 ಸಂಘಗಳು ಹಾನಿಯಲ್ಲಿವೆ ಇಂತಹ ಸಂಘಗಳ ಅಭಿವೃದ್ದಿಗೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕು ತೀವ್ರವಾಗಿ ಶ್ರಮಿಸುತ್ತಲಿದೆ ಎಂದು ತಿಳಿಸಿದರು. 

  ಸಮಾರಂಭದ ದಿವ್ಯ ಸಾನಿದ್ಯ ವಹಿಸಿದ್ದ ಆಲಗೂರು ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಡಾ.ಮಹಾದೇವ ಶ್ರೀಗಳು ಮಾತನಾಡಿ, ಸಹಕಾರ ಸಂಘಗಳು ಗ್ರಾಮಿಣ ಸಂಸ್ಥೆಗಳಾಗಿದ್ದು ಗ್ರಾಮಸ್ಥರಿಂದಲೆ ಸ್ಥಾಪಿತಗೊಂಡಿವೆ. ಸದರಿ ಸಂಸ್ಥೆಗಳು ಸಹಕಾರ ತತ್ವಗಳಿಗೆ ಅನುಗುಣವಾಗಿ ವಿಸ್ವಾಸ, ನಂಬಿಕೆ, ಪ್ರಾಮಾಣಿಕತೆ ಹಾಗೂ ಪಾರದರ್ಶಕವಾಗಿ ಕಾರ್ಯನಿರ್ವಹಿಸಿ ಹೆಚ್ಚಿನ ಪ್ರಗತಿ ಹೊಂದಲಿ ಹಾರೈಸಿದರು.

ಸಂಘದ ಅಧ್ಯಕ್ಷೆ ಕಸ್ತೂರಿಬಾಯಿ ಸಂ. ಬಿರಾದಾರ ಅಧ್ಯಕ್ಷತೆ ವಹಿಸಿದ್ದರು. ತಾನಾಜಿ ನಾಗರಾಳ, ಸಿದ್ದನಗೌಡ ಬ. ಪಾಟಿಲ,  ಬಾವುರಾವ ಕುಲಕರ್ಣಿ, ಗುರನಗೌಡ ಬಿರಾದಾರ, ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಡಿಜಿಎಂ ಪಿ.ವಾಯ್.ಡಿಂಗಿ, ಎಸ್.ಬಿ.ಹೊಸಮನಿ, ಸಹಕಾರ ಅಭಿವೃದ್ದಿ ಅಧಿಕಾರಿ ಶ್ರೀಶೈಲ ಹಂಗರಗಿ ವೇದಿಕೆ ಮೇಲಿದ್ದರು. 

ಗುರನಗೌಡ ಬಿರಾದಾರ ಪ್ರಾಸ್ಥಾವಿಕ ಮಾತನಾಡಿದರೆ, ಸಂಗನಗೌಡ ಬಿರಾದಾರ ಸ್ವಾಗತಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.